ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರ ವಿಡಿಯೋ ವೈರಲ್ ವಿಚಾರವಾಗಿ ತೀರ್ಥಹಳ್ಳಿಯಲ್ಲಿ ಮಾತನಾಡಿದ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ, ಏನು ಮಾತನಾಡಿದ್ದಾರೆ ಎನ್ನುವ ಬಗ್ಗೆ ತನಿಖೆ ಆಗಬೇಕು. ಯಾರ ಜೊತೆ ಮಾತನಾಡಿದ್ದಾರೆ. ಯಾರಿಗೆ ನಿರ್ದೇಶನ ಕೊಡ್ತಿದ್ದಾರೆ ಅಂತಾ ತನಿಖೆ ಆಗಬೇಕು. ಸಿದ್ದರಾಮಯ್ಯ ಅವರು ಸಿಎಂ ಇದ್ದಾರೆ. ಅವರಿಗೆ ಹಕ್ಕು ಇದೆ. ಅವರ ಮಗ ಅದರಲ್ಲಿ ಮೂಗು ತೂರಿಸಿದ್ದಾರೆ ಅಂದರೆ ರಾಜ್ಯದ ಜನರ ಅರಿವಿಗೆ ಬರಬೇಕು. ಈ ಬಗ್ಗೆ ತನಿಖೆ ಆಗಬೇಕು. ಏನಾಗಿದೆ ಅಂತಾ ಸಿದ್ದರಾಮಯ್ಯ ರಾಜ್ಯದ ಜನರಿಗೆ ತಿಳಿಸಬೇಕು. ಸರಕಾರ ಅಧಿಕಾರಕ್ಕೆ ಬಂದು 6 ತಿಂಗಳು ಆದರೂ ಸಿದ್ದರಾಮಯ್ಯ ಅಭಿವೃದ್ಧಿಗೆ 6 ಪೈಸೆ ಕೊಡಲಿಲ್ಲ. ಆರು ತಿಂಗಳಲ್ಲಿ ಇಷ್ಟು ಕೆಟ್ಟ ಹೆಸರು ತೆಗೆದುಕೊಂಡ ಇನ್ನೊಂದು ಸರಕಾರ ಇಲ್ಲ. 136 ಸೀಟ್ ಬಂದಿದೆ ತಾವು ಏನು ಮಾಡಿದರೂ ನಡೆಯುತ್ತದೆ ಅಂತಾ ನಡೆಸಿದರೆ ಖಂಡಿತವಾಗಿ ಆಗುವುದಿಲ್ಲ. https://ainlivenews.com/what-happens-if-tea-coffee-is-given-to-children/ ಬಿಜೆಪಿ ಸರಕಾರ ಇದ್ದಾಗ 40% ಸರಕಾರ ಅಂತಾ ಬೊಬ್ಬೆ ಹೊಡೆದು ಅಧಿಕಾರಕ್ಕೆ ಬಂದರು.…
Author: AIN Author
ಬಾಲಿವುಡ್ ಖ್ಯಾತ ನಟಿ ಕಾಜೋಲ್ (Kajol)ಅವರ ಡೀಪ್‍ಫೇಕ್ ವಿಡಿಯೋ ವೈರಲ್ ಆಗುತ್ತಿದೆ. ರಶ್ಮಿಕಾ ಮಂದಣ್ಣ, ಕತ್ರಿನಾ (Katrina) ನಂತರ ಮತ್ತೋರ್ವ ನಟಿ ಇಂಥದ್ದೊಂದು ಕುತಂತ್ರಕ್ಕೆ ಸಿಲುಕಿಕೊಂಡಿದ್ದಾರೆ. ತಮ್ಮ ಡೀಪ್‍ಫೇಕ್ ವಿಡಿಯೋ ಕಂಡು ನಟಿ ಗರಂ ಆಗಿದ್ದಾರೆ. ಕೂಡಲೇ ದುರುಳರಿಗೆ ಹೆಡೆಮುರಿ ಕಟ್ಟುವಂತೆ ಅವರು ಪೊಲೀಸ್ ಇಲಾಖೆಗೆ ಮನವಿ ಮಾಡಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚೆಚ್ಚು ಇಂತಹ ವಿಡಿಯೋಗಳು ಹರಿದಾಡುತ್ತಿವೆ. ಸಹಜವಾಗಿಯೇ ನಟಿಯರಿಗೆ ಆತಂಕ ಹೆಚ್ಚಿಸಿದೆ. ಇಂತಹ ವಿಡಿಯೋಗಳನ್ನು ಮಾಡುವವರ ವಿರುದ್ಧ ಆದಷ್ಟು ಬೇಗ ಕಠಿಣ ಕ್ರಮಕ್ಕೆ ಮುಂದಾಗಿ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಅಲ್ಲದೇ ಆಕ್ರೋಶ ಕೂಡ ಹೊರ ಹಾಕುತ್ತಿದ್ದಾರೆ. ಬೆನ್ನುಬಿದ್ದ ದೆಹಲಿ ಪೊಲೀಸ್ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್‍ಫೇಕ್ (Deepfake) ವೀಡಿಯೋ ವಿಚಾರವಾಗಿ ದೆಹಲಿ (Delhi) ಪೊಲೀಸರು (Police) ಬಿಹಾರ ಮೂಲದ 19 ವರ್ಷದ ಯುವಕನನ್ನು ವಿಚಾರಣೆ ನಡೆಸಿದ್ದಾರೆ. ಶಂಕಿತ ಯುವಕ ಮೊದಲು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವನ್ನು ಅಪ್‍ಲೋಡ್…
ಕಲಬುರಗಿ: ಹಿರಿಯ ಸ್ವಾತಂತ್ರ ಹೋರಾಟಗಾರ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಗೌರವಾಧ್ಯಕ್ಷ ಭೀಮಣ್ಣ ಖಂಡ್ರೆ ಯವರ ಶತಮಾನೋತ್ಸವ ಬರುವ ಡಿಸೆಂಬರ್ 2ರಂದು ಭಾಲ್ಕಿಯಲ್ಲಿ ನಡೆಯಲಿದೆ.. ಕಲಬುರಗಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಶರಣು ಮೋದಿ ಭೀಮಣ್ಣ ಖಂಡ್ರೆಯವರ ಜನ್ಮ ಶತಮಾನೋತ್ಸವ ನಿಮಿತ್ಯ 860 ಪುಟಗಳ ಲೋಕನಾಯಕ ಎಂಬ ಅಭಿನಂದನಾ ಗ್ರಂಥ ಬಿಡುಗಡೆ ಮಾಡಲಾಗುವುದು ಅಂತ ಹೇಳಿದ್ರು.. ಈ ಅಭೂತಪೂರ್ವ ಕಾರ್ಯಕ್ರಮಕ್ಕೆ ವಿವಿಧ ಮಠಾಧೀಶರು ಆಗಮಿಸಲಿದ್ದಾರೆ ಅಷ್ಟೇಅಲ್ಲ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ CM ಸಿದ್ರಾಮಯ್ಯ ಸೇರಿ ಹಲವು ನಾಯಕರು ಶತಮಾನೋತ್ಸವ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಅಂದ್ರು..
