ವಿಶ್ವಕಪ್ 2ನೇ ಸೆಮಿ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ ಆಸ್ಟ್ರೇಲಿಯದ ಬಿಗಿ ದಾಳಿಗೆ ನಲುಗಿ ಭಾರೀ ಆಘಾತಕ್ಕೆ ಸಿಲುಕಿತಾದರೂ ಆಪದ್ಬಾಂಧವನಂತೆ ಡೇವಿಡ್ ಮಿಲ್ಲರ್ ಅವರು ಶತಕ ಸಿಡಿಸಿ ತಂಡ ಇನ್ನೂರರ ಗಡಿ ದಾಟಲು ನೆರವಾದರು. 24 ರನ್ ಆಗುವಷ್ಟರಲ್ಲಿ 4 ಪ್ರಮುಖ ವಿಕೆಟ್ ಗಳನ್ನು ಕಳೆದುಕೊಂಡು ಮುಳುಗುವ ಹಂತಕ್ಕೆ ಸಿಲುಕಿದ ದಕ್ಷಿಣ ಆಫ್ರಿಕಾ ತಂಡ ಬ್ಯಾಟ್ಸ್ ಮ್ಯಾನ್ ಗಳ ದಂಡೇ ಇರುವ ಆಸ್ಟ್ರೇಲಿಯಕ್ಕೆ 213 ರನ್ ಗಳ ಸಾಧಾರಣ ಗುರಿ ಮುಂದಿಟ್ಟಿದೆ. ನಾಯಕ ಟೆಂಬಾ ಬವುಮಾ(0), ಕ್ವಿಂಟನ್ ಡಿ ಕಾಕ್(3) , ಐಡೆನ್ ಮಾರ್ಕ್ರಾಮ್(10), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್(6) ಅವರು ಬೇಗನೆ ನಿರ್ಗಮಿಸಿದರು. ಆಬಳಿಕ ಅಮೋಘ ಆಟವಾಡಿದ ಮಿಲ್ಲರ್ ಕೊನೆಯವರೆಗೂ ಕ್ರೀಸ್ ನಲ್ಲಿದ್ದು, ಶತಕದ ಸಂಭ್ರಮಾಚರಣೆ ಮಾಡಿ ನಿರ್ಗಮಿಸಿದರು. 116 ಎಸೆತಗಳಿಂದ 101 ರನ್ ಗಳಿಸಿದರು. 8ಬೌಂಡರಿ ಮತ್ತು 5 ಆಕರ್ಷಕ ಸಿಕ್ಸರ್ ಸಿಡಿಸಿದರು. ಮಿಲ್ಲರ್ ಗೆ ಸಾಥ್ ನೀಡಿದ ಹೆನ್ರಿಕ್ ಕ್ಲಾಸೆನ್…
Author: AIN Author
ಬೆಂಗಳೂರು:- ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ನಾನೂ ಆಕಾಂಕ್ಷಿ, ನಾಳೆಯೇ ಹೆಸರು ಪ್ರಕಟವಾಗಲಿದೆ ಎಂದು ಮಾಜಿ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜ್ಯ ಬಿಜೆಪಿಗೆ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಆಯ್ಕೆ ಆಗಿ ಒಂದು ವಾರ ಕಳೆದಿದೆ. ಇದರ ಬೆನ್ನಲ್ಲೇ ಈವರೆಗೆ ಖಾಲಿ ಉಳಿದಿರುವ ಪ್ರತಿಪಕ್ಷ ನಾಯಕನ ಆಯ್ಕೆಗೆ ಕಸರತ್ತು ನಡೆದಿದೆ.”