ಬೆಂಗಳೂರು:- ನಗರದ ಅರಮನೆ ಮೈದಾನದಲ್ಲಿ ತುಳು ಕೂಟದ ವತಿಯಿಂದ ನಡೆದ ಬೆಂಗಳೂರು ಕಂಬಳ ನೋಡಲೇ ಸಿನಿ ದಿಗ್ಗಜರೇ ಆಗಮಿಸಿದರು. ಭಾನುವಾರ ರಾತ್ರಿ 2 ಗಂಟೆ ಸುಮಾರಿಗೆ ಮುಕ್ತಾಯಗೊಂಡಿದೆ. ನವೆಂಬರ್ 25ರ ಬೆಳಗ್ಗೆ 11 ಗಂಟೆಗೆ ಆರಂಭವಾದ ಕೋಣಗಳ ಓಟ ನವೆಂಬರ್ 26ರ ರಾತ್ರಿ 2 ಗಂಟೆಗೆ ಅಂತ್ಯಗೊಂಡಿದ್ದು, ಫಲಿತಾಂಶ ಪ್ರಕಟಗೊಂಡಿದೆ ಎರಡೂ ದಿನಗಳಲ್ಲಿ ಅರಮನೆ ಮೈದಾನದಲ್ಲಿ ಕಾಲಿಡಲೂ ಜಾಗವಿಲ್ಲದಂತೆ ಕಂಬಳ ಅಭಿಮಾನಿಗಳು ನೆರೆದಿದ್ದು ಈ ಮೂಲಕ ಹೊಸ ಚರಿತ್ರೆಯನ್ನೇ ಬರೆಯಲಾಗಿದೆ. 159ರ ಜೋಡಿ ಕೋಣಗಳು ಭಾಗವಹಿಸಿದ ಈ ಮಹಾ ಕೂಟದಲ್ಲಿ ಅತ್ಯಂತ ಪ್ರತಿಷ್ಠೆಯ ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್ ಭಟ್ ಅವರ ಸಿ ಕೋಣಗಳು ಪ್ರಥಮ ಬಹುಮಾನ ಪಡೆದರೆ ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ ಅವರ ಕೋಣಗಳು ದ್ವಿತೀಯ ಬಹುಮಾನ ಪಡೆದಿವೆ. ಶ್ರೀಕಾಂತ್ ಭಟ್ ಅವರ ಕೋಣಗಳನ್ನು ಬಂಬ್ರಾಣ ಬೈಲು ವಂದಿತ್ ಶೆಟ್ಟಿ ಅವರು ಓಡಿಸಿದ್ದಾರೆ. ಈ ಕೋಣಗಳು 9.51 ಸೆಕೆಂಡ್‌ನಲ್ಲಿ ಓಟವನ್ನು ಮುಗಿಸಿವೆ. ಇದು ಕೂಟ…
Author: AIN Author
ಬೆಂಗಳೂರು: ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾದ ಪ್ರೀಕ್ವೆಲ್ನ ಫಸ್ಟ್ ಲುಕ್ ಇಂದು ಬಿಡುಗಡೆಯಾಗಲಿದೆ. ಮೊದಲ ಭಾಗದಂತೆಯೇ, ಎರಡನೇ ಭಾಗವನ್ನು ಸಹ ರಿಷಬ್ ಶೆಟ್ಟಿ ಬರೆದು ನಿರ್ದೇಶಿಸಲಿದ್ದಾರೆ, ಅವರು ಪ್ರಮುಖ ಪಾತ್ರದಲ್ಲಿ ನಟಿಸುವ ನಿರೀಕ್ಷೆಯಿದೆ. ಹೊಂಬಾಳೆ ಫಿಲ್ಮ್ಸ್ ಬ್ಯಾನರ್‌ನ ವಿಜಯ್ ಕಿರಂಗಂದೂರು ನಿರ್ಮಿಸಿರುವ ಈ ಸೀಕ್ವೆಲ್ ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಬಂಗಾಳಿ ಮತ್ತು ಇಂಗ್ಲಿಷ್‌ನಲ್ಲಿ ಬಿಡುಗಡೆಯಾಗಲಿದೆ. ನಟ ರಿಷಬ್ ಶೆಟ್ಟಿ ಅವರ ಸಿನಿಪಯಣದ ದಿಕ್ಕನ್ನು ಬದಲಿಸಿದ ಸಿನಿಮಾ ಕಾಂತಾರ. ವಿಶ್ವವ್ಯಾಪಿ ಪ್ರೇಕ್ಷಕರ ಮನಗೆಲ್ಲುವುದರೊಂದಿಗೆ, ಬಾಕ್ಸ್ ಆಫೀಸ್‌ನಲ್ಲಿ ಕೋಟಿ ಕೋಟಿ ಹಣವನ್ನೂ ಬಾಚಿತ್ತು. ಇದೀಗ ಈ ಸಿನಿಮಾದ ಪ್ರೀಕ್ವೆಲ್ ತೆರೆಯ ಮೇಲೆ ಬರಲಿದ್ದು, ಪ್ರೇಕ್ಷಕರಲ್ಲಿ ಹೆಚ್ಚಿನ ನಿರೀಕ್ಷೆ ಹುಟ್ಟಿಸಿದೆ.
ತಿರುವನಂತಪುರಂ: ಆಸ್ಟ್ರೇಲಿಯಾ ವಿರುದ್ದ ಎರಡನೇ ಟಿ20 ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಸಿಡಿಸುವ ಮೂಲಕ ಟೀಮ್ ಇಂಡಿಯಾ ಓಪನರ್ ಯಶಸ್ವಿ ಜೈಸ್ವಾಲ್ ಅವರು ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಪವರ್‌ಪ್ಲೇನಲ್ಲಿ ಅರ್ಧಶತಕ ಸಿಡಿಸಿದ ಮೂರನೇ ಬ್ಯಾಟ್ಸ್‌ಮನ್ ಸಾಧನೆಗೆ ಜೈಸ್ವಾಲ್ ಭಾಜನರಾಗಿದ್ದಾರೆ. ಭಾನುವಾರ ಇಲ್ಲಿನ ಗ್ರೀನ್ ಫೀಲ್ಡ್ ಇಂಟರ್‌ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆದಿದ್ದ ಎರಡನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಭಾರತ ತಂಡದ ಪರ ಇನಿಂಗ್ಸ್ ಆರಂಭಿಸಿದ ಯಶಸ್ವಿ ಜೈಸ್ವಾಲ್ ಮೊದಲ ಎಸೆತದಿಂದಲೇ ಸ್ಪೋಟಕ ಬ್ಯಾಟ್ ಮಾಡಿದರು. ಕೇವಲ 24 ಎಸೆತಗಳಲ್ಲಿ ಅರ್ಧಶತಕವನ್ನು ಪೂರ್ಣಗೊಳಿಸಿದ ಜೈಸ್ವಾಲ್, ಅಂತಿಮವಾಗಿ 25 ಎಸೆತಗಳಲ್ಲಿ 52 ರನ್ ಗಳಿಸಿ ನೇಥನ್ ಎಲ್ಲಿಸ್‌ಗೆ ವಿಕೆಟ್ ಒಪ್ಪಿಸಿದರು. ಅದರಲ್ಲಿಯೂ ವಿಶೇಷವಾಗಿ ಪಂದ್ಯದ ನಾಲ್ಕನೇ ಓವರ್‌ನಲ್ಲಿ ಶೇನ್ ಎಬಾಟ್ ಅವರ ಬೌಲಿಂಗ್‌ನಲ್ಲಿ 24 ರನ್‌ಗಳನ್ನು ಚಚ್ಚಿದ್ದರು. ಆ ಮೂಲಕ ಆಸ್ಟ್ರೇಲಿಯಾ ತಂಡದ ಎದುರು ಟಿ20ಐ ಪವರ್‌ಪ್ಲೇನಲ್ಲಿ ಭಾರತ ತಂಡ ಅತ್ಯಂತ ಗರಿಷ್ಠ ಮೊತ್ತವನ್ನು ದಾಖಲಿಸಲು ನೆರವು ನೀಡಿದ್ದರು. ಜೈಸ್ವಾಲ್ ಅವರ ಸ್ಪೋಟಕ…
ರಾಂಚಿ: ಮಗುವಿಗೆ ಜನ್ಮ ನೀಡಿದ ಬಳಿಕ ತಾಯಿ ಸಾವು ಕಂಡಿದ್ದಾಳೆ. ಇದರ ಬೆನ್ನಲ್ಲಿಯೇ ಮಗುವನ್ನು ಬೇರೊಬ್ಬರಿಗೆ ಮಾರಾಟ ಮಾಡಿದ ಪ್ರಕರಣದಲ್ಲಿ ರಾಂಚಿನ ಪೊಲೀಸರು ಇಬ್ಬರು ನರ್ಸ್‌ಗಳು ಸೇರಿದಂತೆ ಮೂವರು ಮಹಿಳೆಯನ್ನು ಬಂಧಿಸಿದ್ದಾರೆ. ಸಂಜೆಯ ವೇಳೆಗೆ ಇವರನ್ನು ರಾಂಚಿಯಲ್ಲಿಯೇ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದರು. ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಮನೋಹರಪುರದಲ್ಲಿ ಪ್ರಕರಣ ದಾಖಲಾಗಿದೆ. ಮುನ್ನಿ ಚಾಂಪಿಯಾ ಎಂಬ ಯುವತಿ ಹೆರಿಗೆಯಾದ ಕೂಡಲೇ ಸಾವನ್ನಪ್ಪಿದ್ದಾಳೆ. ಈ ಪ್ರದೇಶದಲ್ಲಿ ನರ್ಸ್ ಆಗಿರುವ ಇಬ್ಬರು ಮಹಿಳೆಯರು ಮನೆಯಲ್ಲಿಯೇ ಆಕೆಗೆ ಹೆರಿಗೆ ಮಾಡಿಸಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. https://ainlivenews.com/shooting-in-metro-also-from-now-on-bmrcl-green-signal/ ಗಂಡು ಮಗುವಿಗೆ ಜನ್ಮ ನೀಡಿದ್ದ ಆಕೆ, ಸಾವು ಕಂಡಿದ್ದರು. ಆ ಬಳಿಕ ಈ ಇಬ್ಬರು ನರ್ಸ್‌ಗಳು ಮಗುವನ್ನು ನೆರೆಯ ಜಿಲ್ಲೆಯಲ್ಲಿ ವಾಸಿಸುವ ಗುಡ್ಡಿ ಗುಪ್ತಾ ಎಂಬ ಮಹಿಳೆಗೆ ಮಾರಾಟ ಮಾಡಿದ್ದಾರೆ. ಆದರೆ, ದಿನಗಳು ಕಳೆದರೂ ಮಗು ಒಂದೇ ಸಮನೆ ಅಳುವುದು ಹಾಗ ಗಲಾಟೆ ಮಾಡುತ್ತಿದ್ದ ಕಾರಣಕ್ಕೆ ಗುಡ್ಡಿ ಗುಪ್ತಾ ಮಗುವನ್ನು ಹಿಂತಿರುಗಿಸಲು ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ…
ಗದಗ:- ಗೌರಿ ಹುಣ್ಣಿಮೆ ಹಿನ್ನೆಲೆ ಗದಗ ಹೊಸ ಬಸ್ ನಿಲ್ದಾಣ ಜನರಿಂದ ತುಂಬಿ ತುಳುಕ್ತಿದೆ. ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ತೆರಳೋ ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಬಸ್ ಗಳಿಗಾಗಿ ಪ್ರಯಾಣಿಕರು ಕಾಯ್ದು ನಿಂತು ಸುಸ್ತಾಗಿದ್ದಾರೆ. ಎಷ್ಟೇ ಬಸ್ ಗಳು ಬಂದ್ರೂ ಕೂಡಾ ಪುಲ್ ರಶ್ ಆಗಿವೆ. ಬಸ್ ಪ್ಲಾಟ್ ಫಾರಂ ಗೆ ಬರೋ ಮುನ್ನವೇ ಜನರು ಮುಗಿಬೀಳ್ತಿದ್ದಾರೆ. ಶಕ್ತಿ ಯೋಜನೆ ಎಫೆಕ್ಟ್ ನಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೇ ಬಂದಿದ್ರಿಂದಾಗಿ ಬಸ್ ಗಳಲ್ಲಿ ಸೀಟ್ ಗಳಿಗಾಗಿ ಪರದಾಟ ನಡೆದಿದೆ. ಸೀಟ್ ಗಳಿಲ್ಲದೇ ನಿಂತು ಹೋಗೋ ಪರಿಸ್ಥಿತಿ ಎದುರಾಗಿದೆ.