ಕಲಬುಲಗಿ: ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಇದೇ ಮೊದಲ ಬಾರಿಗೆ ಆನ್ ಲೈನ್ ಕ್ಲಾಸ್ ಶುರು ಮಾಡಲಿದೆ ಅಂತ ಕಲಬುರಗಿ VTU ಮುಖ್ಯಸ್ಥ ಬಸವರಾಜ ಗಾದಗಿ ಹೇಳಿದ್ದಾರೆ.. ಕಲಬುಲಗಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗಾದಗಿ PG & UG ಸೇರಿದಂತೆ ಒಟ್ಟು 15 ವಿವಿಧ ಕೋರ್ಸ್ ಗಳಿಗಾಗಿ ಅಪ್ಲಿಕೇಷನ್ ಕರೆಯಲಾಗಿದೆ ಅಂತ ಹೇಳಿದ್ರು. https://ainlivenews.com/oblivion-is-too-much-follow-these-tips-to-increase-memory-power/ UG ಯಲ್ಲಿ ಮೂರು ವರ್ಷ BBA in Digital ಮಾರ್ಕೆಟಿಂಗ್ ಸೇರಿ ಮೂರು ಕೋರ್ಸ್ PG ಯಲ್ಲಿ ಎರಡು ವರ್ಷ MBA in business analytics ಸೇರಿ 4 ಕೋರ್ಸ್ ಇರಲಿವೆ.ಅದೇ ರೀತಿಯಾಗಿ ಪೋಸ್ಟ್ ಗ್ರಾಜುಯೇಟ್ ಡಿಪ್ಲೊಮಾ ದಲ್ಲಿ PGD in ಸೈಬರ್ ಸೆಕ್ಯೂರೆಟಿ ಎರಡು ವರ್ಷ ಸೇರಿ ಐದು ಕೋರ್ಸ್ ಗಳು ಆರಂಭವಾಗಲಿದ್ದು ನಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು ಅಂತ ಬಸವರಾಜ ಗಾದಗಿ ತಿಳಿಸಿದ್ದಾರೆ..
ಬೆಂಗಳೂರು: ಎಲ್ಲೆಂದರಲ್ಲಿ ಆಧಾರ್, ಪಾನ್ ಕಾರ್ಡ್ ಕೊಡುವ ಜನರೇ ಎಚ್ಚರ ಈ ಸ್ಟೋರಿ ನೋಡಿದ್ರೆ ಗೊತ್ತಾಗುತ್ತೆ ನಿಮಗೆ ನೀವು ಪ್ಯಾನ್ ಆಧಾರ್ ಕಾರ್ಡ್ ಕೊಟ್ರೆ ಏನಾಗುತ್ತೆ ಅಂತಾ ನಾವು ಹೇಳುತ್ತೇವೆ ಕೇಳಿ ಎಲ್ಲೆಂದರಲ್ಲಿ ಆಧಾರ್, ಪಾನ್ ಕಾರ್ಡ್ ಕೊಡುವ ಜನರೇ ಎಚ್ಚರನಿಮ್ಮ ದಾಖಲೆಗಳಲ್ಲಿ ರೆಡಿಯಾಗುತ್ತೆ ಬೇನಾಮಿ ಬ್ಯಾಂಕ್ ಖಾತೆಗಳು. ನಿಮ್ಮ ಹೆಸರಲ್ಲಿ ಬ್ಯಾಂಕ್ ಖಾತೆ, ಬೇರೆಯವರ ವಹಿವಾಟು. ಬೆಂಗಳೂರಿನಲ್ಲಿ ಬೃಹತ್ ಬೇನಾಮಿ ಬ್ಯಾಂಕ್ ಖಾತೆ ಸೃಷ್ಟಿಸುವ ಜಾಲ ಪತ್ತೆ ಸಮೀರ್, ಮಹಮ್ಮದ್ ಹಸನ್, ಮಹಮ್ಮದ್ ಇರ್ಫಾನ್, ಅಮೂಲ್ ಬಾಬು.