ಜೈಪುರ: ರಾಜಸ್ಥಾನ (Rajasthan) ವಿಧಾನಸಭಾ ಚುನಾವಣೆಗೆ (Assembly Elections) ಬಿಜೆಪಿ (BJP) ಗುರುವಾರ ತನ್ನ ಪ್ರಣಾಳಿಕೆಯನ್ನು (Manifesto) ಬಿಡುಗಡೆ ಮಾಡಿದ್ದು, ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಪ್ರತಿ ಎಲ್‌ಪಿಜಿ (LPG) ಸಿಲಿಂಡರ್‌ಗೆ 450 ರೂ. ಸಬ್ಸಿಡಿ ಮತ್ತು 2.5 ಲಕ್ಷ ಸರ್ಕಾರಿ ಉದ್ಯೋಗಗಳ ಭರವಸೆ ನೀಡಿದೆ. ‘ಸಂಕಲ್ಪ ಪತ್ರ’ ಬಿಡುಗಡೆ ಮಾಡಿದ ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ (JP Nadda), ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ (Congress) ಸರ್ಕಾರದ ಕಾಗದ ಸೋರಿಕೆ ಮತ್ತು ಇತರ ಆರೋಪಗಳ ಹಗರಣಗಳ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗುವುದು ಎಂದು ಹೇಳಿದರು. ಹೆಣ್ಣುಮಕ್ಕಳು ಮತ್ತು ಮಹಿಳೆಯರಿಗಾಗಿ ಹಲವಾರು ಯೋಜನೆಗಳನ್ನು ಘೋಷಿಸಿದ ಅವರು, https://ainlivenews.com/joint_pain_suprem_ray_treatment_reiki/ ಪ್ರತಿ ಜಿಲ್ಲೆಯಲ್ಲಿ ‘ಮಹಿಳಾ ಠಾಣೆ’ ಮತ್ತು ಪ್ರತಿ ಪೊಲೀಸ್ ಠಾಣೆಯಲ್ಲಿ ‘ಮಹಿಳಾ ಡೆಸ್ಕ್’ ಮತ್ತು ಪ್ರತಿ ನಗರದಲ್ಲಿ ‘ಆ್ಯಂಟಿ ರೋಮಿಯೋ ಸ್ಕ್ವಾಡ್’ ಅನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು. ಹೆಣ್ಣುಮಗು ಜನಿಸಿದಾಗ 2 ಲಕ್ಷ ರೂ. ಉಳಿತಾಯ ಬಾಂಡ್ ಮತ್ತು ಭೂಮಿ ಹರಾಜಾದ…
Author: AIN Author
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಪೂರ್ವ, ಪಶ್ಚಿಮ, ಯಲಹಂಕ ಹಾಗೂ ದಕ್ಷಿಣ ವಲಯ ವ್ಯಾಪ್ತಿಯಲ್ಲಿಯ ಪಾದಚಾರಿ ಮಾರ್ಗದಲ್ಲಿನ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಇಂದು ನಡೆಸಲಾಯಿತು. ಪೂರ್ವ ವಲಯ: ಪೂರ್ವ ವಲಯ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗಗಳಲ್ಲಿ ಅನಧಿಕೃತ ಓ.ಎಫ್.