ಸ್ಪಿನ್ ಬೌಲಿಂಗ್ ತಂತ್ರವನ್ನು ಮರು ಮೌಲ್ಯಮಾಪನ ಮಾಡುವ ಬಗ್ಗೆ ನಾನು ನೀಡಿದ್ದ ಸಲಹೆಯನ್ನು ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಆಝಮ್ ಹಾಗೂ ಪಿಸಿಬಿ ಕ್ರಿಕೆಟ್ ನಿರ್ದೇಶದ ಮಿಕ್ಕಿ ಆರ್ಥರ್ ಅವರು ನಿರಾಕರಿಸಿದ್ದರು ಶನಿವಾರ ಇಂಗ್ಲೆಂಡ್ ವಿರುದ್ಧ ಪಾಕಿಸ್ತಾನ ತಂಡ 93 ರನ್‌ಗಳಿಂದ ಸೋಲು ಅನುಭವಿಸಿತು. ಆ ಮೂಲಕ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ಸ್ ರೇಸ್‌ನಿಂದ ಅಧಿಕೃತವಾಗಿ ಹೊರ ನಡೆಯಿತು. ಒಟ್ಟಾರೆ ಆಡಿದ್ದ 9 ಪಂದ್ಯಗಳಿಂದ 4ರಲ್ಲಿ ಗೆಲುವು ಪಡೆಯುವ ಮೂಲಕ ಬಾಬರ್ ಆಝಮ್ ಪಡೆ 5ನೇ ಸ್ಥಾನದೊಂದಿಗೆ ಏಕದಿನ ವಿಶ್ವಕಪ್ ಟೂರ್ನಿಯ ಅಭಿಯಾನವನ್ನು ಮುಗಿಸಿತು. ಸಂದರ್ಶನವೊಂದರಲ್ಲಿ ಮಾತನಾಡಿದ ಮಿಸ್ಬಾ ಉಲ್ ಹಕ್, “ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಮುಖ್ಯಸ್ಥ ಝಕಾ ಅಶ್ರಫ್ ಅವರು ಏಕದಿನ ವಿಶ್ವಕಪ್ ನಿಮಿತ್ತ ನನ್ನ ಮತ್ತು ಮೊಹಮದ್ ಹಫೀಝ್ ಬಳಿ ಸಲಹೆ ಕೇಳಿದ್ದರು. ಅದರಂತೆ ನಾನು, ಏಷ್ಯಾ ಕಪ್‌ಗೂ ಮುನ್ನ ಶದಾಬ್ ಖಾನ್ ಮತ್ತು ಮೊಹಮ್ಮದ್ ನವಾಝ್ ಅವರ ಜೊತೆ ಮತ್ತೊಬ್ಬ ಸ್ಪಿನ್ನರ್ ಅಗತ್ಯವಿದೆ ಎಂದು ಹೇಳಿದ್ದೆ,”…
Author: AIN Author
ರಾಜಸ್ಥಾನ: ಅಪ್ರಾಪ್ತ ಬಾಲಕಿ ಮೇಲೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅತ್ಯಾಚಾರವೆಸಗಿದ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯ ಲಾಲೋಟ್ ಪ್ರದೇಶದಲ್ಲಿ ನಡೆದಿದೆ. ಭೂಪೇಂದ್ರ ಸಿಂಗ್ ಎಂಬ ಸಬ್ ಇನ್ಸ್‌ಪೆಕ್ಟರ್ 4 ವರ್ಷದ ಬಾಲಕಿಯನ್ನು ಮಧ್ಯಾಹ್ನ ತನ್ನ ಕೋಣೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆಯುವ ಮೊದಲು ಸ್ಥಳೀಯ ನಿವಾಸಿಗಳು ಥಳಿಸಿದ್ದಾರೆ. ಬಳಿಕ ರಾಹುವಾಸ್ ಠಾಣೆಗೆ ಮುತ್ತಿಗೆ ಹಾಕಿ, ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಬಜರಂಗ್ ಸಿಂಗ್, ”ಚುನಾವಣಾ ಕರ್ತವ್ಯದಲ್ಲಿದ್ದ ಸಬ್ ಇನ್ಸ್‌ಪೆಕ್ಟರ್ ಭೂಪೇಂದ್ರ ಸಿಂಗ್ ಮಧ್ಯಾಹ್ನ ಬಾಲಕಿಯನ್ನು ತನ್ನ ಕೋಣೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಸದ್ಯ ಬಾಲಕಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. https://ainlivenews.com/did-sending-a-message-to-a-girl-lead-to-murder-what-does-igp-ravikante-gowda-say/ ಆರೋಪಿಯನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ” ಎಂದು ತಿಳಿಸಿದ್ದಾರೆ. ”ಸ್ಥಳೀಯ ನಿವಾಸಿಗಳು ನೀಡಿದ ದೂರಿನ ಆಧಾರದ ಮೇಲೆ ಭೂಪೇಂದ್ರ ಎಂದು ಗುರುತಿಸಲಾದ ಎಸ್‌ಐ ವಿರುದ್ಧ ರಾಹುವಾಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರು…
ನಮ್ಮ ಆಹಾರ ಸೇವನೆಯಲ್ಲಿ ಕೊಂಚ ವ್ಯತ್ಯಾಸವಾದರೂ ಅದರ ಅದು ಹೊಟ್ಟೆಯ ಮೇಲೆ ಪರಿಣಾಮ ಬೀರುತ್ತದೆ. ಆಹಾರ ಹೆಚ್ಚು ಸೇವಿಸದರೂ ಕಷ್ಟ, ಕಡಿಮೆ ಸೇವಿಸಿದರೂ ಕಷ್ಟ. ಹೀಗಾಗಿ ಸಮತೋಲಿತ ಆಹಾರವನ್ನು ಸೇವನೆ ಮಾಡುವುದು ಮುಖ್ಯವಾಗಿರುತ್ತದೆ. ಆದರೂ ಕೆಲವೊಮ್ಮೆ ತಿಂದ ಆಹಾರ ಅಜೀರ್ಣವಾಗಿ ಹೊಟ್ಟೆ ನೋವು ಕಾಡಬಹುದು. ಅಜೀರ್ಣವಾದರೆ ಹೊಟ್ಟೆ ಮುರಿಯುವುದು, ವಾಕರಿಕೆಯಂತಹ ಸಮಸ್ಯೆಗಳೂ ಉಂಟಾಗುತ್ತದೆ. ಇದಕ್ಕೇನು ಭಯಪಡುವ ಅಗತ್ಯವಿಲ್ಲ, ಮನೆಮದ್ದಿನಿಂದಲೇ ಶಮನ ಮಾಡಿಕೊಳ್ಳಬಹುದು. ಸೋಂಪಿನ ಕಾಳುಗಳು ಊಟದ ಬಳಿಕ ದಿನನಿತ್ಯ ಸೋಂಪಿನ ಕಾಳುಗಳನ್ನು ಸೇವನೆ ಮಾಡುವುದರಿಂದ ಅಜೀರ್ಣವನ್ನು ಶಮನ ಮಾಡಿಕೊಳ್ಳಬಹುದಾಗಿದೆ. ಇದು ಹೊಟ್ಟೆ ಸೆಳೆತ, ವಾಕರಿಕೆ ಮತ್ತು ಉಬ್ಬುವಿಕೆಯನ್ನು ಸಹ ಸರಾಗಗೊಳಿಸುತ್ತದೆ. ಸೋಂಪಿನ ಕಾಳುಗಳು ಫೆನ್‌ಕೋನ್ ಮತ್ತು ಎಸ್ಟ್ರಾಗೋಲ್ ಎಂಬ ತೈಲ ಸಂಯುಕ್ತಗಳನ್ನು ಹೊಂದಿದ್ದು ಅದು ಕರುಳಿನ ಅನಿಲವನ್ನು ಹೊರಹಾಕಲು ಸಹಾಯ ಮಾಡುತ್ತದೆ, ಜೀರ್ಣಕಾರಿ ರಸಗಳ ಉತ್ಪಾದನೆಯನ್ನು ಹೆಚ್ಚಿಸುತ್ತದೆ ಮತ್ತು ಆಂಟಿಸ್ಪಾಸ್ಮೊಡಿಕ್ ಗುಣಲಕ್ಷಣಗಳನ್ನು ಹೊಂದಿದೆ. ಅಡುಗೆ ಸೋಡ ಅಡುಗೆ ಸೋಡಾವು ಅಜೀರ್ಣವನ್ನು ಸರಿಪಡಿಸುತ್ತದೆ. ಅಲ್ಲದೆ ಹೊಟ್ಟೆಯುಬ್ಬರ, ಗ್ಯಾಸ್ಟ್ರಿಕ್ ಸಮಸ್ಯೆಯನ್ನೂ ನಿವಾರಣೆ ಮಾಡುತ್ತದೆ. ಅದಕ್ಕಾಗಿ…
ಪ್ರವಾಸ ಹೋಗುವುದೆಂದರೆ ಯಾರಿಗಿಷ್ಟ ಇರೋದಿಲ್ಲ ಹೇಳಿ .. ಅದು ಬೇರೆ ಬೇರೆ ಹೊಸ ಜಾಗ ನೋಡೋದು ಅಂದ್ರೆ ತುಂಬಾ ಜನಕ್ಕೆ ಏನೋ ಖುಷಿ . ದೇಶ ಸುತ್ತಿನೋಡು ಕೋಶ ಓದಿ ನೋಡು ಅನ್ನುವ ಗಾದೆ ಮಾತಿನ ಹಾಗೆ ದೇಶ ವಿದೇಶಗಳಿಗೆ ಹೋಗೋದು ಅಂದ್ರೆ ಕೆಲವರಿಗೆ ಇಷ್ಟ. ನಾವು ನಿಮಗೆ ಹೇಳ್ತೀವಿ ನೋಡಿ ಅತ್ಯಂತ ಸುಂದರ ಪ್ರವಾಸಿ ತಾಣಗಳ ಬಗ್ಗೆ ತಿಳಿಯೋಣ. ಸಾಂಪ್ರದಾಯಿಕ ಪ್ರವಾಸಿ ಆಕರ್ಷಣೆಗಳು ಒಂದು ಕಾರಣಕ್ಕಾಗಿ ಜನಪ್ರಿಯವಾಗಿವೆ. ಐಫೆಲ್ ಟವರ್‌ನ ಮುಂದೆ ಫೋಟೋ ಸ್ನ್ಯಾಪ್ ಮಾಡುವುದು ಅಥವಾ ಐಸ್‌ಲ್ಯಾಂಡ್‌ನ ಬ್ಲೂ ಲಗೂನ್‌ನಲ್ಲಿ ಸ್ನಾನ ಮಾಡುವುದು ಸ್ವಲ್ಪ ಕ್ಲೀಷೆ ಆಗಿರಬಹುದು, ಆದರೆ ಅಂತಿಮವಾಗಿ ಪೋಸ್ಟ್‌ಕಾರ್ಡ್‌ನಲ್ಲಿ ಬದಲಿಗೆ ಪ್ರಖ್ಯಾತ ಹೆಗ್ಗುರುತನ್ನು ಅಥವಾ ನೈಸರ್ಗಿಕ ಅದ್ಭುತವನ್ನು ವೈಯಕ್ತಿಕವಾಗಿ ನೋಡುವುದರಲ್ಲಿ ಏನಾದರೂ ಶಕ್ತಿಯುತವಾಗಿದೆ ಚೀನಾ: ಚೀನಾದ ಮಹಾಗೋಡೆ 13,000 ಮೈಲುಗಳಷ್ಟು ಉದ್ದವಿರುವ, ಚೀನಾದ ಮಹಾಗೋಡೆಯು UNESCO ವಿಶ್ವ ಪರಂಪರೆಯ ತಾಣವಾಗಿದೆ ಮತ್ತು 2007 ರಲ್ಲಿ ವಿಶ್ವದ ಹೊಸ ಏಳು ಅದ್ಭುತಗಳಲ್ಲಿ ಒಂದಾಗಿ ಆಯ್ಕೆಯಾಗಿದೆ. ಗ್ರೇಟ್ ವಾಲ್‌ನ…
ಮುಂಬೈ: ಅಕ್ಟೋಬರ್ 5ರಿಂದ ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿ ಈಗ ನಿರ್ಣಾಯಕ ಹಂತಕ್ಕೆ ಬಂದಿದ್ದು, ಸೆಮಿಫೈನಲ್ ಕದನದ ವಿವರವನ್ನು ಐಸಿಸಿ ಅಧಿಕೃತವಾಗಿ ಪ್ರಕಟಿಸಿದೆ. ಆರಂಭದಿಂದ ಇಲ್ಲಿಯವರೆಗೂ ಒಂದು ಪಂದ್ಯವನ್ನು ಸೋಲದೆ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಭಾರತ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಸೆಮಿಫೈನಲ್ ಪಂದ್ಯದಲ್ಲಿ ಕಾದಾಟ ನಡೆಸಲಿವೆ. ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆಯುವಲ್ಲಿ ಪಾಕಿಸ್ತಾನ ವಿಫಲವಾಗಿದ್ದು, ಮನೆ ಕಡೆ ಹೋಗುವುದು ಖಚಿತವಾಗಿದೆ. ಪಾಕಿಸ್ತಾನ ವಿರುದ್ಧ ಇಂಗ್ಲೆಂಡ್ 337 ರನ್ಗಳ ಬೃಹತ್ ಮೊತ್ತ ಪೇರಿಸಿದ್ದರಿಂದ ಪಾಕಿಸ್ತಾನ ಸೆಮಿಫೈನಲ್ ಪ್ರವೇಶವನ್ನು ತಪ್ಪಿಸಿಕೊಂಡಿತು. ಭಾರತ ಇಂದು ನೆದರ್ಲ್ಯಾಂಡ್ಸ್ ವಿರುದ್ಧ ಸೆಣಸಲಿದೆ. ಆದಾಗ್ಯೂ, ಈ ಪಂದ್ಯ ಈಗಾಗಲೇ ಸೆಮಿಫೈನಲ್ ಪ್ರವೇಶಿಸಿರುವ ಭಾರತದ ಮೇಲೆ ಯಾವುದೇ ಪರಿಣಾಮ ಬೀರಲ್ಲ. ನವೆಂಬರ್ 15ರಂದು ಮುಂಬೈಯಲ್ಲಿ ಭಾರತ Vs ನ್ಯೂಜಿಲೆಂಡ್ ವಿರುದ್ಧ ಮೊದಲ ಸೆಮಿಫೈನಲ್ ಪಂದ್ಯ ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ. ನವೆಂಬರ್ 16 ರಂದು ಕೋಲ್ಕತ್ತಾದಲ್ಲಿ ದಕ್ಷಿಣ ಆಫ್ರಿಕಾ Vs ಆಸ್ಟ್ರೇಲಿಯಾ ನಡುವೆ…
ಬೆಂಗಳೂರು:- ದೀಪಾವಳಿ ಹಬ್ಬದ ದಿನದಂದೆ ಫರ್ನೀಚರ್ ಶೋ ರೂಂಗೆ ಬೆಂಕಿ ಬಿದ್ದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಜರುಗಿದೆ. ಬೆಂಗಳೂರು ಹೊರಮಾವು ಔಟರ್ ರಿಂಗ್ ರೋಡ್ ನಲ್ಲಿನ ಸ್ಟಾನ್ಲಿ ಫರ್ನೀಚರ್ ಶೋರೂಂ ನಲ್ಲಿ ಅವಘಡ ಸಂಭವಿಸಿದೆ. ಐದು ಅಂತಸ್ತಿನ ಬಿಲ್ಡಿಂಗ್ ನಲ್ಲಿ ಮೂರು ಕಂಪನಿಗಳಿದ್ದವು. ಈ ಪೈಕಿ ಫರ್ನೀಚರ್ ಶೋರೂಂ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ನೆಲಮಹಡಿ ಹಾಗೂ ಮೊದಲನೇ ಮಹಡಿಯಲ್ಲಿ ಫರ್ನೀಚರ್ ಶೋರೂಂ ಇದ್ದು, ರಾತ್ರಿ 12 ಗಂಟೆ ಸುಮಾರಿಗೆ ಘಟನೆ ಜರುಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮೂವರು ಸೆಕ್ಯೂರಿಟಿ ಗಾರ್ಡ್ ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಟ್ಟಡದಲ್ಲಿ ಸಿಲುಕಿದ್ದ ಸೆಕ್ಯೂರಿಟಿ ಗಾರ್ಡ್ ಗಳನ್ನ ಅಗ್ನಿಶಾಮಕದಳ ಸಿಬ್ಬಂಧಿ ರಕ್ಷಣೆ ಮಾಡಿದ್ದಾರೆ. ಘಟನೆಯಲ್ಲಿ ಫರ್ನಿಚರ್ ಶೋರೂಂ ಸಂಪೂರ್ಣ ಭಸ್ಮವಾಗಿದೆ. ಉಳಿದಂತೆ ಕೋಚಿಂಗ್ ಸೆಂಟರ್ ಹಾಗೂ ಐಟಿ ಕಂಪನಿ ಸಣ್ಣಪುಟ್ಟ ವಸ್ತುಗಳು ಬೆಂಕಿಗೆ ಆಹುತಿ ಆಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಢ ನಡೆದಿರುವ ಶಂಕೆ ವ್ಯಕ್ತವಾಗಿದೆ. ಎರಡನೇ ಮಹಡಿಯಲ್ಲಿ ಕಾಮೆಡ್ ಕೋಂಚಿಂಗ್ ಸೆಂಟರ್…
ಬೆಂಗಳೂರು:- ಹೆಚ್ ಡಿಕೆಗೂ, ಗ್ಯಾರಂಟಿ ಯೋಜನೆಗಳಿಗೂ ಏನು ಸಂಬಂಧ ಎಂದು DCM ಡಿಕೆ ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ. ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುತ್ತಿಲ್ಲ ಎಂಬ ಕುಮಾರಸ್ವಾಮಿ ಆರೋಪ ಕುರಿತು ಪ್ರತಿಕ್ರಿಯಿಸಿ, “ಕುಮಾರಸ್ವಾಮಿ ಅವರಿಗೂ ಗ್ಯಾರಂಟಿ ಯೋಜನೆಗಳಿಗೂ ಏನು ಸಂಬಂಧ?. ಅವರಿಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಏನು ಗೊತ್ತಿದೆ” ಎಂದು ಪ್ರಶ್ನಿಸಿದ್ದಾರೆ. ಕುಮಾರಸ್ವಾಮಿ ಅವರಿಗೆ ಬಡ ಜನತೆಯ ನೋವು ಗೊತ್ತಿದ್ದರೆ ಹೀಗೆ ಮಾತನಾಡುತ್ತಿರಲಿಲ್ಲ. ಅವರೂ ಒಬ್ಬ ನಾಯಕರು, ಆರೋಪ ಮಾಡಲಿ ತೊಂದರೆಯಿಲ್ಲ. ಗ್ಯಾರಂಟಿ ಯೋಜನೆಗಳಿಂದ ಯಾರಿಗೆ ಒಳ್ಳೆಯದಾಗಬೇಕಿತ್ತೊ ಅವರಿಗೆ ಅದು ತಲುಪಿ, ಸಂತೋಷವಾಗಿದ್ದಾರೆ. ಕುಮಾರಸ್ವಾಮಿ ಅವರೇನು ಫಲಾನುಭವಿಗಳೂ ಅಲ್ಲ, ಅದರ ಬಗ್ಗೆ ಅವರಿಗೆ ಚಿಂತನೆಯೇ ಇಲ್ಲ. ಪಾಪ ಅವರಿಗೆ ಅವರ ಪಂಚರತ್ನ ಯೋಜನೆಗಳನ್ನು ಜಾರಿ ಮಾಡಲು ಅವಕಾಶ ಆಗಲೇ ಇಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ತಲುಪಿದೆಯೋ, ಇಲ್ಲವೊ ಎನ್ನುವುದನ್ನು ಅವರು ಮತದಾರರ ಬಳಿ ಕೇಳಿ ತಿಳಿದುಕೊಳ್ಳಬೇಕು” ಎಂದು ತಿರುಗೇಟು ನೀಡಿದ್ದಾರೆ.
ಬೆಂಗಳೂರು:-;ವಯಸ್ಸಾದ ತಂದೆ-ತಾಯಿ ನೋಡಿಕೊಳ್ಳುವುದು ಮಕ್ಕಳ ಜವಬ್ದಾರಿ ಎಂದು ಹೈಕೋರ್ಟ್ ಹೇಳಿದೆ. ಜೀವನದ ಸಂಧ್ಯಾಕಾಲದಲ್ಲಿರುವ ಪೋಷಕರನ್ನು ಆರೈಕೆ ಮಾಡುವ ಜವಾಬ್ದಾರಿಯನ್ನು ಕಾನೂನು, ಧರ್ಮ ಮತ್ತು ನೈತಿಕತೆಯು ಮಕ್ಕಳ ಮೇಲೆ ಹೇರುತ್ತದೆ. ಪೋಷಕರ ಆಸ್ತಿಯನ್ನು ಮಕ್ಕಳು ಉಡುಗೊರೆಯಾಗಿ ಪಡೆದಾಗ ಈ ಜವಾಬ್ದಾರಿ ಹೆಚ್ಚಿರುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ, ಈ ಅಭಿಪ್ರಾಯ ವ್ಯಕ್ತಪಡಿಸಿದೆ. ತಂದೆಯಿಂದ ಆಸ್ತಿಯನ್ನು ಗಿಫ್ಟ್ ಡೀಡ್ ಆಗಿ ಪಡೆದಿರುವುದನ್ನು ಅಮಾನ್ಯಗೊಳಿಸಿದ್ದ ತುಮಕೂರು ವಲಯದ ‘ಪೋಷಕರ ಕಲ್ಯಾಣ ಮತ್ತು ಹಿರಿಯ ನಾಗರಿಕರ ನಿರ್ವಹಣೆ ಕಾಯ್ದೆಯಡಿಯ ನ್ಯಾಯಾಧಿಕರಣ’ದ ಉಪ ವಿಭಾಗಾಧಿಕಾರಿಯ ಆದೇಶ ಮತ್ತು ಅದನ್ನು ಎತ್ತಿಹಿಡಿದಿದ್ದ ಹೈಕೋರ್ಟ್ ಏಕ ಸದಸ್ಯ ಪೀಠದ ತೀರ್ಪನ್ನು ವಿಭಾಗೀಯ ಪೀಠ ಪುರಸ್ಕರಿಸಿದೆ. ವಯಸ್ಸಾದ ತಂದೆ ಮತ್ತು ತಾಯಿಯನ್ನು ನೋಡಿಕೊಳ್ಳುವುದು ಮಕ್ಕಳ ಹೊಣೆಗಾರಿಕೆಯಾಗಿದೆಯೇ ಹೊರತು ದಯೆ-ದಾನದ ವಿಚಾರವಲ್ಲ. ವೃದ್ಧಾಪ್ಯ ತಂದೆ-ತಾಯಿಯನ್ನು ಆರೈಕೆ ಮಾಡುವುದು ಮಕ್ಕಳ ಶಾಸನಬದ್ಧ ಜವಾಬ್ದಾರಿ. ‘ರಕ್ಷಂತಿ ಸ್ಥಾವಿರೇ ಪುತ್ರ’ ಎಂದು ಸಹಸ್ರಾರು ವರ್ಷಗಳಿಂದ…
ಕೊಪ್ಪಳ:- ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ನಾನೂ ಪ್ರಯತ್ನ ಮಾಡಿದ್ದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ ಅವರನ್ನು ಆಯ್ಕೆ ಮಾಡಿರುವುದು ಕಾರ್ಯಕರ್ತರಲ್ಲಿ ಸಂತಸ ತಂದಿದೆ. ನಮ್ಮ ನಾಯಕರು ತೆಗೆದುಕೊಳ್ಳುವ ನಿರ್ಣಯಕ್ಕೆ ನಾವು ಬದ್ಧ ಎಂದರು. ನಾನು ಕೂಡ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪ್ರಯತ್ನಿಸಿದ್ದೆ. ಪಕ್ಷಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರ ಕೊಡುಗೆ ಅನನ್ಯ. ನನಗೆ ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕಿಲ್ಲ ಎನ್ನುವ ಅಸಮಾಧಾನವಿಲ್ಲ ಎಂದೂ ಇದೇ ವೇಳೆ ಸ್ಪಷ್ಟಪಡಿಸಿದರು. ಬಿ.