ಬೆಳಗಾವಿ: ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಪಕ್ಕದಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇಂದು ಬೆಳಗಿನ ಜಾವದಲ್ಲಿ ವಾಹುವಿಹಾರಿಗಳಿಂದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಹರಸಾಹಸ ಪಟ್ಟರು. ಕೆನಾರ ಬ್ಯಾಂಕ್ ಶಾಖೆಯಲ್ಲಿದ್ದ ಕಡತಗಳು ಬೆಂಕಿಗಾಹುತಿಯಾಗಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವ ಶಂಕೆಯಾಗಿದೆ.
Author: AIN Author
ಬೆಂಗಳೂರು : ಆರ್. ಅಶೋಕ್ ಅವರನ್ನು ಶಾಸಕಾಂಗ ಸಭೆಯಲ್ಲಿ ಸರ್ವಾನುಮತದಿಂದ ವಿಪಕ್ಷ ನಾಯಕನಾಗಿ ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. https://ainlivenews.com/eskom-online-service-will-be-suspended-for-these-2-days-in-the-state/ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹು ದಿನಗಳಿಂದ ನಾವು ನೀವೆಲ್ಲರೂ ಕಾಯುತ್ತಿದ್ದಂತಹ ವಿಪಕ್ಷ ನಾಯಕನ ಸ್ಥಾನಕ್ಕೆ ಆರ್. ಅಶೋಕ್ ಆಯ್ಕೆ ಮಾಡಿದ್ದಾರೆ. ಎಲ್ಲಾ ಶಾಸಕರುಗಳು ಸಹ ಒಗ್ಗಟ್ಟಾಗಿ ಆರ್. ಅಶೋಕ್ ಅವರನ್ನು ವಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಬಿಜೆಪಿ ಅಧ್ಯಕ್ಷನಾಗಿ ಅಶೋಕ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ನಾವೆಲ್ಲ ಒಗ್ಗಟ್ಟಾಗಿ, ಒಂದಾಗಿ, ರಾಜ್ಯದಲ್ಲಿರುವ ಬಡವರ ವಿರೋಧಿ, ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ. ಭ್ರಷ್ಟ ಸರ್ಕಾರವನ್ನು ರಾಜ್ಯದ ಜನರ ಮುಂದೆ ಕಿವಿ ಹಿಂಡುವ ಕೆಲಸ ಮಾಡುತ್ತೇವೆ. ನಮ್ಮೆಲ್ಲರ ಮುಮದಿನ ಗುರಿ ಲೋಕಸಭೆ ಚುನಾವಣೆ. 28 ಲೋಕಸಭಾ ಕ್ಷೇತ್ರಗಳನ್ನೂ ನಾವು ಗೆಲ್ಲುತ್ತೇವೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸುತ್ತೇವೆ. ಮತ್ತೊಮ್ಮೆ ಮೋದಿ ಅವರನ್ನು ದೇಶದ ಪ್ರಧಾನಿಯಾಗಿ ಆಯ್ಕೆ…
ಲಕ್ನೋ: ಉತ್ತರ ಪ್ರದೇಶದ (Uttar Pradesh) ಸಹರಾನ್‌ಪುರ (Saharanpur) ಜಿಲ್ಲೆಯ ಧರ್ಮಗುರುವೊಬ್ಬರು, ಪುರುಷರು ಕೆಲಸ ಮಾಡುವ ಬ್ಯೂಟಿ ಪಾರ್ಲರ್‌ಗಳಿಗೆ (Beauty Parlour) ಮುಸ್ಲಿಂ ಮಹಿಳೆಯರು (Muslim Women) ಹೋಗುವುದನ್ನು ತಪ್ಪಿಸಬೇಕು ಎಂದು ಹೇಳಿದ್ದಾರೆ. ಅಂತಹ ಪಾರ್ಲರ್‌ಗಳಲ್ಲಿ ಮಹಿಳೆಯರು ತಮ್ಮ ಮೇಕಪ್ ಮಾಡಿಕೊಳ್ಳುವುದು ‘ನಿಷಿದ್ಧ’ ಮತ್ತು ‘ಕಾನೂನುಬಾಹಿರ’ ಎಂದು ಕರೆದಿದ್ದಾರೆ. ಮುಫ್ತಿ ಅಸದ್ ಕಾಸ್ಮಿ (Mufti Asad Kasmi) ಅವರು ಈ ಹೇಳಿಕೆಗಳನ್ನು ನೀಡಿದ್ದು, ಮುಸ್ಲಿಂ ಮಹಿಳೆಯರು ಪುರುಷರು ಕೆಲಸ ಮಾಡುವ ಬ್ಯೂಟಿ ಪಾರ್ಲರ್‌ಗಳಿಗೆ ಭೇಟಿ ನೀಡುವುದನ್ನು ತಡೆಯಬೇಕು. ಬದಲಿಗೆ ಮಹಿಳೆಯರು ಮಾತ್ರ ಕೆಲಸ ಮಾಡುವ ಸಲೂನ್‌ಗಳನ್ನು ಆರಿಸಿಕೊಳ್ಳಿ ಎಂದು ಸಲಹೆ ನೀಡಿದರು. https://ainlivenews.com/how-to-make-hotel-style-palak-paneer-antira-here-it-is/ ಕಳೆದ ತಿಂಗಳು, ಕಾನ್ಪುರದ ಮಹಿಳೆಯೊಬ್ಬರು ಐಬ್ರೋಸ್ ಮಾಡಿಸಿದ್ದಕ್ಕಾಗಿ ಆಕೆಯ ಪತಿ ಸೌದಿ ಅರೇಬಿಯಾದಿಂದ ಫೋನ್ ಮಾಡಿ ತ್ರಿವಳಿ ತಲಾಖ್ ನೀಡಿದ್ದಾರೆ. ಆಕೆಯ ಪತಿ ಸೌದಿಯಿಂದ ವೀಡಿಯೊ ಕಾಲ್ ಮಾಡಿ ಮಾತನಾಡುವ ಸಂದರ್ಭ ಪತ್ನಿ ಐಬ್ರೋಸ್ ಮಾಡಿಸಿರುವುದನ್ನು ಗಮನಿಸಿದ್ದಾರೆ. ಈ ಕುರಿತು ಆಕೆಯನ್ನು ಪತಿ ಪ್ರಶ್ನಿಸಿದ್ದು, ಆಕೆಯ ವಿವರಣೆಯಿಂದ…
ಬೆಂಗಳೂರು: ನವೆಂಬರ್ 24ರಿಂದ ನ.26ರವರೆಗೆ ಎಸ್ಕಾಂ ಆನ್ಲೈನ್ ಸೇವೆ ಸ್ಥಗಿತಗೊಳ್ಳಲಿದೆ. ನ.24ರಂದು ಮಧ್ಯಾಹ್ನ 12ರಿಂದ ನ.26ರ ಬೆಳಗ್ಗೆ 11.59ರವರೆಗೆ ಬಂದ್ ಆಗಿರಲಿದೆ. https://ainlivenews.com/good-news-for-non-veg-lovers-meat-sales-in-kmf-model/ ರಾಜ್ಯದ ಐದು ಎಸ್ಕಾಂಗಳ ವ್ಯಾಪ್ತಿಯಲ್ಲಿ ವೆಬ್ ಪೋಟರ್ಲ್ ಗೆ ಸಂಬಂಧಿಸಿದಂತೆ ತುರ್ತು ತಾಂತ್ರಿಕ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಹಿನ್ನೆಲೆ 2 ದಿನ ‘ಎಸ್ಕಾಂ’ ಆನ್ ಲೈನ್ ಸೇವೆ ಸ್ಥಗಿತಗೊಳಿಸಲಾಗಿದೆ. ವಿವಿಧ ಪೋರ್ಟಲ್ ಗಳಲ್ಲಿರುವ ಡಾಟಾವನ್ನು ನೂತನ ಪೋರ್ಟಲ್ ಗೆ ವರ್ಗಾವಣೆ ಮಾಡುವ ಕೆಲಸ ನಡೆಯುವ ಹಿನ್ನೆಲೆ ಆನ್ ಲೈನ್ ಸೇವೆ ಸ್ಥಗಿತಗೊಳಿಸಲಾಗಿದೆ. 2 ದಿನ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕೆ ಆನ್ ಲೈನ್ ಅರ್ಜಿ ಸಲ್ಲಿಕೆ ಸೇವೆ ಇರಲ್ಲ.
