ಆಸ್ಟ್ರೇಲಿಯಾ ತಂಡ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಮಂಗಳವಾರ ವಾಂಖೆಡೆ ಕ್ರೀಡಾಂಗಣದಲ್ಲಿ ಅಘಾನಿಸ್ತಾನ ತಂಡದ ಸವಾಲು ಎದುರಿಸಲಿದೆ. ಆರಂಭಿಕ 2 ಪಂದ್ಯಗಳ ಸೋಲಿನ ಬಳಿಕ ಜಯದ ಹಳಿಗೆ ಮರಳಿರುವ ಆಸ್ಟ್ರೇಲಿಯಾ ಆಡಿರುವ 7 ಪಂದ್ಯಗಳಲ್ಲಿ 10 ಅಂಕ ಕಲೆಹಾಕಿ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಇನ್ನೊಂದು ಜಯದೊಂದಿಗೆ ಅಧಿಕೃತವಾಗಿ ಉಪಾಂತ್ಯಕ್ಕೆ ಲಗ್ಗೆಯಿಡಲಿದೆ. ಇತ್ತ ಅಘಾನಿಸ್ತಾನ ತಂಡ ಇಷ್ಟೇ ಪಂದ್ಯಗಳನ್ನಾಡಿ 4ರಲ್ಲಿ ಗೆಲುವು ದಾಖಲಿಸಿ 8 ಅಂಕದೊಂದಿಗೆ ಆರನೇ ಸ್ಥಾನದಲ್ಲಿದೆ. ಮಿಚೆಲ್ ಮಾರ್ಷ್ ಆಗಮನ ಆಸೀಸ್ ತಂಡದ ಬಲ ಹೆಚ್ಚಿಸಿದೆ. ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್ ಭರ್ಜರಿ ಾರ್ಮ್‌ನಲಿದ್ದು, ಬ್ಯಾಟಿಂಗ್ ಸ್ನೇಹಿ ವಾಂಖೆಡೆಯಲ್ಲಿ ರನ್ ಹೊಳೆ ಹರಿಸುವ ನಿರೀಕ್ಷೆಯಲ್ಲಿದೆ. ಆದರೆ ಮಧ್ಯಮ ಸರದಿಯ ಬ್ಯಾಟರ್‌ಗಳು ಟೂರ್ನಿಯಲ್ಲಿ ಇದುವರೆಗೂ ಪರಿಣಾಮಕಾರಿ ಪ್ರದರ್ಶನ ನೀಡುವಲ್ಲಿ ಎಡವಿದ್ದಾರೆ. ಸ್ಟೀವನ್ ಸ್ಮಿತ್ ಅಸ್ಥಿರ ಪ್ರದರ್ಶನ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಬೌಲಿಂಗ್‌ನಲ್ಲಿ ಸ್ಪಿನ್ನರ್ ಆಡಂ ಜಂಪಾ 19 ವಿಕೆಟ್ ಉರುಳಿಸಿ ಟೂರ್ನಿಯ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿದ್ದಾರೆ. ಬ್ಯಾಟರ್‌ಗಳ ಜತೆಗೆ…
Author: AIN Author
ಬೆಂಗಳೂರು;- ಕೇಂದ್ರದ ಕಡೆ ಕೈ ತೋರುವ ಬದಲು ತಮ್ಮ ಕೆಲಸ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿರುಗೇಟು ನೀಡಿದರು ಮೊನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಗಮನಿಸಿದ್ದೇನೆ. ನಾನೂ ಕೂಡ ಟ್ವೀಟ್ ಮಾಡಿ ಅವರಿಗೆ ಅಭಿನಂದನೆ ಸಲ್ಲಿಸಿದ್ದೇನೆ. ಕೇಂದ್ರ ಸರ್ಕಾರದಿಂದ ಹಣ ಪಡೆಯುವ ಕೆಲಸ ಆಗಬೇಕು. ಸಿದ್ದರಾಮಯ್ಯನವರು ದೇವೇಗೌಡರು ಪ್ರಧಾನಿ ಜೊತೆ ಚೆನ್ನಾಗಿದ್ದಾರೆ. ಈ ಬಗ್ಗೆ ಚರ್ಚೆ ಮಾಡಲಿ ಅಂತ ಹೇಳಿದ್ದಾರೆ. ಕೇಂದ್ರ ಸರ್ಕಾರದ ಜೊತೆ ರಾಜ್ಯದ ಪರವಾಗಿ ನಾವು ಧ್ವನಿ ಎತ್ತುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು. ಮುಖ್ಯಮಂತ್ರಿಗಳ ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಜೆಡಿಎಸ್ – ಬಿಜೆಪಿಯವರನ್ನು ಕಾಂಗ್ರೆಸ್ ಗೆ ಕರೆತರುವ ಬಗ್ಗೆ ಚರ್ಚೆ ನಡೆದಿದೆ. ಅವರು ನಾಡಿನ ಜನರ ಬಗ್ಗೆ ಚರ್ಚೆ ಮಾಡಲು ಸಭೆ ಮಾಡುವುದಿಲ್ಲ. ಕೇವಲ ಲೋಕಸಭಾ ಚುನಾವಣೆ ಗೆಲ್ಲಲು ಮೀಟಿಂಗ್ ಮಾಡುತ್ತಿದ್ದಾರೆ. ಅವರಿಗೆ ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಬೇಕಿಲ್ಲ ಎಂದು ಕಿಡಿಕಾರಿದರು. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದಾದರೆ ನಮ್ಮ ಬೆಂಬಲವಿದೆ…
ಬೆಂಗಳೂರು;- ಪತಿ ನೀಡಿದ ರಾಜೀನಾಮೆ ಪತ್ನಿ ಹಿಂಪಡೆಯಲಾಗದು ಎಂದು ಬೆಂಗಳೂರಿನ ಹೈಕೋರ್ಟ್ ಹೇಳಿದೆ. ಮಂಡ್ಯ ಜಿಲ್ಲೆಯ ಮದ್ದೂರಿನ ಡಿ ವೆಂಕಟೇಶ್ ಎಂಬುವರು ಹೈಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ನ್ಯಾಯಪೀಠ ಈ ಆದೇಶ ಮಾಡಿದೆ , ಸ್ವತಃ ನೌಕರನೇ ಉದ್ಯೋಗದಲ್ಲಿ ಇರಲು ಸಿದ್ಧರಿಲ್ಲದೇ ರಾಜೀನಾಮೆ ನೀಡಿದ್ದಾರೆ. ಇಂತಹ ಸಂದರ್ಭದಲ್ಲಿ ಆತನ ಪತ್ನಿ ಅಥವಾ ಮಕ್ಕಳು ಉದ್ಯೋಗಿ ಸೇವೆಯಲ್ಲಿ ಮುಂದುವರೆಯಲು ಹೇಗೆ ಕಾರಣವಾಗುತ್ತಾರೆ. ಇದು ಬಾಯಾರಿಕೆಯಿಲ್ಲದಿದ್ದರೂ ಇಷ್ಟವಿಲ್ಲದ ಕುದುರೆಯನ್ನು ನೀರು ಕುಡಿಯಲು ನದಿಗೆ ಎಳೆದಂತಾಗುತ್ತದೆ. ರಾಜೀನಾಮೆಯು ಉದ್ಯೋಗಿಯ ಸ್ವಯಂಪ್ರೇರಿತ ಕ್ರಿಯೆಯಾಗಿದೆ. ಅದನ್ನು ಸಲ್ಲಿಸುವ ಮೂಲಕ ಆತ ಸೇವೆಯನ್ನು ತೊರೆಯಲು ಪ್ರಯತ್ನಿಸುತ್ತಾನೆ. ಹೀಗಾಗಿ, ಉದ್ಯೋಗದಾತ ಸಂಸ್ಥೆಯು ಅಂಗೀಕರಿಸುವ ಮೊದಲೇ ರಾಜೀನಾಮೆಯನ್ನು ಸ್ವತಃ ಉದ್ಯೋಗಿ ಹಿಂಪಡೆಯಬೇಕು. ಅದನ್ನು ಹೊರತುಪಡಿಸಿ ಪತ್ನಿ ಮತ್ತು ಮಕ್ಕಳು ಉದ್ಯೋಗಿಯ ಪರವಾಗಿ ರಾಜೀನಾಮೆ ಹಿಂಪಡೆಯಲು ಅವಕಾಶವಿಲ್ಲ ಎಂದು ಪೀಠ ಹೇಳಿದೆ.
ನವದೆಹಲಿ: ಏಳು ವರ್ಷದ ಬಾಲಕನ ಶ್ವಾಸಕೋಶದಲ್ಲಿ ಸಿಲುಕಿದ್ದ ಸೂಜಿಯೊಂದನ್ನು ದಿಲ್ಲಿಯ ಏಮ್ಸ್ ವೈದ್ಯರು ಆಯಸ್ಕಾಂತ ಬಳಸಿ ಹೊರಗೆ ತೆಗೆಯುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾರೆ. ಶಿಶುವೈದ್ಯ ಸರ್ಜರಿ ವಿಭಾಗದ ವೈದ್ಯರು ಬಹಳ ಸೂಕ್ಷ್ಮವಾದ ಎಂಡೋಸ್ಕೋಪಿಕ್ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನೆರವೇರಿಸಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ. ಬಾಲಕನ ಎಡ ಭಾಗದ ಶ್ವಾಸಕೋಶದ ಒಳಗೆ 4 ಸೆಂಮೀ ಉದ್ದದ ಸೂಜಿ ಸೇರಿಕೊಂಡಿತ್ತು. ಶಸ್ತ್ರಚಿಕಿತ್ಸೆಗೆ ಬಳಸುವ ಸಾಧನಗಳನ್ನು ಬಳಸಲು ಇಲ್ಲಿ ಹೆಚ್ಚು ಜಾಗ ಇರಲಿಲ್ಲ. ಹೀಗಾಗಿ ಸರ್ಜರಿ ನಡೆಸದೆಯೇ ಸೂಜಿಯನ್ನು ಹೊರಗೆ ತೆಗೆಯುವ ಜಟಿಲವಾದ ಸವಾಲು ಅವರ ಮುಂದಿತ್ತು ಎಂದು ಏಮ್ಸ್ ತಿಳಿಸಿದೆ. ಸೂಜಿ ಒಳ ಸೇರಿದ್ದರಿಂದ ಬಾಲಕನಲ್ಲಿ ರಕ್ತಯುತ ಕೆಮ್ಮಿನ ಹೆಮೋಪ್ಟಿಸಿಸ್ ಸಮಸ್ಯೆ ಉಂಟಾಗಿತ್ತು. ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಅವನನ್ನು ಬುಧವಾರ ಏಮ್ಸ್‌ಗೆ ದಾಖಲಿಸಲಾಗಿತ್ತು. ಹೊಲಿಗೆ ಯಂತ್ರದಲ್ಲಿ ಬಳಸುವ ಸೂಜಿಯು ಆತನ ಎಡ ಶ್ವಾಸಕೋಶದ ಆಳದಲ್ಲಿ ಸಿಲುಕಿರುವುದು ರೇಡಿಯಾಲಜಿ ಪರೀಕ್ಷೆಯಿಂದ ತಿಳಿದುಬಂದಿತ್ತು ಎಂದು ಶಿಶುವೈದ್ಯ ಸರ್ಜರಿ ವಿಭಾಗದ ಹೆಚ್ಚುವರಿ ಪ್ರೊಫೆಸರ್ ಡಾ ವಿಶೇಷ್ ಜೈನ್…
ಅನ್ನ ಉಳಿದಿದೆ ಏನು ಮಾಡುವುದು ಎಂದು ಯೋಚನೆ ಮಾಡುತ್ತಾ ಇದ್ದೀರ. ಹಾಗಾದರೆ ನಾವು ಇಂದು ಉಳಿದ ಅನ್ನದಲ್ಲಿ ಬಿಸಿ ಬಿಸಿಯಾಗಿ ಮತ್ತು ನಾಲಿಗೆ ರುಚಿಯನ್ನು ಹೆಚ್ಚಿಸುವ ಪಕೋಡವನ್ನು ಮಾಡುವ ವಿಧಾನವನ್ನು ಹೇಳುತ್ತೇವೆ. ಕಡಲೆ ಹಿಟ್ಟಿನಿಂದ ಮಾಡುವ ಈರುಳ್ಳಿ ಪಕೋಡವನ್ನು ತಿಂದಿದ್ದೇವೆ. ಆದರೆ ಇಂದು ಮಾಡುತ್ತಿರುವ ಅನ್ನದ ಪಕೋಡ ಗರಂ ಗರಂ ಎಂದು ಸಖತ್ ರುಚಿಯಾಗಿರುತ್ತದೆ. ಬೇಕಾಗುವ ಸಾಮಗ್ರಿಗಳು: * ಅನ್ನ – 3 ಕಪ್, * ಕಡಲೆಹಿಟ್ಟು – 4 ಚಮಚ * ಈರುಳ್ಳಿ – 2 * ಹಸಿಮೆಣಸು – 2 * ಕೊತ್ತಂಬರಿ ಸೊಪ್ಪು- ಸ್ವಲ್ಪ * ಚಾಟ್ ಮಸಾಲ- 1 ಚಮಚ, * ರುಚಿಗೆ ತಕ್ಕಷ್ಟು ಉಪ್ಪು * ಶುಂಠಿ 1 ಇಂಚು ಮಾಡುವ ವಿಧಾನ: * ಪಾತ್ರೆಯೊಂದಕ್ಕೆ ಬೇಯಿಸಿದ ಅನ್ನ, ಹೆಚ್ಚಿದ ಈರುಳ್ಳಿ, ಕೊತ್ತಂಬರಿ ಸೊಪ್ಪು, ಹಸಿಮೆಣಸು, ಜಜ್ಜಿದ ಶುಂಠಿ, ಚಾಟ್ ಮಸಾಲ, ಉಪ್ಪು ಹಾಗೂ ಕಡಲೆಹಿಟ್ಟು ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಬೇಕು. * ಅಗತ್ಯವಿರುವಷ್ಟು…
ಬೆಂಗಳೂರು;- ಕಳ್ಳನೊಂದಿಗೆ ಶಾಮೀಲಾಗಿ ರೈಲುಗಳಲ್ಲಿ ಕಳ್ಳತನ ಮಾಡುತ್ತಿದ್ದ ರೈಲ್ವೆ ಹೆಡ್ಕಾನ್ಸ್ಟೇಬಲ್ ಅರೆಸ್ಟ್ ಆಗಿದ್ದಾರೆ. ಚಿಕ್ಕಬಳ್ಳಾಪುರ ರೈಲ್ವೆ ಹೊರ ಪೊಲೀಸ್ ಠಾಣೆಯಲ್ಲಿ ಹೆಡ್ಕಾನ್ಸ್ಟೇಬಲ್ ಆಗಿರುವ ಸಿದ್ದರಾಮರೆಡ್ಡಿ ಹಾಗೂ ಖದೀಮ ಸಾಬಣ್ಣ ಬಂಧಿತರು ಪೊಲೀಸ್ ಕಸ್ಟಡಿ ಪಡೆದು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ. 2011ರ ಬ್ಯಾಚ್ ಸಿಬ್ಬಂದಿಯಾಗಿದ್ದ ಸಿದ್ದರಾಮರೆಡ್ಡಿ, ರೈಲ್ವೇ ಹೆಡ್ಕಾನ್ಸ್ಟೇಬಲ್ ಆಗಿ ರಾಯಚೂರಿನಲ್ಲಿ ಸೇವೆಗೆ ಸೇರಿದ್ದರು. ಸಾಬಣ್ಣ ಸಹ ರಾಯಚೂರು ಮೂಲದವನಾಗಿದ್ದು, ಇಬ್ಬರ ನಡುವೆ ಪರಿಚಯವಾಗಿತ್ತು. ಕಾಲ ಕ್ರಮೇಣ ಹೆಡ್ಕಾನ್ಸ್ಟೇಬಲ್ ಆಗಿ ಬಡ್ತಿ ಪಡೆದು ಸಿದ್ದರಾಮ ಬೆಂಗಳೂರು ನಗರಕ್ಕೆ ವರ್ಗಾವಣೆ ಮಾಡಿಸಿಕೊಂಡಿದ್ದ. ಮತ್ತೊಂದೆಡೆ ಸಾಬಣ್ಣ ಬೆಂಗಳೂರಿನ ಚಿಕ್ಕಬಾಣವಾರ ಬಳಿ ಮನೆ ಮಾಡಿಕೊಂಡಿದ್ದ. ಈ ಮಧ್ಯೆ ಇಬ್ಬರ ನಡುವೆ ಸಂಪರ್ಕ ಬೆಸೆದುಕೊಂಡಿದ್ದರು.
