ಬೆಂಗಳೂರು: ನಾಳೆ ಹಾಸನಾಂಬ ದೇವಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ನಾಳೆ ಬೆಳಗ್ಗೆ 11ಕ್ಕೆ ಬೆಂಗಳೂರಿನಿಂದ ಹಾಸನಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿರುವ ಸಿದ್ದರಾಮಯ್ಯ ಮಧ್ಯಾಹ್ನ 12.30ಕ್ಕೆ ಹಾಸನಾಂಬೆ ದರ್ಶನ ಪಡೆಯಲಿದ್ದಾರೆ. ಹಾಸನಾಂಬೆ ದೇವಿ ದರ್ಶನ ಪಡೆಯಲು 4ನೇ ದಿನವೂ ಸರತಿ ಸಾಲಿನಲ್ಲಿ ನಿಂತು ಭಕ್ತರು ದರ್ಶನ ಪಡೆಯುತ್ತಿದ್ದಾರೆ. ಮುಂಜಾನೆ 5 ಗಂಟೆಯಿಂದಲೇ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು ಇಂದು ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರಿಗೆ ವಿಶೇಷ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನವೆಂಬರ್ 15ರಂದು ಹಾಸನಾಂಬೆ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಇಂದು ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರವೇ ಹರಿದು ಬಂದಿದೆ. ಮುಸ್ಲಿಂ ಕುಟುಂಬವೊಂದು ಹಾಸನಾಂಬೆ ದರ್ಶನಕ್ಕೆ ಬಂದಿದೆ. ಸರತಿ ಸಾಲಿನಲ್ಲಿ ನಿಂತು ಹಜೀರ ಎಂಬ ಮಹಿಳೆ ಕುಟುಂಬ ತಾಯಿಯ ದರ್ಶನ ಪಡೆದಿದ್ದಾರೆ. ದೇವನೊಬ್ಬ ನಾಮ ಹಲವು ಎಂಬ ಸಂದೇಶ ಸಾರಿದ್ದಾರೆ. ಹಾಸನಾಂಬೆ ಮೇಲೆ ನಮಗೆ ನಂಬಿಕೆ ಇದೆ. ತುಂಬ ವರ್ಷಗಳಿಂದ ದೇವರ ದರ್ಶನಕ್ಕೆ ಬರಬೇಕು ಎಂದುಕೊಂಡಿದ್ದು ಈ ಬಾರಿ ದರ್ಶನಕ್ಕೆ ಬರುವ ಅವಕಾಶ ಸಿಕ್ಕಿದೆ…
Author: AIN Author
ಬೆಂಗಳೂರು: ಲೋಕಸಭೆ ಚುನಾವಣೆ (Loksabha Election) ಬೆನ್ನಲ್ಲೆ ಗ್ಯಾರಂಟಿ ಸಮರ್ಪಕ ಜಾರಿಗೆ ಸರ್ಕಾರ ಕಸರತ್ತು ನಡೆಸುತ್ತಿದೆ. ರಾಜ್ಯದ ಜನತೆಗೆ `ಗ್ಯಾರಂಟಿ’ ಗುಡ್‍ನ್ಯೂಸ್ ಒಂದು ಸಿಕ್ಕಿದೆ. ರಾಜ್ಯದಲ್ಲಿ ಅನ್ನಭಾಗ್ಯ (Anna Bhagya) ಹಾಗೂ ಗೃಹಲಕ್ಷ್ಮಿ (Gruhalakshmi) ಹಣ ವಿಳಂಬವಾಗುತ್ತಿದ್ದ ಬೆನ್ನಲ್ಲೇ ಫಲಾನುಭವಿಗಳಿಗೆ ಹಣ ತಲುಪಿಸೋಕೆ ನಿಗದಿತ ಡೆಡ್‍ಲೈನ್ ಅನ್ನು ಆರ್ಥಿಕ ಇಲಾಖೆ ನೀಡಿದೆ. ಆರ್ಥಿಕ ಇಲಾಖೆಯ ಡಿಡಿಓಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಈ ಮೂಲಕ ಹಣ ತಲುಪಲು ಪ್ರತಿ ತಿಂಗಳಲ್ಲೂ ದಿನಾಂಕ ಫಿಕ್ಸ್ ಮಾಡಲಾಗುತ್ತಿದೆ. ಗೃಹಲಕ್ಷ್ಮಿ, ಅನ್ನಭಾಗ್ಯದ ಹಣ ಖಾತೆಗೆ ಜಮೆ ಆಗಲು ಇನ್ಮುಂದೆ ಡೆಡ್ ಲೈನ್ ಇರಲಿದೆ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪ್ರತಿ ತಿಂಗಳ 20ಕ್ಕೆ ಹಾಕಲು ಆರ್ಥಿಕ ಇಲಾಖೆ ಸುತ್ತೋಲೆ ನೀಡಿದೆ. ಅನ್ನಭಾಗ್ಯದ ದುಡ್ಡನ್ನು 10-15 ದಿನಾಂಕದೊಳಗೆ ಪ್ರಕ್ರಿಯೆಗೆ ಸೂಚನೆ ನೀಡಲಾಗಿದೆ. ಹಾಗೆಯೇ ಗೃಹಲಕ್ಷ್ಮಿ ಹಣ ತಿಂಗಳ 15- 20 ರೊಳಗೆ ಜಮೆಗೆ ಸೂಚನೆ ನೀಡಲಾಗಿದೆ.
