ಬೆಳಗಾವಿ:- ಎಲ್ಲ ಸ್ಥಾನಗಳನ್ನೂ ಬಿಜೆಪಿ ಅವರಿಗೆ ಬಿಟ್ಟುಕೊಡಲು ನಾವೇನು ಕಡಲೆ ಪುರಿ ತಿನ್ನುತ್ತ ಕುಳಿತಿದ್ದೇವೆಯೇ’ ಎಂದು ಶಾಸಕ ಲಕ್ಷ್ಮಣ್ ಸವದಿ ಪ್ರಶ್ನಿಸಿದರು. ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಗೆಲ್ಲುವುದಾಗಿ ಹೇಳಿದ್ದಾರೆ. ಅವರು ಪಕ್ಕದ ಮೂರು-ನಾಲ್ಕು ಕ್ಷೇತ್ರ ಸೇರಿಸಿಕೊಂಡು 32 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎನ್ನಬಹುದಿತ್ತು’ ಎಂದು ಶಾಸಕ ಲಕ್ಷ್ಮಣ ಸವದಿ ವ್ಯಂಗ್ಯವಾಡಿದರು. ಚುನಾವಣೆಯಲ್ಲಿ ಗೆಲ್ಲುವ ಬಗ್ಗೆ ವಿಜಯೇಂದ್ರ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಎಲ್ಲ ಸ್ಥಾನಗಳನ್ನೂ ಅವರಿಗೆ ಬಿಟ್ಟುಕೊಡಲು ನಾವೇನು ಕಡಲೆ ಪುರಿ ತಿನ್ನುತ್ತ ಕುಳಿತಿದ್ದೇವೆಯೇ’ ಎಂದು ಪ್ರಶ್ನಿಸಿದರು. ‘ಉಪ ಚುನಾವಣೆಯೇ ಬೇರೆ. ಸಾರ್ವತ್ರಿಕ ಚುನಾವಣೆಯೇ ಬೇರೆ. ಉಪ ಚುನಾವಣೆ ಕೇವಲ ಬಿಂದಿಗೆಯಲ್ಲಿನ ನೀರು ತೆಗೆದಂತೆ. ಆದರೆ, ಸಾರ್ವತ್ರಿಕ ಚುನಾವಣೆ ಸಮುದ್ರದಲ್ಲಿನ ನೀರು ತೆಗೆದಂತೆ. ಯಾರು ಗೆಲ್ಲುತ್ತಾರೆ ನೋಡೋಣ’ ಎಂದು ಪುನರುಚ್ಚರಿಸಿದರು.
Author: AIN Author
ಕಲಬುರ್ಗಿ :- ಕರ್ನಾಟಕದಲ್ಲಿ ಇರುವುದು ಅಪ್ಪ- ಮಕ್ಕಳ ಸರ್ಕಾರ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಫೋನ್‌ನಲ್ಲಿ ಮುಖ್ಯಮಂತ್ರಿ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಮಾತನಾಡುವುದು ನೋಡಿದರೆ ಹಿಂಬಾಗಿಲಿನ ಮೂಲಕ ಸರ್ಕಾರವನ್ನು ನಡೆಸುತ್ತಿದ್ದಾರೆ ಎಂಬುದು ತಿಳಿಯುತ್ತದೆ. ರಾಜ್ಯದಲ್ಲಿ ಇರುವುದು ಅಪ್ಪ- ಮಕ್ಕಳ ಸರ್ಕಾರ’ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಟೀಕಿಸಿದರು. ಯತೀಂದ್ರ ಅವರು ಸೂಪರ್ ಸಿ.ಎಂ ಆಗಿ ಕಾರ್ಯ ನಿರ್ವಹಿಸುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಸರ್ಕಾರದಲ್ಲಿ ಯತೀಂದ್ರ ಅವರು ಆದೇಶ ಕೊಡುವ ಮಟ್ಟಕ್ಕೆ ತಲುಪಿದ್ದಾರೆ ಎಂದರೆ ಏನರ್ಥ? ವಿಡಿಯೊ ಸಂಭಾಷಣೆಯ ಬಗ್ಗೆ ಮುಖ್ಯಮಂತ್ರಿಗಳು ಸ್ಪಷ್ಟೀಕರಣ ಕೊಡಬೇಕು’ ಎಂದರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ತಾವು ಎರಡನೇ ಅಂಬೇಡ್ಕರ್ ಎಂದು ತಿಳಿದಿದ್ದಾರೆ. ಕಲಬುರಗಿಯಲ್ಲಿ ಒಂದು, ಬೆಂಗಳೂರಿನಲ್ಲಿ ಮತ್ತೊಂದು ಮಾತನಾಡುವ ಪ್ರಿಯಾಂಕ್ ಅವರು ಬೆಳೆದಿದ್ದು ಮಲ್ಲಿಕಾರ್ಜುನ ಖರ್ಗೆ ಅವರ ಆಶ್ರಯದಲ್ಲಿ. ಪ್ರಿಯಾಂಕ್ ಪಡೆದಿದ್ದೆಲ್ಲವೂ ತಮ್ಮ ತಂದೆಯಿಂದ. ಆದರೆ, ಇವತ್ತು ಅವರೇ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುತ್ತಿದ್ದಾರೆ’ ಎಂದು…
ಸಿರಿಗೆರೆ:- ಅಧ್ಯಕ್ಷ ಸ್ಥಾನ ಅಧಿಕಾರವಲ್ಲ, ಹೊಣೆಗಾರಿಕೆ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರ ಆಶೀರ್ವಾದ ಪಡೆದು ಮಾತನಾಡಿದರು. ನನಗೆ ದೊರೆತಿರುವ ರಾಜ್ಯ ಬಿಜೆಪಿ ಪಕ್ಷದ ಅಧ್ಯಕ್ಷ ಸ್ಥಾನ ಅಧಿಕಾರವಲ್ಲ. ಅದು ಹೊಣೆಗಾರಿಕೆ. ರಾಜ್ಯದ ಎಲ್ಲ ಹಿರಿಯರ ಮಾರ್ಗದರ್ಶನದಿಂದ ಅದನ್ನು ನಿಭಾಯಿಸುವೆ’ ಎಂದರು. ಹಾದಿಯಲ್ಲಿ ಕಲ್ಲುಮುಳ್ಳುಗಳೂ ಇವೆ. ಹಿರಿಯರ ಮಾರ್ಗದರ್ಶನದಲ್ಲಿ ಅವುಗಳನ್ನು ದಾಟಿಕೊಂಡು ಮುನ್ನಡೆಯುತ್ತೇನೆ. ಶಿಕಾರಿಪುರ ಕ್ಷೇತ್ರದ ಜನರು ಶಾಸನಸಭೆಗೆ ನನ್ನನ್ನು ಆಯ್ಕೆ ಮಾಡಿದ್ದರಿಂದ ಈ ಹೊಣೆಗಾರಿಕೆ ಸಂದಿದೆ’ ಎಂದರು. ‘ಗುರುವಿನ ಗುಲಾಮನಾಗದ ತನಕ ದೊರೆಯದಣ್ಣ ಮುಕುತಿ ಎಂಬ ದಾಸರ ಮಾತಿನಲ್ಲಿ ನಮ್ಮ ತಂದೆಗೆ ಅಪಾರ ವಿಶ್ವಾಸ. ಹಾಗಾಗಿಯೇ ಅವರು ಧರ್ಮಪೀಠಗಳಿಗೆ ಭೇಟಿ ನೀಡಿದಾಗ ಮುಖ್ಯಮಂತ್ರಿ, ನಾಯಕ ಎಂಬ ಎಲ್ಲ ಬಿಗುಮಾನ ತೊರೆದು ವಿನೀತಭಾವದಿಂದ ಇರುತ್ತಿದ್ದರು. ಮಠದ ಶಿಷ್ಯನಾಗಿ ನಾನೂ ಸಹ ಅವರದೇ ದಾರಿಯಲ್ಲಿ ಹೆಜ್ಜೆ ಹಾಕುತ್ತೇನೆ. ಆ ಕೆಲಸದಲ್ಲಿ ತರಳಬಾಳು ಶ್ರೀಗಳ ಮಾರ್ಗದರ್ಶನ ಮತ್ತು ಆಶೀರ್ವಾದ ಕೋರುತ್ತೇನೆ’ ಎಂದು ಹೇಳಿದರು. ‘ನನ್ನಿಂದ ತಪ್ಪುಗಳೇನಾದರೂ ಆದರೆ ಶ್ರೀಗಳು ಮಾರ್ಗದರ್ಶನ ಮಾಡಬೇಕು’…
ಬೆಂಗಳೂರು:- ರಾಜ್ಯದಲ್ಲಿ 3 ಸಾವಿರ ಪಬ್ಲಿಕ್ ಶಾಲೆ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಎಲ್ಲಾ ಮಕ್ಕಳು ಶಿಕ್ಷಣ ಪಡೆಯಬೇಕು, ಸರ್ಕಾರಿ ಶಾಲೆಗಳಿಗೆ ಹೆಚ್ಚು ಬರಬೇಕು. ಹಾಗಾಗಿ, ರಾಜ್ಯದಲ್ಲಿ ಸುಮಾರು 3ಸಾವಿರ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ ಎಂದರು. 