ಬೆಂಗಳೂರು;- 7ನೇ ರಾಜ್ಯ ವೇತನ ಆಯೋಗದ ಕಾಲಾವಧಿ ಮತ್ತೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಮಾ.15, 2024 ವರೆಗೆ ವಿಸ್ತರಿಸಿ ಆದೇಶಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರು ವೇತನ ಪರಿಷ್ಕರಣೆ ಸಂಬಂಧ ಮತ್ತಷ್ಟು ದಿನಗಳ ಕಾಲ ಕಾಯುವಂತಾಗಿದೆ. ಏಳನೇ ರಾಜ್ಯ ವೇತನ ಆಯೋಗ ತನ್ನ ಕಾರ್ಯಕಲಾಪಗಳನ್ನು ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲು ಅನುಕೂಲವಾಗುವಂತೆ ಆಯೋಗದ ಕಾಲಾವಧಿಯನ್ನು 15-03-2024 ರವರೆಗೆ ವಿಸ್ತರಿಸಿ ಆದೇಶಿಸಿದೆ. ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳನ್ನು ಪರಿಷ್ಕರಿಸಲು ಮತ್ತು ನೂತನ ವೇತನ ರಚನೆ ಇತ್ಯಾದಿಗಳನ್ನು ರೂಪಿಸಲು 19-11-2022ರಲ್ಲಿ 7ನೇ ರಾಜ್ಯ ವೇತನ ಆಯೋಗವನ್ನು ಬಿಜೆಪಿ ಸರ್ಕಾರ ರಚಿಸಿತ್ತು. ಬಳಿಕ 15-05-2023ರ ಸರ್ಕಾರಿ ಆದೇಶದಲ್ಲಿ 7ನೇ ರಾಜ್ಯ ವೇತನ ಆಯೋಗದ ಕಾಲಾವಧಿಯನ್ನು ವಿಸ್ತರಿಸಲಾಗಿತ್ತು. ಬಳಿಕ ಮತ್ತೆ ಆಯೋಗದ ಕಾಲಾವಧಿಯನ್ನು ನವೆಂಬರ್ 18 ರವರೆಗೆ ವಿಸ್ತರಿಸಲಾಗಿತ್ತು. ಇದೀಗ ಮತ್ತೆ 7ನೇ ರಾಜ್ಯ ವೇತನ ಆಯೋಗದ ಕಾಲಾವಧಿಯನ್ನು 2024 ಮಾರ್ಚ್ 15ರ ವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.