ವೈ.ವಿಜಯೇಂದ್ರನನ್ನು ರಾಜ್ಯಾಧ್ಯಕ್ಷನನ್ನಾಗಿ ನೇಮಕ ಮಾಡಿರುವ ಕುರಿತು ನಮ್ಮಲ್ಲಿ ಯಾರಿಗೂ ಅಸಮಾಧಾನವಿಲ್ಲ. ಅದೇನೇ ಇದ್ದರೂ ಪಕ್ಷದ ಪಡಸಾಲೆಯಲ್ಲಿ ಚರ್ಚೆ ಮಾಡುತ್ತೇವೆ ಎಂದರಲ್ಲದೆ, ಇನ್ನು ವಿರೋಧ ಪಕ್ಷದ ನಾಯಕರ ಆಯ್ಕೆ ಪ್ರಕ್ರಿಯೆಯೂ ಶೀಘ್ರ ನಡೆಯುತ್ತದೆ ಎಂದರು. ಇನ್ನೂ ಅಧಿಕಾರಕ್ಕೆ ಬಂದ ಕೇವಲ ನಾಲ್ಕು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು. ಕೋರ್ಟ್ ಆದೇಶಕ್ಕೆ ಮೊದಲೇ ಕಾವೇರಿ ನೀರು ಬಿಟ್ಟು…
ರಿಯಾಧ್: ” ಗಾಜಾ ನಗರದಲ್ಲಿ ಇಸ್ರೇಲ್ ಸೇನೆಯು ಆತ್ಮರಕ್ಷಣೆ ನೆಪದಲ್ಲಿ ನಡೆಸುತ್ತಿರುವ ಪ್ಯಾಲೆಸ್ತೀನಿ ನಾಗರಿಕರ ಹತ್ಯಾಕಾಂಡವನ್ನು ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರಗಳು ತೀವ್ರವಾಗಿ ಖಂಡಿಸಬೇಕು. ಈ ಕೂಡಲೇ ಇಸ್ರೇಲ್ ಸೇನೆಗೆ ಉಗ್ರ ಸಂಘಟನೆಯ ಪಟ್ಟ ಕಟ್ಟಬೇಕು ,” ಎಂದು ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಕರೆ ನೀಡಿದ್ದಾರೆ. ಸೌದಿ ಅರೇಬಿಯಾದಲ್ಲಿ ನಡೆದ ಅರಬ್ ಮತ್ತು ಮುಸ್ಲಿಂ ರಾಷ್ಟ್ರಗಳ ನಾಯಕರ ಶೃಂಗದಲ್ಲಿ ಅವರು ಈ ನಿರ್ಣಯವನ್ನು ಮಂಡಿಸಿದ್ದಾರೆ. ಈ ಶೃಂಗವನ್ನು ತುರ್ತಾಗಿ ಇಸ್ಲಾಮಿಕ್ ಸಹಕಾರ ಸಂಘಟನೆ (ಒಐಸಿ) ಮತ್ತು ಅರಬ್ ಲೀಗ್ ಆಯೋಜಿಸಿದ್ದವು. ” ಅಮೆರಿಕದ ಕುಮ್ಮಕ್ಕಿನಿಂದ ಇಸ್ರೇಲ್ ಸಮರವನ್ನು ಮುಂದುವರಿಸಿದೆ. ಪ್ಯಾಲೆಸ್ತೀನಿಯರ ವಿರುದ್ಧದ ನಿಜವಾದ ಅಪರಾಧಿ ಅಮೆರಿಕ,” ಎಂದು ರೈಸಿ ಗುಡುಗಿದ್ದಾರೆ. ರೈಸಿ ಕರೆಗೆ ಬೆಂಬಲ ವ್ಯಕ್ತಪಡಿಸಿರುವ ಸೌದಿ ಅರೇಬಿಯಾ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್, ” ಪ್ಯಾಲೆಸ್ತೀನಿ ಜನರ ವಿರುದ್ಧದ ಅಪರಾಧಗಳಿಗೆ ನೇರವಾಗಿ ಇಸ್ರೇಲಿ ಅಧಿಕಾರಿಗಳೇ ಹೊಣೆ. ಅವರನ್ನೇ ಹೊಣೆಯಾಗಿಸಿ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಕ್ರಮ ಜರುಗಿಸಬೇಕು. ಕದನವಿರಾಮದಿಂದ ಮಾತ್ರವೇ ಮಧ್ಯಪ್ರಾಚ್ಯದಲ್ಲಿ ಶಾಂತಿ…