ಕೋಲಾರ: ದರಿದ್ರ ಕಾಂಗ್ರೆಸ್ ಸರ್ಕಾರ ಬಂದಿರೋದ್ರಿಂದ ರಾಜ್ಯಕ್ಕೆ ಬರ ಬಂದಿದೆ ಎಂದು ಸಂಸದ ಮುನಿಸ್ವಾಮಿ ಕಿಡಿಕಾರಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಈ ಸರ್ಕಾರದ ಕಾಲ್ಗುಣ ಹೇಗಿದೆ ಅಂದ್ರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ರಾಜ್ಯಕ್ಕೆ ಬರ ಬಂತು. ಸುಳ್ಳು ಭರವಸೆ ಹೇಳಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ, ಅಧಿಕಾರ ಸಿಕ್ಕ ಬಳಿಕ ರೈತರನ್ನು ನಿರ್ಲಕ್ಷ್ಯ ಮಾಡಲಾಯಿತು. ರಾಜ್ಯಾದ್ಯಂತ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಬರಗಾಲ ತೀವ್ರವಾಗಿದೆ ಈವರೆಗೆ ಯಾವ ರೈತರಿಗೂ ಪರಿಹಾರ ಇರಲಿ, ಕನಿಷ್ಟ ರೈತರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ ಎಂದು ವಾಗ್ದಾಳಿ ನಡೆಸಿದರು. https://ainlivenews.com/suprem-ray-healing-center-reiki/ ಅಧಿಕಾರಕ್ಕೆ ಬರ್ತಿದ್ದಂತೆ ಕಮಿಷನ್, ಲೂಟಿ ಹೊಡೆಯುವ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಹೀಗಾಗಿ ನೂರಾರು ಕೋಟಿ ಹಣ ಸರ್ಕಾರಿ ಮನೆಯಲ್ಲಿ ಸಿಕ್ಕಿದೆ. ಇದನ್ನ ನೋಡಿದ್ರೆ ಗೊತ್ತಾಗುತ್ತೆ ಇವರ ಸರ್ಕಾರ ಏನು ಮಾಡುತ್ತಿದೆ. ಹೊಸ ಸರ್ಕಾರ ಬಂದ ಮೇಲೆ ಜಿಲ್ಲೆಗೆ ಏನು ತಂದಿದ್ದಾರೆ ಹೇಳಲಿ? ಕೋಲಾರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ರೈತರಿಗೂ ಮೋಸ, ಇತ್ತ ದಲಿತರಿಗೂ ಮೊಸ ಮಾಡುತ್ತಿರುವ ಸರ್ಕಾರ ಇದು.…
ಹಾಸನ : ಹಾಸನಾಂಬೆ ದೇವಿ ದರ್ಶನ ಪಡೆಯಲು 4ನೇ ದಿನವೂ ಸರತಿ ಸಾಲಿನಲ್ಲಿ ನಿಂತು ಭಕ್ತರು ದರ್ಶನ ಪಡೆಯುತ್ತಿದ್ದಾರೆ. ಮುಂಜಾನೆ 5 ಗಂಟೆಯಿಂದಲೇ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು ಇಂದು ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರಿಗೆ ವಿಶೇಷ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನವೆಂಬರ್ 15ರಂದು ಹಾಸನಾಂಬೆ ಗರ್ಭಗುಡಿ ಬಾಗಿಲು ಮುಚ್ಚಲಿದೆ. https://ainlivenews.com/suprem-ray-healing-center-reiki/ ಹಾಸನಾಂಬೆ ಜಾತ್ರಾಮಹೋತ್ಸವದ ಅಂಗವಾಗಿ ನಗರದ ಜನರಿಗೆ ಹೆಲಿಕಾಪ್ಟರ್ ಮೂಲಕ ಹಾರಾಡೋದಕ್ಕೆ ಹೆಲಿಟೂರಿಸಂ ವ್ಯವಸ್ಥೆಯನ್ನ ಕಲ್ಪಿಸಿದೆ, ಕಳೆದ ಎರಡು ದಿನಗಳಿಗಿಂತ ಹೆಚ್ಚಾಗಿ ಇಂದು ಜನರ ಹೆಲಿಕಾಪ್ಟರ್ ಅನುಭವನ್ನ ಪಡೆದುಕೊಂಡರು. ಇನ್ನು ಹಾಸನಾಂಬೆಯ ಪವಾಡ ತಿಳಿದು ತಾಯಿಯನ್ನ ನೋಡೋದಕ್ಕೆ ಜನರು ಬಹಳ ಕುತೂಹಲದಿಂದ ಬರ್ತಿದ್ದಾರೆ.
ಬೆಂಗಳೂರು: ಬ್ರೇಕ್‌ಫಾಸ್ಟ್ ಸಭೆಯಲ್ಲಿ ಆಪರೇಷನ್ ಹಸ್ತದ ಬಗ್ಗೆ ಚರ್ಚೆಯೇ ಆಗಿಲ್ಲ. ಯಾರೆಲ್ಲಾ ಬರ್ತಾರೋ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ತೇವೆ. ನಾವು ಯಾವುದೇ ಆಪರೇಷನ್ ಮಾಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಆಪರೇಷನ್ ಕಮಲ ಮಾಡಲ್ಲ. ಯಾರು ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರ್ತಾರೆ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ತಿವಿ ಎಂದು ಹೇಳಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಇಂದು ದೇಶ ಆರ್ಥಿಕವಾಗಿ ದಿವಾಳಿಯಾಗಿದೆ. ರಾಜ್ಯಕ್ಕೆ ಕೊಡಬೇಕಾದನ್ನೇ ಇನ್ನ ಅವರು ಕೊಟ್ಟಿಲ್ಲ. ಅವರು ರಾಜಕೀಯ ಭಾಷಣ ಮಾಡಿದ್ದಾರೆ. ದಾಖಲಾತಿಗಳನ್ನು ಇಟ್ಟು ಮಾತನಾಡಲಿ ಬೇಕಾದ್ರೆ, ಸುಳ್ಳು ಹೇಳಬಾರದು ಎಂದು ಚಾಟಿ ಬೀಸಿದ್ದಾರೆ. ಬರಗಾಲದ ಹಣ (ಪರಿಹಾರ) ಇನ್ನೂ ಕೊಡೋಕೆ ಆಗಿಲ್ಲ ಅವರಿಂದ. 5 ಉಚಿತ ಗ್ಯಾರಂಟಿ ಕೊಡೋಕೆ ಆಗಲ್ಲ ಅಂದಿದ್ದರು. ರಾಜ್ಯ ದಿವಾಳಿ ಆಗುತ್ತೆ ಅಂದಿದ್ದರು. ಈಗ ನಾವು ಮಾಡಿಲ್ವಾ? ಈ ರೀತಿಯ ಹೇಳಿಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಶೋಭೆ ತರಲ್ಲ ಎಂದು…
ಬೆಂಗಳೂರು: ದಲಿತ ಸಿಎಂ ವಿಚಾರ ಅದು 2013 ರಿಂದಲೂ ಓಡುತ್ತಲೆ ಇದೆ. 5 ವರ್ಷ ಅದೆ ಓಡಿತು ಆದರೆ ಪಿಚ್ಚರ್ ರಿಲೀಸ್ ಆಗಲಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಈ ಹಿಂದೆ ಖರ್ಗೆಯವರು ಇದ್ದರು ಆಗಲೂ ಅವಕಾಶ ಆಗಲಿಲ್ಲ. ಪರಮೇಶ್ವರ್ ಅವರು 8 ವರ್ಷ ಅಧ್ಯಕ್ಷರಾಗಿದ್ದರು ಅವರಿಗೆ ಡಿಸಿಎಂ ಆಗೋಕು ಆಗಲಿಲ್ಲ.ಎರಡುವರೆ ವರ್ಷದ ನಂತರ ಏನಾಗುತ್ತೆ ಅಂತ ಸಿಎಂ ಇದಾರೆ, ಡಿಸಿಎಂ ಇದಾರೆ ಪಕ್ಷದ ಅಧ್ಯಕ್ಷರ ಇದ್ದಾರೆ ಹೈ ಕಮಾಂಡ್ ನಾಯಕರಿದ್ದರೆ ಅದೆಲ್ಲಾ ಅವರು ತೀರ್ಮಾನ ಮಾಡ್ತಾರೆ ಎಂದರು. ಹಾಗೆ ಸಿಎಂ ಕರೆದ ಸಭೆಗೆ ನಾನು ಬಂದಿರಲಿಲ್ಲ.ಅನಾರೋಗ್ಯದ ಕಾರಣ ನಾನು ಬಂದಿರಲಿಲ್ಲ.ಅದನ್ನ ಸಿಎಂ ಗಮನಕ್ಕೆ ತಂದಿದ್ದೆ.ಬರಲಿಲ್ಲ ಅಂದ ಕೂಡಲೆ ಬೇರೆ ಅರ್ಥ ಕಲ್ಪಿಸುವುದು ಬೇಡ.ನಾನು ಇಲ್ಲದಿದ್ದರು ಅಲ್ಲಿನ ತೀರ್ಮಾನ ಎಲ್ಲರಿಗೂ ಅನ್ವಯವಾಗುತ್ತೆ. ಯಾರು ಮಾತನಾಡಬಾರದು ಅನ್ನೋದು ಸರಿ ಇದೆ.ಮಾತನಾಡಿದರೆ ಸುಮ್ಮನೆ ಗೊಂದಲ ಉಂಟಾಗುತ್ತೆ ಎಂದು ಹೇಳಿ ಸುಮ್ಮನಾದರು. ಮತ್ತೆ ಮಧ್ಯ ಪ್ರದೇಶದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ…
ಚಾಮರಾಜನಗರ: ಕಾಡಿನಿಂದ ಹೊರಬಂದು ಗ್ರಾಮಗಳಲ್ಲಿ ಅಡ್ಡಾಡುತ್ತಿರುವ ಹುಲಿರಾಯ ಹೌದು ಭಾರೀ ಗಾತ್ರದ ಹುಲಿಯೊಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರು ಸುತ್ತಾಮುತ್ತಾ ಬೀಡುಬಿಟ್ಟಿದೆ. ಬಂಡೀಪುರ ಹುಲಿ ಸುರಕ್ಷಿತ ಅರಣ್ಯ ಪ್ರದೇಶದಿಂದ ಹೊರಬಂದಿರುವ ವ್ಯಾಘ್ರ ಆಗಿದ್ದು, ಪಡಗೂರು ಮೂಡುಗೂರು ಕೊಡಸೋಗೆ ಬೊಮ್ಮಲಾಪುರ ಅಡ್ಡಾಡಿಕೊಂಡಿದೆ. ರೈತರ ಜಾನುವಾರುಗಳನ್ನು ಕೊಂದು ಹೊಟ್ಟೆತುಂಬಿಸಿಕೊಳ್ಳುತ್ತಿದ್ದು, ಪಡಗೂರು,ಮೂಡಗೂರು, ಮಲ್ಲಮ್ಮನಹುಂಡಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಹುಲಿಯ ಉಪಟಳ ಹೆಚ್ಚಾಗಿದೆ. ಇನ್ನೂ ರೈತರ ಜಮೀನುಗಳಲ್ಲಿ ಅರಾಮವಾಗಿ ಅಡ್ಡಾಡುತ್ತಾ ಜಾನುವಾರುಗಳನ್ನು ಕೊಲ್ಲುತ್ತಿದ್ರೂ ಹುಲಿ ಸೆರೆಗೆ ಅರಣ್ಯ ಇಲಾಖೆ ಮುಂದಾಗುತ್ತಿಲ್ಲ. ಪಡಗೂರು ಸುತ್ತಾಮುತ್ತಾ ಮುಂಜಾನೆ ಯುವ ರೈತರ ಕಣ್ಣಿಗೆ ಕಾಣಿಸುತ್ತಿದೆ. ಆದ್ರೆ ಅರಣ್ಯ ಇಲಾಖೆ ಕಣ್ಣಿಗೆ ಕಾಣದೆ ಆಟ ಆಡಿಸುತ್ತಿದೆ. ಕಾಡು ಬಿಟ್ಟು ನಾಡಿಗೆ ಬಂದು ವೆಲ್ ಸೆಟಲ್ ಆಗಿರುವ ಹುಲಿ ದಾಳಿಗೆ ಪ್ರತಿನಿತ್ಯ ಆತಂಕ ಪಡುತ್ತಿರುವ ರೈತರು. ಮನುಷ್ಯರ ಮೇಲ ಎರಗಿ ಅನಾಹುತ ಸೃಷ್ಟಿಸುವ ಮೊದಲು ಹುಲಿ ಸೆರೆಗೆ ಮುಂದಾಗುವಂತೆ ಸ್ಥಳೀಯರು ಒತ್ತಾಯ ಮಾಡಿದ್ದಾರೆ.
ಹೆಸರಾಂತ ಕವಿ ಗೋಪಾಲಕೃಷ್ಣ ಅಡಿಗರು ಬರೆದಿರುವ ‘ಯಾವ ಮೋಹನ ಮುರಳಿ ಕರೆಯಿತು’ (Yaava Mohana Murali Kareyitu) ಎಂಬ ಹಾಡಿನ ಮೊದಲ ಸಾಲೇ ಚಿತ್ರದ ಶೀರ್ಷಿಕೆಯಾಗಿದೆ. ಇತ್ತೀಚೆಗೆ ಈ ಚಿತ್ರಕ್ಕಾಗಿ ವಿ.ನಾಗೇಂದ್ರಪ್ರಸಾದ್ ಬರೆದಿರುವ ‘ಯಾವ ಮೋಹನ ಮುರಳಿ ಕರೆಯಿತು’ ಟೈಟಲ್ (Title) ಸಾಂಗ್ ಬಿಡುಗಡೆಯಾಯಿತು. ಖ್ಯಾತ ನಿರ್ಮಾಪಕ ಉಮಾಪತಿ ಶ್ರೀನಿವಾಸಗೌಡ ಹಾಡನ್ನು ಬಿಡುಗಡೆ ಮಾಡಿ, ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ಅಂಗವಿಕಲ ಹುಡುಗಿ ಹಾಗೂ ಶ್ವಾನದ ನಡುವಿನ ಪ್ರೀತಿಯ ಕುರಿತಾದ ಚಿತ್ರವಿದು. ಕನ್ನಡದಲ್ಲಿ ಶ್ವಾನದ ಕುರಿತಾದ ಚಿತ್ರಗಳು ಬಂದಿದೆ. ಆದರೆ ಈ ಕಥೆ ವಿಭಿನ್ನ. ಅನಿಲ್ ಸಿ.ಜೆ ಸಂಗೀತ ನೀಡಿರುವ ಎಲ್ಲಾ ಹಾಡುಗಳು ಚೆನ್ನಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ ಎಂದು ನಿರ್ದೇಶಕ ವಿಶ್ವಾಸ್ ಕೃಷ್ಣ ತಿಳಿಸಿದರು . ನಾನು ಮೂಲತಃ ಉದ್ಯಮಿ. ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ. ಹಾಡು ಬಿಡುಗಡೆ ಮಾಡಿಕೊಟ್ಟ ಉಮಾಪತಿ ಅವರಿಗೆ ಧನ್ಯವಾದ ಎಂದರು ನಿರ್ಮಾಪಕ ಶರಣಪ್ಪ ಗೌರಮ್ಮ. ಚಿತ್ರದ ಪ್ರಮುಖ ಪಾತ್ರಧಾರಿ ಬೇಬಿ ಪ್ರಕೃತಿ,…
ಬಾಗಲಕೋಟೆ: ಕೆರೆದಂಡೆಯಲ್ಲಿ ಪಂಪ್‌ಸೆಟ್ ಆನ್ ಮಾಡಲು ಹೋಗಿದ್ದ ರೈತ ನಾಪತ್ತೆಯಾದ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ತೊದಲಬಾಗಿಯಲ್ಲಿ ನಡೆದಿದೆ. ಇನ್ನು ರೈತ ನಾಗಪ್ಪ ರಾಣಗಟ್ಟಿಯನ್ನು ಮೊಸಳೆ ಎಳೆದೊಯ್ದಿರುವ ಶಂಕೆ ವ್ಯಕ್ತವಾಗಿದೆ. https://ainlivenews.com/suprem-ray-healing-center-reiki/ ಕೆರೆ ಬಳಿ ರೈತನ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಜಮಾಯಿಸಿದ್ದಾರೆ. ಘಟನಾ ಸ್ಥಳಕ್ಕೆ ಸಾವಳಗಿ ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ರೈತನನ್ನು ಪತ್ತೆ ಹಚ್ಚಲು ಆಗ್ರಹಿಸಿದ್ದಾರೆ.