ಬೆಂಗಳೂರು;- ರೈತರೇ ಸ್ವಂತ ಖರ್ಚಿನಲ್ಲಿ ಪಂಪ್ಸೆಟ್ಗೆ ಅಗತ್ಯ ಸಲಕರಣೆ ಖರೀದಿ ಮಾಡಬೇಕೆಂಬ ಸರ್ಕಾರ ಆದೇಶ ಖಂಡನೀಯ ಎಂದು ಈರಣ್ಣ ಕಡಾಡಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಇನ್ನು ಮುಂದೆ ರೈತರ ಪಂಪ್ ಸೆಟ್‍ಗಳಿಗೆ ವಿದ್ಯುತ್ ಪಡೆಯಬೇಕಾದರೆ ಸ್ವಂತ ಖರ್ಚಿನಲ್ಲಿ ಟ್ರಾನ್ಸ್ಫಾರ್ಮರ್, ಕಂಬ ಮತ್ತು ತಂತಿ ಸೇರಿದಂತೆ ವಿದ್ಯುತ್ಗೆ ಸಂಬಂಧಪಟ್ಟ ವಸ್ತುಗಳನ್ನು ರೈತರೇ ಖರೀದಿಸಬೇಕೆಂದು ಸರ್ಕಾರ ಆದೇಶ ಮಾಡಿದ್ದು ಖಂಡನೀಯ. ಒಂದು ವೇಳೆ ಈ ಆದೇಶವನ್ನು ಹಿಂಪಡೆಯದಿದ್ದರೆ ರಾಜ್ಯದ ಸುಮಾರು 35 ಲಕ್ಷ ಪಂಪ್‍ಸೆಟ್‍ಗಳ ರೈತ ಬಳಕೆದಾರರೊಂದಿಗೆ ಬಿಜೆಪಿ ರೈತ ಮೋರ್ಚಾವು ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದ್ದಾರೆ. ಈ ಹಿಂದೆ ಪ್ರತಿ ನೀರಾವರಿ ಪಂಪ್‍ಸೆಟ್‍ಗಳಿಗೆ ಕೇವಲ 24 ಸಾವಿರ ರೂಪಾಯಿ ಶುಲ್ಕ ನಿಗದಿಯಾಗಿತ್ತು. ಸರ್ಕಾರದ ಈ ಆದೇಶದಿಂದ ಕನಿಷ್ಠ 2 ಲಕ್ಷ ರೂಪಾಯಿ ನೀಡಿ ವಿದ್ಯುತ್ ಸಂಪರ್ಕ ಪಡೆಯಬೇಕಾದ ಅನಿವಾರ್ಯತೆಗೆ ರೈತರನ್ನು ನೂಕಲಾಗಿದೆ. ಬರಗಾಲದಿಂದ ಕಂಗೆಟ್ಟಿರುವ ರೈತರು ಬದಲಿ ಮಾರ್ಗಗಳಿಲ್ಲದೇ ಹಲವೆಡೆ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ…
ಅಮೇರಿಕಾ: ಅಮೇರಿಕಾದ ಇಲಿನಾಯ್ಸ್‌ನಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘೆರ್ಷದಿಂದ ಪ್ರಭಾವಿತನಾದ ವ್ಯಕ್ತಿಯೋರ್ವ ಆರು ವರ್ಷದ ಮುಸ್ಲಿಂ ಬಾಲಕನನ್ನು 26 ಬಾರಿ ಇರಿದು ಕೊಲೆ ಮಾಡಿದ್ದಾನೆ. ಮಗುವಿನ 32 ವರ್ಷದ ತಾಯಿ ಕೂಡ ಈ ಘಟನೆಯಲ್ಲಿ ಗಾಯಗೊಂಡಿದ್ದಾರೆ ಆದರೆ ಬದುಕುಳಿಯುವ ನಿರೀಕ್ಷೆಯಿದೆ ಎಂದು ವಿಲ್ ಕೌಂಟಿ ಶೆರಿಫ್ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಅಮೇರಿಕಾ ಅಧ್ಯಕ್ಷ ಜೋ ಬಿಡೆನ್ ಇದನ್ನು ಭಯಾನಕ ಕೃತ್ಯ ಎಂದು ಖಂಡಿಸಿದ್ದಾರೆ. ಈ ಘಟನೆ ನಡೆದ ತಕ್ಷಣ ಅಧಿಕಾರಿಗಳು ತಾಯಿ ಹಾಗೂ ಮಗನ ಹೆಸರನ್ನು ತಿಳಿಸದೇ ಇದ್ದರೂ, ಬಾಲಕನ ತಂದೆಯ ಚಿಕ್ಕಪ್ಪ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ಕೊಲೆಯಾದ ಪ್ಯಾಲೆಸ್ಟೀನಿಯನ್ ಅಮೇರಿಕನ್ ಬಾಲಕನನ್ನು ವಡೆಯಾ ಅಲ್-ಫಾಯೂಮ್ ಎಂದೂ, ಅವನ ತಾಯಿಯನ್ನು ಹನಾನ್ ಶಾಹಿನ್ ಎಂದು ಗುರುತಿಸಲಾಗಿದೆ. https://ainlivenews.com/suprem-ray-healing-center-reiki/ 71 ವರ್ಷದ ಜೋಸೆಫ್ ಕ್ಜುಬಾ ಎಂಬಾತ ಕೊಲೆಯ ಆರೋಪಿಯಾಗಿದ್ದು, ಬಾಲಕನನ್ನು 7-ಇಂಚಿನ (18-ಸೆಂ) ಬ್ಲೇಡ್ ಇರುವ ಮಿಲಿಟರಿ ಶೈಲಿಯ ಚಾಕುವಿನಿಂದ ಇರಿದು ಕೊಂದಿದ್ದಾನೆ ಎಂದು ವಿಲ್ ಕೌಂಟಿ…
ಬೆಂಗಳೂರು;-ಲಿವಿಂಗ್ ಇನ್ ಟುಗೆದರ್ನಲ್ಲಿದ್ದ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಜರುಗಿದೆ. ಬೆಂಗಳೂರಿನ ಕೊತ್ತನೂರಿನಲ್ಲಿ ಘಟನೆ ನಡೆದಿದ್ದು, ಮೃತರನ್ನು ಸೌಮಿನಿ ದಾಸ್ (20) ಹಾಗೂ ಕೇರಳದ ಅಭಿಲ್ ಅಬ್ರಹಾಂ (29) ಎಂದು ಗುರುತಿಸಲಾಗಿದೆ. ಇಬ್ಬರೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದಾರೆ. ಸೌಮಿನಿ ದಾಸ್ಗೆ ಮದುವೆಯಾಗಿದ್ದು, ಗಂಡನಿಂದ ದೂರವಾಗಿದ್ದರು. ಈ ವೇಳೆ, ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಆಕೆಗೆ ನರ್ಸಿಂಗ್ ಹೋಂನಲ್ಲಿ ಕೆಲಸ ಮಾಡುತ್ತಿದ್ದ ಅಭಿಲ್ ಅಬ್ರಹಾಂನ ಪರಿಚಯವಾಗಿದೆ. ಅನಂತರ ಇಬ್ಬರು ಒಟ್ಟಿಗೆ ಜೀವನ ನಡೆಸಲು ತೀರ್ಮಾನಿಸಿ, ದೊಡ್ಡಗುಬ್ಬಿಯ ಫ್ಲಾಟ್ನಲ್ಲಿ ವಾಸವಾಗಿದ್ದರು.. ಭಾನುವಾರ ಸೌಮಿನಿ ದಾಸ್ಗೆ ತನ್ನ ಗಂಡನಿಂದ ಫೋನ್ ಬಂದಿದೆ. ಪೋನ್ನಲ್ಲೇ ಸೌಮಿನಿ ಹಾಗೂ ಗಂಡನ ನಡುವೆ ಜಗಳ ಆಗಿದ್ದು, ಕಿರುಚಾಟ, ಕೂಗಾಟ ನಡೆಸಿದ್ದಾರೆ. ಇದರಿಂದ ಅಕ್ಕಪಕ್ಕದ ಮನೆಯವರು ಬಂದು ನೋಡಿದ್ದು, ಇಬ್ಬರೂ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರು. ಸೌಮಿರಾ ದಾಸ್ ಸ್ಥಳದಲ್ಲೇ ಮೃತಪಟ್ಟಿದ್ದರೆ, ತೀವ್ರ ಗಾಯಗೊಂಡ ಅಭಿಲ್ ಅಬ್ರಾಹಂ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ…