ಬೆಂಗಳೂರು: ಹಿಂದೆ ಲುಲು ಮಾಲ್ ಕಾಮಗಾರಿ ವೇಳೆ ಕರೆಂಟ್ ಬಿಲ್ ನೀಡಿಲ್ಲ. ಲುಲು ಮಾಲ್ ಆರಂಭಕ್ಕೂ ಮುನ್ನ 6 ತಿಂಗಳು ಕರೆಂಟ್ ನೀಡಿಲ್ಲ. ಲುಲು ಮಾಲ್ ಬಳಕೆ ಮಾಡಿದ ವಿದ್ಯುತ್ ಬಿಲ್ಗೆ ದಂಡ ಹಾಕುತ್ತೀರಾ? ಎಂದು ಪರೋಕ್ಷವಾಗಿ ಡಿಕೆ ಶಿವಕುಮಾರ್ ವಿರುದ್ಧ ಹೆಚ್ಡಿ ಕುಮಾರಸ್ವಾಮಿ ಹರಿಹಾಯ್ದರು. https://ainlivenews.com/joint_pain_suprem_ray_treatment_reiki/ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 71 ಯೂನಿಟ್ ವಿದ್ಯುತ್‌ಗೆ 3 ಪಟ್ಟು ದಂಡ ವಿಧಿಸಿದ್ದಾರೆ. ಒಟ್ಟು 2,526 ರೂಪಾಯಿ ದಂಡ ಹಾಕಬೇಕಿತ್ತು. ಆದರೆ ನನ್ನ ಮನೆಗೆ ತೆಗೆದುಕೊಂಡಿರುವ 33 kV ವಿದ್ಯುತ್ ಬಳಕೆ ಸೇರಿ 68,526 ರೂ. ದಂಡ ವಿಧಿಸಿದ್ದಾರೆ. ಒಬ್ಬ ಮಾಜಿ ಸಿಎಂಗೆ ಹೀಗೆ ಆದರೆ ಸಾಮಾನ್ಯ ಜನರಿಗೆ ಕಥೆ ಏನು ಎಂದು ಪ್ರಶ್ನೆ ಮಾಡಿದ್ದಾರೆ. ನನಗೆ ವಿಧಿಸಿದ ದಂಡವನ್ನು (Fine) ನಾನು ಪಾವತಿ ಮಾಡಿದ್ದೇನೆ. ವಿದ್ಯುತ್ ಬಿಲ್‌ನಲ್ಲಿ ಲೋಪ ಇರುವ ಹಿನ್ನೆಲೆಯಲ್ಲಿ ನಿಮ್ಮ ನಿಯಮ ಏನಿದೆ? ನಿಯಮದ ಲೆಕ್ಕಾಚಾರದಲ್ಲಿ ಪರಿಶೀಲನೆ ಮಾಡಿ ಎಂದು ಪತ್ರ ಬರೆದಿದ್ದೇನೆ ಎಂದು…
Author: AIN Author
ಬೆಂಗಳೂರು: ಬಿಜೆಪಿಯ ಅತೃಪ್ತ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಮನೆಗೆ ಆಗಮಿಸಿದ ಕೇಂದ್ರದ ವೀಕ್ಷಕರ ತಂಡ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್, ದುಶ್ಯಂತ್ ಗೌತಮ್ ಕುಮಾರ್ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಭೇಟಿ ಯತ್ನಾಳ್ ಜೊತೆಯಲ್ಲಿ ಕೇಂದ್ರದ ವೀಕ್ಷಕರ ತಂಡದ ಮಾತುಕತೆ ನಗರದ ಪ್ರಕಾಶ್ ನಗರದಲ್ಲಿರುವ ಬಸನಗೌಡ ಪಾಟೀಲ್ ಯತ್ನಾಳ್ ನಿವಾಸ
ಬೆಂಗಳೂರು: ವಿದ್ಯುತ್ ಕಳ್ಳತನ ಆರೋಪ ಸಂಬಂಧ ಬೆಸ್ಕಾಂ ಕುಮಾರಸ್ವಾಮಿ ಅವರಿಗೆ ದಂಡ ವಿಧಿಸಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಕುಮಾರಸ್ವಾಮಿ, ಬೆಸ್ಕಾಂ ಇಲಾಖೆ ಅಧಿಕಾರಿಗಳು 68,526 ರೂಪಾಯಿ ದಂಡ ವಿಧಿಸಿದ್ದಾರೆ. ದೀಪಾವಳಿ ಸಂಧರ್ಭದಲ್ಲಿ ನಮ್ಮ ಮನೇಲಿ ಆದ ಅಚಾತುರ್ಯದ ಬಗ್ಗೆ ನಾನು ವಿಷಾದ ವ್ಯಕ್ತಪಡಿಸಿದ್ದೇನೆ. ಕರೆಂಟ್ ಕಳ್ಳ ಅಂತ ನನಗೆ ಲೇಬಲ್ ಬೇರೆ ಕೊಟ್ಟಿದ್ದಾರೆ. ಸಿಎಂ ಡಿಸಿಎಂ ಸೇರಿ ಪಟಾಲಾಂ ಎಲ್ಲರೂ ಹೀಗೆ ಹೇಳುತ್ತಿದ್ದಾರೆ. ಬೆಸ್ಕಾಂ ಬಿಲ್‌ನಲ್ಲಿ ಅವರ ಲೆಕ್ಕಾಚಾರದಲ್ಲಿ 2.5 ಕಿಲೋ ವ್ಯಾಟ್ ಉಪಯೋಗ ಅಂತ ಇದೆ. 2526 ರೂಪಾಯಿ ಹಾಕಿದ್ದಾರೆ. ನಮ್ಮ ಮನೆಯಲ್ಲಿ ಇರುವುದು 33 ಕಿಲೋ ವ್ಯಾಟ್ ಪರ್ಮಿಷನ್ ತಗೊಂಡಿದ್ದೇನೆ. ನಾನು ನಿತ್ಯ ಉಪಯೋಗ ಮಾಡುವ ಕರೆಂಟ್ ಇದು. ಹೀಗಾಗಿ ಮಹಜರ್ ಕಾಪಿ ಕೇಳಿದ್ದೇನೆ ಎಂದರು.