ಸಿ. ಕೇಬಲ್‌ಗಳ ತೆರವು ಕಾರ್ಯಾಚರಣೆಯನ್ನು 6 ವಿಧಾನ ಸಭಾ ಕ್ಷೇತ್ರಗಳಾದ ಶಾಂತಿನಗರ, ಶಿವಾಜಿನಗರ, ಸಿ.ವಿ.ರಾಮನ್‌ನಗರ, ಪುಲಿಕೇಶಿನಗರ, ಸರ್ವಜ್ಞನಗರ ಮತ್ತು ಹೆಬ್ಬಾಳ ವ್ಯಾಪ್ತಿಯಲ್ಲಿ ನಡೆಸಲಾಗಿದೆ. ಪಾದಚಾರಿ ಮಾರ್ಗದಲ್ಲಿ ಒತ್ತುವರಿಯಾಗಿರುವ ಅಂಗಡಿ ಮಳಿಗೆಗಳ ಮೇಲ್ಚಾವಣಿ, ತಳ್ಳುವ ಗಾಡಿ ಹಾಗೂ ಅನಧಿಕೃತವಾಗಿ ಅಳವಡಿಸಿರುವ ಓ.ಎಫ್.ಸಿ. ಕೇಬಲ್‌ಗಳ ತೆರವು ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿರುತ್ತದೆ. ಅದರಂತೆ, ಪೂರ್ವ ವಲಯ ವ್ಯಾಪ್ತಿಯಲ್ಲಿ 6 ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಚಾರಿ ಮಾರ್ಗ ಹಾಗೂ ಒ.ಎಫ್.ಸಿ ಕೇಬಲ್ ತೆರವುಕಾರ್ಯಾಚರಣೆ ನಡೆಸಲಾಗಿದ್ದು, ಈ ಪೈಕಿ 13 ಕಿ.ಮೀ ವ್ಯಾಪ್ತಿಯ ರಸ್ತೆಯಲ್ಲಿ 104 ತಳ್ಳುವ ಗಾಡಿ ಜಪ್ತಿ ಮಾಡಲಾಗಿದೆ. 54 ಪಾದಚಾರಿ ಮಾರ್ಗಕ್ಕೆ ಚಾಚಿಕೊಂಡ ಅಂಗಡಿ ಮುಂಗಟ್ಟುಗಳ ಮೇಲ್ಚಾವಣಿ, 19 ಅನಧಿಕೃತ ನಾಮಫಲಕಗಳು, 7000 ಮೀಟರ್ ಅನಧಿಕೃತ ಒ.ಎಫ್.ಸಿ ಕೇಬಲ್‌ಗಳು ಹಾಗೂ 5…
ಬೆಂಗಳೂರು: ಯತೀಂದ್ರ ಬೆಳವಣಿಗೆ ಇವತ್ತಿಂದಲ್ಲ ಸರ್ಕಾರ ಬಂದಾಗಿಲಿನಿಂದ ಸಿಎಂ ಅಧಿಕಾರವನ್ನು ಯತೀಂದ್ರ ಚಲಾಯಿಸುತ್ತಿರುವುದು ಜಗಜ್ಜಾಹೀರಾಗಿದೆ ಎಂದು ಬಿಜೆಪಿ ಶಾಸಕ ಆರ್.ಅಶೋಕ್ ಹೇಳಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ಅವರ ವಿಡಿಯೋ ವೈರಲ್ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗ ಬಂದಿರುವ ವೀಡಿಯೋ 10ನೇಯದ್ದೋ 15ನೇಯದ್ದೋ ಇರಬೇಕು. ಕಾಂಗ್ರೆಸ್ ಅಂದರೆ ಈ ರೀತಿ ದಂಧೆ ಮಾಡುವುದರಲ್ಲಿ ಎಕ್ಸ್ಪರ್ಟ್. ವೀಡಿಯೋ ಬಗ್ಗೆ ತನಿಖೆಯಾಗಬೇಕು ಎಂದರು. ಏನು ಆದೇಶ ಮಾಡುತ್ತಾರೋ ಅದನ್ನು 100% ಫಾಲೋ ಮಾಡಲ್ಲ. ವರ್ಗಾವಣೆ ಮಾಡಬಾರದು ಅಂತಾ ಆದೇಶ ಮಾಡುತ್ತಾರೆ, ಆದರೆ ಸಾವಿರಾರು ವರ್ಗಾವಣೆ ಮಾಡಿದ್ದಾರೆ. ದಿನನಿತ್ಯ ಇದೇ ದಂಧೆ ಆಗಿಬಿಟ್ಟಿದೆ ಈ ಕೂಡಲೇ ಸಿಎಂ ರಾಜೀನಾಮೆ ಕೊಡಬೇಕು ಎಂದು ಕಿಡಿಕಾರಿದ್ದಾರೆ.
