ತುಮಕೂರು: ನಾನು ಸಹ ಈ ಬಾರಿ ಲೋಕಸಭೆಗೆ ಸ್ಪರ್ಧಿಸಲು ಇಚ್ಛಿಸಿದ್ದೇನೆ. ಹೈಕಮಾಂಡ್ ಒಪ್ಪಿ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ ಎಂದು ಸಹಕಾರ ಸಚಿವ ರಾಜಣ್ಣ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆಯನ್ನು ಒಮ್ಮೆ ನೋಡುವ ಆಸೆಯಿದೆ. ಇಲ್ಲಿವರೆಗೂ ರಾಜ್ಯ ರಾಜಕಾರಣದ ಅನೇಕ ಮಜುಲುಗಳ ಅನುಭವವಾಗಿದೆ, ಅನೇಕ ಸ್ಥಾನಮಾನಗಳು ದೊರೆತಿವೆ. ಇನ್ನು ಲೋಕಸಭೆಗೆ ಒಮ್ಮೆ ಕಾಲಿರಿಸುವ ಉಮೇದಿ ಇದೆ. ಇದಕ್ಕೆ ಪೂರಕವಾಗಿ ವರಿಷ್ಠರು ಒಪ್ಪಿ ಟಿಕೆಟ್ ನೀಡುವುದಾದರೆ ಸ್ಪರ್ಧಿಸುವುದಾಗಿ ಇಂಗಿತ ವ್ಯಕ್ತಪಡಿಸಿದರು. ಸರ್ಕಾರದ ಜೊತೆಗೆ ಸಂಘ ಸಂಸ್ಥೆಗಳು ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾದರೆ ಆ ಮಕ್ಕಳು ಸಮಾಜದ ಆಸ್ತಿಯಾಗುತ್ತಾರೆ, ವಿದ್ಯೆ ವಂಚಿತ ಮಕ್ಕಳು ಸಮಾಜಕ್ಕೆ ಹೊರೆಯಾಗುತ್ತಾರೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು. ವಿದ್ಯೆ ಸಾಧಕನ ಸ್ವತ್ತೇ ಹೊರತು ಸೋಮಾರಿಯ ಸ್ವತ್ತಲ್ಲ, ಮಕ್ಕಳ ಬದುಕು ರೂಪಿಸುವ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಮುಂದಿನ ಪೀಳಿಗೆಗೆ ಶಿಕ್ಷಣವನ್ನು ಆಸ್ತಿ ರೂಪದಲ್ಲಿ ನೀಡಬೇಕು ಎಂದರು. https://ainlivenews.com/joint_pain_suprem_ray_treatment_reiki/ ಎಲ್ಲಾ ಮಕ್ಕಳಿಗೂ ದೇವರು ಸಮಾನ ಬುದ್ಧಿಶಕ್ತಿ ಕೊಟ್ಟಿರುತ್ತಾನೆ. ಆ ಮಕ್ಕಳಲ್ಲಿರುವ ಬುದ್ಧಿಶಕ್ತಿ,…
Author: AIN Author
ಬೆಂಗಳೂರು:- ಇಂದಿನಿಂದ ದೊಡ್ಡಬಳ್ಳಾಪುರ ಬೈಪಾಸ್ ನಿಂದ ಹೊಸಕೋಟೆ ವರೆಗೂ ನಾಲ್ಕಪಥದ ರಸ್ತೆಗೆ ಟೋಲ್ ಸುಂಕ ವಿಧಿಸಲಾಗುತ್ತಿದೆ. ಈ ಮೂಲಕ ಇಂದಿನಿಂದ ಬೆಂಗಳೂರು ಹೊರವಲಯ ಮತ್ತು ಗ್ರಾಮಾಂತರದ ವಾಹನ ಸವಾರರಿಗೆ ಟೋಲ್ ಬರೆ ಬೀಳಲಿದೆ. ದೊಡ್ಡಬಳ್ಳಾಪುರದಿಂದ ಹೊಸಕೋಟೆ ವರೆಗೂ ಈಗಾಗಲೇ ಹೆದ್ದಾರಿ ರಸ್ತೆ ಕಾಮಗಾರಿ ಪೂರ್ಣವಾಗಿದೆ. ಸುಮಾರು 43.ಕಿ.ಮೀ. ಹೆದ್ದಾರಿ ರಸ್ತೆ ವಾಹನ ಸವಾರರ ಬಳಕೆಗೆ ಮುಕ್ತವಾಗಲಿದೆ. ಈ ಹಿನ್ನಲೆ ಇಂದಿನಿಂದ ನಲ್ಲೂರು ಬಳಿ ಟೋಲ್ ಆರಂಭವಾಗಲಿದೆ. ಡಾಬಸ್ ಪೆಟೆಯಿಂದ ಹೊಸಕೋಟೆವರೆಗೂ ಚತುಷ್ಪಥ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಈಗಾಗಲೆ ದೊಡ್ಡಬಳ್ಳಾಪುರ ಬೈಪಾಸ್ ನಿಂದ ಹೊಸಕೋಟೆ ವರೆಗೂ ರಸ್ತೆ ಕಾಮಗಾರಿ ಮುಕ್ತಾಯ ಆಗಿದೆ. ಡಾಬಸ್ ಪೇಟೆಯಿಂದ ದೊಡ್ಡಬಳ್ಳಾಪುರ ಹೆದ್ದಾರಿ ಕಾಮಗಾರಿ ಇನ್ನೂ ಪೂರ್ಣವಾಗಿಲ್ಲ. ಇದೀಗ ನಲ್ಲೂರು ಟೋಲ್ ಆರಂಭಕ್ಕೆ ಹೆದ್ದಾರಿ ಪ್ರಾಧಿಕಾರದಿಂದ ನಾಳೆಗೆ ಮುಹೂರ್ತ ಫಿಕ್ಸ್ ಆಗಿದೆ. ಪ್ರಮುಖವಾಗಿ ಈ ಮಾರ್ಗವು ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ ಮಾರ್ಗವಾಗಿ ಹೊಸೂರನ್ನು ತಲುಪಲಿದೆ. ದೊಡ್ಡಬಳ್ಳಾಪುರ ಬೈಪಾಸ್‌ನಿಂದ ನಲ್ಲೂರು ಗ್ರಾಮದವರೆಗಿನ ರಸ್ತೆ ಪೂರ್ಣ ಆಗಿದ್ದು, 34.15 ಕಿ.ಮೀ.…
ಬೆಂಗಳೂರು:- ರಾಜಕೀಯವನ್ನು ಭ್ರಷ್ಟೋಧ್ಯಮವನ್ನಾಗಿ ಮಾಡಿಕೊಂಡ ಕೀರ್ತಿ ಕುಮಾರಸ್ವಾಮಿಗೆ ಸಲ್ಲುತ್ತದೆ ಎಂದು ಕಾಂಗ್ರೆಸ್ ಹೇಳಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಟ್ವೀಟ್ ಮಾಡಿರುವ ಕಾಂಗ್ರೆಸ್, ಜೆಡಿಎಸ್ ಪಕ್ಷದ ಶಾಸಕರು ಹಣ ಕೊಟ್ಟು ಮತ ಪಡೆದಿದ್ದಾರೆ, ಹಣ ಪಡೆದು ಮತ ನೀಡುತ್ತಾರೆ, ಕುಮಾರಸ್ವಾಮಿಯವರು ಹಣ ವಸೂಲಿ ಮಾಡಿ ಟಿಕೆಟ್ ನೀಡುತ್ತಾರೆ. ಇದನ್ನು ಅವರೇ ಒಪ್ಪಿಕೊಂಡಿದ್ದು. ಫ್ಯಾಮಿಲಿ ಟ್ರಸ್ಟ್ ನಂತಿರುವ ಜೆಡಿಎಸ್ ಪಕ್ಷಕ್ಕಾಗಿ ಪಡೆದ ಹಣ ಕುಮಾರಸ್ವಾಮಿಯವರ ಜೇಬಿಗೆ ಹೋಗುತ್ತದೆಯಲ್ಲವೇ ಎಂದು ಹೇಳಿದೆ. ರಾಜಕೀಯವನ್ನು ಭ್ರಷ್ಟೋಧ್ಯಮವನ್ನಾಗಿ ಮಾಡಿಕೊಂಡ ಕೀರ್ತಿ ಹೆಚ್ಡಿ ಕುಮಾರಸ್ವಾಮಿ ಅವರಿಗೆ ಸಲ್ಲುತ್ತದೆ. ಟಿಕೆಟ್ ಅಕ್ಷಾಂಕ್ಷಿಗಳಲ್ಲೇ ಸೂಟ್ ಕೇಸ್ ಪಡೆದ ತಾವು ಅಧಿಕಾರದಲ್ಲಿ ಕಂಟೈನರ್ ನಲ್ಲಿ ವಸೂಲಿ ಮಾಡಿಲ್ಲವೇ? ಎಂದು ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್ ಪ್ರಶ್ನಿಸಿದೆ. ಇನ್ನೂ ಹೆಚ್ಡಿ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ನಡುವೆ ಮಾತಿನ ಯುದ್ದ ನಡೆಯುತ್ತಲೇ ಇದೆ. ಟೀಕೆಗೆ ಪ್ರತಿ ಟೀಕೆ ನಡೆಯುತ್ತಲೇ ಇದೆ. ಇದೀಗ ಕಾಂಗ್ರೆಸ್ ವಿರುದ್ಧ ಮುಗಿಬೀಳುತ್ತಿರುವ ಕುಮಾರಸ್ವಾಮಿಗೆ ಟಕ್ಕರ್ ಕೊಟ್ಟ ಕರ್ನಾಟಕ ಕಾಂಗ್ರೆಸ್ ಘಟಕ, ರಾಜಕೀಯವನ್ನು ಭ್ರಷ್ಟೋಧ್ಯಮವನ್ನಾಗಿ…