ಬೆಂಗಳೂರು: ತೆಲಂಗಾಣದಲ್ಲಿ (Telangana) ಚುನಾವಣಾ ಭಾಷಣದ ವೇಳೆ ಸಚಿವ ಜಮೀರ್ ಅಹಮದ್ (Zameer Ahmed Khan) ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಮುಸ್ಲಿಂ ಸ್ಪೀಕರ್ ಯುಟಿ ಖಾದರ್‌ಗೆ (UT Khader) ಈಗ ಬಿಜೆಪಿಯವರೂ (BJP) ನಮಸ್ಕರಿಸುತ್ತಾರೆನ್ನುವ ಮೂಲಕ ವಿವಾದವನ್ನು ತಮ್ಮ ಮೈಮೇಲೆ ಎಳೆದುಕೊಂಡಿದ್ದಾರೆ. https://ainlivenews.com/joint_pain_suprem_ray_treatment_reiki/ ತೆಲಂಗಾಣದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿ ಭಾಷಣದ ವೇಳೆ ಹೇಳಿಕೆ ನೀಡಿದ ಜಮೀರ್, ಮುಸ್ಲಿಮರಲ್ಲಿ 17 ಮಂದಿಗೆ ಟಿಕೆಟ್ ನೀಡಲಾಗಿತ್ತು. ಈ ಪೈಕಿ 7 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದೇವೆ. ಅದರಲ್ಲಿ 5 ಜನರಿಗೆ ಕಾಂಗ್ರೆಸ್ ಅಧಿಕಾರ ನೀಡಿದೆ. ನನಗೆ 3 ಖಾತೆ ನೀಡಿ ಮಂತ್ರಿ ಮಾಡಿದೆ. ರಹೀಂ ಖಾನ್ ಮಂತ್ರಿಯಾಗಿದ್ದಾರೆ. ನಸೀರ್ ಅಹ್ಮದ್ ಸಿಎಂ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದಾರೆ ಎಂದು ಹೇಳಿದರು. ರಾಜಕೀಯ ಇತಿಹಾಸದಲ್ಲಿ ಮುಸ್ಲಿಂ ವ್ಯಕ್ತಿಯನ್ನು ಸ್ಪೀಕರ್ ಮಾಡಿರಲಿಲ್ಲ. ಈಗ ಮೊದಲ ಬಾರಿಗೆ ಮುಸ್ಲಿಂ ವ್ಯಕ್ತಿಯನ್ನು ಸ್ಪೀಕರ್ ಮಾಡಿದ್ದು ಕಾಂಗ್ರೆಸ್ ಪಕ್ಷ. ಈಗ ದೊಡ್ಡ ದೊಡ್ಡ ಬಿಜೆಪಿ ನಾಯಕರು ಕೂಡಾ ಸ್ಪೀಕರ್ ಯುಟಿ ಖಾದರ್ ಅವರಿಗೆ ನಮಸ್ಕಾರ ಎನ್ನುತ್ತಾರೆ.…
ಕಲಬುರಗಿ: ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಕರದಳ್ಳಿಯಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದಲ್ಲಿ ಇದೇ ತಿಂಗಳ 28 ರಂದು ಲೋಕ ಕಲ್ಯಾಣಾರ್ಥವಾಗಿ ಪ್ರತ್ಯಂಗಿರ ಹೋಮ ಹಮ್ಮಿಕೊಳ್ಳಲಾಗಿದೆ ಅಂತ ಪ್ರಣವಾನಂದ ಶ್ರೀಗಳು ಹೇಳಿದ್ದಾರೆ.. ಕಲಬುರಗಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಶ್ರೀಗಳು, ಉತ್ತರ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಬಹುದೊಡ್ಡ ರೀತಿಯಲ್ಲಿ ಪ್ರತ್ಯಂಗಿರ ಹೋಮ ಮಾಡಲಿದ್ದೇವೆ..ಮಾತ್ರವಲ್ಲ ಧಾರ್ಮಿಕ ಸಭೆ ನಡೆಯಲಿದೆ ಅಂತ ಹೇಳಿದ್ರು..ನಿತೀನ್ ಗುತ್ತೇದಾರ್ ಸದಾನಂದ ಪೆರ್ಲ ಸೇರಿದಂತೆ ಈಡಿಗ ಸಮಾಜದ ಪ್ರಮುಖರು ಸುದ್ದಿಗೋಷ್ಠಿಯಲ್ಲಿ ಉಪಸ್ತಿತರಿದ್ದರು..
ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮಕ್ಕಾಗಿ ಮನೆಗೆ ವಿದ್ಯುತ್ ಅಲಂಕಾರ ಮಾಡಲು ಅಕ್ರಮ ವಿದ್ಯುತ್ ಸಂಪರ್ಕ ಪಡೆದ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಬೆಸ್ಕಾಂಗೆ ದಂಡ ಪಾವತಿಸಿದ್ದಾರೆ. ದಂಡ ಕಟ್ಟುವ ಮುನ್ನ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದ ಕುಮಾರಸ್ವಾಮಿ,ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. https://ainlivenews.com/joint_pain_suprem_ray_treatment_reiki/ ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ. ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ. ದಂಡ ಕಟ್ಟುತ್ತೇನೆ. ಇದನ್ನೇ ದೊಡ್ಡದು ಮಾಡಿ…
ಬೆಂಗಳೂರು: ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಇಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಅವರ ಆರ್ ಟಿ ನಗರದ ನಿವಾಸದಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ವಿಧಾನಸಭೆ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕರ ಆಯ್ಕೆ ವಿಚಾರ ಸಂಬಂಧ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ವೀಕ್ಷಕರು ಬೆಂಗಳೂರಿಗೆ ಆಗಮಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಆಗಮಿಸಿದ್ದಾರೆ. ವೀಕ್ಷಕರು ಸಂಜೆ ನಡೆಯುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯ ಬಿಜೆಪಿ ಕಚೇರಿಗೆ ಆಗಮಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ರಾಜ್ಯಾಧ್ಯಕ್ಷ ವಿಜಯೇಂದ್ರ ಸ್ವಾಗತಿಸಿದರು. ವಿಧಾನಸಭೆ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕರ ಆಯ್ಕೆ ವಿಚಾರ ಸಂಬಂಧ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ವೀಕ್ಷಕರು ಬೆಂಗಳೂರಿಗೆ ಆಗಮಿಸಿದ್ದಾರೆ.