ದಕ್ಷಿಣದ ಖ್ಯಾತ ನಟಿ ಸಮಂತಾ ಮಯೋಸೈಟಿಸ್ (Myositis) ಕಾಯಿಲೆಯಿಂದ ಬಳಲುತ್ತಿರುವ ವಿಷಯ ಗೊತ್ತೇ ಇದೆ. ಪದೇ ಪದೇ ಈ ಕಾಯಿಲೆಗಾಗಿ ನಾನಾ ಥೆರಪಿ ಪಡೆಯುತ್ತಿದ್ದಾರೆ ನಟಿ. ಖುಷಿ ಸಿನಿಮಾದ ಶೂಟಿಂಗ್ ಮುಗಿಸಿಕೊಂಡು ನಾನಾ ದೇಶಗಳನ್ನು ಸುತ್ತುವುದರಲ್ಲಿ ಬ್ಯುಸಿಯಾಗಿದ್ದ ನಟಿ ಇದೀಗ ಕ್ರಯೋಥೆರಪಿ (Cryotherally) ಚಿಕಿತ್ಸೆ ಮಾಡಿಕೊಳ್ಳುತ್ತಿದ್ದಾರೆ. ಈ ವಿಷಯವನ್ನು ಸ್ವತಃ ಅವರೇ ತಿಳಿಸಿದ್ದರು, ಆ ಕುರಿತಾದ ವಿಡಿಯೋ ಕೂಡ ಶೇರ್ ಮಾಡಿದ್ದಾರೆ. ಈ ಹಿಂದೆ ಸಮಂತಾ(Samantha) ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿಯೊಂದನ್ನು ನೀಡಿದ್ದರು. ತಮಗಿರುವ ಖಾಯಿಲೆಗಾಗಿ ಸ್ಟಿರಾಯ್ಡ್ (Steroid) ತೆಗೆದುಕೊಂಡಿದ್ದರಿಂದ ತಮ್ಮ ದೇಹದ ಚರ್ಮ ಹಾಳಾಗಿದೆ ಎಂದು ಅವರು ಹೇಳಿಕೊಂಡಿದ್ದರು. ತಾವು ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಯಾವುದೇ ಫೋಟೋ ಹಾಕಲಿ, ಅದಕ್ಕೆ ಫಿಲ್ಟರ್ ಹಾಕುವುದಾಗಿ ತಿಳಿಸಿದ್ದರು. ವೈದ್ಯರ ಸಲಹೆ ಮೇರೆಗೆ ದೇಹದಲ್ಲಿ ಕಾಣಿಸಿಕೊಳ್ಳುತ್ತಿದ್ದ ನೋವಿಗಾಗಿ ಸ್ಟಿರಾಯ್ಡ್ ತೆಗೆದುಕೊಳ್ಳುತ್ತಿದ್ದೆ. ಅದು ಅತೀಯಾಗಿ ದೇಹ ಸೇರಿಕೊಂಡಿದ್ದರಿಂದ ಚರ್ಮಕ್ಕೆ ತೊಂದರೆ ಮಾಡಿದೆ. ವೈದ್ಯರಾದ ಚಿನ್ಮಯಿ ಶ್ರೀಪಾದ ಅವರು ಚರ್ಮವನ್ನು ಸರಿ ಮಾಡುವುದಾಗಿ ಹೇಳಿದ್ದಾರೆ. ಎಲ್ಲವೂ ಅವರ ಕೈಯಲ್ಲಿದೆ…