ಕಲಬುರ್ಗಿ:- ಬೀದಿನಾಯಿ ದಾಳಿಗೆ ಐವರು ಗಂಭೀರವಾಗಿ ಗಾಯಗೊಂಡ ಘಟನೆ ಕಲಬುರಗಿಯ ಚಿತ್ತಾಪುರ ಪಟ್ಟಣದಲ್ಲಿ ನಡೆದಿದೆ.. ಪಟ್ಟಣದ ತಳಿಗೇರಿ ಏರಿಯಾದಲ್ಲಿ ಘಟನೆ ನಡೆದಿದ್ದು ಮಹಿಳೆಯರು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಾಯಿಗಳ ದಾಳಿಗೆ ಆಕ್ರೋಶ ಹೊರಹಾಕಿರುವ ಜನ ಪುರಸಭೆ ವಿರುದ್ಧ ಕಿಡಿಕಾರಿದ್ದಾರೆ…
Author: AIN Author
ತುಮಕೂರು:- ಬೈಕ್ ಹಾಗೂ ಓಮಿನಿ ಕಾರು ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ತುಮಕೂರು ತಾಲೂಕಿನ ಓಬಳಾಪುರ ಬಳಿ ಜರುಗಿದೆ. ಬೈಕ್ ನಲ್ಲಿದ್ದ ಸವಾರರಿಗೆ ಗಂಭೀರ ಗಾಯವಾಗಿದ್ದು, ಓಮಿನಿಯಲ್ಲಿದ್ದ ಮಹಿಳೆಗೂ ಗಾಯವಾಗಿದೆ. ಮುಖಾಮುಖಿ ಡಿಕ್ಕಿಯಾಗಿ ಈ ದುರಂತ ನಡೆದಿದೆ. ತುಮಕೂರು ಕಡೆಯಿಂದ ಹೋಗ್ತಿದ್ದ ಬೈಕ್, ಕೊರಟಗೆರೆ ಕಡೆಯಿಂದ ಬರ್ತಿದ್ದ ಓಮಿನಿ ಕಾರು ನಡುವೆ ಡಿಕ್ಕಿ ಸಂಭವಿಸಿದೆ. ಬೈಕ್ ನವರು ಕುಡಚಿ ಮೂಲದವರು ಎನ್ನಲಾಗಿದೆ..ಎತ್ತಿನಹೊಳೆ ಕಾಮಗಾರಿ ಕೆಲಸಕ್ಕೆ ಬಂದಿದ್ದರು. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಬೆಂಗಳೂರು:- ಸಿಬಿಐ ತನಿಖೆ ಹೊತ್ತಲ್ಲಿ ಕೇಸ್ ವಾಪಸ್ ಪಡೆಯುವುದು ಸರಿಯಲ್ಲ ಎಂದು ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಸಚಿವ ಸಂಪುಟದಲ್ಲಿ ಡಿಕೆಶಿ ಸಿಬಿಐ ಕೇಸ್ ವಾಪಸ್ ಪಡೆದ ವಿಚಾರವಾಗಿ ನಗರದಲ್ಲಿ ಪ್ರತಿಕ್ರಿಯಿಸಿದ ಸಂಸದ ನಳಿನ್ ಕುಮಾರ್ ಕಟೀಲ್, ಇವರು ಪ್ರಾಮಾಣಿಕರು, ಪಾರದರ್ಶಕವಾಗಿದ್ದರೆ ಕೇಸ್ ಹಿಂಪಡೆಯುವ ಅಗತ್ಯವಿಲ್ಲ. ಇವರಿಗೆ ಭಯ ಯಾಕೆ, ಇವರ ಪ್ರಾಮಾಣಿಕತೆ ಪ್ರಶ್ನಾರ್ಥಕ ಚಿಹ್ನೆಯಲ್ಲಿದೆ ಎಂದು ಹೇಳಿದರು. ಸಿಬಿಐ ತನಿಖೆ ಹೊತ್ತಲ್ಲಿ ಸರ್ಕಾರ ಕೇಸ್ ವಾಪಸ್ ಪಡೆಯುವುದು ಸರಿಯಲ್ಲ. ಇದು ಸರ್ಕಾರದ ಭ್ರಷ್ಟಾಚಾರವನ್ನು ಸಾರ್ವಜನಿಕವಾಗಿ ತಿಳಿಸುತ್ತದೆ. ನಾನು ಖಂಡಿಸುತ್ತೇನೆ. ಹಾಗಂತ ಇದೊಂದೇ ಕೇಸ್ ಇಲ್ಲ, ಜಾರಿ ನಿರ್ದೇಶನಾಲಯದಲ್ಲೂ ಸಾಕಷ್ಟು ಕೇಸ್ಗಳಿವೆ ಎಂದು ನಳಿನ್ ಕುಮಾರ್ ಕಟೀಲು ಹೇಳಿದರು.
ಬೆಂಗಳೂರು:- ಹಿಂದಿನ ಬಿಜೆಪಿ ಸರ್ಕಾರದಿಂದ ನಮ್ಮ ನಾಯಕರನ್ನು ಕಟ್ಟಿ ಹಾಕಲು ಸಂಚು ರೂಪಿಸಲಾಗುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಹಿಂದಿನ ಬಿಜೆಪಿ ಸರ್ಕಾರ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣವನ್ನು ಸಿಬಿಐಗೆ ನೀಡಿದ್ದು ಕಾನೂನುಬಾಹಿರ. ರಾಜಕೀಯ ದುರುದ್ದೇಶ ಇಟ್ಟುಕೊಂಡು ಈ ಮೂಲಕ ನಮ್ಮ ನಾಯಕರಾದ ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಅವರನ್ನು ಕಟ್ಟಿ ಹಾಕಲು ಬಿಜೆಪಿ ಸಂಚು ಮಾಡಿತ್ತು ಎಂದರು. ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ವಿರೋಧ ಪಕ್ಷವನ್ನು ಮುಗಿಸಬೇಕು ಎಂದು ಸಂಚು ರೂಪಿಸುತ್ತಿದ್ದಾರೆ. ವಿಪಕ್ಷದವರನ್ನು ಕಟ್ಟಿ ಹಾಕಬೇಕು ಎಂದು ಬಿಜೆಪಿ ಮಾಡುತ್ತಿದೆ. ಧ್ವನಿ ಕಟ್ಟಿಹಾಕಲು ಕೆಲವರನ್ನು ಐಟಿ ಇಡಿ ಮೂಲಕ ಹೆದರಿಸುತ್ತಾರೆ. ಥ್ರೆಟ್ ಆಗುವಂತವರನ್ನು ರಾಜಕೀಯವಾಗಿ ಮುಗಿಸುವುದಕ್ಕೆ ಯತ್ನ ಮಾಡುತ್ತಾರೆ ಎಂದು ಆರೋಪಿಸಿದರು. ಎಐಸಿಸಿ ಅಧ್ಯಕ್ಷರಿಂದ ಹಿಡಿದು ಪಿಸಿಸಿ ಅಧ್ಯಕ್ಷರ ತನಕವೂ ನಾಯಕರ ವಿರುದ್ದ ಸಂಚು ರೂಪಿಸುತ್ತಾರೆ. ಅನವಶ್ಯಕವಾಗಿ ಡಿಕೆಶಿ ಮತ್ತು ಸಿಎಂ ವಿರುದ್ದ ಆರೋಪ ಮಾಡುತ್ತಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರ ಪ್ರಾಮಾಣಿಕವಾಗಿ ಸಂಚು…
ಬೆಂಗಳೂರು : ಡಿ.ಕೆ. ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆ ಅಮಾನತು ವಿಚಾರ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಡಿ.ಕೆ. ಶಿವಕುಮಾರ್ ಅವರ ಕುರಿತು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಬಿಜೆಪಿಗರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. https://ainlivenews.com/now-let-satya-harishchandra-prove-himself-to-the-people-of-dkeshi-state/ ಕಳೆದ 9ರಿಂದ 10 ವರ್ಷದಿಂದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ವಿರೋಧ ಪಕ್ಷಗಳನ್ನು ಮುಗಿಸಲು ಸಂಚು ರೂಪಿಸುತ್ತಿದ್ದಾರೆ. ಚುನಾವಣೆ ಹತ್ತಿರ ಬಂದಾಗ ಕೇವಲ ಕಾಂಗ್ರೆಸ್ ಮುಖಂಡರ ಮನೆ ಮೇಲೆ ಐಟಿ ದಾಳಿ ಆಗುತ್ತೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂಬ ಭಯದಲ್ಲಿ ಈ ಹಿಂದೆ ಡಿ.ಕೆ. ಶಿವಕುಮಾರ್ ಮೇಲೆ ಇಡಿಯಿಂದ ದಾಳಿ ನಡೆಸಲಾಯಿತು ಎಂದು ಕುಟುಕಿದ್ದಾರೆ. 13 ತಿಂಗಳ ನಂತರ ಎಫ್ಐಆರ್ 24-09-2019ರಂದು ಅಂದಿನ ಬಿಜೆಪಿ ಸರ್ಕಾರದ ಸಿಎಂ ಫೋನ್ ನಲ್ಲಿ ನೇರವಾಗಿ ಸಿಬಿಐ ಜೊತೆ ಮಾತನಾಡಿದ್ದರು. ಪ್ರಕಾರಣವನ್ನು ಸಿಬಿಐಗೆ ವರ್ಗಾಯಿಸುವ ಮೊದಲು ಅನುಸರಿಸಬೇಕಿದ್ದ ಮಾನದಂಡಗಳನ್ನು ಸರ್ಕಾರ ಪಾಲಿಸಿಲ್ಲ. ರಾಜ್ಯ ತನಿಖಾ ತಂಡಗಳನ್ನು…
ಲಕ್ನೋ: ಮಥುರಾದಲ್ಲಿ (Mathura) ದೀಪಾವಳಿ ಹಬ್ಬಕ್ಕಾಗಿ ನಿರ್ಮಿಸಿದ್ದ ಪಟಾಕಿ ಅಂಗಡಿಗಳಿಗೆ ಬೆಂಕಿ ತಗುಲಿ (Fire Accident) ನಡೆದ ಅವಘಡದಲ್ಲಿ ಗಾಯಗೊಂಡಿದ್ದ ಅಪ್ರಾಪ್ತ ಸೇರಿ ಮತ್ತೋರ್ವ ವ್ಯಕ್ತಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಈ ಮೂಲಕ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಪಿಟಾ ನಾಗ್ಲಾ ಗ್ರಾಮದ ದೀಪಚಂದ್ (28) ಹಾಗೂ ನೌಜಿಲ್ ನಿವಾಸಿ ರಿಂಕು (17) ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. ಮೊದಲು ದೀಪಕ್‍ಚಂದ್‍ನನ್ನು ಆಗ್ರಾದ ಎಸ್‍ಎನ್ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತನ ಸ್ಥಿತಿಯಲ್ಲಿ ಯಾವುದೇ ಸುಧಾರಣೆಯಿಲ್ಲದೆ ಅವನನ್ನು ಮನೆಗೆ ಕರೆತಂದಿತ್ತು. ರಿಂಕು ಎಂಬವನನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. https://ainlivenews.com/miley-is-the-new-president-of-argentina-who-talks-to-a-dead-dog/ ಇದಕ್ಕೂ ಮುನ್ನ ಸುಟ್ಟಗಾಯಗಳಿಂದ ಬಳಲುತ್ತಿದ್ದ 10 ಮಂದಿ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದರು. ಇನ್ನೂ ಇಬ್ಬರು ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿಯೂ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನ.12 ರಂದು ಮಥುರಾದ ರಾಯಾ ಪ್ರದೇಶದ ಗೋಪಾಲ್‍ಬಾಗ್‍ನಲ್ಲಿ ಈ ಅವಘಡ ಸಂಭವಿಸಿತ್ತು. ಘಟನೆಯಲ್ಲಿ 23 ಪಟಾಕಿ…
ಬೆಂಗಳೂರು : ರೆಬಲ್ ಸ್ಟಾರ್ ಅಂಬರೀಶ್ ಅವರ 5ನೇ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋ ಬಳಿ ಇರುವ ಅಂಬರೀಶ್ ಸಮಾಧಿಗೆ ಪತ್ನಿ ಹಾಗೂ ಸಂಸದೆ ಸುಮಲತಾ ಅಂಬರೀಶ್, ಪುತ್ರ ಅಭಿಷೇಕ್ ಅಂಬರೀಶ್, ರಾಕ್ ಲೈನ್ ವೆಂಕಟೇಶ್ ಪೂಜೆ ಸಲ್ಲಿಸಿದರು. https://ainlivenews.com/ambi-agali-five-years-sumalatha-ambarish-emotional-post/ ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ ಅಂಬರೀಶ್, ಅಂಬರೀಶ್ ಅವರ ಪುಣ್ಯಸ್ಮರಣೆ ದಿನದಂದೇ ಅಭಿಷೇಕ್ ಅಂಬರೀಶ್ ಎರಡನೇ ಸಿನಿಮಾ ತೆರೆಗೆ ಬಂದಿದೆ ಎಂದು ಪತಿ ಅಂಬರೀಶ್ ನೆನೆದು ಸುಮಲತಾ ಅಂಬರೀಶ್ ಭಾವುಕರಾದರು. ಅಂಬರೀಶ್ ನಮ್ಮನ್ನ ಅಗಲಿ ಐದು ವರ್ಷ ಆಗಿದೆ. ಇವತ್ತು ತುಂಬಾನೇ ಎಮೋಷನಲ್ ದಿನ. ಪ್ರತಿನಿತ್ಯ ಅವರ ನೆನಪುಗಳು ನಮಗೆ ಶಕ್ತಿ ಮತ್ತು ಸ್ಫೂರ್ತಿ. ಇವತ್ತು ಅಭಿಷೇಕ್ ನಟನೆ ಮಾಡಿರುವ ಬ್ಯಾಡ್ ಮ್ಯಾನರ್ಸ್ ಸಿನಿಮಾ ರಿಲೀಸ್ ಆಗ್ತಿದೆ. ಈ ಸಿನಿಮಾ ಕಂಪ್ಲೀಟ್ ಆಗೋವರೆಗೂ ಸಾಕಷ್ಟು ಸವಾಲುಗಳು ಇತ್ತು. ಸಿನಿಮಾ ಚೆನ್ನಾಗಿ ಮೂಡಿಬಂದಿದೆ. ಮಗನ ಸಿನಿಮಾಕ್ಕೆ ಅಂಬರೀಶ್ ಆಶೀರ್ವಾದ ಇರುತ್ತೆ ಎಂದು ಹೇಳಿದರು.