ಬೆಂಗಳೂರು: ಬಳ್ಳಾರಿಯ (Bellary) ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನಿಂದ ಪ್ರೀತಿ ಹೆಸರಲ್ಲಿ ವಂಚನೆಯ ಆರೋಪ ಕೇಳಿಬಂದಿದೆ. ಎಂಪಿ ದೇವೆಂದ್ರಪ್ಪ ಅವರ ಮಗನ ವಿರುದ್ಧ ಯುವತಿಯೊಬ್ಬಳು ಗಂಭೀರ ಆರೋಪ ಮಾಡಿದ್ದಾಳೆ. ಮೈಸೂರಿನಲ್ಲಿ (Mysuru) ಲೆಕ್ಚರರ್ ಆಗಿ ಕಾರ್ಯನಿರ್ವಹಿಸುತ್ತಿರುವ ರಂಗನಾಥ್ (Ranganath) ಬೆಂಗಳೂರು (Bengaluru) ಮೂಲದ ಯುವತಿಗೆ ವಂಚಿಸಿರುವುದಾಗಿ (Fraud) ಆರೋಪಿಸಲಾಗಿದೆ. ಒಂದೂವರೆ ವರ್ಷದ ಹಿಂದೆ ಸ್ನೇಹಿತರ ಮೂಲಕ 42 ವರ್ಷದ ರಂಗನಾಥ್‌ಗೆ 24 ವರ್ಷದ ಯುವತಿಯ ಪರಿಚಯವಾಗಿತ್ತು. ನಂತರ ಯುವತಿಯೊಂದಿಗೆ ರಂಗನಾಥ್ ಲವ್ವಿಡವ್ವಿ ಶುರುಮಾಡಿದ್ದರು ಎಂಬ ಆರೋಪ ಬಂದಿದೆ. ಕಳೆದ ಜನವರಿಯಲ್ಲಿ ಮೈಸೂರಿನ ಖಾಸಗಿ ಹೋಟೇಲ್ ಒಂದರಲ್ಲಿ ಇಬ್ಬರೂ ಲೈಂಗಿಕ ಸಂಪರ್ಕ ಬೆಳೆಸಿದ್ದರು. ಬಳಿಕ ಯುವತಿ ರಂಗನಾಥ್‌ಗೆ ತನ್ನನ್ನು ಮದುವೆಯಾಗುವಂತೆ ಕೇಳಿಕೊಂಡಿದ್ದಳು. ಆದರೆ ಬಳಿಕ ರಂಗನಾಥ್ ಯುವತಿಯನ್ನು ಕಡೆಗಣಿಸಲು ಪ್ರಾರಂಭಿಸಿದ್ದರು. ನಿನ್ನನ್ನು ಮದುವೆ ಆಗಲ್ಲ, ಏನು ಮಾಡ್ತೀಯೋ ಮಾಡಿಕೋ ಎಂದು ರಂಗನಾಥ್ ಹೇಳಿರುವುದಾಗಿ ಸಂತ್ರಸ್ತೆ ಆರೋಪಿಸಿದ್ದಾಳೆ. ಇದೆಲ್ಲದರ ಬಳಿಕ ಯುವತಿ ರಂಗನಾಥ್ ವಿಚಾರವನ್ನು ದೇವೇಂದ್ರಪ್ಪ ಅವರ ಗಮನಕ್ಕೆ ತಂದಿದ್ದಾಳೆ. ಆದರೆ ಯುವತಿಯ ವಿರುದ್ಧ ಎಂಪಿ…
ನವದೆಹಲಿ: ಮಧ್ಯಪ್ರದೇಶ(Madhya Pradesh) ಮತ್ತು ಛತ್ತೀಸ್‌ಗಢ(Chhattisgarh) ವಿಧಾನಸಭೆ ಚುನಾವಣೆಗೆ ಮತದಾನ ಆರಂಭವಾಗಿದೆ. ಮಧ್ಯಪ್ರದೇಶದ ಎಲ್ಲಾ 230 ಸ್ಥಾನಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. 252 ಮಹಿಳೆಯರು ಸೇರಿದಂತೆ ಒಟ್ಟು 2,533 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಛತ್ತೀಸ್‌ಗಢದಲ್ಲಿ ಎರಡನೇ ಮತ್ತು ಕೊನೆಯ ಹಂತದಲ್ಲಿ 70 ಸ್ಥಾನಗಳಿಗೂ ಮತದಾನ ನಡೆಯಲಿದೆ. ನವೆಂಬರ್ 7 ರಂದು 20 ಸ್ಥಾನಗಳಿಗೆ ಮತದಾನ ನಡೆದಿದೆ. ರಾಜ್ಯದ 70 ಸ್ಥಾನಗಳಲ್ಲಿ 958 ಅಭ್ಯರ್ಥಿಗಳು ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಪ್ರಚಾರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಸಂಪೂರ್ಣ ಒತ್ತು ನೀಡಿದೆ. ಆದರೆ ಪ್ರಚಾರದಲ್ಲಿ ಬಿಜೆಪಿ ಕಾಂಗ್ರೆಸ್ಗಿಂತ ಮೇಲುಗೈ ಸಾಧಿಸಿದೆ. ಇದೀಗ ಶುಕ್ರವಾರ ನಡೆಯಲಿರುವ ಮತದಾನದಲ್ಲಿ ಮತದಾರರು ತಮ್ಮ ನಿರ್ಧಾರವನ್ನು ಇವಿಎಂಗಳಲ್ಲಿ ಮುದ್ರೆ ಹಾಕಲಿದ್ದಾರೆ. https://ainlivenews.com/what-happens-if-tea-coffee-is-given-to-children/ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ 36 ಸಭೆಗಳನ್ನು ನಡೆಸಿದ್ದು, ರಾಹುಲ್ ಮತ್ತು ಪ್ರಿಯಾಂಕಾ 21 ಸಭೆಗಳನ್ನು ನಡೆಸಿದ್ದಾರೆ. ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ಗರಿಷ್ಠ…
ಬೆಂಗಳೂರು: ವಿಧಾನಸಭೆ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕರ ಆಯ್ಕೆ ವಿಚಾರ ಸಂಬಂಧ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ವೀಕ್ಷಕರು ಬೆಂಗಳೂರಿಗೆ ಆಗಮಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಆಗಮಿಸಿದ್ದಾರೆ.ವೀಕ್ಷಕರು ಸಂಜೆ ನಡೆಯುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ದುಶ್ಯಂತ್ ಕುಮಾರ್ ಗೌತಮ್ ಹಾಗೂ ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಆದರು. ವಿಪಕ್ಷ ನಾಯಕರ ಆಯ್ಕೆ ವಿಚಾರ ಸಂಬಂಧ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ವೀಕ್ಷಕರು ಬೆಂಗಳೂರಿಗೆ ಆಗಮಿಸಿದ್ದಾರೆ.