2024-25ರ ವೇಳೆಗೆ ಮಕ್ಕಳ ಸಂಖ್ಯೆ ಹೆಚ್ಚಾಗಬೇಕು. ಹಾಗಾಗಿ, ಗ್ರಾಮಾಂತರ ಭಾಗದಲ್ಲಿ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಮೂರು ವರ್ಷದಲ್ಲಿ ಕಾರ್ಯ ಪೂರ್ಣಗೊಳ್ಳಲಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಹ ಒಪ್ಪಿಗೆ ಕೊಟ್ಟಿದ್ದಾರೆ. ಸಿಎಸ್ಆರ್ ಯೋಜನೆಯಡಿ ಹಣ ಲಭ್ಯವಾಗಲಿದೆ. ಇದಕ್ಕೆ 600 ಕೋಟಿ ರೂಪಾಯಿ ಖರ್ಚು ಬರಬಹುದು. ಅಜೀಂ ಪ್ರೇಂಜಿ ಫೌಂಡೇಷನ್ ಕೂಡ ಮಾತುಕತೆ ನಡೆಸಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಸೌಲಭ್ಯ ಸಿಗಬಹುದು. ಮೂಲ ಸೌಕರ್ಯ ಕಲ್ಪಿಸುವ ವಿಚಾರದಲ್ಲಿ ಸಿಗಬಹುದು ಎಂದು ಮಾಹಿತಿ ನೀಡಿದ್ದಾರೆ. ಕರ್ನಾಟಕ ಪಬ್ಲಿಕ್ ಶಾಲೆಗಳ ಗುಣಮಟ್ಟ ಚೆನ್ನಾಗಿದೆ. ದೆಹಲಿಯಲ್ಲಿ ಇದು ವರ್ಕೌಟ್ ಆಗಿದೆ. ರಾಜ್ಯದಲ್ಲಿ ಎರಡು…
ಬೆಂಗಳೂರು :- ಹೈಕೋರ್ಟ್ ಆದೇಶದಂತೆ ಹೆಚ್ಡಿಕೆ ಬಿಡದಿ ಜಮೀನು ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಹೈಕೋರ್ಟ್ ಆದೇಶದ ಬಗ್ಗೆ ಸರ್ಕಾರ ಏನು ಮಾಡುತ್ತೆ ಅದನ್ನು ಮಾಡುತ್ತದೆ. ಮಾಜಿ ಸಿಎಂ ಎಂಬ ಕಾರಣಕ್ಕೆ ಮುಲಾಜು ಮಾಡಲ್ಲ, ಸರ್ಕಾರ ಹೈಕೋರ್ಟ್ ಆದೇಶ ಪಾಲನೆ ಮಾಡುತ್ತದೆ. ಆದರೆ, ಯಾವಾಗ ಎಂದು ಹೇಳಲು ಆಗುವುದಿಲ್ಲ ಎಂದರು. ಕುಮಾರಸ್ವಾಮಿ ನಾನು ಬೇರೆಯವರ ಆಸ್ತಿ ಲೂಟಿ ಮಾಡಿಲ್ಲ ಎನ್ನುತ್ತಾರೆ. ಹಾಗಾದರೆ ಅದರ ಬಗ್ಗೆ ತನಿಖೆ ಮಾಡಿಸಲಿ. ಎಲ್ಲಾ ರಾಜಕಾರಣಿಗಳ ಬಗ್ಗೆ ತನಿಖೆ ಮಾಡಬೇಕೋ ಅಥವಾ ಆಯ್ದ ಕೆಲವರ ಮೇಲೆ ತನಿಖೆ ಮಾಡಬೇಕೋ ಎಂಬುದನ್ನು ಪ್ರಧಾನಿ ಬಳಿ ಹೇಳಿ ತನಿಖೆ ಮಾಡಸಲಿ. ತನಿಖಾ ಸಂಸ್ಥೆಗಳು ಅವರ ಕೈಯಲ್ಲೇ ಇದೆ ಎಂದರು. ನಾನು ಅವರ ರೀತಿಯಲ್ಲಿ ಬಿಡದಿಯಲ್ಲಿ ಒತ್ತುವರಿ ಮಾಡಿಲ್ಲ, ಗ್ರ್ಯಾಂಟ್ ಮಾಡಿರುವ ಜಮೀನು ಪಡೆದಿಲ್ಲ. ನಾನು ಜಮೀನನ್ನು ಖರೀದಿ ಮಾಡಿದ್ದೇವೆ. ಯಾವುದೇ ಗ್ರ್ಯಾಂಟ್ ಜಮೀನು ಪಡೆದರೆ ಅಥವಾ ಒತ್ತುವರಿ ಮಾಡಿದರೆ ಅದು…
ಬೆಂಗಳೂರು:- ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಧಾರವಾಡದ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಅಕ್ಟೋಬರ್ 3 ರಂದು ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿ, ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದಾಗಲೆಲ್ಲಾ ಹಿಂದೂಗಳು ತೊಂದರೆ ಎದುರಿಸುತ್ತಿದ್ದಾರೆ ಮತ್ತು ಅವರು ಮುಸ್ಲಿಮರನ್ನು ಬೆಂಬಲಿಸುವವರೆಗೂ ಇಂಥ ಘಟನೆಗಳು ನಡೆಯುತ್ತಲೇ ಇರುತ್ತವೆ ಎಂದು