ಬೆಂಗಳೂರು:- ಗ್ಯಾರಂಟಿಯ ಅರೆಬರೆ ಜಾರಿಯಿಂದ ಬೊಕ್ಕಸ ಖಾಲಿ ಆಗಿದೆ ಎಂದು ಆರ್ ಅಶೋಕ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಗ್ಯಾರೆಂಟಿ ಜಾರಿಯಿಂದ ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದ್ದು ಹಣಕಾಸಿನ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಬಿಡುಗಡೆ ಮಾಡುವಂತೆ ಬೆಳಗಾವಿ ಅಧಿವೇಶನದಲ್ಲಿ ಪಟ್ಟು ಹಿಡಿಯುವುದಾಗಿ ಎಂದರು. ಗ್ಯಾರೆಂಟಿ ಯೋಜನೆಗಳ ಅರೆಬರೆ ಜಾರಿಯಿಂದ ಬೊಕ್ಕಸ ಬರಿದಾಗಿದೆ. ಹೀಗಾಗಿ ಬರಗಾಲದಿಂದ ತತ್ತರಿಸುತ್ತಿರುವ ರೈತರಿಗೆ ಪರಿಹಾರ ನೀಡಲು ಸಾಧ್ಯವಾಗದೆ ಕೇಂದ್ರದತ್ತ ಬೊಟ್ಟು ತೋರಿಸುತ್ತಿದ್ದಾರೆ. ಇದು ಸಂವೇದನಾ ರಹಿತ ಎಡಬಿಡಂಗಿ ಸರ್ಕಾರ ಎಂದರು ಪ್ರತಿಪಕ್ಷದ ನಾಯಕನಾಗಿ ಆಯ್ಕೆಯಾದ ಬಳಿಕ ಅನೇಕ ಜಿಲ್ಲೆಗಳಲ್ಲಿ ಬರಗಾಲದ ಬಗ್ಗೆ ಅಧ್ಯಯನ ಮಾಡುವ ಸಂದರ್ಭದಲ್ಲಿ ಸರ್ಕಾರದ ಬಣ್ಣ ಬಯಲಾಗುತ್ತಿದೆ. ಜನ ಸಂಕಷ್ಟದಲ್ಲಿದ್ದರೂ ತನಗೂ ಅದಕ್ಕೂ ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿದೆ ಎಂದು ಟೀಕಿಸಿದರು. ಕೇಂದ್ರದ ವಿರುದ್ಧ ಗೂಬೆ ಕೂರಿಸುವ ಮೊದಲು ರಾಜ್ಯ ಸರ್ಕಾರದ ಪಾತ್ರ, ಹೊಣೆಗಾರಿಕೆ ಏನು ಎಂಬುದನ್ನು ಸ್ಪಷ್ಟವಾಗಿ ತಿಳಿಸಲಿ. ಹಿಂದೆ ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಮೊದಲು ರೈತರ ಸಂಕಷ್ಟಕ್ಕೆ ಧಾವಿಸಿದ್ದೆವು. ಎನ್‌ಡಿಆರ್‌ಎ ಮಾರ್ಗಸೂಚಿಗಿಂತ…
Author: AIN Author
ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟನ್ಸ್ ತೊರೆದು ಮುಂಬೈ ಇಂಡಿಯನ್ಸ್ ತಂಡಕ್ಕೆ ವಾಪಸ್ಸಾಗಿರುವುದು ಅಧಿಕೃತವಾಗಿದೆ. ತವರಿಗೆ ಹಾರ್ದಿಕ್ ಎಂದು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಮುಂಬೈ ಇಂಡಿಯನ್ಸ್ ತಂಡ ಖಚಿತಪಡಿಸಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿರುವ ಹಾರ್ದಿಕ್, ಅನೇಕ ಅದ್ಭುತ ನೆನಪುಗಳನ್ನು ಮರಳಿ ತಂದಿದೆ. ಮುಂಬೈ, ವಾಂಖೆಡೆ, ಪಲ್ಟನ್ಗೆ ಮರಳಿ ಬಂದಿರುವುದು ನನಗೆ ಒಳ್ಳೆಯದೆನಿಸುತ್ತಿದೆ ಎಂದು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ, ಮುಂಬೈ ಇಂಡಿಯನ್ಸ್ ತಂಡಕ್ಕೆ ಐಪಿಎಲ್ ಹರಾಜಿನಲ್ಲಿ 10 ಲಕ್ಷ ರೂಪಾಯಿಗೆ ಬಿಕರಿಯಾದ ಹಳೆಯ ವಿಡಿಯೋವನ್ನು ಹಾರ್ದಿಕ್ ಹಂಚಿಕೊಂಡಿದ್ದಾರೆ.