ಹೈಕಮಾಂಡ್ ವೀಕ್ಷಕರ ಸಮ್ಮುಖದಲ್ಲಿ ನಾಳೆ ಪ್ರತಿಪಕ್ಷ ನಾಯಕರ ಆಯ್ಕೆಯಾಗಲಿದೆ. ನನ್ನನ್ನೂ ಸೇರಿ ನಾಲ್ಕೈದು ಜನ ಆಕಾಂಕ್ಷಿಗಳಿದ್ದೇವೆ. ಪಕ್ಷ ಯಾರಿಗೇ ಅವಕಾಶ ನೀಡಿದರೂ ನಾನು ಸ್ವಾಗತ ಮಾಡುತ್ತೇನೆ. ಅವರಿಗೆ ಸಂಪೂರ್ಣ ಸಹಕಾರವನ್ನೂ ನೀಡುತ್ತೇನೆ ಎಂದರು. ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಪಕ್ಷ ಯಾರನ್ನು ತೀರ್ಮಾನ ಮಾಡುತ್ತದೋ ಅವರಿಗೆ ಒಲಿಯುತ್ತದೆ. ನಾವಂತೂ ಅರ್ಜಿ ಹಾಕಿಲ್ಲ. ಅರ್ಜಿ ಹಾಕುವ ಸಂಸ್ಕೃತಿಯೂ ನಮ್ಮಲ್ಲಿ ಇಲ್ಲ. ಪಕ್ಷ ಈಗಾಗಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಅವರನ್ನು ಘೋಷಣೆ ಮಾಡಿದೆ. ಪ್ರತಿಪಕ್ಷ ನಾಯಕ ಸ್ಥಾನ ಕೂಡಾ ಪ್ರಮುಖ…
ಬೆಂಗಳೂರು:-ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸುಮ್ಮನೆ ಪ್ರಚಾರ ಮಾಡಿ ನಮ್ಮ ಹುಡುಗನನ್ನು ನಾಯಕನನ್ನಾಗಿ ಬೆಳೆಸುತ್ತಿದ್ದಾರೆ. ಆರೋಪ ಮಾಡಲಿ ಬಿಡಿ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ತಮ್ಮ ತಂದೆಯ ಜವಾಬ್ದಾರಿ ತೆಗೆದುಕೊಂಡು ತಮ್ಮ ಕ್ಷೇತ್ರದ ಶಾಲೆಗಳ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆ. ನಾನು ಬೆಳಗ್ಗೆಯೇ ಆ ವಿಡಿಯೋ ನೋಡಿದೆ. ವರ್ಗಾವಣೆ ದಂಧೆ ಎನ್ನಲು ಅವರು ಯಾವ ಅಧಿಕಾರಿ, ಯಾವ ಹುದ್ದೆ ಎಂದು ಉಲ್ಲೇಖವನ್ನೇ ಮಾಡಿಲ್ಲವಲ್ಲ. ಮಾಜಿ ಶಾಸಕರಾಗಿ ಯತೀಂದ್ರ ಅವರು ಒಂದು ವೇಳೆ ತಮ್ಮ ಕ್ಷೇತ್ರಕ್ಕೆ ಬೇಕಾದ 4-5 ಅಧಿಕಾರಿಗಳನ್ನು ವರ್ಗಾವಣೆ ಮಾಡಿಸಿಕೊಂಡರೆ ಅದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದರು. ಬಿಜೆಪಿ – ಜೆಡಿಎಸ್ ಅವರಿಗೆ ಮಾಡಲು ಕೆಲಸವಿಲ್ಲ. ಯತೀಂದ್ರ ಅವರು ಆಶ್ರಯ ಸಮಿತಿ ಅಧ್ಯಕ್ಷರು. ಒಂದಷ್ಟು ಶಾಲೆಗಳಿಗೆ ಸಿಎಸ್‌ಆರ್ ಅನುದಾನದ ಅಡಿಯಲ್ಲಿ ಮೂಲಸೌಕರ್ಯಗಳನ್ನು ಒದಗಿಸಲು ವಿವೇಕಾನಂದ ಅಥವಾ ಮಹದೇವಪ್ಪ ಎನ್ನುವ ಅಧಿಕಾರಿಗೆ ಶಾಲೆಗಳನ್ನು ಗುರುತಿಸುವ ಜವಾಬ್ದಾರಿ ನೀಡಿದ್ದಾರೆ. ಯಾರೋ ಒಂದಷ್ಟು ಶಾಲೆಗಳ ಹೆಸರನ್ನು ಬದಲಾಯಿಸಿದ…
ಬೆಂಗಳೂರು:- ವರ್ಗಾವಣೆ ದಂಧೆ ಮಾಡುತ್ತಿರುವ ಸಿಎಂ ಪುತ್ರ, ಶಾಸಕ ಡಾ.ಯತೀಂದ್ರರನ್ನು ತಕ್ಷಣ ಬಂಧಿಸಬೇಕು ಎಂದು ಬಿಜೆಪಿ ರಾಜ್ಯ ಎಸ್‌ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಜನರಲ್ ಪವರ್ ಆಫ್ ಅಟಾರ್ನಿ ಸರ್ಕಾರ ಇದೆ. ರಾಜ್ಯದಲ್ಲಿ ಸಿದ್ದರಾಮಯ್ಯರು ಅಧಿಕಾರ ಮಾಡುತ್ತಿಲ್ಲ. ಜಿಪಿಎ ಹೊಂದಿದ ಡಾ. ಯತೀಂದ್ರರು ಅಧಿಕಾರ ಮಾಡುತ್ತಿದ್ದಾರೆ. ಎಲ್ಲ ತೀರ್ಮಾನಗಳನ್ನು ಯತೀಂದ್ರರೇ ತೆಗೆದುಕೊಳ್ಳುತ್ತಾರೆ. ಕಾನೂನಿನಲ್ಲಿ ಇಂತಹ ವರ್ತನೆಗೆ ಅವಕಾಶ ಇಲ್ಲ ಎಂದರು. ಪ್ರಮಾಣವಚನಕ್ಕೆ ವಿರುದ್ಧವಾಗಿ ಡಾ.ಯತೀಂದ್ರರಿಂದ ಅಧಿಕಾರ ನಡೆದಿದೆ. ಸಿದ್ದರಾಮಯ್ಯನವರು 25 ವರ್ಷಗಳ ಹಿಂದಿನ ವ್ಯಕ್ತಿ ಆಗಿದ್ದರೆ ಇವತ್ತೇ ರಾಜೀನಾಮೆ ಕೊಡುತ್ತಾರೆ. ಪರಿವರ್ತಿತ ಸಿದ್ದರಾಮಯ್ಯ ಆಗಿದ್ದರೆ ಭಂಡತನದಿಂದ ಹೀಗೇ ನಡೆದುಕೊಳ್ಳುತ್ತಾರೆ ಎಂದು ದೂರಿದರು. ಇದೆಲ್ಲ ಕಾರಣಗಳಿಂದ ಸಿದ್ದರಾಮಯ್ಯನವರು ತಕ್ಷಣ ರಾಜೀನಾಮೆ ಕೊಡಲಿ ಎಂದು ಒತ್ತಾಯಿಸಿದರು. ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯನವರ ವಿಡಿಯೋವೊಂದು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ರಾಜ್ಯದ ಜನರು ನೋಡುತ್ತಿದ್ದಾರೆ. ಈಗ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಿಂದೆ ವಿರೋಧ ಪಕ್ಷದಲ್ಲಿ ಇದ್ದಾಗ…
ಬೆಂಗಳೂರು:- ಕುಮಾರಸ್ವಾಮಿ ಆರೋಪ ನಿಜವಾಗಿದ್ದರೆ ರಾಜೀನಾಮೆ ಕೊಡಲು ಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಬಿಡುಗಡೆ ಮಾಡಿರುವ ವೀಡಿಯೋದಲ್ಲಿ ವರ್ಗಾವಣೆ ಅಥವಾ ಹಣದ ಬಗ್ಗೆಯಾಗಲಿ ಮಾತನಾಡಿಲ್ಲ ಎಂದರು. ಒಎಸ್‍ಡಿ ಮಹದೇವ್ ಅವರಿಗೆ ಅಕ್ರಮವಾಗಿ ಬಡ್ತಿ ನೀಡಿ ಇಟ್ಟುಕೊಳ್ಳಲಾಗಿದೆ ಎಂಬ ಬಗ್ಗೆ ಉತ್ತರಿಸಿ ಮಹದೇವ್ ಅವರು ನಮ್ಮೂರಿನವರೇ, ಉಪನೋಂದಣಾಧಿಕಾರಿಯಾಗಿದ್ದಾರೆ. ಅವರನ್ನು ನಮ್ಮ ಕಚೇರಿಗೆ ತೆಗೆದುಕೊಳ್ಳಲಾಗಿದೆ. ಅದರಲ್ಲಿ ತಪ್ಪೇನು ಎಂದರು. ವೀಡಿಯೋದಲ್ಲಿ ಹಣದ ಬಗ್ಗೆ ಮಾತನಾಡಿದ್ದಾರೆಯೇ? ಅಥವಾ ವರ್ಗಾವಣೆಯ ಬಗ್ಗೆ ಮಾತನಾಡಿದ್ದಾರೆಯೇ ಎಂದು ಪ್ರಶ್ನಿಸಿದರು. ಅದನ್ನು ವರ್ಗಾವಣೆಗೆ ತಳಕು ಹಾಕಿದ್ದಾರೆ. ನನ್ನ ರಾಜಕೀಯ ಜೀವನದಲ್ಲಿ ಇಂದಿನವರೆಗೆ ಒಂದು ವರ್ಗಾವಣೆಗೆ ಹಣ ಪಡೆದಿದ್ದೇನೆ ಎಂದು ನಿರೂಪಿಸಿದರೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಪುನರುಚ್ಚರಿಸಿದರು. ಆಶ್ರಯ ಸಮಿತಿ ಅಧ್ಯಕ್ಷರು ಹಾಗೂ ಕೆಡಿಪಿ ಸದಸ್ಯರಾಗಿರುವ ಹಾಗೂ ಕ್ಷೇತ್ರವನ್ನು ನೋಡಿಕೊಳ್ಳುತ್ತಿರುವ ಯತೀಂದ್ರ ನನ್ನ ಬಳಿ ಮಾತನಾಡಿ ಸಿಎಸ್‍ಆರ್ ನಿಧಿಯ ಕುರಿತು ಪ್ರಶ್ನಿಸಿದಾಗ ಪಟ್ಟಿಯನ್ನು ಮಹದೇವಪ್ಪ ಅವರಿಗೆ ನೀಡಲಾಗಿದೆ ಎಂದು ತಿಳಿಸಿದೆ. ಕುಮಾರಸ್ವಾಮಿ…
ಬೆಂಗಳೂರು:- ವಿದ್ಯುತ್ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಗೆ ಬೆಸ್ಕಾಂ ಭಾರೀ ದಂಡ ವಿಧಿಸಿದೆ. ಇನ್ನು ಈ ಕುರಿತು ಬೆಸ್ಕಾಂ ಬೆಸ್ಕಾಂ ಜಾಗೃತಾ ದಳದ ಡಿವೈಎಸ್ ಪಿ ಅನುಷ ನೇತೃತ್ವದಲ್ಲಿ ವಿದ್ಯುತ್ ಬಳಕೆ ಕೌಂಟಿಂಗ್ ಮಾಡಿ, 10 ನಿಮಿಷಕ್ಕೆ ಎಷ್ಟು ವಿದ್ಯುತ್ ಬಳಕೆ ಆಗುತ್ತದೆ ಎನ್ನುವುದನ್ನು ಲೆಕ್ಕ ಮಾಡಿದ್ದರು. ಇದರಿಂದ ಎರಡು ದಿನ ಎಷ್ಟು ಬಳಕೆ ಆಗಿದೆ ಎಂಬುದರ ಲೆಕ್ಕ ತೆಗೆದು, ನ.14 ರಂದು ಅಧಿಕಾರಿಗಳು ರಿಪೋರ್ಟ್ ನೀಡಿದ್ದರು. ಇದೀಗ ಬೆಸ್ಕಾಂ ಇಲಾಖೆ ಬರೊಬ್ಬರಿ 68 ಸಾವಿರ ದಂಡ ವಿಧಿಸಿದ್ದಾರೆ. ಬೆಂಗಳೂರಿನ ಜೆಪಿ ನಗರದಲ್ಲಿರುವ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರ ನಿವಾಸಕ್ಕೆ ದೀಪಾವಳಿ ದೀಪಾಲಂಕಾರಕ್ಕಾಗಿ ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ನೇರವಾಗಿ ವಿದ್ಯುತ್ ಪಡೆದಿರುವ ವಿಚಾರ ಭಾರಿ ಸುದ್ದಿಯಾಗಿತ್ತು. ಅದೇ ರೀತಿ ಅವರ ನಿವಾಸದ ಮುಂಭಾಗ ಪೋಸ್ಟರ್‌ಗಳು ಕಾಣಿಸಿಕೊಂಡಿತ್ತು. ಬಳಿಕ ಪೋಸ್ಟರ್‌ಗಳನ್ನು ಪೊಲೀಸರು ತೆರವು ಮಾಡಿದ್ದರು. ಇದೀಗ ಜಯನಗರದ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು…
ಬೆಂಗಳೂರು:- ಹುಡಿಗಿಯರನ್ನೇ ಟಾರ್ಗೆಟ್ ಮಾಡಿಕೊಂಡು, ನಿಮಗೆ ಸರ್ಕಾರಿ ನೌಕರಿ ಕೊಡಿಸುತ್ತೇನೆಂದು ಹೇಳಿ ಲಕ್ಷಾಂತರ ರೂ. ಹಣವನ್ನು ವಸೂಲಿ ಮಾಡುವ ಗ್ಯಾಂಗ್ ಬೆಂಗಳೂರಿನಲ್ಲಿ ಸಕ್ರಿಯವಾಗಿದೆ. ಗ್ರಾಮೀಣ ಭಾಗದಲ್ಲಿ ಕಾಲೇಜು ಹಂತದವರೆಗೆ ಓದಿಕೊಂಡು ಮನೆಯಲ್ಲಿರುವ ಬಡತನವನ್ನು ನೀಗಿಸಲು ಬೆಂಗಳೂರಿಗೆ ಬಂದು ಸಣ್ಣಪುಟ್ಟ ಕಂಪನಿಗಳು ಹಾಗೂ ಫ್ಯಾಕ್ಟರಿಗಳಲ್ಲಿ ಕೆಲಸಕ್ಕೆ ಸೇರಿಕೊಂಡು ಜೀವನ ನಡೆಸುವಂತಹ ಹುಡುಗಿಯರು ಹಾಗೂ ಹೆಣ್ಣು ಮಕ್ಕಳೇ ಹುಷಾರಾಗಿರಿ. ಕಾರಣ ನಿಮ್ಮಂತಹ ದುಡಿಮೆಗೆ ಬಂದ ಹೆಣ್ಣು ಮಕ್ಕಳನ್ನೇ ಟಾರ್ಗೆಟ್ ಮಾಡಿಕೊಂಡು ನಿಮಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಬಣ್ಣ ಬಣ್ಣದ ಮಾತನಾಡಿ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡುವ ಹಾಗೂ ಕೆಲಸದ ಆಮಿಷವೊಡ್ಡಿ ಅನ್ಯ ಕಾರ್ಯಕ್ಕೆ ಬಳಕೆ ಮಾಡಿಕೊಳ್ಳುವ ಗ್ಯಾಂಗ್ ಸಕ್ರಿಯವಾಗಿದೆ. ಹೀಗೆ, ಹಳ್ಳಿ ಹುಡುಗಿಯರಿಂದ ಲಕ್ಷಾಂತರ ರೂ. ಹಣವನ್ನು ಪಡೆದು ಬ್ಯಾಂಕಾಕ್‌ಗೆ ಹೋಗಿ ಮಜಾ ಉಡಾಯಿಸುತ್ತಿದ್ದ ಆರೋಪಿಯನ್ನು ಪೊಲೀಸರು ಹೆಡೆಮುರಿಕಟ್ಟಿ ಜೈಲಿಗಟ್ಟಿದ್ದಾರೆ. ಬಣ್ಣ ಬಣ್ಣದ ಮಾತನಾಡಿ ಲಕ್ಷಾಂತರ ರೂ. ಹಣವನ್ನು ಪಡೆದು ಮೋಸ ಮಾಡಿ ತಾನು ಬ್ಯಾಂಕಾಕ್‌ಗೆ ಹೋಗಿ ಮಜಾ ಮಾಡುತ್ತಿದ್ದ ಆರೋಪಿ ಮೋಹನ್…