ತಂಝೀಲ್ , ಮಂಜುನಾಥ ಬಂಧಿತ ಅರೋಪಿಗಳು ಬೃಹತ್ ಜಾಲವನ್ನ ಭೇದಿಸಿದ ಸಿಸಿಬಿ ಸೈಬರ್ ಕ್ರೈಮ್ ಪೊಲೀಸರು. ಸಾರ್ವಜನಿಕರ ಕೆವೈಸಿ ಪಡೆದು ಬ್ಯಾಂಕ್ ಖಾತೆ ತೆರದು ವಹಿವಾಟು.ಐದರಿಂದ ಹತ್ತು ಸಾವಿರ ಕೊಟ್ಟು ಕೆವೈಸಿ ಪಡೆಯೋ ಅಸಾಮಿಗಳು.ಆಧಾರ್, ಪಾನ್ ಕಾರ್ಡ್ ಮತ್ತು ಒಂದು ಸಹಿಗೆ ಹತ್ತು ಸಾವಿರ ರೇಟ್ ಪಿಕ್ಸ್.ಪ್ರತಿ ಡಾಕ್ಯುಮೆಂಟ್ ಗೆ ಹೊಸ ಸಿಮ್ ಬಳಸಿ ಖಾತೆ ಓಪನ್. ನಂತರ ನಿಮ್ಮ ಹೆಸರಿನಲ್ಲೆ ಓಪನ್…
ಬೆಂಗಳೂರು: ವಿಧಾನಸಭೆ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕರ ನೇಮಕಾತಿ ವಿಚಾರವಾಗಿ ಬೆಂಗಳೂರಿನಲ್ಲಿ ಇಂದು (ನ.17) ಸಂಜೆ 6 ಗಂಟೆಗೆ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. https://ainlivenews.com/union-minister-nirmala-sitharaman-arrived-at-the-state-bjp-office/ ಸಭೆಯಲ್ಲಿ ಹೈಕಮಾಂಡ್ ವೀಕ್ಷಕರು ವಿಪಕ್ಷ ನಾಯಕರ ಹೆಸರು ಘೋಷಣೆ ಮಾಡಲಿದ್ದಾರೆ. ವಿಧಾನಸಭೆಗೆ ಒಕ್ಕಲಿಗ ಮತ್ತು ವಿಧಾನ ಪರಿಷತ್ಗೆ ಹಿಂದುಳಿದ ವರ್ಗಕ್ಕೆ ಅವಕಾಶ ಸಿಗುವ ಸಾಧ್ಯತೆ ಇದೆ. ವಿಧಾನಸಭೆಗೆ ರೇಸ್ನಲ್ಲಿ ಶಾಸಕರಾದ ಆರ್. ಅಶೋಕ್, ಡಾ. ಅಶ್ವಥ್ ನಾರಾಯಣ ಮತ್ತು ಅರಗ ಜ್ಞಾನೇಂದ್ರ ಹೆಸರು ಇದೆ. ವಿಧಾನ ಪರಿಷರ್ಗೆ ಕೋಟ ಶ್ರೀನಿವಾಸ ಪೂಜಾರಿ, ತೇಜಸ್ವಿನಿ ಗೌಡ, ಛಲವಾದಿ ನಾರಾಯಣಸ್ವಾಮಿ ಮತ್ತು ಭಾರತಿ ಶೆಟ್ಟಿ ಹೆಸರು ಒಬಿಸಿ ಕೋಟದಲ್ಲಿ ಸುನಿಲ್ ಕುಮಾರ್ ರೇಸ್ನಲ್ಲಿದ್ದಾರೆ. ಬಹುತೇಕ ಆರ್. ಅಶೋಕ್ ಮತ್ತು ಕೋಟ ಶ್ರೀನಿವಾಸ ಪೂಜಾರಿ ವಿಪಕ್ಷ ನಾಯಕರಾಗಿ ಆಯ್ಕೆ ಸಾಧ್ಯತೆ ಇದೆ. ಬಿಜೆಪಿ ಶಾಸಕಾಂಗ ಸಭೆಗೆ ಹೈಕಮಾಂಡ್ ವೀಕ್ಷಕರಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಆಗಮಿಸುತ್ತಿದ್ದಾರೆ.
