Author: AIN Author

ಬಿಗ್‌ ಬಾಸ್‌ ಮನೆಯ (Bigg Boss House) ಆಟ ರಂಗೇರುತ್ತಿದೆ. ದಿನದಿಂದ ದಿನಕ್ಕೆ ಆಟ ರೋಚಕ ತಿರುವುಗಳನ್ನ ಪಡೆದುಕೊಳ್ಳುತ್ತಿದೆ. ಹೀಗಿರುವಾಗ ಪ್ರತಿ ವಾರದಂತೆ ಈ ವಾರವೂ ಕೂಡ ಸ್ಪರ್ಧಿಗಳ ಮೇಲೆ ಎಲಿಮಿನೇಷನ್ ಕತ್ತಿ ತೂಗುತ್ತಿದೆ. ಯಾರಿಗೆ ಈ ವಾರ ಆಟ ಅಂತ್ಯ ಆಗಲಿದೆ ಎಂಬ ಕೌತುಕ ಪ್ರೇಕ್ಷಕರಲ್ಲಿ ಮನೆ ಮಾಡಿದೆ ಶಾಂತವಾಗಿದ್ದ ಬಿಗ್ ಬಾಸ್ ಮನೆ ಈಗ ದ್ವೇಷ, ಕೋಪ, ಅಳುವಿನಿಂದ ಕೂಡಿದೆ. ಸೈಲೆಂಟ್ ಇದ್ದ ಸ್ಪರ್ಧಿಗಳು ಈಗ ವೈಲೆಂಟ್ ಆಗಿದ್ದಾರೆ. ದಿನದಿಂದ ದಿನಕ್ಕೆ ಆಟ ಮತ್ತಷ್ಟು ಟಫ್ ಆಗ್ತಿದೆ. ಈಗಾಗಲೇ ಬಿಗ್ ಮನೆಯಿಂದ ಸ್ನೇಕ್ ಶ್ಯಾಮ್, ರಕ್ಷಕ್‌ಗೆ ಗೇಟ್ ಪಾಸ್ ಸಿಕ್ಕಿದೆ. ಈ ಬಾರಿ ನಾಮಿನೇಷನ್ ಲಿಸ್ಟ್‌ನಲ್ಲಿ ವಿನಯ್ ಗೌಡ(Vinay Gowda), ತನಿಷಾ ಕುಪ್ಪಂಡ, ನಮ್ರತಾ ಗೌಡ, ತುಕಾಲಿ ಸಂತೂ, ಇಶಾನಿ, ಕಾರ್ತಿಕ್ ಮಹೇಶ್, ನೀತು ವನಜಾಕ್ಷಿ ಇದ್ದಾರೆ. ಎಲಿಮಿನೇಷನ್ ಕತ್ತಿ ಯಾರಿಗೆ ಬೀಸಲಿದೆ ಅನ್ನೋದೆ ವೀಕ್ಷಕರ ಸದ್ಯದ ತಲೆ ಬಿಸಿ ಆಗಿದೆ ಭಾಗ್ಯಶ್ರೀ (Bhagyashree) ಅವರು ದಸರಾ ಹಬ್ಬವಿದ್ದ…

Read More

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿಯಲ್ಲೊಂದು ಗೃಹಲಕ್ಷ್ಮಿ ಯೋಜನೆಯ ಹಣ ಇನ್ಮುಂದೆ ಫಲಾನುಭವಿಗಳಿಗೂ ಮೊದಲು ಹರಕೆಯ ಮೂಲಕ ಪ್ರತಿ ತಿಂಗಳು ನಾಡದೇವತೆ ಚಾಮುಂಡೇಶ್ವರಿ ಅರ್ಪಣೆ ಮಾಡಲಾಗುತ್ತದೆ. ಈ ಸಂಬಂಧ ಕಾಂಗ್ರೆಸ್ ಶಾಸಕ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದರು. ಈ ಪತ್ರಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮಕ್ಕೆ ಸೂಚಿಸಿದ್ದಾರೆ. https://ainlivenews.com/joint_pain_suprem_ray_treatment_reiki/ ಈ ಹಿನ್ನಲೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಫಲಾನುಭವಿಗಳಿಗೆ ಜಮಾಗೂ ಮುನ್ನಾ, ಗೃಹಲಕ್ಷ್ಮಿ ಯೋಜನೆಯ 2000 ಹಣವನ್ನು ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ಹರಕೆಯ ರೂಪದಲ್ಲಿ ಅರ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಿದ್ದಾರೆ ಎನ್ನಲಾಗುತ್ತಿದೆ. ಈ ಯೋಜನೆಯನ್ನ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ 2000 ರೂ ಹರಕೆಯ ರೂಪದಲ್ಲಿ ಸಲ್ಲಿಸೋ ಮೂಲಕ ಆರಂಭಿಸಲಾಗಿತ್ತು. ಹೀಗಾಗಿ ಇನ್ಮುಂದೆ ಮೊದಲು ಫಲಾನುಭವಿಗಳಿಗೆ 2000 ಹಣ ಜಮಾಗೂ ಮುನ್ನಾ ಚಾಮುಂಡೇಶ್ವರಿಗೆ ಹರಕೆಯ ರೂಪದಲ್ಲಿ ಸರ್ಕಾರ ಅರ್ಪಣೆ ಮಾಡಲಿದೆ.

Read More

ಧಾರವಾಡ: ಧಾರವಾಡ ಶಹರ ಠಾಣೆಯ ಪೊಲೀಸ್ ಅಧಿಕಾರಿಯನ್ನು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿಯವರು ಸಾರ್ವಜನಿಕವಾಗಿ ತರಾಟೆಗೆ ತೆಗೆದುಕೊಳ್ಳುವ ಮೂಲಕ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ, ಕೇಂದ್ರ ಸಚಿವರ ವಿರುದ್ಧ ಧಾರವಾಡದಲ್ಲಿ ದಲಿತ ಸಂಘಟನೆಯ ಕಾರ್ಯ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ ಮುಖಂಡರು ಹಾಗೂ ಕಾರ್ಯಕರ್ತರು, ಕೇಂದ್ರ ಸಚಿವರ ನಡೆಯನ್ನು ಖಂಡಿಸಿ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಇತ್ತೀಚೆಗೆ ದೀಪಾವಳಿಯ ಹಬ್ಬದ ದಿನದಂದು ಕೇಂದ್ರ ಸಚಿವರ ನಿವಾಸಕ್ಕೆ ಧಾರವಾಡ ಶಹರ ಠಾಣೆಯ ಪೊಲೀಸ ಅಧಿಕಾರಿ ಕಾಡದೇವರಮಠ ಅವರು ತೆರಳಿದ್ದರು. ಈ ಸಂದರ್ಭದಲ್ಲಿ ತಮ್ಮ ಕಾರ್ಯಕರ್ತರ ಪರವಾಗಿ ಮಾಧ್ಯಮ ಮುಂದೆ ಪೊಲೀಸ್ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡು ಅವಮಾನ ಮಾಡಿದ್ದಾರೆ. ಪೊಲೀಸ್ ಅಧಿಕಾರಿ ಕರ್ತವ್ಯ ಲೋಪವಾದಲ್ಲಿ ತನಿಖೆಗೆ ಮಾಡಿಸಬೇಕು. ಅದನ್ನು ಬಿಟ್ಡು ಸಾರ್ವಜನಿಕವಾಗಿ ಈ ರೀತಿ ತರಾಟೆಗೆ ತೆಗೆದುಕೊಲ್ಳುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದರು.…

Read More

ಬಳ್ಳಾರಿ: ಬಳ್ಳಾರಿ ಸಂಸದ ದೇವೇಂದ್ರಪ್ಪ  ಅವರ ಪುತ್ರ ಪ್ರೊ. ರಂಗನಾಥ್‌  ಅವರ ವಿರುದ್ಧ ಯುವತಿಗೆ ವಂಚನೆ ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಸಂಸದ ದೇವೇಂದ್ರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಆ ಯುವತಿ ಬ್ಲ್ಯಾಕ್‌ ಮೇಲ್‌ ಮಾಡುತ್ತಿದ್ದಾಳೆ. ನನ್ನ ಮಗ ಸಾಕಷ್ಟು ಹಣ ಕಳೆದುಕೊಂಡಿದ್ದಾನೆ ಎಂದು ಪ್ರಕರಣದ ಬಗ್ಗೆ ಸಂಸದ ಆರ್‌ ದೇವೇಂದ್ರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಹರಪನಹಳ್ಳಿ ತಾಲೂಕಿನ ಅರಸಿಕೆರೆ ನಿವಾಸದಲ್ಲಿ ಮಾತನಾಡಿದ ಅವರು, ಸಾಮಾಜಿಕ ನ್ಯಾಯ ಸಮಿತಿ ಸಭೆಗಾಗಿ ಕಾರಿನಲ್ಲಿ ಹೋಗುವಾಗ ಯುವತಿಯ ಕರೆ ಬಂದಿತ್ತು. ನಿಮ್ಮ ಮಗ ಮದುವೆ ಆಗುತ್ತೇನೆ ಎಂದು ಹೇಳಿ ಒಂದೂವರೆ ವರ್ಷದಿಂದ ವಂಚನೆ ಮಾಡಿದ್ದಾನೆ. ನೀವು ದೊಡ್ಡವರು ಅಂತ ಕರೆ ಮಾಡಿದ್ದೇನೆ ಎಂದಳು. ನಾನು ಕಾನೂನು ಪ್ರಕಾರ ಹೋಗು ಅಂತ ಹೇಳಿದ್ದೇನೆ ಎಂದು ತಿಳಿಸಿದರು.  ಆ ಯುವತಿ ಬ್ಲಾಕ್ ಮೇಲ್ ಮಾಡ್ತಿದ್ದಾಳೆ. ಚೈನು, ಉಂಗುರ ಎಲ್ಲ‌ ಕಳೆದುಕೊಂಡಿದ್ದೇನೆ ಎಂದು ಮಗ ಹೇಳಿದ್ದಾನೆ. ನನ್ನ ಮಗನಿಗೆ ಮದ್ವೆ ಮಾಡಿ 10-12 ವರ್ಷ ಆಯ್ತು. ಮಗ-ಸೊಸೆ ಚನ್ನಾಗಿದ್ದಾರೆ…

Read More

ಬೆಂಗಳೂರು: ನಗರದ ಜಿಕೆವಿಕೆಯಲ್ಲಿ ನಡೆಯುತ್ತಿರುವ ಕೃಷಿ ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಚಾಲನೆ ಬಳಿಕ ಸಿಎಂ ಸಿದ್ದರಾಮಯ್ಯ ಹೊಸ ತಳಿಗಳ ಬಗ್ಗೆ ಮಾಹಿತಿ ಪಡೆದರು.  ಸಿಎಂ ಸಿದ್ದರಾಮಯ್ಯ ಅವರಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸಾಥ್ ನೀಡಿದರು. https://ainlivenews.com/joint_pain_suprem_ray_treatment_reiki/ ಕೃಷಿ ಮೇಳದಲ್ಲಿ ಅತ್ಯಂತ ಸಂತೋಷದಿಂದ ಭಾಗಿಯಾಗಿದ್ದೇನೆ. ಸಂತೋಷದಿಂದ ಉದ್ಘಾಟನೆ ಮಾಡಿದ್ದೇನೆ. ಕೃಷಿ ಮೇಳಕ್ಕೆ ಬರಲುದಕ್ಕೆ ಆಗಲ್ಲ ಅಂತ ಗುರವಾರ ಸಂಜೆ ಹೇಳಿದ್ದೆ. ಮೈಸೂರಿನ ಕಾರ್ಯಕ್ರಮಕ್ಕೆ ಮುಂದಕ್ಕೆ ಹಾಕಿಸಿ ಕೃಷಿಮೇಳಕ್ಕೆ ಬರುವಂತೆ ಕೃಷಿ ಸಚಿವರು ಒತ್ತಾಯಿಸಿದರು. ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಕರ್ನಾಟಕದಲ್ಲಿ ಸ್ಥಾಪನೆಯಾದ ಮೊದಲ ವಿಶ್ವ ವಿದ್ಯಾಲಯ. ವಿಶ್ವವಿದ್ಯಾಲಯದಲ್ಲಿ ಏನೆಲ್ಲ ತಂತ್ರಜ್ಞಾನ ಇರುತ್ತೆ? ನೀರಿನ ಸಂರಕ್ಷಣೆ ಹೇಗೆ ? ಭೂಮಿ ಫಲವತತ್ತೆ ಕಾಪಾಡುವುದು ಹೇಗೆ ? ಎಂಬ ವಿಷಯವನ್ನ ತಿಳಿಸುವ ಕೆಲಸ ವಿಶ್ವವಿದ್ಯಾನಿಲಯ ಮಾಡುತ್ತೆ. ರಾಜ್ಯದ  ಹೆಚ್ಚಿನ ಜನರು ಕೃಷಿ ಮೇಲೆ ಅವಲಂಬಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Read More

ಗದಗ: ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದಲ್ಲಿ ಇರುವ ಶೌಚಾಲಯದ ಗೋಡೆಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಕಳಸಾಪೂರ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದ ರಭಸಕ್ಕೆ ಕಾರ್‌ನಲ್ಲಿರುವ ಬಲೂನ್ ಬಿಚ್ಚಿದರೂ ಕೂಡಾ ಇಬ್ಬರ ಪ್ರಾಣ ಮಾತ್ರ ಉಳಿದಿಲ್ಲ. ಮೃತರನ್ನು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಸಿದ್ದಯ್ಯ ಪಾಟೀಲ್ ಹಾಗೂ ಬಾಬು ತಾರಿಹಾಳ ಎಂದು ಗುರುತಿಸಲಾಗಿದೆ. ಮತ್ತೊಬ್ಬ ಶಶಿ ಪಾಟೀಲ್ ಅನ್ನೋರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳನ್ನು ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಚಿಕಿತ್ಸೆ ನೀಡಲಾಗ್ತಿದೆ. ಆಸ್ಪತ್ರೆಗೆ ಗದಗ ಎಸ್ಪಿ ಬಿ.ಎಸ್. ನೇಮಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಕಲಬುರಗಿ: ಕಲಬುರಗಿಯಲ್ಲಿ ನಡೆದ KEA ಪರೀಕ್ಷೆ ಅಕ್ರಮ ಪ್ರಕರಣದ ಆರೋಪಿ RD ಪಾಟೀಲ್ ಗೆ ಪೋಲೀಸ್ ಪೇದೆಯೊರ್ವ ಸಲಾಂ ಹೊಡೆದ ಘಟನೆ ಕಲಬುರಗಿಯ ಜಿಲ್ಲಾಸ್ಪತ್ರೆ ಬಳಿ ನಡೆದಿದೆ. ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಸ್ಥಳದಲ್ಲಿದ್ದ ಪೇದೆ ಕೈ ಎತ್ತಿ ನಮಸ್ಕಾರ ಅಂತ ಹೇಳಿದಾಗ RD ಸಹ ವಾಪಾಸ್ ನಮಸ್ಕಾರ ಅಂತ ಹೇಳಿದ್ದಾನೆ.. ಇದೇವೇಳೆ ಬಂಧನ ಮಾಡಿದ ಅಧಿಕಾರಿಗಳ ವಿರುದ್ಧ ಕಿಡಿಕಾರಿದ RD ಇದೊಂದು ಇಲ್ಲಿಗಲ್ ಅರೆಸ್ಟ್ . ಸುಮ್ನೆ ಬಂಧಿಸಿ ಹರೆಸ್ಮೆಂಟ್ ಮಾಡ್ತಿದ್ದಾರೆ ಅಂತ ಆಕ್ರೋಶ ಹೊರಹಾಕಿದ್ದಾನೆ..

Read More

ಬೆಂಗಳೂರು: ಪೊಗರು ಮಾತುಗಳು, ಬ್ಲ್ಯಾಕ್ ಮೇಲ್ ಗಳಿಗೆ ನಾನು ಹೆದರುವುದಿಲ್ಲ. ಇದು ಅವರಿಗೂ ಗೊತ್ತಿದೆ. ಅವರು ಕೇಳಿರುವ ಎಲ್ಲಾ ಲೆಕ್ಕ ದಾಖಲೆಗಳನ್ನು ಕೊಡಲು ಸಿದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಉತ್ತರಿಸಿದರು. ಕಾಂಗ್ರೆಸ್ ನವರು ಮೇಕೆದಾಟು ಪಾದಯಾತ್ರೆ, ಕನಕೋತ್ಸವ ಮಾಡಿದಾಗ ಅನುಮತಿ ಪಡೆದು ಕರೆಂಟ್ ಬಳಸಿದ್ದರೆ, ಲುಲು ಮಾಲ್ ಸೇರಿದಂತೆ ದೊಡ್ಡ ಕಟ್ಟಡ ಕಟ್ಟುವಾಗ ಎಷ್ಟು ಕರೆಂಟ್ ಎಳೆದುಕೊಂಡಿಲ್ಲ, ಅದಕ್ಕೆ ಲೆಕ್ಕ ಕೊಡುವರೇ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಮಾಧ್ಯಮಗಳು ಕೇಳಿದಾಗ ಶಿವಕುಮಾರ್ ಅವರು ಈ ರೀತಿ ಉತ್ತರಿಸಿದರು. https://ainlivenews.com/joint_pain_suprem_ray_treatment_reiki/ “ಕುಮಾರಸ್ವಾಮಿ ಹುಚ್ಚರಾಗಿದ್ದಾರೆ. ಅವರು ತಮ್ಮ ತಾಳ್ಮೆ ಕಳೆದುಕೊಂಡಿದ್ದಾರೆ. ಹತಾಶೆಯಲ್ಲಿ ಅವರು ಬಾಯಿಗೆ ಬಂದದ್ದು ಮಾತನಾಡುತ್ತಿದ್ದಾರೆ. ಅವರು ಏನೇನು ಕೇಳುತ್ತಾರೆ, ಅವರ ಆಚಾರ ವಿಚಾರ, ಮಾತುಗಳಿಗೆ ರಾಜ್ಯದ ಜನ ಈಗಾಗಲೇ ಉತ್ತರ ಕೊಟ್ಟಿದ್ದಾರೆ. ಇನ್ನು ಬೇಕಾದರೆ ಆ…

Read More

ಮೈಸೂರು: ಯತೀಂದ್ರ ಸಿದ್ದರಾಮಯ್ಯ ವಿಡಿಯೋ ವೈರಲ್ ವಿಚಾರವಾಗಿ ಮಾತನಾಡುತ್ತಾ ವರ್ಗಾವಣೆ ದಂಧೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದ ಬಿಜೆಪಿ ಶಾಸಕ ಡಾ.ಅಶ್ವತ್ಥ ನಾರಾಯಣ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಅಶ್ವಥ್ ನಾರಾಯಣ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಲಾಗುತ್ತಿದೆ. ಹುಚ್ಚ ಅಶ್ವತ್ಥ ನಾರಾಯಣ್ ಎಂಬ ಪ್ಲೇ ಕಾರ್ಡ್ ಹಿಡಿಯಲಾಗಿದೆ. https://ainlivenews.com/what-happens-if-tea-coffee-is-given-to-children/ ಅಶ್ವಥ್ ನಾರಾಯಣ್ ರವರು ಡಾ ಯತೀಂದ್ರ ಸಿದ್ದರಾಮಯ್ಯ ವರ್ಗಾವಣೆ ದಂಧೆ ಮಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ವರ್ಗಾವಣೆ ದಂಧೆ ಇರುವುದು ಬಿಜೆಪಿಯಲ್ಲಿ. ಕಾಂಗ್ರೆಸ್ ಆಗಲಿ ಯತೀಂದ್ರ ಸಿದ್ದರಾಮಯ್ಯರಾಗಲಿ ಯಾವುದೇ ವರ್ಗಾವಣೆ ದಂಧೆಯಲ್ಲಿ ಭಾಗಿಯಾಗಿಲ್ಲ. ಅಶ್ವಥ್ ನಾರಾಯಣ್ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರು ಅದು ಸಿಗಲಿಲ್ಲ. ಹಾಗಾಗಿ ಈ ರೀತಿ ಹೇಳಿಕೆ ನೀಡಿದರೆ ವಿಪಕ್ಷ ನಾಯಕನನ್ನಾಗಿ ಮಾಡುತ್ತಾರೆ ಎಂದು ಲೋಕೇಶ್ ಪಿಯಾ ಹೇಳಿದರು.

Read More

ತಿ.ನರಸೀಪುರ: ಹೈನುಗಾರಿಕೆಯು ಗ್ರಾಮೀಣ ಭಾಗದ ಜನರ ಜೀವನೋಪಾಯಕ್ಕೆ ಅನುಕೂಲವಾಗುವ ಕ್ಷೇತ್ರವಾಗಿದೆ. ಇದಕ್ಕೆ ಪೂರಕವಾಗಿ ಹಾಲು ಉತ್ಪಾದಕರ ಏಳಿಗೆಗೆ ನಮ್ಮ ಸರ್ಕಾರ ಶ್ರಮಿಸಲಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು. ತಿ.ನರಸೀಪು ತಾಲ್ಲೂಕಿನ ಕೇತುಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಹಾಲು ಉತ್ಪಾದಕ ಸಹಕಾರ ಸಂಘದ ಸಭಾಂಗಣವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಅವರು, ವ್ಯವಸಾಯದ ಜೊತೆಗೆ ಹಳ್ಳಿಗರಿಗೆ ಪ್ರಮುಖ ಆದಾಯದ ಮೂಲ ಕ್ಷೀರಕ್ಷೇತ್ರವಾಗಿದೆ. ಸಹಕಾರ ಕ್ಷೇತ್ರದಲ್ಲಿ ಪ್ರತಿಯೊಬ್ಬರು ಪಕ್ಷಭೇದವಿಲ್ಲದೆ ಅಭಿವೃದ್ಧಿಗಾಗಿ ದುಡಿಯಬೇಕು ಎಂದು ಸಲಹೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರವು ಹಾಲು ಉತ್ಪಾದಕರಿಗೆ ನೆರವಾಗುವ ನಿಟ್ಟಿನಲ್ಲಿ ಕಾಲಕಾಲಕ್ಕೆ ಪ್ರೋತ್ಸಾಹ ದನ ಹೆಚ್ಚಿಸುವ ಮೂಲಕ ಆರ್ಥಿಕವಾಗಿ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದ ಪ್ರತಿಯೊಬ್ಬರೂ ಸ್ವಾವಲಂಬಿ ಜೀವನ ನಡೆಸುವ ಮೂಲಕ ಸ್ವಾಭಿಮಾನದ ಬದುಕಿಗೆ ಪೂರವಾಗಿದೆ ಎಂದು ಹೇಳಿದರು. https://ainlivenews.com/what-happens-if-tea-coffee-is-given-to-children/ ಕ್ಷೇತ್ರದ ಜನರು ನನ್ನ ಮೇಲೆ ಅಪಾರವಾದ ನಂಬಿಕೆ ಇಟ್ಟು, ಚುನಾವಣೆಯಲ್ಲಿ…

Read More