ಕತ್ತಲೆಯನ್ನು ಹೋಗಲಾಡಿಸಿ ಮನೆ ಹಾಗೂ ಮನದ ಕತ್ತಲೆಯನ್ನು ನಿವಾರಿಸಿ ಬೆಳಕನ್ನು ಉಂಟು ಮಾಡುವ ಹಬ್ಬವೇ ದೀಪಾವಳಿ. ಮುಂಗಾರು ಬೆಳೆ ಕೊಯ್ಲಿಗೆ ಬರುವ ಸಮಯದಲ್ಲಿ ಈ ಹಬ್ಬ ಬರುವುದು ವಿಶೇಷ. ಕೆಲ ಕಡೆ ಆಶ್ವಯುಜ ಮಾಸದ ಕೊನೆಯ ಎರಡು ದಿನಗಳು ಹಾಗೂ ಕಾರ್ತಿಕ ಮಾಸದ ಮೊದಲನೆಯ ದಿನ ಈ ಹಬ್ಬವನ್ನು ಆಚರಿಸಿದರೆ ಇನ್ನು ಕೆಲ ಕಡೆ ಮುಂದಿನ ಎರಡು ದಿನಗಳನ್ನು ಸೇರಿಸಿ 5 ದಿನ ವಿಜೃಂಭಣೆಯಿಂದ ಈ ಹಬ್ಬವನ್ನು ಆಚರಿಸಲಾಗುತ್ತದೆ. ಭಾರತದ ಬೇರೆ ಬೇರೆ ಪ್ರದೇಶಗಳಲ್ಲಿ ದೀಪಾವಳಿಗೆ ಅದರದ್ದೇ ಆದ ಮಹತ್ವವಿದೆ . ಆದರೆ ನಿಮಗೆ ಗೊತ್ತಾ, ಭಾರತದ ಈ 2 ಸ್ಥಳಗಳಲ್ಲಿ ದೀಪಾವಳಿಯನ್ನು ಆಚರಿಸುವುದಿಲ್ಲ. ಆಶ್ಚರ್ಯ ಹಾಗೂ ಅಚ್ಚರಿಯಾಗಬಹುದು . ದೀಪಾವಳಿಯನ್ನು ಭಾರತದ ಕೇರಳ ರಾಜ್ಯದಲ್ಲಿ ಮತ್ತು ಕರ್ನಾಟಕದ ಮೇಲುಕೋಟೆಯಲ್ಲಿ ಆಚರಿಸುವುದಿಲ್ಲ.ಕಾರಣವೇನಿರಬಹುದು ಅಂತೀರಾ ಇಲ್ಲಿದೆ ಡಿಟೇಲ್ಸ್! ಕೇರಳ ರಾಜ್ಯದಲ್ಲಿ ದೀಪಾವಳಿ ಹಬ್ಬ ಆಚರಿಸದೇ ಇರಲು ಕಾರಣವಿದೆ. ಅದೇನೆಂದರೆ, ಕೇರಳದ ರಾಜ ಮಹಾಬಲಿ ದೀಪಾವಳಿಯ ದಿನದಂದು ನಿಧನರಾದರು ಎಂದು ನಂಬಲಾಗಿದೆ. ಈ ಕಾರಣಕ್ಕಾಗಿ…
Author: AIN Author
ಬೆಂಗಳೂರು:- ಕಾಂಗ್ರೆಸ್ನ ಬೆದರಿಕೆ ತಂತ್ರಗಳಿಗೆ ನಮ್ಮ ಕಾರ್ಯಕರ್ತರು ಹೆದರಲ್ಲ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಅಧಿಕಾರದ ಬಲದಿಂದ ಕಾಂಗ್ರೆಸ್ ಪಕ್ಷ ಏನೇ ತಂತ್ರ, ಕುತಂತ್ರ ಮಾಡಲಿ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ನ ಕೇಸ್, ಬೆದರಿಕೆ ತಂತ್ರಗಳಿಗೆ ಪಕ್ಷದ ಕಾರ್ಯಕರ್ತರು ಹೆದರುವುದಿಲ್ಲ. ಹೋರಾಟದಿಂದ ಹಿಂದೆ ಸರಿದ ಉದಾಹರಣೆಗಳಿಲ್ಲವೆಂದರು. ಕಾಂಗ್ರೆಸ್ ಅಬ್ಬರವನ್ನು ಮೀರಿ ನಮ್ಮ ಕಾರ್ಯಕರ್ತರು ಸಂಘಟನೆ ಮಾಡುತ್ತಾರೆ. ಲೋಕಸಭೆ ಚುನಾವಣೆಯಲ್ಲಿ ಉತ್ತರ ಕೊಡಲಿದ್ದೇವೆ ಎಂದು ಹೇಳಿದರು. ಬೂತ್ ಅಧ್ಯಕ್ಷರ ಮನೆಗೆ ಭೇಟಿ ನೀಡಿ ದೀಪಾವಳಿ ಶುಭಾಶಯ ಕೋರಿರುವೆ. ರಾಜ್ಯದ 58,282 ಬೂತ್ಗಳಲ್ಲಿ ಪಕ್ಷದ ಸಂಘಟನೆಗೆ ಬಲಪಡಿಸಲಾಗುವುದು. ಪ್ರತಿ ಬೂತ್ ಅಧ್ಯಕ್ಷ, ಪೇಜ್ ಪ್ರಮುಖ ಪಕ್ಷದ ಜೀವಾಳ ಎಂಬುದು ಹಿಂದಿನ ರಾಷ್ಟ್ರೀಯ ಅಧ್ಯಕ್ಷ, ಕೇಂದ್ರ ಗೃಹ ಸಚಿವ ಅಮಿತ್ ಷಾ, ಹಾಲಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಪರಿಕಲ್ಪನೆ ಹಾಗೂ ಚಿಂತನೆಯಾಗಿದೆ ಎಂದರು. ಪಕ್ಷದ ರಾಷ್ಟ್ರೀಯ ನಾಯಕರು ಬೂತ್…
ಇಂದು ಭಾರತ ಕೊನೆಯ ವಿಶ್ವಕಪ್ ಲೀಗ್ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಇದು 13ನೇ ವಿಶ್ವಕಪ್ ಪಂದ್ಯಾವಳಿಯ ಕೊನೆಯ ಲೀಗ್ ಮುಖಾಮುಖಿಯೂ ಹೌದು. ಇದಕ್ಕೆ ಸಾಕ್ಷಿಯಾಗಲಿರುವ ಅಂಗಳ ಉದ್ಯಾನನಗರಿಯ “ಎಂ. ಚಿನ್ನಸ್ವಾಮಿ ಸ್ಟೇಡಿಯಂ. ಫಲಿತಾಂಶಕ್ಕೆ ಸಂಬಂಧಿಸಿದಂತೆ ಇಲ್ಲಿ ವಿಪರೀತ ನಿರೀಕ್ಷೆಗಳೇನಿಲ್ಲ. ಆದರೆ ಟೀಮ್ ಇಂಡಿಯಾ ಎಲ್ಲ 9 ಪಂದ್ಯಗಳನ್ನು ಗೆದ್ದು ಅಜೇಯ ಅಭಿ ಯಾನ ಕಾಯ್ದುಕೊಂಡು ಬರಬೇಕು ಎನ್ನುವುದು ಅಭಿಮಾನಿಗಳ ನಂಬಿಕೆ. ಸಾಮಾನ್ಯ ತಂಡವಾಗಿದ್ದರೂ ಒಂದೆ ರಡು ಅಚ್ಚರಿಯ ಫಲಿತಾಂಶವನ್ನು ದಾಖಲಿ ಸಿರುವ ನೆದರ್ಲೆಂಡ್ಸ್ ವಿರುದ್ಧ ಬಲಿಷ್ಠ ಭಾರತ ಮೇಲುಗೈ ಸಾಧಿಸದೇ ಇರಲು ಕಾರಣಗಳೇ ಇಲ್ಲ. ಆದರೂ ಎಷ್ಟೆಷ್ಟೋ ದೊಡ್ಡ ತಂಡಗಳನ್ನು ಬಡಿದುರುಳಿಸಿ ಇಲ್ಲಿಯ ತನಕ ಬಂದಿರುವ ರೋಹಿತ್ ಪಡೆ ಕೊನೆಯಲ್ಲಿ ಆಘಾತಕಾರಿ ಫಲಿತಾಂಶವನ್ನು ಕಾಣಬಾರದಲ್ಲ. ಹೀಗಾಗಿ ಈ ಪಂದ್ಯವನ್ನೂ ಹಿಂದಿನಂತೆ ಅತ್ಯಂತ ಗಂಭೀರವಾಗಿಯೇ ಆಡಿ ಭರ್ಜರಿ ಗೆಲುವನ್ನು ಸಾಧಿಸುವುದು ಟೀಮ್ ಇಂಡಿಯಾದ ಗುರಿ ಆಗಬೇಕು, ಮತ್ತು ಆಗಿರುತ್ತದೆ ಕೂಡ. “ಓವರ್ ಕಾನ್ಫಿಡೆನ್ಸ್’ಗೆ ಇಲ್ಲಿ ಜಾಗ ಇರಕೂಡದು. ವಿಶ್ವಕಪ್‌ನಲ್ಲಿ ನೆದರ್ಲೆಂಡ್ಸ್ ವಿರುದ್ಧ…
ಆಂದ್ರಪ್ರದೇಶ: ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ ಈ ವರ್ಷದ ಕೊನೆಯಲ್ಲಿ ನಡೆಯಲಿರುವ ತೆಲಂಗಾಣದಲ್ಲಿ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಚುನಾವಣೆಗೆ ಸ್ಪರ್ಧಿಸಿರುವ ಸಿಎಂ ಚಂದ್ರಶೇಖರ್ ರಾವ್ ತಮ್ಮ ಬಳಿ ಇರುವ ಆಸ್ತಿ ವಿವರಗಳನ್ನು ಘೋಷಣೆ ಮಾಡಿದ್ದಾರೆ. ತಮ್ಮ ಬಳಿ 58.92 ಕೋಟಿ ರೂಪಾಯಿ ಆಸ್ತಿ ಇರುವುದಾಗಿ ಚಂದ್ರಶೇಖರ್ ರಾವ್ ಘೋಷಿಸಿಕೊಂಡಿದ್ದಾರೆ. ಸಿಎಂ ಆಗಿರುವ ಕೆಸಿಆರ್ ಸ್ವಂತದ ಕಾರು, ಕೃಷಿ ಭೂಮಿಯನ್ನು ಹೊಂದಿಲ್ಲ. ಆದರೆ, ಪ್ರಮಾಣಪತ್ರದಲ್ಲಿ ತಾವು ಕೃಷಿಕರು ಎಂದು ನಮೂದಿಸಿರುವುದು ವಿಚಿತ್ರವಾಗಿದೆ. ಬಿಆರ್‌ಎಸ್ ನಾಯಕ ಕೆಸಿಆರ್ ಗಜ್ವೆಲ್ ಮತ್ತು ಕಮ್ಮಾರೆಡ್ಡಿ ಎರಡೂ ಸ್ಥಾನಗಳಿಗೆ ನಾಮಪತ್ರ ಸಲ್ಲಿಸಿದರು. https://ainlivenews.com/great-job-opportunity-in-hindustan-aeronautics-limited-posting-in-bangalore/ 2018 ರ ಚುನಾವಣೆಯಲ್ಲಿ ಕೆಸಿಆರ್ ಬಳಿ 22 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಇತ್ತು. ಈ ಹಿಂದೆಯೂ ತಮ್ಮ ಬಳಿ ಸ್ವಂತ ಕಾರು ಇಲ್ಲವೆಂದು ಘೋಷಿಸಿದ್ದರು. ಆದರೆ 2015 ರಲ್ಲಿ ಸಿಎಂ ಬೆಂಗಾವಲು ಪಡೆಯಲ್ಲಿ ನಾಲ್ಕು ಟೊಯಾಟಾ ಲ್ಯಾಂಡ್ ಕ್ರೂಸರ್ ಕಾರು ಇತ್ತು. ತಮ್ಮದು ಹಿಂದೂ ಅವಿಭಜಿತ ಕುಟುಂಬ ಎಂದು ಘೋಷಿಸಿರುವ ಕೆಸಿಆರ್,…
ಸಾಮಾನ್ಯವಾಗಿ ಎಲ್ಲರೂ ‘ಫ್ರೈಡ್ ರೈಸ್’ ತಿನ್ನುತ್ತಿರುತ್ತಾರೆ. ಆದರೆ ‘ಚಿಕನ್ ಫ್ರೈಡ್ ರೈಸ್’ ಎನ್ನುವ ರೆಸಿಪಿ ಇದೆ ಎಂದು ಎಷ್ಟೋ ಜನರಿಗೆ ಗೊತ್ತೇ ಇರುವುದಿಲ್ಲ. ಅದಕ್ಕೆ ಇಂದು ನಿಮ್ಮ ಮನೆಯಲ್ಲಿಯೇ ಸಿಂಪಲ್ ಆಗಿ ಹೇಗೆ ಈ ರೆಸಿಪಿ ಟ್ರೈ ಮಾಡಬಹುದು ಎಂದು ಹೇಳಿಕೊಡುತ್ತಿದ್ದೇವೆ. ಬೇಕಾಗಿರುವ ಪದಾರ್ಥಗಳು: * ಆಲಿವ್ ಎಣ್ಣೆ – 2 ಟೀಸ್ಪೂನ್ * ಕಟ್ ಮಾಡಿದ ಚಿಕನ್ – 2 ಕಪ್ * ಕರಿಮೆಣಸು – 2 ಟೀಸ್ಪೂನ್ * ಎಳ್ಳಿನ ಎಣ್ಣೆ – 2 ಟೀಸ್ಪೂನ್ * ಕಟ್ ಮಾಡಿದ ಈರುಳ್ಳಿ – 1 ಕಪ್ * ಕಟ್ ಮಾಡಿದ ಕ್ಯಾರೆಟ್ – ಅರ್ಧ ಕಪ್ * ಲವಂಗ – 1 ಟೀಸ್ಪೂನ್ * ಶುಂಠಿ, ಬೆಳ್ಳುಳ್ಳಿ ಪೇಸ್ಟ್ – 1 ಟೀಸ್ಪೂನ್ * ಬೇಯಿಸಿದ ಅಕ್ಕಿ – 3 ಕಪ್ * ನೆನೆಸಿಟ್ಟ ಬಟಾಣಿ – ಅರ್ಧ ಕಪ್ * ಮೊಟ್ಟೆಗಳು – 2 * ಸೋಯಾ…
ಬೆಂಗಳೂರು:- ಲೋಕಸಭಾ ಚುನಾವಣೆ ನಂತರ ವೈಯಕ್ತಿಕ ರಾಜಕಾರಣ ಮಾಡುತ್ತೇನೆ ಎಂದು ಮಾಜಿ ಶಾಸಕ ಸಿ ಟಿ ರವಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನಾನೇನು ರಾಜಕೀಯ ಸನ್ಯಾಸಿಯಲ್ಲ, ಲೋಕಸಭಾ ಚುನಾವಣೆ ಬಳಿಕ ನಾನು ನನ್ನ ವೈಯಕ್ತಿಕ ರಾಜಕಾರಣ ಮಾಡುತ್ತೇನೆ. ಚುನಾವಣೆ ಎನ್ನುವುದು ಇಬ್ಬರ ನಡುವಿನ ಚೆಸ್ ಗೇಮ್ ಅಲ್ಲ, ತಂಡವಾಗಿ ಎಲ್ಲರೂ ಸರಿಯಾಗಿ ಕೆಲಸ ಮಾಡಿದಾಗ ಮಾತ್ರ ಯಶಸ್ಸು ಸಿಗಲಿದೆ. ನಾಯಕ ಸಮನ್ವಯತೆ ಮೂಡಿಸುವ ಕೆಲಸ ಮಾಡಿ ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯಬೇಕು ಎಂದರು. ನಾನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿ ಆಗಿರಲಿಲ್ಲ, ಹಾಗಾಗಿ ನನಗೆ ಯಾವುದೇ ಅಸಮಾಧಾನ ಇಲ್ಲ. ನಮ್ಮ ಗುರಿ 2024ಕ್ಕೆ ಮತ್ತೊಮ್ಮೆ ನರೇಂದ್ರ ಮೋದಿ ಸರ್ಕಾರ ತರಬೇಕು ಎನ್ನುವುದಾಗಿದೆ. ಮೂರನೇ ಬಾರಿ ಮೋದಿ ಪಿಎಂ ಆಗಬೇಕಾಗಿರುವುದು ದೇಶಕ್ಕಾಗಿ. ಮೋದಿ ನೇತೃತ್ವ, ಬಿಜೆಪಿ ವಿಚಾರಧಾರೆ ಕಾರಣದಿಂದ ಭಾರತ ವಿಶ್ವಗುರುವಾಗಲಿದೆ. ಅದಕ್ಕಾಗಿ ಬಿಜೆಪಿ ಅಧಿಕಾರಕ್ಕೆ ಬರಬೇಕು ಆ ಕಡೆಗೆ ಮಾತ್ರ ನಮ್ಮ ಗಮನವಿರಲಿದೆ” ಎಂದರು. ನಾವೇನು ಸನ್ಯಾಸಿಗಳಲ್ಲ, ಈಗೇನಿದ್ದರೂ ಮೋದಿ ಸರ್ಕಾರ ಅಧಿಕಾರಕ್ಕೆ…
ಬೆಂಗಳೂರು:- ಅಂಧಕಾರವ ಕಳೆದು ಬೆಳಕಿನೆಡೆಗೆ ಕರೆದುಕೊಂಡು ಹೋಗುವ ದೀಪಗಳ ಹಬ್ಬವನ್ನು ಸ್ವಾಗತಿಸಲು ನಗರದ ಮಾರುಕಟ್ಟೆಯಲ್ಲಿ ಬಗೆಬಗೆಯ ಹಣತೆಗಳು ಬಂದಿವೆ. ಮಣ್ಣಿನ ದೀಪಗಳು ದುಬಾರಿ ಎನಿಸಿದರೂ ಪರಿಸರ ಸ್ನೇಹಿ ದೀಪಗಳಾಗಿರುವುದರಿಂದ ಬೇಡಿಕೆ ಹೆಚ್ಚಿದೆ. ನಗರದಲ್ಲಿ ಜೇಡಿ ಮಣ್ಣಿನಿಂದ ಹೂವು, ಆನೆಯ ಮಾದರಿಯ ದೀಪ, ನವಿಲುಗರಿ ಮತ್ತು ಮಹಿಳಾ ಪ್ರತಿರೂಪದ ದೀಪ ಸೇರಿದಂತೆ ಬಣ್ಣ ಬಣ್ಣದ ಹಣತೆಗಳು ಗ್ರಾಹಕರನ್ನು ಆಕರ್ಷಿಸುತ್ತಿವೆ. ಮಲ್ಲೇಶ್ವರ, ರಾಜಾಜಿನಗರ, ಜೆಪಿ ನಗರ, ವಸಂತನಗರ, ಶಿವಾಜಿನಗರ, ಶೇಷಾದ್ರಿಪುರ ಸೇರಿದಂತೆ ವಿವಿಧೆಡೆ ದೀಪಗಳ ಖರೀದಿ ಭರದಿಂದ ಸಾಗಿದೆ. ಮಣ್ಣಿನ ಹಣತೆ, ಮಡಿಕೆ, ಹೂಕುಂಡ ಮನೆಯ ಅಲಂಕಾರಿಕ ವಸ್ತುಗಳನ್ನು ಜನರು ಖರೀದಿಸುತ್ತಿದ್ದಾರೆ. ಬಣ್ಣ, ಆಕೃತಿ, ಗಾತ್ರಕ್ಕನುಗುಣವಾಗಿ ಒಂದು ಹಣತೆಗೆ 10 ರೂ. ಗಳಿಂದ 250 ರೂಪಾಯಿವರೆಗೆ ಮಾರಾಟ ಮಾಡಲಾಗುತ್ತಿದೆ ಪರಿಸರಸ್ನೇಹಿ ಮಣ್ಣಿನಿಂದ ತಯಾರಿಸಲಾದ ಹಣತೆಗಳಿಗೆ ಈ ಬಾರಿ ಬಹುಬೇಡಿಕೆಯಿದೆ.ಪಟಾಕಿಗಳನ್ನು ಬದಿಗಿಟ್ಟು ಈ ಬಾರಿ ಪರಿಸರ ಮಾಲಿನ್ಯಗೊಳಿಸದೇ ಹೆಚ್ಚು ಹಣತೆಗಳನ್ನು ಕೊಂಡು ದೀಪ ಹಚ್ಚಿ ಸಂಭ್ರಮಿಸುವ ಸಂಕಲ್ಪವನ್ನು ಎಲ್ಲರೂ ಮಾಡಬೇಕು ಎಂದು ರಾಜ್ಯ ಕುಂಬಾರರ ಸಂಘದ…
ಇಸ್ಲಾಮಾಬಾದ್: ಹಲವು ಔಷಧೀಯ ಗುಣಗಳನ್ನು ಹೊಂದಿರುವ ಅಪರೂಪದ ಮೀನುಗಳನ್ನು ಮಾರಾಟ ಮಾಡಿ ಪಾಕಿಸ್ತಾನದ ಮೀನುಗಾರನೊಬ್ಬ (Pakistan Fisherman) ರಾತ್ರೋರಾತ್ರಿ ಕೋಟ್ಯಧಿಪತಿಯಾಗಿದ್ದಾರೆ. ಬಡ ಇಬ್ರಾಹಿಂ ಹೈದರಿ ಮೀನುಗಾರಿಕಾ ಗ್ರಾಮದಲ್ಲಿ ವಾಸಿಸುವ ಹಾಜಿ ಬಲೋಚ್ ಮತ್ತು ಆತನ ಸಂಗಡಿಗರು ಅರಬ್ಬಿ ಸಮುದ್ರದಿಂದ ಗೋಲ್ಡನ್ ಫಿಶ್ ಅಥವಾ “ಸೋವಾ” (Sowa Fish) ಎಂದು ಕರೆಯಲ್ಪಡುವ ಮೀನುಗಳನ್ನು ಹಿಡಿದಿದ್ದರು. ಮೀನು ಮಾರಿ ಬಂದ ಹಣವನ್ನು 7 ಮಂದಿ ಮೀನುಗಾರರು ಹಂಚಿಕೊಂಡಿದ್ದಾರೆ. ಬೆಳಗ್ಗೆ ಕರಾಚಿ ಬಂದರಿನಲ್ಲಿ ಅಪರೂಪದ ಮೀನುಗಳನ್ನು ಹರಾಜು ಹಾಕಲಾಯಿತು. ಸುಮಾರು 7 ಕೋಟಿ ರೂಪಾಯಿಗೆ ಮೀನು ಮಾರಾಟವಾಗಿದೆ ಎಂದು ಪಾಕಿಸ್ತಾನದ ಮೀನುಗಾರರ ಜಾನಪದ ವೇದಿಕೆಯ ಮುಬಾರಕ್ ಖಾನ್ ತಿಳಿಸಿದ್ದಾರೆ. ಸೋವಾ ಮೀನು ಅಪರೂಪದ್ದು ಮತ್ತು ಬೆಲೆಬಾಳುವಂತಹದ್ದು. ಏಕೆಂದರೆ ಅದರ ಹೊಟ್ಟೆಯಲ್ಲಿರುವ ಪದಾರ್ಥಗಳು ಕಾಯಿಲೆಗಳನ್ನು ಗುಣಪಡಿಸುವ ಮತ್ತು ಔಷಧೀಯ ಗುಣಗಳನ್ನು ಹೊಂದಿವೆ ಎಂದು ಹೇಳಲಾಗುತ್ತದೆ. ಮೀನಿನ ದಾರದಂತಹ ವಸ್ತುವನ್ನು ಶಸ್ತ್ರಚಿಕಿತ್ಸಾ ವಿಧಾನಗಳಲ್ಲಿಯೂ ಬಳಸಲಾಗುತ್ತದೆ. https://ainlivenews.com/great-job-opportunity-in-hindustan-aeronautics-limited-posting-in-bangalore/ ಒಂದು ಮೀನು ಹರಾಜಿನಲ್ಲಿ ಸುಮಾರು 70 ಲಕ್ಷ ರೂಪಾಯಿಗೆ ಮಾರಾಟವಾಗುತ್ತದೆ. ಸಾಮಾನ್ಯವಾಗಿ 20…
ಬೆಂಗಳೂರು:- ಗಣೇಶ ದೇವರೇ ಅಲ್ಲ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಾಣೇಹಳ್ಳಿ ಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳ ವಿರುದ್ಧ ಹಿಂದೂ ಪರ ಹೋರಾಟಗಾರ ಪ್ರಶಾಂತ್ ಸಂಬರಗಿ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೋಟ್ಯಂತರ ಜನ ಅನುಯಾಯಿಗಳನ್ನು ಹೊಂದಿರುವ ಪಂಡಿತಾರಾಧ್ಯ ಶ್ರೀಗಳು ಸಮಾಜದ ಒಂದು ವರ್ಗವನ್ನು ಓಲೈಸುವ ಭರದಲ್ಲಿ, ದೇಶದ ಬಹುಸಂಖ್ಯಾತರ ಆರಾಧನೆಯ, ನಂಬಿಕೆಯ ಕೇಂದ್ರ ಬಿಂದುವಾಗಿರುವ, ಶತಮಾನಗಳಿಂದ ಪೂಜಿಸಲ್ಪಡುತ್ತಿರುವ ಗಣಪತಿ ದೇವರ ಕುರಿತು ಅತ್ಯಂತ ಕೀಳು ಹೇಳಿಕೆ ನೀಡಿದ್ದಾರೆ. ಸರ್ವಧರ್ಮೀಯರು ಪೂಜಿಸುವ ಗಣೇಶನ ಭಕ್ತವರ್ಗದ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಿಂದೂ ಧರ್ಮದ ಪ್ರಮುಖ ದೇವತೆಗಳಲ್ಲಿ ಅಗ್ರ ಸ್ಥಾನ ಪಡೆದಿರುವ ವಿಘ್ನ ನಿವಾರಕನ ಬಗ್ಗೆ, ಹಾಗೂ ಹಿಂದೂ ಧರ್ಮದ ನಂಬಿಕೆಗಳನ್ನು ಅವಹೇಳನ ಮಾಡಿದ್ದು, ಇದರಿಂದ ಭಕ್ತರ ಧಾರ್ಮಿಕ ಭಾವನೆಗಳಿಗೆ ತೀವ್ರ ಕುಂದುಂಟಾಗಿದೆ. ಸಾರ್ವಜನಿಕವಾಗಿ ಹೀಗೆ ಹಿಂದೂ ದೇವರ ವ್ಯಂಗ್ಯದ ಹಿಂದೆ ಸಮಾಜದ ಸಾಮರಸ್ಯಕ್ಕೆ ಹಾಳು ಮಾಡುವ ಕುತಂತ್ರ ಅಡಗಿರುವುದು ಸ್ಪಷ್ಟವಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಐಸಿಸಿ ಏಕದಿನ ವಿಶ್ವಕಪ್‌ನ ಭಾರತ ಹಾಗೂ ನೆದರ್ಲೆಂಡ್ಸ್ ನಡುವಿನ ಪಂದ್ಯ ನಡೆಯಲಿದೆ. ಹೀಗಾಗಿ ಸುಗಮ ಸಂಚಾರದ ದೃಷ್ಟಿಯಿಂದ ಮೈದಾನದ ಸುತ್ತಮುತ್ತ ಸರಕು ಹಾಗೂ ಸಾಗಣಿಕೆ ವಾಹನಗಳಿಗೆ ನಿಷೇಧ ವಿಧಿಸಲಾಗಿದೆ. ವಿಶ್ವಕಪ್‌ನಲ್ಲಿ ಲೀಗ್ ಹಂತದ ಮತ್ತು ಭಾರತ ತಂಡದ ಕೊನೆಯ ಪಂದ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಯಾವುದೇ ರೀತಿಯ ಸಂಚಾರ ದಟ್ಟಣೆ ಆಗದಂತೆ ಕ್ರಮವಹಿಸಲಾಗಿದೆ. ಕ್ಯಾಬ್ಗಳಿಗೆ ಪಿಕ್ ಅಪ್ ಅಂಡ್ ಡ್ರಾಪ್ ಸ್ಥಳಗಳನ್ನ ಗುರುತಿಸಲಾಗಿದೆ. ವಾರಾಂತ್ಯ ಆಗಿರುವುದರಿಂದ ಭಾನುವಾರ ಸಾರ್ವಜನಿಕರು ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳಲ್ಲಿ ಪ್ರಯಾಣಿಸುವುದನ್ನು ಸಾಧ್ಯವಾದಷ್ಡು ಕಡಿಮೆ ಮಾಡಿದರೆ ಉತ್ತಮ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್. ಅನುಚೇತ್ ತಿಳಿಸಿದ್ದಾರೆ. ಟೂರ್ನಿಯಲ್ಲಿ ಒಂದೂ ಸೋಲು ಕಾಣದೇ ಟೇಬಲ್ ಟಾಪ್ನಲ್ಲಿರುವ ಟೀಮ್ ಇಂಡಿಯಾಕ್ಕೆ ತಳ ಮಟ್ಟದಲ್ಲಿರುವ ಕ್ರಿಕೆಟ್ ಶಿಶು ನೆದರ್ಲೆಂಡ್ಸ್ ಸಾವಾಲು ಒಡ್ಡುತ್ತಿದೆ. ಡಚ್ ತಂಡ ಅಂಕಪಟ್ಟಿಯಲ್ಲಿ ಕೆಳಗೆ ಇರಬಹುದು. ಹಾಗೆಂದ ಮಾತ್ರಕ್ಕೆ ಕೇವಲವಾಗಿ ನೋಡಲು ಸಾಧ್ಯವಿಲ್ಲ. ಏಕೆಂದರೆ ಟೂರ್ನಿಯಲ್ಲಿ ಬಲಿಷ್ಟ ಬ್ಯಾಟಿಂಗ್ ಬಲವನ್ನು ಹೊಂದಿರುವ…