ದೇವದುರ್ಗ (ರಾಯಚೂರು ಜಿಲ್ಲೆ): ತಾಲ್ಲೂಕಿನ 33 ಗ್ರಾಮ ಪಂಚಾಯಿತಿ ಗಳಲ್ಲಿ ನರೇಗಾ ಕಾಮಗಾರಿಗಳಲ್ಲಿ ನಡೆದ ಅಕ್ರಮ ಕುರಿತು ರಾಜ್ಯ ಸಾಮಾಜಿಕ ಲೆಕ್ಕಪರಿಶೋಧನಾ ಸಮಿತಿ ನೀಡಿದ ವರದಿ ಆಧರಿಸಿ ಇಬ್ಬರು ಅಧಿಕಾರಿಗಳ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿರ್ದೇಶನದ ಮೇರೆಗೆ ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಅಣ್ಣಾರಾವ್ ನೀಡಿದ ದೂರಿನಂತೆ ತಾಲ್ಲೂಕು ಪಂಚಾ ಯಿತಿಯ ಹಿಂದಿನ ಇಒ ಪಂಪಾಪತಿ ಹಿರೇಮಠ, ನಿರ್ಗಮಿತ ನರೇಗಾ ಯೋಜನೆ ಸಹಾಯಕ ನಿರ್ದೇಶಕ ಬಸಣ್ಣ ನಾಯಕ ಹೇಮನೂರು ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 465, 409, 420, 34ರ ಅಡಿ ಪ್ರಕರಣ ದಾಖಲಾಗಿದೆ. ನರೇಗಾ ಯೋಜನೆಯಡಿ 2020–21, 2021–22 ಹಾಗೂ 2022–23ರವರೆಗೆ ನಡೆದ ಕಾಮಗಾರಿ ಅನುಷ್ಠಾನಗೊಂಡ ಅಂದಾಜು ಮೊತ್ತಕ್ಕಿಂತ ಹೆಚ್ಚುವರಿಯಾಗಿ ₹11.64 ಕೋಟಿ ಮತ್ತು ಅನುಷ್ಠಾನಗೊಂಡ ಕಾಮಗಾರಿಗಳ ಕಡತಗಳನ್ನು ನಿರ್ವಹಿಸದೆ ₹32.51 ಕೋಟಿಯನ್ನು ಅಕ್ರಮವಾಗಿ ಪಾವತಿಸಲಾಗಿದೆ. ಈ ಎಲ್ಲ ಪ್ರಕರಣಗಳಲ್ಲಿ ₹102.32 ಕೋಟಿಯನ್ನು ಶ್ರೀ ಮಾರುತೇಶ್ವರ…
Author: AIN Author
ಕೋಲಾರ: ನಮ್ಮನ್ನು ಆಳುವ ಸರಕಾರಗಳು ಸಂವಿಧಾನದ ಆಶಯಗಳನ್ನು ನಾಶ ಮಾಡುವ ಜೊತೆಗೆ ಶೋಷಿತರ ಧಮನೀತರ ರಕ್ಷಣೆಗೆ ಇರುವ ಕಾನೂನುಗಳನ್ನೇ ಬದಲಾವಣೆ ಮಾಡಲು ಹೊರಟಿದ್ದಾರೆ ಇದರ ಬಗ್ಗೆ ಎಚ್ಚರಿಕೆಯಿಂದ ಇರಬೇಕಾಗಿದೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಎನ್.