ಬೆಂಗಳೂರು: ಇಂದು ಸಿಲಿಕಾನ್ ಸಿಟಿಯಲ್ಲಿ 2ನೇ ದಿನದ ಕಂಬಳ (Kambala) ನಡೆಯುತ್ತಿದೆ. ಬೆಳಗ್ಗೆ ಸುಮಾರು 10 ಗಂಟೆಗೆ ಆರಂಭವಾಗುವ ಸಭಾ ಕಾರ್ಯಕ್ರಮದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ, ಹಿರಿಯ ರಾಜಕಾರಣಿಗಳು, ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಮತ್ತೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ನವದೆಹಲಿ ಎನ್‌ಸಿಸಿಎಫ್ ಅಧ್ಯಕ್ಷ ವಿಶಾಲ್ ಸಿಂಗ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡಾ ಇಂದು ಮಧ್ಯಾಹ್ನ ಕಂಬಳದಲ್ಲಿ ಭಾಗಿಯಾಗಲಿದ್ದಾರೆ. ಸಾಧಕ ಕುಸ್ತಿಪಟುಗಳಿಗೆ ಕಂಬಳ ಸಮಿತಿಯ ವತಿಯಿಂದ ಸನ್ಮಾನ ನಡೆಯಲಿದ್ದು, ಇಂದು ಸಂಜೆ 4 ಗಂಟೆಗೆ ಕಂಬಳ ವಿಜೇತರಿಗೆ ಬಹುಮಾನ ವಿತರಣೆ ಮತ್ತು ಸಮಾರೋಪ ಸಮಾರಂಭ ನೆರವೇರಲಿದೆ. ಅತ್ತ ವೇದಿಕೆ 2ರಲ್ಲಿ ನಿರಂತರವಾಗಿ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆಯಲಿದೆ. ಕರಂಗೋಲು ನೃತ್ಯ, ಗಂಡುಕಲೆ ಯಕ್ಷಗಾನ, ಆಟಿ ಕಳಂಜ, ಆಕ್ಸಿಜನ್ ಡ್ಯಾನ್ಸ್ ಟೀಮ್ ಮಂಗಳೂರು ಕಾಮಿಡಿ ಕಲಾವಿದರಿಂದ ಪ್ರದರ್ಶನ, ಮಿಮಿಕ್ರಿ, ಮಂಕಾಳಿ ನಲಿಕೆ ಇರಲಿದೆ. ಇಂದು ಸಂಜೆ 7 ರಿಂದ ಸೆಲೆಬ್ರಿಟಿಗಳ ಸಂಗೀತ ಸಂಜೆ…
Author: AIN Author
ಬೆಂಗಳೂರು : ದಕ್ಷಿಣ ಭಾರತದ ಅತಿ ಹೆಚ್ಚು ಜನಸಂದಣಿಯಾಗುವ ಪ್ರಮುಖ ತೀರ್ಥ ಕ್ಷೇತ್ರಗಳಲ್ಲಿ ಶಬರಿಮಲೆಯೂ ಒಂದು. ಇಲ್ಲಿಗೆ ಬರುವ ಯಾತ್ರಾರ್ಥಿಗಳ ಸುರಕ್ಷತೆಯ ಸಲುವಾಗಿ ಇದೀಗ ಅಗ್ನಿಶಾಮಕ ರಕ್ಷಣಾ ಸೇನೆ ಮತ್ತು ನಾಗರಿಕ ರಕ್ಷಣಾ ಸ್ವಯಂಸೇವಕರು ಸಜ್ಜಾಗಿದ್ದಾರೆ. ಪಂಪಾ ನಿಯಂತ್ರಣ ಕೊಠಡಿಗಳಡಿ 14 ಮತ್ತು ನೀಲಕ್ಕಲ್‌ನಿಂದ ಕಾಳಕಟ್ಟಿವರೆಗೆ 25 ಕೇಂದ್ರಗಳನ್ನು ಸಜ್ಜುಗೊಳಿಸಲಾಗಿದ್ದು, ಒಟ್ಟಾರೆ 295 ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಜೊತೆಗೆ ಶಬರಿಮಲೆ ಪರಿಸರದಲ್ಲಿ ಸಂಭವನೀಯ ಅಪಾಯ ತಪ್ಪಿಸಲು ಮಾರ್ಗಸೂಚಿಗಳನ್ನು ಸಹ ಬಿಡುಗಡೆಗೊಳಿಸಲಾಗಿದೆ. ಸನ್ನಿಧಾನಂ-ಪಂಪಾ ನಿಯಂತ್ರಣ ಕೊಠಡಿಗಳಡಿ 14 ಅಗ್ನಿಶಾಮಕ ಕೇಂದ್ರ ಮತ್ತು ನೀಲಕ್ಕಲ್‌ನಿಂದ ಕಾಳಕಟ್ಟಿವರೆಗೆ 25 ಅಗ್ನಿಶಾಮಕ ಕೇಂದ್ರಗಳನ್ನು ಸಜ್ಜುಗೊಳಿಸಲಾಗಿದೆ. ಈ ಎಲ್ಲ ಮಅಗ್ನಿಶಾಮಕ ಕೇಂದ್ರಗಳಲ್ಲಿ ಏಕಕಾಲದಲ್ಲಿ 295 ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಮಾಹಿತಿ ನೀಡಿದ್ದಾರೆ. ಶಬರಿಮಲೆ ಪರಿಸರದಲ್ಲಿ ಸಂಭವನೀಯ ಅಪಾಯ ತಪ್ಪಿಸಲು ಅಗ್ನಿಶಾಮಕ ದಳ ಹೊಸ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ಅಯ್ಯಪ್ಪ ಭಕ್ತರಿಗೆ ಮಾರ್ಗಸೂಚಿ ಭಕ್ತಾದಿಗಳು ಅಪರಿಚಿತ ಜಲಮೂಲಗಳಲ್ಲಿ ಸ್ನಾನ ಮಾಡುವಂತಿಲ್ಲ…
ತೆಲುಗು ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದ ಸೂಪರ್ ಹಿಟ್ ಸಿನಿಮಾ ‘ಗೂಢಚಾರಿ’ (Goodchari). ಅಡಿವಿ ಶೇಷ್ ನಟನೆಯಲ್ಲಿ ಮೂಡಿ ಬಂದ ಆಕ್ಷನ್ ಅಂಡ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಗಳಿಕೆ ಕಂಡಿತ್ತು. ಈ ಚಿತ್ರದ ಸೀಕ್ವೆಲ್ ಬರ್ತಿರೋದು ಗೊತ್ತೇ ಇದೆ. ಈಗಾಗಲೇ ರಿಲೀಸ್ ಆಗಿದ್ದ ‘ಗೂಢಚಾರಿ 2’ ಫಸ್ಟ್ ಲುಕ್ ಬರೀ ಸದ್ದು ಮಾಡಿತ್ತು. ಗೂಢಚಾರಿ-2 ಸಿನಿಮಾಗೆ ನಾಯಕಿ ಸಿಕ್ಕಿದ್ದಾರೆ. ಪ್ರತಿಭಾನ್ವಿತ ನಟಿ ಬನಿತಾ ಸಂಧು ಶೇಶ್ (Banita Sandhu), ಅಡಿವಿ ಶೇಷ್ (Advi Shesh)ಗೆ ಜೋಡಿಯಾಗಿ ನಟಿಸುತ್ತಿದ್ದಾಳೆ. ಅಕ್ಟೋಬರ್, ಸರ್ದಾರ್ ಉದಾಮ್, ಆದಿತ್ಯ ವರ್ಮಾ ಸೇರಿದಂತೆ ಹಲವು ಹಿಂದಿ ಹಾಗೂ ತಮಿಳು ಚಿತ್ರಗಳಲ್ಲಿ ನಟಿಸಿದ್ದು, ಇದೇ ಮೊದಲ ಬಾರಿಗೆ ಪ್ಯಾನ್ ಇಂಡಿಯಾ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ಬಗ್ಗೆ ಸಂತಸ ಹಂಚಿಕೊಂಡಿರುವ ಬನಿತಾ, ಇದು ನನ್ನ ಮೊದಲ ಪ್ಯಾನ್ ಇಂಡಿಯಾ ಸಿನಿಮಾ. ವಿಷನರಿ ತಂಡದ ಜೊತೆ ಕೈ ಜೋಡಿಸಿರುವುದಕ್ಕೆ ಉತ್ಸುಕಳಾಗಿದ್ದೇನೆ. ನಾನು…
ಬೆಂಗಳೂರಿಗರು, ಕರಾವಳಿ ಜನರು ಕಾತುರದಿಂದ ಕಾಯ್ತಿದ್ದ ಆ ಕ್ಷಣ ಕೊನೆಗೂ ನೆನಸಾಗಿದೆ. ತುಳುನಾಡಿನ ಕಂಬಳ ಕಲೆಯನ್ನ ಕಣ್ತುಂಬಿಕೊಳ್ಳಲು ಕಾದಿದ್ದ ಜನರಿಗೆ ವೀಕೆಂಡ್ ನಲ್ಲಿ ಕಂಬಳದ ಅಖಾಡ ಸಖತ್ ಮನರಂಜನೆ ನೀಡಿದೆ. ಇತಿಹಾಸದಲ್ಲಿ ಪ್ರಥಮಬಾರಿಗೆ ಬೆಂಗಳೂರಿನಲ್ಲಿ ನಡೆಯುತ್ತಿರೋ ಕಂಬಳದ ಮೊದಲ ದಿನದ ಝಲಕ್ ಹೇಗಿತ್ತು ಅನ್ನೋದರ ಕಂಪ್ಲೀಟ್ ಡೀಟೇಲ್ ಇಲ್ಲಿದೆ ಕಂಬಳ ಕಂಬಳ… ಬೆಂಗಳೂರು ಕಂಬಳ ನಮ್ಮ ಕಂಬಳ.. ಇದು ಇವತ್ತು ಬೆಂಗಳೂರು ಅರಮನೆ ಮೈದಾನದಲ್ಲಿ ಕೇಳಿಬರ್ತಿದ್ದ ಕೂಗು. ಒಂದೆಡೆ ಸಿಂಗಾರ ಮಾಡಿಕೊಂಡ ಕೋಣಗಳು ಕರೆಯಲ್ಲಿ ಶರವೇಗದಲ್ಲಿ ಓಡುತ್ತಿದ್ರೆ,ಮತ್ತೊಂದೆಡೆ ಓಟಗಾರರನ್ನ ಹುರಿದುಂಬಿಸ್ತಿದ್ದ ಜನರಿಂದ ಅರಮನೆ ಮೈದಾನದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು. ಬೆಳಗ್ಗೆ 10.30ಕ್ಕೆ ಕಂಬಳದ ಕರೆಗೆ ಪೂಜೆ ಸಲ್ಲಿಸಿ ದೀಪ ಬೆಳಗುವ ಮೂಲಕ ಅಶ್ವಿನಿ ಪುನೀತ್ ರಾಜ್ ಕುಮಾರ್, ಬಿ.ಎಸ್.ಯಡಿಯೂರಪ್ಪ ಸೇರಿ ಹಲವರು ಬೆಂಗಳೂರು ಕಂಬಳಕ್ಕೆ ಚಾಲನೆ ನೀಡಿದ್ರು. ಕಂಬಳಕ್ಕೆ ಚಾಲನೆ ಸಿಗ್ತಿದ್ದಂತೆ ಅಖಾಡಕ್ಕಿಳಿದ ಕೋಣಗಳು ಕರೆಯಲ್ಲಿ ನೀರು ಚಿಮ್ಮಿಸುತ್ತ ನೆರೆದಿದ್ದವರ ಹಾರ್ಟ್ ಬೀಟ್ ಜೋರು ಮಾಡಿತ್ತು. ಕಂಬಳಕ್ಕೆ ಚಾಲನೆ ನೀಡಿ ಮಾತನಾಡಿದ…
ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಡಿ.ಸತ್ಯ ಪ್ರಕಾಶ್ ಚಿತ್ರ ಸೆಟ್ಟೇರಿತು ಎಂದರೆ ಏನಾದರೊಂದಷ್ಟು ವಿಶೇಷತೆಗಳನ್ನು ಹೊಂದಿರುತ್ತದೆ ಎಂದು ಪ್ರೇಕ್ಷಕರು ಮತ್ತು ಚಿತ್ರೋದ್ಯಮದ ಮಂದಿ ಎದುರು ನೋಡುತ್ತಾರೆ. ಅದನ್ನು ಅಷ್ಟೇ ಜತನದಿಂದ ಕಾಪಾಡಿಕೊಂಡು ಬಂದಿದ್ದಾರೆ ನಿರ್ದೇಶಕ ಸತ್ಯ. ಬಹಳ ದಿನಗಳ ನಂತರ ಈಗ ಅಳೆದು ತೂಗಿ ಅತ್ಯಾಪ್ತ ಕಥೆ ಮಾಡಿಕೊಂಡು ಅದಕ್ಕೆ “ಎಕ್ಸ್ ಅಂಡ್ ವೈ” (X and Y) ಎಂದು ಶೀರ್ಷಿಕೆ ಇಟ್ಟುಕೊಂಡು ಅಖಾಡಕ್ಕೆ ಇಳಿದಿದ್ದಾರೆ. ತಮ್ಮ ಹಿಂದಿನ ಮೂರು ಚಿತ್ರಗಳಲ್ಲಿ ಮೂಡಿಸಿದ ವಿಶೇಷತೆಗಳಂತೆ ಇಲ್ಲೂ ಚಿತ್ರದ ಟೈಟಲ್, ಆರಿಸಿಕೊಂಡ ಕಥೆ, ಲೊಕೇಶನ್ಸ್, ಕಲಾವಿದರ ಆಯ್ಕೆಯಲ್ಲದೆ ತಾವೇ ಮುಖ್ಯ ಪಾತ್ರಧಾರಿಯಾಗಿ ನಟನೆಗೆ ಇಳಿದಿದ್ದಾರೆ. ಇದೇ ನವೆಂಬರ್ 24ರ ಬೆಳಗಿನ ಜಾವ ಬ್ರಾಹ್ಮಿ ಮುಹೂರ್ತದಲ್ಲಿ ಜಯನಗರದ ತಮ್ಮದೇ ಕಚೇರಿಯಲ್ಲಿ ಸ್ನೇಹಿತರು, ಕಲಾವಿದರು, ಹಾಗೂ ತಮ್ಮ ತಂಡದ ತಂತ್ರಜ್ಞರನ್ನೊಳಗೂಡಿ ಸತ್ಯ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಮುಹೂರ್ತ ಮುಗಿಸಿಕೊಂಡಿದ್ದಾರೆ. ನಿರ್ಮಾಣ ಹಾಗೂ ನಿರ್ದೇಶನದ ಜೊತೆಗೆ ಸತ್ಯಪ್ರಕಾಶ್ (Sathyaprakash) ಹಾಗೂ ಅಥರ್ವ ಪ್ರಕಾಶ್ (Atharva…
ಕೀವ್: ಇದ್ದಕ್ಕಿದ್ದಂತೆ ಅಂಡರ್‍ಗ್ರೌಂಡ್ ನೀರಿನ ಪೈಪ್ ಸ್ಫೋಟಗೊಂಡು ಕಾರುಗಳ ಗಾಜು ಪುಡಿಪುಡಿಯಾಗಿ ಆಸ್ತಿಪಾಸ್ತಿಗೆ ನಷ್ಟವಾದ ಘಟನೆ ಸೋಮವಾರದಂದು ಉಕ್ರೇನ್‍ನಲ್ಲಿ ನಡೆದಿದ್ದು, ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ಉಕ್ರೇನ್ ರಾಜಧಾನಿ ಕೀವ್‍ನಲ್ಲಿ ಈ ಘಟನೆ ನಡೆದಿದ್ದು, ಇದರ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಭೂಮಿ ನಡುಗುವಂತೆ ಕಾಣಿಸಿದ್ದು ಇದ್ದಕ್ಕಿದ್ದಂತೆ ನೀರಿನ ಪೈಪ್ ಸ್ಫೋಟಗೊಂಡು ರಸ್ತೆ ತುಂಬಾ ಕೆಸರು ಹರಿದಿದೆ. ಸ್ಫೋಟದ ರಭಸಕ್ಕೆ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರುಗಳ ಗಾಜು ಹಾಗೂ ಅಕ್ಕಪಕ್ಕದ ಮನೆಗಳ ಗಾಜುಗಳು ಪುಡಿಪುಡಿಯಾಗಿದೆ. ವಿಡಿಯೋದ ಆರಂಭದಲ್ಲಿ ರಸ್ತೆ ಪಕ್ಕದಲ್ಲೇ ಮಹಿಳೆಯೊಬ್ಬರು ನಡೆದುಕೊಂಡು ಹೋಗುತ್ತಿರೋದನ್ನು ಕಾಣಬಹುದಾಗಿದ್ದು, ಸ್ಫೋಟದ ನಂತರ ಸಿಸಿಟಿವಿ ಕ್ಯಾಮೆರಾ ಕಡೆಗೆ ಮಣ್ಣು ಸಿಡಿದಿದ್ದರಿಂದ ಆಕೆಗೆ ಏನಾಯಿತು ಎಂಬ ಬಗ್ಗೆ ಸ್ಪಷ್ಟವಾಗಿ ಗೊತ್ತಾಗಿಲ್ಲ. ಮತ್ತೊಂದು ಸಿಸಿಟಿವಿ ವಿಡಿಯೋದಲ್ಲಿ ಅಲ್ಲಿನ ನಿವಾಸಿಯೊಬ್ಬರು ಗಾಬರಿಯಿಂದ ಹೊರಬಂದು ನೋಡೋದನ್ನ ಕಾಣಬಹುದು.
ಬೆಂಗಳೂರು: ಸಮಾಜಮುಖಿ ಕೆಲಸಗಳ ಮೂಲಕ ಜನರ ಹೃದಯಕ್ಕೆ ಇನ್ನೂ ಹತ್ತಿರವಾಗುತ್ತಿರುವ ಹಿರಿಯ ನಟಿ ಲೀಲಾವತಿ ಅವರ ಕನಸಿನ ಆಸ್ಪತ್ರೆ ಇಂದು ಉದ್ಘಾಟನೆ ಆಗಲಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K.Sivakumar) ಅವರು ಪಶು ಆಸ್ಪತ್ರೆಯನ್ನು (Hospital) ಉದ್ಘಾಟಿಸಲಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ಲೀಲಾವತಿ ಅವರ ಆಸೆ ಇದಾಗಿದ್ದು, ಸರ್ಕಾರ ಅದಕ್ಕೆ ಸಮ್ಮತಿ ನೀಡಿದೆ. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಬಳಿ ಸುಸಜ್ಜಿತ ಪಶು ಆಸ್ಪತ್ರೆಯನ್ನು ತಮ್ಮ ಸ್ವಂತ ಖರ್ಚಿನಲ್ಲಿ ನಿರ್ಮಾಣ ಮಾಡಿರುವ ಲೀಲಾವತಿ ಮತ್ತು ವಿನೋದ್ ರಾಜ್, ಹಿಂದೆ ಜನರಿಗಾಗಿ ಮತ್ತೊಂದು ಆಸ್ಪತ್ರೆಯನ್ನೂ ನಿರ್ಮಿಸಿದ್ದರು. ಈ ಆಸ್ಪತ್ರೆಯನ್ನೂ ಸರಕಾರವೇ ನೋಡಿಕೊಳ್ಳುತ್ತಿದೆ. ಬೆಂಗಳೂರಿನ ಥಣಿಸಂದ್ರದ ಪಶು ಆಸ್ಪತ್ರೆಯನ್ನು ಸರಕಾರ ಸೋಲದೇವನಹಳ್ಳಿಗೆ ಶಿಪ್ಟ್ ಮಾಡಿ ಆದೇಶ ಪ್ರಕಟಿಸಿದೆ.
ಧಾರವಾಡ: ಪಾರ್ಕಿಂಗ್ ಮಾಡಿದ ಕಾರಿನ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದಿರುವ ಘಟನೆ ಧಾರವಾಡದ ಆಜಾದ್ ಪಾರ್ಕ್ ಬಳಿ ಸಂಭವಿಸಿದೆ. ಆಜಾದ್ ಪಾರ್ಕ್ ಮುಂಭಾಗದಲ್ಲಿ ಈ ಬೃಹತ್ ಮರವಿತ್ತು. ಮರದ ಬುಡ ಸಂಪೂರ್ಣ ಕೊಳೆತದ್ದರಿಂದ ಏಕಾಏಕಿ ಆ ಮರ ನೆಲಕಚ್ಚಿದೆ. ಮರದ ಕೆಳಗಡೆ ಪಾರ್ಕ್ ಮಾಡಲಾಗಿದ್ದ ಕಾರಿನ ಮೇಲೆಯೇ ಈ ಮರ ಉರುಳಿ ಬಿದ್ದಿದೆ. https://ainlivenews.com/young-woman-cheated-in-the-name-of-work-from-home-5-lakhs-from-the-account/ ಅದೃಷ್ಟವಶಾತ್ ಕಾರಿನಲ್ಲಿ ಯಾರೂ ಇಲ್ಲದ್ದರಿಂದ ಅನಾಹುತವೊಂದು ತಪ್ಪಿದಂತಾಗಿದೆ. ಈ ಮರ ಉರುಳಿ ಬಿದ್ದಿದ್ದರಿಂದ ಆ ರಸ್ತೆ ಕೆಲಕಾಲ ಬಂದ್ ಆಗಿತ್ತು. ಹೆಸ್ಕಾಂನವರು ಹಾಗೂ ಪಾಲಿಕೆಯವರು ಸ್ಥಳಕ್ಕೆ ಬಂದು ಮರ ತೆರವುಗೊಳಿಸುವ ಕೆಲಸ ಮಾಡಿದರು.
ಬೆಂಗಳೂರು : ಇಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಎರಡನೇ ಟಿ-20 ಪಂದ್ಯ ತಿರುವನಂತಪುರಂನಲ್ಲಿ ನಡೆಯಲಿದ್ದು, ತಂಡದಲ್ಲಿ (ಪ್ಲೇಯಿಂಗ್ 11) ಹಲವು ಬದಲಾವಣೆ ಮಾಡುವ ಸಾಧ್ಯತೆಯಿದೆ. 5 ಪಂದ್ಯಗಳ ಸರಣಿಯಲ್ಲಿ ಭಾರತ ಮೊದಲ ಪಂದ್ಯ ಗೆದ್ದು 1-0 ಮುನ್ನಡೆ ಕಾಯ್ದುಕೊಂಡಿದೆ. ಸೂರ್ಯಕುಮಾರ್ ಯಾದವ್ ಪಡೆ ಇದೀಗ, ಎರಡನೇ ಪಂದ್ಯವನ್ನು ಗೆದ್ದು ಸರಣಿಯಲ್ಲಿ 2-0 ಮುನ್ನಡೆ ಸಾಧಿಸುವ ತವಕದಲ್ಲಿದೆ. ವಿಶಾಖಪಟ್ಟಣಂನಲ್ಲಿ ನಡೆದ ಮೊದಲ ಟಿ-20 ಪಂದ್ಯದಲ್ಲಿ ಬೌಲರ್‌ಗಳು ದುಬಾರಿಯಾಗಿದ್ದರು. ಮುಖೇಶ್ ಕುಮಾರ್ ಬಿಟ್ಟು ಉಳಿದ ಯಾವ ಬೌಲರ್‌ಗಳು ಉತ್ತಮ ಪ್ರದರ್ಶನ ನೀಡಲಿಲ್ಲ. ಹೀಗಾಗಿ, ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಮಾಡುವ ಸಾಧ್ಯತೆಯಿದೆ. ಭಾರತ ಸಂಭಾವ್ಯ ತಂಡ ಋತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್(ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್(ನಾಯಕ), ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್/ಅವೇಶ್ ಖಾನ್, ಅರ್ಶದೀಪ್ ಸಿಂಗ್, ಮುಖೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ. ಆಸ್ಟ್ರೇಲಿಯಾ ಸಂಭಾವ್ಯ ತಂಡ ಟ್ರಾವಿಸ್ ಹೆಡ್/ಮ್ಯಾಥ್ಯೂ ಶಾರ್ಟ್, ಸ್ಟೀವ್ ಸ್ಮಿತ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್,…
ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಕಡೆಗಳಲ್ಲಿ ಡಿಸೆಂಬರ್ 2ರವರೆಗೂ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಉಡುಪಿ,ಮಂಗಳೂರು ವಿಮಾನನಿಲ್ದಾಣ, ಮಂಗಳೂರು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ದೇವನಹಳ್ಳಿ, ಮಧುಗಿರಿಯಲ್ಲಿ ಮಳೆಯಾಗಿದೆ. ದಾವಣಗೆರೆ ಹಾಗೂ ವಿಜಯಪುರದಲ್ಲಿ 19.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶನಿವಾರ ಕೆಲವೆಡೆ ಮಳೆಯಾಗಿದೆ, ಇಂದು ಕೂಡ ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಲಿದ್ದು, ಮಳೆಯಾಗುವ ಸಾಧ್ಯತೆ ಇದೆ.