ಬೆಂಗಳೂರು:- ಲಾಂಗ್‍ನಿಂದ ಬೆದರಿಸಿ ಸುಲಿಗೆ ಮಾಡಿದ್ದ ನಾಲ್ವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇಮ್ರಾನ್, ಅರ್ಪಿತ ಅಹಮದ್, ಮೋಹಿತ್ ಅಲಿಯಾಸ್ ಮೋಹನ್ ಮತ್ತು ಸೈಯದ್ ಮಾಜಾ ಬಂಧಿತ ಸುಲಿಗೆಕೋರರು ಎಂದು ಹೇಳಲಾಗಿದೆ. ಆರೋಪಿ ಇಮ್ರಾನ್ ವಿರುದ್ಧ 30 ಪ್ರಕರಣಗಳು ದಾಖಲಾದರೆ ಮತ್ತೊಬ್ಬ ಆರೋಪಿ ಅರ್ಪಿತ್ ಅಹಮದ್ ವಿರುದ್ಧ 21 ಪ್ರಕರಣಗಳು ದಾಖಲಾಗಿವೆ. ನ.21ರಂದು ರಾತ್ರಿ 11.55ರ ಸುಮಾರಿನಲ್ಲಿ ನಾಲ್ಕು ಮಂದಿಯ ಗುಂಪೆಪೊಂದು ಆರ್‍ಟಿನಗರದ ಬಾರ್ ಅಂಡ್ ರೆಸ್ಟೋರೆಂಟ್‍ಗೆ ನುಗ್ಗಿ ಲಾಂಗ್‍ನಿಂದ ಬೆದರಿಸಿ ಕ್ಯಾಶ್ ಕೌಂಟರ್‍ನಲ್ಲಿದ್ದ 40 ಸಾವಿರ ಹಣ ಸುಲಿಗೆ ಮಾಡಿತ್ತು. ಅಲ್ಲದೆ ಈ ಗುಂಪು ಡಿಜೆ ಹಳ್ಳಿ ಪೆಪೊಲೀಸ್ ಠಾಣಾ ವ್ಯಾಪ್ತಿಯ ಚಹಾ ಅಂಗಡಿ ಮಾಲೀಕ ಬಾಗಿಲು ಹಾಕುತ್ತಿದ್ದಾಗ ಚಹಾ ಮಾಡಿಕೊಡುವಂತೆ ಲಾಂಗ್‍ನಿಂದ ಬೆದರಿಸಿದೆ. ಚಹಾ ಮಾಡಲು ಒಪ್ಪದಿದ್ದಾಗ ಮಾಲೀಕನ ಬಳಿಯಿದ್ದ ಹಣ ಸುಲಿಗೆ ಮಾಡಿ ಈ ಗುಂಪು ಪರಾರಿಯಾಗಿತ್ತು. ಈ ಬಗ್ಗೆ ಆರ್‍ಟಿನಗರ ಹಾಗೂ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿದ್ದವು. ಈ ಪ್ರಕರಣದ ತನಿಖೆ ಕೈಗೊಂಡ…
ಬೆಂಗಳೂರು:- ನಮ್ಮ ಕಾರ್ಯಕರ್ತರ ನೆರವಿಗೆ ಬಿಜೆಪಿ ಸದಾ ಸಿದ್ಧ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜ್ಯದ ಯಾವುದೇ ಮೂಲೆಯಲ್ಲೂ ನಮ್ಮ ಕಾರ್ಯಕರ್ತರಿಗೆ ತೊಂದರೆ, ಬೆದರಿಕೆ, ಕಿರುಕುಳಗಳು ಎದುರಾದರೆ ಅವರ ನೆರವಿಗೆ ಪಕ್ಷ ತಕ್ಷಣ ಬರಲಿದೆ ಎಂದರು. ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಮ್ಮ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಪೊಲೀಸ್ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ವೇದಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯ ವಿರುದ್ಧ ಹಾಗೂ ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಯಾವುದಕ್ಕೂ ಅಂಜಬೇಕಿಲ್ಲ ಎಂದು ಹೇಳಿದ್ದಾರೆ. ಸಂವಿಧಾನ ನಮಗೆ ಕೊಡಮಾಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಅಧಿಕಾರವನ್ನು ಪೊಲೀಸರಿಗೆ ನೀಡಿಲ್ಲ. ಈ ನಿಟ್ಟಿನಲ್ಲಿ ರಾಜ್ಯದ ಯಾವುದೇ ಮೂಲೆಯಲ್ಲೂ ನಮ್ಮ ಕಾರ್ಯಕರ್ತ ಬಂಧುಗಳಿಗೆ ತೊಂದರೆ, ಬೆದರಿಕೆ, ಕಿರುಕುಳಗಳು ಎದುರಾದರೆ ಅವರ ನೆರವಿಗೆ ಪಕ್ಷ ತಕ್ಷಣ ಬರಲಿದೆ ಎಂದು ಭರವಸೆ ನೀಡಿದ್ದಾರೆ.
ಬೆಂಗಳೂರು:- ಸಂವಿಧಾನ ದಿನದಂದೇ ಸರ್ಕಾರಿ ಅಧಿಕಾರಿಯೊಬ್ಬರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಹುಟ್ಟುಹಾಕಿದ್ದಾರೆ. ಸುಹೇಲ್ ಅಹಮದ್ ರಾಜೀನಾಮೆ ನೀಡಿದ ಅಧಿಕಾರಿ ಎನ್ನಲಾಗಿದೆ. ಆಂತರಿಕ ಭದ್ರತಾ ವಿಭಾಗದ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ 1ನೇ ಪಡೆಗೆ ಅಸಿಸ್ಟೆಂಟ್ ಕಮಾಂಡೆಂಟ್ ಆಗಿದ್ದರು. ಇದೀಗ ಆ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ತಮ್ಮ ಫೇಸ್ಬುಕ್ ಖಾತೆಯಲ್ಲಿ ರಾಜೀನಾಮೆ ಪತ್ರವನ್ನು ಪೋಸ್ಟ್ ಮಾಡಿರುವ ಸುಹೇಲ್ ಅಹಮದ್, ದೇಶದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಸಂವಿಧಾನದ ತತ್ವ ಆಶಯಗಳು ಅಪಾಯದಲ್ಲಿರುವುದರಿಂದ ಸಂವಿಧಾನ ನನಗೆ ಕೊಡುಗೆಯಾಗಿ ನೀಡಿರುವ ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಗೆ, ದೇಶಕ್ಕೆ ಸಂವಿಧಾನ ಸಮರ್ಪಣೆಯಾದ ಮಹತ್ವದ ದಿನದಂದೇ ಸಂವಿಧಾನದ ಕಾಯಕಲ್ಪ ಸಂಕಲ್ಪದೊಂದಿಗೆ ರಾಜಿನಾಮೆ ಸಲ್ಲಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಬೆಂಗಳೂರು: ಕ್ಯಾನ್ಸರ್ ಹಬ್ ಆಗುತ್ತಿದ್ಯಾ ಸಿಲಿಕಾನ್ ಸಿಟಿ…! ಹೌದು ಕಿದ್ವಾಯಿ ನೀಡಿರುವ ವರದಿ ಭಯ ಹುಟ್ಟಿಸುತ್ತದೆ. ಈ ಕುರಿತ ಒಂದು ವರದಿ ಇಲ್ಲಿದೆ. ಸಿಲಿಕಾನ್ ಸಿಟಿ ಮಂದಿಯನ್ನು ಬೆಚ್ಚಿ ಬೀಳಿಸಿದೆ ಕಿದ್ವಾಯಿ ಆಸ್ಪತ್ರೆ ವರದಿ. ಹೌದು ರಾಜಧಾನಿ ಬೆಂಗಳೂರಿನಲ್ಲಿ ಅತಿ ಹೆಚ್ಚು ಕ್ಯಾನ್ಸರ್ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿಯೇ 47 ಸಾವಿರಕ್ಕೂ ಹೆಚ್ಚು ಕೇಸ್ ಗಳು ಸಕ್ರಿಯಾವಾಗಿದೆ . ರಾಜ್ಯದಲ್ಲಿ 2.30 ಲಕ್ಷ ಕ್ಯಾನ್ಸರ್ ಪ್ರಕರಣಗಳು ಸಕ್ರಿಯವಾಗಿವೆ. ಪ್ರತಿ ವರ್ಷ ರಾಜ್ಯದಲ್ಲಿ ಅಂದಾಜು 80 ಸಾವಿರಕ್ಕೊ ಹೆಚ್ಚು ಹೊಸ ಕೇಸ್ಗಳು ದಾಖಲು ಆಗ್ತಿವೆ. https://ainlivenews.com/marriage-season-begins-kalyana-mantaps-in-bangalore-sold-out/ ತಂಬಾಕು ಸೇವನೆಯಿಂದಾಗಿ ಬೆಂಗಳೂರಿನಲ್ಲಿ ಹೆಚ್ಚು ಕೇಸ್ಗಳು ದಾಖಾಲಾಗುತ್ತಿದೆ.ಬೆಂಗಳೂರಿನಲ್ಲಿ ಕ್ಯಾನ್ಸರ್ ನಿಂದಬಳಲುತ್ತಿರುವವರಲ್ಲಿ ತಂಬಾಕು ಸೇವನೆ ಮಾಡುತ್ತಿರೋರು ಜಾಸ್ತಿ.ಕಳೆದ ಒಂದು ವರ್ಷಕ್ಕೆ ಹೋಲಿಸಿದರೆ ಶೇಕಡಾ 2% ಕ್ಯಾನ್ಸರ್ ಪ್ರಕರಣಗಳ ಹೆಚ್ಚಳವಾಗಿವೆ ಎಂದು ಕಿದ್ವಾಯಿ ಆಸ್ಪತ್ರೆ ವರದಿ ಮಾಡಿದೆ. ನಮ್ಮ ಆರೋಗ್ಯ ನಮ್ಮ ಕೈಯಲ್ಲಿ ಎನ್ನುವ ಮಾತನ್ನು ಈಗ ಪಾಲಿಸಬೇಕಿದ್ದು, ಇನ್ನಾದರೂ ಜಾಗೃತೆಯಿಂದ ಇರಬೇಕಿರುವುದು ಅವಶ್ಯಕವಾಗಿದೆ.
ಧಾರವಾಡ: ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಆ ಮನೆಗೆ ಕನ್ನ ಹಾಕಿದ್ದ ಕಳ್ಳನನ್ನು ಬಂಧಿಸಿ ಆತನ ಕೈಗೆ ಕೋಳ ತೊಡಿಸುವಲ್ಲಿ ಧಾರವಾಡದ ವಿದ್ಯಾಗಿರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಜುಲೈ 20 ರಂದು ಧಾರವಾಡದ ರಾಜೀವಗಾಂಧಿ ನಗರದಲ್ಲಿರುವ ಸಾವಿತ್ರಿ ಬಸವರಾಜ ಹಡಪದ ಎಂಬುವವರ ಮನೆಯ ಕೀಲಿ ಮುರಿದು ಒಳಗಡೆ ಹೋಗಿದ್ದ ಕಳ್ಳ, ಅಲ್ಮೆರಾದಲ್ಲಿದ್ದ 2,38,500 ರೂಪಾಯಿ ಮೌಲ್ಯದ 38 ಗ್ರಾಂ ತೂಕದ ಚಿನ್ನದ ಸಾಮಾನು, 220 ಗ್ರಾಂ ತೂಕದ ಬೆಳ್ಳಿಯ ಸಾಮಾನು ಹಾಗೂ 5300 ರೂಪಾಯಿ ದೋಚಿಕೊಂಡು ಪರಾರಿಯಾಗಿದ್ದ. ಈ ಸಂಬಂಧ ವಿದ್ಯಾಗಿರಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಎಸಿಪಿ ಪ್ರಶಾಂತ ಸಿದ್ಧನಗೌಡರ, ಇನ್‌ಸ್ಪೆಕ್ಟರ್ ಸಂಗಮೇಶ ದಿಡಿಗನಾಳ ಹಾಗೂ ತಂಡ ಕಳ್ಳನನ್ನು ಪತ್ತೆ ಮಾಡಿ ಕಳುವು ಮಾಡಿದ ಸಾಮಾನುಗಳನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದೆ.
ಬೆಂಗಳೂರು: ನನ್ನ ವಿರುದ್ಧದ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ನಂತರ ಅನೇಕರು ಮಾತನಾಡುತ್ತಿದ್ದಾರೆ. ಯಾರ್ಯಾರ ಮನಸ್ಸು ಮತ್ತು ನಾಲಿಗೆ ಮೇಲೆ ಏನೇನಿದೆ ಎಂಬುದು ಈಗ ತಿಳಿಯುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕರ್ನಾಟಕ ಮಾದರಿಯಂತೆ ತೆಲಂಗಾಣದಲ್ಲಿ 6 ಗ್ಯಾರಂಟಿಗಳನ್ನು ನೀಡಲಾಗಿದೆ. ದಲಿತ ಸಿಎಂ ಸೇರಿದಂತೆ ಕೆಸಿಆರ್ ಅವರ ನೇತೃತ್ವದ ಸರ್ಕಾರ 10 ವರ್ಷಗಳಲ್ಲಿ ತಾನು ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲ. ತೆಲಂಗಾಣ ರಾಜ್ಯ ರಚನೆಗೆ ಸೋನಿಯಾ ಗಾಂಧಿ ಅವರೇ ಕಾರಣ. ತೆಲಂಗಾಣದ ಜನರಿಗೆ ಸೋನಿಯಾಗಾಂಧಿ ಅವರ ಋಣ ತೀರಿಸಬೇಕು ಎನ್ನುವ ಭಾವನೆ ಬಂದಿದೆ. ಜನರಿಗೆ ತೋಟದ ಮನೆಯಲ್ಲಿ ಕುಳಿತು ಕೆಲಸ ಮಾಡುವವರು ಬೇಕಿಲ್ಲ. ಜನರ ಮಧ್ಯೆ ಕೆಲಸ ಮಾಡುವ ಸರ್ಕಾರ ಬೇಕು ಎನ್ನುವುದು ಅರ್ಥವಾಗಿದೆ. ಜನ ಬದಲಾವಣೆ ಬಯಸಿದ್ದಾರೆ” ಎಂದು ಹೇಳಿದರು. “ತೆಲಂಗಾಣ ಚುನಾವಣೆಗೆ ಕರ್ನಾಟಕದ ಸುಮಾರು 40 ಕ್ಕೂ ಹೆಚ್ಚು ನಾಯಕರು ಭಾಗವಹಿಸಿದ್ದರು. ನಾನು ಸಹ 5 ದಿನಗಳ ಕಾಲ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದೆ. ನಿನ್ನೆ ಸಿಎಂ…
ಹುಬ್ಬಳ್ಳಿ; ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4, 2023 ರಿಂದ ಡಿಸೆಂಬರ್ 15ರ ವರೆಗೆ 10 ದಿನಗಳ ಕಾಲ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿನ ಸಮಸ್ಯೆ, ಅಭಿವೃದ್ಧಿ ಹಾಗೂ ಇನ್ನಿತರ ಪ್ರಶ್ನೆ ಕೇಳುವ ಶಾಸಕರಿಗೆ ಸಚಿವರಿಗೆ ಆದ್ಯತೆ ನೀಡಲಾಗುವುದು ಎಂದು ವಿಧಾನ ಪರಿಷತ್ತು ಸಭಾಪತಿ ಬಸವರಾಜ ಎಸ್. ಹೊರಟ್ಟಿ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಉತ್ತರ ಕರ್ನಾಟಕ ಭಾಗದಲ್ಲಿ ಅನೇಕ ಸಮಸ್ಯೆಗಳು ಇವೆ ಕಿತ್ತೂರು ಕರ್ನಾಟಕ ಭಾಗದಲ್ಲಿ ಚಳಿಗಾಲ ಅಧಿವೇಶನ ನಡೆಯುವುದರಿಂದ ಈ ಭಾಗದಲ್ಲಿರುವ ಅಭಿವೃದ್ಧಿ ಕಾಮಗಾರಿಗಳು ಬಗ್ಗೆ ಹೆಚ್ಚು ಹೆಚ್ಚು ಚರ್ಚೆ ಆಗಬೇಕು ಆದ್ದರಿಂದ ನಾನು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಹಾಗೂ ಸಚಿವರ ,ಮುಖ್ಯಮಂತ್ರಿಗಳ ಗಮನಕ್ಕೆ ಸಹ ತರಲಾಗಿದೆ.ಪ್ರಶ್ನೋತ್ತರ ವೇಳೆ ನಂತರ ವಿಶೇಷ ಸಮಯ ನಿಗದಿ ಮಾಡಲಾಗುವುದು ಎಂದರು. ಅನಗತ್ಯವಾಗಿ ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಪ್ರತಿಭಟನೆ, ಮನವಿ ಮಾಡಿ ಕಾಲಹರಣ ಮಾಡದೇ ಅಧಿವೇಶನ ಉಪಯೋಗ ಆಗುವ ನಿಟ್ಟಿನಲ್ಲಿ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ…
ಮಂಡ್ಯ : ಮಂಡ್ಯದಲ್ಲಿ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣದ ಬಗ್ಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕಳವಳ ವ್ಯಕ್ತಪಡಿಸಿದ್ದಾರೆ. ಈ ಕುರಿತು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿರುವ ಅವರು, ಮಂಡ್ಯದ ಹುಳ್ಳೇನಹಳ್ಳಿ ಸಮೀಪದ ಆಲೆಮನೆಯಲ್ಲಿ ನಡೆದ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಜಾಲದ ಪ್ರಕರಣ ತೀವ್ರ ಆಘಾತ ಮೂಡಿಸಿದೆ ಎಂದು ಬೇಸರಿಸಿದ್ದಾರೆ. ಸಮಾಜದಲ್ಲಿ ಲಿಂಗ ಅನುಪಾತ ಕುಸಿಯುತ್ತಿದ್ದು, ಮಹಿಳೆಯರ ಸಂಖ್ಯೆ ಗಣನೀಯ ಇಳಿಕೆ ಕಾಣುತ್ತಿದೆ. ಪರಿಣಾಮ ರೈತರೂ ಸೇರಿದಂತೆ ಶ್ರಮಿಕ ವರ್ಗಕ್ಕೆ ಮದುವೆಯಾಗಲು ಹೆಣ್ಣಿನ ಕೊರತೆಯಂತಹ ಗಂಭೀರ ಸಮಸ್ಯೆಯೂ ತಲೆದೂರಿದೆ. ದಿಶಾ ಸಭೆಯಲ್ಲಿ ಈ ಕುರಿತಂತೆ ಚರ್ಚೆ ಮಾಡಿದ್ದರೂ, ಇಂಥದ್ದೊಂದು ಘಟನೆ ನಡೆದಿರುವುದು ಅತ್ಯಂತ ನೋವಿನ ಸಂಗತಿ ಎಂದು ಅಸಮಾಧಾನ ಹೊರಹಾಕಿದ್ದಾರೆ. https://ainlivenews.com/golden-opportunity-to-work-in-banking-sector-there-are-8283-vacancies-in-sbi/ ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆಯಂತಹ ಪ್ರಕರಣಗಳ ಗಂಭೀರತೆಯ ಕುರಿತಂತೆ ಅರಿವು ಮೂಡಿಸಬೇಕಾದವರೆ, ಹೀನ ಕೃತ್ಯಯಲ್ಲಿ ಭಾಗಿಯಾಗಿದ್ದು ಮತ್ತಷ್ಟು ಆತಂಕ ತಂದಿದೆ. ಈ ಪ್ರಕರಣದ ಹಿಂದಿರುವ ಪ್ರತಿಯೊಬ್ಬರಿಗೂ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸುವೆ ಎಂದು ಸುಮಲತಾ ಆಗ್ರಹಿಸದ್ದಾರೆ.