ಬೆಂಗಳೂರು:“ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿಗಳು. ಅವರಿಗೊಂದು ಘನತೆ ಇದೆ. ಅದಕ್ಕೆ ತಕ್ಕಂತೆ ವರ್ತಿಸಬೇಕು ಎಂದು ನಾನು ನಿರೀಕ್ಷಿಸುತ್ತೇನೆ. ದಿನಬೆಳಗಾದರೆ ಸುಳ್ಳು ಆರೋಪ ಮಾಡುವುದು ಅವರ ಘನತೆಗೆ ಸರಿಯಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ಮಾಜಿ ಸಿಎಂ ಕುಮಾರಸ್ವಾಮಿ ಅವರು ಎಕ್ಸ್ ಖಾತೆ ಮೂಲಕ ಯತೀಂದ್ರ ಅವರ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವೇಕಾನಂದ ಎಂಬುವವರು ಪೊಲೀಸ್ ಅಧಿಕಾರಿ ಎಂದು ಹೇಳಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಈ ರೀತಿ ಉತ್ತರಿಸಿದರು. “ಕುಮಾರಣ್ಣ ಹಾಗೂ ವಿಜಯೇಂದ್ರ ಅವರು ಈಗ ಪಾರ್ಟ್ನರ್ ಗಳು. ಅವರ ಮಧ್ಯೆಯೇ ಗೊಂದಲ ಇರುವಾಗ ನಾನು ಹೇಗೆ ಪ್ರತಿಕ್ರಿಯೆ ನೀಡಲಿ. ಕುಮಾರಣ್ಣ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದವರು. ಪಕ್ಷದ ಅಧ್ಯಕ್ಷರಾಗಿದ್ದವರು. ಅವರು ಆ ಸ್ಥಾನಗಳಿಗೆ ತಕ್ಕಂತೆ ಗೌರವ ಉಳಿಸಿಕೊಳ್ಳಬೇಕು ಎಂದು ನಾನು ನಿರೀಕ್ಷಿಸುತ್ತೇನೆ. ಅವರ ತಂದೆಯವರು ಅನೇಕ ಬಾರಿ ಈ ಬಗ್ಗೆ ಸಲಹೆ ನೀಡಿದ್ದಾರೆ ಎಂಬ ವಿಚಾರ ಕೇಳಿದೆ.…
Author: AIN Author
ಬೆಂಗಳೂರು:- ನಾನು ಕಾಂಗ್ರೆಸ್ಗೆ ಬರಲ್ಲ ಅಂತಾ ಡಿಕೆ ಶಿವಕುಮಾರ್ಗೆ ಹೇಳಿದ್ದೇನೆ ಎಂದು ಜಿಟಿ ದೇವೇಗೌಡ ಹೇಳಿದ್ದಾರೆ. ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಸಹಿತ ವಿಪಕ್ಷ ಶಾಸಕರನ್ನು ಪಕ್ಷದತ್ತ ಸೆಳೆಯಲು ಡಿಸಿಎಂ ಡಿ.ಕೆ. ಶಿವಕುಮಾರ್ ಯತ್ನಿಸುತ್ತಿದ್ದಾರೆ. ಜಿಡಿ ದೇವೇಗೌಡರನ್ನು ಭೇಟಿಯಾಗಿ ಆಹ್ವಾನವೂ ನೀಡಿದ್ದಾರೆ. ಆದರೆ, ತಾನು ಕಾಂಗ್ರೆಸ್ ಪಕ್ಷಕ್ಕೆ ಬರುವುದಿಲ್ಲ ಎಂದು ಹೇಳಿದ್ದಾಗಿ ಅವರು ತಿಳಿಸಿದ್ದಾರೆ. ಸದಾಶಿವನಗರದಲ್ಲಿ ಅವರೇ ಬಂದು ನನ್ನನ್ನು ಭೇಟಿ ಮಾಡಿದ್ದರು. ಭೇಟಿ ವೇಳೆ ಎಸ್.ಟಿ.ಸೋಮಶೇಖರ್, ಪುಲಿಕೇಶಿ ನಗರ ಶಾಸಕರು, ನೆಲಮಂಗಲ ಶಾಸಕರು ಇದ್ದರು. ಈ ಹಿಂದೆ ಪಕ್ಷಕ್ಕೆ ಕರೆದರೂ ಯಾಕೆ ಬರಲಿಲ್ಲ ಎಂದು ಹೇಳಿದ್ದರು. ಅದೃಷ್ಟ ಇರುವವರಿಗೆ ಅಧಿಕಾರ ಸಿಗುತ್ತೆ, ಇಲ್ಲಂದರೆ ಸಿಗಲ್ಲ ಅಂತ ಹೇಳಿದ್ದಾಗಿ ತಿಳಿಸಿದರು. ನಾನು ಕಾಂಗ್ರೆಸ್ಗೆ ಹೋಗುವ ಪರಿಸ್ಥಿತಿ ಇಲ್ಲ ಎಂದು ಸ್ಪಷ್ಟಪಡಿಸಿದ ಜಿ.