ವೀಕೆಂಡ್ ಬಂತು ಅಂದ್ರೆ ಕ್ಯಾಪ್ಟನ್ಸಿ ಟಾಸ್ಕ್‌ನ ಬಿಸಿ ಬಿಗ್‌ಬಾಸ್ ಮನೆಯಲ್ಲಿ ಏರಲು ಶುರುವಾಗುತ್ತದೆ. ಕ್ಯಾಪ್ಟನ್ಸಿ ಟಾಸ್ಕ್‌ನಲ್ಲಿ ಯಾರು ಭಾಗವಹಿಸಬೇಕು? ಯಾರು ಯಾರನ್ನು ಸಪೋರ್ಟ್ ಮಾಡಬೇಕು? ಲೆಕ್ಕಾಚಾರ ಹೇಗಿರಬೇಕು ಇವೆಲ್ಲ ಚರ್ಚೆಗಳಲ್ಲಿಯೇ ಸ್ಫರ್ಧಿಗಳು ತಲ್ಲೀನರಾಗುತ್ತಿದ್ದರು. ಆದರೆ ಈ ಸಲ ಕ್ಯಾಪ್ಟನ್ಸಿ ಟಾಸ್ಕ್‌ಗೆ ಬಿಗ್‌ಬಾಸ್ ಒಂದು ಸಣ್ಣ ಟ್ವಿಸ್ಟ್ ಕೊಟ್ಟಿದ್ದಾರೆ. ಕ್ಯಾಪ್ಟನ್ಸಿ ಟಾಸ್ಕ್ ಅನ್ನು ಯಾವ ಐದು ಸ್ಪರ್ಧಿಗಳು ಆಡಬೇಕು ಎಂದು ನೀವೇ ನಿರ್ಧರಿಸಿಕೊಳ್ಳಿ ಎಂದು ಹೇಳಿದ್ದಾರೆ! ನಮ್ರತಾ, ಸಿರಿ, ಕಾರ್ತಿಕ್, ಪ್ರತಾಪ್, ವರ್ತೂರು ಈ ಐವರು ಕ್ಯಾಪ್ಟನ್ಸಿ ಆಡಬೇಕು ಎಂದು ಮನೆಯ ಸದಸ್ಯರು ವೋಟಿಂಗ್ ಮೂಲಕ ಆರಿಸಿದ್ದಾರೆ. ಆದರೆ ತುಕಾಲಿ ಸಂತೋಷ್ ಅವರಿಗೆ ಈ ವೋಟಿಂಗ್ ಬಗ್ಗೆ ಆಕ್ಷೇಪವಿದೆ. ‘ಕರೆಕ್ಟಾಗಿ ವೋಟಿಂಗ್ ಆಗಿಲ್ಲ. ನಾವೂ ಭಾಗವಹಿಸಬೇಕು ಎಂದು ನಮಗೆ ಇರುತ್ತದೆ’ ಎಂದು ಅವರು ತಗಾದೆ ತೆಗೆದಿದ್ದಾರೆ. ವಿನಯ್ ಅವರ ಮಾತಿಗೆ ವಿರೋಧ ವ್ಯಕ್ತಪಡಿಸಿ, ‘ನೀವು ಆಡಿರುವುದು ಒಂದೇ ಟಾಸ್ಕ್’ ಎಂದು ಚುಚ್ಚಿದ್ದಾರೆ. ತುಕಾಲಿ ಅವರು ಇದರಿಂದ ಸಿಟ್ಟಿಗೆದ್ದು, ‘ಒಂದೇ ಟಾಸ್ಕ್‌ನಲ್ಲಿ ನನ್ನ ನಾನು…
ವಿಜಯನಗರ: ಜಿಲ್ಲೆಯ ಹೊಸಪೇಟೆತಾಲೂಕಿನ ವ್ಯಾಸನಕೇರಿ ರೈಲು ನಿಲ್ದಾಣದ ಸಮೀಪ ನಿನ್ನೆ ಸಾಯಂಕಾಲ ಗೂಡ್ಸ್ ರೈಲಿನ ಕೆಲ ಬೋಗಿಗಳು ಹಳಿತಪ್ಪಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಹಿನ್ನಲೆ ಹಲವು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದ್ದು, ಯಶವಂತಪುರ- ವಿಜಯಪುರ ಎಕ್ಸಪ್ರೆಸ್ ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಯಾವ್ಯಾವ ಮಾರ್ಗದ ರೈಲುಗಳ ಸಂಚಾರ ಬಂದ್ ಹಳಿಗಳಿಂದ ರೈಲು ತೆರವು ಕಾರ್ಯದ ನಿಮಿತ್ತ ಈ ಮಾರ್ಗದಲ್ಲಿ ಸಂಚರಿಸಬೇಕಿದ್ದ ಹೊಸಪೇಟೆ- ಹರಿಹರ ಪ್ಯಾಸೆಂಜರ್, ಹರಿಹರ- ಬಳ್ಳಾರಿ ಡೆಮೊ ಸ್ಪೆಷಿಯಲ್, ಬಳ್ಳಾರಿ – ಹೊಸಪೇಟೆ ಡೆಮೋ ಸ್ಪೆಷಿಯಲ್ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಇನ್ನುಳಿದಂತೆ ವಿಜಯಪುರ- ಯಶವಂತಪುರ ಮತ್ತು ಯಶವಂತಪುರ- ವಿಜಯಪುರ ಎಕ್ಸಪ್ರೆಸ್ ರೈಲುಗಳ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ. ಹೊಸಪೇಟೆ- ಕೊಟ್ಟೂರು ಮಾರ್ಗದ ಬದಲಾಗಿ ಹೊಸಪೇಟೆ, ಬಳ್ಳಾರಿ, ರಾಯದುರ್ಗ, ಚಿಕ್ಕಜಾಜೂರು ಮಾರ್ಗದಲ್ಲಿ ಸಂಚಾರಿಸಲಿವೆ.
