ಕಟಪಾಡಿ:- ಅಪರಿಚಿತ ವಾಹನ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ ಬಳಿ ನಡೆದಿದೆ. ಪೈಂಟರ್ ವೃತ್ತಿ ಮಾಡುತ್ತಿದ್ದ ಉತ್ತಮ (55) ಮೃತ ವ್ಯಕ್ತಿ ಎನ್ನಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡಿದ್ದ ಗಾಯಾಳುವನ್ನು ಸ್ಥಳೀಯರ ಸಹಕಾರದಿಂದ ಸಮಾಜ ಸೇವಕ ಕಟಪಾಡಿಯ ಅಭಿರಾಜ್ ಸುವರ್ಣ ತನ್ನ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
Author: AIN Author
ಬೆಂಗಳೂರು:- ಆನೇಕಲ್ ನಲ್ಲಿ ಪೊಲೀಸ್ ಇಲಾಖೆಯಿಂದ ವಿನೂತನ ಪ್ರಯತ್ನ ನಡೆದಿದೆ. ಎಸ್ಪಿ ನೇತೃತ್ವದಲ್ಲಿ ಪಬ್ಲಿಕ್ ಜೊತೆ ಪೊಲೀಸ್ ಬೀಟ್ ನಡೆದಿದೆ. ಚಂದಾಪುರ ಸರ್ಕಲ್ ನಲ್ಲಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸ್ಪೆಷಲ್ ಬೀಟ್ ನಡೆದಿದ್ದು, ಬೀದಿ ಬದಿ ಅಂಗಡಿ, ಸಂತೆ ಚಿಕನ್ ಮಾರ್ಕೆಟ್, ಆಟೋ ಸ್ಟ್ಯಾಂಡ್ ಗೆ ವಿಸಿಟ್ ಕೊಟ್ಟಿದ್ದಾರೆ. ಪ್ರತಿಯೊಬ್ಬರ ಬಳಿ ಪುಂಡರ ಹಾವಳಿ, ಹಫ್ತಾ ವಸೂಲಿ ಗೂಂಡಾಗಿರಿ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ. ಲಾ ಅಂಡ್ ಅರ್ಡರ್ ಜೊತೆ ಸಾರ್ವಜನಿಕ ಸಮಸ್ಯೆಗಳ ಬಗ್ಗೆಯು ಮಾಹಿತಿ ಸಂಗ್ರಹಿಸಲಾಗಿದ್ದು, ಪಾರ್ಕಿಂಗ್ ಸಮಸ್ಯೆ, ಬೀದಿ ದೀಪ, ತಂಗುದಾಣ ವಾಕಿಂಗ್ ಪಾತ್ ಬಗ್ಗೆಯು ಸ್ಪಂದನೆ ವ್ಯಕ್ತವಾಗಿದೆ. ಸಾರ್ವಜನಿಕರ ಬಳಿಗೆ ಪೊಲೀಸ್ ಇಲಾಖೆ ನಡಿಗೆ ಮೂಲಕ ಸಮಸ್ಯೆ ಆಲಿಸಿದ್ದಾರೆ. ಆನೇಕಲ್ ಉಪವಿಭಾಗದ ಇನ್ಸ್ಪೆಕ್ಟರ್ ಗಳು ಪೊಲೀಸ್ ಸಿಬ್ಬಂದಿ ಭಾಗಿಯಾಗಿದರು. ವಿಶೇಷ ಪೊಲೀಸ್ ಬೀಟ್ ಗೆ ಸಾರ್ವಜನಿಕರ ಪ್ರಶಂಸೆ ವ್ಯಕ್ತವಾಗಿದೆ.
