ಟೆಲ್ ಅವಿವ್: ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಲ್ಲಿ ಹಮಾಸ್ಗ ಬೆಂಬಲ ಸೂಚಿಸಿರುವ ಯೆಮನ್ನ ಹೌಥೀ ಉಗ್ರರು ಇಸ್ರೇಲ್ ಮೇಲೆ ಡ್ರೋನ್ ಮತ್ತು ಶಸ್ತ್ರಾಸ್ತ್ರಗಳನ್ನು ಬಳಸಿ ದಾಳಿ ನಡೆಸಿದ್ದಾರೆ. ಸುಮಾರು 1 ಸಾವಿರ ಮೈಲಿಗೂ ಹೆಚ್ಚು ದೂರದಲ್ಲಿದ್ದುಕೊಂಡೇ ಹೌಥೀಸ್ ಉಗ್ರರು ಡ್ರೋನ್ಗಳ ಮೂಲಕ ದಾಳಿ ನಡೆಸಿದ್ದಾರೆ. ಹಮಾಸ್ ಉಗ್ರರು ಇಸ್ರೇಲ್ ಮೇಲೆ ದಾಳಿ ಆರಂಭಿಸಿದಾಗಿನಿಂದಲೂ ಹೌಥಿ ಉಗ್ರರು ಹಮಾಸ್ಗೆ ಬೆಂಬಲ ಸೂಚಿಸುತ್ತಲೇ ಇದ್ದಾರೆ. ಇಸ್ರೇಲ್ ಮೇಲೆ ಬ್ಯಾಲೆಸ್ಟಿಕ್ ಕ್ಷಿಪಣಿಗಳು (ballistic missiles) ಮತ್ತು ಡ್ರೋನ್ಗಳ ಮೂಲಕ ದಾಳಿ ನಡೆಸಲಾಗಿದೆ. ಇನ್ನು ಮುಂದೆ ಸಹ ಹಲವು ದಾಳಿ ನಡೆಸಿ, ಪ್ಯಾಲೆಸ್ತೀನಿಯನ್ನರ ಗೆಲುವಿಗೆ ಸಹಕಾರ ನೀಡಲಾಗುತ್ತದೆ ಎಂದು ಹೌಥಿ ಉಗ್ರ ಸಂಘಟನೆಯ ವಕ್ತಾರ ಯಹ್ಯ ಸಾರಿ ಹೇಳಿದ್ದಾನೆ. ಸಂಘರ್ಷ ಆರಂಭವಾದ ಬಳಿಕ ಇದು 3ನೇ ಬಾರಿ ಹೌಥಿಗಳು ದಾಳಿ ನಡೆಸುತ್ತಿದ್ದಾರೆ. ಅ.28ರಂದು ಹೌಥಿ ಉಗ್ರರು ಕ್ಷಿಪಣಿ ದಾಳಿ ನಡೆಸಿದ್ದರು, ಇದು ಈಜಿಪ್ಟ್ನಲ್ಲಿ ಸ್ಫೋಟಗೊಂಡಿತ್ತು. ನಡೆಸಿದ ದಾಳಿಯನ್ನು ಅಮೆರಿಕ ನೌಕಾಪಡೆ ಪ್ರತಿ ಬಂಧಿಸಿತ್ತು ಎಂದು ಅವನು ಹೇಳಿದ್ದಾನೆ
Author: AIN Author
ಬೆಂಗಳೂರು : ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಪಟಾಕಿ ಅವಘಡಗಳು ಸಂಭವಿಸಿದ್ದಲ್ಲಿ ಕಣ್ಣಿಗೆ, ಚರ್ಮಕ್ಕೆ ಹಾನಿಯಾಗುವುದನ್ನು ತಡೆಗಟ್ಟಲು ಆಸ್ಪತ್ರೆಗಳು ಅಗತ್ಯ ಸಿದ್ಧತೆ ಮಾಡಿಕೊಂಡಿವೆ. https://ainlivenews.com/muhurta-fix-for-bjps-new-president-vijayendras-inauguration/ ಹಬ್ಬದ ಸಮಯದಲ್ಲಿ 24X7 ಚಿಕಿತ್ಸೆ ನೀಡಲು ಬೆಂಗಳೂರಿನ ನಗರದ ಮಿಂಟೊ ಮತ್ತು ವಿಕ್ಟೋರಿಯಾ ಆಸ್ಪತ್ರೆಗಳು ಸಜ್ಜಾಗಿವೆ. ಆಸ್ಪತ್ರೆಗೆ ಬರುವ ಗಾಯಾಳುಗಳಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಲು ಮಿಂಟೋ ಕಣ್ಣಿನ ಆಸ್ಪತ್ರೆ ವೈದ್ಯರು ಮುಂದಿನ ಒಂದು