ಬೆಂಗಳೂರು: ನಾನ್ ಪ್ರೀಯರಿಗೆ ಸರ್ಕಾರ ಗುಡ್ ನ್ಯೂಸ್ ನೀಡುತ್ತಿದೆ. ಬರುವ ಹೊಸ ವರ್ಷದಿಂದ ಕೆಎಂಎಫ್ (KMF) ಮಾದರಿಯಲ್ಲೇ ಕುರಿ ಹಾಗೂ ಮೇಕೆ ಮಾಂಸ ಮಾರಾಟ (Meet Sale) ಮಾಡುವ ಪ್ಲಾನ್ ಮಾಡಲಾಗಿದೆ. ರಾಜ್ಯದ ತುಮಕೂರು (Tumakuru) ಹಾಗೂ ಚಿತ್ರದುರ್ಗದ (Chitradurga) ಕುರಿ ಹಾಗೂ ಮೇಕೆ ಮಾಂಸಕ್ಕೆ ಎಲ್ಲೆಡೆ ಭಾರೀ ಬೇಡಿಕೆ ಇದೆ. ಈ ಉತ್ತಮ ಗುಣಮಟ್ಟದ, ರೋಗರಹಿತ ಮಾಂಸವನ್ನು ಮಾರಾಟ ಮಾಡುವ ನಿಟ್ಟಿನಲ್ಲಿ ಸರ್ಕಾರ ಸಜ್ಜಾಗುತ್ತಿದೆ. ಕರ್ನಾಟಕ ಸರ್ಕಾರ, ಪಶುಸಂಗೋಪನೆ ಇಲಾಖೆ (Department of Animal Husbandry) ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಹಾಲಿನ ಉತ್ಪನ್ನಗಳ ಮಳಿಗೆ ಮಾದರಿಯಲ್ಲಿಯೇ ರಾಜ್ಯದಾದ್ಯಂತ ತನ್ನ ಮಳಿಗೆಗಳ ಮೂಲಕ ಪ್ಯಾಕ್ ಮಾಡಿದ ಕುರಿ ಮತ್ತು ಮೇಕೆ ಮಾಂಸವನ್ನು ಸಮಂಜಸವಾದ ಬೆಲೆಯಲ್ಲಿ ಮಾರಾಟ ಮಾಡಲು ಯೋಜಿಸುತ್ತಿದೆ. ಪಶುಸಂಗೋಪನಾ ಇಲಾಖೆ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಈ ಮಳಿಗೆಗಳು ಹೊಸ ವರ್ಷದಿಂದ ಆರಂಭವಾಗುವ ಪ್ಲಾನ್ ಮಾಡಲಾಗಿದೆ. ಈಗಾಗಲೇ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚೀಲನಹಳ್ಳಿಯಲ್ಲಿ 46 ಕೋಟಿ ರೂಪಾಯಿ ವೆಚ್ಚದಲ್ಲಿ ಹೈಟೆಕ್…
ಮೈಸೂರು: ತನ್ನ ಜತೆಗಿರುವ ಪೋಟೊವನ್ನು ಹೆಂಡತಿಗೆ ಕಳುಹಿಸುವೆ ಎಂದು ಬೆದರಿಕೆ ಹಾಕಿ ವಿವಾಹಿತನಿಗೆ ೧೦ಲಕ್ಷಕ್ಕೆ ಬೇಡಿಕೆಯಿಟ್ಟ ಮಹಿಳೆಯ ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಳ್ಳಾರಿ ಸಂಸದ ದೇವೇಂದ್ರಪ್ಪ ಅವರ ಪುತ್ರ ರಂಗನಾಥ್ ಯುವತಿ ವಿರುದ್ದ ಇಂತಹದೊಂದು ದೂರು ದಾಖಲಿಸಿದ್ದಾರೆ. ರಂಗನಾಥ್ ಅವರ ಸ್ನೇಹಿತ ಕಲ್ಲೇಶ್ ಅವರ ಮೂಲಕ ಯುವತಿ ಪರಿಚಿತರಾಗಿದ್ದಾರೆ. ಎರಡು-ಮೂರು ಭೇಟಿಗಳಲ್ಲಿ ಯುವತಿಯನ್ನು ರಂಗನಾಥ್‌ರನ್ನು ಪ್ರೀತಿಸುವ ಬಯಕೆ ವ್ಯಕ್ತಪಡಿಸಿದ್ದಾರೆ. ಈ ವೇಳೆ ಇದಕ್ಕೊಪ್ಪದ ರಂಗನಾಥ್ ಯುವತಿ ಪ್ರೀತಿ ನಿರಾಕರಿಸಿದ್ದಾರೆ. ಇದಾಗಿಯೂ ಬೆಂಗಳೂರಿನ ಸ್ಯಾಟ್‌ಲೈಟ್ ಬಸ್ ನಿಲ್ದಾಣದಲ್ಲಿ ಯುವತಿ ರಂಗನಾಥ್ ವಿರುದ್ಧ ತಿರುಗಿ ಬಿದ್ದಿದ್ದು, ಅವಾಚ್ಯ ಶಬ್ಧಗಳಿಂದಲೂ ನಿಂದಿಸಿದ್ದಾರೆ. ಇದಾಗಿಯೂ ಮಾನಸಿಕವಾಗಿ ಹಣಕ್ಕಾಗಿ ಪೀಡಿಸಿದ್ದಾರೆ. ಇದರಿಂದಾಗ ಬೇಸತ್ತು ಪ್ರಾರಂಭದಲ್ಲಿ ೩೨೫೦೦ ರೂ.ಗಳನ್ನು ಸಹ ನೀಡಿರುತ್ತೇನೆ. ಇದಾದ ಬಳಿಕವೂ ಯುವತಿ ಹಣ ನೀಡುವಂತೆ ದುಂಬಾಲು ಬಿದ್ದಿದ್ದು, ಹಣ ನೀಡಲು ನಿರಾಕರಿಸಿದ್ದೇನೆ. https://ainlivenews.com/how-to-make-hotel-style-palak-paneer-antira-here-it-is/ ಈ ಹಿನ್ನೆಲೆಯಲ್ಲಿ ಶ್ರೀನಿವಾಸ್ ಎಂಬುವವರನ್ನು ಮೈಸೂರಿಗೆ ಕಳುಹಿಸಿದ್ದು, ಆತ ೧೦ಲಕ್ಷ ರೂ. ನೀಡಿ ಇಲ್ಲದಿದ್ದರೆ ನಿನ್ನ ಹಾಗೂ…
ಟೆಲ್ ಅವೀವ್: ಗಾಜಾದ ಅಲ್ ಶಿಫಾ ಆಸ್ಪತ್ರೆ ಹಮಾಸ್ (Hamas) ಉಗ್ರರ ಕಾರ್ಯಸ್ಥಾನ ಎಂದು ಇಸ್ರೇಲ್ (Israel) ಮೊದಲಿಂದ ಹೇಳುತ್ತಾ ಬಂದಿತ್ತು. ಭಯೋತ್ಪಾದಕ ಚಟುವಟಿಕೆಗಳಿಗೆ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಲು ಆಸ್ಪತ್ರೆಗಳನ್ನು ಹಮಾಸ್ ಬಳಸುತ್ತದೆ ಎಂಬುದಕ್ಕೆ ತನ್ನ ಪಡೆಗಳು ಪುರಾವೆಗಳನ್ನು ಕಂಡುಕೊಂಡಿವೆ ಎಂದು ಇಸ್ರೇಲ್ ಮತ್ತೆ ಹೇಳಿಕೊಂಡಿದೆ. ಅಲ್ ಶಿಫಾ ಆಸ್ಪತ್ರೆಯ (Al-Shifa Hospital) ಎಂಆರ್‌ಐ ಯೂನಿಟ್‌ನಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ ಎಂದು ಇಸ್ರೇಲ್ ತಿಳಿಸಿದೆ. ಹಮಾಸ್‌ಗೆ ಸೇರಿದ ಬ್ಯಾಗ್‌ಗಳಲ್ಲಿ ಎಕೆ 47, ಗ್ರೆನೇಡ್ ಸೇರಿ ಹಲವು ಶಸ್ತ್ರಾಸ್ತ್ರ ಸಿಕ್ಕಿವೆ ಎನ್ನಲಾಗಿದ್ದು, ಇದಕ್ಕೆ ಸಂಬಂಧಿಸಿದ ವೀಡಿಯೋವನ್ನು ಇಸ್ರೇಲ್ ಸೇನೆ (Israeli Defence Force) ಬಿಡುಗಡೆ ಮಾಡಿದೆ. https://ainlivenews.com/what-happens-if-tea-coffee-is-given-to-children/ ಅಲ್ ಶಿಫಾ ಆಸ್ಪತ್ರೆಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಇಸ್ರೇಲ್ ಸೇನೆ, ಆಸ್ಪತ್ರೆಯ ಇಂಚಿಂಚನ್ನೂ ಜಾಲಾಡುತ್ತಿದೆ. ಅಷ್ಟೇ ಅಲ್ಲ, ಅಲ್ ಶಿಫಾ ಆಸ್ಪತ್ರೆ ಮೇಲೆ ಬುಲ್ಡೋಜರ್‌ಗಳು ನುಗ್ಗಿವೆ ಎಂದು ವರದಿಯಾಗಿದೆ. ಬುಲ್ಡೋಜರ್‌ಗಳು ದಕ್ಷಿಣ ಭಾಗದ ಗೇಟ್ ಅನ್ನು ಧ್ವಂಸ ಮಾಡಿದೆ. ಹಮಾಸ್ ಉಗ್ರರ ಸುರಂಗಗಳನ್ನು…
ಚಿಕ್ಕಬಳ್ಳಾಪುರ: ಉಪನ್ಯಾಸಕ ವೈಯುಕ್ತಿಕವಾಗಿ ನನ್ನನ್ನೇ ಟಾರ್ಗೆಟ್ ಮಾಡಿ ಕಿರುಕುಳ ಕೊಟ್ಟಿದ್ದಾನೆ ಅಂತ ಆರೋಪಿಸಿ BGS ಪಾಲಿಟೆಕ್ನಿಕ್ ಡಿಪ್ಲೋಮಾ ವಿದ್ಯಾರ್ಥಿಯೊರ್ವ ಉಪನ್ಯಾಸಕನ ವಿರುದ್ದ ಸೆಲ್ಪಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಲ್ಲಹಳ್ಳಿ ಗ್ರಾಮದ ಲಲಿತಮ್ಮ ಹಾಗೂ ದೇವರಾಜು ದಂಪತಿಯ ಪುತ್ರ ಗಜೇಂದ್ರ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದು, ಈತ ಚಿಕ್ಕಬಳ್ಳಾಪುರ ನಗರದ ಹೊರವಲಯದ ಎಸ್ ಜೆ ಸಿ ಐ ಟಿ ಇಂಜನಿಯರಿಂಗ್ ಕಾಲೇಜು ಕ್ಯಾಂಪಸ್ ನ ಬಿಜಿಎಸ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೊಮಾ ಇನ್ ಮೆಕ್ಯಾನಿಕಲ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು.. ಅದೇ ಕಾಲೇಜಿನ ಉಪನ್ಯಾಸಕ ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡ ಗಜೇಂದ್ರ ನಿಗೆ ವಿನಾಕಾರಣ ವೈಯುಕ್ತಿಕವಾಗಿ ಟಾರ್ಗೆಟ್ ಮಾಡಿ ಕಿರುಕುಳ ಕೊಡ್ತಿದ್ದನಂತೆ. ಪದೇ ಪದೇ ಹಲ್ಲೆ ಮಾಡುವುದು ಅಸೈನ್ ಮೆಂಟ್ ಬುಕ್ ಹರಿದು ಹಾಕುವುದು ಸೇರಿದಂತೆ ಎಲ್ಲ ವಿದ್ಯಾರ್ಥಿಗಳ ಎದುರೇ ಮರ್ಯಾದೆ ತೆಗೆದಿದ್ದನಂತೆ. https://ainlivenews.com/what-happens-if-tea-coffee-is-given-to-children/ ಹೀಗಾಗಿ ಉಪನ್ಯಾಸಕ ಮಂಜುನಾಥ್ ವಿರುದ್ದ ಸೆಲ್ಪಿ ವಿಡಿಯೋ ಮಾಡಿ ಅಳಲು…
ಮೈಸೂರು: ನಮಗೆ ರಾಜಕೀಯದಲ್ಲಿ ದ್ವೇಷ ಗೊತ್ತಿಲ್ಲ. ನಾವು ಯಾರಾದರೂ ತಪ್ಪು ಮಾಡಿದ್ದರೆ ಅದನ್ನು ಒಪ್ಪುವುದಿಲ್ಲ. ಹಾಗಂತ ನಾವು ದ್ವೇಷದ ರಾಜಕೀಯ ಮಾಡಿಲ್ಲ, ಮಾಡುವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮುಯ್ಯ (Siddaramaiah) ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಳ್ಳೆ ಕುಮಾರಸ್ವಾಮಿ (HD Kumaraswamy) ಮನೆ ದೇವರು. ಕುಮಾರಸ್ವಾಮಿ ಹೊಟ್ಟೆಕಿಚ್ಚಿನಿಂದ ದ್ವೇಷದಿಂದ ಸುಳ್ಳು ಸುಳ್ಳು ಆರೋಪ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಹೇಳುವುದೆಲ್ಲ ಸುಳ್ಳು. ಕುಮಾರಸ್ವಾಮಿ ಇವತ್ತಿನವರೆಗೆ ಯಾವುದಾದರೂ ಸತ್ಯ ಹೇಳಿದ್ರೆ ತೋರಿಸಿ. ಒಂದೇ ಒಂದು ವಿಚಾರದಲ್ಲಿ ಸತ್ಯ ಹೇಳಿದ್ದಾರಾ ಹೇಳಿ. ಕುಮಾರಸ್ವಾಮಿ ಬರೀ ಹಿಟ್ ಅಂಡ್ ರನ್ ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ. ನಮ್ಮ ಮಗನ ವಿಚಾರದಲ್ಲಿ ಸುಮ್ಮನೆ ಸುಳ್ಳು ಹಬ್ಬಿಸಿದ್ರು. ನನ್ನ ಮಗ ನನಗಾಗಿ ಕ್ಷೇತ್ರ ಬಿಟ್ಟು ಕೊಟ್ಟಿದ್ದಾನೆ. https://ainlivenews.com/what-happens-if-tea-coffee-is-given-to-children/ ಈಗ ನನ್ನ ಪರವಾಗಿ ಕ್ಷೇತ್ರದಲ್ಲಿ ಜನರ ಕೆಲಸ ಮಾಡುತ್ತಿದ್ದಾನೆ. ಜನರ ಕೆಲಸ ಮಾಡುವುದು ತಪ್ಪಾ. ಕೆಡಿಪಿ ಸದಸ್ಯನಾಗಿರುವ ಕಾರಣ ಕೆಲವು ವಿಚಾರಗಳ ಬಗ್ಗೆ ನನ್ನ ಜೊತೆ ಚರ್ಚೆ ಮಾಡಿದ್ದಾನೆ. ಅದಕ್ಕೆ ಬೇರೆ ಬೇರೆ ಅರ್ಥ…
ಕಲಬುರಗಿ : ಹಣ ಇಲ್ಲದ ಕಾರಣ ಯಾವುದೇ ಅಭಿವೃದ್ಧಿ ಕಾಮಗಾರಿ ನಡೆಯುತ್ತಿಲ್ಲ, ಖಜಾನೆ ಖಾಲಿ, ಆರ್ಥಿಕ ದಿವಾಳಿಯಾಗಿದೆ. ಹೊಟ್ಟೆಗೆ ಹಿಟ್ಟಿಲ್ಲದಿದ್ದರು ಜುಟ್ಟಿಗೆ ಮಲ್ಲಿಗೆ ಎಂಬಂತಾಗಿದೆ ಕಾಂಗ್ರೆಸ್ ಸರ್ಕಾರದ ಸ್ಥಿತಿ ಎಂದು ಕಲಬುರಗಿಯಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ಲೇವಡಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲಸ ಮಾಡಿರುವ ಗುತ್ತಿಗೆದಾರರಿಗೆ ನೀಡಲೂ ಇವರ ಬಳಿ ಹಣ ಇಲ್ಲ, ಬಿಟ್ಟಿ ಭಾಗ್ಯವೂ ತಲುಪಿಸಲು ಆಗುತ್ತಿಲ್ಲ. ಖಜಾನೆ ಖಾಲಿಯಾಗಿದೆ. ವರ್ಗಾವಣೆ ದಂಧೆಯಲ್ಲಿ ಸರ್ಕಾರ ಸಂಪೂರ್ಣ ತೊಡಗಿಸಿಕೊಂಡಿದೆ ಎಂದರು. https://ainlivenews.com/what-happens-if-tea-coffee-is-given-to-children/ ಯತೀಂದ್ರ ಸೂಪರ್ ಸಿಎಂ ರೀತಿ ಹಿಂಬಾಗಿಲಿನಿಂದ ಸರ್ಕಾರ ನಡೆಸುತ್ತಿದ್ದಾರೆ. ಇದು ಅಪ್ಪ ಮಕ್ಕಳ ಸರ್ಕಾರವಾ? ಇಲ್ಲಾ ಯತೀಂದ್ರನ ಸರ್ಕಾರವಾ? ಯತೀಂದ್ರ ಸೂಪರ್ ಸಿಎಂ ರೀತಿ ವರ್ತಿಸುತ್ತಿದ್ದಾರೆ. ಎಲ್ಲಾ ಆದೇಶಗಳನ್ನೂ ಮಗನೇ ನೀಡುತ್ತಿದ್ದಾರೆ. ಈ ಬಗ್ಗೆ ಸಿಎಂ ಸಿದ್ರಾಮಯ್ಯ ಕೂಡಲೇ ಸ್ಪಷ್ಟೀಕರಣ ಕೊಡಬೇಕು ಎಂದು ಆಗ್ರಹಿಸಿದರು. ಸಿಎಸ್ಆರ್ ಫಂಡ್‌ಗೆ ಸಂಬಂಧಿಸಿದ ಚರ್ಚೆ ಇದು ಎಂದು ಡಿಸಿಎಂ ಡಿಕೆಶಿ ಹೇಳುತ್ತಿದ್ದಾರೆ. ಅದಕ್ಕೆ ಸಂಬಂಧಿಸಿದ ದಾಖಲೆ ಇದ್ದರೆ ಕೊಡಲಿ ಎಂದರು.