ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಕಸಂದ್ರದಲ್ಲಿ ನಿರ್ಮಾಣಗೊಳ್ಳುತ್ತಿರುವ ನೆಲದಡಿ ಮೆಟ್ರೊ ನಿಲ್ದಾಣದಿಂದ ಬಾಷ್ ಕ್ಯಾಂಪಸ್‌ಗೆ ನೇರ ಸಂಪರ್ಕ ಒದಗಿಸಲು ಬಿಎಂಆರ್‌ಸಿಎಲ್ ಮತ್ತು ಬಾಷ್ ಸಂಸ್ಥೆ ಒಪ್ಪಂದ ಮಾಡಿಕೊಂಡಿವೆ ಎನ್ನಲಾಗಿದೆ. ಮೆಟ್ರೊ ನಿಲ್ದಾಣದಿಂದ ಬಾಷ್ ಆವರಣಕ್ಕೆ ನೇರ ಸಂಪರ್ಕ ಒದಗಿಸಲು ಒಪ್ಪಂದ ಮಾಡಿಕೊಂಡಿರುವುದರಿಂದ ಬಾಷ್ ಸಂಸ್ಥೆಯ 1,200ಕ್ಕೂ ಅಧಿಕ ಉದ್ಯೋಗಿಗಳಿಗೆ ರಸ್ತೆ ದಾಟುವ ಪ್ರಯಾಸ ತಪ್ಪಲಿದೆ. 30 ವರ್ಷಗಳ ಅವಧಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ನೆಲದಡಿ ಸಂಪರ್ಕ (70 ಅಡಿ ಉದ್ದ) ಕಾಮಗಾರಿಯನ್ನು ಬಿಎಂಆರ್‌ಸಿಎಲ್ ನಿರ್ವಹಿಸಲಿದೆ. ಅದರ ಅಂದಾಜು ವೆಚ್ಚ ₹ 30 ಕೋಟಿಯನ್ನು ಬಾಷ್ ಭರಿಸಲಿದೆ. ಕಾಳೇನ ಅಗ್ರಹಾರದಿಂದ ನಾಗವಾರವರೆಗಿನ ರೀಚ್-6 ಮೆಟ್ರೊ ಮಾರ್ಗದಲ್ಲಿ ಇದು ಮೊದಲ ಒಪ್ಪಂದವಾಗಿದ್ದು, ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಮತ್ತು ಬಾಷ್ ಸಂಸ್ಥೆಯ ಹಿರಿಯ ಪ್ರಧಾನ ವ್ಯವಸ್ಥಾಪಕ ಅರವಿಂದ್ ಮಯ್ಯ ಒಪ್ಪಂದಕ್ಕೆ ಸಹಿ ಹಾಕಿದರು ಎಂದು ಹೇಳಲಾಗಿತ್ತಿದೆ.
Author: AIN Author
ಬೆಂಗಳೂರು:- ರಾಜ್ಯದ ಜನತೆ ಬಹು ನಿರೀಕ್ಷೆಯಿಂದ ಕಾಯುತ್ತಿದ್ದ ವಿಪಕ್ಷ ನಾಯಕನ ಆಯ್ಕೆ ಕೊನೆಗೂ ಆಯ್ಕೆ ಆಗಿದೆ. ಮಾಜಿ ಸಚಿವ ಆರ್ ಅಶೋಕ್ ಅವರನ್ನು ಆಯ್ಕೆ ಮಾಡಲಾಗಿದೆ. ಅಶೋಕ್ ನಡೆದು ಬಂದ ಹಾದಿ ರಾಮಯ್ಯ-ಆಂಜಿನಮ್ಮ ದಂಪತಿ ಮಗನಾಗಿ 1957 ಜುಲೈ 1 ರಂದು ಜಾಲಹಳ್ಳಿಯಲ್ಲಿ ಅಶೋಕ್ ಜನಿಸುತ್ತಾರೆ. ಜಾಲಹಳ್ಳಿಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿದ ಆರ್ ಅಶೋಕ್, ಬಳಿಕ ವಿವಿಪುರಂ ನ ಕಾಲೇಜಿನಲ್ಲಿ ಬಿಎಸ್ಸಿ ಪದವಿ ಮಾಡುತ್ತಾರೆ. 10ನೇ ವಯಸ್ಸಿನಲ್ಲೇ ಆರ್ಎಸ್ಎಸ್ ಸೇರ್ಪಡೆಯಾಗಿದ್ದ ಆರ್ ಅಶೋಕ ಅವರು, 1975-77 ರಲ್ಲಿ ಅಂದಿನ ಪ್ರಧಾನ ಮಂತ್ರಿಯಾಗಿದ್ದಇಂದಿರಾ ಗಾಂಧಿ ಅವರು ವಿಧಿಸಿದ್ದ ತುರ್ತು ಪರಿಸ್ಥಿತಿಯಲ್ಲಿ ಎಲ್ ಕೆ ಅಡ್ವಾಣಿ ಅವರ ಜೊತೆ 1 ತಿಂಗಳ ಕಾಲ ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಸೆರೆ ವಾಸ ಅನುಭವಿಸುತ್ತಾರೆ. ಆಗ ಜೈಲು ಸೇರಿದ್ದ ಆರ್. ಅಶೋಕ್, 1995ರಲ್ಲಿ ಬಿಜೆಪಿಯ ಬೆಂಗಳೂರು ನಗರ ಅಧ್ಯಕ್ಷರಾಗಿ ಅಂದಿನ ಸರ್ಕಾರದ ವಿರುದ್ದ ಹೋರಾಟ ಮಾಡುತ್ತಾರೆ. 1997 ರಲ್ಲಿ ನಡೆದ ಕರ್ನಾಟಕ ವಿಧಾನಸಭೆ ಉಪ ಚುನಾವಣೆಯಲ್ಲಿ ಉತ್ತರಹಳ್ಳಿ…
ಬೆಂಗಳೂರು:- ನೂತನ ವಿಪಕ್ಷ ನಾಯಕನಾಗಿ ಆಯ್ಕೆ ಆಗಿರುವ ಆರ್. ಅಶೋಕ ನೇಮಕಕ್ಕೆ ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ. ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ವಿರೋಧ ಪಕ್ಷದ ನಾಯಕನಾಗಲು ಬೇಕಿರುವ ಜ್ಞಾನ, ಅರ್ಹತೆ ಯಾವುದೂ ಇಲ್ಲದ ನಕಲಿ ಸಾಮ್ರಾಟನೇ ಕೊನೆಯ ಆಯ್ಕೆಯಾಗಿದ್ದು ಬಿಜೆಪಿ ನಾಯಕರ ಬರಗಾಲ ಎದುರಿಸುತ್ತಿರುವುದಕ್ಕೆ ನಿದರ್ಶನವಾಗಿದೆ ಎಂದು ಕುಹಕವಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಂತಹ ನಾಯಕರೆದುರು ತರಗೆಲೆಯಂತಹ ವ್ಯಕ್ತಿಯನ್ನು ಬಿಜೆಪಿ ತಂದು ಕೂರಿಸಿದೆ ಎಂದು ಆರ್. ಅಶೋಕ ಆಯ್ಕೆಗೆ ಕಾಂಗ್ರೆಸ್ ಲೇವಡಿ ಮಾಡಿದೆ. ಜೆಡಿಎಸ್ ಪಕ್ಷದೊಂದಿಗೆ ಹೊಂದಾಣಿಕೆ ರಾಜಕಾರಣ ಮಾಡಿದ್ದೇ ಬಿಜೆಪಿಯ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಅರ್ಹತೆಯೇ? ಈ ಆಯ್ಕೆ ಕುಮಾರಸ್ವಾಮಿಯವರ ನಿರ್ದೇಶನದ ಮೇರೆಗೆ ಆಗಿದ್ದೋ, ಜೆಡಿಎಸ್ ಶಾಸಕರ ಅಭಿಪ್ರಾಯದ ಆಧಾರದಲ್ಲಿ ಆಗಿದ್ದೋ ಅಥವಾ ಬಿಜೆಪಿ ಶಾಸಕರ ಅಭಿಪ್ರಾಯದಿಂದ ಆಗಿದ್ದೋ ಎಂದು ಕಾಂಗ್ರೆಸ್ ಬಿಜೆಪಿಯನ್ನು ಪ್ರಶ್ನೆ ಮಾಡಿದೆ. ಅಂದಹಾಗೆ ರಾಜ್ಯ ವಿಧಾನಸಭೆ ಚುನಾವಣೆ ಮುಗಿದು ಆರು ತಿಂಗಳಾದ ಬಳಿಕ ಬಿಜೆಪಿ ತನ್ನ ರಾಜ್ಯಾಧ್ಯಕ್ಷ ಹಾಗೂ…
