ಬುಲೆಟ್‌ನಂಥ ಡೈಲಾಗ್‌ಗಳಿಂದಲೇ ಗಮನಸೆಳೆದಿದ್ದ ಬುಲೆಟ್ ರಕ್ಷಕ್ ಬಿಗ್‌ಬಾಸ್ ಮನೆಯಿಂದ ಈ ವಾರ ಹೊರಬಿದ್ದಿದ್ದಾರೆ. ಮನೆಯಿಂದ ಹೊರಗೆ ಹೋಗುತ್ತಿರುವುದಕ್ಕೆ ಅವರಲ್ಲಿ ಯಾವ ಬೇಸರವೂ ಇಲ್ಲವಂತೆ. ಹಾಗೆ ನೋಡಿದರೆ, ಪರಿಸ್ಥಿತಿ ಇನ್ನಷ್ಟು ಕೆಡುವ ಮೊದಲೇ ಹೊರಬಂದಿದ್ದಕ್ಕೆ ಖುಷಿಯೇ ಇದೆಯಂತೆ! ಮನೆಯಿಂದ ಹೊರಬಿದ್ದಿದ್ದೇ JioCinemaಕ್ಕೆ ಎಕ್ಸ್‌ಕ್ಲೂಸೀವ್ ಸಂದರ್ಶನ ನೀಡಿರುವ ರಕ್ಷಕ್, ಬಿಗ್‌ಬಾಸ್ ಮನೆಯೊಳಗಿನ ಅನುಭವ, ಸ್ಪರ್ಧಿಗಳ ಕುರಿತಾದ ಒಪಿನಿಯನ್‌ಗಳನ್ನು ಹಂಚಿಕೊಂಡಿದ್ದಾರೆ. ಅವರ ಅನುಭವಕಥನವನ್ನು ಅವರ ಮಾತುಗಳಲ್ಲೇ ಕೇಳಿ: ‘ಎಲ್ಲರಿಗೂ ನಮಸ್ಕಾರ. ನಾನು ರಕ್ಷಕ್. ಈ ವಾರ ಬಿಗ್‌ಬಾಸ್ ಮನೆಯಿಂದ ಹೊರಬಂದಿದ್ದಕ್ಕೆ ನನಗೆ ಯಾವ ಬೇಸರವೂ ಇಲ್ಲ. ನಾನೇನೂ ಇಲ್ಲಿ ಕೇಳಿಕೊಂಡು ಬಂದವನಲ್ಲ. ಅವರಾಗೇ ನನ್ನ ಅಪ್ರೋಚ್ ಮಾಡಿದರು. ಒಪ್ಪಿಗೆ ಆಯ್ತು. ಒಳಗಡೆ ಬಂದೆ. ಒಂದು ತಿಂಗಳ ಇರಬೇಕು ಎಂಬ ಆಸೆ ಇತ್ತು. ಆ ದೇವ್ರು ಮುಂಚೆನೇ ಬರ್ದಿದ್ದ ಅನ್ಸತ್ತ. ನನ್ನ ಬೆಸ್ಟ್ ನಾನು ಕೊಟ್ಟಿದ್ದೀನಿ. ಒಳಗಡೆ ಇದ್ದಾಗ ಮನೆಯ ಕ್ಯಾಪ್ಟನ್ ಆದೆ. ‘ಉತ್ತಮ’ ತಗೊಂಡೆ. ಎಲ್ಲರ ಜೊತೆ ತುಂಬ ಒಳ್ಳೆಯ ಬಾಂಡಿಂಗ್ ಇಟ್ಕೊಂಡಿದ್ದೆ. ಈ ಎಲ್ಲವೂ…
Author: AIN Author
ಹುಬ್ಬಳ್ಳಿ: ರೈಲ್ವೆ ಇಲಾಖೆ ಹಾಗೂ ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ರೈತ ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರು ನಮ್ಮ ಕರ್ನಾಟಕ ಸೇನೆ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಸೋಮವಾರ ರೈಲ್ವೆ ನಿಲ್ದಾಣ ಬಳಿ ನಡೆಸಲಾಯಿತು. ನಗರದ ರೈಲು ನಿಲ್ದಾಣದ ಮುಂದೆ ಪ್ರತಿಭಟನಾ ಪ್ರದರ್ಶನ ಮಾಡಿದರು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಠಾವೋ, ರೈಲ್ವೆ ಬಚಾವೋ ಎಂಬ ಘೋಷಣೆಗಳನ್ನು ಪ್ರತಿಭಟನೆಕಾರರು ಹಾಕಿದರು. ಪ್ರತಿಭಟನೆಕಾರರು ನಂತರ ರೈಲು ನಿಲ್ದಾಣದ ವ್ಯವಸ್ಥಾಪಕರ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಪತ್ರ ಸಲ್ಲಿಸಿ, ರೈಲ್ವೆ ಖಾಸಗೀಕರಣ ಮೋದಿ ಸರ್ಕಾರವು ರಾಷ್ಟ್ರೀಯ ನಗದೀಕರಣ ಪೈಪ್‍ಲೈನ್‍ನಲ್ಲಿ ರೈಲ್ವೆ ಅತೀ ಮುಖ್ಯ ಗುರಿಯಾಗಿದೆ. ರೈಲು ನಿಲ್ದಾಣಗಳು, ನಿಲ್ದಾಣಗಳ ಸುತ್ತ ಇರುವ ರೈಲ್ವೆ ಭೂಮಿ, ರೈಲ್ವೆ ಹಳಿಗಳು, ರೈಲ್ವೆಗಳ ಸರಕು ದಾಸ್ತಾನು ಶೆಡ್ಡುಗಳು, ರೈಲ್ವೆ ಕಾಲೋನಿಗಳು, ರೈಲ್ವೆ ಆಟದ ಮೈದಾನಗಳನ್ನು ಖಾಸಗೀಯವರಿಗೆ ದೀರ್ಘಾವಧಿಗೆ ಗುತ್ತಿಗೆ ಮೇಲೆ ಕೊಡುವುದು ಆಗಿದೆ. ಭಾರತೀಯ ರೈಲ್ವೆ ನಮ್ಮ ದೇಶದ ಜೀವಾಳ. ಭಾರತದಲ್ಲಿ 7,300 ರೈಲು ನಿಲ್ದಾಣಗಳು, 13452…
ಬೆಂಗಳೂರು: ತಾವು ಹಮ್ಮಿಕೊಳ್ಳಲಿರುವ ರೈತ ಸಾಂತ್ವನ ಯಾತ್ರೆ ಬಗ್ಗೆ ಲಘುವಾಗಿ ಹೇಳಿಕೆ ಕೊಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀವ್ರ ತಿರುಗೇಟು ಕೊಟ್ಟಿದ್ದಾರೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು. ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು; ನಿಮಗೆ ರಾಜ್ಯದ ಬರ ಮತ್ತಿತರೆ ಸಂಕಷ್ಟಗಳಿಗಿಂತ ಜೆಡಿಎಸ್ – ಬಿಜೆಪಿ ಮೈತ್ರಿಯೇ ಬಹುದೊಡ್ಡ ಸಂಕಷ್ಟವಾಗಿ ಪರಿಣಮಿಸಿದಂತೆ ತೋರುತ್ತಿದೆ ಎಂದು ಕಾಲೆಳೆದಿದ್ದಾರೆ. ಅಲ್ಲದೆ; ವಿಶ್ವ ವಿಖ್ಯಾತ ವಿತ್ತತಜ್ಞ ಎಂದು ಹಾಲಿ ಸಿಎಂಗೆ ಮಾಜಿ ಮುಖ್ಯಮಂತ್ರಿ ಟಾಂಗ್ ನೀಡಿದ್ದಾರೆ. ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ʼಹೃದಯ ವೈಶಾಲ್ಯತೆʼಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ʼದೊಡ್ಡʼ ಗುಣವನ್ನು ಮನಸಾರೆ ಕೊಂಡಾಡುತ್ತೇನೆ. ಜೆಡಿಎಸ್ ಸಲ್ಲಿಸಲಿರುವ ಬರ ಅಧ್ಯಯನ ವರದಿಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದೀರಿ, ಬಹಳ ಸಂತೋಷ ಎಂದು ಕುಮಾರಸ್ವಾಮಿ ಅವರು ಟಾಂಗ್ ನೀಡಿದ್ದಾರೆ. ‘ರೈತ ಸಾಂತ್ವನ ಯಾತ್ರೆ’ಯ ಅನುಭವವನ್ನು ಕೇಂದ್ರದ ಜತೆಗೂ ಹಂಚಿಕೊಳ್ಳುತ್ತೇವೆ. ನಿಮಗೆ ಸಂಶಯ ಬೇಡ. ರಾಜ್ಯದ…
ಡೆಹ್ರಾಡೂನ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು (Rahul Gandhi) ಕೇದಾರನಾಥ ದೇಗುಲದಲ್ಲಿ (Keadaranath) ದೇವರ ದರ್ಶನಕ್ಕೆ ಕಾಯುತ್ತಿದ್ದ ಯಾತ್ರಾರ್ಥಿಗಳಿಗೆ ಚಹಾ ನೀಡಿದ ಪ್ರಸಂಗವೊಂದು ನಡೆದಿದೆ. ಇದರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಮೂರು ದಿನಗಳ ಭೇಟಿಗಾಗಿ ರಾಹುಲ್ ಗಾಂಧಿಯವರು ಭಾನುವಾರ ಉತ್ತರಾಖಂಡಕ್ಕೆ ತೆರಳಿದ್ದಾರೆ. ಅಂತೆಯೇ ಬೆಟ್ಟದ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಲು ತಮ್ಮ ಸರದಿಗಾಗಿ ಕಾಯುತ್ತಿರುವ ಯಾತ್ರಾರ್ಥಿಗಳಿಗೆ ಚಹಾ ನೀಡುತ್ತಾ ‘ಚಾಯ್ ಸೇವೆ’ ಮಾಡುತ್ತಿರುವುದು ಕಂಡುಬಂದಿತು. https://twitter.com/KibaVenisha/status/1721367670980010180?ref_src=twsrc%5Etfw%7Ctwcamp%5Etweetembed%7Ctwterm%5E1721367670980010180%7Ctwgr%5Ebebc78a5fb8f2a3f018bd567179382f92d5b69fa%7Ctwcon%5Es1_&ref_url=https%3A%2F%2Fenglish.jagran.com%2Findia%2Frahul-gandhi-serves-tea-to-pilgrims-waiting-for-darshan-at-kedarnath-temple-on-his-uttarkhand-visit-watch-10112092 ಒಬ್ಬ ಜನಪ್ರಿಯ ನಾಯಕ ಸಾರ್ವಜನಿಕರೊಂದಿಗೆ ಮಾತನಾಡುವುದನ್ನು ಕಂಡು ಆಶ್ಚರ್ಯಚಕಿತರಾದ ಭಕ್ತರು ಸೆಲ್ಫಿಗಾಗಿ ಮನವಿ ಮಾಡಿದರು. ಈ ವೇಳೆ ರಾಗಾ ಅವರು ಕೂಡ ಭಕ್ತರ ಮನವಿಯನ್ನು ತಿರಸ್ಕರಿಸಿದೆ ಸೆಲ್ಫಿ ನೀಡಿದರು. ರಾಗಾ ಅವರು ಯಾತ್ರಾರ್ಥಿಗಳಿಗೆ ಚಹಾ ಹಂಚುತ್ತಿದ್ದಾಗ ಭಕ್ತರೊಬ್ಬರು ಸರ್, ನಾವು ನಿಮ್ಮನ್ನು ಟಿವಿಯಲ್ಲಿ ನೋಡಿದ್ದೇವೆ. ಆದರೆ ಇದೇ ಮೊದಲ ಬಾರಿಗೆ ನಾವು ನಿಮ್ಮನ್ನು ನಿಜವಾಗಿ ನೋಡುತ್ತಿದ್ದೇವೆ. ನಾನು ನಿಮ್ಮೊಂದಿಗೆ ಸೆಲ್ಫಿ ತೆಗೆದುಕೊಳ್ಳಬಹುದೇ ಎಂದು ಕೇಳಿದ್ದಾರೆ. ರಾಹುಲ್ ಗಾಂಧಿಯವರು ಕೇದಾರನಾಥದಲ್ಲಿ ಪ್ರಾರ್ಥನೆ ಸಲ್ಲಿಸಿ, ಆರತಿಯಲ್ಲಿ…
ಬೆಂಗಳೂರು: ಕನ್ನಡನಾಡಿನ ಹೆಮ್ಮೆಯ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇಂದು ಸಂಜೆ ನನಗಾಗಿ ಪರಿಷತ್ತಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಅನಾರೋಗ್ಯದ ಕಾರಣಕ್ಕೆ ಹಾಜರಾಗುತ್ತಿಲ್ಲದಿರುವುದಕ್ಕೆ ವೈಯಕ್ತಿಕವಾಗಿ ನನಗೆ ಬಹಳ ನೋವಿದೆ. ಕೊಂಚ ಮಟ್ಟಿಗೆ ಅನಾರೋಗ್ಯ ಉಂಟಾಗಿ ದೇಹದಲ್ಲಿ ತುಸು ನಿತ್ರಾಣವಿದೆ. ವೈದ್ಯರು ಮನೆಯಲ್ಲಿಯೇ ವಿಶ್ರಾಂತಿ ಪಡೆಯುವಂತೆ ಸಲಹೆ ಮಾಡಿದ್ದಾರೆ. ಆದರೆ, ಈ ಕಾರ್ಯಕ್ರಮ ಪೂರ್ವನಿಗದಿಯಾಗಿರುವ ಕಾರಣಕ್ಕೆ ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಾಧೀಶರಾದ ಜಸ್ಟ್ಟಿಸ್ ಎಂ.ಎನ್. ವೆಂಕಟಾಚಲಯ್ಯ ರವರು ಹಾಗೂ ಪರಿಷತ್ ಅಧ್ಯಕ್ಷರು, ನಾಡೋಜ ಡಾ.ಮಹೇಶ್ ಜೋಶಿ ಅವರು ನನ್ನ ಸ್ವಗೃಹಕ್ಕೆ ಆಗಮಿಸಿ ಪ್ರಶಸ್ತಿ ಪ್ರದಾನ ಮಾಡುವುದಾಗಿ ತಿಳಿಸಿದ್ದಾರೆ. ಇವರ ಪ್ರೀತಿ, ವಿಶ್ವಾಸಕ್ಕೆ ನಾನು ಕೃತಜ್ಞನಾಗಿದ್ದೇನೆ. ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನ ಪ್ರಶಸ್ತಿ ಸ್ವೀಕರಿಸುವುದು ಮಹಾನ್ ಭಾಗ್ಯ ಎಂದೇ ನಾನು ಭಾವಿಸಿದ್ದೇನೆ. ಪ್ರಶಸ್ತಿ ಪ್ರದಾನದ ಸುದ್ದಿ, ಚಿತ್ರ, ದೃಶ್ಯಗಳನ್ನು ತದ ನಂತರ ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗುವುದು. ಅಸೌಕರ್ಯ ಉಂಟಾಗಿದ್ದಕ್ಕೆ ಮಾಧ್ಯಮ…
ಬೆಂಗಳೂರು: ಕಲಬುರಗಿಯಲ್ಲಿ ಭಾನುವಾರ ನಡೆದ ಕೆಪಿಎಸ್ಸಿಯ ಗ್ರೂಪ್ ಸಿ ಹುದ್ದೆಗಳ ಪ್ರವೇಶ ಪರೀಕ್ಷೆಯ ವೇಳೆ ವಿವಾಹಿತ ಮಹಿಳಾ ಅಭ್ಯರ್ಥಿಗಳ ಮಂಗಳಸೂತ್ರ, ಕಾಲುಂಗುರ ತೆಗೆದಿದ್ದು ದುರ್ನಡತೆ ಪರಮಾವಧಿ ಎಂದು ಜಾತ್ಯತೀತ ಜನತಾದಳ ಆಕ್ರೋಶ ವ್ಯಕ್ತಪಡಿಸಿದೆ.ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಜೆಡಿಎಸ್; ಗ್ರೂಪ್ ಸಿ ಹುದ್ದೆಗಳ ಪ್ರವೇಶ ಪರೀಕ್ಷೆಯ ವೇಳೆ ಮಹಿಳೆಯರ ಮಂಗಳಸೂತ್ರ, ಕಾಲುಂಗುರ ತೆಗೆಸಿರುವ ಘಟನೆ ಅಕ್ಷಮ್ಯ. ಇದು ಸ್ತ್ರೀಯರ ಹಕ್ಕುಗಳನ್ನು ಹತ್ತಿಕ್ಕುವ ಪ್ರಯತ್ನ. ನಾವು ಕರ್ನಾಟಕದಲ್ಲಿ ಇದ್ದೇವೆಯೋ? ಅಥವಾ ಇನ್ನೆಲ್ಲಾದರೂ ಇದ್ದೇವೆಯೋ? ಎಂದು ಕಿಡಿಕಾರಿದೆ. ಕಲಬುರಗಿಯಲ್ಲಿ ಭಾನುವಾರ ನಡೆದ ಕೆಪಿಎಸ್ಸಿ ಪರೀಕ್ಷೆಯಲ್ಲಿ ಸ್ತ್ರೀಯರಿಗೆ ಘೋರ ಅಪಮಾನ ಎಸಗಿದ್ದು ಅತ್ಯಂತ ಖಂಡನೀಯ. ಇಂಡಿಯಾ ಎಂದು ಜಪಿಸುವ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಭಾರತದ ಸಂಸ್ಕೃತಿಗೆ ಸಿಕ್ಕ ಗೌರವ ಇದು. ನಮ್ಮ ಸಂಸ್ಕೃತಿ, ಪರಂಪರೆಯನ್ನು ನಿರ್ನಾಮ ಮಾಡುವ ಕುಕೃತ್ಯ ಅವರಿಂದ ಎಗ್ಗಿಲ್ಲದೆ ನಡೆಯುತ್ತಿದೆ ಎಂದು ಜೆಡಿಎಸ್ ಕಟುವಾಗಿ ಟೀಕಿಸಿದೆ. ಒಂದೆಡೆ ಗೃಹಲಕ್ಷ್ಮಿ ಎನ್ನುವ ರಾಜ್ಯ ಸರಕಾರ, ಇನ್ನೊಂದೆಡೆ ಅದೇ ಗೃಹಲಕ್ಷ್ಮಿಯರ ಸೌಭಾಗ್ಯ ಮತ್ತು…
ಮಂಡ್ಯ: ಡಿ.ಕೆ.ಶಿವಕುಮಾರ್ ಸಿಎಂ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಮುಖ್ಯಮಂತ್ರಿ ಆಗುವ ಅರ್ಹತೆ ಡಿ.ಕೆ.ಶಿವಕುಮಾರ್ ಅವರಿಗೆ ಇದೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬುದು ನಮ್ಮ ಆಸೆ. ರಾಜ್ಯದಲ್ಲಿ ಕಾಂಗ್ರೆಸ್ ಬಹುಮತ ಬರಲು ಡಿ.ಕೆ.ಶಿವಕುಮಾರ್ ಕಾರಣ. ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷ ಸಂಘಟನೆಗಾಗಿ ಡಿಕೆ ಶಿವಕುಮಾರ್ ಸಾಕಷ್ಟು ದುಡಿದಿದ್ದಾರೆ. ಹಾಗಾಗಿ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಸಿಗಬೇಕೆಂಬುದು ನನ್ನ ಆಸೆಯಾಗಿದೆ. ಡಿ.ಕೆ.ಶಿವಕುಮಾರ್ ಸೋಲಿಲ್ಲದ ಸರದಾರ ಎಂದೇ ಖ್ಯಾತರಾಗಿದ್ದಾರೆ. ಡಿಕೆ ಶಿವಕುಮಾರ್ ಅವರಿಗೆ ಪಕ್ಷವನ್ನು ಉಳಿಸಿ ಬೆಳೆಸಬೇಕೆಂಬ ಸಾಕಷ್ಟು ಇಚ್ಛಾಶಕ್ತಿ ಇದೆ. ಮುಖಂಡರು ಹಾಗೂ ಕಾರ್ಯಕರ್ತರಿಗೆ ಹುಮ್ಮಸ್ಸು ನೀಡುತ್ತಿದ್ದಾರೆ. ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ನೀಡಿದರೇ ಕಾಂಗ್ರೆಸ್ ಮತ್ತಷ್ಟು ಗಟ್ಟಿಯಾಗುತ್ತೆ ಎಂದು ಕಾಂಗ್ರೆಸ್ ಶಾಸಕ ಕದಲೂರು ಉದಯ್ ಹೇಳಿದ್ದಾರೆ.
ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಹುದ್ದೇಯ ಬಗ್ಗೆ ಭಯ ಬೇಡ, ಸರ್ಕಾರ ಬೀಳಿಸಲು ನಾವು ಯಾರಿಗೂ ಹೇಳಿಕೊಟ್ಟಿಲ್ಲ ಧೈರ್ಯವಾಗಿರಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರಿತು ಲೇವಡಿ ಮಾಡಿದರು. ಮಳೆಯ ಕೊರತೆಯಿಂದ ರೈತರಿಗೆ ಉಂಟಾಗಿರುವ ನಷ್ಟದ ಅಧ್ಯಯನಕ್ಕೆಂದು ಆಗಮಿಸಿದ್ದ ಅವರು ಶಿಡ್ಲಘಟ್ಟ ತಾಲೂಕಿನ ಇದ್ಲೂಡು ಗ್ರಾಮ ಸುತ್ತ ಮುತ್ತ ಬರ ವೀಕ್ಷಣೆ ಮಾಡಿ ರೈತರಿಂದ ಮಾಹಿತಿ ಪಡೆದರು. ನಂತರ ನಗರದ ಬಿಜೆಪಿ ಕಚೇರಿ ಸೇವಾಸೌಧದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳಿಗೆ ಸಿಎಂ ಹುದ್ದೆ ಕೈ ತಪ್ಪಲಿದೆ ಎಂಬ ಆತಂಕ ಶುರುವಾಗಿದೆ ಅವರ ಆತಂಕಕ್ಕೆ ಬಿಜೆಪಿಯ ನಾಯಕರ್ಯಾರು ಕಾರಣರಲ್ಲ ಎಂದು ಸ್ಪಷ್ಟ ಪಡಿಸಿದರು. ರಾಜ್ಯದಲ್ಲಿ ಬರ ಆವರಿಸಿದ್ದು, ರೈತರ ಬಗ್ಗೆ ಮುಖ್ಯಮಂತ್ರಿಗಳಿಗೆ ಕಾಳಜಿ ಇಲ್ಲ, ಇಂತಹ ಪರಿಸ್ಥಿತಿಯಲ್ಲಿ ಹಂಪಿಯಲ್ಲಿ ಮುಖ್ಯಮಂತ್ರಿ ತಾಳ ತಪ್ಪದಂತೆ ಡಾನ್ಸ್ ಮಾಡ್ತಾರೆ ಎಂದು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಉತ್ತಮ ನೃತ್ಯಗಾರು ಅದರ ಬಗ್ಗೆ ನಮಗೆ ಮೆಚ್ಚುಗೆ ಇದೆ, ಆದರೆ…
ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ದೀಪಾವಳಿ ಹಬ್ಬ ಬರಲಿದ್ದು ಈ ಹಿನ್ನೆಲೆ ಖಾಸಗಿ ಬಸ್ ಮಾಲೀಕರು ಮತ್ತೆ ಹಗಲು ದರೋಡೆಗೆ ಇಳಿದಿದ್ದಾರೆ. ಹಬ್ಬದ ಹಿನ್ನೆಲೆ ಬೆಂಗಳೂರಿನಿಂದ ಊರಿಗೆ ತೆರಳಲು ಟಿಕೆಟ್ ಬುಕ್ ಮಾಡಲು ಹೋದವರಿಗೆ ಶಾಕ್ ಎದುರಾಗಿದೆ. ದೀಪಾವಳಿ ಹಬ್ಬದ ಹಿನ್ನೆಲೆ ಸಾಲು ಸಾಲು ರಜೆ ಇರುವುದರಿಂದ ಬಸ್ ಟಿಕೆಟ್ನ ದರ ದುಪ್ಪಟ್ಟು ಮಾಡಿದ್ದಾರೆ. ಇಂದಿನ ಬಸ್ ಟಿಕೆಟ್ ದರಕ್ಕೆ ಹೊಲಿಸಿದರೆ ನವೆಂಬರ್ 10ಕ್ಕೆ ದ್ವಿಗುಣಗೊಳಿಸಿದ್ದಾರೆ. ಹಬ್ಬಗಳು ಬಂದರೆ ಸಾಕು ಖಾಸಗಿ ಬಸ್ನವರು ಟಿಕೆಟ್ ದರ ದುಪ್ಪಟ್ಟು ಮಾಡ್ತಾರೆ. ಖಾಸಗಿ ಬಸ್‌ಗಳ ಸುಲಿಗೆಗೆ ಸಾರಿಗೆ ಇಲಾಖೆ ಕ್ರಮ ಕೈಗೊಳ್ಳದೆ ಮೌನವಹಿಸಿದೆ. ಖಾಸಗಿ ಬಸ್‌ಗಳ ಸುಲಿಗೆಗೆ ಕಡಿವಾಣ ಬೀಳಬೇಕು ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೀಪಾವಳಿ ಹಬ್ಬ ಹಿನ್ನೆಲೆ ಖಾಸಗಿ ಬಸ್‌ಗಳ ದರ ಶಾಕ್..! ದೀಪಾವಳಿ ಹಬ್ಬದ ನೆಪದಲ್ಲಿ ಟಿಕೆಟ್ ದರ ಒನ್ ಟು ತ್ರಿಬಲ್ ಬೆಂಗಳೂರಿನಿಂದ ಎಲ್ಲಾ ಕಡೆಗಳಿಗೆ ದುಪ್ಪಟ್ಟು ದರ ಸಾಮಾನ್ಯ ದರಕ್ಕಿಂತ ಮೂರು ಪಟ್ಟು ಹೆಚ್ಚಳ ಬೆಂಗಳೂರು-ಶಿವಮೊಗ್ಗ(ನಾನ್ ಎಸಿ) ನವೆಂಬರ್…
ಬೆಂಗಳೂರು: ಹಿರಿಯ ಗಣಿ ಭೂವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಅವರ ಚಾಲಕನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಕಳೆದ ಐದು ವರ್ಷಗಳಿಂದ ಕಾಂಟ್ರಾಕ್ಟ್ ಬೇಸಿಸ್ ನಲ್ಲಿ ಕಿರಣ್ ಕೆಲಸ ಮಾಡುತ್ತಿದ್ದ. ಕೆಲಸ ಮಾಡ್ತಿದ್ದ ಕಿರಣ್‍ಗೆ ಕೆಲವೊಂದು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಮಾ ನಡುವೆ ಭಿನ್ನಾಭಿಪ್ರಾಯ ಬಂದಿತ್ತು. ಹೀಗಾಗಿ ಕೆಲ ದಿನಗಳ ಹಿಂದೆಯಷ್ಟೇ ಕಿರಣ್‍ನನ್ನು ಕೆಲಸದಿಂದ ತೆಗೆದುಹಾಕಲಾಗಿತ್ತು. ಇದಲ್ಲದೆ, ಕೆಲ ದಿನಗಳ ಹಿಂದೆ ಕಿರಣ್ ಒಂದು ಅಕ್ಸಿಡೆಂಟ್ ಮಾಡಿದ್ದ. ಅದಕ್ಕೆ ಪ್ರತಿಮಾ ಬೈದಿದ್ದರು. ಇವೆಲ್ಲದರ ಕೋಪದಿಂದ ಆತನನ್ನು ಕೆಲಸದಿಂದ ವಜಾ ಮಾಡಿದ್ದರು. ಕೆಲಸದಿಂದ ಕಿತ್ತೆಸದ ಬಳಿಕ ಕಿರಣ್ ಪ್ರತಿಮಾ ಮನೆಗೆ ಬಂದಿದ್ದಾನೆ. ಆಕೆಯ ಕಾಲಿಗೆ ಕೂಡ ಬಿದ್ದಿದ್ದಾನೆ. ಕೆಲಸಕ್ಕೆ ಸೇರಿಸಿಕೊಳ್ಳುವಂತೆ ದಂಬಾಲು ಬಿದ್ದಿದ್ದಾನೆ. ಆದರೆ ಪ್ರತಿಮಾ ಕೆಲಸಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿದ್ದಾರೆ. ಹೀಗಾಗಿ ಕಿರಣ್ ಕೊಲೆ ಮಾಡಿದ್ದೇನೆ ಎಂದು ತಪ್ಪೊಪ್ಪಿಕೊಂಡಿದ್ದಾನೆ ಚಾಲಕ ಕಿರಣ್ ತಂದೆ ಸುರೇಶ್ ಸಹ ಇದೇ ಇಲಾಖೆಯಲ್ಲಿ ಚಾಲಕಾರಿದ್ದರು. ಕಿರಣ್ ಕೂಡ ಪ್ರತಿಮಾ ಡ್ರೈವರ್ ಆಗಿ 5…