ವಿಜಯಪುರ: ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ಕೇಂದ್ರ ಸರಕಾರ ಬರ ಪರಿಹಾರ ಬಿಡುಗಡೆ ಮಾಡದೇ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಆಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ ಆರೋಪಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಎಂಬಿ ಪಾಟೀಲ, ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಎದುರಾಗಿದ್ದು, ಸರಕಾರ ಪರಿಸ್ಥಿತಿ ನಿಭಾಯಿಸಲು ಸಕಲ ಕ್ರಮಗಳನ್ನು ಕೈಗೊಂಡಿದೆ. ಆದರೆ, ಕೇಂದ್ರ ಸರಕಾರ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು. ಕೇಂದ್ರ ಬರ ಅಧ್ಯಯನ ತಂಡ ರಾಜ್ಯಕ್ಕೆ ಭೇಟಿ ನೀಡಿ ಒಂದು ತಿಂಗಳಾದರೂ ಬರ ಪರಿಹಾರ ಹಣ ಬಿಡುಗಡೆ ಮಾಡಿಲ್ಲ. ರಾಜ್ಯ ಸರಕಾರ ಸಾಕಷ್ಟು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಎನ್ ಡಿಆರ್ ಎಫ್ ಮಾರ್ಗಸೂಚಿಗಳಿಂದ ರೈತರಿಗೆ ಅನ್ಯಾಯವಾಗುತ್ತಿದೆ. ಪ್ರತಿ ಹೆಕ್ಟೇರ್ ನಿಗದಿ ಪಡಿಸಿರುವ ಪರಿಹಾರ ಮೊತ್ತ ರೈತರು ಬೆಳೆಗಾಗಿ ಮಾಡಿರುವ ಖರ್ಚಿಗೂ ಸಾಕಾಗುವುದಿಲ್ಲ. https://ainlivenews.com/joint_pain_suprem_ray_treatment_reiki/ ಈ ಪರಿಹಾರ ರೈತರ ಪಾಲಿಗೆ ಬಕಾಸುರನ ಹೊಟ್ಟೆಗೆ ಅರೆಕಾಸಿಮಜ್ಜಿಗೆ…
ಬೆಂಗಳೂರು:- ರಾಜಧಾನಿ ಬೆಂಗಳೂರಿನ ಅಂಬೇಡ್ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಹಿಳೆ ಸಾವನ್ನಪ್ಪಿದ್ದಾಳೆ. 34 ವರ್ಷದ ನಾಜ್ನಿ ಮೃತ ಮಹಿಳೆ. ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ನಿಧನಳಾಗಿದ್ದಾಳೆ ಎಂದು ಸಂಬಂಧಿಕರು ಆರೋಪಿಸಿ, ಆಸ್ಪತ್ರೆ ಮುಂಭಾಗ ಧರಣಿ ಕುಳಿತಿದ್ದಾರೆ. ನಾಜ್ನಿ ಮೂರು ದಿನಗಳ ಹಿಂದೆ ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನವಾದರೂ ವೈದರು ಚಿಕಿತ್ಸೆ ನೀಡಿಲ್ಲ. ಮೂರನೇ ದಿನ ಹೊಟ್ಟೆಯಲ್ಲಿ ಗಡ್ಡೆ ಆಗಿದೆ, ಕೂಡಲೇ ಆಪರೇಷನ್ ಮಾಡಬೇಕೆಂದು ವೈದ್ಯರು ಹೇಳಿದ್ದಾರೆ. ವೈದ್ಯರು ಗುರುವಾರ ಸಂಜೆಯವರೆಗು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದರು. ನಂತರ ನರದ ಸಮಸ್ಯೆ ಇದೆ ಬೇರೆ ಆಸ್ಪತ್ರೆಗೆ ಕರೆದುಕೊಂಡುಹೋಗಿ ಎಂದು ಕುಟುಂಬಸ್ಥರಿಗೆ ಹೇಳಿದ್ದಾರೆ. ಆಂಬುಲೆನ್ಸ್ನಲ್ಲಿ ಬೇರೆ ಆಸ್ಪತ್ರೆಗೆ ತೆರಳುವ ವೇಳೆ ಮಹಿಳೆ ಮೃತಪಟ್ಟಿದ್ದಾಳೆ. ಮಹಿಳೆ ಮೊದಲೇ ಮೃತಪಟ್ಟಿದ್ದಾಳೆ, ವೈದ್ಯರು ಸುಮ್ಮನೆ ವೆಂಟಿಲೇಟರ್ ಹಾಕಿ ತಮ್ಮ ಆಸ್ಪತ್ರೆಯಿಂದ ಕಳುಹಿಸಿದ್ದಾರೆಂದು ಸಂಬಂಧಿಕರು ಆರೋಪ ಮಾಡಿದ್ದಾರೆ. ಮಹಿಳೆಗೆ ಸೂಕ್ತ ಚಿಕಿತ್ಸೆ ನೀಡದಿರುವುದೇ ಮಹಿಳೆ ಸಾವಿಗೆ ಕಾರಣವೆಂದು ಆರೋಪಿಸಿ, ವೈದ್ಯರ ವಿರುದ್ಧ…
ಬಳ್ಳಾರಿ ;- ಬಳ್ಳಾರಿಯಲ್ಲಿ ಲೋಕಾಯುಕ್ತ ಬಲೆಗೆ ಆರ್.ಟಿ.ಓ ಅಧಿಕಾರಿ ಸಿಕ್ಕಿ ಬಿದ್ದಿದ್ದಾರೆ. ಆರ್.ಟಿ.ಓ ಅಧೀಕ್ಷ ಚಂದ್ರಕಾಂತ ಗುಡಿಮನಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಏಜೆಂಟ್ ಮೊಹಮ್ಮದ್ ರಾಜ್ ಇವರ ಬಳಿ 15,000/ರೂ ತೆಗೆದುಕೊಳ್ಳವಾಗ ಲೋಕ ದಾಳಿ ನಡೆಸಿದೆ. ನಿನ್ನೆ ರಾತ್ರಿ 10.20ರ ಸಮಯದಲ್ಲಿ ಹಣ ಪಡೆಯುವ ಸಂದರ್ಭದಲ್ಲಿ ಚಂದ್ರಕಾಂತ್ ಮತ್ತು ಮೊಹಮ್ಮದ್ ರಾಜ್ ಟ್ರ್ಯಾಪ್ ಮಾಡಲಾಗಿದೆ. ಇಬ್ಬರನ್ನು ಬಳ್ಳಾರಿಯ ಹಾಲಿ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ, ಇಂದು ಬೆಳಿಗ್ಗೆ ನ್ಯಾಯಲಯಕ್ಕೆ ಆರೋಪಿಗಳನ್ನು ಹಾಜರು ಪಡಿಸಲಾಗುವುದು ಎಂದು ಮೂಲಗಳಿಂದ ತಿಳಿದುಬಂದಿದೆ. ಸಾರ್ವಜನಿಕರಿಂದ ಆರ್.ಟಿ.ಓ ಅಧಿಕಾರಿಗಳ ಮೇಲೆ ಸಾಕಷ್ಟು ದೂರುಗಳು ಕೇಳಿಬರುತ್ತಿದ್ದವು, ಇತ್ತೀಚೆಗೆ ನಗರ ಶಾಸಕ ಭರತ್ ರೆಡ್ಡಿ ಅವರು ಈ ಕುರಿತು ಆರ್.ಟಿ.ಓ ಕಛೇರಿಗೆ ಭೇಟಿ ನೀಡಿ ಖಡಕ್ ಎಚ್ಚರಿಕೆ ನೀಡಿರುವುದನ್ನು ಸ್ಮರಿಸಬಹುದು.
ನವದೆಹಲಿ: ಕಾಂಗ್ರೆಸ್‌ನ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi) ಅವರು ಪ್ರತಿಸ್ಪರ್ಧಿ ಜ್ಯೋತಿರಾದಿತ್ಯ ಸಿಂಧಿಯಾ ವಿರುದ್ಧ ವಾಗ್ದಾಳಿ ನಡೆಸಿದ್ದು, ಜನರ ಆದೇಶವನ್ನು “ದ್ರೋಹ” ಮಾಡಿದ “ದೇಶದ್ರೋಹಿ” ಎಂದು ಹೇಳಿದ್ದಾರೆ. ಪ್ರಚಾರದ ಕೊನೆಯ ದಿನದಂದು ಮಧ್ಯಪ್ರದೇಶದ ದಾತಿಯಾದಲ್ಲಿ ಮಾತನಾಡಿದ ಪ್ರಿಯಾಂಕಾ “ಅವರ (ಬಿಜೆಪಿಯ) ಎಲ್ಲಾ ನಾಯಕರು ಸ್ವಲ್ಪ ವಿಚಿತ್ರವಾದವರು, ಮೊದಲು ನಮ್ಮ ಸಿಂಧಿಯಾ..ನಾನು ಉತ್ತರಪ್ರದೇಶದಲ್ಲಿ ಅವರೊಂದಿಗೆ ಕೆಲಸ ಮಾಡಿದ್ದೇನೆ, ನಿಜವಾಗಿ ಅವರ ಎತ್ತರ ಸ್ವಲ್ಪ ಕಡಿಮೆ ಆದರೂ ದುರಹಂಕಾರದಲ್ಲಿ ‘ವಾಹ್ ಭಾಯಿ ವಾಹ್’ ಎಂದಿದ್ದಾರೆ. https://ainlivenews.com/joint_pain_suprem_ray_treatment_reiki/ “ಯಾವುದೇ ಕಾರ್ಯಕರ್ತ ಅವರ ಬಳಿಗೆ ಹೋದರೆ ಅವರನ್ನು ಮಹಾರಾಜ ಎಂದು ಕರೆಯಬೇಕು. ಅವರು ಅದನ್ನು ಹೇಳದಿದ್ದರೆ, ನಮ್ಮ ಸಮಸ್ಯೆಗಳಿಗೆ ಗಮನ ಕೊಡುವುದಿಲ್ಲ”. ಅವರು ತಮ್ಮ ಕುಟುಂಬದ ಸಂಪ್ರದಾಯವನ್ನು ಚೆನ್ನಾಗಿ ಅನುಸರಿಸಿದ್ದಾರೆ. ಅನೇಕರು ದ್ರೋಹ ಮಾಡಿದ್ದಾರೆ, ಆದರೆ ಅವರು ಗ್ವಾಲಿಯರ್ ಮತ್ತು ಚಂಬಾದ ಸಾರ್ವಜನಿಕರಿಗೆ ದ್ರೋಹ ಮಾಡಿದರು ಅವರು ಸರ್ಕಾರ ಬೀಳುವಂತೆ ಮಾಡಿದರು ಎಂದು ಪ್ರಿಯಾಂಕಾ ಹೇಳಿದ್ದಾರೆ.
ವಿಶ್ವಕಪ್ ಟೂರ್ನಿಯ ಆವೃತ್ತಿ ಒಂದರಲ್ಲೇ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ಬೌಲರ್ಸ್ *ಮೊಹಮ್ಮದ್ ಶಮಿ, 23 ವಿಕೆಟ್, 6 ಇನಿಂಗ್ಸ್, 2023 * ಜಹೀರ್ ಖಾನ್, 21 ವಿಕೆಟ್, 11 ಇನಿಂಗ್ಸ್, 2011 * ಉಮೇಶ್ ಯಾದವ್, 18 ವಿಕೆಟ್, 8 ಇನಿಂಗ್ಸ್, 2015 * ಜಸ್‌ಪ್ರೀತ್ ಬುಮ್ರಾ, 18 ವಿಕೆಟ್, 9 ಇನಿಂಗ್ಸ್, 2019 * ಜಸ್‌ಪ್ರೀತ್ ಬುಮ್ರಾ,18 ವಿಕೆಟ್, 10 ಇನಿಂಗ್ಸ್, 2023 ಒಂದೇ ವಿಶ್ವಕಪ್ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ಸ್ * ಮಿಚೆಲ್ ಸ್ಟಾರ್ಕ್, ಆಸ್ಟ್ರೇಲಿಯಾ, 27 ವಿಕೆಟ್, 10 ಇನಿಂಗ್ಸ್, 2019 * ಗ್ಲೆನ್ ಮೆಗ್ರಾತ್, ಆಸ್ಟ್ರೇಲಿಯಾ, 26 ವಿಕೆಟ್, 11 ಇನಿಂಗ್ಸ್, 2007 * ಮೊಹಮ್ಮದ್ ಶಮಿ, ಭಾರತ, 23 ವಿಕೆಟ್, 6 ಇನಿಂಗ್ಸ್, 2023 * ಚಮಿಂಡಾ ವಾಸ್, ಶ್ರೀಲಂಕಾ, 23 ವಿಕೆಟ್, 10 ಇನಿಂಗ್ಸ್, 2003 * ಮುತ್ತಯ್ಯ ಮುರಳೀಧರನ್, ಶ್ರೀಲಂಕಾ, 23 ವಿಕೆಟ್, 10 ಇನಿಂಗ್ಸ್,…
ಬೆಂಗಳೂರು:- ನಾವು ಆಪರೇಷನ್ ಕಮಲ ಮಾಡುವುದಿಲ್ಲ, ಭಯ ಬೇಡ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬಿಜೆಪಿಯು ಇತರೆ ಪಕ್ಷದವರನ್ನು ಸೆಳೆದು ಆಪರೇಷನ್ ಕಮಲ ಮಾಡಲಿದೆ ಎಂಬ ಆತಂಕ ಕಾಂಗ್ರೆಸ್‌ನಲ್ಲಿದ್ದು, ಅಂತಹ ಭಯ ಬೇಡ. ಕಾಂಗ್ರೆಸ್ ಶಾಸಕರೇ ಅನುದಾನ ಇಲ್ಲದೇ ರಸ್ತೆಯಲ್ಲಿ ಓಡಾಡಲು ಸಾಧ್ಯವಾಗದ ಪರಿಸ್ಥಿತಿ ಇದೆ. ಕಾಂಗ್ರೆಸ್ ಸರ್ಕಾರಕ್ಕೆ ಅವರ ಪಕ್ಷದ ಶಾಸಕರೇ ಪಾಠ ಕಲಿಸುತ್ತಾರೆ ಎಂದರು. ಆ ಜಾತಿ, ಈ ಜಾತಿ ಎಂಬ ಮನೋಭಾವನೆ ಬಿಟ್ಟು ನಾನು ಬಿಜೆಪಿ ಕಾರ್ಯಕರ್ತ ಅಂತಾ ಕೆಲಸ ಮಾಡಿದರೆ ನಿಶ್ಚಿತವಾಗಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ನಿಶ್ಚಿತ. ಚುನಾವಣೆ ಗೆದ್ದ ಬಳಿಕ ನಾನು ಯಾವುದೇ ಸಮುದಾಯಕ್ಕೆ ಸೇರಿದವನಲ್ಲ. ಕೇವಲ ಬಿಜೆಪಿ ಕಾರ್ಯಕರ್ತ ಎಂದು ಹೇಳಿದ ಅವರು, ನಾನು ರಾಜ್ಯ ಘಟಕದ ಅಧ್ಯಕ್ಷ ಸ್ಥಾನದ ನಿರೀಕ್ಷೆ ಮಾಡಿರಲಿಲ್ಲ. ಯಾರೂ ಸಹ ಬೇಸರದಲ್ಲಿ ಇಲ್ಲ. ಅದರ ಬಗ್ಗೆ ಚಿಂತೆ ಪಡಬೇಕಾಗಿಲ್ಲ. ಎಲ್ಲಾ ಹಿರಿಯರು, ಸಂಘ ಪರಿವಾರದ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ ಎಂದರು.