ಸಿ ಮುನಿಯಪ್ಪ ತಿಳಿಸಿದರು ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಭಾನುವಾರ ದಲಿತ ಯುವ ಜಾಗೃತಿ ಸಮಿತಿ ವತಿಯಿಂದ ಸಂವಿಧಾನದ ಸಮರ್ಪಣಾ ದಿನಾಚರಣೆಯ ಅಂಗವಾಗಿ ಜಿಲ್ಲೆಯಲ್ಲಿ ಇತ್ತಿಚೆಗೆ ಆಯ್ಕೆಯಾದ ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷರಿಗೆ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಂವಿಧಾನವನ್ನು ಒಂದು ವರ್ಗವು ವಿರೋಧಿಸಿಕೊಂಡು ಬಂದಿದ್ದಾರೆ ಅದರ ಹೆಸರಿನಲ್ಲಿ ವಿರೋಧಿ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಲೇ ಇದೆ ಶಿಕ್ಷಣ ರಾಜಕೀಯ ಸೇರಿದಂತೆ ಬಹುತೇಕ ಕಡೆಯಲ್ಲಿ ತಾರತಮ್ಯವನ್ನು ಕಾಣಬೇಕಾಗಿದೆ ಅಧಿಕಾರಿಗಳು ಸೇರಿದಂತೆ ಮೀಸಲಾತಿಯಿಂದ ಆಯ್ಕೆಯಾದ ಬಹುತೇಕ ಜನಪ್ರತಿನಿಧಿಗಳು ಇದರ ಬಗ್ಗೆ ಧ್ವನಿ ಎತ್ತದೇ ಇರುವುದೇ ಸಮುದಾಯದಲ್ಲಿ ಇನ್ನೂ ತಾರತಮ್ಯವನ್ನು ಎದುರಿಸಬೇಕಾಗಿದೆ ಇದಕ್ಕೆ ಸರಿಯಾದ ಕಾರಣಗಳನ್ನು ಗುರುತಿಸಿ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದರು. ಸಂವಿಧಾನ ಜಾರಿಗೆ ಬಂದು 75 ವರ್ಷಗಳಾದರೂ ಎಷ್ಟು ಪ್ರಯೋಜನವನ್ನು…
ಹುಬ್ಬಳ್ಳಿ – ಬೆಂಗಳೂರು ನಡುವೆ ಸಂಚರಿಸುತ್ತಿದ್ದ ವಿಶೇಷ ಸೂಪರ್ ಫಾಸ್ಟ್ ರೈಲು ಸೇವೆಯನ್ನು ಮತ್ತೆ ಆರಂಭಿಸಲಾಗಿದೆ. ಹಲವು ದಿನಗಳ ಹಿಂದೆ ಈ ರೈಲನ್ನು ಪ್ರಯಾಣಿಕರ ಕೊರತೆಯಿದೆ ಎಂದು ಹೇಳಿ ರದ್ದು ಮಾಡಲಾಗಿತ್ತು, ಆದರೆ ಇದಕ್ಕೆ ಸಾರ್ವಜನಿಕರಿಂದ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಜನಾಕ್ರೋಶ ಹೆಚ್ಚಾದ ಬೆನ್ನಲ್ಲೇ ಎಚ್ಚೆತ್ತ ರೈಲ್ವೆ ಇಲಾಖೆ ಮತ್ತೆ ಹುಬ್ಬಳ್ಳಿ ಬೆಂಗಳೂರು ನಡುವೆ ವಿಶೇಷ ರೈಲು ಸೇವೆಯನ್ನು ಆರಂಭಿಸಿದೆ. ನವೆಂಬರ್ 30ರಿಂದ ಮತ್ತೆ 07339/40 ಹುಬ್ಬಳ್ಳಿ – ಬೆಂಗಳೂರು ನಡುವೆ ಸೂಪರ್‌ಫಾಸ್ಟ್ ವಿಶೇಷ ರೈಲು ಸಂಚರಿಸಲಿದೆ. ಈ ರೈಲು ಸೇವೆಯನ್ನು ನವೆಂಬರ್ 30ರಿಂದ 2024ರ ಫೆಬ್ರವರಿ 29ರವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿದೆ. ಇದೇ ತಿಂಗಳ ಆರಂಭದಲ್ಲಿ ಈ ಸೇವೆಗಳನ್ನು ಹಠಾತ್ ಹಿಂತೆಗೆದುಕೊಂಡ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ, ರೈಲ್ವೆ ಅಧಿಕಾರಿಗಳು ಪ್ರಯಾಣಿಕರ ಕೊರತೆ ಪ್ರಾಥಮಿಕ ಕಾರಣವೆಂದು ಉಲ್ಲೇಖ ಮಾಡಲಾಗಿದೆ. 07339/40 ದೈನಂದಿನ ವಿಶೇಷ ಸೇವೆಗಳ ಹಠಾತ್ ರದ್ದತಿಯು ಪ್ರಯಾಣಿಕರಿಗೆ ಆಶ್ಚರ್ಯ ಮತ್ತು ಆತಂಕವನ್ನುಂಟು ಮಾಡಿದೆ. ಅನೇಕ…
ದಾವಣಗೆರೆ:- ಬಿಎಸ್‌ವೈ ಬಗ್ಗೆ ಮಾತಾಡಿದ್ರೆ ನಾನು ಸುಮ್ನಿರಲ್ಲ ಎಂದು ಸೋಮಣ್ಣ ವಿರುದ್ಧ ರೇಣುಕಾಚಾರ್ಯ ಕೆಂಡಾಮಂಡಲರಾಗಿದ್ದಾರೆ. ಮಾಜಿ ಸಚಿವ ವಿ ಸೋಮಣ್ಣ ದೆಹಲಿಗೆ ತೆರಳಲಿರುವ ವಿಚಾರ ಸಂಬಂಧ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲಿಗೆ ಬೇಕಾದರೂ ಹೋಗಲಿ. ಅದರೆ ಬಿಎಸ್‌ವೈ ಬಗ್ಗೆ ಮಾತನಾಡಿದ್ರೆ ನಾನು ಸುಮ್ನಿರಲ್ಲ. ಬಿಎಸ್ ವೈ ಕರೆದು ಹೊಡೆದರೂ ಚಿಂತೆಯಿಲ್ಲ. ನಾನು ಹೀಗೆ ಮಾತಾಡುತ್ತೇನೆ ಎಂದರು. ವಿ ಸೋಮಣ್ಣ ಸಿದ್ದಗಂಗಾಮಠಕ್ಕೆ ಹೋಗಿದ್ದ ಶ್ರೀಗಳ ದರ್ಶನಕ್ಕೆ ಅಲ್ಲಿ ರಾಜಕೀಯ ಮಾಡಲಿಕ್ಕೆ ಅಲ್ಲ. ಮಠದಲ್ಲಿ ಬಿಎಸ್‌ವೈ ಮಾತಾಡುವ ಅವಶ್ಯಕತೆ ಏನಿತ್ತು? ವಿ ಸೋಮಣ್ಣ ಸಿದ್ದಗಂಗಾ ಮಠದಲ್ಲಿ ರಾಜಕಾರಣ ಮಾಡಿದ್ದಾರೆ. ವಿನಾಕಾರಣ ಬಿಎಸ್ ವೈ ಬಗ್ಗೆ ಮಾತನಾಡೋದು ಸರಿಯಲ್ಲ. ವಿಧಾನ ಸಭೆ ಸೋಲು ಹೊಡೆತವನ್ನು ವರಿಷ್ಠರು ನೋಡಿದ್ದಾರೆ. ಹೀಗಾಗಿ ವಿಜಯೇಂದ್ರರನ್ನ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನ ಅಧಿಕಾರಕ್ಕೆ ತಂದಿದ್ದೇ ಬಿಎಸ್ ವೈ. ಬಿಎಸ್ ವೈ ರೆಡಿ ಮೇಡ್ ಫುಡ್ ಅಲ್ಲ. ಸೋಮಣ್ಣ ಬಂದಿದ್ದು ಕಾಂಗ್ರೆಸ್‌ನಿಂದ. ಅವರಿಂದ ಬಿಜೆಪಿ ಅಧಿಕಾರಕ್ಕೆ ಬಂದಿಲ್ಲ. ಬದಲಾಗಿ…
