ಜಮಖಂಡಿ : ನಾಯಕತ್ವ ಬದಲಾವಣೆ, ಸಂಪುಟ ಪುನರಚನೆ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನು ಐದು ವರ್ಷ ನಮ್ಮದೇ ಸರ್ಕಾರ, ನಾನೇ ಸಿಎಂ ಎಂದು ಹೇಳಿರುವುದು ಸತ್ಯವಾಗಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು. ತಾಲ್ಲೂಕಿನ ಕಂಕಣವಾಡಿ ಗ್ರಾಮದಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ರೈತರು ನಿರ್ಮಿಸಿರುವ ಶ್ರೀ ಸಿದ್ದೇಶ್ವರ ತೂಗು ಸೇತುವೆ ಉದ್ಘಾಟನೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ. ಅವರನ್ನು ಬದಲಿಸುವ ಚರ್ಚೆ ಇಲ್ಲ. ಅವರು ಹೇಳಿರುವದು ಸರಿಯಾಗಿದೆ. ಒಂದು ವೇಳೆ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಬೇಕೆಂದರೆ ಅದನ್ನು ಶಾಸಕಾಂಗ ಪಕ್ಷದಲ್ಲಿ ಮಾಡಬೇಕಾಗುತ್ತದೆ. https://ainlivenews.com/suprem-ray-healing-center-reiki/#google_vignette ಅದನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ. ಈ ಕುರಿತು ಯಾರಿಗೂ ಅಸಮಾಧಾನ ಇಲ್ಲ ಎಂದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಆನಂದ ನ್ಯಾಮಗೌಡ, ಅರುಣಕುಮಾರ ಶಹಾ, ಈಶ್ವರ ಕರಬಸನವರ, ಮುತ್ತಣ್ಣ ಹಿಪ್ಪರಗಿ, ಪರಗೌಡ ಬಿರಾದಾರ, ಅಶೋಕ ಕಿವಡಿ, ಅಬೂಬಕರ ಕುಡಚಿ, ಇತರರು ಇದ್ದರು.
Author: AIN Author
ಬೆಂಗಳೂರು;- ರಾಜ್ಯ ಸರ್ಕಾರ ಅನ್ನಭಾಗ್ಯ, ಗೃಹಲಕ್ಷ್ಮೀ ಯೋಜನೆಯ ಎಲ್ಲಾ ಫಲಾನುಭವಿಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ಇನ್ನು ಮುಂದೆ ನಿಗದಿತ ಅವಧಿಯೊಳಗೆ ಯೋಜನೆಯ ಹಣ ಖಾತೆಗೆ ಜಮಾ ಆಗಲಿದೆ. ಸರಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆ ಮಾಸಿಕವಾಗಿ ಪಾವತಿ ಮಾಡುವ ಗೃಹ ಲಕ್ಷ್ಮಿ, ಅನ್ನ ಭಾಗ್ಯ ಮತ್ತ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಿಗೆ ಹಂತ ಹಂತವಾಗಿ ಪಾವತಿ ಮಾಡಲು ವೇಳಾಪಟ್ಟಿ ಸಿದ್ದ ಪಡಿಸಿ ನಿಗದಿತ ಸಮಯಕ್ಕೆ ತಲುಪಿಸುವ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ. ಫಲಾನುಭವಿಗಳಿಗೆ ತ್ವರಿತಗತಿಯಲ್ಲಿ ಪಾವತಿ ಮಾಡುವ ಸಲುವಾಗಿ ಡಿ.ಡಿ.ಓ, ಡಿ.ಬಿ.ಟಿ ಸಲ್ ಮತ್ತು ಖಜಾನೆಗಳಿಗೆ ಯಾವುದೇ ರೀತಿಯ ತಾಂತ್ರಿಕ /ಆಡಳಿತಾತ್ಮಕ ಸಮಸ್ಯೆ ಎದುರಾದರೆ ಬಗೆಹರಿಸಲು ಸೂಚಿಸಲಾಗಿದೆ.ಅದೇ ರೀತಿ, ಪ್ರತಿ ಹಂತದಲ್ಲೂ ಸಮನ್ವಯೀಕರಣ ಸುಲಭಗೊಳಿಸಲು ತಿಳಿಸಲಾಗಿದೆ. ಈ ಕುರಿತು ಖಜಾನೆ ಆಯುಕ್ತರ ಪ್ರಸ್ತಾವನೆ ಮಾಡಲಾಗಿದ್ದು, ಸರ್ಕಾರದ ಎಲ್ಲಾ ಇಲಾಖೆಗಳ ಫಲಾನುಭವಿ ಆಧಾರಿತ ಕಲ್ಯಾಣ ಹಾಗೂ ಸಬ್ಸಿಡಿ ಸ್ಟ್ರೀಂಗಳ ಪಾವತಿಗಳನ್ನು ನೇರ ವರ್ಗಾವಣೆ ಮಾಡುವ ವ್ಯವಸ್ಥೆ ಮೂಲಕ ಫಲಾನುಭವಿಗಳ ಆಧಾರ್…
ಬಾಗಲಕೋಟೆ : ವಿಜಯಪುರದ ಶಾಸಕ ಯತ್ನಾಳ ಮತ್ತೆ ನನ್ನ ನಡುವಿನ ಸಂಬಂಧ ಸರಿ ಇಲ್ಲ, ಎಂಬುದು ಸುಳ್ಳು. ನಾವೇನು ಜಗಳವಾಡಿಲ್ಲ. ಮಾಧ್ಯಮದ ಎದುರಿಗೆ ಮಾತ್ರ ನಾವೊಂದು ಅವರೊಂದು ಹೇಳಿಕೆ ಕೊಡುತ್ತೇವೆ. ಆದರೆ, ವೈಯಕ್ತಿಕವಾಗಿ ನಾವು ಚೆನ್ನಾಗಿಯೇ ಇದ್ದೇವೆ ಎಂದು ಸಂಸದ ರಮೇಶ ಜಿಗಜಿಣಗಿ ಸ್ಪಷ್ಟಪಡಿಸಿದರು. ಬಾಗಲಕೋಟೆ ಜಿಲ್ಲೆ ಅನಗವಾಡಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಅನುಗುಣವಾಗಿ ನಾವು ಸಾಂದರ್ಭಿಕವಾಗಿ ಏನೋ ಒಂದು ಹೇಳಿಕೆ ಕೊಟ್ಟಿರುತ್ತೇವೆ. ಅದನ್ನೇ ತಪ್ಪಾಗಿ ಭಾವಿಸಿದರೆ ಏನು ಮಾಡಲು ಸಾಧ್ಯ. ನಮ್ಮಿಬ್ಬರ ಮನಸು ಒಂದೇ ಇದೆ. ನನಗೆ ಯತ್ನಾಳ ಸಹಾಯ ಮಾಡಿದ್ದಾರೆ. ನಾನು ಸಹ ಅವರಿಗೆ ಸಹಾಯ ಮಾಡಿದ್ದೇನೆ. ನಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. https://ainlivenews.com/suprem-ray-healing-center-reiki/#google_vignette ಮಾಧ್ಯಮದವರೇ ಸೃಷ್ಟಿಸಿದ ಭಿನ್ನಾಭಿಪ್ರಾಯ ಇದು ಎಂದು ಹೇಳಿದರು. ವಿಜಯಪುರದಿಂದ ಲೋಕಸಭೆ ಚುನಾವಣೆಗೆ ಸ್ಫರ್ಧೆ ಮಾಡುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಪಕ್ಷ ಟಿಕೆಟ್ ಕೊಟ್ಟರೆ ಸ್ಪರ್ಧಿಸುತ್ತೇನೆ, ಇಲ್ಲದಿದ್ದರೆ ಮನೆಯಲ್ಲಿ ಮೊಮ್ಮಕ್ಕಳನ್ನು ಆಡಿಸುತ್ತ ಕಾಲಕಳೆಯುತ್ತೇನೆ ಎಂದರು.
ಬೆಂಗಳೂರು;- ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಪ್ರತಿಭಟನೆ ದಿಡೀರ್ ಮುಂದೂಡಿಕೆ ಆಗಿದೆ. ಈ ಸಂಬಂಧ ಸಂಘದ ರಾಜ್ಯಾಧ್ಯಕ್ಷ ಟಿ ಕೃಷ್ಣಪ್ಪ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆ ವೈಫಲ್ಯದ ವಿರುದ್ಧ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನ. 7ಕ್ಕೆ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿತ್ತು. 10 ಕೆಜಿ ಅಕ್ಕಿ ಮತ್ತು ಪಡಿತರ ಅಂಗಡಿ ಮಾಲಿಕರಿಗೆ ಕಮಿಷನ್ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಆದರೆ ಇದೀಗ ಪ್ರತಿಭಟನೆ ಮುಂದೂಡಲಾಗಿದ್ದು, ನ. 9 ಕ್ಕೆ. ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದರು. ಇದೇ ವೇಳೆ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ. ಟಿ ಕೃಷ್ಣಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಡಿತರ ವಿತರಕರಿಗೆ ಎತ್ತುವಳಿ ಮಾಡದಂತೆ ಕರೆ ನೀಡಲಾಗಿದ್ದು, ಪ್ರತಿಭಟನೆ ಸ್ಥಳಕ್ಕೆ ಸಚಿವರೆ ಆಗಮಿಸಿ ಸರ್ಕಾರದ ನಿರ್ಧಾರ ಪ್ರಕಟಿಸಲಿ ಎಂದು ಸಂಘದ ರಾಜ್ಯಾಧ್ಯಕ್ಷ ಟಿ ಕೃಷ್ಣಪ್ಪ. ಆಗ್ರಹಿಸಿದ್ದಾರೆ.
ಗೋಕಾಕ : ಅನಾರೋಗ್ಯದ ಕಾರಣದಿಂದಾಗಿ ಬೆಂಗಳೂರಿನಲ್ಲಿ ಸಿಎಂ ನೇತೃತ್ವದಲ್ಲಿ ನಡೆದ ಉಪಹಾರ ಸಭೆಗೆ ಹೋಗಿಲ್ಲ. ಸಭೆಗೆ ಬರಲು ನನಗೂ ಆಹ್ವಾನ ನೀಡಿದ್ದರು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ತಮ್ಮ ಹಿಲ್ ಗಾರ್ಡನ್ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 4 ದಿನಗಳಿಂದ ನನಗೆ ಆರೋಗ್ಯ ಸರಿಯಲ್ಲ. ಆದ್ದರಿಂದ ವಿಶ್ರಾಂತಿ ಪಡೆಯುತ್ತಿದ್ದೇನೆ. ನನಗೆ ಆರೋಗ್ಯವೇ ಮೊದಲು. ಆಮೇಲೆ ರಾಜಕಾರಣ ಎಂದರು. ಸಭೆಯಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಸಿದರು. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ ಬದಲಾಗಲ್ಲ. ಐದು ವರ್ಷಗಳ ಕಾಲ ಪೂರ್ಣ ಪ್ರಮಾಣದಲ್ಲಿ ಸರ್ಕಾರ ಆಡಳಿತ ಮಾಡುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. https://ainlivenews.com/suprem-ray-healing-center-reiki/#google_vignette ಮಹಾರಾಷ್ಟ್ರ ಮಾದರಿಯಲ್ಲಿ ಸರ್ಕಾರ ಬದಲಾವಣೆ ಆಗುತ್ತದೆ ಎಂದ ಸಹೋದರ, ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಹೇಳಿಕೆ ಈ ಮೂಲಕ ಅವರು ಟಾಂಗ್ ನೀಡಿದರು. ಸದ್ಯದಲ್ಲೇ ಡಿಕೆಶಿ ಮಾಜಿ ಮಂತ್ರಿ ಆಗುತ್ತಾರೆ ಎನ್ನುವ ರಮೇಶ…
ಬೆಂಗಳೂರು;- ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆಗೆ ಕರೆ ನೀಡಿದ್ದ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಪ್ರತಿಭಟನೆ ಹಿಂಪಡೆದಿದ್ದಾರೆ. ಸಹಾಯಕಿಯರ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿನ ಮೂಲಭೂತ ಸಮಸ್ಯೆಗಳ ಪರಿಹಾರದ ಕುರಿತು ಬೇಡಿಕೆ ಈಡೇರಿಕೆಗೆ ಕಾರ್ಯಕರ್ತರು ಪಟ್ಟು ಹಿಡಿದಿದ್ದರು. ಸರ್ಕಾರ ಬೇಡಿಕೆ ಈಡೇರಿಸದ ಕಾರಣ ಪ್ರತಿಭಟನೆ ಕರೆ ಕೊಟ್ಟಿದ್ರು. ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು, ಅಂಗನವಾಡಿ ಫೆಡರೇಷನ್ನಿನ ಪದಾಧಿಕಾರಿಗಳಿಂದ ಸಭೆ ನಡೆದಿದ್ದು, ಸಭೆಯಲ್ಲಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ವಾಪಸ್ಸು ಪಡೆದಿದ್ದಾರೆ.
ಬೆಂಗಳೂರು;- ಹಿರಿಯ ಗಣಿ ಭೂವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ನಿನ್ನೆ ಪ್ರತಿಮಾ ಮೊಬೈಲ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇದೀಗ ವಶಕ್ಕೆ ಪಡೆದ ಮೊಬೈಲ್ ಪರಿಶೀಲನೆಗೆ ಪೊಲೀಸರು ಮುಂದಾಗಿದ್ದಾರೆ. ಸುಬ್ರಹ್ಮಣ್ಯಪುರ ಪೊಲೀಸರಿಂದ ಮೊಬೈಲ್ ಫೋನ್ ಪರಿಶೀಲನೆ ನಡೆಯುತ್ತಿದೆ. ಕೊಲೆಯಾದ ವೇಳೆ ಮನೆಯಲ್ಲಿ ಬಾಗಿಲು ಬಳಿ ಪ್ರತಿಮಾ ಮೊಬೈಲ್ ಫೋನ್ ಪತ್ತೆಯಾಗಿತ್ತು. ಪೋನ್ ಅನ್ಲಾಕ್ ಹಾಗೂ ರಿಟ್ರೀವ್ ಗೆ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಒಂದು ವಾರದಿಂದ ಎಷ್ಟು ಕರೆಗಳು ಬಂದಿದ್ವು, ಯಾರ್ಯಾರು ಕರೆ ಮಾಡಿದ್ದಾರೆ ಎಂದು ಪರಿಶೀಲನೆ ಮಾಡುತ್ತಿದ್ದಾರೆ. ಪ್ರತಿಮಾ ಯಾರಿಗಾದ್ರು ಕರೆ ಮಾಡಿ ಮಾತನಾಡಿದ್ದಾರಾ ಅಂತಾಲೂ ಪರಿಶೀಲನೆ ಮಾಡುತ್ತಿದ್ದಾರೆ. ಆದ್ರೆ ಫೋನ್ ಲಾಕ್ ಹಿನ್ನೆಲೆ, ಟೆಕ್ನಿಕಲ್ ಸೆಲ್ ಗೆ ರವಾನಿಸಿ ಪರಿಶೀಲನೆ ನಡೆಸಲು ಪೊಲೀಸರು ಸಿದ್ಧತೆ ನಡೆಸಿದ್ದು, ಸುಬ್ರಮಣ್ಯಪುರ ಪೊಲೀಸರಿಂದ ತನಿಖೆ ಚುರುಕುಗೊಂಡಿದೆ.
ಬೆಂಗಳೂರು;- ರೈತರ ಸಮಸ್ಯೆಗೆ ಸರ್ಕಾರವಾಗಿ ನಿಮ್ಮ ಸಾಧನೆ ಏನು? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ರೈತ ಸಾಂತ್ವನ ಯಾತ್ರೆಯ ಅನುಭವವನ್ನು ಕೇಂದ್ರದ ಜತೆಗೂ ಹಂಚಿಕೊಳ್ಳುತ್ತೇವೆ. ನಿಮಗೆ ಸಂಶಯ ಬೇಡ ಎಂದರು. ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ʼಹೃದಯ ವೈಶಾಲ್ಯತೆʼಗೆ ನಾನು ಆಭಾರಿ. ರೈತ ಸಾಂತ್ವನಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ʼದೊಡ್ಡʼ ಗುಣವನ್ನು ಮನಸಾರೆ ಕೊಂಡಾಡುತ್ತೇನೆ.ಜೆಡಿಎಸ್ ಸಲ್ಲಿಸಲಿರುವ ಬರ ಅಧ್ಯಯನ ವರದಿಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದೀರಿ, ಬಹಳ ಸಂತೋಷ. ರಾಜ್ಯದ ಅಗತ್ಯಗಳಿಗೆ ಕೇಂದ್ರ ಸರ್ಕಾರ ಹೇಗೆ ಸ್ಪಂದಿಸುತ್ತಿದೆ? ಅದಕ್ಕೆ ನಿಮ್ಮ ನೇತೃತ್ವದ ಸರ್ಕಾರ ಎಷ್ಟು ʼಗಂಭೀರ(!?)ʼ ಪ್ರಯತ್ನ ಮಾಡಿದೆ, ಮಾಡುತ್ತಿದೆ ಎನ್ನುವುದು ನನಗೂ ತಿಳಿದಿದೆ. ಬರದ ಜತೆಗೆ, ವಿದ್ಯುತ್ ಬಿಕ್ಕಟ್ಟು, ಕಾವೇರಿ ಸಂಕಷ್ಟದ ವಿಷಯದಲ್ಲಿ ನಿಮ್ಮ ಸರಕಾರದ ʼಅಪರಿಮಿತ ಅಸಡ್ಡೆʼಯನ್ನು ಅರಿಯದಷ್ಟು ಮುಗ್ಧನೇ ನಾನು? ಎಂದು ವ್ಯಂಗ್ಯವಾಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜತೆ ದೇವೇಗೌಡರು ಮತ್ತವರ ಕುಟುಂಬಕ್ಕೆ ಆತ್ಮೀಯತೆ ಇದೆ ಎಂಬುದರಲ್ಲಿ ಎರಡು ಮಾತಿಲ್ಲ. ಬಿಜೆಪಿ-ಜೆಡಿಎಸ್ ನಡುವೆ ಮೈತ್ರಿ…
ನವದೆಹಲಿ: ನಾನು ಮತ್ತು ಧೋನಿ (MS Dhoni) ಆತ್ಮೀಯ ಸ್ನೇಹಿತರಲ್ಲ. ನಾವು ಕ್ರಿಕೆಟ್‌ನಿಂದ (Cricket) ಸ್ನೇಹಿತರಾಗಿದ್ದೇವೆ ಎಂದು ಟೀಂ ಇಂಡಿಯಾದ (Team India) ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ (Yuvraj Singh) ಹೇಳಿದ್ದಾರೆ. ಯೂಟ್ಯೂಬ್ ವಾಹಿನಿಯ ಸಂದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವಿಬ್ಬರು ಒಟ್ಟಾಗಿ ಆಡಿದ್ದರೂ ಮಹಿಯ ಜೀವನಶೈಲಿ ನನಗಿಂತ ತುಂಬಾ ಭಿನ್ನವಾಗಿತ್ತು, ಆದ್ದರಿಂದ ನಾವು ಎಂದಿಗೂ ಆತ್ಮೀಯ ಸ್ನೇಹಿತರಾಗಿರಲಿಲ್ಲ ಎಂದರು. ಧೋನಿ ನಾಯಕನಾಗಿದ್ದಾಗ ನಾನು ಉಪನಾಯಕನಾಗಿದ್ದೆ. ಕೆಲವೊಮ್ಮೆ ನನಗೆ ಇಷ್ಟವಿಲ್ಲದ ನಿರ್ಧಾರಗಳನ್ನು ಅವರು ತೆಗೆದುಕೊಂಡಿದ್ದರು. ಕೆಲವೊಮ್ಮೆ ಅವರು ಇಷ್ಟಪಡದ ನಿರ್ಧಾರಗಳನ್ನು ನಾನು ತೆಗೆದುಕೊಂಡಿದ್ದೇನೆ. ಇದು ಪ್ರತಿ ತಂಡದಲ್ಲಿ ಸಂಭವಿಸುತ್ತದೆ. ನನ್ನ ವೃತ್ತಿಜೀವನದ ಕೊನೆಯಲ್ಲಿದ್ದಾಗ ನಾನು ಅವರ ಬಳಿ ಸಲಹೆ ಕೇಳಿದೆ. ಈ ವೇಳೆ ಆಯ್ಕೆ ಸಮಿತಿಯು ಈಗ ನಿನ್ನನ್ನು ಪರಿಗಣನೆ ಮಾಡುತ್ತಿಲ್ಲ ಎಂದು ಹೇಳಿದ್ದರು. 2019ರ ವಿಶ್ವಕಪ್‌ಗೆ ಮೊದಲೇ ನನಗೆ ಈ ವಿಷಯ ತಿಳಿದಿತ್ತು ಎಂದು ತಿಳಿಸಿದರು ತಂಡದ ಸಹ ಆಟಗಾರರು ಒಬ್ಬರಿಗೊಬ್ಬರು ಉತ್ತಮ ಸ್ನೇಹಿತರಾಗಿರಬೇಕಾಗಿಲ್ಲ. ಆದರೆ ಮೈದಾನಕ್ಕೆ ಕಾಲಿಟ್ಟಾಗ…
ಮಂಗಳೂರು;- ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಭಕ್ತರಿಗೆ ವಿಶೇಷ ಮನವಿ ಮಾಡಲಾಗಿದೆ. ವಿಜಯಪುರ-ಮಂಗಳೂರು ರೈಲಿನ ವೇಳಾಪಟ್ಟಿ ಪರಿಷ್ಕರಣೆ ಮಾಡಬೇಕು ಮತ್ತು ಈ ರೈಲನ್ನು ಮಂಗಳೂರು ಸೆಂಟ್ರಲ್ ತನಕ ವಿಸ್ತರಣೆ ಮಾಡಬೇಕು ಎಂದು ಬೇಡಿಕೆ ಮುಂದಿಟ್ಟುಕೊಂಡು ಆನ್‌ಲೈನ್ ಸಹಿ ಅಭಿಯಾನ ನಡೆಸಲಾಗುತ್ತಿದೆ. ಇದಕ್ಕೆ ಉತ್ತಮ ಪ್ರತಿಕ್ರಿಯೆಯೂ ಸಿಕ್ಕಿದೆ. ಆನ್‌ಲೈನ್ ಸಹಿ ಅಭಿಯಾನಕ್ಕೆ ಬೆಂಬಲ ನೀಡುವಂತೆ ಕುಕ್ಕೆ ಸುಬ್ರಮಣ್ಯ ಮತ್ತು ಧರ್ಮಸ್ಥಳಕ್ಕೆ ಆಗಮಿಸುವ ಭಕ್ತರಿಗೆ ಮನವಿ ಮಾಡಲಾಗಿದೆ. ಈ ಕುರಿತು ಫೇಸ್‌ಬುಕ್ ಪೋಸ್ಟ್ ಹಾಕಲಾಗಿದೆ, ಸಹಿ ಮಾಡಲು ಲಿಂಕ್ ಸಹ ನೀಡಲಾಗಿದೆ. ಫೇಸ್‌ಬುಕ್ ಪೋಸ್ಟ್‌ನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿಜಯಪುರ, ಗದಗ, ಬಾಗಲಕೋಟೆ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಚಿಕ್ಕಮಗಳೂರು, ಹಾಸನ ಸೇರಿ ನೆರೆ ಜಿಲ್ಲೆಗಳ ಭಾಗಗಳಿಂದ ರೈಲಿನಲ್ಲಿ ಬರುವ ಭಕ್ತಾದಿಗಳ ಬಳಿ ನಮ್ಮದೊಂದು ಮನವಿ ಎಂದು ತಿಳಿಸಲಾಗಿದೆ.