ನೆಲಮಂಗಲ ;- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಭೈರನಾಯ್ಕನಹಳ್ಳಿ ನ್ಯಾಯಬೆಲೆ ಅಂಗಡಿಯನ್ನು ಹಸಿರುವಳ್ಳಿಗೆ ವರ್ಗಾವಣೆ ಮಾಡಿರುವ ಹಿನ್ನೆಲೆಯಲ್ಲಿ ನೆಲಮಂಗಲ ಕ್ಷೇತ್ರದ ಮಾಜಿ ಶಾಸಕರಾದ ಡಾ.ಕೆ ಶ್ರೀನಿವಾಸಮೂರ್ತಿ ಅವರು ತಾಲ್ಲೂಕು ಕಛೇರಿಗೆ ಭೇಟಿ ನೀಡಿ ಮಾಹಿತಿ ಪಡೆದ್ರು ಇನ್ನೂ ತಹಶಿಲ್ದಾರ್ ಕೆ.ಅರುಂಧತಿ ಅವರು ಕೆಲಸದ ಮೇರೆಗೆ ಗೈರಾಗಿದ್ರಿಂದ ಉಪತಹಶಿಲ್ದಾರ್ ಹಾಗೂ ಶಿರಸ್ತೇದಾರ್ ಅವರ ಬಳಿ ಮಾಹಿತಿ ಪಡೆದು ಆಹಾರ ಇಲಾಖೆಯ ಅಧಿಕಾರಿಗೆ ಖಡಕ್ ಎಚ್ಚರಿಕೆ ನೀಡಿದ್ರು ಇನ್ನೂ ಇದೇ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಡಾ.ಕೆ ಶ್ರೀನಿವಾಸಮೂರ್ತಿ ಸುಮಾರು 20-30 ವರ್ಷಗಳಿಂದ ಭೈರನಾಯ್ಕನಹಳ್ಳಿಯಲ್ಲಿ ಆನಂದ್ ಎಂಬುವರು ನ್ಯಾಯಬೆಲೆ ಅಂಗಡಿ ನಡೆಸುತ್ತಿದ್ದು ಒಂದೇ ದಿನಾಂಕ ಇರುವ ನಕಲಿ ಇ ಸ್ಟಾಂಪ್ ಬಳಸಿ ಹಸಿರುವಳ್ಳಿಗೆ ವರ್ಗಾವಣೆ ಮಾಡಿದ್ದಾರೆ ಇದು ಆನಂದ ಅವರಿಗೆ ಮಾಡಿದ ಅನ್ಯಾಯ ಆಗಿದ್ದು ಸಂಬಂಧಿಸಿದ ಅಧಿಕಾರಿಗಳು ಬೇಗನೇ ವರ್ಗಾವಣೆ ಮಾಡಬೇಕು ಇಲ್ಲವೆ ಅಲ್ಲಿಯವರೆಗೆ ಅದನ್ನು ನಿಲ್ಲಿಸಬೇಕು ಇಲ್ಲವಾದರೇ ಬೃಹತ್ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ರು. ವೇಳೆಯಲ್ಲಿ ಯುವ ರಕ್ಷಣಾ ವೇದಿಕೆ…
ಬೆಂಗಳೂರು:- ಬಿಜೆಪಿಯ ನೂತನ ವಿಪಕ್ಷ ನಾಯಕನಾಗಿ ಆಯ್ಕೆ ಆದ ಬಳಿಕ ಮೊದಲ ಬಾರಿಗೆ ಮಾಧ್ಯಮಗಳ ಜೊತೆ ಆರ್ ಅಶೋಕ್ ಸಂತಸ ಹಂಚಿಕೊಂಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತವನ್ನು ಜನರ ಮುಂದೆ ಇಡಲು ಪ್ರಯತ್ನ ಮಾಡುತ್ತೇನೆ ಎಂದರು. ನನಗೆ ಕೊಟ್ಟಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತೇನೆ. ಯಾವುದೇ ವಿವಾದ ಇಲ್ಲದ ಆಡಳಿತವನ್ನು ನಾವು ಕೊಡುತ್ತೇವೆ. ವಿಜಯೇಂದ್ರ ಮತ್ತು ನಾನು ಇಬ್ಬರು ಜೋಡೆತ್ತಿನಂತೆ ಕೆಲಸ ಮಾಡುತ್ತೇವೆ ಎಂದು ಹೇಳಿದರು. ದೇಶದ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಇಂದಿರಾ ಗಾಂಧಿ ವಿರುದ್ಧ ಹೋರಾಟ ಮಾಡಿ ನಾನು ಜೈಲು ಸೇರಿದ್ದೆ ಎಂದು ಹೋರಾಟದ ದಿನಗಳನ್ನು ನೆನೆದ ಅಶೋಕ್, ನನ್ನನ್ನು ಆಯ್ಕೆ ಮಾಡಿದ ಪದ್ಮನಾಭನಗರದ ಜನತೆಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅಶೋಕ, ಕಾಂಗ್ರೆಸ್ನಲ್ಲಿ ಸಿಎಂ ಹುದ್ದೆಗಾಗಿ ಪೈಪೋಟಿ ನಡೆಯುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ. ರೈತರ ಕಷ್ಟ ಕೇಳುವ ಪರಿಸ್ಥಿತಿಯಲ್ಲಿ ಯಾರೂ ಇಲ್ಲ. ಕಾಂಗ್ರೆಸ್ ಸರ್ಕಾರ ರೈತರಿಗೆ ನಯಾ ಪೈಸೆ ಪರಿಹಾರ…
ಬೆಂಗಳೂರು:- ರಾಜ್ಯದ ವಿರೋಧ ಪಕ್ಷಸ ನಾಯಕರಾಗಿ ಮಾಜಿ ಸಚಿವ ಆರ್ ಅಶೋಕ್ ಆಯ್ಕೆ ಆಗಿದ್ದಾರೆ. ಈ ಹಿನ್ನೆಲೆ ಪಕ್ಷದ ಹಿರಿಯ ಮುಖಂಡರು ಸೇರಿ ಹಲವರು ಆರ್ ಅಶೋಕ್ ಅವರಿಗೆ ಶುಭ ಹಾರೈಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅಶೋಕ್, ರಾಜ್ಯದ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ಪಕ್ಷದ ಹಿರಿಯ ನಾಯಕರು, ಪದ್ಮನಾಭನಗರ ಕ್ಷೇತ್ರದ ಶಾಸಕರಾದ ಆರ್ ಅಶೋಕ್ ಅವರಿಗೆ ಶುಭಾಶಯಗಳು. ಸದನದಲ್ಲಿ ರಾಜ್ಯದ ಜನರ ಆಶೋತ್ತರಗಳಿಗೆ ದನಿಯಾಗಿ ಸಮರ್ಥವಾಗಿ ಕೆಲಸ ಮಾಡಲಿ ಎಂದು ಶುಭ ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಬೆಂಗಳೂರು:- ಲಕ್ಷ್ಮಿ ಹೆಬ್ಬಾಳ್ಕರ್ಗೆ ಸಂಕಷ್ಟ ಎದುರಾಗಿದ್ದು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದಿದ್ದು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಹೆಬ್ಬಾಳ್ಕರ್ ವಿರುದ್ಧ 600 ಕೋಟಿಗೂ ಹೆಚ್ಚು ಮೌಲ್ಯದ ಭ್ರಷ್ಟಾಚಾರದ ಆರೋಪ ಮಾಡಲಾಗಿದ್ದು, ಮಕ್ಕಳ ಪೌಷ್ಠಿಕ ಆಹಾರ ಸರಬರಾಜಿನಲ್ಲಿ ಅಕ್ರಮ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅನರ್ಹಗೊಂಡಿರುವ ಸಹಕಾರ ಸಂಸ್ಥೆಗಳಿಂದ ಅಂಗನವಾಡಿಗಳಿಗೆ ಪೌಷ್ಠಿಕ ಆಹಾರ ಸರಬರಾಜು ಮಾಡುವ ಟೆಂಡರ್ ನೀಡಿದ ಆರೋಪವನ್ನು ಸಚಿವರ ವಿರುದ್ಧ ಮಾಡಲಾಗಿದೆ. ಬ್ಲ್ಯಾಕ್ ಲಿಸ್ಟ್ನಲ್ಲಿರುವ ಕ್ರಿಸ್ಟಿ ಫ್ರೈಡ್ ಗ್ರಾಮ್ ಕಂಪನಿ ಜೊತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಇಲಾಖೆ ಅಧಿಕಾರಿಗಳು ಶಾಮೀಲು ಆರೋಪ ಮಾಡಲಾಗಿದೆ. ಈ ಬಗ್ಗೆ ಲೋಕಾಯುಕ್ತಾಗೆ ವಕೀಲ ನಟರಾಜ ಶರ್ಮಾ ದೂರು ನೀಡಿದ್ದಾರೆ ಗುತ್ತಿಗೆದಾರರಿಂದ ಅಂಗನವಾಡಿಗಳಿಗೆ ಪೂರೈಕೆಯಾಗುವ ಆಹಾರ ಗುಣಮಟ್ಟ ಇರುವುದಿಲ್ಲ. ಹೀಗಾಗಿ ಸ್ಥಳೀಯ ಸಂಘಗಳೇ ಆಹಾರ ಪೂರೈಕೆ ಮಾಡುವಂತೆ ಹೈಕೋರ್ಟ್ ಆದೇಶ ನೀಡಿತ್ತು. ಆದರೆ…
ಬೆಂಗಳೂರು:- ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು, ‘ಬದುಕೊಂದು ಮುಗಿಯದ ಸವಾಲು’ ಎಂದಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕವಾದ ನಂತರ ತಮ್ಮ ಅಸಮಾಧಾನವನ್ನು ಬಹಿರಂಗವಾಗಿಯೇ ವ್ಯಕ್ತಪಡಿಸುತ್ತಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು, ‘ಬದುಕೊಂದು ಮುಗಿಯದ ಸವಾಲು’ ಎಂದಿದ್ದಾರೆ. ನ ದೈನ್ಯಂ, ನ ಪಲಾಯನಂ. ಯೋಧ ಎಂದಿಗೂ ದೂರಲಾರ ಅಥವಾ ವಿಷಾದ ವ್ಯಕ್ತಪಡಿಸಲಾರ’ ಎಂದಿದ್ದಾರೆ. ‘ಯೋಧನ ಬದುಕಿನಲ್ಲಿ ಎದುರಾಗುವ ಯಾವುದೇ ಸವಾಲು ಒಳ್ಳೆಯದು ಅಥವಾ ಕೆಟ್ಟದ್ದು ಆಗಿರಲಾರದು. ಸವಾಲು ಎಂದರೆ ಅದು ಕೇವಲ ಸವಾಲು ಅಷ್ಟೇ’ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. https://x.com/BasanagoudaBJP/status/1725512450349396025?t=MHzEUJYmGDaRAc4t3OqAoQ&s=09 ಯತ್ನಾಳ್ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಮಂಡಾಳ್ ವಗ್ಗರಣಿ ಎಂಬುವವರು, ‘ಯತ್ನಾಳ ಸಾಹೇಬ್ರೆ, ಪಕ್ಷದ ನಿರ್ಧಾರಕ್ಕೆ ಬದ್ಧರಾಗಿರಬೇಕು ಅಲ್ವಾ … ಬಿಜೆಪಿ ಹೈ ಕಮಾಂಡ್ ನಿಮ್ಮ ಮಾತೇ ಯಾಕೆ ಕೇಳಬೇಕು ಎಂದು ವಾದಿಸುವಲ್ಲಿ ನೀವು ವಿಫಲ ಅನ್ನಿಸುತ್ತಿದೆ. ಮೋದಿ , ಅಮಿತ್ ಶಾ, ನಡ್ಡ ಅವರ ತೀರ್ಮಾನಕ್ಕೂ ವಿರೋಧ ಮಾಡಿದರೆ ಹೇಗೆ..ಸ್ವಲ್ಪ ಅಡ್ಜಸ್ಟ್ ಮಾಡ್ಕೊಳಿ’ ಎಂದು ಸಲಹೆ ನೀಡಿದ್ದಾರೆ.