ಬೆಳಗಾವಿ: ಬೆಳಗಾವಿಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕಂಟೇನರ್ ನಲ್ಲಿ ಕಂಪಾರ್ಟ್ಮೆಂಟ್ ಮಾಡಿ ಮದ್ಯ ಸಾಗಾಟ ಜಾಲ ಪತ್ತೆಯಾಗಿದೆ. ಕಂಟೇನರ್ ನಲ್ಲಿ ಐದು ಅಡಿಯಲ್ಲಿ ಜಾಗದಲ್ಲಿ ಕಂಪಾರ್ಟ್ಮೆಟ್ ಮಾಡಲಾಗಿತ್ತು. ಕಂಪಾರ್ಟ್ಮಮೆಂಟ್ ಬಗ್ಗೆ ಯಾರಿಗೂ ಅನುಮಾನ ಬರದಂತೆ ಶೆಟರ್ ಅಳವಡಿಸಿ ಐಡಿಯಾ ಮಾಡಿದ್ದ ಖದೀಮರು ಕೊನೆಗೂ ಬಲೆಗೆ ಬಿದ್ದಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ ಬಳಿ ಜಾಲ ಬಲೆಗೆ ಬಿದ್ದಿದೆ. ಅಬಕಾರಿ ಇನ್ಸ್ಪೆಕ್ಟರ್ ಬಾಳಗೌಡ ಪಾಟೀಲ್ ನೇತೃತ್ವದಲ್ಲಿ ತಪಾಸಣೆ ನಡೆಸಲಾಗಿತ್ತು. ಬಳಿಕ ಬಿಹಾರ ಮೂಲದ ಸಬೋದ ಮಬತೋ ಬಂಧನ ಮಾಡಲಾಗಿದೆ. 25 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶಕ್ಕೆ ಪಡೆಯಲಾಗಿದೆ. 80 ಲೀಟರ್ ಬ್ಲೆಂಡೆಡ್ ಮದ್ಯ ಹಾಗೂ ಮದ್ಯದ ಬಾಟಲಿಯ ಕ್ಯಾಪ್ ವಶಕ್ಕೆ ಪಡೆಯಲಾಗಿದೆ. ಖಾಲಿ ಬಾಟಲಿಯಲ್ಲಿ ಬ್ಲಂಡೆಡ್ ಮದ್ಯ ತುಂಬು ಓರಿಜನಲ್ ಕ್ಯಾಪ್ ಹಾಕಲು ಪ್ಲ್ಯಾನ್ ಮಾಡಲಾಗಿತ್ತು. https://ainlivenews.com/miley-is-the-new-president-of-argentina-who-talks-to-a-dead-dog/ ಈ ಮೂಲಕ ಗ್ರಾಹಕರನ್ನು ಯಾಮಾರಿಸಲು ಪ್ಲ್ಯಾನ್ ಮಾಡಿದ್ದ ದುಷ್ಕರ್ಮಿಗಳು,ಕ್ಯಾಪ್ ಓಪನ್ ಮಾಡಿದ್ರೂ ನಕಲಿ ಅಂತ ಅನುಮಾನ…
ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದಲ್ಲಿ ಹುತಾತ್ಮರ ಯೋಧ ಪ್ರಾಂಜಲ್ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಹುತಾತ್ಮರಾದ ಯೋಧ ಪ್ರಾಂಜಲ್ ಅವರ ಕುಟುಂಬದವರು ಆನೇಕಲ್ ತಾಲ್ಲೂಕಿನವರಾಗಿದ್ದು, ಜಿಲ್ಲಾಡಳಿತ ಸರಿಯಾದ ವ್ಯವಸ್ಥೆ ಮಾಡಿಲ್ಲವೆಂದು ಅಸಮಧಾನಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಹುತಾತ್ಮ ಯೋಧನ ಮೃತದೇಹ ಇಂದು ಬೆಂಗಳೂರಿಗೆ ಬರಲಿದ್ದು, ಅನಿವಾರ್ಯ ಕಾರಣಗಳಿಂದ ನಾನು ಅಂತಿಮ ದರ್ಶನಕ್ಕೆ ತೆರಳಲು ಸಾಧ್ಯವಾಗುತ್ತಿಲ್ಲ. ಗೃಹ ಸಚಿವ ಜಿ.ಪರೇಮಶ್ವರ್ ರವರು ಹುತಾತ್ಮ ಯೋಧರ ಅಂತಿಮ ದರ್ಶನಕ್ಕೆ ತೆರಳುತ್ತಿದ್ದಾರೆ ಎಂದರು. https://ainlivenews.com/command-control-centre-cm-inaugurated-multi-storied-command-center-for-safety-of-women-children/ ಸರ್ಕಾರದಿಂದ ಮೃತ ಯೋಧನ ಕುಟುಂಬಕ್ಕೆ ನೀಡಬೇಕಾಗಿರುವ ಪರಿಹಾರಗಳನ್ನು ನೀಡಲಾಗುವುದು. ಮೃತರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ ದೇವರು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಬೆಂಗಳೂರು: : ಮೆಟ್ರೋಪಾಲಿಟನ್ ಸಿಟಿ, ಹೈಟೆಕ್ ಸಿಟಿಯಲ್ಲಿ ಕಾನೂನು ಸುವ್ಯವಸ್ಥೆ ಧಕ್ಕೆ ತಂದು, ಅಟ್ಟಹಾಸಗೈವ ಕ್ರಿಮಿಗಳಿಗೆ ಬ್ರೇಕ್ ಹಾಕಲು ಬೆಂಗಳೂರು ಖಾಕಿ ಪಡೆ ಮತ್ತಷ್ಟು ಅಪ್ ಗ್ರೇಡ್ ಆಗಿದೆ. ಮಹಿಳೆಯರು ಮಕ್ಕಳ ಸುರಕ್ಷತೆಗಾಗಿ ದೇಶದಲ್ಲಿ ಮೊದಲ ಬಾರಿಗೆ ಸೇಫ್ ಸಿಟಿ ಯೋಜನೆಯಡಿ ಸುಸಜ್ಜಿತ ಬಹುಮಹಡಿ ಕಮಾಂಡ್ ಸೆಂಟರ್ (Command and Control Centre) ನಿರ್ಮಾಣವಾಗಿದೆ. ಈ ನೂತನ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು ಉದ್ಘಾಟನೆ ಮಾಡಿದರು ಕಮಾಂಡ್ ಸೆಂಟರ್ ವಿಶೇಷವೇನು ? ಕಮಾಂಡ್ ಸೆಂಟರ್ನಲ್ಲಿ ಸಿಬ್ಬಂದಿಗಳು ದಿನದ 24 ಗಂಟೆಗಳು ಹದ್ದಿನ ಕಣ್ಣಿಡಲಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಮಹಿಳೆಯರ ಮೇಲೆ ಕಿರುಕುಳ, ಅಸಭ್ಯ ವರ್ತನೆ, ಚುಡಾಯಿಸುವುದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ಸೇರಿದಂತೆ ಕಾನೂನು ಸುವ್ಯವಸ್ಥೆ ಧಕ್ಕೆಯಾಗುವ ಘಟನೆಗಳು ನಡೆದರೆ ಅತ್ಯಾಧುನಿಕ ಸಿಸಿ ಕ್ಯಾಮರಗಳು ವಿಡಿಯೋ ಸೆರೆಹಿಡಿದು ಕೂಡಲೇ ಆಯಾ ಪೊಲೀಸ್ ಠಾಣೆಗಳ ಹೊಯ್ಸಳ ಸಿಬ್ಬಂದಿಗೆ ಮಾಹಿತಿ ರವಾನಿಸಿ ಆರೋಪಿತರನ್ನ ತ್ವರಿತಗತಿಯಲ್ಲಿ ಹಿಡಿಯುವ ಕೆಲಸವಾಗಲಿದೆ. ಪದೇ ಪದೇ ಅಪರಾಧ ಕೃತ್ಯವೆಸಗುವ ಚಾಳಿಯಿರುವ…