ಟಿ.ದೇವೇಗೌಡ, ನಾನು ಕಾಂಗ್ರೆಸ್ಗೆ ಬರಲ್ಲ ಅಂತಾ ಡಿ.ಕೆ.ಶಿವಕುಮಾರ್ಗೆ ಹೇಳಿದ್ದೇನೆ. ಜೆಡಿಎಸ್ನ 19 ಶಾಸಕರೂ ಒಟ್ಟಾಗಿ ಇದ್ದೇವೆ. ಯಾವುದೇ ರೀತಿಯಲ್ಲಿ ಪಕ್ಷವನ್ನು ಒಡೆಯುವ ಕೆಲಸ ಮಾಡಲ್ಲ ಎಂದು ಹೇಳಿದರು
ಬೆಂಗಳೂರು:- ಕಾಂಗ್ರೆಸ್ ನ ಉಚಿತ ಹಣ ಫಲಾನುಭವಿಗಳಿಗೆ ತಲುಪುತ್ತಿಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಉಚಿತ ಹಣ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಎಲ್ಲ ಹಣ ಪಂಚರಾಜ್ಯ ಚುನಾವಣೆಗೆ ಹೋಗುತ್ತಿದೆ. ಕಾಂಗ್ರೆಸ್ ನಾಯಕರು ಗೃಹ ಸಚಿವ ಡಾ. ಜಿ ಪರಮೇಶ್ವರ (G.parameshwar) ಮನೆಯಲ್ಲಿ ಯಾಕೆ ಸಭೆ ಮಾಡಿದರು? ಪಕ್ಕದ ಮನೆಯಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ದೂರ ಇಟ್ಟು ಸಭೆ ಮಾಡಿದ್ದೇಕೆ? ಎಂದು ಪ್ರಶ್ನಿಸಿದರು. ಅವರ ಸರ್ಕಾರವನ್ನು ಕೆಡವಲು ನಾವ್ಯಾರು? ಹಿಂದೆ ಅವರ ಸರ್ಕಾರ ಹೇಗೆ ಬಿದ್ದು ಹೋಯಿತು ಎಂದು ಅವರಿಗೆ ಗೊತ್ತಿದೆ. ಅವರ ನಡುವಿನ ಕಿತ್ತಾಟದಿಂದಲೇ ಸರ್ಕಾರ ಬಿದ್ದು ಹೋಗುತ್ತದೆ ಎಂದು ಹೇಳಿದರು. ರಾಜ್ಯ ಸರ್ಕಾರ ಶಾಸಕರಿಗೆ ಅನುದಾನ ನೀಡುತ್ತಿಲ್ಲ, ಹೀಗಾಗಿ ಅವರು ಜನರ ಬಳಿ ಹೋಗುತ್ತಿಲ್ಲ. ಉಚಿತ ಹಣ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಎಲ್ಲ ಹಣ ಪಂಚರಾಜ್ಯ ಚುನಾವಣೆಗೆ ಹೋಗುತ್ತಿದೆ. ಕಾವೇರಿ ಹೊರಾಟದಲ್ಲಿ ಜನರಿಗೆ ಮಾಡಿದ ಮೋಸ, ಬರಗಾಲದಲ್ಲಿ ಮಂತ್ರಿಗಳು ಬೆಂಗಳೂರಲ್ಲಿ ಠಿಕಾಣಿ ಹೂಡಿದ್ದಾರೆ. ಡಿ.ಕೆ. ಶಿವಕುಮಾರ್…
v ಬೆಂಗಳೂರು:- ಬಿಜೆಪಿಯ ಭ್ರಷ್ಟಾಚಾರದ ಆರೋಪಗಳಿಗೆ ಅಧಿವೇಶನದಲ್ಲಿ ಉತ್ತರ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಜನ ಬಿಜೆಪಿಯವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಸೇರಿ ಸಮ್ಮಿಶ್ರ ಸರ್ಕಾರ ರಚಿಸುವ ಕನಸು ಕಂಡಿದ್ದರು. ಆದರೆ ಜನ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳನ್ನು ನೀಡಿರುವುದು ಅವರನ್ನು ಆತಂಕಕ್ಕೆ ದೂಡಿದ್ದು, ಇದರಿಂದ ಅರ್ಥವಿಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದರು. ಮಾಜಿ ಸಿಎಂ ಕುಮಾರಸ್ವಾಮಿಯವರು ವಿವೇಕಾನಂದ ಎಂಬುವವರ ವರ್ಗಾವಣೆ ಬಗ್ಗೆ ಟ್ವೀಟ್ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿವೇಕಾನಂದ ಎಂಬುವವರು ಮೈಸೂರು ಗ್ರಾಮಾಂತರ ಕ್ಷೇತ್ರಶಿಕ್ಷಣಾಧಿಕಾರಿಗಳಾಗಿದ್ದಾರೆ. ಅವರ ಬಗ್ಗೆ ಮಾತನಾಡಲಾಗಿದೆಯೆ ಹೊರತು ಪೋಲಿಸ್ ಅಧಿಕಾರಿ ಬಗ್ಗೆಯಲ್ಲ, ವಿವಿಪುರಂ ಇನ್ಸ್ ಪೆಕ್ಟರ್ ವಿವೇಕಾನಂದ ಚಾಮರಾಜ ವಿಧಾನಸಭಾ ಕ್ಷೇತ್ರಕ್ಕೆ, ವರ್ಗಾವಣೆಯಾಗಿರುವ ಬಗ್ಗೆ ಸ್ಥಳೀಯ ಶಾಸಕರನ್ನು ಕೇಳಲಿ ಎಂದರು. ಕಾಂಗ್ರೆಸ್ ನವರು ಕೌರವ ಸಂಸ್ಕೃತಿಯನ್ನು ನನ್ನ ಬಳಿ ತೋರಿಸುವುದು ಬೇಡ ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಉತ್ತರಿಸುತ್ತಾ, ಕುಮಾರಸ್ವಾಮಿಯವರು ಎಂದಿಗೂ ತಾವು ಮಾಡಿರುವ ಆರೋಪಗಳನ್ನು ಸಾಬೀತು…
ಹುಬ್ಬಳ್ಳಿ: ಭಗತ್ ಸಿಂಗ್ ಕೋಷ್ಯಾರಿ ವರದಿಯನ್ನು ಅನುಷ್ಠಾನಗೊಳಿಸಿ ಇಪಿಎಸ್ ಪಿಂಚಣಿದಾರರಿಗೆ ಅನುಕೂಲ ಮಾಡಬೇಕು ಹಾಗೂ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ಕಾರ್ಮಿಕ ಪಿಂಚಣಿ ಯೋಜನೆ ಪಿಂಚಣಿದಾರರ ಕ್ಷೇಮಾಭಿವೃದ್ಧಿ ಮಹಾಮಂಡಳ ನಗರದಲ್ಲಿ ಪ್ರತಿಭಟನೆ ನಡೆಸಿದರು. ಶನಿವಾರ ಇಲ್ಲಿಯ ಲ್ಯಾಮಿಂಗ್ಟನ್ ರಸ್ತೆಯ ಚಿಟಗುಪ್ಪಿ ಆವರಣದಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಕಚೇರಿಯ ಎದುರು ಸಮಾವೇಶಗೊಂಡ ನೂರಾರು ಪ್ರತಿಭಟನಾಕರರು ಬೇಕೆ ಬೇಕು ನ್ಯಾಯ ಬೇಕು, ಬೇಕೆ ಬೇಕು ಪಿಂಚಣಿ ಬೇಕು ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ರಚಿಸಿದ ಭಗತ್ ಸಿಂಗ್ ಕೋಷ್ಯಾರಿ ನೇತೃತ್ವದ ಸಮಿತಿ ಖಾಸಗಿ ಹಾಗೂ ಸಾರ್ವಜನಿಕ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸಿದ್ದ ನಿವೃತ್ತ ನೌಕರರಿಗೆ ೩ ಸಾವಿರ ಪಿಂಚಣಿ ಹಾಗೂ ಪ್ರತಿ ೨ ವರ್ಷ ತುಟ್ಟಿ ಭತ್ಯೆ ನೀಡುವಂತೆ ಶಿಫಾರಸ್ ಮಾಡಿತ್ತು. ಆದರೆ ೧೦ ವರ್ಷ ಕಳೆದರೂ ವರದಿ ಜಾರಿಯಾಗಿಲ್ಲ. ಸದ್ಯ ನಿವೃತ್ತ ನೌಕರರಿಗೆ ಕೇವಲ ೧ ಸಾವಿರ ರೂ. ಪಿಂಚಣಿ ನೀಡುತ್ತಿದ್ದು, ಕುಟುಂಬ ನಿರ್ವಹಣೆ ಕಷ್ಟವಾಗಿದೆ.…
