ಜ್ಯೋತಿಷ್ಯಶಾಸ್ತ್ರದ ಪ್ರಕಾರ ಅದೃಷ್ಟವಂತರು ( ಕುಬೇರರು) ಲಕ್ಷ್ಮಿ ಯೋಗ ಹೇಗೆ ಉಂಟಾಗುತ್ತದೆ? ಜನನ ದಿನಾಂಕ ಮತ್ತು ಸಮಯದ ಆಧಾರ ಮೇಲೆ ನಿಮ್ಮ ಜನ್ಮಜಾತಕ ಬರೆದು ಅದನ್ನು ಸರಿಯಾಗಿ ಪರೀಕ್ಷಿಸಿ ಈ ಕೆಳಕಂಡ ಮಾಹಿತಿಗಳು ಇದ್ದರೆ”ಲಕ್ಷ್ಮಿ ಯೋಗ” ಉಂಟಾಗುತ್ತದೆ. ರಾಶಿಚಕ್ರದ ಚಿಹ್ನೆಯು ಏರಿಕೆಯ ಸ್ಥಾನದಲ್ಲಿ ಯೋಗವನ್ನು ಪಡೆದುಕೊಂಡರೆ ಉತ್ತಮ ಅದೃಷ್ಟದಿಂದ ಕೂಡಿರುತ್ತದೆ. ಲಕ್ಷ್ಮಿ ದೇವಿಯು ತ್ರಿಕೋನ ಭಾವ ದೇವತೆ ಆಗಿರುತ್ತಾಳೆ. ಭಗವಾನ್ ವಿಷ್ಣು ಕೇಂದ್ರ ಭವನದ ದೇವರು. ಕೇಂದ್ರ ತ್ರಿಕೋನ ರಾಜ ಯೋಗದಲ್ಲಿ ಒಂತ್ತನೇ ಮನೆಯ ಅಧಿಪತಿ ಉದಾತ್ತನಾಗಿದ್ದರೆ ಉತ್ತಮ ಅದೃಷ್ಟವು ಪಡೆದುಕೊಳ್ಳುವವರು. ಈ ಯೋಗದಲ್ಲಿ ವಿವಿಧ ಮನೆಗಳಲ್ಲಿ ಗ್ರಹಗಳ ಸ್ಥಾನ ಹೇಗಿದೆ ಎನ್ನುವುದನ್ನು ಪರಿಗಣಿಸಿ, ಅದೃಷ್ಟದ ತೀರ್ಪು ತಿಳಿಸಲಾಗುವುದು. ಈ ಯೋಗ ಅಥವಾ ಕುಂಡಲಿಯ ಲೆಕ್ಕಾಚಾರವನ್ನು ಪಾಶ್ಚಾತ್ಯ ಜ್ಯೋತಿಷ್ಯದಲ್ಲಿ ತಿಳಿಯಬಹುದು. ಒಂಬತ್ತನೇ ಮನೆ ಅದು “ಭಾಗ್ಯಸ್ಥಾನ”. ಒಂಬತ್ತನೇ ಮನೆಯಲ್ಲಿ ತ್ರಿಕೋನ ಉಂಟಾದರೆ ಅದನ್ನು “ಶುಭ ಲಕ್ಷ್ಮಿ ಯೋಗ” ಎಂದು ಪರಿಗಣಿಸಲಾಗುತ್ತದೆ. ಈ ಯೋಗದಿಂದ ಸಂಪತ್ತಿನ ಆದಾಯ ಉಂಟಾಗುವುದು. ಐಷಾರಾಮಿ ಜೀವನ ನಡೆಸುವರು.…
Author: AIN Author
ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು? ಕಂಕಣಬಲ ಕೂಡಿ ಬರಲು ಏನು ಮಾಡಬೇಕು? ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು. ಸೋಮಶೇಖರ್B.Sc ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು. Mob.93534 88403 ಮದುವೆ ಇದು ಬ್ರಹ್ಮನ ಸೃಷ್ಟಿಯ ನಿಯಮ ಏಕೆಂದರೆ ವಿವಾಹದ ನಂತರ ಕೆಲವರು ಜೀವನದಲ್ಲಿ ಸಿರಿ, ಸುಖ, ಸಂಪತ್ತು ಪಡೆದಿದ್ದಾರೆ. ಜನ್ಮ ಕುಂಡಲಿಯಲ್ಲಿ 7ನೇ ಮನೆಯ ವಿವಾಹದ ಸ್ಥಾನ. 2ನೇ ಮನೆಯ ಕುಟುಂಬ ಸ್ಥಾನ 4ನೇ ಮನೆ ಸುಖದ…
ಅಮವಾಸೆ ಸೂರ್ಯೋದಯ: 06.17 AM, ಸೂರ್ಯಾಸ್ತ : 05.50 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಆಶ್ವಯುಜ ಮಾಸ, ಕೃಷ್ಣ ಪಕ್ಷ, ದಕ್ಷಿಣಾಯಣ, ಶರತ್ ಋತು, ತಿಥಿ: ಇವತ್ತು ಅಮವಾಸ್ಯೆ 02:56 PM ತನಕ ನಂತರ ಪಾಡ್ಯ ನಕ್ಷತ್ರ: ಇವತ್ತು ಸ್ವಾತಿ 02:51 AM ತನಕ ನಂತರ ವಿಶಾಖ ಯೋಗ: ಇವತ್ತು ಸೌಭಾಗ್ಯ 03:23 PM ತನಕ ನಂತರ ಶೋಭಾನ ಕರಣ: ಇವತ್ತು ಚತುಷ್ಪಾದ 02:55 AM ತನಕ ನಂತರ ನಾಗವ 02:56 PM ತನಕ ನಂತರ ಕಿಂಸ್ತುಘ್ನ ರಾಹು ಕಾಲ: 07:30 ನಿಂದ 09:00 ವರೆಗೂ ಯಮಗಂಡ: 10:30 ನಿಂದ 12:00 ವರೆಗೂ ಗುಳಿಕ ಕಾಲ: 01:30 ನಿಂದ 03:00 ವರೆಗೂ ಅಮೃತಕಾಲ: 06.23 PM to 08.01 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:37 ನಿಂದ ಮ.12:22 ವರೆಗೂ .ಶ್ರೀ ಸೋಮಶೇಖರ್B.Sc ( ವಂಶಪಾರಂಪರಿತ) ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು. Mob.No.93534 88403 ಮೇಷ…
ಬಂಗಾರಪೇಟೆ:- ಸಿಎಂ ಸಿದ್ದರಾಮಯ್ಯ ಬುರುಡೆ ಬಿಟ್ಟು ಹೋಗಿದ್ದಾರೆ ಎಂದು ಸಂಸದ ಮುನಿಸ್ವಾಮಿ ಟೀಕೆ ಮಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ ಶಾಸಕರ ಕ್ಷೇತ್ರಗಳ ಅಭಿವೃದ್ಧಿ ಕಾಮಗಾರಿಗಳಿಗೇ ಕೊಡಲು ಹಣವಿಲ್ಲ, ಇನ್ನು ಕೋಲಾರ ಜಿಲ್ಲೆಯ ಅಭಿವೃದ್ಧಿಗೆ 2 ಸಾವಿರ ಕೋಟಿ ರು.ಗಳನ್ನು ನೀಡಲಾಗಿದೆ ಎಂದರು. ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ನಂತರ ಸರ್ಕಾರದ ಖಜಾನೆ ಖಾಲಿಯಾಗಿದೆ. ಕಾಂಗ್ರೆಸ್ ಶಾಸಕರಿಗೆ ಕೇವಲ ಒಂದೆರಡು ಲಕ್ಷ ಅನುದಾನ ಕೊಡಲೂ ಸರ್ಕಾರದ ಬಳಿ ಹಣವಿಲ್ಲ. ಕೆಜಿಎಫ್ ಮತ್ತು ಬಂಗಾರಪೇಟೆ ಶಾಸಕರು ಹೇಳಿಕೊಟ್ಟಂತೆ ಅಂಕಿ ಅಂಶಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವ ಮೂಲಕ ಯರಗೋಳ್ ಡ್ಯಾಂ ಉದ್ಘಾಟನೆ ಡ್ರಾಮಾ ಕಂಪನಿಯ ವೇದಿಕೆಯಾಗಿತ್ತು ಎಂದರು. ಯರಗೋಳ್ ಯೋಜನೆಗೂ ಕಾಂಗ್ರೆಸ್ಗೂ ಸಂಬಂಧವಿಲ್ಲ. ಅದು ಬಿಜೆಪಿ- ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಾಧನೆ. ಮೊದಲು ಯೋಜನೆಗೆ ೧೫೦ಕೋಟಿ ಮಂಜೂರು ಮಾಡಿದ್ದೇ ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ, ಇದಕ್ಕೂ ಮೊದಲು ಯೋಜನೆಯ ಸರ್ವೆ ಮಾಡಲು ಮಾಜಿ ಶಾಸಕರಾದ ಬಿ.ಪಿ.ವೆಂಕಟಮುನಿಯಪ್ಪ, ಕೆ.ಶ್ರೀನಿವಾಸಗೌಡ, ಎಸ್.ರಾಜೇಂದ್ರನ್, ಕೃಷ್ಣಯ್ಯಶೆಟ್ಟಿ ತಲಾ 2 ಲಕ್ಷ…
ಹಾಸನ:- ಜೆಡಿಎಸ್-ಬಿಜೆಪಿ ನಿಜವಾದ ಬಂಡವಾಳ ಶೀಘ್ರ ಹೊರಬರಲಿದೆ ಎಂದು ಸಚಿವ ಆರ್.ಬಿ.ತಿಮ್ಮಾಪುರ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಮುಂದೆ ಬರಲಿರುವ ಸಂಸದರ ಚುನಾವಣೆ ಹೊತ್ತಿಗೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ನಿಜವಾದ ಬಂಡವಾಳ ಹೊರಗೆ ಬರಲಿದೆ ಎಂದರು. ಚುನಾವಣೆಯ ದಿನಾಂಕ ಘೋಷಣೆ ಆಗುತ್ತಿದ್ದಂತೆ ಎರಡು ಪಕ್ಷಗಳ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರಲಿದ್ದಾರೆ. ರಾಜ್ಯ ಸರ್ಕಾರ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುತ್ತಿದೆ. ಆದರೆ ಕೇಂದ್ರಸರ್ಕಾರ ರಾಜ್ಯಕ್ಕೆ ಅಗತ್ಯ ನೆರವನ್ನು ನೀಡುತ್ತಿಲ್ಲ ಎಂದು ದೂರಿದರು. ಪ್ರಧಾನಿ ನರೇಂದ್ರ ಮೋದಿಯವರು ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಬರದ ಸಂಕಷ್ಟಕ್ಕೆ ಈಡಾಗಿರುವ ಜನರ ನೋವನ್ನು ಕೇಳುತ್ತಿಲ್ಲ. ಬದಲಿಗೆ ಐದು ರಾಜ್ಯದ ಚುನಾವಣೆಯಲ್ಲಿ ಬ್ಯುಸಿಯಾಗಿದ್ದಾರೆ. ಬಿಜೆಪಿಯವರಿಗೆ ಕಾಂಗ್ರೆಸ್ ಪಕ್ಷದ ಬಗ್ಗೆ ಆರೋಪ ಮಾಡುವುದು ಬಿಟ್ಟರೆ ದೇಶದ ಅಭಿವೃದ್ಧಿಯ ಕಡೆ ಗಮನ ಇಲ್ಲ ಎಂದು ಆರೋಪಿಸಿದರು. ಕಾಂಗ್ರೆಸ್ ಪಕ್ಷದಲ್ಲಿಯೇ ಭಿನ್ನಾಭಿಪ್ರಾಯ ಇದೆ ಎಂದು ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಆರೋಪಕ್ಕೆ ಪ್ರಶ್ನೆಯೊಂದಕ್ಕೆ ಉತ್ತರಿಸಿ, ಎಲ್ಲ ಪಕ್ಷದಲ್ಲಿಯೂ ಭಿನ್ನಾಭಿಪ್ರಾಯ ಸಾಮಾನ್ಯ. ನಮ್ಮಲ್ಲಿ ಯಾವುದೇ…
ಹುಬ್ಬಳ್ಳಿ:- ರಾಜ್ಯದಲ್ಲಿ ನಾಲ್ಕು ಬಣಗಳ ಸಮ್ಮಿಶ್ರ ಸರ್ಕಾರ ಇದೆ ಎಂದು ಮುರುಗೇಶ ನಿರಾಣಿ ಟೀಕೆ ಮಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇಲ್ಲ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ಮತ್ತು ಡಾ.ಜಿ.ಪರಮೇಶ್ವರ ಅವರ ಬಣಗಳ ಸಮ್ಮಿಶ್ರ ಸರ್ಕಾರ ಇದೆ’ ಎಂದರು. ಕಾಂಗ್ರೆಸ್ ಬಿಟ್ಟಿ ಭಾಗ್ಯಗಳನ್ನು ಘೋಷಣೆ ಮಾಡಿ ಜನಾದೇಶ ಪಡೆದಿದೆ. ಈ ಸರ್ಕಾರ ಐದು ವರ್ಷ ಪೂರೈಸಬೇಕು ಎಂಬುದು ನಮ್ಮ ಅಪೇಕ್ಷೆ. ನಾವು ಯಾವುದೇ ಆಪರೇಷನ್ ಕಮಲ ಮಾಡುತ್ತಿಲ್ಲ’ ಎಂದು ಸುದ್ದಿಗಾರರಿಗೆ ತಿಳಿಸಿದರು. ‘ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಒಳಜಗಳದಿಂದಾಗಿ ಸರ್ಕಾರ ಬೀಳುವ ಸಾಧ್ಯತೆ ಇದೆ. ಕಾದು ನೋಡೋಣ’ ಎಂದರು. ‘ವಿಜಯೇಂದ್ರ ಅವರ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 20ಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲಲು ಸಹಕಾರ ನೀಡುತ್ತೇವೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಹುದ್ದೆ ಕೈತಪ್ಪಿದ್ದರಿಂದ ಅಸಮಾಧಾನಗೊಂಡವರನ್ನು ಮನವೊಲಿಸಿ ಪಕ್ಷ ಸಂಘಟನೆ ಮಾಡುತ್ತೇವೆ’ ಎಂದು ಹೇಳಿದರು.
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಇಂದು ನಡೆದ ವಿಶ್ವಕಪ್ ಕೊನೆಯ ಲೀಗ್ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡದ ವಿರುದ್ಧ ಭಾರತ ಭರ್ಜರಿ ಜಯ ದಾಖಲಿಸಿದೆ. ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡ ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್ ದ್ವಿಶತಕ ಜೊತೆಯಾಟ ಹಾಗೂ ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ ಅರ್ಧಶತಕಗಳ ನೆರವಿನಿಂದ ಟೀಂ ಇಂಡಿಯಾ 50 ಓವರ್ಗಳಲ್ಲಿ 410 ರನ್ ಗಳಿಸಿ ಎದುರಾಳಿ ನೆದರ್ಲೆಂಡ್ಸ್ ತಂಡಕ್ಕೆ 410 ರನ್ಗಳ ಗುರಿ ನೀಡಿತ್ತು. ಇದನ್ನು ಬೆನ್ನಟ್ಟಿದ ನೆದರ್ಲ್ಯಾಂಡ್ಸ್ ತಂಡವು ಭಾರತ ತಂಡದ ಬೌಲರ್ ಗಳ ದಾಳಿಗೆ ತತ್ತರಿಸಿ ಹೋಗಿತ್ತು. ಕೇವಲ 47 ಓವರ್ ಗಳಲ್ಲಿ 10 ವಿಕೆಟ್ ಗಳ ನಷ್ಟಕ್ಕೆ 250 ರನ್ ಗಳನ್ನು ಮಾತ್ರ ಗಳಿಸಲಷ್ಟೇ ಶಕ್ತವಾಗಿದೆ. ಈ ಮೂಲಕ ಭಾರತ ತನ್ನ ಗೆಲುವಿನ ಓಟ ಮುಂದುವರಿಸಿದೆ.