ಆರೋಪಿಸಿದ್ದರು. ಹೀಗಾಗಿ ಕಾರವಾರ ಗ್ರಾಮಾಂತರ ಠಾಣೆಯಲ್ಲಿ ಅ. 5 ರಂದು ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದರು. ಸೂಲಿಬೆಲೆ ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್‌ನ್ನು ರದ್ದುಪಡಿಸುವಂತೆ ಸೂಲಿಬೆಲೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಶಿವಶಂಕರ ಅಮರಣ್ಣನವರ್ ಅವರಿದ್ದ ಏಕಸದಸ್ಯ ಪೀಠ, ಪ್ರಕರಣದ ಕುರಿತು ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟು, ಎಫ್‌ಐಆರ್‌ಗೆ ಮಧ್ಯಂತರ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿದೆ.
ಬೆಂಗಳೂರು:- ಬೆಂಗಳೂರಿನ ಕಲೆ, ಸಂಸ್ಕೃತಿ, ಉಳಿಸುವ ಜವಬ್ದಾರಿ ಕನ್ನಡಿಗರದ್ದು ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ. ಪ್ರಶಾಂತ್ ಪ್ರಕಾಶ್ ಹಾಗೂ ಮಾಲಿನಿ ಗೋಯಲ್ ಅವರು ಬರೆದಿರುವ ಪುಸ್ತಕವನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರೊಂದಿಗೆ ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದ ಅವರು, ಬೆಂಗಳೂರು ಹಬ್ಬದಂತಹ ಆಚರಣೆಗಳ ಮೂಲಕ ನಗರದ ಇತಿಹಾಸ, ಕಲೆ, ಸಂಸ್ಕೃತಿ , ಪರಂಪರೆಗಳನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕು. ಪ್ರಶಾಂತ್ ಪ್ರಕಾಶ್ ಹಾಗೂ ಶ್ರೀಮತಿ ಮಾಲಿನಿ ಗೋಯಲ್ ಅವರು ಬೆಂಗಳೂರು ಹಬ್ಬ ಆಯೋಜಿಸುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. https://twitter.com/CMofKarnataka/status/1725129047553032315?ref_src=twsrc%5Etfw%7Ctwcamp%5Etweetembed%7Ctwterm%5E1725129047553032315%7Ctwgr%5Edead6945e848ba3add0b0330b6a74ba8c74039f3%7Ctwcon%5Es1_c10&ref_url=http%3A%2F%2Fapi-news.dailyhunt.in%2F ಬೆಂಗಳೂರು ಹಬ್ಬಕ್ಕೆ ಎಲ್ಲ ರೀತಿಯ ಸಹಕಾರವನ್ನು ಸರ್ಕಾರ ನೀಡಲಿದೆ. ಬೆಂಗಳೂರು ವೇಗವಾಗಿ ಬೆಳೆಯುತ್ತಿರುವ ನಗರ. ಐತಿಹಾಸಿಕ ಮಹತ್ವವಿರುವ ಈ ನಗರವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಯೋಜನಾಬದ್ಧವಾಗಿ ಬೆಳೆಸಬೇಕಾಗಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಸುಮಾರು ಒಂದೂವರೆ ಕೋಟಿ ಜನರಿದ್ದಾರೆ. ಬೆಂಗಳೂರಿನಲ್ಲಿ ಸ್ಥಳೀಯ ಸಂಸ್ಕೃತಿ, ಕಲೆ, ಜನಜೀವನ, ನಾಗರೀಕತೆಗಳನ್ನು ಉಳಿಸಿಕೊಂಡು ಬರಲಾಗಿದೆ. ನಗರದಲ್ಲಿ ಬಹಳ ಹಿಂದಿನಿಂದಲೂ ಕಡ್ಲೆಕಾಯಿ ಪರಿಷೆಯಂತಹ ಸಾಂಪ್ರದಾಯಿಕ ಆಚರಣೆಗಳನ್ನು ಮಾಡಿಕೊಂಡು ಬರಲಾಗುತ್ತಿದೆ…
ಹುಬ್ಬಳ್ಳಿ: ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಆಡಳಿತಕ್ಕೆ ಬಂದ ನಂತರy ಆರ್ಥಿಕವಾಗಿ ದಿವಾಳಿ ಆಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಭಾರತೀಯ ಜನತಾ ಪಕ್ಷದ ನಾಯಕ ಗೋವಿಂದ ಕಾರಜೋಳ ಆರೋಪಿಸಿದರು. ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು. ರಾಜ್ಯದಲ್ಲಿ ಒಂದೂ ಅಭಿವೃದ್ಧಿ ಕಾರ್ಯ ಮಾಡಲಿಲ್ಲ ಇದುವರೆಗೆ ಒಂದು ರೂಪಾಯಿ ಅನುದಾನ ಕೊಟ್ಟಿಲ್ಲ ಶಾಸಕರೇ ತಮ್ಮ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಚುನಾವಣೆ ಪೂರ್ವದಲ್ಲಿ ಕೊಟ್ಟ ಭರವಸೆ ಈಡೇರಿಸಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ 40 ಕ್ಕೂ ಹೆಚ್ಚು ಶಾಸಕರು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ ಸರ್ಕಾರದ ಮಟ್ಟದಲ್ಲಿ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದ್ದು75 ವರ್ಷದಲ್ಲಿ ಯಾವ ಸರ್ಕಾರದ ಮೇಲೂ ಈ ಮಟ್ಟದ ಪರಿಸ್ಥಿತಿ ಬಂದಿರಲಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿಸಿದ್ದರಾಮಯ್ಯ ಅವರ ಸರ್ಕಾರದ ಮೇಲೆ ಬಂದಿದೆ ಸಿದ್ದರಾಮಯ್ಯ ಯತೀಂದ್ರ ಅವರು ವಿಧಾನಸೌಧದ ಹೊರಗಡೆ ಸರ್ಕಾರ ನಡೆಸುತ್ತಿದ್ದಾರೆ ತಮ್ಮ ಮಗನಿಗೆ ಆಡಳಿತ ನೋಡಿಕೊಳ್ಳಲು ಹೇಳಿದ್ದಾರಂತೆ ಇದು ಕಾಂಗ್ರೆಸ್ ಸರ್ಕಾರದ ದುರಾಡಳಿತ ಆಗಿದೆ. ಅಧಿಕಾರಕ್ಕೆ ಬರುವ…
ಹುಬ್ಬಳ್ಳಿ: ರಾಜ್ಯದಲ್ಲಿ ಪರಿಸ್ಥಿತಿ ಏನಾಗಿದೆ ತಿಳಿತಾ ಇಲ್ಲರಾಜ್ಯದಲ್ಲಿ ಯಾರು ಆಡಳಿತ ನಡೆಸುತ್ತಿದ್ದಾರೆ ಅನ್ನೋದೇ ತಿಳಿಯದಂತಾಗಿದೆ ಎಂದು ಕೇಂದ್ರಸಚಿವ ಎ.