ಯುವ ಸಂಗೀತ ನಿರ್ದೇಶಕ ವಾಸುಕಿ ವೈಭವ್ (Vasuki Vaibhav) ಇಂದು ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ವಾಸುಕಿ ಮದುವೆ ಆಗುತ್ತಿರುವ ಬೃಂದಾ (Brunda) ಯಾರು ಎನ್ನುವ ವಿಚಾರವನ್ನು ಈವರೆಗೂ ವಾಸುಕಿ ಯಾರ ಜೊತೆಯೂ ಹಂಚಿಕೊಂಡಿರಲಿಲ್ಲ. ಬೃಂದಾ ಕೂಡ ರಂಗಭೂಮಿ ಕಲಾವಿದರು. ಸಾಕಷ್ಟು ನಾಟಕಗಳಲ್ಲಿ ಅವರು ನಟಿಸಿದ್ದಾರೆ. ಸ್ವತಃ ವಾಸುಕಿ ಜೊತೆಯೇ ರಂಗಭೂಮಿಯಲ್ಲಿ ಕೆಲಸ ಮಾಡಿದ್ದಾರೆ. ಹಲವು ವರ್ಷಗಳಿಂದಲೂ ಈ ಜೋಡಿ ಪ್ರೀತಿಸುತ್ತಿದ್ದ ಎನ್ನುತ್ತವೆ ಮೂಲಗಳು. ವಾಸುಕಿ ಅವರ ಮದುವೆ ತೀರಾ ಸರಳವಾಗಿ ಇಂದು ನಡೆದಿದೆ. ನಟ ಸಿಹಿ ಕಹಿ ಸೇರಿದಂತೆ ಹಲವು ಕಲಾವಿದರು, ಎರಡು ಕುಟುಂಬದ ಸದಸ್ಯರು ಮತ್ತು ಆಪ್ತರು ಮಾತ್ರ ಮದುವೆಯಲ್ಲಿ ಭಾಗಿಯಾಗಿದ್ದಾರೆ. ಮದುವೆ ತೀರಾ ಖಾಸಗಿ ಆಗಿರಲಿ ಎಂದು ಅವರು ಮಾಧ್ಯಮಗಳಿಗೂ ಮದುವೆ ವಿಚಾರವನ್ನು ತಿಳಿಸಿರಲಿಲ್ಲ.
ಬೆಳಗಾವಿ: ವರ್ಗಾವಣೆ ಬಗ್ಗೆ ಸಿಎಂ ಪುತ್ರ ಯತೀಂದ್ರ ವಿಡಿಯೋ ವೈರಲ್ ವಿಚಾರವಾಗಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಯಾವ ವಿಚಾರದ ಬಗ್ಗೆ ಅವರು ಮಾತನಾಡಿದ್ದಾರೋ ಗೊತ್ತಿಲ್ಲ. ಇದಕ್ಕೆ ಸ್ಪಷ್ಟೀಕರಣ ಕೊಡಬೇಕಾಗತ್ತೆ, ಯಾವ ಸಂದರ್ಭದಲ್ಲಿ ಮಾತನಾಡಿದ್ದು ಏನು ಅಂತ ಇದರಲ್ಲಿ ಎಷ್ಟು ರಿಯಾಲಿಟಿ ಇದೆ ನೋಡಬೇಕು. https://ainlivenews.com/joint_pain_suprem_ray_treatment_reiki/ ನಂತರ ಸಂಬಂಧ ಪಟ್ಟವರು ಸ್ವಷ್ಟನೆ ಕೊಡುತ್ತಾರೆ. ಕುಮಾರಸ್ವಾಮಿಯವರ ಆರೋಪಕ್ಕೆ ನಾನು ಉತ್ತರ ಕೊಡಲು ಆಗಲ್ಲ. ಸಂಬಂಧ ಪಟ್ಟವರು ಅದಕ್ಕೆ ಸ್ಪಷ್ಟೀಕರಣ ಕೊಡಬೇಕಾಗುತ್ತದೆ. ಅದು ನನ್ನ ಇಲಾಖೆ ಅಲ್ಲ ನನಗೆ ಸಂಬಂಧಪಟ್ಟ ವಿಚಾರ ಇಲ್ಲ ಎಂದರು.
