ರಿಪ್ಪನ್ ಪೇಟೆ :- ಮನೆಯ ಪಕ್ಕದ ಖಾಲಿ ಜಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ವೇಳೆ ರಿಪ್ಪನ್ ಪೇಟೆ ಪೊಲೀಸರು ದಾಳಿ ಮಾಡಿದ್ದಾರೆ. ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೂರು ಗ್ರಾಮದಲ್ಲಿ ಮನೆಯ ಪಕ್ಕದ ಖಾಲಿ ಜಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ವೇಳೆ ಪೊಲೀಸರು ದಾಳಿ ನಡೆಸಿ, ಅಕ್ರಮ ಮದ್ಯವನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಬಾಳೂರು ಗ್ರಾಮದ ಗಿರೀಶ್ ಕುಮಾರ್ ಎಂಬುವವರ ಮನೆಯ ಪಕ್ಕದ ಖಾಲಿ ಜಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ, ಆರೋಪಿ ಗಿರೀಶ್ ಕುಮಾರ್ ಎಂಬಾತನನ್ನು ವಶಕ್ಕೆ ಪಡೆದು, ಮದ್ಯ ತುಂಬಿದ 10 ಟೆಟ್ರಾ ಪ್ಯಾಕ್‌ಗಳನ್ನು ವಶ ಪಡಿಸಿಕೊಂಡಿದ್ದಾರೆ. ದಾಳಿಯಲ್ಲಿ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್.ಪಿ. ನೇತೃತ್ವದಲ್ಲಿ ಸಿಬ್ಬಂದಿಗಳಾದ ಉಮೇಶ್, ಶಿವಕುಮಾರ್, ಸಂತೋಷ್ ಮತ್ತು ಮಧುಸೂಧನ್ ಇದ್ದರು.
Author: AIN Author
ಬೆಂಗಳೂರು:- CM ಸಿದ್ದುಗೆ ಸಾಲದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ದಿವಾಳಿ ಮಾಡಿದ್ದಾರೆ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಮ್ಮ ಹಿಂದಿನ ಐದು ವರ್ಷಗಳ ಅವಧಿಯಲ್ಲಿ 2.45 ಲಕ್ಷ ಕೋಟಿ ರು. ಸಾಲ ಮಾಡಿದ್ದರು. ಸಾಲದ ಬಗ್ಗೆ ಮಾತನಾಡಲು ಇವರಿಗೆ ಯಾವ ನೈತಿಕತೆ ಇದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ನನ್ನ 20 ತಿಂಗಳ ಅವಧಿಯಲ್ಲಿ 3,500 ಕೋಟಿ ರು. ಸಾಲ ಮಾಡಲಾಗಿತ್ತು. ಹಿಂದೆ 5 ವರ್ಷ ಸಿಎಂ ಆಗಿದ್ದ ಸಿದ್ದರಾಮಯ್ಯ 2,45,000 ಕೋಟಿ ರು. ಸಾಲ ಮಾಡಿದ್ದರು. ಈಗ 85,815 ಕೋಟಿ ರು. ಸಾಲ ಮಾಡಲು ಹೊರಟಿದ್ದಾರೆ. ಹಾಲಿ ರಾಜ್ಯದ ಸಾಲ ಪ್ರಮಾಣ 5,71,600 ಕೋಟಿ ರು. ಇದೆ. ಪ್ರತಿ ವರ್ಷ 56,000 ಕೋಟಿ ರು. ಬಡ್ಡಿ ಕಟ್ಟಬೇಕು ಎಂದು ಸಿಎಂ ಹೇಳಿದ್ದಾರೆ. ಸಾಲದ ಬಗ್ಗೆ ಮಾತನಾಡಲು…