ಬೆಂಗಳೂರು:- ಆರ್ ಅಶೋಕ ಅವರನ್ನು ವಿಪಕ್ಷ ನಾಯಕನಾಗಿ ಬಿಜೆಪಿ ಆಯ್ಕೆ ಮಾಡಿದೆ. ಅಶೋಕ ಅವರು ಪಕ್ಷದ ಪ್ರಮುಖ ಒಕ್ಕಲಿಗ ಮುಖವಾಗಿದ್ದು, ಇದು ಕರ್ನಾಟಕದ ಪ್ರಬಲ ಸಮುದಾಯಗಳಲ್ಲಿ ಒಂದಾಗಿದೆ. ವಿಶೇಷವಾಗಿ ಕರ್ನಾಟಕದ ದಕ್ಷಿಣ ಭಾಗಗಳಾದ ಬೆಂಗಳೂರು, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೋಲಾರ, ತುಮಕೂರು ಮತ್ತು ಚಿಕ್ಕಮಗಳೂರುಗಳಲ್ಲಿ ಈ ಸಮುದಾಯದವರು ಹೆಚ್ಚಿಗಿದ್ದಾರೆ. ವಿಧಾನಸಭೆಯ ವಿಪಕ್ಷ ನಾಯಕನಾಗಿ ಆಯ್ಕೆಯಾದ ನಂತರ ಮಾತನಾಡಿದ ಅವರು, ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ನ ದುರಾಡಳಿತ ಮತ್ತು ಭ್ರಷ್ಟಾಚಾರವನ್ನು ಸಾರ್ವಜನಿಕರ ಮುಂದೆ ಬಹಿರಂಗಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ರೈತರಿಗೆ ಪರಿಹಾರ ನೀಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು. ಬಿಜೆಪಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದಾಗ ಬರ ಪರಿಹಾರ ಮೊತ್ತವನ್ನು ದ್ವಿಗುಣಗೊಳಿಸಿತ್ತು. ಆದರೆ ಪ್ರಸ್ತುತ ಸರ್ಕಾರ ರಾಜ್ಯದ ಖಜಾನೆಯನ್ನು ಖಾಲಿ ಮಾಡಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು. ಆರ್ ಅಶೋಕ ನಡೆದು ಬಂದ ದಾರಿ ಏಳು ಬಾರಿ…
ಮಂಗಳೂರು: ನಾನು ಎಲ್ಲರ ಸ್ಪೀಕರ್. ಸ್ಪೀಕರ್ ಸ್ಥಾನವನ್ನು ರಾಜಕೀಯ, ಜಾತಿ ಧರ್ಮದಿಂದ ನೋಡುವಂತಿಲ್ಲ ಎಂದು ಹೇಳುವ ಮೂಲಕ ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಸ್ಪೀಕರ್ ಯು.ಟಿ ಖಾದರ್ (U.T Khader) ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಪೀಕರ್ ಸ್ಥಾನದ ಬಗ್ಗೆ ಜಮೀರ್ (Zameer Ahmed Khan) ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಎಲ್ಲವನ್ನು ಕೂಡ ಮೆಟ್ಟಿ ನಿಂತು ನೋಡಬೇಕಾದ ಸಂವಿಧಾನ ಬದ್ಧವಾದ ಸ್ಥಾನ ಇದಾಗಿದೆ. ನನಗೆ ಗೌರವ ಕೊಡುವುದು ಯು.ಟಿ ಖಾದರ್ ಗೆ ಗೌರವ ಕೊಡೋದು ಅಲ್ಲ. ಸಂವಿಧಾನ ಪೀಠಕ್ಕೆ ಮತ್ತು ಸಭಾಧ್ಯಕ್ಷ ಸ್ಥಾನಕ್ಕೆ ಹಾಗೂ ಅಲ್ಲಿ ಕೂರುವ ನಾವು ಗೌರವ ಉಳಿಸುವ ಕೆಲಸ ಮಾಡಬೇಕು ಎಂದರು. https://ainlivenews.com/how-to-make-hotel-style-palak-paneer-antira-here-it-is/ ನಾನು ಯಾರ ಹೇಳಿಕೆಗೂ ಕಮೆಂಟ್ ಮಾಡೋದಿಲ್ಲ. ನನ್ನನ್ನು ಜಾತಿ, ಧರ್ಮದ ಆಧಾರದಲ್ಲಿ ಯಾರು ಸಹ ಆ ಪೀಠದಲ್ಲಿ ಕೂರಿಸಿಲ್ಲ. ಅರ್ಹತೆಗೆ ಅನುಗುಣವಾಗಿ ಸಂವಿಧಾನ ಬದ್ಧವಾಗಿ ಕೆಲಸ ನಿರ್ವಹಿಸುವ ವಿಶ್ವಾಸದಿಂದ ಕೂರಿಸಿದ್ದಾರೆ. ಸಂವಿಧಾನಕ್ಕೆ ಅನುಗುಣವಾಗಿ ಕೆಲಸ ಮಾಡುತ್ತೇನೆ. ನಾನು ಎಲ್ಲರಿಗೂ ಗೌರವ ಕೊಟ್ಟು ಗೌರವ…
ಅನಾವರಣ ಸಿನಿಮಾದ ಹಾಡುಗಳು ಈಗಾಗಲೇ ಭಾರೀ ಸದ್ದು ಮಾಡುತ್ತಿದ್ದು, ಇದೀಗ ಮೊದಲ ನೋಟ ಬಿಡುಗಡೆಯಾಗಿದೆ. ಪ್ರೀತಿ, ಕೊಲೆ ಕುಟುಂಬ, ಎಮೋಷನ್ ಜೊತೆಗೆ ಸಸ್ಪೆನ್ಸ್ ಅಂಶಗಳಿಂದ ಕೂಡಿರುವ ಚಿತ್ರದ ಟ್ರೇಲರ್ ನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿ ಶುಭಾಶಯ ಕೋರಿದ್ದಾರೆ. ಕಿಚ್ಚ ಸುದೀಪ್ ಮಾತನಾಡಿ, ರಾಮಚಂದ್ರ, ಅದ್ವೈತ್ ಪ್ರಭಾಕರ್ ನಿರ್ಮಾಣ ಮಾಡಿರುವ, ಮೊದಲ ಬಾರಿಗೆ ಮಂಜು ಹರಿ ನಿರ್ದೇಶನ ಮಾಡಿರುವ, ಅರ್ಜುನ್ ಯೋಗಿ ನಟನೆಯ ಅನಾವರಣ ಸಿನಿಮಾದ ಟ್ರೇಲರ್ ನೋಡಿದೆ. ಅವರ ತಂಡಕ್ಕೆ ಅವರ ಪರಿಶ್ರಮಕ್ಕೆ ಒಳ್ಳೆದಾಗಲಿ. ಡಿಸೆಂಬರ್ 1ಕ್ಕೆ ಸಿನಿಮಾ ಬಿಡುಗಡೆಯಾಗ್ತಿದೆ. ಟ್ರೇಲರ್ ನೋಡ್ತಾ ಇರಬೇಕಾದ್ರೆ ಬಹಳ ಪರಿಚಯಸ್ಥರು ತುಂಬ ಜನ ಸಿನಿಮಾದಲ್ಲಿದ್ದಾರೆ. ಎಲ್ಲರಿಗೂ ಒಳ್ಳೆದಾಗಲಿ ಎಂದರು. ಫ್ಯಾಮಿಲಿ ಡ್ರಾಮಾ ಜೊತೆಗೆ ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಅನಾವರಣ ಸಿನಿಮಾ ಡಿಸೆಂಬರ್ 1ಕ್ಕೆ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಹರೀಶ್ ಕುಮಾರ್ ಹಾಗೂ ಮಂಜುನಾಥ್ ಪಿಳ್ಳಪ್ಪ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ರಂಗ ಕಲಾವಿದರು ನಿರ್ದೇಶಕರು ಆಗಿರುವ ಹರೀಶ್ ಕುಮಾರ್ ಹಾಗೂ ಮಂಜುನಾಥ್ ಪಿಳ್ಳಪ್ಪ…