ಬೆಂಗಳೂರು:- ವಿದ್ಯುತ್ ಕಳ್ಳತನದ ಬಗ್ಗೆ ಕುಮಾರಸ್ವಾಮಿ ಒಪ್ಪಿಕೊಂಡಿದ್ದಕ್ಕೆ ಅಭಿನಂದನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಅಚಾತುರ್ಯವೋ, ಕಳ್ಳತನವೋ ಒಟ್ಟಿನಲ್ಲಿ ವಿದ್ಯುತ್ ಕಳ್ಳತನದ ಬಗ್ಗೆ ಕುಮಾರಸ್ವಾಮಿ ಅವರು ಒಪ್ಪಿಕೊಂಡು, ದಂಡ ಕಟ್ಟುತ್ತೇನೆ ಎಂದು ಹೇಳಿರುವುದು ಅಭಿನಂದನೀಯ ಎಂದರು. ಕುಮಾರಸ್ವಾಮಿ ಮನೆಗೆ ವಿದ್ಯುತ್ ಕಳವು ವಿಚಾರವನ್ನು ಮಾಧ್ಯಮಗಳಲ್ಲಿ ಗಮನಿಸಿದೆ. ಅವರ ನೆರೆ ಹೊರೆಯವರೇ ಅಕ್ರಮ ವಿದ್ಯುತ್ ಸಂಪರ್ಕದ ವಿಡಿಯೋ ಮಾಡಿ ಮಾಧ್ಯಮಗಳಿಗೆ ನೀಡಿದ್ದಾರೆ. ಆನಂತರ ನಮ್ಮ ಪಕ್ಷದ ಸಾಮಾಜಿಕ ಜಾಲತಾಣ ಘಟಕ ಏನು ಕೆಲಸ ಮಾಡಬೇಕೊ ಅದನ್ನು ಮಾಡಿದೆ. ಅವರ ಪಕ್ಷದ ಸೋಷಿಯಲ್ ಮೀಡಿಯಾದಲ್ಲಿ ಬೇಕಾದಷ್ಟು ಬರೆದಂತೆ, ನಮ್ಮ ಪಕ್ಷದವರು ಏನು ಕೆಲಸ ಮಾಡಬೇಕೋ ಅದನ್ನು ಮಾಡಿದ್ದಾರೆ. ಅವರು ಮಾಡೋದನ್ನು ನೋಡಿಕೊಂಡು ಸುಮ್ಮನೆ ಕುಳಿತುಕೊಳ್ಳಲು ಆಗುತ್ತದೆಯೇ? ಎಂದು ಮರು ಪ್ರಶ್ನಿಸಿದರು. ಕುಮಾರಸ್ವಾಮಿ ಅವರು ಈ ರೀತಿಯ ಕೆಲಸ ಮಾಡಿರುವುದು ತಪ್ಪಲ್ಲವೇ ಎಂದು ಕೇಳಿದಾಗ, “ವಿದ್ಯುತ್ ಕಳ್ಳತನ ಮಾಡಬಾರದು, ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ನಮ್ಮಂತಹವರೇ ಹೀಗೆ ಕಳವು ಮಾಡಿದರೆ…
ಮುಂಬೈನ ವಾಂಖೆಡೆ ಮೈದಾನದಲ್ಲಿ ನಾಳೆ ಸೆಮಿಫೈನಲ್ ಮುಖಾಮುಖಿಯಲ್ಲಿ ಭಾರತ ತಂಡವು ನ್ಯೂಜಿಲೆಂಡ್ ಸವಾಲನ್ನು ಎದುರಿಸಲಿದೆ. ಲೀಗ್ ಹಂತದಲ್ಲಿ ಆಡಿದ ಎಲ್ಲ ಒಂಬತ್ತು ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ, ಅಜೇಯ ಓಟ ಮುಂದುವರಿಸುವ ತವಕದಲ್ಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ನಾಯಕ ರೋಹಿತ್ ಶರ್ಮಾ, ಹಿಂದಿನ ಫಲಿತಾಂಶಗಳ ಬಗ್ಗೆ ಯೋಚಿಸದೇ ಸೆಮಿಫೈನಲ್ ಪಂದ್ಯದ ಮೇಲೆ ಗಮನ ಕೇಂದ್ರಿಕರಿಸಬೇಕಿದೆ ಎಂದು ಹೇಳಿದ್ದಾರೆ. ನಾವು ಮೊದಲ ವಿಶ್ವಕಪ್ (1983) ಗೆದ್ದಾಗ ತಂಡದಲ್ಲಿರುವ ಹೆಚ್ಚಿನವರು ಹುಟ್ಟಿರಲಿಲ್ಲ. ಕಳೆದ ಬಾರಿ ಗೆದ್ದಾಗಲೂ (2011) ಹೆಚ್ಚಿನವರು ಕ್ರಿಕೆಟ್ ಆಡುತ್ತಿರಲಿಲ್ಲ. ಹಿಂದೆ ಏನಾಯಿತು ಎಂಬುದು ನಮಗೆಲ್ಲರಿಗೂ ಗೊತ್ತಿದೆ. 