ಗೊಂಬೆಗಳ ಲವ್ ಸಿನಿಮಾ ಖ್ಯಾತಿಯ ಅರುಣ್ ಕುಮಾರ್ (Arun Kumar) ಮರಿ ಟೈಗರ್ ವಿನೋದ್ ಪ್ರಭಾಕರ್ (Vinod Prabhakar) ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ. ಇವರಿಬ್ಬರ ಕಾಂಬಿನೇಷನ್ ನೆಲ್ಸನ್ ಸಿನಿಮಾದ ಟೀಸರ್ ಧೂಳ್ ಎಬ್ಬಿಸಿದೆ. ಇದೀಗ ಚಿತ್ರತಂಡದಿಂದ ಮತ್ತೊಂದು ಅಪ್ ಡೇಟ್ ಸಿಕ್ಕಿದೆ. ನೆಲ್ಸನ್ ಗೆ ನಾಯಕಿ ಸಿಕ್ಕಿದ್ದಾಳೆ. ಮಾಸ್ ಮರಿ ಟೈಗರ್ ವಿನೋದ್ ಗೆ ಜೋಡಿಯಾಗಿ ಶ್ವೇತಾ ಡಿಸೋಜಾ ನಟಿಸಲಿದ್ದಾರೆ. ಕರಾವಳಿಯ ಚೆಲುವೆ ಶ್ವೇತಾ ಡಿಸೋಜಾ (Shweta D’Souza) ನೆಲ್ಸನ್ ಬಳಗ ಸೇರಿಕೊಂಡಿದ್ದಾರೆ. ಹಿಂದಿ ಸಿನಿಮಾ Y ಮೂಲಕ ಸಿನಿಮಾ ಜರ್ನಿ ಆರಂಭಿಸಿದ್ದ ಈ ಸುಂದರಿ ಖಾಸಗಿ ಪುಟಗಳು ಹಾಗೂ ಹೆಜ್ಜಾರು ಚಿತ್ರದಲ್ಲಿ ನಟಿಸಿದ್ದಾರೆ. ಹೆಜ್ಜಾರು ಸಿನಿಮಾಗಾಗಿ ಕಾಯ್ತಿರುವ ಶ್ವೇತಾ, ಈಗ ನೆಲ್ಸನ್ ಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. 1960-90ರ ದಶಕದಲ್ಲಿ ಚಾಮರಾಜನಗರದಲ್ಲಿ ನಡೆಯುವ ನೈಜ ಘಟನೆಯಾಧಾರಿತ ಚಿತ್ರ ನೆಲ್ಸನ್. ಗ್ಯಾಂಗ್ ಸ್ಟರ್ ಕಥಾಹಂದರ ಹೊಂದಿದ್ದು, ವಿನೋದ್ ಪ್ರಭಾಕರ್ ಹಿಂದೆಂದೂ ಕಾಣದ ಅವತಾರದಲ್ಲಿ ‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ಸಿನಿಮಾದಲ್ಲಿ ನಿಮಗೆ…
ಬೆಂಗಳೂರು:- ವಿವಿಧ ಸಂಘಟನೆಗಳಿಂದ ರಾಜಧಾನಿ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆಗೆ ಮತ್ತು ರಾಜಭವನ ಚಲೋಗೆ ಇಂದು ಕರೆ ನೀಡಲಾಗಿದೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಇಂದು ವಾಹನಗಳ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗಿದ್ದು, ಈ ಕೆಳಗಿನಂತಿದೆ. ಬದಲಿ ಮಾರ್ಗ ಇಲ್ಲಿದೆ ಎಸ್‌ಬಿಎಂ ಸರ್ಕಲ್‌ನಿಂದ ಫ್ರೀಡಂಪಾರ್ಕ್ ಮಾರ್ಗದಲ್ಲಿ ಹೋಗುವವರು, ಮಹಾರಾಣಿ ಕಾಲೇಜು ಅಂಡರ್‌ಪಾಸ್ ಮೂಲಕ ಸಂಚರಿಸಬೇಕು. ಫ್ರೀಡಂಪಾರ್ಕ್‌ನಿಂದ ಕನಕದಾಸ ವೃತ್ತದ ಕಡೆ ಹೋಗಲು ಅವಕಾಶವಿಲ್ಲ. ಇನ್ನು ಕೋಡೆ ಜಂಕ್ಷನ್ ಕಡೆಯಿಂದ ಕೆ.