ಬಳ್ಳಾರಿ:- ಗಣಿನಾಡು ಬಳ್ಳಾರಿಯಲ್ಲಿ ದಿನೇ ದಿನೇ ಕಳ್ಳರ ಕೈಚಳಕ ಹೆಚ್ಚುತ್ತಿದೆ. ಬಳ್ಳಾರಿ ನಗರದ ಹೃದಯ ಭಾಗದಲ್ಲಿರುವ ಎಚ್.ಆರ್.ಗವಿಯಪ್ಪ ಸರ್ಕಲ್ನಲ್ಲಿ ಕಳ್ಳತನ ನಡೆದಿದೆ. ಬಳ್ಳಾರಿಯ ಮೋತಿ ವೃತ್ತದ ಹತ್ತಿರದ ಮೊಬೈಲ್ ಶಾಪ್’ನಲ್ಲಿ ಕಳ್ಳತನ ನಡೆದಿದ್ದು, ಸುಮಾರು 20 ಲಕ್ಷ ರೂ ಬೆಲೆ ಬಾಳುವ ಮೊಬೈಲ್ ಕಳ್ಳತನ ನಡೆದಿದೆ. ವಿವಿಧ ಕಂಪನಿಯ ಬೆಲೆ ಬಾಳುವ ಮೊಬೈಲ್ ಗಳನ್ನು ಖದೀಮರು ಕಳ್ಳತನ ಮಾಡಿದ್ದಾರೆ. ಇಂದು ಬೆಳಗಿನ ಜಾವ 3 ಗಂಟೆಗೆ ಸುಮಾರಿಗೆ ಕಳ್ಳತನವಾಗಿದ್ದು, ಅಂಗಡಿಯ ಶಟರ್ ಹೊಡೆದು ಕಳ್ಳತನ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ಮಾಡಿದ್ದಾರೆ.
ಬಾಗಲಕೋಟೆ:- ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿಯ ಜಮಖಂಡಿ ಮಿರಜ್ ಹೆದ್ದಾರಿ ರಸ್ತೆ ತಡೆದು ಪ್ರತಿಭಟಿಸಿ ಮತ್ತು ಇಷ್ಟಲಿಂಗ ಪೂಜೆ ಮಾಡುವುದರ ಮುಖಾಂತರ ಟು ಎ ಮೀಸಲಾತಿ ನೀಡಲು ವಿನೂತನವಾಗಿ ಪ್ರತಿಭಟಿಸಿದರು. ಕರ್ನಾಟಕದಲ್ಲಿ ಸುಮಾರು ಮೂರು ವರ್ಷಗಳಿಂದ ಲಿಂಗಾಯತ ಪಂಚಮಸಾಲಿ ಸಮುದಾಯವು ನಿರಂತರ ಹೋರಾಟ ಮಾಡ್ತಾ ಬಂದಿದೆ. ಸರ್ಕಾರ ಕಣ್ಣು ತೆರೆದು ನೋಡ್ತಾ ಇಲ್ಲ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಟು ಎ ಮೀಸಲಾತಿ ನೀಡದಿದ್ದರೆ ರಾಜ್ಯದ ಪ್ರತಿ ಹೆದ್ದಾರಿ ರಸ್ತೆಯನ್ನು ತಡೆದು ಇಷ್ಟಲಿಂಗ ಪೂಜೆ ಮಾಡಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯ ಮುಂದೆ ಮತ್ತು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ಮುಂಭಾಗದ ಹೆದ್ದಾರಿ ರಸ್ತೆಯ ಮೇಲೆ ಇಷ್ಟಲಿಂಗ ಪೂಜೆ ಮಾಡಿ ಪ್ರತಿಭಟಿಸಲಿದ್ದೇವೆ ಸರ್ಕಾರ ಇದನ್ನು ಗಮನದಲ್ಲಿ ಇಟ್ಟುಕೊಂಡು ನಮಗೆ ನ್ಯಾಯ ಕೊಡಿ ಎಂದು ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮಿಗಳು ಕೂಡಲಸಂಗಮ ಹೇಳಿದರು. ಭಾರತ ದೇಶದಲ್ಲಿ ನಿರಂತರವಾಗಿ ಮೂರು ವರ್ಷಗಳ ಕಾಲ ರಸ್ತೆ ಇಳಿದು ಪ್ರತಿಭಟಿಸಿದ…
ಕೆ ಆರ್ ಪುರ:- ಸ್ತನದ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಲು ಹಾಗೂ ಮಹಿಳೆಯರ ಆರೋಗ್ಯ ಕುರಿತಂತೆ ಗಮನ ಸೆಳೆಯಲು 5 ಕೆ,10ಕೆ ಕಿಲೋ ಮೀಟರ್ ದೂರದ ಮೂರನೇ ವರ್ಷದ ‘ವಾಕಥಾನ್ ‘ ಕಾರ್ಯಕ್ರಮವನ್ನು ಟ್ರಸ್ಟ್ ಇನ್ ಆಸ್ಪತ್ರೆ ವತಿಯಿಂದ ಹೊರಮಾವಿನಲ್ಲಿ ಟ್ರಸ್ಟ್ ಇನ್ ರನ್ ಆಯೋಜಿಸುವ ಮೂಲಕ ಅರಿವು ಮೂಡಿಸಲಾಯಿತು. ವಾಕಥಾನ್ ಗೆ ಚಾಲನೆ ನೀಡಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆಯ ಆಯುಕ್ತ ರಂದೀಪ್.ಡಿ ಅವರು ಮಹಿಳೆರಲ್ಲಿ ಇತ್ತೀಚಿನ ವರ್ಷಗಳಲ್ಲಿ ಸ್ತನ ಕ್ಯಾನ್ಸರ್ ಹೆಚ್ಚಾಗಿದೆ, ಇದರ ಬಗ್ಗೆ ಟ್ರಸ್ಟ್ ಇನ್ ಆಸ್ಪತ್ರೆ 2500 ಮ್ಯಾರಥಾನ್ ಸ್ಪರ್ಧಿಗಳು ಭಾಗವಹಿಸಿದ್ದ ಮೂರನೇ ವರ್ಷದ ಟ್ರಸ್ಟ್ ಇನ್ ರನ್ ವಾಕಥಾನ್ ಆಯೋಜಿಸುವ ಮೂಲಕ ಅರಿವು ಮೂಡಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದರು. ಇತ್ತೀಚೆಗೆ ಸ್ತನ ಕ್ಯಾನ್ಸರ್ ಕಾಯಿಲೆ ಎಲ್ಲಾ ವಯಸ್ಸಿನವರಿಗೂ ಕಾಣಿಸಿಕೊಳ್ಳುತ್ತಿದ್ದು, ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದು ಪ್ರಥಮ ಹಂತದಲ್ಲಿರುವಾಗಲೇ ವೈದ್ಯರನ್ನ ಸಂಪರ್ಕಿಸಿ ಸೂಕ್ತವಾದ ಚಿಕಿತ್ಸೆ ತೆಗೆದುಕೊಳ್ಳುಬೇಕು ಎಂದು ಮನವಿ ಮಾಡಿದರು. ಕಾಯಿಲೆಗಳಿಂದ ದೂರವಿರಲು…
ಕೋಲಾರ:- ಸೋಮಣ್ಣ ಎಲ್ಲ ಪಾರ್ಟಿ ನೋಡಿಕೊಂಡು ಬಂದಿದ್ದಾರೆ, ಬಿಜೆಪಿಯಲ್ಲೇ ಇರುತ್ತಾರೆ ಎಂದು ಶ್ರೀರಾಮುಲು ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಎಲ್ಲಾ ರಾಜಕೀಯ ಪಕ್ಷದವರ ಮೇಲೆ ಸಿಬಿಐ ಕೇಸ್ ಗಳಿವೆ. ಹಾಗಂತ ಇಂತಹ ನಿರ್ಧಾರಗಳು ಹಿಂದೆ ನಡೆದಿಲ್ಲ ಎಂದು ಡಿಕೆಶಿ ಮೇಲಿನ ಸಿಬಿಐ ತನಿಖೆ ಆದೇಶ ಹಿಂಪಡೆದ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇಡಿ ಶಿಫಾರಸ್ಸು ಮಾಡಿದಕ್ಕೆ ನಾವು ಸಿಬಿಐಗೆ ವಹಿಸಿದ್ವಿ. ರಾಜಕೀಯ ದ್ವೇಷ ಎಂಬುದೆಲ್ಲ ಸುಳ್ಳು. ಕಾನೂನು ಸಲಹೆ ಪಡೆದು ಇಂತಹ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತೆ. ಇನ್ನೇನು ಚಾರ್ಜ್ ಶೀಟ್ ಆಗುವ ಕ್ಷಣದಲ್ಲಿ ಈ ರೀತಿ ಮೂರ್ಖತನದ ಕೆಲಸ ಮಾಡಿದ್ದಾರೆ. ಇದಕ್ಕೆ ಮುಂದಿನ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ನೀಡುತ್ತಾರೆ ಎಂದರು. ಇತಿಹಾಸದಲ್ಲಿ ಯಾವುದೇ ಸರ್ಕಾರಗಳು ಈ ತರಹದ ನಿರ್ಧಾರ ಮಾಡಿಲ್ಲ. ಕಾಂಗ್ರೆಸ್‌ನ ಈ ನಿರ್ಧಾರದಿಂದ ಕಾನೂನು ಮತ್ತು ರಾಜಕಾರಣಕ್ಕೆ ಸಂಘರ್ಷ ಆಗುವಂತೆ ಮಾಡಿದೆ. ತಪ್ಪು ಮಾಡಿಲ್ಲ ಅನ್ನೋ ವಿಶ್ವಾಸ ಡಿಕೆಶಿ ಗೆ ಇರಬೇಕಾಗಿತ್ತು. ಆದರೆ ಅವರು ತಪ್ಪು ಮಾಡಿದ್ದರಿಂದಲೇ ಇಂಥ ನಿರ್ಧಾರ…
ರಾಮನಗರ: ನಿಖಿಲ್, ವಿಜಯೇಂದ್ರ ಇಬ್ಬರೂ ಸಹೋದರ ಮನೋಭಾವದಲ್ಲಿ ಒಟ್ಟಾಗಿ ಹೋಗ್ತಾರೆ. ಉತ್ತಮ ಬಾಂಧವ್ಯದೊಂದಿಗೆ ಚುನಾವಣೆಯಲ್ಲಿ ತೊಡಗಿಸಿಕೊಳ್ತಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ವಿಜಯೇಂದ್ರ ಭೇಟಿ ಕುರಿತು ಮಾತನಾಡಿದ ಹೆಚ್‌ಡಿಕೆ, ಬಹಳ ದಿನಗಳ ಹಿಂದೆಯೇ ವಿಜಯೇಂದ್ರ ಭೇಟಿ ಮಾಡಬೇಕಿತ್ತು. https://ainlivenews.com/upi-id-with-no-transaction-for-1-year-upi-number-de-activate-reason/ ಹಲವಾರು ಕಾರ್ಯಕ್ರಮಗಳು ಇದ್ದ ಕಾರಣ ಆಗಿರಲಿಲ್ಲ. ಇವತ್ತು ನಮ್ಮ ಭೇಟಿಯ ಉದ್ದೇಶ ರಾಜ್ಯದ ಅಭಿವೃದ್ಧಿ ದೃಷ್ಟಿ. ಮೋದಿ ಮತ್ತೆ ದೇಶದ ಪ್ರಧಾನಮಂತ್ರಿ ಆಗುವ ನಿಟ್ಟಿನಲ್ಲಿ ಕೂತು ಚರ್ಚೆ ಮಾಡಿದ್ದೇವೆ. ಲೋಕಸಭಾ ಚುನಾವಣೆ ಸೀಟು ಹಂಚಿಕೆ ವಿಚಾರ ಬಗ್ಗೆ ಮಾತಾಡಿಲ್ಲ. ಆ ಬಗ್ಗೆ ಕೇಂದ್ರ ನಾಯಕರು ಕೂತು ಚರ್ಚೆ ಮಾಡ್ತಾರೆ ಎಂದು ಹೇಳಿದರು.
ಗದಗ:- ಡಿಸಿಎಂ ಡಿಕೆಶಿಯ ಸಿಬಿಐ ತನಿಖೆ ಪ್ರಕರಣ ಹಿಂಪಡೆದ ವಿಚಾರವಾಗಿ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಗದಗ್ ನಲ್ಲಿ ಮಾತನಾಡಿದ ಅವರು, ಡಿ ಕೆ ಶಿವಕುಮಾರ್ ಸೇಫ್ ಅಂತ ಯಾಕೆ ಹೇಳ್ತೀರಾ..? ಕಾನೂನಿನಲ್ಲಿ ಮಾಡಬಾರದು ಅಂತ ರೂಲ್ಸ್ ಏನಾದ್ರು ಇದೆನಾ !?ರೂಲ್ಸ್ ಇಲ್ಲ ಅಂದ್ರೆ ಯಾಕೇ ನೀವು ಸೇಫ್ ಅಂತೀರಾ. ವಿರೋಧ ಪಕ್ಷದವರಿಗೆ ಅದನ್ನು ಬಿಟ್ಟು ಬೇರೆ ಕೆಲಸ ಇಲ್ಲ ಕಾನೂನು ಸಚಿವರು ಎಲ್ಲವನ್ನೂ ಸವಿಸ್ತಾರವಾಗಿ ಹೇಳಿದ್ದಾರೆ. ಇದರ ಬಗ್ಗೆ ಹೆಚ್ಚಿನ ಚರ್ಚೆ ಮಾಡುವ ಅವಶ್ಯಕತೆ ಇಲ್ಲಾ ಎಂದರು. ಇದೇ ವೇಳೆ ಜಾತಿ ಜನಗಣತಿ ವಿಚಾರವಾಗಿ ಮಾತನಾಡಿ, ನಾನಂತೂ ನೋಡಿಲ್ಲ. ಯಾರು ಕೊಡಬಾರದು ಅಂತ ಹೇಳಿಲ್ಲ. ಇನ್ನೂ ಹೊರಗಡೆ ಬಂದಿಲ್ಲ. ಅದು ಬಂದ ಮೇಲೆ ಒಳ್ಳೆಯ ರೀತಿ ಚರ್ಚೆ ಆಗಬಹುದು. ವಿರೋಧಿಸುವವರ ವೈಯಕ್ತಿಕ ವಿಚಾರಕ್ಕೆ ಬಿಟ್ಟಿದ್ದು, ಕಾಂಗ್ರೆಸ್ ಪಕ್ಷದ ನಿರ್ಧಾರ ಜಾತಿ ಗಣತಿ ಆಗಬೇಕು. ನ್ಯಾಯಬದ್ಧವಾಗಿ ಆಗಲಿ. ಜಾತಿ ಗಣತಿ ಆಗಬೇಕು ಅನ್ನೋದು ನಮ್ಮದು ಮತ್ತು ರಾಹುಲ್ ಗಾಂಧಿಯವರೂ ಕೂಡಾ…