10 ವರ್ಷ ಅಥವಾ ಕಳೆದ ವಿಶ್ವಕಪ್‌ನಲ್ಲಿ ಏನಾಯಿತು ಎಂಬುದರ ಕುರಿತು ಚರ್ಚಿಸುವ ಅಗತ್ಯವಿಲ್ಲ ಎಂದು ನಾನು ಭಾವಿಸುತ್ತೇನೆ ಎಂದು ಅವರು ಹೇಳಿದ್ದಾರೆ. ಇನ್ನೊಂದು ತಂಡದಿಂದ ಉಂಟಾಗುವ ಒತ್ತಡ ಅಥವಾ ಸವಾಲುಗಳ ಬದಲು ಪಂದ್ಯದ ಮೇಲೆ ಗಮನ ಕೇಂದ್ರಿಕರಿಸುವುದು ಮುಖ್ಯವೆನಿಸುತ್ತದೆ ಎಂದು ಅವರು ತಿಳಿಸಿದ್ದಾರೆ. ಲೀಗ್ ಪಂದ್ಯವಾಗಿರಲಿ, ಸೆಮಿಫೈನಲ್ ಅಥವಾ ಫೈನಲ್ ಪಂದ್ಯವೇ…
ಮಧುಮೇಹವನ್ನು ತಡೆಯಲು ವಾಕಿಂಗ್ ಬಹಳ ಸಹಾಯ ಮಾಡುತ್ತದೆ ಎಂದು ಸಂಶೋಧನೆ ತಿಳಿಸಿದೆ. ಹೆಚ್ಚು ಸಕ್ರಿಯವಾಗಿರುವವರಿಗೆ ಮಧುಮೇಹ ಬರುವ ಸಾಧ್ಯತೆ ಕಡಿಮೆ ಇರುತ್ತದೆ. ವಾಕಿಂಗ್ ನೀವು ಸಕ್ರಿಯವಾಗಿರಲು ಒಂದು ಉತ್ತಮ ಮಾರ್ಗವಾಗಿದೆ. ಟೈಪ್ 2 ಮಧುಮೇಹದ ಅಪಾಯವನ್ನು ಕಡಿಮೆ ಮಾಡಲು ದಿನಕ್ಕೆ 10,000 ಹೆಜ್ಜೆಗಳನ್ನು ಅಥವಾ ದಿನಕ್ಕೆ ಕನಿಷ್ಠ 30 ನಿಮಿಷಗಳವರೆಗೆ ನಡೆಯಲು ಪ್ರಯತ್ನಿಸಿ. ನೀವು ಒಂದೇ ಬಾರಿಗೆ 30 ನಿಮಿಷಗಳ ಕಾಲ ನಡೆಯಲು ಸಾಧ್ಯವಾಗದಿದ್ದರೆ ದಿನವಿಡೀ ಆಗಾಗ ಸ್ವಲ್ಪ ಪ್ರಮಾಣದಲ್ಲಿ ನಡೆಯಲು ಪ್ರಯತ್ನಿಸಿ. ಉದಾಹರಣೆಗೆ ಬೆಳಿಗ್ಗೆ, ಮಧ್ಯಾಹ್ನ ಮತ್ತು ಸಂಜೆ 10 ನಿಮಿಷಗಳ ಕಾಲ ನಡೆದರೂ ದಿನಕ್ಕೆ 30 ನಿಮಿಷ ನಡೆದಂತಾಗುತ್ತದೆ. ಮಧುಮೇಹಿಗಳಿಗೆ ವಾಕಿಂಗ್ ಆರೋಗ್ಯ ಸುಧಾರಿಸಲು ಸಹಾಯ ಮಾಡುತ್ತದೆ. ವಾಕಿಂಗ್ ಮಾನಸಿಕ ಆರೋಗ್ಯಕ್ಕೂ ಒಳ್ಳೆಯದು. ಇದು ನಿಮ್ಮ ರಕ್ತದಲ್ಲಿನ ಗ್ಲೂಕೋಸ್ ಮಟ್ಟಗಳನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹಾಗೇ, ತೂಕ ಇಳಿಸಲು, ಮೂಳೆ ಮತ್ತು ಸ್ನಾಯುವಿನ ಬಲ ಹೆಚ್ಚಿಸಲು, ರಕ್ತದೊತ್ತಡ ನಿಯಂತ್ರಿಸಲು, ಕೊಲೆಸ್ಟ್ರಾಲ್ ಕಡಿಮೆ ಮಾಡಲು, ಹೃದಯದ ಆರೋಗ್ಯ ಕಾಪಾಡಲು, ಏಕಾಗ್ರತೆ…
ಬೆಂಗಳೂರು:- ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಯಾದ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ರಾಮನಗರ, ಮೈಸೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, ತುಮಕೂರು, ವಿಜಯನಗರದ ಅಲ್ಲಲ್ಲಿ ಮಳೆಯಾಗಬಹುದು. ಕೆಲವು ಕಡೆ ಮೋಡ ಕವಿದ ವಾತಾವರಣ ಇರಬಹುದು. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಗೆ ಯಾವುದೇ ಮಳೆ ಸೂಚನೆ ಇಲ್ಲ. ಬದಲಿಗೆ ಒಣಹವೆಯೇ ಇರಲಿದೆ. ಇತ್ತ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ವಿಜಯಪುರ, ಯಾದಗಿರಿಯಲ್ಲೂ ಒಣಹವೆ ಇರಲಿದೆ. ರಾಜಧಾನಿ ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸಲಿದೆ.…
ಬೆಂಗಳೂರು:- ವಿದ್ಯುತ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ CM ಎಚ್.ಡಿ. ಕುಮಾರಸ್ವಾಮಿ ವಿರುದ್ಧ FIR ದಾಖಲಾಗಿದೆ. ವಿದ್ಯುತ್ ಕಳ್ಳತನದ ಆರೋಪದ ಮೇಲೆ ಅವರ ಮೇಲೆ ಪ್ರಕರಣ ದಾಖಲಾಗಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಿವಾಸಕ್ಕೆ ದೀಪಾಲಂಕಾರ ಮಾಡಲು ವಿದ್ಯುತ್ ಕಳ್ಳತನ ಮಾಡಲಾಗಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿ ವಿಡಿಯೊ ಸಹಿತ ಟ್ವೀಟ್ ಮಾಡಿತ್ತು. ಈಗ ಬೆಸ್ಕಾಂ ಅಧಿಕಾರಿಗಳು ಕುಮಾರಸ್ವಾಮಿ ನಿವಾಸಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಲ್ಲದೆ, ಜಯನಗರ ಬೆಸ್ಕಾಂ ಜಾಗೃತ ದಳದಿಂದ ಎಫ್‌ಐಆರ್ ದಾಖಲು ಮಾಡಲಾಗಿದೆ. ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮಂಗಳವಾರ ರಂದು ಅಪರಾಧ ಎಸಗಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಎಇಇ ಪ್ರಶಾಂತ್ ಕುಮಾರ್ ಎಂಬುವವರು ದೂರು ನೀಡಿದ್ದಾರೆ. ಈ ದೂರಿನನ್ವಯ ಎಫ್‌ಐಆರ್ ದಾಖಲು ಮಾಡಿಕೊಳ್ಳಲಾಗಿದೆ.
ಬೆಂಗಳೂರು:- ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ಈಗಾಗಲೇ ಮದುವೆ ಆಗಿದೆ, ಮಗಳು ಕೂಡ ಇದ್ದಾಳೆ ಎಂದು ವರ್ತೂರ್ ಸಂತೋಷ್ ಅವರ ಮಾವ ಸತ್ಯ ಬಿಚ್ಚಿಟ್ಟಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ನನ್ನ ಮಗಳಿಗೆ ಮನೆಯಲ್ಲಿ ಹೊಡೆದು ಬಡೆದು ಮಾಡ್ತಿದ್ದ. ದೊಡ್ಡವರಿಗೆ ತಿಳಿಸಿ ನನ್ನ ಮಗಳನ್ನ ತವರುಮನೆಗೆ ಕರೆದುಕೊಂಡು ಬಂದ್ವಿ. ದೊಡ್ಡವರಿಗೆಲ್ಲ ತಿಳಿಸಿದ್ದಕ್ಕೆ ನಿಮ್ಮ ಮನೆಗೆ ಕರೆದುಕೊಂಡು ಹೋಗ್ರಿ ಅಂದ್ರು. ಇವಾಗ ಒಂದು ಹೆಣ್ಣು ಮಗು ಆಗಿದೆ. ಪ್ರೆಗ್ನೆಂಟ್ ಆಗಿದ್ದ ನನ್ನ ಮಗಳನ್ನ ಹೊಡೆಯುತ್ತಿದ್ದ ನಾವಿದನ್ನ ನೋಡಿಕೊಂಡಿರಬೇಕಿತ್ತಾ…!? ಅವರ ಮನೆಯವರು ಕಂಪ್ಲೆಂಟ್ ಕೊಡಬೇಡಿ ಅಂದಿದ್ರು. ಬೇಡ ಅಂತೇಳಿ ನಾವು ಮಗಳನ್ನ ಕರೆದುಕೊಂಡು ಬಂದ್ವಿ ಎಂದರು. ಇನ್ನೂ ನಮ್ಮ ಮಗಳ ಕುತ್ತಿಗೆಗೆ ಸಂತೋಷ್ ಚಾಕು ಇಟ್ಟಿದ್ದ. ಮಗಳನ್ನ ತವರಿಗೆ ಕರೆದುಕೊಂಡು ಬಂದು ಎರಡು ವರ್ಷ ಆಯ್ತು. ಇದುವರೆಗೂ ಹೆಂಡ್ತಿ ಮಗಳನ್ನ ನೋಡಲಿಕ್ಕೆ ಬಂದಿಲ್ಲ. ಬಿಗ್ ಬಾಸ್ ಹೋದ್ಮೇಲೆ ಗೊತ್ತಾಗ್ತಿದೆ ಬೇರೆ ಮದುವೆ ಆಗ್ತಾನಂತೆ ಅಂತ. ಮಾರ್ಚ್ 05 2020 ರಂದು ನನ್ನ…
ಬೆಂಗಳೂರು:- ಕಳೆದ ಹಲವು ವರ್ಷಗಳಿಂದ ನಾನು ಹುಟ್ಟುಹಬ್ಬ ಆಚರಿಸಿಕೊಂಡಿಲ್ಲ ಅದರಂತೆ ಈ ಬಾರಿಯೂ ಆಚರಿಸದಿರಲು ನಿರ್ಧರಿಸಿದ್ದೇನೆ. ಇದೇ ತಿಂಗಳ 22 ರಂದು ನನ್ನ ಹುಟ್ಟು ಹಬ್ಬವಿದೆ..ಕೆಲವರು ನನ್ನ ಹುಟ್ಟು ಹಬ್ಬ ಆಚರಿಸಲು ತಯಾರಿ ತಯಾರಿ ನಡೆಸಿದ್ದಾರೆ ಅನ್ನೋ ಮಾಹಿತಿ ಸಿಕ್ಕಿದೆ.ಆ ದಿನದಂದು ನಾನು ಕಲಬುರಗಿ ಬೆಂಗಳೂರು ಎರಡೂ ಕಡೆ ಲಭ್ಯವಿರುವುದಿಲ್ಲ. ನನ್ನ ಬರ್ತ್ ಡೇ ಆಚರಿಸಬೇಕೆಂದು ಶ್ರಮ ಹಾಕಬೇಡಿ.ಬದಲಾಗಿ ನಿಮ್ಮ ಪರಿಶ್ರಮ ಬಡಜನರ ಹಿತಕ್ಕಾಗಿ ಇರಲಿ. ಹೀಗಂತ ಟ್ವೀಟ್ ಮೂಲಕ ಅಭಿಮಾನಿಗಳಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ..
ಹುಬ್ಬಳ್ಳಿ,: ದೀಪಾವಳಿ ಪ್ರಯುಕ್ತ ಹುಬ್ಬಳ್ಳಿಯಲ್ಲಿ ಸ್ಥಳೀಯ ಕರಕುಶಲ ವಸ್ತುಗಳಲ್ಲಿ ಒಂದಾದ ಮಣ್ಣಿನ ದೀಪದ ಹಣತೆಯನ್ನು ಖರೀದಿಸುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ವೋಕಲ್ ಫಾರ್ ಲೋಕಲ್ ಅಭಿಯಾನಕ್ಕೆ ಬೆಂಬಲ ನೀಡಿದ ಕೇಂದ್ರ ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ದೀಪಗಳ ಹಬ್ಬ ದೀಪಾವಳಿ ಆಚರಿಸಿದ್ದೇನೆ ಎಂದು ಎಕ್ಸ್ ನಲ್ಲಿ ಟ್ವೀಟ್ ಮಾಡುವ ಮೂಲಕ ಸಂತಸ ಹಂಚಿಕೊಂಡಿದ್ದಾರೆ. ನಾವು ಹಬ್ಬ-ಹರಿದಿನಗಳಲ್ಲಿ ಸಂಭ್ರಮಿಸುವಂತೆ ನಮ್ಮವರು ಹಬ್ಬ ಆಚರಿಸುವಂತಾಗಬೇಕು ಎಂಬುದು ಮೋದಿಜೀಯ ಆಶಯ. ಇದನ್ನು ಸಾಕರಗೊಳಿಸುವುದು ನಮ್ಮೆಲ್ಲರ ಕರ್ತವ್ಯ ಮಾತ್ರವಲ್ಲದೆ ನಮ್ಮ ಜವಾಬ್ದಾರಿಯೂ ಹೌದು ಎಂದಿದ್ದು #VocalForLocal ದೀಪಾವಳಿಯ ಪ್ರಯುಕ್ತ ಹುಬ್ಬಳ್ಳಿಯಲ್ಲಿ ಸ್ಥಳೀಯ ಕರಕುಶಲ ವಸ್ತುಗಳಲ್ಲಿ ಒಂದಾದ ಮಣ್ಣಿನ ದೀಪದ ಹಣತೆಯನ್ನು ಖರೀದಿಸುವ ಮೂಲಕ ಪ್ರಧಾನಮಂತ್ರಿ ಶ್ರೀ @narendramodi ಅವರ #VocalForLocal ಅಭಿಯಾನದಲ್ಲಿ ಭಾಗವಹಿಸಿ, ದೀಪಗಳ ಹಬ್ಬ ದೀಪಾವಳಿ ಆಚರಿಸಿದೆನು. ನಾವು ಹಬ್ಬ ಹರಿದಿನಗಳಲ್ಲಿ ಸಂಭ್ರಮಿಸುವಂತೆ ನಮ್ಮವರ ಪ್ರಮುಖ ಹಬ್ಬಗಳಲ್ಲಿ ಒಂದಾದ ದೀಪಾವಳಿಯ ಸಂದರ್ಭದಲ್ಲಿ ನಾವೆಲ್ಲರೂ ಸ್ಥಳೀಯ ಕರಕುಶಲಕರ್ಮಿಗಳಿಂದ…