Author: AIN Author

ನವದೆಹಲಿ: ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಿಂದಾಗಿ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಹದಗೆಟ್ಟಿದೆ. ಇದೀಗ ಖಲಿಸ್ತಾನಿ ಭಯೋತ್ಪಾದಕ (Khalistani Terrorist) ಗುರುಪತ್ವಂತ್ ಸಿಂಗ್ ಪನ್ನುನ್ (Gurpatwant Singh Pannun) ಬೆದರಿಕೆ ವೀಡಿಯೋವೊಂದನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ನವೆಂಬರ್ 19 ರಂದು ಏರ್ ಇಂಡಿಯಾ ವಿಮಾನಗಳಲ್ಲಿ (Air India Flight) ಸಿಖ್ಖರು ಪ್ರಯಾಣಿಸದಂತೆ ಎಚ್ಚರಿಕೆ ನೀಡಿದ್ದಾನೆ. ಗುರುಪತ್ವಂತ್ ಪನ್ನುನ್‌ನ ಹೊಸ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ನವೆಂಬರ್ 19 ರಂದು ನಿಮ್ಮ ಜೀವಕ್ಕೆ ಅಪಾಯವಿದೆ. ಏರ್ ಇಂಡಿಯಾ ವಿಮಾನಗಳಲ್ಲಿ ಸಿಖ್ ಸಮುದಾಯದ ಜನರು ಪ್ರಯಾಣಿಸಬೇಡಿ ಎಂದು ಎಚ್ಚರಿಕೆ ನೀಡಿದ್ದು, https://ainlivenews.com/suprem-ray-healing-center-reiki/#google_vignette  ಇದು ಏರ್ ಇಂಡಿಯಾ ವಿಮಾನಗಳ ಮೇಲೆ ದಾಳಿಯನ್ನು ಸೂಚಿಸುತ್ತದೆ. ವೈರಲ್ ಆಗಿರುವ ವೀಡಿಯೋದಲ್ಲಿ, ನಾವು ಸಿಖ್ ಜನರನ್ನು ನವೆಂಬರ್ 19 ರಂದು ಏರ್ ಇಂಡಿಯಾ ವಿಮಾನದ ಮೂಲಕ ಪ್ರಯಾಣಿಸಬೇಡಿ ಎಂದು ಕೇಳಿಕೊಳ್ಳುತ್ತೇವೆ. ಅಂದು ಜಾಗತಿಕ ದಿಗ್ಬಂಧನ ಇರುತ್ತದೆ. ನವೆಂಬರ್ 19 ರಂದು ಏರ್ ಇಂಡಿಯಾದಲ್ಲಿ ಪ್ರಯಾಣಿಸಬೇಡಿ, ಇಲ್ಲದಿದ್ದರೆ ನಿಮ್ಮ…

Read More

ಹುಬ್ಬಳ್ಳಿ: ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಸಂಬಂಧಿ, ಕುಂದಗೋಳ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಎಸ್‌.ಐ. ಚಿಕ್ಕನಗೌಡರ ಅವರು ತಮ್ಮ ಬೆಂಬಲಿಗರ ಜೊತೆ ಕಾಂಗ್ರೆಸ್‌ ಸೇರಿದರು. ವಿಧಾನ ಪರಿಷತ್‌ ಕಾಂಗ್ರೆಸ್‌ ಸದಸ್ಯ ಜಗದೀಶ ಶೆಟ್ಟರ್ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಸದಾಶಿವನಗರದಲ್ಲಿರುವ ಶಿವಕುಮಾರ್‌ ಅವರ ನಿವಾಸದಲ್ಲಿ ಅವರ ‘ಕೈ’ ಹಿಡಿದರು. ಅವರ ಜೊತೆ, ಶಿಗ್ಗಾವಿ ಬಿಜೆಪಿಯ ಕೆಲವು ಮುಖಂಡರೂ ಕಾಂಗ್ರೆಸ್ ಸೇರಿದರು. ಚಿಕ್ಕನಗೌಡರ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು. ಬಿಜೆಪಿಯಿಂದ ಟಿಕೆಟ್‌ ಸಿಗದೆ ಕಾಂಗ್ರೆಸ್‌ ಸೇರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ ಜಗದೀಶ ಶೆಟ್ಟರ್‌ ಅವರು ಚಿಕ್ಕನಗೌಡರ ಅವರನ್ನು ಕಾಂಗ್ರೆಸ್‌ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಾನುವಾರ ಬೆಳಿಗ್ಗೆ ಭೇಟಿ ಮಾಡಿದ್ದ ಚಿಕ್ಕನಗೌಡರ, ಕಾಂಗ್ರೆಸ್‌ ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದರು. ಕಾಂಗ್ರೆಸ್‌ ವರಿಷ್ಠರ ಸೂಚನೆಯಂತೆ ಬಿಜೆಪಿ, ಜೆಡಿಎಸ್‌ನ ಹಲವು ಮುಖಂಡರನ್ನು ಜಗದೀಶ ಶೆಟ್ಟರ್ ಅವರು…

Read More

ಹುಬ್ಬಳ್ಳಿ; ಮಂಗಳಕರ ಪುಷ್ಯ ನಕ್ಷತ್ರದ ದಿನದ ನಿಮಿತ್ತ, ಮಕ್ಕಳ ಸಮಗ್ರ ಆರೋಗ್ಯವನ್ನು ಪ್ರತಿರಕ್ಷಿಸುವ ಮತ್ತು ಬಲಪಡಿಸುವ ಮಹದುದ್ದೇಶದಿಂದ, ಕರ್ನಾಟಕದ ಮೊದಲ ಪತಂಜಲಿ ವೆಲ್‌ನೆಸ್ ಹುಬ್ಬಳ್ಳಿ ಸಂಸ್ಥೆಯವತಿಯಿಂದ, ಇವರ ಸ್ವಾಸ್ಥ್ಯ ಕೇಂದ್ರ ಮುಕುಂದದಲ್ಲಿ ಉಚಿತ ಸ್ವರ್ಣ ಬಿಂದು ಶಿಬಿರವನ್ನು ಆಯೋಜಿಸಲಾಗಿತ್ತು. ಸ್ವರ್ಣ ಬಿಂದು ಪ್ರಾಶನ ಇದು ಮಕ್ಕಳ ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯದೊಂದಿಗೆ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಮತ್ತು ಹೆಚ್ಚಿಸಲು ಹುಟ್ಟಿನಿಂದ 14 ವರ್ಷದವರೆಗಿನ ಮಕ್ಕಳಿಗೆ ಪ್ರತಿರಕ್ಷಣೆ ನೀಡುವ ಒಂದು ಆಯುರ್ವೇದ ವಿಧಾನವಾಗಿದೆ. ವಿಶ್ವಚೇತನ – ಪತಂಜಲಿ ವೆಲ್‌ನೆಸ್ ಹುಬ್ಬಳ್ಳಿ ಈ ಶುಭ ದಿನದಂದು ಈ ಉಚಿತ ರೋಗನಿರೋಧಕ ಶಿಬಿರದ ಮೂಲಕ ಗಮನಾರ್ಹ ವ್ಯವಸ್ಥೆ ಕಲ್ಪಿಸುವ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ತನ್ನದೇ ಆದ ಸೇವೆ ನೀಡುತ್ತಿದೆ. ವಿಶ್ವಚೇತನ ಯೋಗ ಸಂಶೋಧನಾ ಕೇಂದ್ರ ಹುಬ್ಬಳ್ಳಿಯ ಅಧ್ಯಕ್ಷರಾದ ರಮೇಶ ಬಾಫನಾ ಶಿಬಿರವನ್ನು ಉದ್ಘಾಟಿಸಿ ಹುಬ್ಬಳ್ಳಿ ಮತ್ತು ಧಾರವಾಡದಾದ್ಯಂತ 300 ಕ್ಕೂ ಹೆಚ್ಚು ಶಿಶುಗಳು ಮತ್ತು ಮಕ್ಕಳಿಗೆ ಸ್ವರ್ಣಬಿಂದು ಲಸಿಕೆಯ ಪ್ರಯೋಜನವಾಗುವಂತೆ ಮಾಡಿದರು. ವೆಲನೆಸ್ ಕೇಂದ್ರದ…

Read More

ಹಾವೇರಿ;- ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಅಧಿಕಾರ ಹಂಚಿಕೆ ವಿಚಾರ ಜನರ ಸಮಸ್ಯೆಯಲ್ಲ ಎಂದು ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಜನರ ಮೇಲೆ ಪರಿಣಾಮ ಬೀರುವ ವಿಷಯಗಳ ಬಗ್ಗೆ ಮಾತನಾಡೋಣಾ. ಅಧಿಕಾರ ಹಂಚಿಕೆ, ಬಣ ರಾಜಕೀಯ ಪಕ್ಷ ನೋಡಿಕೊಳ್ಳುತ್ತೆ. ಹೈಕಮಾಂಡ್ ತಾಕೀತು ಮಾಡಿದ ನಂತರ, ಕೆಲವರು ಬಣ ರಾಜಕಾರಣ ಮಾತನಾಡುತ್ತಿರುವ ಕುರಿತಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನಂತೂ ಈ ರೀತಿಯ ಪ್ರಶ್ನೆಗಳಿಗೆ ಉತ್ತರಿಸಬಾರದು ಎಂಬ ತೀರ್ಮಾನ ಕೈಗೊಂಡಿದ್ದೇನೆ ಎಂದು ತಿಳಿಸಿದ್ದಾರೆ. ಕಾರ್ಮಿಕ ಇಲಾಖೆ 45 ಲಕ್ಷ ಕಾರ್ಡ್‌ಗಳನ್ನ ವಿತರಿಸಿದೆ. ಡಿ ಕೆ ಶಿವಕುಮಾರ್ ವಿರುದ್ಧ ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿರುವ ಆರೋಪದ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಅವರನ್ನೇ ಕೇಳಿಕೊಳ್ಳಿ ಎಂದು ಲಾಡ್ ಜಾರಿಕೊಂಡರು. ಇನ್ನು ಮೂರ್ನಾಲ್ಕು ತಿಂಗಳಲ್ಲಿ ನಕಲಿ ಕಾರ್ಮಿಕ ಕಾರ್ಡ್‌ಗಳನ್ನು ತಡೆಹಿಡಿಯುತ್ತೇವೆ ಎಂದು ಅವರು ಹೇಳಿದರು. ಕಾರ್ಮಿಕ ಇಲಾಖೆಯ ಯೋಜನೆಗಳ ಬಗ್ಗೆ ಕಾರ್ಮಿಕರಿಗೆ ಜಾಗೃತಿ ಇದೆ. ಸುಮಾರು…

Read More

ಇಸ್ಲಾಮಾಬಾದ್: ಪಂಜಾಬ್‌ ಪ್ರಾಂತ್ಯದ ಪಾಕಿಸ್ತಾನದ ವಾಯುಪಡೆ ತರಬೇತಿ (Pakistan Air Force Base) ನೆಲೆಯ ಮೇಲೆ ದಾಳಿ ನಡೆಸಿದ್ದ 9 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನ ಸೇನೆ ತಿಳಿಸಿದೆ. ಮುಂಜಾನೆ ಒಂಬತ್ತು ಶಸ್ತ್ರಸಜ್ಜಿತ ಭಯೋತ್ಪಾದಕರು ದಾಳಿ ನಡೆಸಿದ್ದರು. ಅವರೆಲ್ಲರನ್ನೂ ನರಕಕ್ಕೆ ಕಳುಹಿಸಲಾಗಿದೆ ಎಂದು ಪಾಕ್‌ ಸೇನೆ ಹೇಳಿದೆ. ದೇಶದಲ್ಲಿ ಮೂರು ಪ್ರತ್ಯೇಕ ಭಯೋತ್ಪಾದಕ ದಾಳಿಗಳಲ್ಲಿ 17 ಸೈನಿಕರು ಸಾವಿಗೀಡಾಗಿದ್ದಾರೆ. ಪಾಕಿಸ್ತಾನದ ವಾಯುಪಡೆಯ ಮಿಯಾನ್‌ವಾಲಿ ತರಬೇತಿ ವಾಯುನೆಲೆಯ ಮೇಲೆ ಒಂಬತ್ತು ಭಯೋತ್ಪಾದಕರು ದಾಳಿ ನಡೆಸಿದ್ದರು. ದಾಳಿಯ ಸಮಯದಲ್ಲಿ ಕಾರ್ಯನಿರ್ವಹಿಸದ ಮೂರು ವಿಮಾನಗಳಿಗೆ ಹಾನಿಯಾಗಿತ್ತು. https://ainlivenews.com/suprem-ray-healing-center-reiki/#google_vignette ಪಿಎಎಫ್ ತರಬೇತಿ ಏರ್‌ಬೇಸ್ ಮಿಯಾನ್‌ವಾಲಿಯಲ್ಲಿ ಕೂಂಬಿಂಗ್ ಮತ್ತು ಕ್ಲಿಯರೆನ್ಸ್ ಕಾರ್ಯಾಚರಣೆಯನ್ನು ಮುಕ್ತಾಯಗೊಳಿಸಲಾಗಿದೆ. ಎಲ್ಲಾ ಒಂಬತ್ತು ಭಯೋತ್ಪಾದಕರನ್ನು ನರಕಕ್ಕೆ ಕಳುಹಿಸಲಾಗಿದೆ ಎಂದು ಮಿಲಿಟರಿ ದೃಢಪಡಿಸಿದೆ. ತೆಹ್ರೀಕ್-ಇ-ಜಿಹಾದ್ ಪಾಕಿಸ್ತಾನ್ (ಟಿಜೆಪಿ). ಇದು ಹೊಸದಾಗಿ ರೂಪುಗೊಂಡಿರುವ ಭಯೋತ್ಪಾದಕ ಗುಂಪು. ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನದ (ಟಿಟಿಪಿ) ಅಂಗಸಂಸ್ಥೆಯಾಗಿದ್ದು, ದಾಳಿಯ ಹೊಣೆಗಾರಿಕೆಯನ್ನು ಹೊತ್ತುಕೊಂಡಿದೆ. ದಾಳಿಯನ್ನು ಖಂಡಿಸಿದ ಹಂಗಾಮಿ ಪ್ರಧಾನಿ ಅನ್ವಾರುಲ್ ಹಕ್ ಕಾಕರ್, ನಮ್ಮ ಭದ್ರತಾ ವ್ಯವಸ್ಥೆಯನ್ನು ದುರ್ಬಲಗೊಳಿಸುವ…

Read More

ಬೆಂಗಳೂರು: ಸದ್ಯ ಟೀಂ ಇಂಡಿಯಾ ಸ್ಟಾರ್‌ ಪ್ಲೇಯರ್‌ ವಿರಾಟ್‌ ಕೊಹ್ಲಿ (Virat Kohli), ಕ್ರಿಕೆಟ್‌ ದಂತಕಥೆ ಸಚಿನ್‌ ತೆಂಡೂಲ್ಕರ್‌ (Sachin Tendulkar) ಅವರ ಶತಕ ದಾಖಲೆ ಸರಿಗಟ್ಟುತ್ತಾರೆ ಎಂಬುದು ಚರ್ಚೆಯಲ್ಲಿರುವ ವಿಷಯ. ಆದ್ರೆ ಕೊಹ್ಲಿಗೂ ಮುನ್ನವೇ ನ್ಯೂಜಿಲೆಂಡ್‌ ಕ್ರಿಕೆಟಿಗ ರಚಿನ್‌ ರವೀಂದ್ರ (Rachin Ravindra) ತಾನು ಪ್ರವೇಶಿಸಿದ ಚೊಚ್ಚಲ ವಿಶ್ವಕಪ್‌ ಆವೃತ್ತಿಯಲ್ಲೇ ಸಚಿನ್‌ ತೆಂಡೂಲ್ಕರ್‌ ಅವರ ಶತಕ ದಾಖಲೆಯೊಂದನ್ನ ಮುರಿದಿದ್ದಾರೆ. 4 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಏಕದಿನ ವಿಶ್ವಕಪ್‌ ಇತಿಹಾಸದಲ್ಲಿ 2 ಶತಕಗಳನ್ನು ಗಳಿಸಿದವರಲ್ಲಿ ಸಚಿನ್‌ ತೆಂಡೂಲ್ಕರ್‌ ಮೊದಲಿಗರಾಗಿದ್ದರು. ಸಚಿನ್‌ 23 ವರ್ಷದವರಾಗಿದ್ದಾಗ 1996ರ ವಿಶ್ವಕಪ್‌ನಲ್ಲಿ (World Cup) 2 ಶತಕ ಸಿಡಿಸಿದ್ದರು. ಇದೀಗ 23 ವರ್ಷ ವಯಸ್ಸಿನ ರಚಿನ್‌ ರವೀಂದ್ರ 2023ರ ವಿಶ್ವಕಪ್‌ ಟೂರ್ನಿಯಲ್ಲಿ 3 ಶತಕ ಸಿಡಿಸಿ ಸಚಿನ್‌ ದಾಖಲೆ ಮುರಿದಿದ್ದಾರೆ ಕೊಹ್ಲಿಯನ್ನೂ ಹಿಂದಿಕ್ಕಿದ ರಚಿನ್‌: ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್‌ನಲ್ಲಿ 7 ಪಂದ್ಯಗಳಲ್ಲಿ ಬರೋಬ್ಬರಿ 4 ಶತಕ ಸಿಡಿಸಿರುವ ದಕ್ಷಿಣ ಆಫ್ರಿಕಾ ಆಟಗಾರ ಕ್ವಿಂಟನ್‌ ಡಿಕಾಕ್‌ 545 ರನ್‌ ಸಿಡಿಸಿ ವಿಶ್ವಕಪ್‌…

Read More

ಚಾಮರಾಜನಗರ;- ಹನೂರು ತಾಲೂಕಿನ ಮಾಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೆಟ್ಟುಕಾಡು ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ನೂತನ ಗ್ರಾಮ ಘಟಕ ಉದ್ಘಾಟನೆ ಮಾಡಲಾಯಿತು. ನೂತನ ಸಂಘದ ನಾಮಫಲಕವನ್ನು ಪುಷ್ಪಾರ್ಚನೆ ಮಾಡುವ ಮೂಲಕ ರೈತ ಸಂಘದ ಜಿಲ್ಲಾಧ್ಯಕ್ಷ ಶಾಂತಮಲ್ಲಪ್ಪ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹನೂರು ಘಟಕದ ಅಧ್ಯಕ್ಷ ಅಮ್ಜದ್ ಖಾನ್ ಮಹಿಳಾ ತಾಲೂಕು ಘಟಕದ ಅಧ್ಯಕ್ಷ ರಾಜಾಮಣಿ ತಾಲೂಕು ಗೌರವಾಧ್ಯಕ್ಷ ರಾಜಣ್ಣ ಏಳುಸ್ವಾಮಿ ಅರ್ಪಿದರಾಜ್ ಪಳನಿಶೆಟ್ಟಿ ಕಾಶಿಗೌಡ ಈರಣ್ಣ ಇನ್ನಿತರ ರೈತ ಮುಖಂಡರು ಉಪಸಿತರಿದ್ದರು

Read More

ಚಾಮರಾಜನಗರ;- ರಾಜ್ಯದಲ್ಲಿ ಸರ್ಕಾರಿ ಸೇವೆಗಳನ್ನು ನೌಕರರು ಉತ್ತಮವಾಗಿ ನಿರ್ವಹಿಸುತ್ತಾ ಬಂದಿದ್ದಾರೆ ಎಂದು ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದ್ದಾರೆ. ರಾಜ್ಯದಲ್ಲಿ ಸರ್ಕಾರಿ ಸೇವೆಗಳನ್ನು ನೌಕರರು ಉತ್ತಮವಾಗಿ ನಿರ್ವಹಿಸುತ್ತಾ ಬಂದಿದ್ದಾರೆ. ಜೊತೆಗೆ ನೌಕರರ ಮಕ್ಕಳ ಹೆಚ್ಚಿನ ವಿದ್ಯಾಭಾಸಕ್ಕೆ ಸಂಘದ ವತಿಯಿಂದ ಅನುಕೂಲಗಳನ್ನು ಮಾಡಲಾಗುತ್ತಿದೆ ವಿದ್ಯಾರ್ಥಿಗಳನ್ನು ಪ್ರೋತಾಹಿಸುವ ನಿಟ್ಟಿನಿಂದ ೨೦೨೦ನೇ ವರ್ಷದಿಂದ ನಗದು ಪ್ರತಿಭಾ ಪುರಸ್ಕಾರ ೬೦೦೦ ರಾಜ್ಯದ ಸರ್ಕಾರಿ ನೌಕರರ ಮಕ್ಕಳಿಗೆ ನೀಡುತ್ತಾ ಬಂದಿದ್ದೇವೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು. ನಗರದ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಜಿಲ್ಲಾ ಘಟಕದ ವತಿಯಿಂದ ಚಾಮರಾಜನಗರ ಜಿಲ್ಲೆಯ ನೂತನ ಶಾಸಕರು, ಸಚಿವರಿಗೆ ಹಾಗೂ ಸರ್ಕಾರಿ ನೌಕರರ ಪ್ರತಿಭಾವಂತ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪ್ರತಿಭಾ ಪುರಸ್ಕಾರವನ್ನು ನೀಡಿ ಅವರು ಮಾತನಾಡಿದರು. ಸಂಘನೆಗಳು ಜಿಲ್ಲೆಯಲ್ಲಿ ೧೩೮ ವಿದ್ಯಾರ್ಥಿಗಳು ೯೦ ಗಿಂತ ಹೆಚ್ಚು ಅಂಕಗಳನ್ನು ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ ಅಂತಹ ಮಕ್ಕಳನ್ನು ಗುರುತಿಸುವುದು ನಮ್ಮೆಲ್ಲರ ಕರ್ತವ್ಯ.…

Read More

ಶ್ರೀನಗರ: ಜಾಮೀನಿನ (Bail) ಮೇಲೆ ಬಿಡುಗಡೆಯಾದ ಶಂಕಿತ ಉಗ್ರರ ಮೇಲೆ ನಿಗಾ ಇಡಲು ಅವರ ಕಾಲಿಗೆ ಜಿಪಿಎಸ್ ಆಧಾರಿತ ಬಳೆಯನ್ನು (GPS Anklet) ಜಮ್ಮು ಕಾಶ್ಮೀರ ಪೊಲೀಸರು (Jammu Kashmir) ಪರಿಚಯಿಸಿದ್ದಾರೆ. ಈ ಮೂಲಕ ದೇಶದಲ್ಲಿ ಮೊದಲ ಬಾರಿಗೆ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿ ಬಂಧನಕ್ಕೆ ಒಳಗಾದ ಜಿಪಿಎಸ್ ಟ್ರ್ಯಾಕರ್ ಅಳವಡಿಸಿದ ದೇಶದ ಮೊದಲ ಪೊಲೀಸ್‌ ಪಡೆ ಎಂಬ ಹೆಗ್ಗಳಿಗೆ ಜಮ್ಮು ಕಾಶ್ಮೀರ ಪೊಲೀಸರು ಪಾತ್ರರಾಗಿದ್ದಾರೆ. ಜಿಪಿಎಸ್‌ ಟ್ರ್ಯಾಕರ್ ಆಂಕ್ಲೆಟ್ ವ್ಯಕ್ತಿಯ ಪಾದದ ಸುತ್ತಲೂ ಧರಿಸಬಹುದಾದ ಸಾಧನವಾಗಿದ್ದು, ಮೇಲ್ವಿಚಾರಣೆ ಮಾಡಲು ಮತ್ತು ಅವರ ಚಲನೆಯನ್ನು ಟ್ರ್ಯಾಕ್ ಮಾಡುತ್ತದೆ. ಜಾಮೀನು, ಪೆರೋಲ್ ಮತ್ತು ಗೃಹಬಂಧನದಲ್ಲಿರುವ ಆರೋಪಿಗಳ ಚಲನವಲನವನ್ನು ಪತ್ತೆಹಚ್ಚಲು ಮತ್ತು ಜೈಲುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ದಟ್ಟಣೆಯನ್ನು ಕಡಿಮೆ ಮಾಡಲು ಈ ಸಾಧನವನ್ನು ಈಗಾಗಲೇ ಅಮೆರಿಕ, ಯುನೈಟೆಡ್‌ ಕಿಂಗ್‌ಡಮ್‌, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನಲ್ಲಿ ಬಳಸಲಾಗುತ್ತಿದೆ. https://ainlivenews.com/suprem-ray-healing-center-reiki/#google_vignette ಹಲವು ಉಗ್ರ ಸಂಘಟನೆಯ ಜೊತೆ ಸಂಪರ್ಕ ಹೊಂದಿದ್ದ ಗುಲಾಂ ಮೊಹಮ್ಮದ್‌ ಭಟ್‌ ಮೇಲೆ…

Read More

ಉಪ್ಪು ಹಲವಾರು ರೀತಿಯ ಆರೋಗ್ಯ ಗುಣಗಳನ್ನು ಹೊಂದಿದ್ದು, ಅದೇ ರೀತಿಯಾಗಿ ಇದರಲ್ಲಿ ಸೌಂದರ್ಯ ವರ್ಧಿಸುವಂತಹ ಕೆಲವು ಗುಣಗಳು ಕೂಡ ಇವೆ. ಉಪ್ಪು ನೀರಿನಿಂದ ಯಾವೆಲ್ಲಾ ಅರೋಗ್ಯ ಹಾಗೂ ಸೌಂದರ್ಯ ಲಾಭಗಳನ್ನು ಪಡೆದುಕೊಳ್ಳಬಹುದು ಎಂದು ನೀವು ತಿಳಿಯಲು ತಯಾರಾಗಿ. ಗಂಟಲು ನೋವಿನ ಸಮಸ್ಯೆ  (throat pain) ಉಪ್ಪು ನೀರಿನಿಂದ ಗೋರ್ಗಲ್ ಮಾಡುವುದು ಗಂಟಲಿನಲ್ಲಿ ಇರುವ ಬ್ಯಾಕ್ಟೀರಿಯಾವನ್ನು ಸ್ವಚ್ಛಗೊಳಿಸುತ್ತದೆ. ಇದರಿಂದ ಗಂಟಲು ನೋವಿನ ಸಮಸ್ಯೆ ಪರಿಹಾರವಾಗುತ್ತದೆ. ಇದು ಗಂಟಲು ಕೋಶಗಳಲ್ಲಿ ಉರಿಯೂತವನ್ನು ಕಡಿಮೆ ಮಾಡುತ್ತದೆ. ಗಂಟಲು ಸೋಂಕು ಅಥವಾ ಗಂಟಲು ನೋವಿನ ಸಮಯದಲ್ಲಿ ಉಪ್ಪು ನೀರನ್ನು ಬಳಸುವುದರಿಂದ ನಿಮಗೆ ಪರಿಹಾರ ನೀಡಬಹುದು. ಏಕೆಂದರೆ ಸಮುದ್ರದ ಉಪ್ಪು ಉರಿಯೂತದ ಗುಣಗಳನ್ನು ಹೊಂದಿದೆ. ಇದರಿಂದಾಗಿ ಉಗುರುಬೆಚ್ಚಗಿನ ಉಪ್ಪು ನೀರಿನಿಂದ ಗೋರ್ಗಲ್ ಮಾಡಿದಾಗ  ಗಂಟಲಿನ ಸೋಂಕಿತ ಜೀವಕೋಶಗಳ ಉರಿಯೂತವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಚರ್ಮಕ್ಕಾಗಿ ಚರ್ಮದ ಸಮಸ್ಯೆಗಳನ್ನು (skin problem) ನಿವಾರಿಸಲು ಉಪ್ಪು ಸಹ ಪರಿಣಾಮಕಾರಿ ಮಾರ್ಗವಾಗಿದೆ. ಇದರಲ್ಲಿ ಇರುವ ಸಲ್ಫರ್ ಘಟಕಗಳು ಚರ್ಮದ ಮೇಲ್ಮೈಯನ್ನು ಸ್ವಚ್ಛವಾಗಿ ಮತ್ತು ಮೃದುವಾಗಿಡಲು…

Read More