ಬೆಂಗಳೂರು: ರಾಜ್ಯ ಬಿಜೆಪಿ ಕಚೇರಿಗೆ ಆಗಮಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ರಾಜ್ಯಾಧ್ಯಕ್ಷ ವಿಜಯೇಂದ್ರ ಸ್ವಾಗತಿಸಿದರು. ವಿಧಾನಸಭೆ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕರ ಆಯ್ಕೆ ವಿಚಾರ ಸಂಬಂಧ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ವೀಕ್ಷಕರು ಬೆಂಗಳೂರಿಗೆ ಆಗಮಿಸಿದ್ದಾರೆ. ವಿಧಾನಸಭೆ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕರ ಆಯ್ಕೆ ವಿಚಾರ ಸಂಬಂಧ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ವೀಕ್ಷಕರು ಬೆಂಗಳೂರಿಗೆ ಆಗಮಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಆಗಮಿಸಿದ್ದಾರೆ. ವೀಕ್ಷಕರು ಸಂಜೆ ನಡೆಯುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮೈಸೂರಿಗೆ ತೆರಳುವ ಹಿನ್ನೆಲೆಯಲ್ಲಿ ರೈತರಿಂದ ಸಿಎಂ ಘೇರಾವ್ ಹಾಕುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮನೆಯಲ್ಲಿದ್ದ ಟಿ.ನರಸೀಪುರದ ಅನೇಕ ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈತರು ಪೊಲೀಸರ ನಡೆಯನ್ನ ಖಂಡಿಸಿದ್ದಾರೆ. ಇದು ಹಿಟ್ಲರ್ ಸರ್ಕಾರವೋ ಇಲ್ಲ ಜನ ಸಾಮಾನ್ಯರ ಸರ್ಕಾರವೋ ? ವಿವಿಧ ಬೇಡಿಕೆ ಈಡೇರಿಸುವಂತೆ ನಾವು ಹಲವು ತಿಂಗಳಿಂದ ಸರ್ಕಾರವನ್ನು ಒತ್ತಾಯ ಮಾಡುತ್ತಿದ್ದೇವೆ. https://ainlivenews.com/joint_pain_suprem_ray_treatment_reiki/ ಕಳೆದ ವಾರ ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡಲಿಕ್ಕೆ ಮುಂದಾಗಿದ್ದಾಗಲೂ ಏಕಾಏಕಿ ವಶಕ್ಕೆ ಪಡೆದಿದ್ದರು. ಈಗ ಸಿಎಂ ಬರುತ್ತಾರೆ ನಮ್ಮನ್ನು ವಶಕ್ಕೆ ಪಡೆದಿದ್ದಾರೆ. ಸಿದ್ದರಾಮಯ್ಯನವರು ರೈತರನ್ನ ಕರೆಸಿ ಮಾತನಾಡಬಹುದಿತ್ತು. ಅದನ್ನ ಬಿಟ್ಟು ರೈತರನ್ನು ಬಂಧಿಸಿರುವುದು ನಾಚಿಕೆಗೇಡು. ಮುಂದಿನ ದಿನಗಳಲ್ಲಿ ಜನ ನಿಮಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.