ಮಂಗಳೂರು: ಲೋಕಸಭೆ ಚುನಾವಣೆ ವೇಳೆಗೆ ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್ ಪಕ್ಷ ಖಾಲಿಯಾಗಲಿದ್ದು, ಆಗ ಕಾರ್ಯಕರ್ತರ ರಕ್ಷಣೆಗೆ ಯಾರೇ ನಾಯಕರು ಇರುವುದಿಲ್ಲ. ನಮ್ಮ ತತ್ವ ಸಿದ್ಧಾಂತ ಒಪ್ಪಿಕೊಂಡು ಯಾರು ಬೇಕಾದರೂ ಕಾಂಗ್ರೆಸ್ ಸೇರ್ಪಡೆಯಾಗಬಹುದು. ಬಿಜೆಪಿಯಲ್ಲಿ ನಾಯಕರೇ ಇಲ್ಲ ಎಂದು ನಮ್ಮ ನಾಯಕತ್ವ ಹುಡುಕಿಕೊಂಡು ಪಕ್ಷಕ್ಕೆ ಬರಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, https://ainlivenews.com/joint_pain_suprem_ray_treatment_reiki/ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ವಿಜಯೇಂದ್ರ ಅವರಿಗೆ ಶುಭ ಹಾರೈಸುತ್ತೇನೆ. ಇದರಿಂದ ಕಾಂಗ್ರೆಸ್ ಮೇಲೆ ಪರಿಣಾಮ ಆಗುವುದು ನಿಜ. ಅದು ಸಕಾರಾತ್ಮಕ, ಒಳ್ಳೆಯ ಪರಿಣಾಮ. ವಿಜಯೇಂದ್ರ ಆಯ್ಕೆಯಲ್ಲಿ ಬಿಜೆಪಿಯೊಳಗಿನ ಅಸಮಾಧಾನ ಬಹಿರಂಗವಾಗಿದೆ. ಸಿ ಟಿ ರವಿ, ಯತ್ನಾಳ್, ಸುನಿಲ್ ಕುಮಾರ್ ಗೈರುಹಾಜರಾಗಿದ್ದಾರೆ. ಯಡಿಯೂರಪ್ಪ ಅವರನ್ನು ಸಿಎಂ ಗಾದಿಯಿಂದ ಕಣ್ಣೀರು ಹಾಕಿಸಿ ಇಳಿಸಿದ್ದು ಯಾಕೆ ಎಂದು ಇನ್ನೂ ಯಾರಿಗೂ ಗೊತ್ತಿಲ್ಲ. ಬಿಜೆಪಿಯಲ್ಲಿ ಹೊಂದಾಣಿಕೆ ಇಲ್ಲ. ನಾಯಕತ್ವದ ಕೊರತೆ ಕಾರಣಕ್ಕೆ ಬಿಜೆಪಿ ವರಿಷ್ಠರು ವಿಜಯೇಂದ್ರ ಆಯ್ಕೆ ಮಾಡಿದ್ದಾರೆ ಎಂದರು.