ನಾರಾಯಣಸ್ವಾಮಿ ಸಂಶಯ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಸರ್ಕಾರಿ ಅಧಿಕಾರಿಗಳು ಯಾರ ಆದೇಶದ ಮೇಲೆ ಕೆಲಸ ಮಾಡಬೇಕು ಅನ್ನೋ ಗೊಂದಲದಲ್ಲಿದ್ದಾರೆ. ರಾಜ್ಯದಲ್ಲಿ ಯಾರು ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದಾರೆ ಅನ್ನೋ ಅನುಮಾನ ಇದೆ ಎಂದ ಅವರು, ಸರ್ಕಾರದಲ್ಲಿ ಯಾರ ಕೈ ಮುಂದೆ ನಡೆಯುತ್ತಿದೆ ಅನ್ನೋದೇ ಗೊಂದಲ ಇದೆ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಮುಖ್ಯಮಂತ್ರಿ ಸಿದ್ದರಾಮಯ್ಯಾ ಅವರ ಪುತ್ರ ಯತೀಂದ್ರ ಅವರು ಸರ್ಕಾರದ ಆಡಳಿತ ವ್ಯವಸ್ಥೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಯತೀಂದ್ರ ಅವರು ಕಾಂಗ್ರೆಸ್ ಸರ್ಕಾರದ ಆಡಳಿತದ ಮತ್ತೊಂದು ಕೇಂದ್ರ ಬಿಂದು ಆಗಿದ್ದು ಸಿದ್ಧರಾಮಯ್ಯ ಅವರೇ ತಮ್ಮ ಆಡಳಿತ ನೋಡಿಕೊಳ್ಳುವಂತೆ ಯತೀಂದ್ರ ಅವರಿಗೆ ಹೇಳಿದ್ದಾರೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ ಕಾರ್ಯವೈಖರಿಯನ್ನ ಬದಲಾವಣೆ ಮಾಡಿಕೊಳ್ಳಬೇಕು’ ಇಲ್ಲವೇ ರಾಜೀನಾಮೆ ಕೊಟ್ಟು ಮನೆಗೆ ತೆರಳಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ಪುರಸಭೆ, ನಗರಸಭೆಗೆ ನೀಡಿದ ಅನುದಾನ ವಾಪಸ್…
ರಾಯಚೂರು:- ಸಂಸದ ರಾಜ ಅಂಬರೀಶ್ ಅವರ ನಾಯಕ ಮತ್ತು ಕೊಪ್ಪಳ ಸಂಸದ ಸಂಗಣ್ಣ ಕರಡಿ ಸಮುಖದಲ್ಲಿ ದಿಶಾ ಸಭೆ ಜರುಗಿದೆ. ಬರಗಾಲದ ಬಗ್ಗೆ 50ಕ್ಕೂ ಹೆಚ್ಚು ಇಲಾಖೆಗಳ ಅಧಿಕಾರಿಗಳ ಜೊತೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸಭೆ ನಡೆದಿದೆ. ಕೃಷಿ, ನೀರಾವರಿ,ತೋಟಗಾರಿಕೆ, ನೀರು ಸರಬರಾಜು, PMGSY, ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವಿವಿಧ ಮುಖ್ಯ ಇಲಾಖೆಗಳು ಸಭೆಗೆ ಗೈರಾಗಿದ್ದರು. ಸಭೆಗೆ ಗೈರಾದ ಜಿಲ್ಲೆಯ ಏಳು ಶಾಸಕರು ರಾಯಚೂರು ನಗರ, ರಾಯಚೂರು ಗ್ರಾಮೀಣ, ಮಾನ್ವಿ, ದೇವದುರ್ಗ, ಸಿಂಧನೂರು, ಲಿಂಗಸಗೂರು, ಮತ್ತು ಮಸ್ಕಿ ಕ್ಷೇತ್ರದ ಶಾಸಕರು ಗೈರಾಗಿದ್ದರು. ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ರಾಯಚೂರು ನಗರ ಶಾಸಕ ಡಾ. ಶಿವರಾಜ್ ಪಾಟೀಲ್, ಮಾನ್ವಿ ಕ್ಷೇತ್ರದ ಶಾಸಕ ಹಂಪಯ್ಯ ನಾಯಕ್, ಸಿಂಧನೂರು ಕ್ಷೇತ್ರದ ಶಾಸಕ ಹಂಪನಗೌಡ ಬಾದರ್ಲಿ, ಮಸ್ಕಿ ಕ್ಷೇತ್ರದ ಶಾಸಕ ಬಸನಗೌಡ ತುರುವಿಹಾಳ, ಲಿಂಗಸ್ಗೂರು ಕ್ಷೇತ್ರದ ಶಾಸಕ ಮಾನಪ್ಪ ಡಿ ವಜ್ಜಲ್, ದೇವದುರ್ಗ ಕ್ಷೇತ್ರದ ಶಾಸಕಿ ಕರಿಯಮ್ಮ ನಾಯಕ ಸೇರಿ ಜಿಲ್ಲೆಯ ಏಳು…