ಮಂಗಳೂರು:- ಸಚಿವ ಜಮೀರ್ ಅಹ್ಮದ್ ರಾಜೀನಾಮೆಗೆ ನಳಿನ್‌ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ವಿವಾದಿತ ಹೇಳಿಕೆ ನೀಡಿಡುವ ಸಚಿವ ಜಮೀರ್ ಅಹ್ಮದ್ ಖಾನ್ ರಾಜೀನಾಮೆ ನೀಡಬೇಕು. ಜಮೀರ್ ಅವರು ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ್ದಾರೆ. ಸ್ಪೀಕರ್ ಸ್ಥಾನ ಜಾತಿ, ಧರ್ಮದ ಹೊರತಾಗಿ ಇರುವ ಹುದ್ದೆಯಾಗಿದೆ. ಆ ಸ್ಥಾನವನ್ನು ಅವರು ಮತೀಯ ದೃಷ್ಟಿಯಿಂದ ನೋಡಿದ್ದಾರೆ. ಸ್ಥಾನದ ಗೌರವ ಕಡಿಮೆಯಾಗುವಂತೆ ಮಾತನಾಡಿದ್ದಾರೆ ಎಂದರು. ಈ ಹೇಳಿಕೆಯು ಅವರ ಮಾನಸಿಕತೆಯನ್ನು ತೋರಿಸುತ್ತದೆ. ಮತಿಭ್ರಾಂತಿಯಿಂದ ಜಮೀರ್ ಮಾತನಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಮೀರ್ ಅಹ್ಮದ್ ಖಾನ್ ಅವರಿಂದ ರಾಜೀನಾಮೆ ಪಡೆಯಲಿ’ ಎಂದರು.
ಚಿತ್ರದುರ್ಗ :- ಜನರ ಹಿತ ಕಾಯುವುದೇ ನಮ್ಮ ಸರ್ಕಾರದ ಜವಾಬ್ಧಾರಿ ಎಂದು ಜಿ ಪರಮೇಶ್ವರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಅಧಿಕಾರಕ್ಕೆ ಬಂದ ತಿಂಗಳ ಅವಧಿಯಲ್ಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜನಪರ ಆಡಳಿತ ನೀಡುತ್ತಿದ್ದೇವೆ. ಜನರ ಹಿತ ಕಾಯುವುದೇ ಸರ್ಕಾರ ಜವಾಬ್ಧಾರಿ. ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧ ಪಕ್ಷದಿಂದ ಟೀಕೆ, ಟಿಪ್ಪಣೆಗಳು ಬಂದರೆ ಪಕ್ಷದ ಕಾರ್ಯಕರ್ತರು ಸರಿಯಾದ ಉತ್ತರ ಕೊಡಬೇಕು ಎಂದರು. ಈ ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟ ಆಡಳಿತ ನೀತಿಯಿಂದ ಜನ ಬೇಸತ್ತಿದ್ದರು. ಚುನಾವಣೆ ಸಂದರ್ಭದಲ್ಲಿ ಪಕ್ಷದ ಪ್ರಣಾಳಿಕೆಯನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅಚ್ಚುಕಟ್ಟಾಗಿ ನಿಭಾಯಿಸಿದರು. ಎಲ್ಲರಿಗೂ ಶ್ಲಾಘನೆ ಸಲ್ಲಬೇಕು ಎಂದರು. ಬರದಿಂದಾಗಿ ರಾಜ್ಯದಲ್ಲಿ 36 ಸಾವಿರ ಕೋಟಿ ರು. ನಷ್ಟವಾಗಿದೆ. ಇದರಲ್ಲಿ 17 ಸಾವಿರ ಕೋಟಿ ರು.ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ವರದಿ ನೀಡಿದ್ದೇವೆ. ರೈತರ ಸಂಕಷ್ಟಕ್ಕೆ ಕಿವಿಗೊಡುತ್ತಿಲ್ಲ ಎಂದು ಬೇಸರಿಸಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು…