Author: AIN Author

ಶಿವಮೊಗ್ಗ: ಬಿಜೆಪಿ ಕತೆ ಮುಗಿದಿದೆ. ಯಾರನ್ನೇ ಅಧ್ಯಕ್ಷರನ್ನಾಗಿ ಮಾಡಿದರೂ ಅವರು ಮತ್ತೆ ಗೆಲ್ಲುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ (Sharanaprakash Patil) ಹೇಳಿದ್ದಾರೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕ ವಿಚಾರವಾಗಿ ಶಿವಮೊಗ್ಗದಲ್ಲಿ ಮಾತನಾಡಿದರು. ಶಾಸಕರನ್ನು ಖರೀದಿಸಿ ಬಿಜೆಪಿಯವರು ರಾಜ್ಯದಲ್ಲಿ ಸರ್ಕಾರ ರಚಿಸಿದ್ದರು. https://ainlivenews.com/did-sending-a-message-to-a-girl-lead-to-murder-what-does-igp-ravikante-gowda-say/ ಬಿಜೆಪಿಯವರು ದೇಶದಲ್ಲಿ ಅದೆಷ್ಟೋ ಚುನಾಯಿತ ಸರ್ಕಾರ ಕೆಡವಿದೆ. ಜನರು ಬಿಜೆಪಿಯನ್ನ ರಿಜೆಕ್ಟ್ ಮಾಡಿದ್ದಾರೆ, ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ. 40 ಪರ್ಸೆಂಟ್ ಸರ್ಕಾರ ಅಂತಾನೆ ಹೆಸರಾಗಿತ್ತು, ಹಣ ಲೂಟಿ ಮಾಡಿದರು ಎಂದರು. ಪಿಎಸ್ಐ ಪರೀಕ್ಷಾ ಹಗರಣ ಬಯಲು ಮಾಡಿದ್ದೇ ಪ್ರಿಯಾಂಕ್ ಖರ್ಗೆ. ಕೆಇಎ ಪರೀಕ್ಷಾ ಅಕ್ರಮ ಸಂಬಂಧ ಆರ್‌.ಡಿ.ಪಾಟೀಲ್‌ನನ್ನು ಬಂಧಿಸಲಾಗಿದೆ. ಆರ್‌.ಡಿ.ಪಾಟೀಲ್‌, ಪ್ರಿಯಾಂಕ್‌ ಖರ್ಗೆಗೆ ನಂಟಿದೆ ಎಂಬ ಬಿಜೆಪಿ ಆರೋಪ ಸುಳ್ಳು ಎಂದರು.

Read More

ಬೆಂಗಳೂರು: ನಗರದಲ್ಲಿ ನಿನ್ನೆ ಒಂದೇ ದಿನ ಪಟಾಕಿ ಸಿಡಿದು ನಾಲ್ವರು ಮಕ್ಕಳು ಸೇರಿದಂತೆ 26 ಜನರಿಗೆ ಗಾಯವಾಗಿದೆ. ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ 22 ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಮಿಂಟೋ ಆಸ್ಪತ್ರೆಯಲ್ಲಿ ನಾಲ್ವರು ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಾರಾಯಣ ನೇತ್ರಾಲಯದ 22 ಜನರಲ್ಲಿ 10 ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ನಾರಾಯಣ ನೇತ್ರಾಲಯ ಮುಖ್ಯಸ್ಥ ರೋಹಿತ್ ಶೆಟ್ಟಿ ಮಾಹಿತಿ ನೀಡಿದ್ದಾರೆ. ಭಾನುವಾರ ಸಂಜೆಯಿಂದಲೇ ಬೆಂಗಳೂರಿನ ಮಿಂಟೋ ಆಸ್ಪತ್ರೆ, ನಾರಾಯಣ ನೇತ್ರಾಲಯದಲ್ಲಿ 20 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ. ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ 4 ಪ್ರಕರಣ ಪೈಕಿ ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ. 10 ವರ್ಷದ ಬಾಲಕಿ ಮತ್ತು 18 ವರ್ಷದ ಯುವಕನ ಕಣ್ಣಿಗೆ ಪೆಟ್ಟು ಬಿದ್ದ ಕಾರಣ ಸರ್ಜರಿ ಮಾಡುವ ಅವಶ್ಯಕತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ. ಇನ್ನೂ, ನಾರಾಯಣ ನೇತ್ರಾಲಯದಲ್ಲಿ ಒಂದೇ ದಿನಕ್ಕೆ 22 ಪ್ರಕರಣ ಪೈಕಿ 10 ಮಂದಿ ಕಣ್ಣಿಗೆ ಗಾಯವಾಗಿದ್ದು 12 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದೆಮ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಇವರಲ್ಲಿ ಇಬ್ಬರಿಗೆ…

Read More

ಗದಗ:- ದೀಪಾವಳಿ ಹಬ್ಬದ ಹಿನ್ನೆಲೆ, ಹೂಗಳಿಗೆ ಬೇಡಿಕೆ ಹೆಚ್ಚಾಗಿದೆ. ಗದಗ ಎಪಿಎಂಸಿ ಹೂವಿನ ಮಾರುಕಟ್ಟೆ ಫುಲ್ ರಶ್ ಆಗಿದ್ದು, ಎಲ್ಲಿ ನೋಡಿದ್ರೂ ಜನವೋ ಜನ. ಹೂಗಳನ್ನು ಕೊಂಡುಕೊಳ್ಳಲು ಜನರು ಮುಗಿಬಿದ್ದಿದ್ದಾರೆ. ಇನ್ನೂ ಹಬ್ಬದ ಹಿನ್ನೆಲೆ, ಚೆಂಡು, ಸೆವಂತಿ, ಗಲಾಟೆ, ಗುಲಾಬಿ ಹೂಗಳ ದರ ಹೆಚ್ಚಾಗಿದೆ. ದುಬಾರಿ ಬರೆಯ ನಡುವೆಯೂ ಸಂಭ್ರಮದ ದೀಪಾವಳಿ ಹಬ್ಬದ ಆಚರಣೆಗೆ ಗದಗ ಜನ ಸಿದ್ದವಾಗುತ್ತಿದ್ದಾರೆ.

Read More

ನೀರಿನ ಬಾಟಲಿಗಳ ಬಳಕೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಪ್ರಯಾಣ ಮಾಡುವಾಗ, ಸಭೆ ಸಮಾರಂಭಗಳಲ್ಲಿ ನಾವು ನೀರಿನ ಬಾಟಲಿಗಳನ್ನು ಖರೀದಿಸುತ್ತೇವೆ. ನೀರಿನ ಬಾಟಲ್ ಕ್ಯಾಪ್‌ಗಳಿಗೆ ನೀಲಿ ಬಣ್ಣದ ಕ್ಯಾಪ್‌ಗಳನ್ನು ಏಕೆ ಬಳಸಲಾಗುತ್ತದೆ ? ಇದರ ಹಿಂದಿನ ಅರ್ಥವೇನು? ಈಗ ಪ್ರತಿಯೊಂದು ಬಣ್ಣದ ಅರ್ಥವನ್ನು ತಿಳಿಯೋಣ. ನೀರಿನ ಬಾಟಲಿಯ ಮೇಲೆ ನೀಲಿ ಬಣ್ಣದ ಕ್ಯಾಪ್ ಇದ್ದರೆ ಖನಿಜಯುಕ್ತ ನೀರನ್ನು ಸೂಚಿಸುತ್ತದೆ. ಈ ನೀಲಿ ಕ್ಯಾಪ್ ನೀರಿನ ಬಾಟಲಿಗಳಲ್ಲಿನ ನೀರು ಖನಿಜಯುಕ್ತ ನೀರು ಎಂದು ಹೇಳಲಾಗುತ್ತದೆ. ಇನ್ನು ಕೆಲವು ಬಾಟಲಿಗಳಿಗೆ ಬಿಳಿ ಮತ್ತು ಹಸಿರು ಬಣ್ಣಗಳ ಕ್ಯಾಪ್ ಗಳಿರುವುದು ಕಂಡು ಬರುತ್ತದೆ. ಆದರೆ ಇದರರ್ಥ ಹಸಿರು ಬಣ್ಣದ ಮುಚ್ಚಳವಿದ್ದರೆ ಬಾಟಲಿಯ ನೀರಿಗೆ ಹೆಚ್ಚುವರಿ ರುಚಿಗಳನ್ನು ಸೇರಿಸಲಾಗಿದೆ. ಕೆಲವು ನೀರಿನ ಬಾಟಲ್ ಕಂಪನಿಗಳು ನೀರಿನ ಜೊತೆಗೆ ಎಲೆಕ್ಟ್ರೋಲೈಟ್‌ಗಳಂತಹ ರುಚಿಗಳನ್ನು ಸೇರಿಸುತ್ತವೆ. ಅಂತಹ ನೀರಿನ ಬಾಟಲಿಗಳ ಮೇಲಿನ ಕವರ್ ಅನ್ನು ನೀವು ನೋಡಿದರೆ, ನಿಮಗೆ ಇದು ಸ್ಪಷ್ಟವಾಗಿ ಅರ್ಥವಾಗುತ್ತದೆ. ನೀರಿಗೆ ಸೇರಿಸಲಾದ ಸುವಾಸನೆಗಳನ್ನು ಅದರಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿರುತ್ತದೆ. ಕೆಲವು…

Read More

ಕಾರವಾರ: ಯಲ್ಲಾಪುರದಲ್ಲಿ ಬೈಎಲೆಕ್ಷನ್ ನಡೆಯುವುದು ನನ್ನ ರಾಜೀನಾಮೆ ಮೇಲೆ ನಿಂತಿದೆ ಎಂದು ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆ ಶಕ್ತಿ, ಧೈರ್ಯ ಇದ್ದಾಗ ರಾಜೀನಾಮೆಯಂತಹ ನಿರ್ಧಾರ ಕೈಗೊಳ್ಳುತ್ತೇನೆ. ನಾನು ಕಾಂಗ್ರೆಸ್ ಸೇರುತ್ತೇನೆ ಎಂದು ಎಲ್ಲಿಯೂ ಬಹಿರಂಗವಾಗಿ ಹೇಳಿಲ್ಲ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕೆಲ ಪದಾಧಿಕಾರಿಗಳನ್ನು ತೆಗೆದಿದ್ದರು. ಈಗ ವಾಪಸ್ ಅದೇ ಸ್ಥಾನ ನೀಡಲಾಗಿದೆ, ಇದರಿಂದ ಬೇಸರವಾಗಿದೆ ಎಂದು ಹೇಳಿದ್ದಾರೆ. https://ainlivenews.com/did-sending-a-message-to-a-girl-lead-to-murder-what-does-igp-ravikante-gowda-say/ ಪಕ್ಷದ ತೀರ್ಮಾನವಾಗಿದ್ದರಿಂದ ಪ್ರಶ್ನಿಸುವ ಸ್ಥಾನದಲ್ಲಿ ನಾನಿಲ್ಲ. ಪದಾಧಿಕಾರಿ ಹುದ್ದೆಯಿಂದ ತೆಗೆದಿದ್ದು ಏಕೆ? ಮತ್ತೆ ತೆಗೆದುಕೊಂಡಿದ್ದು ಏಕೆ? ಇದನ್ನು ಯಾರು ಮಾಡಿದ್ದಾರೋ ಅವರು ಅರ್ಥ ಮಾಡಿಕೊಳ್ಳುವ ಅಗತ್ಯವಿದೆ. ಕ್ಷೇತ್ರದ ಜನತೆ ಹೊರತಾಗಿ ನನ್ನನ್ನು ಯಾರೂ ಕಡೆಗಣಿಸಲು ಸಾಧ್ಯವಿಲ್ಲ ಎಂದಿದ್ದಾರೆ. ನಾನು ಲೀಡರ್ ಬೇಸ್ ರಾಜಕಾರಣಿ ಅಲ್ಲ, ಕೇಡರ್ ಬೇಸ್ ರಾಜಕಾರಣಿ. ಜನ ನನ್ನನ್ನು ಕಡೆಗಣಿಸಬಹುದು, ನಾನು ಯಾವ ನಾಯಕರಿಗೂ ಹೆದರುವುದಿಲ್ಲ. ಬರ ಹಿನ್ನೆಲೆಯಲ್ಲಿ ಈ ಬಾರಿ ಕದಂಬೋತ್ಸವ ನಡೆಸುವ ಸಾಧ್ಯತೆ ಕ್ಷೀಣಿಸಿದೆ ಎಂದರು.…

