ಬೆಂಗಳೂರು: ಗಣಿ ಅಧಿಕಾರಿ ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರು ಚಾಲಕನನ್ನು ಬಂಧಿಸಲಾಗಿದೆ. ಪ್ರತಿಮಾ ಮೇಲಿನ ಸೇಡಿನಿಂದ ಪ್ರಾಣ ತೆಗೆದು ಕಿರಣ್ ಎಸ್ಕೇಪ್ ಆಗಿ ಇವಾಗ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಅಲ್ಲದೆ ವಿಚಾರಣೆಯ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. ಚಾಲಕ ಕಿರಣ್ ಸರ್ಕಾರಿ ಕೆಲಸದಲ್ಲಿ ಇದ್ದೀನಿ ಅಂತಾ ಮನೆಯವರು ಮತ್ತು ಸಂಬಂಧಿಗಳಿಗೆ ಹೇಳಿಕೊಂಡಿದ್ದನು. ಪತ್ನಿಗೂ ಸರ್ಕಾರಿ ಕೆಲಸದಲ್ಲಿ ಇದ್ದೀನಿ ಅಂತ ಹೇಳಿಕೊಂಡು ಮದ್ವೆಯಾಗಿದ್ದನು. ಹದಿನೈದು ದಿನಗಳ ಹಿಂದೆ ಪ್ರತಿಮಾ ಆತನನ್ನು ಕೆಲಸದಿಂದ ತೆಗೆದಿದ್ದರು. ಕೆಲಸದಿಂದ ತೆಗೆಯುತ್ತಿದ್ದಂತೆ, ಗಂಡನನ್ನ ತೊರೆದು ಹೋಗಿದ್ದ ಕಿರಣ್ ಹೆಂಡತಿ ಹೋಗಿದ್ದಳು. 4 ವರ್ಷದಿಂದ ಕಾರು ಚಾಲಕನಾಗಿದ್ದ ಕಿರಣ್, ಬೇಜವಾಬ್ದಾರಿಯಿಂದ ಕಾರು ಓಡಿಸುತ್ತಿದ್ದನು. ಗುತ್ತಿಗೆ ಆಧಾರದಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದ ಕಿರಣ್ ಕಳೆದ ತಿಂಗಳು ಹೊಸ ಸರ್ಕಾರಿ ಕಾರು ಅಪಘಾತ ಮಾಡಿದ್ದನು. ಅಪಘಾತದ ನಂತರ ಕಚೇರಿಯಲ್ಲೇ ಕಾರು ಬಿಟ್ಟು ತೆರಳಿದ್ದನು. ಕಿರಣ್ ನಡವಳಿಕೆಯಿಂದ ಕೋಪಗೊಂಡಿದ್ದ ಪ್ರತಿಮಾ, 10 ದಿನಗಳ ಹಿಂದೆ ಕೆಲಸದಿಂದ ತೆಗೆದು ಹಾಕಿದ್ದರು. ಈ ವೇಳೆ ಪ್ರತಿಮಾ ಕಾಲಿಗೆ ಬಿದ್ದು…
Author: AIN Author
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಂದು ಗೃಹ ಕಚೇರಿ ಕೃಷ್ಣಾದಲ್ಲಿ ಇಂಧನ ಇಲಾಖೆಯ (Energy Department) ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಭೆಯಲ್ಲಿ ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಕೃಷಿ ಪಂಪ್ ಸೆಟ್‌ಗಳಿಗೆ ಪ್ರತಿದಿನ 7 ತಾಸು ವಿದ್ಯುತ್ ನೀಡಲು ನಿರ್ಧರಿಸಲಾಗಿತು. ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್ (K.J George), ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಮಳೆ ಅಭಾವದಿಂದ ರಾಜ್ಯದಲ್ಲಿ ಉಂಟಾಗಿರುವ ವಿದ್ಯುತ್ ಸಮಸ್ಯೆ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು. 2022ಕ್ಕೆ ಹೋಲಿಸಿದ್ರೆ 2023 ರಲ್ಲಿ ವಿದ್ಯುತ್ (Electricity) ಬೇಡಿಕೆ ಸರಾಸರಿ ಶೇ.43 ರಷ್ಟು ಹೆಚ್ಚಿದೆ. ಅಕ್ಟೋಬರ್ ತಿಂಗಳಲ್ಲಿ 15,978 ಮೆಗಾವ್ಯಾಟ್ ಬೇಡಿಕೆ ದಾಖಲಾಗಿದೆ. ವಿದ್ಯುತ್ ಬಳಕೆಯಲ್ಲಿ ಕಳೆದ ವರ್ಷಕ್ಕಿಂತ ಶೇ. 45 ರಷ್ಟು ಹೆಚ್ಚಿದೆ. ಕೃಷಿ ಬಳಕೆಯಲ್ಲಿ ಶೇ. 55ರಿಂದ 119 ರಷ್ಟು ಹೆಚ್ಚಳವಾಗಿದೆ. ಇತರ ವಿಭಾಗಗಳಲ್ಲಿ ಶೇ.9 ರಿಂದ 14…
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ (Delhi) ಗಾಳಿ ಗುಣಮಟ್ಟ (Air Quality) ಕಳವಳಕಾರಿ ರೀತಿಯಲ್ಲಿ ಹದಗೆಟ್ಟಿದ್ದು, ಮಕ್ಕಳ ಆರೋಗ್ಯದ ದೃಷ್ಟಿಯಿಂದ ರಾಷ್ಟ್ರ ರಾಜಧಾನಿಯ ಎಲ್ಲಾ ಪ್ರಾಥಮಿಕ ಶಾಲೆಗಳನ್ನು (Primary Schools) ನವೆಂಬರ್ 10 ರವರೆಗೆ ಮುಚ್ಚುವಂತೆ ದೆಹಲಿ ಸರ್ಕಾರ ಆದೇಶಿಸಿದೆ. ಈ ಬಗ್ಗೆ ದೆಹಲಿ ಶಿಕ್ಷಣ ಸಚಿವೆ ಹಾಗೂ ಆಪ್ ನಾಯಕಿ ಅತಿಶಿ ಭಾನುವಾರ ಎಕ್ಸ್‌ನಲ್ಲಿ ಘೋಷಿಸಿದ್ದಾರೆ. https://ainlivenews.com/suprem-ray-healing-center-reiki/ 6 ರಿಂದ 12 ಗ್ರೇಡ್‌ನ ಶಾಲೆಗಳಿಗೆ ಆನ್‌ಲೈನ್ ತರಗತಿಗಳಿಗೆ ಬದಲಾಯಿಸುವ ಆಯ್ಕೆಯನ್ನು ನೀಡಲಾಗುತ್ತಿದೆ ಎಂದು ಅತಿಶಿ ತಿಳಿಸಿದ್ದಾರೆ. ಇದಕ್ಕೂ ಮೊದಲು ದೆಹಲಿ ಸರ್ಕಾರ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ ಶಾಲೆಗಳನ್ನು ನವೆಂಬರ್ 2 ರವರೆಗೆ ಮುಚ್ಚಲು ಆದೇಶಿಸಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರ್ ಎಕ್ಸ್‌ನಲ್ಲಿ ಬರೆದಿದ್ದು, ಹದಗೆಡುತ್ತಿರುವ ಗಾಳಿಯ ಗುಣಮಟ್ಟದಿಂದಾಗಿ ಶಾಲೆಗಳನ್ನು ತಾತ್ಕಾಲಿಕವಾಗಿ ಮುಚ್ಚುವುದಾಗಿ ಘೋಷಿಸಿದರು
ದೊಡ್ಮನೆಯಲ್ಲಿ ನಮ್ರತಾ-ಸ್ನೇಹಿತ್, ಕಾರ್ತಿಕ್-ಸಂಗೀತಾ, ಇಶಾನಿ-ಮೈಕಲ್ ಜೋಡಿಯ ಲವ್ ಟ್ರ್ಯಾಕ್ ಶುರುವಾಗಿರೋದು ಗೊತ್ತೇ ಇದೆ. ಇದರ ನಡುವೆ ನಿಧಾನವಾಗಿ ತನಿಷಾ ಮತ್ತು ವರ್ತೂರು ಸಂತೋಷ್ ಜೋಡಿಯಾಗುವ ಲಕ್ಷಣ ಕಾಣ್ತಿದೆ. ಇದನ್ನೆಲ್ಲಾ ಗಮನಿಸಿರೋ ಸುದೀಪ್ ಕೂಡ ತನಿಷಾ (Tanisha Kuppanda) ಹೆಸರು ಹೇಳಿ ವರ್ತೂರುಗೆ ಕಾಲೆಳೆದಿದ್ದಾರೆ ಈ ಶನಿವಾರ ದೊಡ್ಮನೆ ಸ್ಪರ್ಧಿಗಳಿಗೆ ಬೆಂಡೆತ್ತಿದ ಮೇಲೆ ‘ಸೂಪರ್ ಸಂಡೇ ವಿತ್ ಸುದೀಪ್’ ಕಾರ್ಯಕ್ರಮದಲ್ಲಿ ಸಖತ್ ಆಗಿ ಕಿಚ್ಚ ಎಲ್ಲರ ಕಾಲೆಳೆದಿದ್ದಾರೆ. ಅದರಲ್ಲಿ ತನಿಷಾ- ವರ್ತೂರುಗೆ (Varthur Santhos) ತಮಾಷೆ ಮಾಡಿರೋದು ಎಲ್ಲರ ಗಮನ ಸೆಳೆದಿದೆ. ಬಿಗ್ ಬಾಸ್ ಸ್ಪರ್ಧಿಗಳು ಮೂವಿ ಮಾಡಿದ್ರೆ ಆ ಚಿತ್ರಕ್ಕೆ ಏನು ಟೈಟಲ್ ಇರುತ್ತೆ ಎಂಬುದರ ಬಗ್ಗೆ ತೋರಿಸಲಾಗಿದೆ. ಸಿರಿ, ಭಾಗ್ಯಶ್ರೀ, ತುಕಾಲಿ ಸಂತೂಗೆ `ಇಬ್ಬರ ಹೆಂಡ್ತಿರ ಮುದ್ದಿನ ಪೊಲೀಸ್ ‘ಎಂದು ಪೋಸ್ಟರ್ ರಿಲೀಸ್ ಮಾಡಿ ರೇಗಿಸಿದ್ರೆ, ಇತ್ತ ತನಿಷಾ- ವರ್ತೂರು ಲವ್ವಿ ಡವ್ವಿ ಬಗ್ಗೆ ಪೋಸ್ಟರ್ ಮೂಲಕ ಪರೋಕ್ಷವಾಗಿ ಕಿಚ್ಚ (Sudeep) ಮಾತಾನಾಡಿದ್ದಾರೆ. ಬಳಿಕ ತನಿಷಾಗೆ ಮೊದಲೇ ಬೆಂಕಿ ಎಂದು…
ಬಾಗಲಕೋಟೆ: ಸಿಎಂ ಬದಲಾವಣೆ ಬಗ್ಗೆ ‘ಕೈ’ ನಾಯಕರ ಗೊಂದಲ ಹೇಳಿಕೆ ವಿಚಾರ ‘ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಕೊಟ್ಟಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಬಾಗಲಕೋಟೆ ನಗರದಲ್ಲಿ ಮಾತನಾಡಿದ ಅವರು ‘ಅವರು ನಾನೇ ಇರ್ತೀನಿ ಅಂತ ಹೇಳಿದ್ದಾರೆ, ಮ್ಯಾಟರ್ ಕ್ಲೋಜ್ ಆಗಿದೆ. ಆ ಸಂದರ್ಭ ಉದ್ಭವ ಆದಾಗ ನೋಡೋಣ ಎಂದರು. https://ainlivenews.com/suprem-ray-healing-center-reiki/ ಇನ್ನೂ ಸತೀಶ್ ಜಾರಕಿಹೊಳಿ ಅವರಿಗೆ ನಾಡಿನ ದೊರೆ ಆಗುವ ಎಲ್ಲ ಅರ್ಹತೆ ಇದೆ ಎಂದು ವಾಲ್ಮೀಕಿ ಪೀಠದ ಪ್ರಸನ್ನಾನಂದ ಶ್ರೀ ಹೇಳಿದ್ದರು. ಈ ಮಾತಿಗೆ ಪ್ರಕತಿಕ್ರಿಯಿಸಿದ ಸಚಿವರು ‘ ಹಾಗೆ ಹೇಳಿದ್ದಾರೆ, ಅದರ ಜೊತೆಗೆ ಸಮಯ ಕಾಯಬೇಕು ಅಂತಾನು ಹೇಳಿದ್ದಾರೆ. ಕಾಯಬೇಕಾಗುತ್ತದೆ, ಅದಕ್ಕೆ ಪಕ್ಷವಿದೆ, ಶಾಸಕರು ಇದ್ದಾರೆ. ಎಲ್ಲ ಕೂಡಿ ಬಂದಾಗ ಮಾತ್ರ ಅವಕಾಶ ಎಂದರು.
ಟಾಲಿವುಡ್ ನಟಿ ಸಮಂತಾ (Samantha) ಅವರು ನಾಗಚೈತನ್ಯಗೆ (Nagachaitanya) ಡಿವೋರ್ಸ್ (Divorce) ಕೊಟ್ಟು 2 ವರ್ಷ ಕಳೆದರೂ ಕೂಡ ಅವರ ವೈಯಕ್ತಿಕ ವಿಚಾರ ಇನ್ನೂ ಚಾಲ್ತಿಯಲ್ಲಿದೆ. ಮೈ ಮೇಲಿನ ಮಾಜಿ ಗಂಡನ ಹೆಸರಿನ ಟ್ಯಾಟೂ ಅಳಿಸದ ಸಮಂತಾ ಹೊಸ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಇದೀಗ ಸಮಂತಾ ಹೊಸ ಫೋಟೋಶೂಟ್‌ವೊಂದನ್ನ ಮಾಡಿಸಿದ್ದಾರೆ. ಗ್ಲ್ಯಾಮರಸ್ ಆಗಿ ಕ್ಯಾಮೆರಾ ಕಣ್ಣಿಗೆ ನಟಿ ಪೋಸ್ ನೀಡಿದ್ದಾರೆ. ಈ ಫೋಟೋದಲ್ಲಿ ಮಾಜಿ ಪತಿ ಚೈ ಹೆಸರಿನ ಟ್ಯಾಟೂ ಹೈಲೆಟ್ ಆಗಿದೆ. ನಟಿ ಇನ್ನೂ ಟ್ಯಾಟೂ ಅಳಿಸದೇ ಇರೋದನ್ನ ನೋಡಿ, ಈ ಜೋಡಿ ಮತ್ತೆ ಒಂದಾಗುತ್ತಾರಾ? ಇದು ಮುನ್ಸೂಚನೆ ಎಂದು ಫ್ಯಾನ್ಸ್ ತಲೆಕೆಡಿಸಿಕೊಂಡಿದ್ದಾರೆ. ಹಚ್ಚೆ ಕಾಣಿಸಿದರೂ ಡೋಂಟ್ ಕೇರ್ ಎನ್ನದೇ ಫೋಟೋಗೆ ಸಮಂತಾ ಪೋಸ್ ಕೊಟ್ಟಿರೋದು ನೋಡಿ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇಬ್ಬರು ಮುನಿಸು ಮರೆತು ಮತ್ತೆ ಒಂದಾದ್ರೆ ಖುಷಿ ಎಂದೆಲ್ಲಾ ಫ್ಯಾನ್ಸ್ ಕಾಮೆಂಟ್ ಮಾಡ್ತಿದ್ದಾರೆ. ‘ಖುಷಿ’ ಚಿತ್ರದ ಬಳಿಕ ಸಮಂತಾ, ಕೆರಿಯರ್ ಬ್ರೇಕ್…
ಚಿಕ್ಕಬಳ್ಳಾಪುರ: ಮೊಬೈಲ್ ಚಟ ಬಿಟ್ಟು ಚೆನ್ನಾಗಿ ಓದು ಎಂದು ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿಯೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚಿಟ್ಟಾವಲಹಳ್ಳಿ ಗ್ರಾಮದಲ್ಲಿ ನಡೆದಿದೆ!!! ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ 15 ವರ್ಷದ ಲೋಕೇಶ್ ಎಂದು ತಿಳಿದು ಬಂದಿದೆ. ಚಿಟ್ಟಾವಲಹಳ್ಳಿ ಗ್ರಾಮದ ಚಾಲಕ ರಾಮಾಂಜಿನಪ್ಪ ಅವರ ಪುತ್ರ ಲೋಕೇಶ್ ಗೌರಿಬಿದನೂರು ನಗರದ ಎಸ್ ಇ ಎಸ್ ಸರ್ಕಾರಿ ಶಾಲೆಯಲ್ಲಿ 9 ನೇ ತರಗತಿ ಓದುತ್ತಿದ್ದ ಲೋಕೇಶ್ ಶಾಲೆ ಬಿಟ್ಟ ನಂತರ ಹೆಚ್ಚಾಗಿ ಮೊಬೈಲ್ ನೋಡುತ್ತಿದ್ದು ಮೊಬೈಲ್ ಗೇಮ್ ನಲ್ಲಿ ಬ್ಯೂಸಿಯಾಗಿರುತ್ತಿದ್ದನು. ಇದರಿಂದ ಕೋಪಗೊಂಡ ಪೋಷಕರು ಮಗನಿಗೆ ಸಾಕಷ್ಟು ಬಾರೀ ಬುದ್ದಿವಾದ ಹೇಳಿದ್ರು.ಸದ್ಯ ಇಂದು ಭಾನುವಾರ ಹಿನ್ನಲೇ, ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದ ಇದನ್ನು ಕಂಡ ಪೋಷಕರು ಮೊಬೈಲ್ ಬಿಟ್ಟು ಚೆನ್ನಾಗಿ ಓದು ಮುಂದೆ ಎಸ್ಎಸ್ಎಲ್ ಸಿ ಹೋಗಬೇಕೆಂದು ಒಳ್ಳೆಯ ಉದ್ಯೋಗಕ್ಕೆ ಹೋಗಬೇಕೆಂದು ರೇಗಾಡಿದ್ದಾರೆ.ಇದರಿಂದ ಮನನೊಂದ ಲೋಕೇಶ್ ಮನೆಯಿಂದ ಹೊಲದ ಕಡೆ…
ಬುಲೆಟ್‌ನಂಥ ಡೈಲಾಗ್‌ಗಳಿಂದಲೇ ಗಮನಸೆಳೆದಿದ್ದ ಬುಲೆಟ್ ರಕ್ಷಕ್ ಬಿಗ್‌ಬಾಸ್ ಮನೆಯಿಂದ ಈ ವಾರ ಹೊರಬಿದ್ದಿದ್ದಾರೆ. ಮನೆಯಿಂದ ಹೊರಗೆ ಹೋಗುತ್ತಿರುವುದಕ್ಕೆ ಅವರಲ್ಲಿ ಯಾವ ಬೇಸರವೂ ಇಲ್ಲವಂತೆ. ಹಾಗೆ ನೋಡಿದರೆ, ಪರಿಸ್ಥಿತಿ ಇನ್ನಷ್ಟು ಕೆಡುವ ಮೊದಲೇ ಹೊರಬಂದಿದ್ದಕ್ಕೆ ಖುಷಿಯೇ ಇದೆಯಂತೆ! ಮನೆಯಿಂದ ಹೊರಬಿದ್ದಿದ್ದೇ JioCinemaಕ್ಕೆ ಎಕ್ಸ್‌ಕ್ಲೂಸೀವ್ ಸಂದರ್ಶನ ನೀಡಿರುವ ರಕ್ಷಕ್, ಬಿಗ್‌ಬಾಸ್ ಮನೆಯೊಳಗಿನ ಅನುಭವ, ಸ್ಪರ್ಧಿಗಳ ಕುರಿತಾದ ಒಪಿನಿಯನ್‌ಗಳನ್ನು ಹಂಚಿಕೊಂಡಿದ್ದಾರೆ. ಅವರ ಅನುಭವಕಥನವನ್ನು ಅವರ ಮಾತುಗಳಲ್ಲೇ ಕೇಳಿ: ‘ಎಲ್ಲರಿಗೂ ನಮಸ್ಕಾರ. ನಾನು ರಕ್ಷಕ್. ಈ ವಾರ ಬಿಗ್‌ಬಾಸ್ ಮನೆಯಿಂದ ಹೊರಬಂದಿದ್ದಕ್ಕೆ ನನಗೆ ಯಾವ ಬೇಸರವೂ ಇಲ್ಲ. ನಾನೇನೂ ಇಲ್ಲಿ ಕೇಳಿಕೊಂಡು ಬಂದವನಲ್ಲ. ಅವರಾಗೇ ನನ್ನ ಅಪ್ರೋಚ್ ಮಾಡಿದರು. ಒಪ್ಪಿಗೆ ಆಯ್ತು. ಒಳಗಡೆ ಬಂದೆ. ಒಂದು ತಿಂಗಳ ಇರಬೇಕು ಎಂಬ ಆಸೆ ಇತ್ತು. ಆ ದೇವ್ರು ಮುಂಚೆನೇ ಬರ್ದಿದ್ದ ಅನ್ಸತ್ತ. ನನ್ನ ಬೆಸ್ಟ್ ನಾನು ಕೊಟ್ಟಿದ್ದೀನಿ. ಒಳಗಡೆ ಇದ್ದಾಗ ಮನೆಯ ಕ್ಯಾಪ್ಟನ್ ಆದೆ. ‘ಉತ್ತಮ’ ತಗೊಂಡೆ. ಎಲ್ಲರ ಜೊತೆ ತುಂಬ ಒಳ್ಳೆಯ ಬಾಂಡಿಂಗ್ ಇಟ್ಕೊಂಡಿದ್ದೆ. ಈ ಎಲ್ಲವೂ…
ಹುಬ್ಬಳ್ಳಿ: ರೈಲ್ವೆ ಇಲಾಖೆ ಹಾಗೂ ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ರೈತ ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರು ನಮ್ಮ ಕರ್ನಾಟಕ ಸೇನೆ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಸೋಮವಾರ ರೈಲ್ವೆ ನಿಲ್ದಾಣ ಬಳಿ ನಡೆಸಲಾಯಿತು. ನಗರದ ರೈಲು ನಿಲ್ದಾಣದ ಮುಂದೆ ಪ್ರತಿಭಟನಾ ಪ್ರದರ್ಶನ ಮಾಡಿದರು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಠಾವೋ, ರೈಲ್ವೆ ಬಚಾವೋ ಎಂಬ ಘೋಷಣೆಗಳನ್ನು ಪ್ರತಿಭಟನೆಕಾರರು ಹಾಕಿದರು. ಪ್ರತಿಭಟನೆಕಾರರು ನಂತರ ರೈಲು ನಿಲ್ದಾಣದ ವ್ಯವಸ್ಥಾಪಕರ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಪತ್ರ ಸಲ್ಲಿಸಿ, ರೈಲ್ವೆ ಖಾಸಗೀಕರಣ ಮೋದಿ ಸರ್ಕಾರವು ರಾಷ್ಟ್ರೀಯ ನಗದೀಕರಣ ಪೈಪ್‍ಲೈನ್‍ನಲ್ಲಿ ರೈಲ್ವೆ ಅತೀ ಮುಖ್ಯ ಗುರಿಯಾಗಿದೆ. ರೈಲು ನಿಲ್ದಾಣಗಳು, ನಿಲ್ದಾಣಗಳ ಸುತ್ತ ಇರುವ ರೈಲ್ವೆ ಭೂಮಿ, ರೈಲ್ವೆ ಹಳಿಗಳು, ರೈಲ್ವೆಗಳ ಸರಕು ದಾಸ್ತಾನು ಶೆಡ್ಡುಗಳು, ರೈಲ್ವೆ ಕಾಲೋನಿಗಳು, ರೈಲ್ವೆ ಆಟದ ಮೈದಾನಗಳನ್ನು ಖಾಸಗೀಯವರಿಗೆ ದೀರ್ಘಾವಧಿಗೆ ಗುತ್ತಿಗೆ ಮೇಲೆ ಕೊಡುವುದು ಆಗಿದೆ. ಭಾರತೀಯ ರೈಲ್ವೆ ನಮ್ಮ ದೇಶದ ಜೀವಾಳ. ಭಾರತದಲ್ಲಿ 7,300 ರೈಲು ನಿಲ್ದಾಣಗಳು, 13452…
ಬೆಂಗಳೂರು: ತಾವು ಹಮ್ಮಿಕೊಳ್ಳಲಿರುವ ರೈತ ಸಾಂತ್ವನ ಯಾತ್ರೆ ಬಗ್ಗೆ ಲಘುವಾಗಿ ಹೇಳಿಕೆ ಕೊಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀವ್ರ ತಿರುಗೇಟು ಕೊಟ್ಟಿದ್ದಾರೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು. ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು; ನಿಮಗೆ ರಾಜ್ಯದ ಬರ ಮತ್ತಿತರೆ ಸಂಕಷ್ಟಗಳಿಗಿಂತ ಜೆಡಿಎಸ್ – ಬಿಜೆಪಿ ಮೈತ್ರಿಯೇ ಬಹುದೊಡ್ಡ ಸಂಕಷ್ಟವಾಗಿ ಪರಿಣಮಿಸಿದಂತೆ ತೋರುತ್ತಿದೆ ಎಂದು ಕಾಲೆಳೆದಿದ್ದಾರೆ. ಅಲ್ಲದೆ; ವಿಶ್ವ ವಿಖ್ಯಾತ ವಿತ್ತತಜ್ಞ ಎಂದು ಹಾಲಿ ಸಿಎಂಗೆ ಮಾಜಿ ಮುಖ್ಯಮಂತ್ರಿ ಟಾಂಗ್ ನೀಡಿದ್ದಾರೆ. ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ʼಹೃದಯ ವೈಶಾಲ್ಯತೆʼಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ʼದೊಡ್ಡʼ ಗುಣವನ್ನು ಮನಸಾರೆ ಕೊಂಡಾಡುತ್ತೇನೆ. ಜೆಡಿಎಸ್ ಸಲ್ಲಿಸಲಿರುವ ಬರ ಅಧ್ಯಯನ ವರದಿಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದೀರಿ, ಬಹಳ ಸಂತೋಷ ಎಂದು ಕುಮಾರಸ್ವಾಮಿ ಅವರು ಟಾಂಗ್ ನೀಡಿದ್ದಾರೆ. ‘ರೈತ ಸಾಂತ್ವನ ಯಾತ್ರೆ’ಯ ಅನುಭವವನ್ನು ಕೇಂದ್ರದ ಜತೆಗೂ ಹಂಚಿಕೊಳ್ಳುತ್ತೇವೆ. ನಿಮಗೆ ಸಂಶಯ ಬೇಡ. ರಾಜ್ಯದ…