ಬೆಂಗಳೂರು:- ಕಾಂಗ್ರೆಸ್ಗೆ ತನ್ನ ಶಾಸಕರನ್ನೇ ಸಮಾಧಾನ ಮಾಡಲಾಗುತ್ತಿಲ್ಲ ಎಂದು ಹೇಳುವ ಮೂಲಕ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು ಈಗ ಇರುವ ಕಾಂಗ್ರೆಸ್ಸಿನವರನ್ನೇ ಸಮಾಧಾನವಾಗಿ- ಇಟ್ಟುಕೊಳ್ಳಲು ಆಗ್ತಿಲ್ಲ. ಒಬ್ಬ ಸಚಿವರು ದುಬೈ ಅಂತಾರೆ, ಅದಕ್ಕೂ ಮುಂಚೆ ಮತ್ತೊಬ್ಬರು ಮೈಸೂರಿಗೆ ಅಂತ ಹೇಳ್ತಾರೆ. ಅವರನ್ನೇ ಸಮಾಧಾನವಾಗಿ ಇಟ್ಟುಕೊಳ್ಳಲು ಆಗದವರು ಪಕ್ಷಕ್ಕೆ ಕರೆದುಕೊಂಡವರಿಗೆ ಏನು ಕೊಡುತ್ತಾರೆ ಎಂದು ಮಾಜಿ ಸಚಿವ ಸಿ.ಟಿ.ರವಿ ವ್ಯಂಗ್ಯವಾಡಿದರು. ನ.15ರ ಬಳಿಕ ಬೇರೆ ಪಕ್ಷದಿಂದ ಕಾಂಗ್ರೆಸ್ಗೆ ಬರ್ತಾರೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿ, ಯಾವಾಗಲೂ ಸರ್ಕಾರ ಬಂದಾಗ ಇನ್ ಕಮಿಂಗೂ, ಸರ್ಕಾರದ ಅವಧಿ ಮುಗಿಯಲು ಬಂದಾಗ ಔಟ್ ಗೋಯಿಂಗ್. ಇದು ಸಾಮಾನ್ಯ ಸಂಗತಿ ಅಲ್ವಾ. ಹೊಸದರಲ್ಲಿ ಒಂದಷ್ಟು ಜನ ಪಿಕ್ಚರ್ ಚೆನ್ನಾಗಿರಬಹುದು ಎಂದು ಟಿಕೆಟ್ ತೆಗೆದುಕೊಳ್ಳುತ್ತಾರೆ. ಆಮೇಲೆ “ಇದು ಏನ್ಲಾ ವೇಸ್ಟ್ ಕಣ್ಲಾ ಬಂದಿದ್ದೇ ವೇಸ್ಟ್” ಅಂತ ಅರ್ಧಕ್ಕೆ ಎದ್ದು ಬರ್ತಾರೆ. ಅಲ್ಲಿದ್ದವರೇ ಅಸಮಾಧಾನದಿಂದ ಹೊರಗೆ ಬರ್ತಿದ್ದಾರೆ. ಹೋಗುವವರು ಒಳಗೆ ಹೋಗಿ ಏನು ಮಾಡ್ತಾರೆ ಎಂದು ಪ್ರಶ್ನಿಸಿದರು.…
ಹಾಸನ:- ರಾಜಕಾರಣದಲ್ಲಿ ಕಾಫಿ, ಡಿನ್ನರ್ಗೆ ಬಹಳ ಮಹತ್ವವಿದೆ ಎಂದು ಶಾಸಕ ರವಿ ಗಣಿಗ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನಾವು 136 ಜನ ಒಗ್ಗಟ್ಟಾಗಿರುವಾಗ ಬಿಜೆಪಿಯವರು ಬಲೆಗೆ ಬೀಳಲ್ಲ. ನಮ್ಮ ಪಕ್ಷದ ಸಿದ್ಧಾಂತಗಳನ್ನು ಒಪ್ಪಿ ಬರ್ತಿನಿ ಅಂದ್ರೆ ಯಾಕೆ ಬೇಡ ಅನ್ನಬೇಕು. ಬೇಡ ಅನ್ನಲು ಆಗುತ್ತಾ! ನಮ್ಮ ಪಕ್ಷಕ್ಕೆ ಬರುವವರಿಗೆ ಸ್ವಾಗತ ಇದೆ. ಆದರೆ ನಾವು ಯಾರ ಮನೆಗೂ ಹೋಗಿ ಕರಿತಿಲ್ಲ, ಬರ್ತಿನಿ ಅಂತಿದ್ಧಾರೆ ನಾವು ಸ್ವಾಗತ ಮಾಡುತ್ತಿದ್ದೇವೆ ಅಷ್ಟೆ. ಬಿಜೆಪಿ-ಜೆಡಿಎಸ್ನಿಂದ ಶಾಸಕರು ಬರ್ತಾರೆ. ಅವರಲ್ಲಿ ಶರಣಗೌಡ ಕಂದಕೂರು ಕಾಂಗ್ರೆಸ್ಗೆ ಬನ್ನಿ ಅಂತ ಹೇಳಿಲ್ಲ. ಎಲ್ಲರೂ ಹಾಸನದಲ್ಲಿ ಇರಬೇಕಾದರೆ ಅವರು ನನ್ನ ಜೊತೆ ಕಾಫಿ ಕುಡಿಯುತ್ತಿದ್ದರು. ನಮ್ಮ ಪಕ್ಷಕ್ಕೆ ಬರ್ತರೆ ಅಂಥ ಹೇಳಲಿಲ್ಲ. ಕಾಫಿ ಕುಡಿಯುತ್ತಿದ್ದರು ಅಂತ ಹೇಳಿದೆ. ಅವರು ನನ್ನ ಗೆಳೆಯ, ರಾಜಕಾರಣದಲ್ಲಿ ಕಾಫಿ ಡಿನ್ನರ್ಗೆ ಬಹಳ ಮಹತ್ವವಿದೆ ಎಂದು ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂಬುದರ ಬಗ್ಗೆ ಒಗಟಾಗಿ ಹೇಳಿದಂತಿತ್ತು. ಈಗಾಗಲೇ ಹೈಕಮಾಂಡ್ ಅವರು ಏನು ಮಾತನಾಡಬಾರದು ಅಂತ…
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ನೆದರ್ಲೆಂಡ್ಸ್ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ಹಲವು ದಾಖಲೆಗಳನ್ನು ನಿರ್ಮಿಸಿದೆ. 410 ರನ್ಗಳ ಬೃಹತ್ ಮೊತ್ತವನ್ನು ಪೇರಿಸಿರುವ ರೋಹಿತ್ ಅಂಡ್ ಟೀಂ ಏನೆಲ್ಲಾ ದಾಖಲೆಗಳು ನಿರ್ಮಿಸಿದೆ ಎಂಬುದನ್ನು ನೋಡೋಣ. ವಿಶ್ವಕಪ್ನಲ್ಲಿ ಟೀಂ ಇಂಡಿಯಾ 4ನೇ ವಿಕೆಟ್ಗೆ ಗರಿಷ್ಠ ಜೊತೆಯಾಟ ರನ್ – ಆಟಗಾರರು – ವಿರುದ್ಧ – ಸ್ಥಳ – ವರ್ಷ 208 – ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್- ನೆದರ್ಲೆಂಡ್ಸ್, ಬೆಂಗಳೂರು, 2023 196* – ಎಂಎಸ್ ಧೋನಿ ಮತ್ತು ಸುರೇಶ್ ರೈನಾ – ಜಿಂಬಾಬ್ವೆ, ಆಕ್ಲೆಂಡ್, 2015 165 – ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ – ಆಸ್ಟ್ರೇಲಿಯಾ, ಚೆನ್ನೈ, 2023 142 – ವಿನೋದ್ ಕಾಂಬ್ಲಿ ಮತ್ತು ನವಜೋತ್ ಸಿಂಗ್ ಸಿಧು – ಜಿಂಬಾಬ್ವೆ, ಕಾನ್ಪುರ್, 1996 141 – ರವೀಂದ್ರ ಜಡೇಜಾ ಮತ್ತು ಆರ್ಆರ್ ಸಿಂಗ್, ಆಸ್ಟ್ರೇಲಿಯಾ, ದಿ ಓವಲ್, 1999 ಏಕದಿನ ವಿಶ್ವಕಪ್ನಲ್ಲಿ ಅಧಿಕ ಮೊತ್ತ…