Read More

ಭಾರತದ ನಾಯಕ ರೋಹಿತ್‌ ಶರ್ಮಾ, ಏಕದಿನ ಕ್ರಿಕೆಟ್‌ನ ಕ್ಯಾಲೆಂಡರ್‌ ವರ್ಷದಲ್ಲಿ ಗರಿಷ್ಠ ಸಿಕ್ಸರ್‌ ಸಿಡಿಸಿದ ದಾಖಲೆ ಬರೆದಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾನುವಾರ ನೆದರ್‌ಲೆಂಡ್ಸ್‌ ವಿರುದ್ಧದ ಪಂದ್ಯದಲ್ಲಿ ರೋಹಿತ್‌ 2 ಸಿಕ್ಸರ್‌ ಸಿಡಿಸಿದ್ದು, ಈ ವರ್ಷದ ಸಿಕ್ಸರ್‌ ಗಳಿಕೆಯನ್ನು 59ಕ್ಕೆ ಏರಿಸಿದರು. ಈ ಮೂಲಕ ದಕ್ಷಿಣ ಆಫ್ರಿಕಾದ ಎಬಿ ಡಿ ವಿಲಿಯರ್ಸ್‌ ದಾಖಲೆಯನ್ನು ಮುರಿದರು. ವಿಲಿಯರ್ಸ್‌ 2015ರಲ್ಲಿ 58 ಸಿಕ್ಸರ್‌ ಸಿಡಿಸಿದ್ದರು. ಕ್ರಿಸ್‌ ಗೇಲ್‌ 2019ರಲ್ಲಿ 56 ಸಿಕ್ಸರ್‌ ಬಾರಿಸಿದ್ದರು. ವಿಶ್ವಕಪ್‌ನಲ್ಲೂ ದಾಖಲೆ: ರೋಹಿತ್‌ ಈ ವಿಶ್ವಕಪ್‌ನಲ್ಲೇ 23 ಸಿಕ್ಸರ್‌ ಸಿಡಿಸಿದ್ದು, ವಿಶ್ವಕಪ್‌ ಆವೃತ್ತಿಯೊಂದರಲ್ಲಿ ಗರಿಷ್ಠ ಸಿಕ್ಸರ್‌ ಬಾರಿಸಿದ ನಾಯಕ ಎಂಬ ಖ್ಯಾತಿಗೆ ಪಾತ್ರರಾದರು. 2019ರಲ್ಲಿ ಇಂಗ್ಲೆಂಡ್ ನಾಯಕ ಇಯಾನ್‌ ಮೊರ್ಗನ್‌ 22 ಸಿಕ್ಸರ್‌ ಬಾರಿಸಿದ್ದರು. ರೋಹಿತ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 100 ಅರ್ಧಶತಕಗಳ ಮೈಲಿಗಲ್ಲನ್ನೂ ತಲುಪಿದರು. ಟೆಸ್ಟ್‌ನ 88 ಇನ್ನಿಂಗ್ಸ್‌ಗಳಲ್ಲಿ 16, 252 ಏಕದಿನದಲ್ಲಿ 55 ಹಾಗೂ 140 ಟಿ20 ಇನ್ನಿಂಗ್ಸ್‌ಗಳಲ್ಲಿ 29 ಫಿಫ್ಟಿ ಬಾರಿಸಿದ್ದಾರೆ. ಈ ಮೂಲಕ 100 ಫಿಫ್ಟಿ ಬಾರಿಸಿದ…

Read More

ಬೆಂಗಳೂರು:ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆ ಆಗಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಅವರು ಇಂದು ಮಾಜಿ ಪ್ರಧಾನಿ ಮತ್ತು ಕೆಲವು ಮಾಜಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲಿದ್ದಾರೆ. ಕರ್ನಾಟಕ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಇಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಎಸ್‌ಎಂ ಕೃಷ್ಣ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲಿದ್ದಾರೆ. ಮಾಜಿ ಸಿಎಂ-ಪಿಎಂ ಭೇಟಿ ವೇಳೆ ಬಿವೈ ವಿಜಯೇಂದ್ರ ಅವರು ಮಾತುಕತೆ ನಡೆಸಿ ಹೊಸ ಜವಾಬ್ದಾರಿ ನಿರ್ವಹಣೆ ಕುರಿತು ಸಲಹೆಗಳನ್ನು ಪಡೆಯುವ ಸಾಧ್ಯತೆಗಳು ಇವೆ ಎನ್ನಲಾಗಿದೆ. ಶುಕ್ರವಾರ ಬಿವೈ ವಿಜಯೇಂದ್ರ ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷ ಎಂದು ಹೈಕಮಾಂಡ್ ಘೋಷಿಸಿ ಆದೇಶಿಸಿತು. ಕೇಂದ್ರದ ವರಿಷ್ಠರ ಈ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿವೈ ವಿಜಯೇಂದ್ರರ ಆಯ್ಕೆ ನಿರ್ಧಾರವು ರಾಜ್ಯ ಬಿಜೆಪಿ ಪಾಳಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಯಡಿಯೂರಪ್ಪನವರ ಜತೆ ಗುರುತಿಸಿಕೊಂಡ ಒಂದಷ್ಟು ನಾಯಕರು ಮಾತ್ರ ನೂತನ ರಾಜ್ಯಾಧ್ಯಕ್ಷರಿಗೆ…

