ವಿಶ್ವಕಪ್ ಪ್ರಶಸ್ತಿ ಗೆಲ್ಲಲು ಭಾರತಕ್ಕೆ ಉತ್ತಮ ಅವಕಾಶ ಒದಗಿ ಬಂದಿದೆ ಎಂದು ರವಿಶಾಸ್ತ್ರಿ ಹೇಳಿದ್ದಾರೆ. ಭಾರತ ತಂಡಕ್ಕೆ ಈ ಬಾರಿ ವಿಶ್ವಕಪ್ ನಲ್ಲಿ ಪ್ರಶಸ್ತಿ ಗೆಲ್ಲಲು ಸಾಧ್ಯವಾಗದಿದ್ದರೆ ಬಹುಶಃ ಇನ್ನು ಮೂರು ವಿಶ್ವ ಕಪ್ ಗಳಲ್ಲಿ ಕಾಯಬೇಕಾಗುತ್ತದೆ ಎಂದು ರವಿಶಾಸ್ತ್ರಿ ಲೆಕ್ಕಾಚಾರ ಮಾಡಿದ್ದಾರೆ. ತಂಡದ ಬಹುಪಾಲು ಆಟಗಾರರು ತಮ್ಮ ಉತ್ತುಂಗದಲ್ಲಿದ್ದಾರೆ. ಭಾರತಕ್ಕೆ ತಮ್ಮ ಐಸಿಸಿ ಪ್ರಶಸ್ತಿ ಬರವನ್ನು ಕೊನೆಗೊಳಿಸಲು ಉತ್ತಮ ಅವಕಾಶ ಈಗ ಒದಗಿ ಬಂದಿದೆ” ಎಂದು ಹೇಳಿದ್ದಾರೆ. ಆಡಮ್ ಗಿಲ್‌ಕ್ರಿಸ್ಟ್ ಮತ್ತು ಮೈಕೆಲ್ ವಾನ್ ಕೂಡ ಪಾಡ್‌ಕ್ಯಾಸ್ಟ್‌ನ ಭಾಗವಾಗಿದ್ದರು. ಭಾರತ ಕ್ರಿಕೆಟ್ ಹುಚ್ಚಿನಲ್ಲಿದ್ದು, 12 ವರ್ಷಗಳ ಹಿಂದೆ ಅವರು ಕೊನೆಯ ಬಾರಿಗೆ ವಿಶ್ವಕಪ್ ಗೆದ್ದಿದ್ದು, ಮತ್ತೊಮ್ಮೆ ಗೆಲ್ಲಲು ಅವಕಾಶವಿದೆ. ಆಡುತ್ತಿರುವ ರೀತಿ ನೋಡಿದರೆ ತಂಡಕ್ಕೆ ಉತ್ತಮ ಅವಕಾಶ ಒದಗಿ ಬಂದಿದೆ”ಎಂದು ಭಾರತದ ಮಾಜಿ ಮುಖ್ಯ ಕೋಚ್ ಹೇಳಿದರು. ಕೆಲ ಆಟಗಾರರಿಗೆ ಇದು ಕೊನೆಯ ವಿಶ್ವಕಪ್ ಆಗಿರಬಹುದು. ಅವರು ಆಡುವ ರೀತಿ, ಪರಿಸ್ಥಿತಿಗಳನ್ನು ಗಮನಿಸಿದರೆ, ಅವರು ಅದನ್ನು ಗೆಲ್ಲಲೆಂದೇ ತಂಡದಲ್ಲಿದ್ದಾರೆ” ಎಂದರು.…
Author: AIN Author
ಬೆಂಗಳೂರು:- ದೇವನಹಳ್ಳಿವರೆಗೂ ಮೆಟ್ರೋ ವಿಸ್ತರಣೆ ಚರ್ಚೆ ಮಾಡಿದ್ದೇನೆ ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಪಟ್ಟಣಕ್ಕೆ ಮೆಟ್ರೋ ರೈಲು ಮತ್ತು ಕಾವೇರಿ ನೀರು ಒದಗಿಸಲು ಪ್ರಯತ್ನ ಮಾಡುತ್ತೇನೆ. ಸರ್ಕಾರದ ಹಂತದಲ್ಲೂ ಚರ್ಚೆ ಮಾಡಿದ್ದೇನೆ’ ಎಂದರು. ದೇವನಹಳ್ಳಿ ಜಿಲ್ಲಾ ಕೇಂದ್ರ ಸಂಬಂಧ ಮುಖ್ಯಮಂತ್ರಿ, ಡಿಸಿಎಂ ಮತ್ತು ಕಂದಾಯ ಸಚಿವರೊಂದಿಗೆ ಮಾತನಾಡಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ತಿಳಿಸಿದರು. ಹಿಂದಿನ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡರು ದೇವನಹಳ್ಳಿ ಬೀರಸಂದ್ರದ ಬಳಿ ಜಿಲ್ಲಾಡಳಿತ ಭವನ ನಿರ್ಮಿಸಿ, ಬೆಂಗಳೂರಿನಲ್ಲಿದ್ದ ಕಚೇರಿಗಳನ್ನು ಸ್ಥಳಾಂತರ ಮಾಡಿಸಿದ್ದಾರೆ. ಅವರ ಜೊತೆಗೆ ಈ ಕುರಿತು ಮಹತ್ವದ ಸಭೆ ನಡೆಸಿ ಮಾರ್ಗದರ್ಶನ ಪಡೆದುಕೊಳ್ಳುತ್ತೇನೆ ಎಂದು ಮಾಹಿತಿ ನೀಡಿದರು. ‘ನಾನು ನ್ಯಾಯವಾದಿಯಾಗಿದ್ದಾಗ ಅಂದಿನ ವಕೀಲರ ಪ್ರಯತ್ನದಿಂದ ರಾಜಕೀಯಕ್ಕೆ ಪಾದರ್ಪಣೆ ಮಾಡಿದೆ’ ಎಂದು ರಾಜಕೀಯ ಪ್ರವೇಶದ ದಿನವನ್ನು ಮೆಲಕು ಹಾಕಿದರು. ನ್ಯಾಯಾಲಯ ಸಂಕೀರ್ಣ ಸ್ಥಾಪನೆಗೆ ಇರುವ ತೊಡಕು ನಿವಾರಿಸಿಕೊಂಡರೇ ₹15 ಲಕ್ಷ ಅನುದಾನವನ್ನು ಕಟ್ಟಡ ನಿರ್ಮಾಣಕ್ಕೆ ನೀಡಲಾಗುವುದು ಎಂದು ಭರವಸೆ ನೀಡಿದರು. ಜಿಲ್ಲೆಯಲ್ಲಿ…
ಈ ಹಿಂದೆ ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್ ಆಗಿದ್ದರು. ಈಗ ಮರಳಿ ದೊಡ್ಮನೆಗೆ ಬಂದಿದ್ದಾರೆ. ಅವರು ಈವಾರ ಬಿಗ್ ಬಾಸ್ನಿಂದ ಹೊರ ಹೋಗುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಸೇವ್ ಆದ ಹೊರತಾಗಿಯೂ ಅವರು ಎಲಿಮಿನೇಟ್ ಆಗುತ್ತೇನೆ ಎಂದರು. ಹಿಂದಿ ಬಿಗ್ ಬಾಸ್ನಲ್ಲಿ ಈ ರೀತಿ ಮಾಡಿದರೆ ದೊಡ್ಡ ದಂಡ ಕಟ್ಟಬೇಕಾಗುತ್ತದೆ. ಆ ಬಗ್ಗೆ ಇಲ್ಲಿದೆ ವಿವರ. ಪ್ರತಿ ವರ್ಷ ವೀಕ್ಷಕರು ಬಿಗ್ ಬಾಸ್ಗಾಗಿ ಕಾಯುತ್ತಾರೆ. 3 ತಿಂಗಳ ಕಾಲ ನಡೆಯುವ ಈ ರಿಯಾಲಿಟಿ ಶೋನಲ್ಲಿ ಜಗಳ ಸಾಮಾನ್ಯ. ಬಿಗ್ ಬಾಸ್ನ ವಿವಾದಾತ್ಮಕ ಶೋ ಎಂದೂ ಕರೆಯಲಾಗುತ್ತದೆ. ಭಾರತದಲ್ಲಿ ಬೇರೆ ಬೇರೆ ಭಾಷೆಗಳಲ್ಲಿ ಇದು ಪ್ರಸಾರ ಆಗುತ್ತಿದೆ. ಕಳೆದ ಕೆಲವು ವರ್ಷಗಳಿಂದ ಹಿಂದಿಯಲ್ಲಿ ಸಲ್ಮಾನ್ ಖಾನ್ ಈ ಕಾರ್ಯಕ್ರಮವನ್ನು ನಡೆಸಿಕೊಡುತ್ತಿದ್ದಾರೆ. ಸಲ್ಮಾನ್ ಪ್ರತಿ ಸೀಸನ್‌ಗೆ ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಾರೆ.ಅವರು ಸ್ಪರ್ಧಿಗಳ ಜೊತೆ ಕಠಿಣವಾಗಿ ನಡೆದುಕೊಳ್ಳುತ್ತಾರೆ. ಈ ವೇಳೆ ಕೆಲವರು ಶೋನಿಂದ ಅರ್ಧಕ್ಕೆ ಹೊರಹೋಗುವ…
ಕೋಲಾರ:- ಕುಡುಕ ಪೊಲಿಸಪ್ಪ ಕಂಠಪೂರ್ತಿ ಕುಡಿದು ಬಾರ್ ಸಿಬ್ಬಂದಿ ಮೇಲೆಯೇ ಹಲ್ಲೆಗೆ ಮಾಡಲು ಯತ್ನಿಸಿರು ಘಟನೆ ಕೋಲಾರದಲ್ಲಿ ನಡೆದಿದೆ. ಕುಡಿದು ರಂಪಾಟ ಮಾಡಿರುವ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯ ASI ನಾರಾಯಣಸ್ವಾಮಿ. ಕೋಲಾರ ನಗರದ ಬಂಗಾರಪೇಟೆ ಸರ್ಕಲ್ ನಲ್ಲಿರುವ ಸಾಮ್ರಾಟ್ ಅಶೋಕ ಬಾರ್ ಬಳಿ ನಡೆದಿರುವ ಘಟನೆ. ಕಳೆದ ರಾತ್ರಿ ನಡೆದ ಘಟನೆ. ಬಾರ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾನೂನು ಪರಿಪಾಲನೆ ಮಾಡಬೇಕಾದ ಪೋಲಿಸಪ್ಪನಿಂದಲೇ ಗುಂಡಾ ವರ್ತನೆ. ಕ್ಷುಲ್ಲಕ ವಿಚಾರಕ್ಕೆ ಅವಾಚ್ಯ ಶಬ್ದಗಳಿಂದ ನಿಂಧಿಸಿ ಕಲ್ಲಿನಿಂದ ಹೊಡೆಯಲು ಮುಂದಾಗಿದ್ದ ಎಎಸ್‌ಐ. ಗಲಾಟೆ ವಿಡಿಯೋ ಮೊಬೈಲ್‌ನಲ್ಲಿ ಸೆರೆ ಹಿಡಿದಿರುವು ಬಾರ್ ಸಿಬ್ಬಂದಿ. ಪೊಲೀಸಪ್ಪನ ವಿರುದ್ಧ ಶಿಸ್ತು ಕ್ರಮಕ್ಕೆ ಎಸ್‌ಪಿಗೆ ಕೋಲಾರ ಬಾರ್ ಅಸೋಸಿಯೇಷನ್ ಅಧ್ಯಕ್ಷ ಚಲಪತಿ ದೂರು ನೀಡಿದ್ದಾರೆ.
ಕಲಬುರಗಿ:- ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಯುವ ನಾಯಕ ಬಿ ವೈ ವಿಜಯೇಂದ್ರ ರವರಿಗೆ ಕಲಬುರಗಿ ಸಂಸದ ಡಾ.ಉಮೇಶ್ ಜಾಧವ್ ಅಭಿನಂದನೆ ಸಲ್ಲಿಸಿದ್ದಾರೆ. ಇಂದು ಬೆಂಗಳೂರು ನಿವಾಸಕ್ಕೆ ತೆರಳಿ ಸಿಹಿ ತಿನ್ನಿಸಿ ಅಭಿನಂದನೆ ಸಲ್ಲಿಸಿದ್ರು.ಮಾತ್ರವಲ್ಲ ನಿಮ್ಮ ಅಧ್ಯಕ್ಷತೆಯಲ್ಲಿ ಬಿಜೆಪಿ ಮತ್ತಷ್ಟು ಸಂಘಟನಾತ್ಮಕವಾಗಿ ಬಲಗೊಂಡು ಇನ್ನಷ್ಟು ಶಕ್ತಿಯುತವಾಗಿ ಹೊರಹೊಮ್ಮಲಿ ಎಂದು ಶುಭ ಹಾರೈಸಿದರು..
ಬೆಂಗಳೂರು:- ಸಚಿವರೊಬ್ಬರು ಸಿಎಂ ಮನೆ ರಿನೋವೇಷನ್ಗೆ ಫರ್ನಿಚರ್ ಕೊಟ್ಟಿದ್ದಾರಂತೆ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಸಿಎಂ ಮನೆಯಲ್ಲಿ ಕಾನ್ಫರೆನ್ಸ್ ಹಾಲ್ ಮಾಡಿದ್ದಾರೆ. ಅದಕ್ಕೆ ಎಷ್ಟೋ ಖರ್ಚು ಮಾಡಿದ್ದಾರೋ?, ನಿಮ್ಮನ್ನೆಲ್ಲ ಒಳಗೆ ಬಿಟ್ಟಿದ್ದಾರೊ ಇಲ್ಲ ಗೊತ್ತಿಲ್ಲ, ಮೂರು ಕೋಟಿನೋ ಎಷ್ಟೋ, ಅದು ಬೇರೆ ಅಂತೆ. ಸರ್ಕಾರದ ದುಡ್ಡಲ್ಲ, ಸಚಿವರೊಬ್ಬರು ಸಿಎಂ ಮನೆ ರಿನೋವೇಷನ್ಗೆ ಸ್ಟಾಂಗ್ಲೆ ಅಂತ ಫರ್ನಿಚರ್ ಕೊಟ್ಟಿದ್ದಾರಂತೆ. ಈ ಬಗ್ಗೆ ಸತ್ಯ ಹರಿಶ್ಚಂದ್ರರೇ ಉತ್ತರ ಕೊಡಬೇಕು. ಇದರ ಮೌಲ್ಯ 1.9 ಕೋಟಿ ಅಂತೆ ಒಂದು ಸೋಫಾ ಸೆಟ್” ಎಂದು ಹೆಚ್ಡಿಕೆ ಆರೋಪಿಸಿದ್ದಾರೆ. “ಬಿಜೆಪಿ ಜೊತೆ ಜೆಡಿಎಸ್ ವಿಲೀನವಾಗಿ ನಾನು ಪ್ರತಿಪಕ್ಷ ನಾಯಕ ಆಗುವುದು ವದಂತಿ, ಬಿಜೆಪಿ ಜೊತೆ ಜೆಡಿಎಸ್ ವಿಲೀನ ಪ್ರಶ್ನೆ ಇಲ್ಲ, ನಮ್ಮ ಪಕ್ಷದ ಐಡೆಂಟಿಟಿ ಉಳಿಸಿಕೊಂಡಿದ್ದೇವೆ ಎನ್ ಡಿ.ಎ ನಲ್ಲಿ ಇದ್ದೇವೆ ಮುಂದುವರೆಯುತ್ತೇವೆ ಅಷ್ಟೆ” ಎಂದು ಇದೇ ಸಂದರ್ಭದಲ್ಲಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ವಿಜಯಪುರ:- ಬಿಜೆಪಿಯವರೇ ವಿರೋಧ ಪಕ್ಷದ ನಾಯಕರಾಗಲಿದ್ದಾರೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬಿಜೆಪಿಯವರೇ ವಿರೋಧ ಪಕ್ಷದ ನಾಯಕ ಆಗುತ್ತಾರೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವುದು ಕೇವಲ ಲೋಕಸಭೆ ಚುನಾವಣೆಗೆ ಸೀಮಿತ, ವಿರೋಧ ಪಕ್ಷ ಸ್ಥಾನ ಜೆಡಿಎಸ್‌ಗೆ ಬಿಟ್ಟು ಕೊಡಲು ಬರುವುದಿಲ್ಲ. ಹಾಗಾಗಿ ಬಿಜೆಪಿಯವರೇ ಶೀಘ್ರದಲ್ಲೇ ವಿರೋಧ ಪಕ್ಷದ ನಾಯಕರಾಗುತ್ತಾರೆ. ಸಮರ್ಥ ವಿರೋಧ ಪಕ್ಷವಾಗಿ ಬಿಜೆಪಿ ಕೆಲಸ ಮಾಡಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಆಯ್ಕೆಯಾಗಿರುವ ಬಗ್ಗೆ ಭಿನ್ನಾಭಿಪ್ರಾಯ ವಿಚಾರಕ್ಕೆ ನಗರದಲ್ಲಿ ಭಾನುವಾರ ಪ್ರತಿಕ್ರಿಯೆ ನೀಡಿದ ಅವರು, ಚುನಾವಣೆ ರಾಜಕಾರಣಲ್ಲಿದ್ದವರು ಹುದ್ದೆಗಳನ್ನು ಸಹಜವಾಗಿಯೇ ಅಪೇಕ್ಷೆ ಪಡುತ್ತಾರೆ. ಒಂದೆರೆಡು ದಿನ ಅಸಮಾಧಾನ ಇರುತ್ತದೆ, ಅದೆಲ್ಲ ಸರಿಯಾಗುತ್ತದೆ. ಅಸಮಾಧಾನ ಇದ್ದವರನ್ನು ವಿಜಯೇಂದ್ರ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕಾಗುತ್ತದೆ ಎಂದರು. ಕಳೆದ ಬಾರಿ ಚುನಾವಣೆಯಲ್ಲಿ ನಾವು ಸರ್ಕಾರವನ್ನು ಕಳೆದುಕೊಂಡಿದ್ದೇವೆ. ಹಾಗಾಗಿ ಅಳದು, ತೂಗಿ ಹೈಕಮಾಂಡ್ ಈ ನಿರ್ಧಾರ ಮಾಡಿರುತ್ತದೆ.…
ಬೆಂಗಳೂರು:- ಬಿಜೆಪಿಯದ್ದು ಕುಟುಂಬ ರಾಜಕಾರಣ ಎನ್ನುವ ಕಾಂಗ್ರೆಸ್ ಗೆ ನೈತಿಕತೆ ಇಲ್ಲ ಎಂದು MP ರೇಣುಕಾಚಾರ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ವಿಜಯೇಂದ್ರ ಅವರಿಗೆ ಚಿಕ್ಕವಯಸ್ಸಿನಲ್ಲೇ ಜವಾಬ್ದಾರಿ ನೀಡಿದ್ದಾರೆ. ಅದನ್ನು ಅವರು ನಿಭಾಯಿಸುತ್ತಾರೆ. ಇದನ್ನು ಸಹಿಸಲಾಗದೆ ಕುಟುಂಬ ರಾಜಕಾರಣ ಎಂದು ಕಾಂಗ್ರೆಸ್ ನ ಸಚಿವ ಪ್ರಿಯಾಂಕ್ ಖರ್ಗೆ ಟೀಕೆ ಮಾಡ್ತಾರೆ. ಆದರೆ ಅವರಿಗೆ ಟೀಕೆ ಮಾಡುವ ನೈತಿಕ ಹಕ್ಕು ಇಲ್ಲ. ನೆಹರು ಇಂದ ಹಿಡಿದು ರಾಹುಲ್‌ಗಾಂದಿವರೆಗೂ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ. ಅದನ್ನು ಪ್ರಶ್ನಿಸದ, ತಮ್ಮ ನಾಯಕರ ಕುಟುಂಬ ರಾಜಕಾರಣ ಬಗ್ಗೆ ಸೊಲ್ಲೆತ್ತದೆ ವಿಜಯೇಂದ್ರರ ಬಗ್ಗೆ ಟೀಕೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ ಗೆಲ್ಲಲು ಸಾಧ್ಯವಾಗದ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸಿಕೊಂಡು ಬಂದವರು ವಿಜಯೇಂದ್ರ. ಹಿಂದಿನಿಂದಲೂ ಹಲವು ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿಕೊಂಡು ಬಂದಿದ್ದಾರೆ. ಈಗ ಕೊಟ್ಟಿರುವ ಜವಾಬ್ದಾರಿ ಯಡಿಯೂರಪ್ಪ ಪುತ್ರ ಎಂಬ ಕಾರಣಕ್ಕೆ ಕೊಟ್ಟಿಲ್ಲ. ಅವರ ಸಾಮರ್ಥ್ಯ ನೋಡಿ ಕೊಟ್ಟಿದ್ದಾರೆ. ಮಲ್ಲಿಕಾರ್ಜುನ್ ಖರ್ಗೆ ಪುತ್ರ ಎಂದು ನಿಮಗೆ ಸಚಿವ ಸ್ಥಾನ ನೀಡಿದ್ದಾರೆ ಅಷ್ಟೇ,…
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ನ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಭಾರತ ತಂಡ ನೆದರ್ಲ್ಯಾಂಡ್ಸ್ ವಿರುದ್ಧ ತನ್ನ ಬಲಿಷ್ಟ ಪ್ರದರ್ಶನ ತೋರಿದೆ. ವಿಶ್ವಕಪ್ನ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಟೀಮ್ ಇಂಡಿಯಾದ ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ರೋಹಿತ್ ಶರ್ಮಾ, ಶುಭಮನ್ ಗಿಲ್ ಮತ್ತು ವಿರಾಟ್ ಕೊಹ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಐವರ ಬ್ಯಾಟಿಂಗ್ ನೆರವಿನಿಂದ ಭಾರತ ತಂಡ ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನೆದರ್ಲೆಂಡ್ಸ್ ವಿರುದ್ಧ ನಿಗದಿತ ಓವರ್ ಅಂತ್ಯಕ್ಕೆ 4 ವಿಕೆಟ್ ನಷ್ಟಕ್ಕೆ 410 ರನ್ ಕಲೆಹಾಕಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಿರ್ಧಾರ ಮಾಡಿದ ಟೀಮ್ ಇಂಡಿಯಾ ಉತ್ತಮ ಆರಂಭವನ್ನು ಪಡೆದುಕೊಂಡಿತು. ಡಚ್ಚರ ವಿರುದ್ಧ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿ ಸೆಮೀಸ್ಗೂ ಮುನ್ನ ಆತ್ಮವಿಶ್ವಾಸವನ್ನು ಇನ್ನಷ್ಟೂ ಹೆಚ್ಚಿಸಿಕೊಳ್ಳಲು ರೋಹಿತ್ ಶರ್ಮಾ ಲೆಕ್ಕಾಚಾರ ಹಾಕಿದ್ದರು. ಅದಕ್ಕೆ ತಕ್ಕಂತೆ ತಂಡ ಆರಂಭವನ್ನು ಪಡೆದುಕೊಂಡಿತು. ಶುಭಮನ್ ಗಿಲ್ ಎಂದಿನಂತೆ ಬಿರುಸಿನ ಆರಂಭವನ್ನು ಪಡೆದುಕೊಂಡರು. ಆರಂಭಿಕರಿಬ್ಬರು ಈ ವರ್ಷದ 5ನೇ…
ಹುಬ್ಬಳ್ಳಿ:- ಸರ್ಕಾರ ಅಸ್ಥಿರಗೊಳಿಸುವ ಯಾವುದೇ ಪ್ರಯತ್ನ ಬಿಜೆಪಿ ಮಾಡುವುದಿಲ್ಲ ಎಂದು ಪ್ರಹ್ಲಾದ ಜೋಶಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಕ್ಕೆ ಯಾವ ಯತ್ನವನ್ನು ಬಿಜೆಪಿ ಮಾಡುವುದಿಲ್ಲ. ಕಾಂಗ್ರೆಸ್ ಸರ್ಕಾರ ಐದು ವರ್ಷ ಆಡಳಿತ ಮಾಡಲಿ ಎಂಬುದು ನಮ್ಮ ಆಶಯ. ಆದರೆ, ಅವರ ಆಂತರಿಕ ಗೊಂದಲ, ಭಿನ್ನಾಭಿಪ್ರಾಯದಿಂದ ಸರ್ಕಾರ ಪತನಗೊಂಡರೆ ನಾವೇನು ಮಾಡಲಾಗದು ಎಂದರು. ಕಾಂಗ್ರೆಸ್ ಸರ್ಕಾರ ಅಸ್ಥಿರಕ್ಕೆ ಬಿಜೆಪಿ ಯಾವ ಯತ್ನವನ್ನು ಮಾಡುತ್ತಿಲ್ಲ. ಸರ್ಕಾರ ಪತನಗೊಳ್ಳಲಿದೆ, ಕಾಂಗ್ರೆಸ್ಸಿನ ಕೆಲಸ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬಂತಹ ಹೇಳಿಕೆಗಳನ್ನು ಪಕ್ಷದ ಶಾಸಕರಾಗಲಿ, ಮುಖಂಡರಾಗಲಿ ನೀಡದಿರುವಂತೆ ಸೂಚಿಸಲು ಪಕ್ಷದ ರಾಜ್ಯಾಧ್ಯಕ್ಷರಿಗೆ ತಿಳಿಸಿವೆ. ಈ ವಿಚಾರವಾಗಿ ಕೋರ್ ಕಮಿಟಿ ಸಭೆಯಲ್ಲೂ ಚರ್ಚಿಸಲಾಗುವುದು ಎಂದರು. ಕಾಂಗ್ರೆಸ್ ಸರ್ಕಾರದಲ್ಲಿ ಸಾಕಷ್ಟು ಗೊಂದಲಗಳಿವೆ. ಸ್ವತಃ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯಾಗಿ ಗೊಂದಲ ಸೃಷ್ಟಿಗೆ ಮುಂದಾಗಿದ್ದು, ಮುಖ್ಯಮಂತ್ರಿ ಅವರಂತೂ ಮೂರು ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಯ ಕುರಿತಾಗಿ ಸುದ್ದಿಗಳನ್ನು ಹರಿಬಿಡುತ್ತಿದ್ದಾರೆ. ಅಧಿಕಾರ ವಿಷಯವಾಗಿ ಕಾಂಗ್ರೆಸ್ ನಲ್ಲಿ ಸಾಕಷ್ಟು ಗೊಂದಲ ಆಂತರಿಕ ಕಲಹ…