ಬೆಂಗಳೂರು: ದೀಪಾವಳಿ ಹಬ್ಬದ ನಿಮಿತ್ತ ಬೆಂಗಳೂರಿನ ಕೆ ಆರ್ ಮಾರ್ಕೆಟ್‌ನಲ್ಲಿ ಹಬ್ಬದ ಖರೀದಿ ಜೋರಾಗಿದೆ. ಮುಂಜಾನೆಯೇ ಜನರು ಹಬ್ಬದ ಖರೀದಿಗೆ ಮುಗಿ ಬಿದಿದ್ದಾರೆ. ಹೂ, ಹಣ್ಣು ಖರೀದಿ ಇಂದ ಮಾರುಕಟ್ಟೆ ಜನ ದಟ್ಟಣೆಯಿಂದ ಕಿಕ್ಕಿರಿದಿತ್ತು ಹೂವು, ಹಣ್ಣುಗಳನ್ನು ಗ್ರಾಹಕರು ಖರೀದಿಸುತ್ತಿದ್ದಾರೆ. ಇನ್ನು ಕೆ.ಆರ್.ಮಾರ್ಕೆಟ್ ಫ್ಲೈಓವರ್ ಮೇಲೆ ಅನಧಿಕೃತವಾಗಿ ಗ್ರಾಹಕರು ವಾಹನಗಳ ಪಾರ್ಕಿಂಗ್ ಮಾಡಿದ್ದಾರೆ. ಹಾಗಾಗಿ ಕಿರಿದಾದ ಮೇಲ್ಸೆತುವೆ ಮೇಲೆ ವಾಹನ ಚಲಾಯಿಸಲು ಸವಾರರು ಹರಸಾಹಸ ಪಟ್ಟಿದ್ದಾರೆ. ದೀಪಾವಳಿ ಹಬ್ಬದ ಪ್ರಯುಕ್ತ ಕೆ.ಆರ್ ಮಾರುಕಟ್ಟೆಯಲ್ಲಿ ಖರೀದಿ ಬಲು ಜೋರಾಗಿದ್ದು, ಹಣ್ಣು, ಹೂವುಗಳ ದರ ಏರಿಕೆ ಆಗಿದೆ. ಮಾರು ಹೂವಿನ ಬೆಲೆ 50 ರೂ ಏರಿಕೆ ಆಗಿದೆ. ಒಂದು ಕೆಜಿ ಸೇಬಿನ ಬೆಲೆ 120 ರಿಂದಿ 140 ಇದೆ. ದಾಳಿಂಬೆ ಬೆಲೆ 150 ರಿಂದ 170 ರೂ ಇದೆ. ಹೂ, ಹಣ್ಣುಗಳ ಖರೀದಿಗೆ ಗ್ರಾಹಕರು ಆಗಮಿಸುತ್ತಿದ್ದಾರೆ. ನಾಳೆ ದೀಪಾವಳಿ ಅಮವಾಸ್ಯೆ, ಬಲಿಂದ್ರನ ಪೂಜೆ, ಮಂಗಳವಾರ ಬಲಿಪಾಡ್ಯಮಿ ದೀಪಾವಳಿ ಹಬ್ಬದ ಚಂದ್ರದರ್ಶನ ಇದೆ.
Author: AIN Author
ಮೈಸೂರು: ಮಲೆ ಮಾದಪ್ಪನ ದರ್ಶನಕ್ಕೆಂದು ತೆರಳಿದ್ದ ಟಂಟಂ ವಾಹನ (ಪಲ್ಟಿಯಾದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ. ಶನಿವಾರ ತಡರಾತ್ರಿ ಘಟನೆ ನಡೆದಿದ್ದು, ಘಟನೆಯಲ್ಲಿ ದರ್ಶನ್ (20) ಮೃತಪಟ್ಟಿದ್ದಾನೆ. ಮೈಸೂರಿನ ಟಿ ನರಸೀಪುರ ಮುಖ್ಯರಸ್ತೆಯ ಮೆಗಳಾಪುರ ಬಳಿ ಘಟನೆ ನಡೆದಿದೆ. https://ainlivenews.com/did-sending-a-message-to-a-girl-lead-to-murder-what-does-igp-ravikante-gowda-say/ ದರ್ಶನ್ ಸೇರಿದಂತೆ ಕೆಲ ಯುವಕರು ಮಲೈ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟಂಟಂ ವಾಹನ ಪಲ್ಟಿಯಾಗಿದೆ. ಘಟನೆಯಲ್ಲಿ ದರ್ಶನ್ ಸಾವನ್ನಪ್ಪಿದ್ದು, ಸುಮಾರು 10 ಯುವಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವರುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬೆಳಗಾವಿ : ಗಡಿಯಲ್ಲಿ ಸದ್ದಿಲ್ಲದೆ ಕನ್ನಡದ ಬೆಳೆಸುವ ಮೂಲಕ ‘ಕನ್ನಡದ ಸ್ವಾಮೀಜಿ’ ಎಂದೇ ಖ್ಯಾತಿಯಾಗಿದ್ದ ಚಿಂಚಣಿಯ ಶ್ರೀ ಅಲ್ಲಮಪ್ರಭು ಮಹಾಸ್ವಾಮೀಜಿ (63) ಅವರು ಭಾನುವಾರ ಲಿಂಗೈಕ್ಯರಾಗಿದ್ದಾರೆ. 12ರಂದು ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಬೆಳಗಿನ ಜಾವ ಲಿಂಗೈಕ್ಯರಾಗಿದ್ದಾರೆ ಗಡಿ ಭಾಗದಲ್ಲಿ ಚಿಂಚಣಿ ಶ್ರೀಗಳು ಕನ್ನಡದ ಸ್ವಾಮೀಜಿ ಎಂದೇ ಖ್ಯಾತರಾಗಿದ್ದರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಣಿ ಮಠದ ಸ್ವಾಮೀಜಿಯಾಗಿದ್ದ ಇವರು ಅಪಾರ ಭಕ್ತರನ್ನು, ಅನುಯಾಯಿಗಳನ್ನು ಹೊಂದಿದ್ದರು. ಕೆಲ ದಿನಗಳಿಂದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸ್ವಾಮೀಜಿ ಅಗಲಿಕೆಯಿಂದಾಗಿ ಸಾವಿರಾರು ಭಕ್ತರು ಶೋಕಸಾಗರದಲ್ಲಿ ಮುಳುಗಿದ್ದಾರೆ. https://ainlivenews.com/did-sending-a-message-to-a-girl-lead-to-murder-what-does-igp-ravikante-gowda-say/ ಭಾನುವಾರವೇ ಸ್ವಾಮೀಜಿಯವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ. ಮಠದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ನೂರಾರು ಭಕ್ತರು ಮಠದ ಬಳಿ ಜಮಾಯಿಸಿದ್ದಾರೆ. ಇನ್ನೂ ನೂರಾರು ಭಕ್ತರು ಮಠದತ್ತ ತೆರಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಿರುವನಂತಪುರಂ: ಕೇರಳದ (Kerala) ಕೊಚ್ಚಿಯಲ್ಲಿ (Kochi) ನಡೆದ ಕ್ರಿಶ್ಚಿಯನ್ನರ ಪ್ರಾರ್ಥನಾ ಸಭೆಯಲ್ಲಿ ಸಂಭವಿಸಿದ ಸ್ಫೋಟಕ್ಕೆ (Blast) ಸಂಬಂಧಿಸಿದಂತೆ ಇದೀಗ ಸಾವಿನ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. 45 ವರ್ಷದ ಮಹಿಳೆ ಶನಿವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತರನ್ನು ಸಾಲಿ ಪ್ರದೀಪ್ (45) ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ 10:30 ರ ಸುಮಾರಿಗೆ ಅವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳ ಪ್ರಕಾರ ಮೃತ ಮಹಿಳೆಯ ಮಗಳು ಲಿಬ್ನಾ ತಿಂಗಳ ಹಿಂದೆ ಸ್ಫೋಟ ಸಂಭವಿಸಿದ ವೇಳೆ ತೀವ್ರವಾದ ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಳು. ಆಕೆಯ ಸಹೋದರನ ಸ್ಥಿತಿಯೂ ಗಂಭೀರವಾಗಿದೆ ಎನ್ನಲಾಗಿದೆ. ರಾಜ್ಯ ಆರೋಗ್ಯ ಇಲಾಖೆಯು ಅಧಿಕಾರಿಗಳ ಪ್ರಕಾರ ದುರ್ಘಟನೆಯ ಬಳಿಕ ಸ್ಫೋಟದಲ್ಲಿ ಗಾಯಗೊಂಡವರ ಆರೋಗ್ಯ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ವಿಶೇಷ ವೈದ್ಯಕೀಯ ಮಂಡಳಿಯನ್ನು ರಚಿಸಿದೆ. https://ainlivenews.com/did-sending-a-message-to-a-girl-lead-to-murder-what-does-igp-ravikante-gowda-say/ ಅಕ್ಟೋಬರ್ 29 ರಂದು ಕೊಚ್ಚಿಯ ಕಲಮಸ್ಸೆರಿ ಪ್ರದೇಶದಲ್ಲಿ ಪ್ರಾರ್ಥನಾ ಸಭೆಯಲ್ಲಿ ಸರಣಿ ಸ್ಫೋಟಗಳು ಸಂಭವಿಸಿದ್ದವು. ಘಟನೆ ಬಳಿಕ ಡೊಮಿನಿಕ್ ಮಾರ್ಟಿನ್ ಎಂಬಾತ ತಾನೇ ಬಾಂಬ್‌ಗಳನ್ನು ಸ್ಫೋಟಿಸಿರುವುದಾಗಿ ಹೇಳಿ ಪೊಲೀಸರಿಗೆ ಶರಣಾಗಿದ್ದ. ಇದೀಗ ಆರೋಪಿಯನ್ನು…
ಬಾಲಿವುಡ್ ಕಿಂಗ್ ಖಾನ್ ನಟನೆಯ ಡಂಕಿ ಸಿನಿಮಾದ ಟೀಸರ್ ಈಗಾಗಲೇ ಭಾರೀ ಸದ್ದು ಮಾಡುತ್ತಿದೆ. ಶಾರುಖ್ ಖಾನ್ ಜನ್ಮದಿನಕ್ಕೆ ಡಂಕಿ ಡ್ರಾಪ್ 1 ಎಂಬ ಟೈಟಲ್ ನಡಿ ಬಂದ ಝಲಕ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಇದೀಗ ದೀಪಾವಳಿ ಹಬ್ಬದ ಸ್ಪೆಷಲ್ ಡಂಕಿ ಸಿನಿಮಾದ ಎರಡು ಹೊಸ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಪ್ರೀತಿ, ನಗು ಹಾಗೂ ಸ್ನೇಹ ತುಂಬಿರುವ ಎರಡು ಹೊಸ ಪೋಸ್ಟರ್ ನಲ್ಲಿ ಶಾರುಖ್ ಸ್ನೇಹ ಬಳಗವನ್ನು ಪರಿಚಯ ಮಾಡಿಕೊಡಲಾಗಿದೆ. ಕಿಂಗ್ ಖಾನ್ ಜೊತೆ ತಾಪ್ಸಿ ಪನ್ನು, ವಿಕ್ಕಿ ಕೌಶಲ್, ವಿಕ್ರಮ್ ಕೊಚ್ಚರ್ ಹಾಗೂ ಅನಿಲ್ ಗ್ರೋವರ್ ಒಟ್ಟಿಗೆ ನಿಂತು ನಗು ಬೀರಿದ್ದಾರೆ. ಎರಡು ಪೋಸ್ಟರ್ಸ್ ಆಕರ್ಷಕವಾಗಿವೆ. ರಾಜ್ ಕುಮಾರ್ ಹಿರಾನಿ, ಅಭಿಜತ್ ಜೋಶಿ ಮತ್ತು ಕನಿಕಾ ಧಿಲ್ಲೋನ್ ಡಂಕಿಗೆ ಕಥೆ ಬರೆದರೆ, ರಾಜ್ ಕುಮಾರ್ ಹಿರಾನಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹಾರ್ಡಿ ಪಾತ್ರದಲ್ಲಿ ಶಾರುಖ್ , ಮನು ಪಾತ್ರದಲ್ಲಿ ತಾಪ್ಸಿ ರಾಜಕುಮಾರ್ ಹಿರಾನಿ ಫೇವರಿಟ್ ಆ್ಯಕ್ಟರ್ ಬೊಮನ್ ಇರಾನಿ…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಜೆಡಿಎಸ್ ಇಂದು (ನ.12) ಬರ ಪರಿಶೀಲನೆ ನಡೆಸಲಿದೆ. ಜೆಡಿಎಸ್ ಮುಖಂಡರು ಹುಣಸೂರು ತಾಲೂಕಿನ ಬೆಟ್ಟದೂರು ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. https://ainlivenews.com/did-sending-a-message-to-a-girl-lead-to-murder-what-does-igp-ravikante-gowda-say/ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ, ಶಾಸಕ ಜಿಟಿ ದೇವೇಗೌಡ ನೇತೃತ್ವದಲ್ಲಿ ಶಾಸಕ ಜಿ.ಡಿ.ಹರೀಶ್ ಗೌಡ, ಮಾಜಿ ಶಾಸಕರಾದ ಸಾ.ರಾ.ಮಹೇಶ್ ಅಶ್ವಿನ್ ಕುಮಾರ್ ಸೇರಿ ಹಲವು ನಾಯಕರು ಬರ ಪರಿಶೀಲನೆ ಮಾಡಲಿದ್ದಾರೆ.
ತುಮಕೂರು: ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷ ಬಿ.ವೈ.ವಿಜಯೇಂದ್ರಇಂದು ತುಮಕೂರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆಯಲಿದ್ದಾರೆ. ಬಳಿಕ ಸಿದ್ಧಗಂಗಾ ಸ್ವಾಮೀಜಿ ಆಶೀರ್ವಾದ ಪಡೆಯಲಿದ್ದಾರೆ. ನಂತರ ಮನೆದೇವರು ಎಡೆಯೂರು ಸಿದ್ದಲಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಲಿದ್ದಾರೆ. https://ainlivenews.com/did-sending-a-message-to-a-girl-lead-to-murder-what-does-igp-ravikante-gowda-say/
ಬೆಂಗಳೂರು: ಗಣಪತಿ ದೇವರ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿದ ಸಾಣೇಹಳ್ಳಿಯ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ದೂರು ನೀಡಿದ್ದಾರೆ. ಗಣೇಶನ ಆರಾಧನೆ, ಆರಾಧಕರ ಆಚಾರ ವಿಚಾರಗಳ ಬಗ್ಗೆ ಸಾಣೇಹಳ್ಳಿ ಸ್ವಾಮೀಜಿಯವರು ಬಹಳ ತುಚ್ಚ ಮಾತುಗಳಿಂದ ನಿಂದಿಸಿರುವುದು ಅಕ್ಷಮ್ಯ. ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. https://ainlivenews.com/24-hour-service-at-minto-hospital-for-diwali-firework-incident/ ಸಾಣೇಹಳ್ಳಿಯ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರು, ಸಮಾಜದ ಒಂದು ವರ್ಗವನ್ನು ಓಲೈಸುವ ಭರದಲ್ಲಿ, ದೇಶದ ಬಹುಸಂಖ್ಯಾತರ ಆರಾಧನೆಯ, ನಂಬಿಕೆಯ ಕೇಂದ್ರ ಬಿಂದುವಾಗಿರುವ, ಶತಮಾನಗಳಿಂದ ಪೂಜಿಸಲ್ಪಡುತ್ತಿರುವ ಗಣಪತಿ ದೇವರ ಕುರಿತು ಅತ್ಯಂತ ಕೀಳು ಹೇಳಿಕೆ ನೀಡಿದ್ದಾರಲ್ಲದೇ, ಭಕ್ತವರ್ಗದ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ. ನವೆಂಬರ್ 2ರ ಗುರುವಾರದಂದು ಸಾಣೇಹಳ್ಳಿಯಲ್ಲಿ ನಡೆದ ರಾಷ್ಟ್ರೀಯ ನಾಟಕೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಶಿವಧ್ವಜಾರೋಹಣ ನೆರವೇರಿಸಿ ಮಾತನಾಡುವಾಗ “ಗಣಪತಿಯನ್ನು ಸ್ತುತಿಸುವುದು ಮೌಡ್ಯದ ಆಚರಣೆ, ಗಣಪತಿ ಕಾಲ್ಪನಿಕ ದೇವರು. ಸ್ವಾತಂತ್ರ್ಯ ಚಳವಳಿಯ ಸಂದರ್ಭಕ್ಕೆ ನೆಪಮಾತ್ರಕ್ಕೆ…
ಟೆಲ್ ಅವಿವ್: ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಲ್ಲಿ ಹಮಾಸ್ಗ ಬೆಂಬಲ ಸೂಚಿಸಿರುವ ಯೆಮನ್ನ ಹೌಥೀ ಉಗ್ರರು ಇಸ್ರೇಲ್ ಮೇಲೆ ಡ್ರೋನ್ ಮತ್ತು ಶಸ್ತ್ರಾಸ್ತ್ರಗಳನ್ನು ಬಳಸಿ ದಾಳಿ ನಡೆಸಿದ್ದಾರೆ. ಸುಮಾರು 1 ಸಾವಿರ ಮೈಲಿಗೂ ಹೆಚ್ಚು ದೂರದಲ್ಲಿದ್ದುಕೊಂಡೇ ಹೌಥೀಸ್ ಉಗ್ರರು ಡ್ರೋನ್ಗಳ ಮೂಲಕ ದಾಳಿ ನಡೆಸಿದ್ದಾರೆ. ಹಮಾಸ್ ಉಗ್ರರು ಇಸ್ರೇಲ್ ಮೇಲೆ ದಾಳಿ ಆರಂಭಿಸಿದಾಗಿನಿಂದಲೂ ಹೌಥಿ ಉಗ್ರರು ಹಮಾಸ್ಗೆ ಬೆಂಬಲ ಸೂಚಿಸುತ್ತಲೇ ಇದ್ದಾರೆ. ಇಸ್ರೇಲ್ ಮೇಲೆ ಬ್ಯಾಲೆಸ್ಟಿಕ್ ಕ್ಷಿಪಣಿಗಳು (ballistic missiles) ಮತ್ತು ಡ್ರೋನ್ಗಳ ಮೂಲಕ ದಾಳಿ ನಡೆಸಲಾಗಿದೆ. ಇನ್ನು ಮುಂದೆ ಸಹ ಹಲವು ದಾಳಿ ನಡೆಸಿ, ಪ್ಯಾಲೆಸ್ತೀನಿಯನ್ನರ ಗೆಲುವಿಗೆ ಸಹಕಾರ ನೀಡಲಾಗುತ್ತದೆ ಎಂದು ಹೌಥಿ ಉಗ್ರ ಸಂಘಟನೆಯ ವಕ್ತಾರ ಯಹ್ಯ ಸಾರಿ ಹೇಳಿದ್ದಾನೆ. ಸಂಘರ್ಷ ಆರಂಭವಾದ ಬಳಿಕ ಇದು 3ನೇ ಬಾರಿ ಹೌಥಿಗಳು ದಾಳಿ ನಡೆಸುತ್ತಿದ್ದಾರೆ. ಅ.28ರಂದು ಹೌಥಿ ಉಗ್ರರು ಕ್ಷಿಪಣಿ ದಾಳಿ ನಡೆಸಿದ್ದರು, ಇದು ಈಜಿಪ್ಟ್ನಲ್ಲಿ ಸ್ಫೋಟಗೊಂಡಿತ್ತು. ನಡೆಸಿದ ದಾಳಿಯನ್ನು ಅಮೆರಿಕ ನೌಕಾಪಡೆ ಪ್ರತಿ ಬಂಧಿಸಿತ್ತು ಎಂದು ಅವನು ಹೇಳಿದ್ದಾನೆ
ಬೆಂಗಳೂರು : ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಪಟಾಕಿ ಅವಘಡಗಳು ಸಂಭವಿಸಿದ್ದಲ್ಲಿ ಕಣ್ಣಿಗೆ, ಚರ್ಮಕ್ಕೆ ಹಾನಿಯಾಗುವುದನ್ನು ತಡೆಗಟ್ಟಲು ಆಸ್ಪತ್ರೆಗಳು ಅಗತ್ಯ ಸಿದ್ಧತೆ ಮಾಡಿಕೊಂಡಿವೆ. https://ainlivenews.com/muhurta-fix-for-bjps-new-president-vijayendras-inauguration/ ಹಬ್ಬದ ಸಮಯದಲ್ಲಿ 24X7 ಚಿಕಿತ್ಸೆ ನೀಡಲು ಬೆಂಗಳೂರಿನ ನಗರದ ಮಿಂಟೊ ಮತ್ತು ವಿಕ್ಟೋರಿಯಾ ಆಸ್ಪತ್ರೆಗಳು ಸಜ್ಜಾಗಿವೆ. ಆಸ್ಪತ್ರೆಗೆ ಬರುವ ಗಾಯಾಳುಗಳಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಲು ಮಿಂಟೋ ಕಣ್ಣಿನ ಆಸ್ಪತ್ರೆ ವೈದ್ಯರು ಮುಂದಿನ ಒಂದು ವಾರ 24X7 ಕಾರ್ಯ ನಿರ್ವಹಿಸಲಿದ್ದಾರೆ. ಪಟಾಕಿ ಸಿಡಿತದಿಂದ ಗಾಯಗೊಂಡು ಚಿಕಿತ್ಸೆಗೆ ಬರುವ ಮಕ್ಕಳಿಗಾಗಿ ಆಸ್ಪತ್ರೆ 15 ಬೆಡ್ಗಳಿರುವ ಪ್ರತ್ಯೇಕ ವಾರ್ಡ್ ಆರಂಭಿಸಿದೆ. ಯುವಕರಿಗೆ 10 ಬೆಡ್, ಮಹಿಳೆಯರಿಗೆ 10 ಬೆಡ್ ಸೇರಿದಂತೆ ಒಟ್ಟು 35 ಬೆಡ್ಗಳನ್ನ ಮೀಸಲಿರಿಸಿದೆ. ಪಟಾಕಿ ದುರಂತ ಎದುರಿಸಲು ಮಿಂಟೋ ಆಸ್ಪತ್ರೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ತುರ್ತು ಚಿಕಿತ್ಸೆಗೆ ಬೇಕಾದ ಸಿದ್ಧತೆಗಳನ್ನೂ ಮಾಡಿಕೊಂಡಿದ್ದು, ಔಷಧಿಗಳನ್ನು, ಐ ಡ್ರಾಪ್ಸ್ ಎಲ್ಲವನ್ನು ವಾರ್ಡ್ಗಳಲ್ಲಿ ಶೇಖರಿಸಿದೆ.