ವಾರ 24X7 ಕಾರ್ಯ ನಿರ್ವಹಿಸಲಿದ್ದಾರೆ. ಪಟಾಕಿ ಸಿಡಿತದಿಂದ ಗಾಯಗೊಂಡು ಚಿಕಿತ್ಸೆಗೆ ಬರುವ ಮಕ್ಕಳಿಗಾಗಿ ಆಸ್ಪತ್ರೆ 15 ಬೆಡ್ಗಳಿರುವ ಪ್ರತ್ಯೇಕ ವಾರ್ಡ್ ಆರಂಭಿಸಿದೆ. ಯುವಕರಿಗೆ 10 ಬೆಡ್, ಮಹಿಳೆಯರಿಗೆ 10 ಬೆಡ್ ಸೇರಿದಂತೆ ಒಟ್ಟು 35 ಬೆಡ್ಗಳನ್ನ ಮೀಸಲಿರಿಸಿದೆ. ಪಟಾಕಿ ದುರಂತ ಎದುರಿಸಲು ಮಿಂಟೋ ಆಸ್ಪತ್ರೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ತುರ್ತು ಚಿಕಿತ್ಸೆಗೆ ಬೇಕಾದ ಸಿದ್ಧತೆಗಳನ್ನೂ ಮಾಡಿಕೊಂಡಿದ್ದು, ಔಷಧಿಗಳನ್ನು, ಐ ಡ್ರಾಪ್ಸ್ ಎಲ್ಲವನ್ನು ವಾರ್ಡ್ಗಳಲ್ಲಿ ಶೇಖರಿಸಿದೆ.
ಮಂಗಳೂರು: ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ.ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಉತ್ತಮ ಸಂಘಟಕರಾಗಿರುವ ಬಿ.ವೈ.ವಿಜಯೇಂದ್ರ ಸಾಮಾನ್ಯ ಕಾರ್ಯಕರ್ತರಾಗಿ ಬಂದ ಅವರನ್ನು ರಾಜ್ಯಾಧ್ಯಕ್ಷರನ್ನಾಗಿಸಿರುವುದು ಕಾರ್ಯಕರ್ತರಲ್ಲಿ ಹೊಸ ಹುರುಪು, ಉತ್ಸಾಹ ತಂದಿದೆ ಎಂದು ನಿರ್ಗಮಿತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಕಾಂಗ್ರೆಸ್ ಪಕ್ಷದ ಆಡಳಿತದ ವೈಫಲ್ಯಗಳು ಎದ್ದು ಕಂಡುಬರುತ್ತಿದೆ. ಕಳೆದ ಆರು ತಿಂಗಳ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಬರ ನಿರ್ವಹಣೆಯಲ್ಲಿ ಸಂಪೂರ್ಣ ಸೋತಿದೆ. ಇದೆಲ್ಲದರ ವಿರುದ್ಧ ಹೋರಾಟ ಕೈಗೆತ್ತಿಕೊಂಡು ಪಾರ್ಟಿಯನ್ನು ತಳಮಟ್ಟದಿಂದ ಮತ್ತೆ ಸಂಘಟನೆ ಮಾಡುವ ಶಕ್ತಿ ವಿಜಯೇಂದ್ರ ಅವರಿಗೆ ಇದೆ. ಜೊತೆಯಾಗಿ ಪಾರ್ಟಿಯನ್ನು ಕಟ್ಟಿ ಮತ್ತೆ ವಿಜಯೇಂದ್ರ ಅವರ ನೇತೃತ್ವದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದರು. https://ainlivenews.com/great-job-opportunity-in-hindustan-aeronautics-limited-posting-in-bangalore/ ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಕೆಲಸ ತೃಪ್ತಿ ಇದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಬಂದವನೆಂಬ ಅಪವಾದವಿತ್ತು. ಇಡೀ ರಾಜ್ಯವನ್ನು ಹದಿನೆಂಟು ಬಾರಿ ಸುತ್ತಿದ್ದು, ಮತಗಟ್ಟೆಯನ್ನು ಪೇಜ್ ಪ್ರಮುಖ್ ವರೆಗೆ ಸಂಘಟನೆ ಮಾಡುವ ಕೆಲಸ ಮಾಡಿದ್ದೇನೆ.…
ಬೆಂಗಳೂರು:- ಕೆಇಎ ಪರೀಕ್ಷಾ ಅಕ್ರಮ ಪ್ರಕರಣ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಾಗಿದೆ. ಗೃಹ ಇಲಾಖೆ ಸೂಚನೆ ಮೇರೆಗೆ ಪ್ರಕರಣದ ತನಿಖೆ ಹೊಣೆಯನ್ನು ಸಿಐಡಿಗೆ ನೀಡಲಾಗಿದೆ. ಕೆಇಎ ಪರೀಕ್ಷಾ ಅಕ್ರಮ ಪ್ರಕರಣ ಸಂಬಂಧ ಯಾದಗಿರಿ ನಗರ ಠಾಣೆಯಲ್ಲಿ 5 ಪ್ರಕರಣಗಳು ದಾಖಲಾಗಿದ್ದವು. ತನಿಖೆಗಾಗಿ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹೀತೇಂದ್ರ ಅವರು ಸಿಐಡಿ ತನಿಖಾಧಿಕಾರಿಗೆ ಪ್ರಕರಣದ ಕಡತಗಳನ್ನು ಹಸ್ತಾಂತರ ಮಾಡಿದ್ದಾರೆ. ಕೆಇಎ ಪರೀಕ್ಷೆ ಅಕ್ರಮ ಆರೋಪಿ ಕಿಂಗ್ಪಿನ್ ಆರ್.ಡಿ ಪಾಟೀಲ್ ಕಳೆದ 12 ದಿನಗಳಿಂದ ನಾಪತ್ತೆಯಾಗಿದ್ದ. ನ 6. ರಂದು ಕಲಬುರಗಿ ನಗರದ ವರ್ಧಾ ಲೇಔಟ್‌ನ ಮಹಾಲಕ್ಷ್ಮಿ ಅಪಾರ್ಟ್ಮೆಂಟ್‌ನ ಕಾಂಪೌಂಡ್ ಹಾರಿ ಆರ್.ಡಿ. ಪಾಟೀಲ್ ಎಸ್ಕೇಪ್ ಆಗಿದ್ದ. ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಆದರೆ, ಶುಕ್ರವಾರ ಮಹಾರಾಷ್ಟ್ರದ ಸೊಲ್ಲಾಪುರಲ್ಲಿ ಸಿಕ್ಕಿಬಿದ್ದಿದ್ದ. ಸದ್ಯ ಆತನನ್ನು ಬಂಧಿಸಿ ಕಲಬುರಗಿಗೆ ತರಲಾಗಿದೆ.
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿನ (Karnataka BJP) ಅಸಮಾಧಾನ, ಕಾಂಗ್ರೆಸ್ ಟೀಕೆಗಳ ನಡುವೆ ಬಿಜೆಪಿಯ ನೂತನ ಅಧ್ಯಕ್ಷ ವಿಜಯೇಂದ್ರ (BY Vijayendra) ಪದಗ್ರಹಣಕ್ಕೆ ಮುಹೂರ್ತ ನಿಗದಿಯಾಗಿದೆ. ನವೆಂಬರ್ 15ರ ಬೆಳಗ್ಗೆ 10 ಗಂಟೆಗೆ ಪಕ್ಷದ ಕಚೇರಿಯಲ್ಲಿ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ (BJP President) ಅಧಿಕಾರ ಸ್ವೀಕಾರ ಮಾಡಲಿದ್ದಾರೆ. https://ainlivenews.com/by-vijayendra-blessed-by-nirmalanandanath-sri/ ಬುಧವಾರ ಮಧ್ಯಾಹ್ನ 1 ಗಂಟೆಗೆ ಅರಮನೆ ಮೈದಾನದಲ್ಲಿ (Palace Ground) ಪದಗ್ರಹಣ ಸಮಾವೇಶ ನಡೆಯಲಿದೆ. ಇದಾದ ಮರುದಿನವೇ ನವೆಂಬರ್ 16ರಂದು ವಿಜಯೇಂದ್ರ ಪಕ್ಷದ ಶಾಸಕಾಂಗ ಸಭೆ ನಡೆಸಲು ಚಿಂತನೆ ನಡೆಸಿದ್ದಾರೆ. ಈ ವಿಚಾರವನ್ನು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ (JP Nadda) ಜೊತೆ ಚರ್ಚಿಸಿ ಅಂತಿಮಗೊಳಿಸಲಿದ್ದಾರೆ ವಿಜಯೇಂದ್ರ ಮೊದಲ ದಿನವೇ ಪಕ್ಷ ಸಂಘಟನೆಯ ಕೆಲಸಕ್ಕೆ ಕೈ ಹಾಕಿದ್ದಾರೆ. ಬೆಂಗಳೂರಿನ ಗಾಂಧಿನಗರದಲ್ಲಿ ಬೂತ್ ಅಧ್ಯಕ್ಷನ ಮನೆಗೆ ವಿಜಯೇಂದ್ರ ಮೊದಲ ಭೇಟಿ ನೀಡಿದರು. ಈ ಮೂಲಕ ಪಕ್ಷದ ಸಂಘಟನೆಯೇ ತಮ್ಮ ಮೊದಲ ಆದ್ಯತೆ. ಲೋಕಸಭೆ ಚುನಾವಣೆ ಗೆಲ್ಲುವುದೇ ನಮ್ಮ ಮುಂದಿರುವ ಸವಾಲು ಎಂಬ ಸಂದೇಶ ರವಾನಿಸಿದರು. ಚಾಮರಾಜನಗರ,…
ಉಡುಪಿ:- ವಿಜಯೇಂದ್ರ ಆಯ್ಕೆಯ ಫಲಿತಾಂಶ ಲೋಕಸಭಾ ಚುನಾವಣೆಯಲ್ಲಿ ತಿಳಿಯಲಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಪಕ್ಷದ ಹೈಕಮಾಂಡ್ ಬಹಳ ಸಮರ್ಥ, ಯುವಕ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಿದೆ, ರಾಜ್ಯ ಬಿಜೆಪಿಯ ಇಡೀ ತಂಡವೇ ವಿಜಯೇಂದ್ರ ಜೊತೆ ಒಟ್ಟಾಗಿ ನಿಂತು ಕೆಲಸ ಮಾಡಲಿದೆ, ಮುಂದಿನ ಚುನಾವಣೆಯಲ್ಲಿ ಅದರ ಫಲಿತಾಂಶ ಹೊರಬೀಳಲಿದೆ ಎಂದರು. ಮೋದಿ, ಅಮಿತ್ ಶಾ, ನಡ್ದಾ , ಬಿ.ಎಲ್. ಸಂತೋಷ್ ಎಲ್ಲರೂ ಒಮ್ಮತದಿಂದ ಈ ಆಯ್ಕೆ ಮಾಡಿದ್ದಾರೆ. ವಿಜಯೇಂದ್ರ ರಾಜ್ಯ ಬಿಜೆಪಿಯ ಉಪಾಧ್ಯಕ್ಷರಾಗಿ ಕೆಲಸ ಮಾಡಿದವರು. ಅವರಿಗೆ ರಾಜ್ಯಾಧ್ಯಕ್ಷ ಪಟ್ಟ ಒಲಿದಿದೆ, ಅವರ ಸಾಮರ್ಥ್ಯಕ್ಕೆ ಅನುಗುಣವಾಗಿ ಜವಾಬ್ದಾರಿಯನ್ನು ಕೊಡಲಾಗಿದೆ ಎಂದರು. ರಾಜ್ಯಾಧ್ಯಕ್ಷರ ಆಯ್ಕೆಯಲ್ಲಿ ಶ್ರೀ ರಾಮುಲು, ಸಿ.ಟಿ. ರವಿಗೆ ಬೇಸರ ಇಲ್ಲ, ಅವರೂ ಎಲ್ಲರೂ ಜೊತೆಯಾಗಿ ಪಕ್ಷ ಸಂಘಟನೆಯ ಕೆಲಸವನ್ನು ಮಾಡುತ್ತಾರೆ. ಎಲ್ಲ ಸಮಾಜವನ್ನು ಒಟ್ಟುಗೂಡಿಸಿಕೊಂಡು ಒಂದು ರಾಜಕೀಯ ಪಕ್ಷವನ್ನು ಕಟ್ಟಲಾಗುತ್ತದೆ ಎಂದ ಅವರು, ಸರ್ವವ್ಯಾಪಿ ಸರ್ವಸ್ಪರ್ಶಿ ಸಮುದಾಯ ಗಮನಲ್ಲಿಟ್ಟು ವಿಪಕ್ಷ ನಾಯಕನ ಆಯ್ಕೆ ಮಾಡಲಾಗುತ್ತದೆ ಎಂದರು.