ಕಲಘಟಗಿ: ಗ್ರಾಮೀಣ ಭಾಗದಲ್ಲಿ ಸಹಕಾರಿ ಕ್ಷೇತ್ರವನ್ನು ಬಲಪಡಿಸುವ ಉದ್ದೇಶದಿಂದ ನವೆಂಬರ್ 17 ಕಲಘಟಗಿಯ ಹನ್ನೆರಡು ಎತ್ತಿನ ಮಠದ ಆವರಣದಲ್ಲಿ ಸಹಕಾರಿ ಸಪ್ತಾಹ ನಡೆಯಲಿದೆ ಎಂದು ರಾಜ್ಯ ಸಂಯುಕ್ತ ಸಹಕಾರಿ ಸಂಘಗಳ ಅಧ್ಯಕ್ಷರಾದ ಜಿ.ನಂಜನಗೌಡ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಸಚಿವ ಸಂತೋಷ್ ಲಾಡ್ ಅವರ ಪ್ರೋತ್ಸಾಹದಿಂದ ಈ ಕಾರ್ಯಕ್ರಮ ಕಲಘಟಗಿಯಲ್ಲಿ ಆಯೋಜನೆಗೊಂಡಿದೆ ಎಂದು ಕೆಸಿಸಿ ಬ್ಯಾಂಕಿನ ನಿರ್ದೇಶಕರಾದ ಮಂಜುನಾಥ್ ಮುರಳ್ಳಿ ತಿಳಿಸಿದರು. https://ainlivenews.com/joint_pain_suprem_ray_treatment_reiki/ ಸಹಕಾರ ಸಚಿವರಾಗಿರುವ ಕೆ. ರಾಜಣ್ಣನವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದೂ ಕೇಂದ್ರ ಸಚಿವರಾಗಿರುವ ಪ್ರಹ್ಲಾದ ಜೋಷಿ, ಕಾರ್ಮಿಕ ಸಚಿವ ಸಂತೋಷ್ ಲಾಡ್, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಬೆಳಗಾವಿ ವಲಯದ ಜಂಟಿ ನಿಬಂಧಕರಾದ ಸುರೇಶ್ ಗೌಡ ಪಾಟೀಲ್, ಸಹಕಾರಿ ಕ್ಷೇತ್ರಗಳ ನಿರ್ದೇಶಕರಾದ ಮಲ್ಲಿಕಾರ್ಜುನ ಹೊರಕೇರಿ, ಕೆಸಿಸಿ ಬ್ಯಾಂಕಿನ ಮುಖ್ಯಾಧಿಕಾರಿ ಕೆ.ಮುನಿಯಪ್ಪ ಮತ್ತು ಸಚಿವ ಸಂತೋಷ್ ಲಾಡ್ ಅವರ ಆಪ್ತ ಸಹಾಯಕರಾದ ಸೋಮಶೇಖರ್ ಬೆನ್ನುರ್, ಹರಿಶಂಕರ್ ಮಠದ್, ಹಾಗೂ ಬಾಳು ಖಾನಾಪುರ ಉಪಸ್ಥಿತರಿದ್ದರು. ವರದಿ, ಮಾರುತಿ ಲಮಾಣಿ