ಹುಬ್ಬಳ್ಳಿ: ನಗರದ ಸುಪ್ರಸಿದ್ಧವಾದ ಹಜರತ್ ಸೈಯದ್ ಪತೇಷಾ ವಲಿ ದರ್ಗಾದಲ್ಲಿ ದರ್ಗಾಕ್ಕೆ ಸಾಮಾಜಿಕ ಕಾರ್ಯಕರ್ತ ರಮೇಶ ಮಹದೇವಪ್ಪನವರು ಭೇಟಿ ನೀಡಿ ಅಜ್ಜನ ಆಶೀರ್ವಾದ ಪಡೆದುಕೊಂಡರು. ಸಂದರ್ಭದಲ್ಲಿ ಇದರ ಜೊತೆಗೆ ಶ್ರೀ ದಾದಾಪೀರ್ ಬಿಜಾಪುರ ಅವರ ಗೆಳೆಯರ ಬಳಗದ ವತಿಯಿಂದ ಗೌರವ ಡಾಕ್ಟರ್ ಪ್ರಶಸ್ತಿ ಪುರಸ್ಕೃತರಾದ ಡಾ ರಮೇಶ ಮಹಾದೇವಪ್ಪನವರಿಗೆ ಆತ್ಮೀಯವಾಗಿ ಸನ್ಮಾನಿಸಲಾಯಿತು. ಕಲಂದರ ಮುಲ್ಲಾ, ಸರ್ವ ಧರ್ಮಗಳ ಭಾಂಧವರು, ಹಿರಿಯರು ಮುಂತಾದವರು ಭಾಗವಹಿಸಿದ್ದರು.
ಬೆಂಗಳೂರು:- ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಶಾಸಕರಾಗಿರುವ ಹಾಗೂ ಮಾಜಿ ಸಚಿವ ಆರ್ ಅಶೋಕ್ ಅವರನ್ನು ವಿಪಕ್ಷ ನಾಯಕನಾಗಿ ಆಯ್ಕೆ ಮಾಡಲಾಗಿದೆ. ಇನ್ನೂ ಇಂದು ಬಿಜೆಪಿ ಶಾಸಕ ಪಕ್ಷದ ಸಭೆಯನ್ನು ಬೆಂಗಳೂರಿನ ಬೆಂಗಳೂರಿನ ಐಟಿಸಿ ಗಾರ್ಡೇನಿಯಾ ಹೋಟೆಲ್ನಲ್ಲಿ ಹಮ್ಮಿಕೊಳ್ಳಲಾಗಿದ್ದು, ಇದೀಗ ಕೆಲ ಶಾಸಕರುಗಳು ಸಭೆಗೆ ಗೈರಾಗಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಶಿವರಾಮ್ ಹೆಬ್ಬಾರ್ ಹಾಗೂ ಎಸ್.ಟಿ. ಸೋಮಶೇಖರ್ ಸಭೆಗೆ ಗೈರಾಗಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಗೈರಾಗಿದ್ದಾರೆ. ಸಭೆಯ ಬಗ್ಗೆ ತಿಳಿದಿದ್ದರೂ ಸೋಮಶೇಖರ್ ದೆಹಲಿಗೆ ತೆರಳಲಿದ್ದಾರೆ. ಬೆಂಗಳೂರಿನ ಐಟಿಸಿ ಹೋಟೆಲ್ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಆರಂಭವಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ವಿಧಾನಸಭೆ, ಪರಿಷತ್ ವಿಪಕ್ಷ ನಾಯಕರ ಆಯ್ಕೆ ಬಗ್ಗೆ ಚರ್ಚೆ ಶುರುವಾಗಿದ್ದು, ವೀಕ್ಷಕರರಾಗಿ ನಿರ್ಮಲಾ, ದುಷ್ಯಂತ್ ಕುಮಾರ್ ಉಪಸ್ಥಿತರಿದ್ದಾರೆ.