ಬೆಂಗಳೂರು: ಕೆಇಎ ನೇಮಕಾತಿ ಪರೀಕ್ಷೆ ಅಕ್ರಮದ ಕೇಸ್ ಸಿಐಡಿಗೆ ಹಸ್ತಾಂತರ ಮಾಡಲಾಗಿದೆ. ಸಿಐಡಿ DySP ಶಂಕರಗೌಡ ಪಾಟೀಲ್, DySP ತನ್ವೀರ್ಗೆ ಹಸ್ತಾಂತರಿಸಿ ಪಿಐ ಅರುಣ ತನಿಖೆಯ ಮಾಹಿತಿ ವಿವರಿಸಿದ್ದಾರೆ. https://ainlivenews.com/what-did-vijayendra-say-after-meeting-farmer-sim-bommai/ ಸಿಐಡಿ SP ರಾಘವೇಂದ್ರ ಹೆಗಡೆ ಇಂದು ಕಲಬುರಗಿಗೆ ಆಗಮಿಸಲಿದ್ದಾರೆ. ಎಸ್ಪಿ ಆಗಮಿಸಿದ ನಂತರ ತನಿಖೆಯ ಹೊಣೆಗಾರಿಕೆ ಹಂಚಿಕೆ ಸಾಧ್ಯತೆ.
Author: AIN Author
ಬೆಂಗಳೂರು: 2023ನೇ ಸಾಲಿನಲ್ಲಿ ಭಾರತ 8 ಬಾರಿ 350ಕ್ಕಿಂತ ಹೆಚ್ಚು ರನ್ ಗಳಿಸಿ ದಾಖಲೆ ಬರೆದಿದೆ. 2019ರಲ್ಲಿ ಇಂಗ್ಲೆಂಡ್ (England) ತಂಡ 7 ಬಾರಿ 350 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ್ದೇ ಇದುವರೆಗಿನ ವರ್ಷದ ಗರಿಷ್ಠ ಸ್ಕೋರ್ ದಾಖಲೆಯಾಗಿತ್ತು. ಈ ದಾಖಲೆಯನ್ನು ಈಗ ಟೀಂ ಇಂಡಿಯಾ (Team India) ತನ್ನ ಹೆಸರಿಗೆ ಬರೆದುಕೊಂಡಿದೆ. ಒಟ್ಟು 8ರಲ್ಲಿ 2 ಬಾರಿ 350 ಪ್ಲಸ್ ರನ್ ಗಳು 2023ರ ವಿಶ್ವಕಪ್‌ನಲ್ಲೇ (World Cup 2023) ಬಂದಿದೆ. ಈ ವರ್ಷ ಮೂರು ಬಾರಿ ಶ್ರೀಲಂಕಾದ ವಿರುದ್ಧ 350 ಪ್ಲಸ್ ರನ್ ಗಳಿಸಿದೆ. 350 ಪ್ಲಸ್ ರನ್ ಗಳಿಸಿದ್ದ 8 ಪಂದ್ಯಗಳಲ್ಲೂ ಟೀಂ ಇಂಡಿಯಾ ಗೆಲುವು ಸಾಧಿಸಿತ್ತು ಎನ್ನುವುದೇ ವಿಶೇಷ. ಒಟ್ಟು 6 ಪಂದ್ಯಗಳು ಭಾರತದಲ್ಲೇ ನಡೆದಿತ್ತು. ಇನ್ನೆರಡು ಪಂದ್ಯಗಳು ಶ್ರೀಲಂಕಾ (Sri Lanka) ಹಾಗೂ ವೆಸ್ಟ್ ಇಂಡೀಸ್‌ನಲ್ಲಿ (West Indies) ನಡೆದಿತ್ತು. ಯಾರ ವಿರುದ್ಧ 350+…? ನೆದರ್ಲೆಂಡ್ ವಿರುದ್ಧ 50 ಓವರ್ ಗಳಲ್ಲಿ 410/4 (ಬೆಂಗಳೂರು)…
ಬೆಂಗಳೂರು: ನಗರದ ಆರ್.ಟಿ.ನಗರದಲ್ಲಿರುವ ಮಾಜಿ ಸಿಎಂ ಬೊಮ್ಮಾಯಿ ನಿವಾಸದಲ್ಲಿ ಬಿ.ವೈ.ವಿಜಯೇಂದ್ರ ಅವರು ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿದ್ದಾರೆ. ಬೊಮ್ಮಾಯಿ ಆಶೀರ್ವಾದ ಹಾಗೂ ಮಾರ್ಗದರ್ಶನ ಕೇಳಿದ್ದೇನೆ ಎಂದು ಮಾಜಿ ಸಿಎಂ ಬೊಮ್ಮಾಯಿ ಭೇಟಿ ಬಳಿಕ ವಿಜಯೇಂದ್ರ ಹೇಳಿದರು. ವರಿಷ್ಠರು ಒಳ್ಳೇ ನಿರ್ಧಾರ ಮಾಡಿದ್ದಾರೆ ಎಂದು ಸಂತೋಷಪಟ್ಟರು. ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿದ್ದಕ್ಕೆ ದೊಡ್ಡ ಶಕ್ತಿ ಬಂದಿದೆ ಎಂದ್ರು. ನಾನಷ್ಟೇ ಅಲ್ಲ, ಎಲ್ಲಾ ಹಿರಿಯರು ನಿನ್ನ ಜತೆ ಇರುತ್ತೇವೆ ಎಂದಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯನ್ನು ಒಗ್ಗಟ್ಟಾಗಿ ಎದುರಿಸಬೇಕಿದೆ. ಪ್ರವಾಸ ಮಾಡಿ ಪಕ್ಷಕ್ಕೆ ಬಲ ತುಂಬುವ ಕೆಲಸ ಮಾಡೋಣ ಎಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಭೋಪಾಲ್: ಮಧ್ಯಪ್ರದೇಶದಲ್ಲಿ (Madhya Pradesh) ಬಡವರಿಗೆ 450 ರೂಪಾಯಿಗೆ ಎಲ್‌ಪಿಜಿ ಸಿಲಿಂಡರ್ (LPG Cylinder) ನೀಡುವುದಾಗಿ ಬಿಜೆಪಿ (BJP) ಘೋಷಣೆ ಮಾಡಿದೆ. ವಿಧಾನಸಭೆ ಚುನಾವಣೆ (Vidhan Sabha Election) ಹಿನ್ನೆಲೆಯಲ್ಲಿ ಇಂದು 96 ಪುಟಗಳ ʼಸಂಕಲ್ಪ ಪತ್ರʼ ಹೆಸರಿನ ಪ್ರಣಾಳಿಕೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಬಿಡುಗಡೆ ಮಾಡಿದರು. ಉಚಿತ ಭರವಸೆಯ ಜೊತೆಗೆ ಮಧ್ಯಪ್ರದೇಶ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಗೂ ಮಧ್ಯಪ್ರದೇಶ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಸೇರಿದಂತೆ ಸೇರಿ ಹಲವು ಘೋಷಣೆ ಮಾಡಿದೆ. ಬಿಜೆಪಿಯ ಭರವಸೆ ಏನು? ಲಾಡ್ಲಿ ಬಹ್ನಾ ಮತ್ತು ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ 450 ರೂ.ಗೆ ಎಲ್‌ಪಿಜಿ ಸಿಲಿಂಡರ್. ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ ರೈತರಿಗೆ ವಾರ್ಷಿಕ 12 ಸಾವಿರ ರೂ. ಹಣಕಾಸು ನೆರವು. ಮುಂದಿನ ಐದು ವರ್ಷಗಳವರೆಗೆ ಜನರಿಗೆ ಉಚಿತವಾಗಿ ಪಡಿತರ ವಿತರಣೆ. ರೈತರಿಂದ ಕ್ವಿಂಟಾಲ್‌ಗೆ 2,700 ರೂ.ಗೆ ಗೋಧಿ,…
ಬೆಂಗಳೂರು: ದೀಪಾವಳಿ ಅಮಾವಾಸ್ಯೆ ಪೂಜೆಗೆ ಬನಶಂಕರಿ ದೇಗುಲದಲ್ಲಿ ಭಕ್ತ ಸಾಗರ.ನಗರದ ಬನಶಂಕರಿ, ಗವಿಗಂಗಾಧರ, ಕಾಡುಮಲ್ಲೆಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ದೀಪಾವಳಿ ಅಮವಾಸ್ಯೆ ಪ್ರಯುಕ್ತ ಬನಶಂಕರಿಗೆ ಬೆಳ್ಳಗ್ಗೆಯಿಂದಲೇ ಪೂಜೆ ನಡೆಸಲಾಗುತ್ತಿದೆ. ಬೆಳ್ಳಗ್ಗೆಯೇ ಪಂಚಾಭಿಷೇಕ ಮಾಡಿ ವಿಶೇಷ ಅಲಂಕಾರ ವಿಶೇಷ ಅಲಂಕಾರದ ಬಳಿಕ ಮಹಾಮಂಗಳಾರತಿ ನಡೆಯಲಿದ್ದು ಮಹಾಮಂಗಳಾರತಿಗಾಗಿ ಕಾದುನಿಂತಿರೋ ಭಕ್ತದಿಗಳು ಹಬ್ಬದ ಪ್ರಯುಕ್ತ ಸಂಜೆಯವರೆಗೂ ದೇವರ ದರ್ಶನಕ್ಕೆ ಅವಕಾಶ ಅಲ್ಲದೇ ಬರುವ ಭಕ್ತದಿಗಳಿಗೆ ಪ್ರಸಾದ ವಿತರಣೆ ಮಾಡಲಾಗುತ್ತೆ.
ಧಾರವಾಡ: ಹಿಂದೂ ಸಮುದಾಯದ ಪ್ರಮುಖ ಹಬ್ಬಗಳಲ್ಲಿ ಒಂದಾದ ದೀಪಾವಳಿ ಹಬ್ಬದ ಸಂಭ್ರಮ ವಿದ್ಯಾಕಾಶಿ ಧಾರವಾಡದಲ್ಲಿ ಕಳೆಗಟ್ಟಿದೆ. ಬೆಳಕಿನ ಹಬ್ಬ ಎಂದೇ ಕರೆಯಿಸಿಕೊಳ್ಳುವ ದೀಪಾವಳಿಯನ್ನು ಸಡಗರದಿಂದ ಆಚರಣೆ ಮಾಡಲು ಧಾರವಾಡಿಗರು ಸಿದ್ಧರಾಗುತ್ತಿದ್ದಾರೆ. ಹಬ್ಬದ ಸಾಮಗ್ರಿಗಳ ಖರೀದಿಯಲ್ಲಿ ಜನತೆ ಬ್ಯೂಸಿಯಾಗಿದ್ದು, ನಗರದ ಸುಭಾಷ್ ರೋಡ್, ಗಾಂಧಿ ಚೌಕ್ ಸೇರಿ ಬಹುತೇಕ ಕಡೆ ಮಾರುಕಟ್ಟೆಯಲ್ಲಿ ಕಣ್ಣು ಹಾಯಿಸಿದ್ದಲ್ಲೆಲ್ಲ ಜನರೇ ಕಾಣುತ್ತಿದ್ದಾರೆ. ಜೊತೆಗೆ ವ್ಯಾಪಾರಸ್ಥರು ಕಬ್ಬು ಬಾಳೆ, ಹೂ ಹಣ್ಣು ಸೇರಿದಂತೆ ಇನ್ನಿತರ ಅಲಂಕಾರಿಕ ಸಾಮಗ್ರಿಗಳನ್ನು ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಇನ್ನೂ ಬೆಲೆ ಏರಿಕೆ ನಡೆವೆಯು ಜನತೆ ಹಬ್ಬದ ಸಾಮಗ್ರಿಗಳನ್ನು ಖರೀದಿ ಮಾಡುತ್ತಿದ್ದಾರೆ. ಇದರೊಂದಿಗೆ ಡಿಕಾರೆ ರೋಡಿನ ಆಕಾಶ ಬುಟ್ಟಿ ಅಲಂಕಾರ ಗ್ರಾಮಹಕರ ಗಮನ ಸೆಳೆಯುತ್ತಿದೆ. ಒಟ್ಟಿನಲ್ಲಿ ದೀಪಗಳ ಹಬ್ಬ ದೀಪಾವಳಿ ಹಬ್ಬವನ್ನು ಧಾರವಾಡದಲ್ಲಿ ಸಂಭ್ರಮದೊಂದಿಗೆ ಆಚರಣೆ ಮಾಡಲಾಗುತ್ತಿದೆ.
ಬೆಂಗಳೂರು: ವಿಶ್ವಕಪ್ ನಲ್ಲಿ ಇದುವರೆಗೆ ಆಡಿದ 9 ಪಂದ್ಯಗಳನ್ನು ಸತತವಾಗಿ ಗೆಲ್ಲುವ ಮೂಲಕ ಭಾರತ ದಾಖಲೆ ಬರೆದಿದೆ. ಟೀಂ ಇಂಡಿಯಾ ಸತತ 8 ಗೆಲುವು ಸಾಧಿಸಿದ್ದೇ ಇದುವರೆಗಿನ ವಿಶ್ವಕಪ್ ಪಂದ್ಯಾವಳಿಯ ಗೆಲುವಿನ ದಾಖಲೆಯಾಗಿತ್ತು. 2003ರಲ್ಲಿ ನಡೆದ ವಿಶ್ವಕಪ್ ನಲ್ಲಿ ಭಾರತ ಸತತ 8 ಪಂದ್ಯಗಳನ್ನು ಗೆದ್ದು ದಾಖಲೆ ಮಾಡಿತ್ತು. ಈ ಬಾರಿಯ ವಿಶ್ವಕಪ್ ಪಂದ್ಯಾವಳಿಯಲ್ಲಿ ಟೀಂ ಇಂಡಿಯಾ ಇದುವರೆಗೆ 9 ಪಂದ್ಯಗಳನ್ನು ಆಡಿದ್ದು, 9 ಪಂದ್ಯಗಳನ್ನು ಗೆದ್ದು ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ ನವೆಂಬರ್ 15ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಸೆಮಿಫೈನಲ್ ಪಂದ್ಯವನ್ನಾಡಲಿದೆ. 2023ರ ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಅಜೇಯ ‘ನವ’ಜಯ! ಮ್ಯಾಚ್ 1: ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್ ಗೆಲುವು ಮ್ಯಾಚ್ 2: ಆಫ್ಘಾನಿಸ್ತಾನ ವಿರುದ್ಧ 8 ವಿಕೆಟ್ ಗೆಲುವು ಮ್ಯಾಚ್ 3: ಪಾಕಿಸ್ತಾನ ವಿರುದ್ಧ 7 ವಿಕೆಟ್ ಗೆಲುವು ಮ್ಯಾಚ್ 4: ಬಾಂಗ್ಲಾದೇಶದ ವಿರುದ್ಧ 7 ವಿಕೆಟ್ ಗೆಲುವು ಮ್ಯಾಚ್ 5: ನ್ಯೂಜಿಲೆಂಡ್ ವಿರುದ್ಧ 4…
ಮಂಡ್ಯ :- ನಾಡಿನೆಲ್ಲೆಡೆ ದೀಪಾವಳಿಯ ಸಂಭ್ರಮ ಮನೆಮಾಡಿದೆ. ಮನೆ, ಮಾಲ್, ಕಚೇರಿ ಸೇರಿದಂತೆ ಗಗನಚಯಂಬಿ ಕಟ್ಟಡಗಳೆಲ್ಲವು ಜಗಮಗಿಸುವ ಬೆಳಕಿನಿಂದ ಕಂಗೊಳಿಸುತ್ತಿವೆ. ಆದರೆ ಮಂಡ್ಯ ಜಿಲ್ಲೆಯ ಈ ಗ್ರಾಮದಲ್ಲಿ ಸುಮಾರು 200 ವರ್ಷಗಳಿಂದ ಬೆಳಕಿನ ಹಬ್ಬವಾದ ದೀಪಾವಳಿಯನ್ನ ಆಚರಿಸಿಯೇ ಇಲ್ವಂತೆ. ಬದಲಿಗೆ ಈ ದಿನವನ್ನ ಗ್ರಾಮಸ್ಥರು ಶೋಕದ ದಿನವನ್ನಾಗಿ ಆಚರಿಸುತ್ತಾರಂತೆ. ಹೌದು, ಐತಿಹಾಸಿಕ ಪರಂಪರೆಯನ್ನು ಹೊಂದಿರುವ ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ ಈ ಪದ್ಧತಿ ಬೆಳಕಿಗೆ ಬಂದಿದೆ. ಇಲ್ಲಿನ ಅಯ್ಯಂಗಾರ್ ಸಮುದಾಯ ಸುಮಾರು 230 ವರ್ಷಗಳಿಂದ ದೀಪಾವಳಿ ಹಬ್ಬ ಆಚರಿಸುತ್ತಿಲ್ಲ. ಇದಕ್ಕೆ ಕಾರಣ ಮತ್ಯಾರೂ ಅಲ್ಲ ಅತ್ಯಂತ ಬಲಿಷ್ಠ ಇಸ್ಲಾಮಿಕ್ ಯೋಧ ಎಂದು ಕರೆಯಲ್ಪಡುವ ಟಿಪ್ಪು ಸುಲ್ತಾನ್. 1790ರಲ್ಲಿ ನರಕ ಚತುರ್ದಶಿ ಹಬ್ಬ ಆಚರಿಸಲು ಅಯ್ಯಂಗಾರ್ಗಳು ಶ್ರೀರಂಗಪಟ್ಟಣದ ಕಾವೇರಿ ತೀರದಲ್ಲಿರುವ ನರಸಿಂಹ ದೇವಸ್ಥಾನದ ಆವರಣದಲ್ಲಿ ನೆರೆದಿದ್ದರು. ಈ ವಿಷಯ ತಿಳಿದ ಟಿಪ್ಪು ತನ್ನ ಹಿಂದಿನ ಸೇಡು ತೀರಿಸಿಕೊಳ್ಳಲು ಹಬ್ಬದ ದಿನವೇ ಹಿಂದೂ ಸಮುದಾಯದ ಹತ್ಯಾಕಾಂಡಕ್ಕೆ ಸೂಚನೆ ನೀಡಿದ. ಟಿಪ್ಪುವಿನ ದ್ವೇಷದ ಜ್ವಾಲೆಗೆ ದೀಪಾವಳಿ ಹಬ್ಬದಂದೇ…
ಕಳೆದ ವಾರದ ವೀಕೆಂಡ್ ಎಪಿಸೋಡ್‌ನ ಎಲಿಮಿನೇಷನ್ ಟೈಮಲ್ಲಿ ವರ್ತೂರ್ ಸಂತೋಷ್, ಸುದೀಪ್ ಅವರಿಗೆ, ಬಿಗ್‌ಬಾಸ್ ಮನೆಯ ಸದಸ್ಯರಿಗೆ, ತಮಗೆ ಓಟ್ ಹಾಕಿದ ಹದಿಮೂರು ಲಕ್ಷಕ್ಕಿಂತ ಅಧಿಕ ಜನರಿಗೆ ಒಂದು ಬಿಗ್ ಶಾಕ್ ನೀಡಿದ್ದರು. ‘ನನಗೆ ಹೊರಗೆ ನಡೆದ ಘಟನೆಯನ್ನು ಮರೆತು ಆಡಬೇಕು ಎಂದು ಇಲ್ಲಿಗೆ ಬಂದೆ. ಆದರೆ ನನಗೆ ಅದರಿಂದ ಹೊರಗೆ ಬರಲು ಸಾಧ್ಯಾಗುತ್ತಿಲ್ಲ. ಹಾಗಾಗಿ ನಾನು ಷೋದಿಂದ ಹೊರಗೆ ಹೋಗಲು ಬಯಸುತ್ತೇನೆ’ ಎಂದು ಹೇಳಿದರು. ಇದರಿಂದ ಎಲ್ಲರಿಗೂ ಶಾಕ್ ಆಯಿತು. ಕಿಚ್ಚಕೂಡ, ‘ನೀವು ಜನರ ಪ್ರೀತಿಯ ವಿರುದ್ಧ ಹೋಗ್ತಿದ್ದೀರಾ’ ಎಚ್ಚರಿಸಿದರು. ಕೊನೆಯಲ್ಲಿ, ‘ಮನೆಯೊಳಗೆ ಇರ್ತೀರೋ ಬಿಡ್ತೀರೋ ನಿಮಗೆ ಬಿಟ್ಟಿದ್ದು. ಆದರೆ ನನಗಂತೂ ಡಿಸಪಾಯಿಂಟ್ ಆಗಿದೆ’ ಎಂದು ಹೇಳಿ ಬೇಸರದಿಂದಲೇ ವೇದಿಕೆ ಬಿಟ್ಟು ಹೊರನಡೆದರು. ಇದೀಗ ವರ್ತೂರು ಸಂತೋಷ್ ಅವರನ್ನು ಮನೆಯೊಳಗೆ ಉಳಿದುಕೊಳ್ಳುವಂತೆ ಮನವೊಲಿಸಲು ಇಡೀ ಮನೆಯ ಸದಸ್ಯರೆಲ್ಲರೂ ಪ್ರಯತ್ನಿಸುತ್ತಿದ್ದಾರೆ. ಇದೇ ಹೊತ್ತಿನಲ್ಲಿ ಬಿಗ್‌ಬಾಸ್ ಮನೆಗೆ ಮತ್ತೊಬ್ಬರು ಗೆಸ್ಟ್ ಎಂಟ್ರಿ ಕೊಟ್ಟಿದ್ದಾರೆ! ಬಿಗ್‌ಬಾಸ್ ಮನೆಯ ಬಾಗಿಲು ತೆರೆಯುತ್ತಿದ್ದ ಹಾಗೆಯೇ ಜನಪ್ರಿಯ ಧಾರಾವಾಹಿ…
ದಾವಣಗೆರೆ: ನಾನು ನಿದ್ದೆ ಬಿಟ್ಟು ಲೋಕಸಭೆಯ 28 ಸೀಟ್ ಗೆಲ್ಲಿಸಲು ರಾಜ್ಯಾದ್ಯಂತ ಓಡಾಡುವೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಜೊತೆ ಎಲೆಮರೆ ಕಾಯಿಯಾಗಿ ಲೋಕಸಭೆ ಚುನಾವಣೆಯಲ್ಲಿ ಕೆಲಸ ಮಾಡುವೆ ಎಂದು ದಾವಣಗೆರೆಯಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ (M.P.Renukacharya) ಹೇಳಿದರು. ಬಿಎಸ್‌ವೈ ಪುತ್ರ ವಿಜಯೇಂದ್ರ (Vijayendra) ಬಿಜೆಪಿ ರಾಜ್ಯಾಧ್ಯಕ್ಷ ಆದಾಗಿನಿಂದ ರೇಣುಕಾಚಾರ್ಯ ಮತ್ತೆ ಅಕ್ಟಿವ್ ಆಗಿದ್ದಾರೆ. https://ainlivenews.com/ancient-jewelry-treasure-found-in-temple-premises/ ಬಿಜೆಪಿ ಲೋಕಾಸಭಾ ಕ್ಷೇತ್ರದ ಬಿಜೆಪಿ (BJP) ಟಿಕೆಟ್ ಆಕಾಂಕ್ಷಿಯಾಗಿರುವ ಇವರು ಜಿಲ್ಲೆಯ ಹಿರಿಯ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಮಾಜಿ ಸಚಿವ ರೇಣುಕಾಚಾರ್ಯ, ಬಿಜೆಪಿ ಹಿರಿಯ ನಾಯಕ ಎಸ್.ಎ.ರವೀಂದ್ರನಾಥ್ ಅವರನ್ನು ಕುಟುಂಬಸಮೇತ ಭೇಟಿಯಾಗಿ ದೀಪಾವಳಿ ಹಬ್ಬದ ಶುಭಾಶಯ ತಿಳಿಸಿ ಕೆಲ ಕಾಲ ಚರ್ಚೆ ಮಾಡಿದ್ದಾರೆ.