ಮೈಸೂರು: ಬಿಜೆಪಿಯವರು ಪಕ್ಷಕ್ಕೆ ಸೇರಿಸಿಕೊಳ್ಳುವಾಗ ಜಾಮೂನು ನೀಡುತ್ತಾರೆ. ಅಧಿಕಾರ ಮುಗಿದ ಮೇಲೆ ವಿಷ ಕೊಡುತ್ತಾರೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್ ಪಕ್ಷದಲ್ಲಿದ್ದವನು. ಅವರಾಗಿಯೇ ಬಿಜೆಪಿಗೆ ಸೇರಿಸಿಕೊಂಡರು.ಈಗ ಎಸ್ ಟಿ ಸೋಮಶೇಖರ್ ಹೋದರೆ ಹೋಗಲಿ ಎಂದು ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು. ನನ್ನನ್ನು ಪಕ್ಷ ಬಿಡಿಸಲು ರೆಡಿಯಾಗಿದ್ದಾರೆ. https://ainlivenews.com/great-job-opportunity-in-hindustan-aeronautics-limited-posting-in-bangalore/ ನಾನು ಕ್ಷೇತ್ರದ ಅನುಕೂಲಕ್ಕಾಗಿ ಕೆಲಸ ಮಾಡುತ್ತಿದ್ದೇನೆ. ನನ್ನ ಕ್ಷೇತ್ರದ ಅಭಿವೃದ್ಧಿಗೆ ಸಿಎಂ, ಡಿಸಿಎಂ ಹತ್ತಿರ ಹೋಗುತ್ತೇನೆ. ಇದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದರು. ನಾನು ಸಿಎಂ, ಡಿಸಿಎಂ ಹೊಗಳುವುದನ್ನು ಸಹಿಸುತ್ತಿಲ್ಲ. ನನ್ನ ಕಚೇರಿಯಿಂದ ಕಾಂಗ್ರೆಸ್ ಗ್ಯಾರಂಟಿ ಫಾಲೋ ಅಪ್ ಮಾಡಿದ್ದೇನೆ. ಇದರಿಂದ ನನ್ನ ಕ್ಷೇತ್ರದ ಜನರಿಗೆ ಅನುಕೂಲವಾಗಿದೆ ಎಂದರು. ಆದರೆ ಬಿಜೆಪಿಯವರು ಅದೆಲ್ಲಾ ಕಾಂಗ್ರೆಸ್ ನ ಗ್ಯಾರಂಟಿ, ಅದಕ್ಕೆ ನೀವೇಕೆ ಉತ್ತೇಜನ ನೀಡುತ್ತೀರಿ ಎಂದು ಪ್ರಶ್ನೆ ಮಾಡುತ್ತಾರೆ. ಅರೇ ಸರ್ಕಾರ ಯಾವುದಾದರೂ ಇರಲಿ. ಜನಕ್ಕೆ ಒಳ್ಳೆಯದು ಮಾಡುವುದು ಬೇಡವೇ? ಎಂದು ತಮ್ಮ…
ಭಾರತ ಹಾಗೂ ನೆದರ್ಲೆಂಡ್ಸ್ ನಡುವೆ ವಿಶ್ವಕಪ್-2023 ಟೂರ್ನಿಯ ಅಂತಿಮ ಪಂದ್ಯ ಇಂದು ನಡೆಯಲಿದ್ದು, ಹೈವೋಲ್ಟೇಜ್ ಕದನಕ್ಕೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜಾಗಿದೆ. ಶನಿವಾರದಿಂದಲೇ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದು, ಸಾಕಷ್ಟು ವ್ಯವಸ್ಥೆ ಮಾಡಿಕೊಂಡಿದ್ದಾರೆ. ಪಂದ್ಯ ನೋಡಲು ಬರುವ ಸಾರ್ವಜನಿಕರು ತಮ್ಮ ವಾಹನಗಳ ಪಾರ್ಕಿಂಗ್ ಎಲ್ಲಿ ಮಾಡಬೇಕು. ಸ್ಟೇಡಿಯಂ ಸುತ್ತಮುತ್ತ ಏನೆಲ್ಲಾ ನಿಷೇಧಿಸಲಾಗಿದೆ. ಈ ಕುರಿತು ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ. 2023ರ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗಳು ಅಂತಿಮ ಘಟ್ಟ ತಲುಪಿವೆ. ಭಾನುವಾರ ಬೆಂಗಳೂರಿನಲ್ಲಿ ವಿಶ್ವಕಪ್ ಟೂರ್ನಿಯ ಕೊನೆ ಲೀಗ್ ಪಂದ್ಯ ನಡೆಯಲಿದ್ದು, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತ ಮತ್ತು ನೆದರ್ಲೆಂಡ್ಸ್ ತಂಡಗಳು ಸೆಣಸಾಡಲಿವೆ. ನಗರದಲ್ಲಿ ನಾಳೆ ನಡೆಯಲಿರೋ ಪಂದ್ಯಕ್ಕೆ ಸ್ಟೇಡಿಯಂ ಸುತ್ತಮುತ್ತ ಪೊಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಿದ್ದಾರೆ. ಗೂಡ್ಸ್ ವಾಹನಗಳ ಸಂಚಾರಕ್ಕೆ ನಿರ್ಬಂಧ ಚಿನ್ನಸ್ವಾಮಿ ಸ್ಟೇಡಿಯಂನ ಒಳ ಮತ್ತು ಹೊರ ಭಾಗದಲ್ಲಿ ಸುಮಾರು ಒಂದು ಸಾವಿರ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಹೆಚ್ಚುವರಿ ಪೊಲೀಸ್ ಆಯುಕ್ತರ ಮೇಲುಸ್ತುವಾರಿಯಲ್ಲಿ ನಾಲ್ವರು ಡಿಸಿಪಿಗಳು ಭದ್ರತೆಯ ನೇತೃತ್ವ ವಹಿಸಿದ್ದಾರೆ. ಸ್ಟೇಡಿಯಂ ಸುತ್ತಲಿನ ಕಬ್ಬನ್…
ಬೆಂಗಳೂರು:- ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ನವೆಂಬರ್ 16ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉಡುಪಿ, ಕೋಟ, ಪಣಂಬೂರು, ಉಪ್ಪಿನಂಗಡಿ, ಕೊಟ್ಟಿಗೆಹಾರದಲ್ಲಿ ಮಳೆಯಾಗಿದೆ. ವಿಜಯಪುರದಲ್ಲಿ 18.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿಯ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ತುಂತುರು ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು: ಕಾರು ಅಪಘಾತ ಪ್ರಕರಣದಲ್ಲಿ ನಟ ನಾಗಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. https://ainlivenews.com/a-young-man-died-after-falling-from-a-multi-storied-building/ ಪ್ರಕರಣಕ್ಕೆ ಸಂಬಂಧಿಸಿ ಸದ್ಯ 60 ಸಾಕ್ಷಿಗಳನ್ನು ಪೊಲೀಸರು ಕಲೆಹಾಕಿದ್ದಾರೆ. ಇದರಿಂದ ನಾಗಭೂಷಣ್ ಅವರಿಗೆ ಸಂಕಷ್ಟ ಮತ್ತಷ್ಟು ಹೆಚ್ಚಲಿದೆ. ಮುಂದಿನ ದಿನಗಳಲ್ಲಿ ಪ್ರಕರಣ ಯಾವ ರೀತಿಯಲ್ಲಿ ಸಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಅಕ್ಟೋಬರ್ 30ರಂದು ಬೆಂಗಳೂರಿನ ಕೋಣನ ಕುಂಟೆ ಸಮೀಪ ಅಪಘಾತ ಸಂಭವಿಸಿತ್ತು. ನಾಗಭೂಷಣ್ ಓಡಿಸುತ್ತಿದ್ದ ಕಾರು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಳಿಕ ವಿದ್ಯುತ್ ಕಂಬಕ್ಕೆ ಗುದ್ದಿತ್ತು. ಈ ವೇಳೆ ಪ್ರೇಮಾ ಎಂಬುವವರು ಮೃತಪಟ್ಟರೆ, ಅವರ ಪತಿ ಕೃಷ್ಣ ಅವರಿಗೆ ಗಂಭೀರ ಗಾಯವಾಗಿತ್ತು. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಚೇತರಿಕೆ ಕಂಡಿದ್ದು, ಅವರು ಹೇಳಿಕೆ ದಾಖಲು ಮಾಡಿದ್ದಾರೆ.