ಆರ್.ಸರ್ಕಲ್‌ಗೆ ಹೋಗುವವರು, ಹಳೇ ಜೆಡಿಎಸ್ ಕಚೇರಿಯ ರಸ್ತೆ ಮೂಲಕ ಸಂಚರಿಸಲು ಸೂಚಿಸಲಾಗಿದೆ. ಸುಬ್ಬಣ್ಣ ಜಂಕ್ಷನ್‌ನಿಂದ ಎಂಟಿಆರ್ ಜಂಕ್ಷನ್ ಕಡೆ ಹೋಗುವವರಿಗೆ ದ್ವಿಮುಖ ಸಂಚಾರಕ್ಕೆ ಸಂಚಾರಿ ಪೊಲೀಸರು ಅವಕಾಶ ನೀಡಲಾಗಿದೆ. ಇನ್ನು ಕೋಡೆ ಜಂಕ್ಷನ್, ಮಹಾರಾಣಿ ಜಂಕ್ಷನ್, ವೈ.ರಾಮಚಂದ್ರ ರಸ್ತೆ, ಕಾಳಿದಾಸ, ಪ್ಯಾಲೆಸ್ ರಸ್ತೆ, ಕೆ.ಜಿ.ರಸ್ತೆಗಳಲ್ಲಿ ವಾಹನ ನಿಲುಗಡೆ ನಿರ್ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರು:- ಕರ್ನಾಟಕದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ತಾಳಗುಪ್ಪ, ಗುಬ್ಬಿ, ಕೊಣನೂರು, ಬೆಳ್ತಂಗಡಿಯಲ್ಲಿ ಭಾರಿ ಮಳೆಯಾಗಿದೆ. ವಿಜಯಪುರದಲ್ಲಿ 17.1 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲೂ ಮೋಡಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 25.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 25.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್…
ಪುತ್ತೂರು : ತೋಟಕ್ಕೆ ಬಳಸುವ ವಿಷಕಾರಿ ಕೀಟನಾಶಕ ಸೇವಿಸಿದ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತ ಯುವತಿ ನಿಶಾ (17) ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಸಂಪ್ಯ ಬೈಲಾಡಿ ನಿವಾಸಿ ಮಂಜಪ್ಪ ಗೌಡರ ಪುತ್ರಿ ಎಂದು ಗುರುತಿಸಲಾಗಿದೆ. ನಿಶಾ ಬಿ ಎಮ್ ರವರು ಪುತ್ತೂರು ನಗರ ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಹದಿನೈದು ದಿನಗಳ ಹಿಂದೆ ಬಿಹಾರದಲ್ಲಿ ನಡೆದ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ (ಓಟ ಸ್ಪರ್ಧೆ) ಭಾಗವಹಿಸಿ ಅಲ್ಲಿ ಯಾವುದೇ ಬಹುಮಾನ ದೊರೆಯದೇ ಹಿಂತಿರುಗಿ ಮನೆಗೆ ಬಂದವರು ಬೇಸರದಲ್ಲಿದ್ದು ನ.14 ರಂದು ವಿಪರೀತವಾಗಿ ವಾಂತಿ ಮಾಡುತ್ತಿದ್ದು, https://ainlivenews.com/upi-id-with-no-transaction-for-1-year-upi-number-de-activate-reason/ ಇದರಿಂದ ಅಸ್ವಸ್ಥಳಾದವಳನ್ನು ಈ ಬಗ್ಗೆ ವಿಚಾರಿಸಿದಾಗ ನ.13 ರಂದು ಸಂಜೆ ತೋಟಕ್ಕೆ ಬೀಡುವ ಕೀಟನಾಶಕವನ್ನು ಸೇವಿಸಿರುವುದಾಗಿ ತಿಳಿಸಿದ್ದು, ನಂತರ ಪುತ್ತೂರು ಖಾಸಗಿ ಆಸ್ಪತ್ರೆಯ ವೈದ್ಯರಲ್ಲಿ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ಖಾಸಗಿ ಆಸ್ಪತ್ರೆಯ…
ದಕ್ಷಿಣದ ಲೇಡಿ ಸೂಪರ್ ಸ್ಟಾರ್ ನಯನತಾರಾ ನಟನೆಗೆ ಕೊಂಚ ವಿರಾಮ ತೆಗೆದುಕೊಂಡು ನಿರ್ದೇಶನಕ್ಕೆ (Directio) ಹಾರಲಿದ್ದಾರೆ. ನಿರ್ದೇಶನ ಅವರ ಕನಸಂತೆ. ಹಾಗಾಗಿ ಶೀಘ್ರದಲ್ಲೇ ಆ ಕನಸನ್ನು ನನಸು ಮಾಡಿಕೊಳ್ಳಲಿದ್ದಾರೆ ಸ್ಟಾರ್ ನಟಿ. ಸಿನಿಮಾ ಯಾವುದು? ಕಥೆ ಏನು? ಯಾವುದನ್ನೂ ಇನ್ನೂ ಬಿಟ್ಟುಕೊಡದ ನಯನತಾರಾ, ಮುಂದಿನ ದಿನಗಳಲ್ಲಿ ಹಲವು ವಿಷಯಗಳು ಬಹಿರಂಗಗೊಳ್ಳಲಿವೆ. ಈ ನಡುವೆ ನಯನತಾರಾ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದ್ದು, ಖ್ಯಾತ ನಟ ಕಮಲ್ ಹಾಸನ್ ಅವರ ಹೊಸ ಚಿತ್ರಕ್ಕೆ ಲೇಡಿ ಸೂಪರ್ ಸ್ಟಾರ್ ನಯನತಾರಾ (Nayanthara) ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಹಿಂದೆ ಇದೇ ಸಿನಿಮಾಗೆ ತ್ರಿಷಾ ನಾಯಕಿ ಎಂದು ಹೇಳಲಾಗಿತ್ತು. ತ್ರಿಷಾ ಬದಲಾಗಿ ಇದೀಗ ನಯನತಾರಾ ಹೆಸರು ಕೇಳಿ ಬಂದಿದೆ. ಈ ಸುದ್ದಿ ಹೊರ ಬೀಳುತ್ತಿದ್ದಂತೆಯೇ ಈ ಜೋಡಿಯನ್ನು ತೆರೆಯ ಮೇಲೆ ನೋಡಲು ಅಭಿಮಾನಿಗಳು ಈಗಲೇ ಕಾತರದಿಂದ ಕಾಯುವಂತಾಗಿದೆ. ಭಾರತೀಯ ಸಿನಿಮಾ ರಂಗದ ಇಬ್ಬರು ದಂತಕಥೆಗಳು ಬರೋಬ್ಬರಿ 36 ವರ್ಷಗಳ ಬಳಿಕ ಒಂದಾಗುತ್ತಿದ್ದಾರೆ. ನಿರ್ದೇಶಕ…