ಸೂರ್ಯೋದಯ: 06.20 AM, ಸೂರ್ಯಾಸ್ತ : 05.50 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಕಾರ್ತೀಕ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ಶರತ್ ಋತು, ತಿಥಿ: ಇವತ್ತು ಷಷ್ಠಿ 07:23 AM ತನಕ ನಂತರ ಸಪ್ತಮಿ ನಕ್ಷತ್ರ: ಇವತ್ತು ಉತ್ತರ ಆಷಾಢ 12:07 AM ತನಕ ನಂತರ ಶ್ರವಣ 10:48 PM ತನಕ ನಂತರ ಧನಿಷ್ಠ ಯೋಗ: ಇವತ್ತು ಗಂಡ02:18 AM ತನಕ ನಂತರ ವೃದ್ಧಿ11:28 PM ತನಕ ನಂತರ ಧ್ರುವ ಕರಣ: ಇವತ್ತು ತೈತಲೆ 07:23 AM ತನಕ ನಂತರ ಗರಜ 06:23 PM ತನಕ ನಂತರ ವಣಿಜ ರಾಹು ಕಾಲ: 04:30 ನಿಂದ 06:00 ವರೆಗೂ ಯಮಗಂಡ: 12:00 ನಿಂದ 01:30 ವರೆಗೂ ಗುಳಿಕ ಕಾಲ:03:00 ನಿಂದ 04:30 ವರೆಗೂ ಅಮೃತಕಾಲ: 12.58 PM to 02.29 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:39 ನಿಂದ ಮ.12:23 ವರೆಗೂ ಮೇಷ ರಾಶಿ: ಹೋಟೆಲ್ ಉದ್ಯಮದಾರರಿಗೆ ಧನ ಲಾಭ…
Author: AIN Author
ಬೆಂಗಳೂರು:- ಕ್ರೀಡಾ ಅಭಿಮಾನಿಗಳು ಹಾಗೂ ಇಡೀ ಭಾರತವೇ ಕಾತುರದಿಂದ ಕಾಯುತ್ತಿರುವ ವಿಶ್ವಕಪ್ ಫೈನಲ್ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಾಳೆ ನಡೆಯಲಿದೆ. ಇದೀಗ ಕರ್ನಾಟಕದ ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ ವಿಶ್ವಕಪ್ ಫೈನಲ್ ಪಂದ್ಯ ಪ್ರಸಾರ ಮಾಡುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ. ದಿನಾಂಕ 19-11-2023 ರಂದು ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಪಂದ್ಯದ ನೇರ ಪ್ರಸಾರವನ್ನು ಎಲ್ಲಾ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣಗಳಲ್ಲಿ, ಸಾರ್ವಜನಿಕರಿಗೆ ಹಾಗೂ ಕ್ರೀಡಾಪಟುಗಳಿಗೆ ಅಗತ್ಯ ಅಳತೆಯ ದೊಡ್ಡ ಪರದೆಯಲ್ಲಿ ವೀಕ್ಷಿಸಲು ಅನುಕೂಲವಾಗುವಂತೆ ವ್ಯವಸ ಕಲ್ಪಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಾಹಿತಿ ನೀಡಿದೆ ಈ ಕುರಿತು ಪ್ರಕಟಣೆ ಹೊರಡಿಸಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು, ಪಂದ್ಯ ವೀಕ್ಷಣೆ ವೇಳೆ ಸೂಕ್ತ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಎಲ್ಲಾ ಜಿಲ್ಲೆಗಳ ಉಪ/ಸಹಾಯಕ ನಿರ್ದೇಶಕರಿಗೆ ಸೂಚಿಸಿದೆ.. ಈ ಬಗ್ಗೆ ಅಗತ್ಯ ಪ್ರಚಾರ ಕೈಗೊಂಡು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಂದ್ಯ ವೀಕ್ಷಿಸುವಂತೆ ಕ್ರಮ…
ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸಲು ಇಡೀ ಭಾರತ ಕಾತುರದಿಂದ ಕಾಯುತ್ತಿರುವಂತೆ ಬೆಂಗಳೂರು ಉತ್ಸಾಹದಿಂದ ಪುಟಿಯುತ್ತಿದೆ. ಬೆಂಗಳೂರಿನ ನೂರಾರು ಕ್ರಿಕೆಟ್ ಆಸಕ್ತರು ಅಹಮದಾಬಾದ್ಗೆ ತೆರಳುತ್ತಿದ್ದಾರೆ. ದುಬಾರಿ ಕ್ರಿಕೆಟ್ ಪಂದ್ಯಾವಳಿಗೆ 35 ಸಾವಿರದಿಂದ 1 ಲಕ್ಷ ರೂವರಗೆ ಹಣ ತೆತ್ತು ಟಿಕೆಟ್ ಖರೀದಿ ಮಾಡಿದ್ದಾರೆ. ವಿಮಾನದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ಹೋಗಿ ಬರಲು ರೂ. 70-90 ಸಾವಿರ ನೀಡಿ ಟಿಕೆಟ್ ಬುಕ್ ಮಾಡಿದ್ದಾರೆ. ಅಲ್ಲಿ ಉಳಿದುಕೊಳ್ಳಲು ಹೋಟೆಲ್ ರೂಂಗಳ ಬೆಲೆ ಹತ್ತು ಪಟ್ಟು ಹೆಚ್ಚಾಗಿದೆ. ಸಣ್ಣ ಸಣ್ಣ.ಹೋಟೆಲ್ ಗಳಲ್ಲಿ ಒಂದು ರೂಂಗೆ 10-20 ಸಾವಿರ ನಿಗದಿಯಾಗಿದೆ. ತಾರಾ ಹೋಟೆಲ್ಗಳಲ್ಲಿ 35 ಸಾವಿರದಿಂದ 1.50 ಲಕ್ಷ ರೂಗಳವರೆಗೆ ಬೇಡಿಕೆ ಇದೆ. ಇದು ಅಲ್ಲಿಗೆ ಹೋಗುವ ಸ್ಥಿತಿವಂತ ಕ್ರಿಕೆಟ್ ಅಭಿಮಾನಿಗಳ ಕತೆಯಾದರೆ ಬೆಂಗಳೂರಿನಲ್ಲೇ ಪಂದ್ಯ ವೀಕ್ಷಿಸುವವರ ಉತ್ಸಾಹಕ್ಕೇನೂ ಭಂಗ ಬಂದಿಲ್ಲ. ಅನೇಕ, ಹೋಟೆಲ್, ಕ್ಲಬ್, ಬಾರ್ ಮತ್ತು ರೆಸ್ಟೋರೆಂಟ್, ಪಬ್ ಗಳಲ್ಲಿ ದೊಡ್ಡ ದೊಡ್ಡ ಪರದೆಗಳ ಮೂಲಕ ಪಂದ್ಯ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಈ ಪಬ್ಗಳ ಮಾಲೀಕರ ಪ್ರಕಾರ…
ವಿಜಯಪುರ:- ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಕ್ರಾಸ್ ಮಾಡಲ್ಲ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಡಬಲ್ ಡಿಜಿಟ್ ಕ್ರಾಸ್ ಮಾಡುವುದಿಲ್ಲ. ರಾಜ್ಯದಲ್ಲಿ ಅವರದೇ ಸರ್ಕಾರ ಇದೆ. ಆದರೂ ಒಂದಿಬ್ಬರು ಆಯ್ಕೆಯಾಗಬಹುದು ಅಷ್ಟೇ. ಜನರಿಗೆ ಕಾಂಗ್ರೆಸ್ ಮೋಸದ ಬಗ್ಗೆ ಅರಿವಾಗಿದೆ ಎಂದರು. ಜನರಿಗೆ ಕಾಂಗ್ರೆಸ್ ಮೇಲೆ ವಿಶ್ವಾಸ ಸಂಪೂರ್ಣ ಕಡಿಮೆಯಾಗಿದೆ. ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸುವ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರು ಧೃಡಸಂಕಲ್ಪ ಮಾಡಬೇಕು. ಇದು ಕೇವಲ ಒಬ್ಬರಿಂದ ಆಗುವ ಕೆಲಸವಲ್ಲ, ಇದೊಂದು ಸಾಮೂಹಿಕ ಪ್ರಯತ್ನ. ಎಲ್ಲ ಕಾರ್ಯಕರ್ತರು ಹೊಸ ಹುಮ್ಮಸ್ಸಿನಿಂದ ದುಡಿಯಬೇಕು. ರಾಜ್ಯದಿಂದ ಹೆಚ್ಚಿನ ಸಂಸದರನ್ನು ಆಯ್ಕೆ ಮಾಡಿ ಕಳುಹಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು ಎಂದು ಕರೆ ನೀಡಿದರು. ಹಾಲಿ ಸಂಸದ ರಮೇಶ ಜಿಗಜಿಣಗಿ ಅವರು ಸಹ ಹಿರಿಯ ರಾಜಕೀಯ ಧುರೀಣರು, ಲಕ್ಷಾಂತರ ಕಾರ್ಯಕರ್ತರ ಪ್ರೀತಿಯನ್ನು ಸಂಪಾದಿಸಿದ್ದಾರೆ ಎಂದರು.
ಜೇನುತುಪ್ಪ ಮತ್ತು ತುಪ್ಪವನ್ನು ಮಿಕ್ಸ್ ಮಾಡಿ ತಿಂದರೆ ಏನಾಗುತ್ತದೆ ಎಂಬುವುದು ಹಲವರಿಗೆ ತಿಳಿದಿಲ್ಲ. ಇವೆರಡರಲ್ಲಿಯೂ ಔಷಧೀಯ ಗುಣಗಳಿವೆ. ಹಾಗಾಗಿ ಇವೆರಡನ್ನು ಮನೆಮದ್ದುಗಳಲ್ಲಿ ಹೆಚ್ಚು ಬಳಸುತ್ತಾರೆ. ತುಪ್ಪ ರುಚಿಯಾಗಿದ್ದರೆ ಜೇನುತುಪ್ಪ ಸಿಹಿ ಗುಣವನ್ನು ಹೊಂದಿದೆ. ಆದರೆ ಇವೆರಡನ್ನು ಒಟ್ಟಿಗೆ ಸೇವಿಸಿದರೆ ಏನಾಗುತ್ತದೆ ಎಂಬುದನ್ನು ತಿಳಿಯಿರಿ. ತಜ್ಞರು ತಿಳಿಸಿದ ಪ್ರಕಾರ ತುಪ್ಪ ಮತ್ತು ಜೇನುತುಪ್ಪವನ್ನು ಮಿಕ್ಸ್ ಮಾಡಿದಾಗ ವಿಷಕಾರಿ ಅಂಶ ಉತ್ಪತ್ತಿಯಾಗುತ್ತದೆ. ಇದು ವೇಗವಾಗಿ ದೇಹವನ್ನು ಹರಡುತ್ತದೆ. ಇದು ಅನೇಕ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆಯಂತೆ. ತುಪ್ಪ ಜೇನುತುಪ್ಪವನ್ನು ಬೆರೆಸಿದಾಗ ಕ್ಲೋಸ್ಟ್ರಿಡಿಯಂ ಬೊಟುಲಿನಂ ಎಂಬ ಅಂಶ ಉತ್ಪತ್ತಿಯಾಗುತ್ತದೆ. ಇದು ಒಂದು ರೀತಿಯ ಬ್ಯಾಕ್ಟೀರಿಯಾವಾಗಿದ್ದು, ಇದು ದೇಹದಲ್ಲಿ ಆಮ್ಲಜನಕದ ಮಟ್ಟ ಕಡಿಮೆಯಾದಾಗ ಅಪಾಯಕಾರಿ ಜೀವಾಣುಗಳನ್ನು ಉತ್ಪಾದಿಸುತ್ತದೆ. ಇದು ಹೊಟ್ಟೆನೋವು, ಕ್ಯಾನ್ಸರ್ ಗೆ ಕಾರಣವಾಗುತ್ತದೆ ಎನ್ನಲಾಗಿದೆ.
ಬೆಂಗಳೂರು:- ರಾಜಧಾನಿ ಬೆಂಗಳೂರಿನ ಬ್ರ್ಯಾಂಡ್ ಅನ್ನು ಹೆಚ್ಚಿಸುವ ಸಲುವಾಗಿ ಬಿ.ಎಲ್.ಆರ್ ಹಬ್ಬ ಆಚರಿಸಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. ಬೆಂಗಳೂರು ಹಬ್ಬ’ ಆಚರಣೆಗೆ ಪಾಲಿಕೆ ಸಹಕಾರ ನೀಡುವ ಸಂಬಂಧ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಶನಿವಾರ ನಡೆದ ವರ್ಚುವಲ್ ಸಭೆಯಲ್ಲಿ ಮಾತನಾಡಿ, ಸರ್ಕಾರದ ಘನತೆ ಹಾಗೂ ಬೆಂಗಳೂರಿನ ಬ್ರ್ಯಾಂಡ್ ಅನ್ನು ಹೆಚ್ಚಿಸುವ ಸಲುವಾಗಿ ಹಬ್ಬ ಆಚರಿಸಲಾಗುತ್ತಿದೆ ಎಂದರು. 2024ರಿಂದ ಆಯಾ ಋತುವಿಗೆ ತಕ್ಕಂತೆ ಹಬ್ಬಗಳನ್ನು ಆಚರಿಸಲಾಗುತ್ತದೆ. ಬೆಂಗಳೂರು ಹಬ್ಬಕ್ಕೆ ಪ್ರಮುಖ ಸ್ಥಳ, ಜಂಕ್ಷನ್‌ಗಳು, ಮೇಲ್ಸೇತುವೆ, ಉದ್ಯಾನಗಳು, ಮಾರುಕಟ್ಟೆಗಳನ್ನು ಗುರುತಿಸಿ ಸ್ವಚ್ಚತಾ ಕಾರ್ಯ ಕೈಗೊಳ್ಳಬೇಕು. ಪಾರಂಪರಿಕ ಕಟ್ಟಡಗಳು ಹಾಗೂ ಪ್ರಮುಖ ಸರ್ಕಾರಿ ಕಚೇರಿಗಳ ಮೇಲೆ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲು ಸೂಚಿಸಿದರು. ‘ಬೆಂಗಳೂರು ಹಬ್ಬ’ದ ನಿರ್ದೇಶಕ ರವಿಚಂದರ್ ಮಾತನಾಡಿ, ‘ಅನ್ ಬಾಕ್ಸಿಂಗ್ ಬೆಂಗಳೂರು ಫೌಂಡೇಷನ್ ವತಿಯಿಂದ ಡಿ.1ರಿಂದ 11ರವರೆಗೆ ‘ಅನ್ ಬಾಕ್ಸಿಂಗ್ ಬಿ.ಎಲ್.ಆರ್ ಹಬ್ಬ’ ಆಚರಿಸಲಾಗುತ್ತಿದೆ. 12 ವರ್ಗಗಳಾಗಿ ವಿಂಗಡಿಸಿ, 45 ಮಾದರಿಗಳಲ್ಲಿ ಆಚರಣೆ ಮಾಡಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.
ಭಾರತ-ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ಉಭಯ ತಂಡದ ನಾಯಕರು ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಕೆಲ ಮಹತ್ವದ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಜರ್ನಿ, ಭಾರತದ ಪ್ರದರ್ಶನ ಸೇರಿದಂತೆ ಹಲವು ವಿಚಾರಗಳ ಕುರಿತು ಮಾತನಾಡಿದ್ದಾರೆ. ಇದೇ ವೇಳೆ ಈ ವಿಶ್ವಕಪ್ ಟೂರ್ನಿಯನ್ನು ರಾಹುಲ್ ದ್ರಾವಿಡ್‌ಗಾಗಿ ಗೆಲ್ಲಬೇಕು ಎಂದಿದ್ದಾರೆ. ರಾಹುಲ್ ದ್ರಾವಿಡ್ 2003ರ ವಿಶ್ವಕಪ್ ಫೈನಲ್ ಆಡಿದ ಭಾರತ ತಂಡದ ಪ್ರಮುಖ ಸದಸ್ಯರಾಗಿದ್ದರು. ವಿಶ್ವಕಪ್ ಟೂರ್ನಿಯಲ್ಲಿ ಭಾರತ ಪ್ರತಿನಿಧಿಸುವುದೇ ಅತೀ ದೊಡ್ಡ ಅವಕಾಶ ಎಂದು ರಾಹುಲ್ ಪದೇ ಪದೇ ಹೇಳುತ್ತಿದ್ದರು ಎಂದು ರೋಹಿತ್ ಹೇಳಿದ್ದಾರೆ. ಇದೀಗ ರಾಹುಲ್ ದ್ರಾವಿಡ್‌ಗೆ ಟ್ರೋಫಿ ನೀಡಲು ತಂಡ ಒಗ್ಗಟ್ಟಾಗಿ ಹೋರಾಟ ನಡೆಸಬೇಕು ಎಂದು ರೋಹಿತ್ ಹೇಳಿದ್ದಾರೆ. ರೋಹಿತ್ ಶರ್ಮಾ ಮಾತಿಗೆ ಅಭಿಮಾನಿಗಳು ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 2011ರ ವಿಶ್ವಕಪ್ ಟೂರ್ನಿ ಸಚಿನ್ ತೆಂಡೂಲ್ಕರ್‌ಗಾಗಿ ಗೆಲ್ಲಲಾಗಿತ್ತು. ಇದೀಗ ದ್ರಾವಿಡ್‌ಗಾಗಿ ಈ ಟೂರ್ನಿ. ಗುರುವಿಗೆ, ಟೀಂ ಇಂಡಿಯಾದ ವಾಲ್ ಎಂದೇ ಖ್ಯಾತಿಗೊಂಡ ದ್ರಾವಿಡ್‌ಗೆ ಅತೀ…
ಬೆಂಗಳೂರು:- ಗೇಲಿ ಮಾಡಿದ್ದಕ್ಕೆ ಸ್ನೇಹಿತನ ಹತ್ಯೆ ಮಾಡಿದ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಜಗದೇವ್ ಹಾಗೂ ಚಂದನ್ ಕುಮಾರ್ ಬಂಧಿತರು. ಇಬ್ಬರು ಸೇರಿಕೊಂಡು ಲಕ್ಷ್ಮಣ್ ಅವರನ್ನು ಕೊಂದು ಪರಾರಿಯಾಗಿದ್ದರು. ದೂರು ದಾಖಲಾದ 24 ಗಂಟೆಯೊಳಗೆ ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ’ ಎಂದು ಪೊಲೀಸರು ಹೇಳಿದರು. ‘ಲಕ್ಷ್ಮಣ್ ಹಾಗೂ ಆರೋಪಿಗಳು, ಉತ್ತರ ಭಾರತದವರು. ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದರು. ಮೂವರೂ ಕೂಲಿ ಕೆಲಸ ಮಾಡುತ್ತಿದ್ದರು. ಒಂದೇ ಕಡೆ ವಾಸವಿದ್ದರು. ಆಗಾಗ ಮದ್ಯದ ಪಾರ್ಟಿ ಮಾಡುತ್ತಿದ್ದರು’ ಎಂದು ತಿಳಿಸಿದರು. ಲಕ್ಷ್ಮಣ್ ಹಾಗೂ ಆರೋಪಿಗಳು, ನ. 16ರಂದು ರಾತ್ರಿ ಮದ್ಯದ ಪಾರ್ಟಿ ಮಾಡುತ್ತಿದ್ದರು. ಇದೇ ಸಂದರ್ಭದಲ್ಲಿ ಆರೋಪಿಗಳ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ್ದ ಲಕ್ಷ್ಮಣ್ ಗೇಲಿ ಮಾಡಿದ್ದ. ಇದೇ ವಿಚಾರವಾಗಿ ಗಲಾಟೆ ಶುರುವಾಗಿತ್ತು’ ಎಂದು ಪೊಲೀಸರು ಹೇಳಿದರು. ‘ಲಕ್ಷ್ಮಣ್ ಮೇಲೆ ಹಲ್ಲೆ ಮಾಡಿದ್ದ ಆರೋಪಿಗಳು, ಅವರನ್ನು ಮನೆಯಿಂದ ಹೊರಗೆ ಎಳೆದು ತಂದಿದ್ದರು. ನಂತರ, ಕ್ಯಾಸಲಹಳ್ಳಿ ಬಳಿಯ ನಾರಾಯಣ ಪಿಯು ಕಾಲೇಜ್‌ನ ಹಿಂಭಾಗದಲ್ಲಿರುವ ಭೈರತಿ ಬಸವರಾಜ್ ಅವರಿಗೆ ಸೇರಿದ್ದ ಜಮೀನಿಗೆ…
ಬೆಂಗಳೂರು:- ಶೀಘ್ರವೇ 545 ಪಿಎಸ್‌ಐ ಹುದ್ದೆಗಳ ಪರೀಕ್ಷೆ ನಡೆಯಲಿದೆ ಎಂದು ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕೆಇಎ ಸಂಸ್ಥೆಯಿಂದ ಪಿಎಸ್‌ಐ ಪರೀಕ್ಷೆ ನಡೆಸಲು ನಿರ್ಧಾರ ಮಾಡಿದ್ದೇವೆ. ಆದೇಶ ಬಂದಿದೆ. ಇಂಡಿಪೆಂಡೆಂಟ್ ಏಜೆಸ್ಸಿಯಿಂದ ಆಗಲಿದೆ. 545 ಪಿಎಸ್‌ಐ ಹುದ್ದೆಗಳ ಪರೀಕ್ಷೆಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ. ಆದಷ್ಟು ಬೇಗನೆ ಪರೀಕ್ಷೆ ಆಗಲಿದೆ ಎಂದು ಹೇಳಿದ್ದಾರೆ. ಪಿಎಸ್‌ಐ ಕೇಸ್ ಮಾತ್ರವಲ್ಲದೆ ಅವರು ಅನೇಕ ಕೇಸ್‌ಗಳಲ್ಲಿಯೂ ಸಹ ಇದ್ದಾರೆ ಎನ್ನುವ ಮಾಹಿತಿ ಇದೆ. ಹೀಗಾಗಿ ಎಲ್ಲಾ ವಿಚಾರಗಳನ್ನು ಬಹಿರಂಗ ಮಾಡುವುದಕ್ಕೆ ಆಗುವುದಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ತನಿಖೆ ಮಾಡುವುದಕ್ಕೆ ಆದೇಶ ನೀಡಿದ್ದೇನೆ ಎಂದು ತಿಳಿಸಿದ್ದಾರೆ. ವಿರೋಧ ಪಕ್ಷದ ನಾಯಕರಾಗಿ ಆರ್.ಅಶೋಕ್ ಆಯ್ಕೆ ವಿಚಾರವಾಗಿ ಮಾತನಾಡಿದ ಅವರು, ಅದು ಬಿಜೆಪಿ ಆಂತರಿಕ ವಿಚಾರ, ಹೀಗಾಗಿ ಅದು ನಮಗೆ ಮುಖ್ಯವಲ್ಲ. ವಿಪಕ್ಷ ನಾಯಕರಾದವರು ಎಚ್ಚರಿಸಿಬಹುದು, ಸಲಹೆ ಕೊಡಬಹುದು. ಅದು ವಿಪಕ್ಷ ನಾಯಕ ಅಶೋಕ್ ಮತ್ತು ಅವರ ಪಕ್ಷದವರಿಗೆ ಬಿಟ್ಟಿದ್ದು. ವಿಪಕ್ಷ ನಾಯಕರಾದ ಆರ್.ಅಶೋಕ್ಗೆ ನಾನು…
ಬೆಂಗಳೂರು: ನೌಕರರ ಕನ್ನಡ ಸಂಘದ ವತಿಯಿಂದ 68ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಡಾ. ಪುನೀತ್ ರಾಜ್ ಕುಮಾರ್ ಪ್ರಶಸ್ತಿ ಪ್ರಧಾನ: ಬೆಂಗಳೂರು: ಬಿಬಿಎಂಪಿ ಕೇಂದ್ರ ಕಛೇರಿ ಅವರಣದಲ್ಲಿ ಪಾಲಿಕೆ ನೌಕರರ ಕನ್ನಡ ಸಂಘದ ವತಿಯಿಂದ 68ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕ/ಸಾಧಕಿಯರಿಗೆ ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಆಡಳಿತಗಾರರಾದ ರಾಕೇಶ್ ಸಿಂಗ್ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಚಾಲನೆ ನೀಡಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರಿಗೆ ಡಾ.ಪುನೀತ್ ರಾಜ್ ಕುಮಾರ್ ಪ್ರಶಸ್ತಿ ಪ್ರಧಾನ: ಕರ್ನಾಟಕ ವಿಕಾಸ ವೇದಿಕೆ ಅಧ್ಯಕ್ಷರಾದ ಪಾಲನೇತ್ರ, ಕನ್ನಡ ಚಳುವಳಿ ಕೇಂದ್ರ ಸಮಿತಿ ಅಧ್ಯಕ್ಷರಾದ ಗುರುದತ್ತ, ಚಲನಚಿತ್ರರಂಗದ ಸುಂದರ್ ರಾಜ್, ಶಿವಕುಮಾರ್, ರಿಷಿಗೌಡ, ಪ್ರೇಮಗೌಡ, ಕು.ರಕ್ಷಾ ಅಪೂರ್ವ, ಪ್ರತಿಭಾ, ಶ್ರೀಮತಿ ರಕ್ಷಾ, ರವರು ಮತ್ತು ಪತ್ರಿಕಾರಂಗದಲ್ಲಿ ರಕ್ಷಾ , ಮಾಲತೇಶ್, ವಸಂತ್ ಕುಮಾರ್, ಸ್ಮಿತಾ ರಂಗನಾಥ್, ಶೀತಲ್ ಶೆಟ್ಟಿ, ಮಂಜುನಾಥ್, ಅಲ್ಲಾವುದ್ದಿನ್, ಪುರುಷೋತ್ತಮ್, ಕೊಂಡಯ್ಯ,ಪುಟ್ಟರಾಜು,…