ಲಂಡನ್: ಬ್ರಿಟನ್ ರಾಜಕೀಯದಲ್ಲಿ ಮಹತ್ತರ ಬದಲಾವಣೆಯಾಗುತ್ತಿದ್ದು, ಭಾರತೀಯ ಮೂಲದ ಪ್ರಧಾನಿ ರಿಷಿ ಸುನಕ್ ತಮ್ಮ ಸಂಪುಟದಲ್ಲಿದ್ದ ಭಾರತೀಯ ಮೂಲದವರೇ ಆದ ಸುಯೆಲ್ಲಾ ಬ್ರಾವರ್‌ಮನ್ (Suella Braverman) ಅವರನ್ನು ಸಚಿವ ಸ್ಥಾನದಿಂದ ತೆಗೆದು ಹಾಕಿದ್ದಾರೆ. ಹಾಗೆಯೇ ಬ್ರಿಟನ್ ಮಾಜಿ ಪ್ರಧಾನಿಯಾಗಿದ್ದ ಡೇವಿಡ್ ಕ್ಯಾಮರೂನ್ ಅವರನ್ನು ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ. ಪ್ಯಾಲೇಸ್ತೀನ್ ಪರವಾದ ಮೆರವಣಿಗೆಯನ್ನು ಪೊಲೀಸರು ನಿರ್ವಹಿಸಿದ ರೀತಿಯನ್ನು ಸುಯೆಲ್ಲಾ ಬ್ರಾವರ್‌ಮನ್ ಟೀಕಿಸಿದ ನಂತರ ಈ ಬೆಳವಣಿಗೆ ನಡೆದಿದೆ. ಬ್ರಿಟನ್‌ನಲ್ಲಿ ಕಳೆದ ವಾರ ಪ್ಯಾಲೇಸ್ತೀನ್ ಪರ ಪ್ರತಿಭಟನೆ ನಡೆದಿತ್ತು. ಈ ಮೆರವಣಿಗೆಯನ್ನು ಪೊಲೀಸರು ನಿರ್ವಹಿಸಿದ್ದು ಸರಿಯಾಗಿಲ್ಲ ಎಂದು ಟೀಕಿಸಿ ಸುಯೆಲ್ಲಾ ಲೇಖನವೊಂದನ್ನು ಪ್ರಕಟಿಸಿದ್ದರು. https://ainlivenews.com/b-y-vijayendra-met-former-prime-minister-hd-deve-gowda/ ಈ ಮೂಲಕ ಅವರು ಉದ್ವಿಗ್ನತೆ ಹೆಚ್ಚಿಸಿದ್ದಾರೆ. ಬಲಪಂಥೀಯರನ್ನು ಲಂಡನ್‌ನಲ್ಲಿ ಬೀದಿಗಿಳಿಸಲು ಪ್ರೋತ್ಸಾಹಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅವರನ್ನು ವಜಾ ಮಾಡುವಂತೆ ಪ್ರಧಾನಿ ರಿಷಿ ಸುನಕ್ ಮೇಲೆ ಒತ್ತಡ ಕೇಳಿ ಬಂದಿತ್ತು. ಇದಾದ ನಂತರ ಈಗ ಸುನಕ್ ಅವರ ಸಂಪುಟದಿಂದ ಸುಯೆಲ್ಲಾ ಅವರಿಗೆ ಕೊಕ್ ನೀಡಲಾಗಿದೆ.…
ಈ ಬಾರಿ ವಿಶ್ವಕಪ್ ಪಂದ್ಯಗಳಲ್ಲಿ ಭಾರತ ಅದ್ಭುತ ಪ್ರದರ್ಶನ ನೀಡಿ, ಯಾವುದೇ ಪಂದ್ಯದಲ್ಲೂ ಸೋಲದೆ ಬಲಿಷ್ಟ ತಂಡವಾಗಿ ಕಾಣಿಸುತ್ತಿದೆ. ಆದರೆ ಮುಂದಿನ ಹಾದಿ ಖಂಡಿತ ಸುಗಮವಲ್ಲ, ಸುಲಲಿತವೂ ಅಲ್ಲ. ಇದು ಸೆಮಿಫೈನಲ್ ಪ್ರವೇಶಿಸಿದ ನಾಲ್ಕೂ ತಂಡಗಳಿಗೆ ಅನ್ವಯಿಸುವ ಮಾತು. ಸತತ 9 ಪಂದ್ಯಗಳನ್ನು ಗೆದ್ದರೇ ನಂತೆ, ಮುಂದಿನೆರಡೂ ಪಂದ್ಯಗಳನ್ನು ವಶಪಡಿಸಿಕೊಳ್ಳುವುದು ಈ 9 ವಿಜಯಗಳಿಗಿಂತ ಕಠಿನ ಎಂಬ ಅರಿವು ಖಂಡಿತವಾಗಿಯೂ ಭಾರತಕ್ಕಿದೆ. ಲೀಗ್‌ನಲ್ಲಿ ಸೋತರೆ ಚೇತರಿಕೆಗೆ ಮಾರ್ಗವೊಂದು ತೆರೆದಿರುತ್ತಿತ್ತು. ಆದರ ನಾಕೌಟ್ ಹಾಗಲ್ಲ, ಇಲ್ಲಿ ಒಂದು ಹೆಜ್ಜೆ ಎಡವಿದರೂ “ಕಪ್’ ಕನಸು ಛಿದ್ರಗೊಳ್ಳುತ್ತದೆ. ಹೀಗಾಗದಿರಲಿ ಎಂಬ ಕೋಟ್ಯಂತರ ಮಂದಿಯ ಹಾರೈಕೆಯೊಂದಿಗೆ ಭಾರತ ತಂಡ ಬುಧವಾರ ಪ್ರಬಲ ನ್ಯೂಜಿಲ್ಯಾಂಡ್ ವಿರುದ್ಧ ಮುಂಬಯಿಯ “ವಾಂಖೇಡೆ ಸ್ಟೇಡಿಯಂ’ನಲ್ಲಿ ಸೆಮಿಫೈನಲ್ ಸೆಣ ಸಾಟಕ್ಕೆ ಇಳಿಯಲಿದೆ. ಇದು ಭಾರತ-ನ್ಯೂಜಿಲ್ಯಾಂಡ್ ನಡುವಿನ ಸತತ 2ನೇ ವಿಶ್ವಕಪ್ ಸೆಮಿಫೈನಲ್. ನ್ಯೂಜಿಲ್ಯಾಂಡಿಗೆ ಸತತ 5ನೇ ಉಪಾಂತ್ಯ. 2019ರ ಮ್ಯಾಂಚೆಸ್ಟರ್ ಮೇಲಾಟದಲ್ಲಿ ಕಿವೀಸ್ ಪಡೆ ಕೊಹ್ಲಿ ಬಳಗವನ್ನು 18 ರನ್ನುಗಳಿಂದ ಕೆಡವಿ ಕೂಟದಿಂದ ಹೊರದಬ್ಬಿತ್ತು.…
ಬೆಂಗಳೂರು:- ದೀಪಾವಳಿ ಸಂದರ್ಭದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಪಟಾಕಿ ಮಾರಾಟದ ಮೇಲೆ ಹದ್ದಿನ ಕಣ್ಣಿಡಲು ಸಹಾಯಕ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿದೆ. ಸೋಮವಾರವಷ್ಟೇ ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ ಮಾಹಿತಿ ನೀಡಿದ್ದಾರೆ. ರಚನೆಯಾದ ಈ ವಿಶೇಷ ತಂಡಗಳಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಇದ್ದಾರೆ ಎಂದು ತಿಳಿಸಿದರು. ಈ ವಿಶೇಷ ತಂಡಗಳ ಸದಸ್ಯರು ಬೆಂಗಳೂರಿನಲ್ಲಿಯೇ ಬೀಡು ಬಿಟ್ಟಿದ್ದಾರೆ. ವಾಯು ಮಾಲಿನ್ಯವನ್ನು ಮಾಡುವವರ ವಿರುದ್ಧ ಹಾಗೂ ನಿಷೇಧಿತ ಪಟಾಕಿ ಮಾರಾಟ ಮಾಡಿದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದರು. ಈಗಾಗಲೇ ರಾಜ್ಯ ಸರ್ಕಾರ ಹಸಿರು ಪಟಾಕಿಗಳನ್ನು ಸಾರ್ವಜನಿಕರಿಗೆ ಅವಕಾಶ ನೀಡಿದೆ. ಹೀಗಿದ್ದರೂ ಸಹಿತ ದುರದೃಷ್ಟವಶಾತ್, ತಮಿಳುನಾಡಿನ ಹೊಸೂರಿನಿಂದ ಹಲವಾರು ಜನರು ಮಾಲಿನ್ಯಕಾರಕ ಪಟಾಕಿಗಳನ್ನು ತಂದು ಹೊಡೆಯುತ್ತಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು. ಇತ್ತೀಚೆಗೆ ನಗರದ ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿ ಒಟ್ಟು 17 ಮಂದಿ ಮೃತಪಟ್ಟಿದ್ದರು. ಈ ಹಿನ್ನಲೆಯಲ್ಲಿ…
ಈ ಪ್ರಪಂಚದಲ್ಲಿನ ಯುವ ಪೀಳಿಗೆಗಳು ಮೊಬೈಲ್ ಫೋನ್ (Mobile Phone) ಅನ್ನು ಹೆಚ್ಚಾಗಿ ಬಳಸುತ್ತಾರೆ. ಈಗಿನ ಜನರಿಗೆ ಕೈಯಲ್ಲಿ ಯಾವಾಗಲು ಮೊಬೈಲ್ ಫೋನ್ ಇಟ್ಟುಕೊಳ್ಳಲೇಬೇಕು. ಈಗಿನ ಜನರೇಶನ್ ಮಕ್ಕಳು ಮೊಬೈಲ್ ಫೋನ್ ಗೆ ಹೆಚ್ಚು ಸೀಮಿತವಾಗಿದ್ದಾರೆ. ಕೆಲವು ಜನರಿಗೆ ಮೊಬೈಲ್ ಫೋನ್ ಕೈಯಲ್ಲಿ ಇಲ್ಲದಿದ್ದರೆ ಆಗುವುದೇ ಇಲ್ಲ. ಇನ್ನೂ ನಿಮ್ಮ ಫೊನ್ ಅಂದರೆ ಮೊಬೈಲ್ (Mobile) ಕವರ್ ನಲ್ಲಿ ಹಣ ಇಡುವ ಹವ್ಯಾಸ ಹೆಚ್ಚಿನವರಿಗೆ ಇರುತ್ತದೆ. ಕೆಲವೊಮ್ಮೆ ಅವಸರದಲ್ಲಿ ಇಟ್ಟರೆ, ಇನ್ನು ಕೆಲವೊಮ್ಮೆ ಸುಲಭವಾಗಿ ಸಿಗಲಿ ಎಂದು ಮೊಬೈಲ್ ಕವರ್ ನಲ್ಲಿ ಹಣ ಇಡುತ್ತೇವೆ ಆದರೆ ಇದರಿಂದ ಅಪಾಯವೂ ಇದೆ. ಈ ರೀತಿ ಮೊಬೈಲ್ ಕವರ್ ನಲ್ಲಿ ನೋಟುಗಳನ್ನು ಇಡುವುದರಿಂದ ಮೊಬೈಲ್ (Tech News) ಬಿಸಿ ಆಗುತ್ತಾ ಹೋಗುತ್ತದೆ. ಮೊಬೈಲ್ ಕವರ್ ನಲ್ಲಿ ನೋಟು, ಹಣ (money) ಇಡುವುದರಿಂದ ಮೊಬೈಲ್ ಬಿಸಿಯಾಗುವುದಷ್ಟೇ ಅಲ್ಲದೆ ಮೊಬೈಲ್ ಸ್ಪೋಟವಾಗುವ ಸಾಧ್ಯತೆಯೂ ಇದೆ. ಹಾಗಾಗಿ ಮೊಬೈಲ್ ಕವರ್ ನಲ್ಲಿ ಹಣ ಅಥವಾ ಕಾಗದ ಇಡುವವರು ಈ ಬಗ್ಗೆ ಎಚ್ಚರ…
ಹೊಟ್ಟೆಯ ಸಮಸ್ಯೆಗಳು ಒಂದಲ್ಲ ಒಂದು ರೀತಿಯಲ್ಲಿ ಪ್ರತಿಯೊಬ್ಬರಿಗೂ ಕಾಡುತ್ತದೆ. ಮುಖ್ಯವಾಗಿ ಆಹಾರ ಸೇವನೆಯಲ್ಲಿ ವ್ಯತ್ಯಾಸವಾದಾಗ ಹೊಟ್ಟೆ ಕೆಡುತ್ತದೆ. ಇನ್ನು ಕೆಲವೊಮ್ಮೆ ಸೋಂಕು ತಗುಲಿ ಹೊಟ್ಟೆಯಲ್ಲಿ ಗುಳ್ಳೆಗಳಾಗುತ್ತವೆ. ಅದನ್ನು ಹೊಟ್ಟೆಯ ಹುಣ್ಣು ಎನ್ನುತ್ತಾರೆ. ಆರಂಭದ ಹಂತದಲ್ಲಿ ಹೊಟ್ಟೆಯ ನೋವು, ಗುಳ್ಳೆಯದ ಲಕ್ಷಣಗಳು ಕಾಣಿಸಿಕೊಂಡರೆ ಮನೆಮದ್ದಿನ ಮೂಲಕ ಅದನ್ನು ಪರಿಹಾರ ಮಾಡಿಕೊಳ್ಳಬಹುದು. ಆದರೆ ಕಡಿಮೆಯಾಗದೇ ಇದ್ದರೆ ವೈದ್ಯರಲ್ಲಿ ತೋರಿಸುವುದು ಉತ್ತಮ . ಹಾಗಾದರೆ ಹೊಟ್ಟೆಯ ಹುಣ್ಣಿನ ಲಕ್ಷಣಗಳು ಯಾವೆಲ್ಲಾ, ಅದಕ್ಕೆ ಮನೆಯಲ್ಲಿ ಯಾವ ರೀತಿ ಮದ್ದುಗಳನ್ನು ಮಾಡಬಹುದು ಎನ್ನುವ ಮಾಹಿತಿ ಇಲ್ಲಿದೆ ನೋಡಿ. ಹೊಟ್ಟೆ ಹುಣ್ಣಿನ ಲಕ್ಷಣಗಳೆಂದರೆ ಗ್ಯಾಸ್ಟ್ರಿಕ್ ಮತ್ತು ಹೊಟ್ಟೆ ಉಬ್ಬಿದ ಅನುಭವ ವಾಕರಿಕೆ ವಾಂತಿ ಅಜೀರ್ಣ ಎದೆಯುರಿ ಮತ್ತು ಹುಳಿ ತೇಗು ಹೊಟ್ಟೆಯ ನೋವು ಅರಿಶಿನ ಉರಿಯೂತವನ್ನು ಕಡಿಮೆ ಮಾಡುವ ಮತ್ತು ಸೋಂಕನ್ನು ನಿವಾರಿಸುವ ಗುಣವನ್ನು ಅರಿಶಿನ ಹೊಂದಿದೆ. ಹೀಗಾಗಿ ಹೊಟ್ಟೆ ಹುಣ್ಣಿಗೆ ಉತ್ತಮ ಮನೆಮದ್ದಾಗಲಿದೆ. ಇದು ಹೊಟ್ಟೆಯ ಒಳಪದರದಲ್ಲಿ ಉರಿಯೂತ ಮತ್ತು ಊತವನ್ನು ಕಡಿಮೆ ಮಾಡಬಹುದು. ಹೀಗಾಗಿ ಆಹಾರದಲ್ಲಿ ಅರಿಶಿನವನ್ನು…
ಆಗ್ರಾ: ನಾಲ್ವರು ಕಾಮುಕರು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ (Gang Rape) ಎಸಗಿದ ಘಟನೆ ಉತ್ತರ ಪ್ರದೇಶದ (Uttar Pradesh) ಆಗ್ರಾ ಜಿಲ್ಲೆಯ ಹೋಟೆಲಿನಲ್ಲಿ ನಡೆದಿದೆ. 25 ವರ್ಷ ವಯಸ್ಸಿನ ಸಂತ್ರಸ್ತೆಯ ಆಕ್ಷೇಪಾರ್ಹ ವೀಡಿಯೊವನ್ನು (Video) ಈ ಹಿಂದೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕ್ಷೇಪಾರ್ಹ ವಿಡಿಯೋವನ್ನು ಇಟ್ಟುಕೊಂಡು ಮಹಿಳೆಯನ್ನು ಬ್ಲ್ಯಾಕ್‌ಮೇಲ್ (Black Mail) ಮಾಡಲಾಗುತ್ತಿತ್ತು. ಬಲವಂತವಾಗಿ ಮದ್ಯ ಸೇವಿಸಿ ಆಕೆಯ ತಲೆಗೆ ಬಾಟಲಿಯಿಂದ ಹೊಡೆದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಸಂತ್ರಸ್ತೆ ನೀಡಿದ ದೂರಿನ ಆಧಾರದಲ್ಲಿ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. https://twitter.com/primetvindia/status/1723920400076394497?ref_src=twsrc%5Etfw%7Ctwcamp%5Etweetembed%7Ctwterm%5E1723920400076394497%7Ctwgr%5E57711f13da516c94e7af459b06efb9f47bdd9f16%7Ctwcon%5Es1_&ref_url=https%3A%2F%2Fwww.opindia.com%2F2023%2F11%2Fup-woman-gang-raped-assaulted-in-agra-hotel-5-arrested%2F ಆರೋಪಿಗಳ ವಿರುದ್ಧ ಅತ್ಯಾಚಾರದ ಆರೋಪಗಳಲ್ಲದೆ, ಕೊಲೆ ಯತ್ನದ ಆರೋಪಗಳನ್ನು ಸಹ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ಹೋಟೆಲಿನ ಉದ್ಯೋಗಿಯಾಗಿದ್ದು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಸಂತ್ರಸ್ತೆ ಸಹಾಯಕ್ಕಾಗಿ ಅಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬೆಂಗಳೂರು:- ಭಾರತ ಹಾಗೂ ಬಹುತೇಕ ದೇಶಗಳಲ್ಲಿ ಚಿನ್ನದ ಬೆಲೆ ಕಡಿಮೆ ಆಗಿದೆ. ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಸತತವಾಗಿ ಇಳಿಯುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 55,450 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 60,490 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,240 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 55,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,175 ರುಪಾಯಿಯಲ್ಲಿ ಇದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 14ಕ್ಕೆ): 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,450 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,490 ರೂ ಬೆಳ್ಳಿ ಬೆಲೆ 10 ಗ್ರಾಂಗೆ: 724 ರೂ ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,450 ರೂ 24 ಕ್ಯಾರಟ್ನ…
ಬೆಂಗಳೂರು:- ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಭ್ರೂಣ ಲಿಂಗ ಪತ್ತೆ ಪ್ರಕರಣದ ತನಿಖೆ ನಡೆಸುತ್ತಿರುವ ಆರೋಪಿ ವೈದ್ಯ ಹಾಗೂ ಅವರ ಸಹಾಯಕರನ್ನು ಬಂಧಿಸಿದ್ದಾರೆ. ತುಳಸಿರಾಮ್ (41), ಮೈಸೂರು ಉದಯಗಿರಿಯಲ್ಲಿರುವ ಮಾತಾ ಆಸ್ಪತ್ರೆ ವ್ಯವಸ್ಥಾಪಕರಾದ ಸಿ.ಎಂ. ಮೀನಾ (38) ಹಾಗೂ ಆಸ್ಪತ್ರೆಯ ಸ್ವಾಗತಗಾರ್ತಿ ರಿಜ್ಮಾ ಖಾನಂ (38) ಬಂಧಿತರು. ಅ. 15ರಂದು ಬೆಂಗಳೂರಿನಿಂದ ಮಂಡ್ಯಕ್ಕೆ ಗರ್ಭಿಣಿಯೊಬ್ಬರನ್ನು ಭ್ರೂಣ ಲಿಂಗ ಪತ್ತೆಗಾಗಿ ಕಾರಿನಲ್ಲಿ ಕರೆದೊಯ್ಯಲಾಗುತ್ತಿತ್ತು. ಕಾರು ನೋಡಿ ಅನುಮಾನಗೊಂಡಿದ್ದ ಪೊಲೀಸರು, ಬೆನ್ನಟ್ಟಿ ಕಾರು ನಿಲ್ಲಿಸಿದ್ದರು. ಕಾರಿನಲ್ಲಿದ್ದವರನ್ನು ವಿಚಾರಣೆ ನಡೆಸಿದಾಗ, ಭ್ರೂಣ ಲಿಂಗ ಪತ್ತೆ ಜಾಲದ ಮಾಹಿತಿ ಲಭ್ಯವಾಗಿತ್ತು’ ಎಂದು ಪೊಲೀಸರು ಹೇಳಿದರು. ‘ವೈದ್ಯನ ಸಂಬಂಧಿಯೂ ಆಗಿದ್ದ ವೀರೇಶ್, ನವೀನ್‌ಕುಮಾರ್, ಶಿವಲಿಂಗೇಗೌಡ ಹಾಗೂ ನಯನ್‌ಕುಮಾರ್‌ನನ್ನು ಆರಂಭದಲ್ಲಿ ಬಂಧಿಸಲಾಗಿತ್ತು. ಅವರು ನೀಡಿದ್ದ ಮಾಹಿತಿ ಆಧರಿಸಿ ತನಿಖೆ ಮುಂದುವರಿಸಿ ಇದೀಗ ಮತ್ತೆ ಮೂವರನ್ನು ಬಂಧಿಸಲಾಗಿದೆ’ ಎಂದು ತಿಳಿಸಿದರು. ಬಂಧಿತ ವೈದ್ಯ ತುಳಸಿರಾಮ್ ಹಾಗೂ ಇತರರು, ಮೂರು ವರ್ಷಗಳಿಂದ ಭ್ರೂಣ ಲಿಂಗ ಪತ್ತೆ ಮತ್ತು ಗರ್ಭಪಾತ ಮಾಡುತ್ತಿದ್ದರು ಎಂಬುದು…