Read More

ಸಿದ್ದಾಪುರ: ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಆನಂದಪುರ ಗ್ರಾಮದ ಶ್ರೀ ಈಶ್ವರ ದೇವಸ್ಥಾನದ ಬಳಿ ಪುರಾತನ ಆಭರಣಗಳು ಹಾಗೂ ನಿಧಿ ಪತ್ತೆಯಾಗಿದೆ. ವಿರಾಜಪೇಟೆ ಸಿದ್ದಾಪುರ ಮಾರ್ಗ ಮಧ್ಯದ ಅಮ್ಮತಿ ಸಮೀಪದ ಮುಖ್ಯ ರಸ್ತೆಯಲ್ಲಿರುವ ಪುರಾತನ ಈಶ್ವರ ದೇವಸ್ಥಾನವು ಟಾಟಾ ಕಾಫಿ ಸಂಸ್ಥೆಗೆ ಸೇರಿದ ಜಾಗದಲ್ಲಿ ದೇವಸ್ಥಾನವಿದ್ದು ತೋಟ ಕಾರ್ಮಿಕರು ಕೆಲಸ ನಿರ್ವಹಿಸುತಿದ್ದ ವೇಳೆ ಭೂಮಿಯಡಿಯಲ್ಲಿ ಕುಡಿಕೆಯಲ್ಲಿ ಆಭರಣಗಳು ಪತ್ತೆಯಾಗಿದೆ ಎಂದು ಹೇಳಲಾಗಿದೆ. ತೋಟದ ವ್ಯವಸ್ಥಾಪಕರ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಸಿದ್ದಾಪುರ ಪೊಲೀಸ್ ಸಬ್ -ಇನ್ಸ್ ಪೆಕ್ಟರ್ ಪಿ.ಎಂ.ರಾಘವೇಂದ್ರ ಹಾಗೂ ಪೊಲೀಸ್ ಕಾನ್ಸ್‌ಟೇಬಲ್ ಗಳ ತಂಡ ತಹಶಿಲ್ದಾರರ್ ಹಾಗೂ ಕಂದಾಯ ಅಧಿಕಾರಿಗಳ ಸಮ್ಮುಖದಲ್ಲಿ ಆಭರಣಗಳನ್ನು ಸಂಗ್ರಹಿಸಿ ಮಹಜರು ನಡೆಸಿ ನಿಯಮ ರೀತ್ಯ ಕ್ರಮಗಳ ಬಳಿಕ ಜಿಲ್ಲಾಧಿಕಾರಿಗಳ ವಶಕ್ಕೆ ನೀಡಲಾಯಿತ್ತು.

Read More

ರಾಂಚಿ: ವೇಗವಾಗಿ ಚಲಿಸುತ್ತಿದ್ದ ರೈಲೊಂದು (Train) ಹಠಾತ್ ಆಗಿ ನಿಂತ ಪರಿಣಾಮ ಇಬ್ಬರು ಪ್ರಯಾಣಿಕರು ಸಾವಿಗೀಡಾದ ಘಟನೆ ಜಾರ್ಖಂಡ್‌ (Jharkhand) ಪರ್ಸಾಬಾದ್ ಎಂಬಲ್ಲಿ ನಡೆದಿದೆ. ಪುರಿ-ನವದೆಹಲಿ ನಡುವೆ ಸಂಚರಿಸುವ ಪುರುಷೋತ್ತಮ್ ಎಕ್ಸ್‌ಪ್ರೆಸ್ ರೈಲಿಗೆ ವಿದ್ಯುತ್ ಸರಬರಾಜಾಗುವುದು ತಕ್ಷಣ ನಿಂತಿದೆ. ಈ ವೇಳೆ ವಿದ್ಯುತ್ ತಂತಿ ತುಂಡಾಗಿರುವುದು ಗಮನಕ್ಕೆ ಬಂದಿದ್ದು ಚಾಲಕ ಎಮರ್ಜನ್ಸಿ ಬ್ರೇಕ್ ಹಾಕಿದ್ದಾನೆ. ಈ ವೇಳೆ ಸುಮಾರು 130 ಕಿಮೀ ವೇಗದಲ್ಲಿ ಚಲಿಸುತ್ತಿದ್ದ ರೈಲು ತಕ್ಷಣ ನಿಂತ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.‌  https://ainlivenews.com/did-sending-a-message-to-a-girl-lead-to-murder-what-does-igp-ravikante-gowda-say/ ಅಪಘಾತದ (Accident) ನಂತರ ನಾಲ್ಕು ಗಂಟೆಗಳ ಕಾಲ ರೈಲು ಸಂಚಾರ ಸ್ಥಗಿತಗೊಂಡಿತ್ತು. ಬಳಿಕ ಪುರುಷೋತ್ತಮ್ ಎಕ್ಸ್‌ಪ್ರೆಸ್ ರೈಲನ್ನು ಅಪಘಾತ ಸ್ಥಳದಿಂದ ಡೀಸೆಲ್ ಎಂಜಿನ್ ಮೂಲಕ ಗೋಮೊಹ್‍ಗೆ ತರಲಾಯಿತು. ನಂತರ ಎಲೆಕ್ಟ್ರಿಕ್ ಎಂಜಿನ್ ಮೂಲಕ ದೆಹಲಿಗೆ ಕಳುಹಿಸಲಾಯಿತು ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯುತ್ ತಂತಿ ತುಂಡಾಗಲು ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಈ…

Read More

ಲಕ್ನೋ:- ಇಲ್ಲಿನ ಗೋಪಾಲಬಾಗ್‌ನಲ್ಲಿರುವ ಪಟಾಕಿ ಮಾರುಕಟ್ಟೆಯ ಕೆಲವು ಅಂಗಡಿಗಳಲ್ಲಿ ನಿನ್ನೆ ಅಂದರೆ ಭಾನುವಾರ ಬೆಂಕಿ ಕಾಣಿಸಿಕೊಂಡು ಭಾರೀ ಅವಘಡ ಉಂಟಾಗಿದೆ. ಗೋಪಾಲಬಾಗ್ ಪ್ರದೇಶದಲ್ಲಿ ನಡೆದ ಈ ಭೀಕರ ದುರ್ಘಟನೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ ಒಂಭತ್ತು ಮಂದಿ ಸುಟ್ಟು ಕರಕಲಾಗಿದ್ದು, ಏಳು ಪಟಾಕಿ ಅಂಗಡಿಗಳು ಸಂಪೂರ್ಣ ಬೆಂಕಿಗಾಹುತಿಯಾಗಿದೆ ಎಂದು ತಿಳಿದು ಬಂದಿದೆ ಪೊಲೀಸ್ ಮೂಲಗಳ ಪ್ರಕಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ರಾಯಾದ ಗೋಪಾಲ್‌ಬಾಗ್‌ನಲ್ಲಿರುವ ತಾತ್ಕಾಲಿಕ ಪಟಾಕಿ ಮಾರುಕಟ್ಟೆಯಲ್ಲಿ ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದ್ದು, ಈ ಏಳು ಅಂಗಡಿಗಳಲ್ಲಿ ಪಟಾಕಿ ಮಾರಾಟಕ್ಕೆ ಅನುಮತಿ ನೀಡಲಾಗಿದೆ ಎಂದು ಎಂದು ಮಹಾವನ್ ಪ್ರದೇಶದ ಅಧಿಕಾರಿ ಅಲೋಕ್ ಸಿಂಗ್ ಹೇಳಿದ್ದಾರೆ. ಘಟನೆ ವೇಳೆ ಪಟಾಕಿ ಮಾರುಕಟ್ಟೆಯಲ್ಲಿ ಜನಸಂದಣಿ ಇದ್ದಿದ್ದು, ಜನರು ಪಟಾಕಿ ಖರೀದಿಯಲ್ಲಿ ನಿರತರಾಗಿದ್ದರು. ಆರಂಭದಲ್ಲಿ ಒಂದು ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಬೆಂಕಿ ಹರಡಲು ಪ್ರಾರಂಭಿಸಿ ಅಕ್ಕಪಕ್ಕದ ಅಂಗಡಿಗಳಿಗೆ ಬೆಂಕಿ ಆವರಿಸಿತು ಎಂದು ಅಲೋಕ್ ಸಿಂಗ್ ಹೇಳಿದರು. ಘಟನೆಯ ನಂತರ…

Read More