ಬೆಂಗಳೂರು: ಸರ್ಕಾರದ ಶಕ್ತಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಸಂಬಂಧಿಸಿ ಕೆಎಸ್‌ಆರ್‌ಟಿಸಿ ವತಿಯಿಂದ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಮಹಿಳೆಯರು ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಪ್ರಯಾಣಿಸುವಾಗ ಇನ್ಮುಂದೆ ಮೊಬೈಲ್‌ನಲ್ಲಿ ಆಧಾರ್ ಕಾರ್ಡ್ ತೋರಿಸಿ ಶಕ್ತಿ ಯೋಜನೆಯಡಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು ಎಂದು ತಿಳಿಸಿದೆ. ಉಚಿತ ಪ್ರಯಾಣಕ್ಕಾಗಿ ಮಹಿಳಾ ಪ್ರಯಾಣಿಕರು ಮೂಲ, ನಕಲು, ಡಿಜಿ ಲಾಕರ್ ಪ್ರತಿ ತೋರಿಸಿ ಪ್ರಯಾಣ ಮಾಡಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಮಹಿಳಾ ಪ್ರಯಾಣಿಕರು ಮೊಬೈಲ್‌ನಲ್ಲಿ ಅಧಿಕೃತ ಗುರುತಿನ ಚೀಟಿ ತೋರಿಸಿದಾದಾಗಲೂ ಮೊಬೈಲ್‌ನಲ್ಲಿನ ಗುರುತಿನ ಚೀಟಿಯನ್ನು ಮಾನ್ಯ ಮಾಡುವುದಿಲ್ಲ ಎಂದು ಕೆಲವು ನಿರ್ವಾಹಕರು ಅನವಶ್ಯಕವಾಗಿ ಮಹಿಳೆಯರಿಗೆ ತೊಂದರೆಯುಂಟು ಮಾಡುತ್ತಿರುವ ಬಗ್ಗೆ ಪದೇ ಪದೇ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಕೆಎಸ್‌ಆರ್‌ಟಿಸಿ ಸ್ಪಷ್ಟನೆ ನೀಡಿದೆ.
ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ನವೆಂಬರ್ 22ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ನವೆಂಬರ್ 19 ರಿಂದ 3 ದಿನಗಳ ಕಾಲ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಇಂದಿನಿಂದಲೇ ಮಳೆ ಆರಂಭವಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಬೆಂಗಳೂರು: ಅಕ್ರಮ ವಿದ್ಯುತ್ ಸಂಪರ್ಕ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರು, ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರನ್ನು ಕರೆಂಟ್ ಕಳ್ಳ ಎಂದು ಬಿತ್ತಿಪತ್ರ ಅಂಟಿಸಿದ್ದಕ್ಕೆ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದ ಗೋಡೆಗಳಿಗೆ ಪೋಸ್ಟರ್ ಅಂಟಿಸಿದ್ದು, ಈ ಸಂಬಂಧ ಜೆಡಿಎಸ್ ನಗರ ಘಟಕದ ಅಧ್ಯಕ್ಷ ರಮೇಶ್ಗೌಡ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಕಾಂಗ್ರೆಸ್ ಕಾರ್ಯಕರ್ತರಾದ ಬಿಂದುಗೌಡ, ನವೀನ್ಗೌಡ ಸೇರಿದಂತೆ ಒಟ್ಟು 6 ಜನರು ವಿರುದ್ಧ ಎಫ್ಐಆರ್ ದಾಖಲಾಗಿದೆ. ಜೆಡಿಎಸ್ ಕಚೇರಿಗೆ ಅತಿಕ್ರಮ ಪ್ರವೇಶ ಮಾಡಿ ಪೋಸ್ಟರ್ ಅಂಟಿಸಿದ್ದಾರೆ. ಹಾಗೂ ಇದನ್ನು ತಡೆಯಲು ಬಂದ ಸೆಕ್ಯೂರಿಟಿ ಮೇಲೆ ಕೀ ಬಂಚ್ನಿಂದ ಹಲ್ಲೆ ಮಾಡಿದ್ದಾರೆ ಎಂದು ರಮೇಶ್ ಗೌಡ ಅವರು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅವಹೇಳನಕಾರಿ ಪೋಸ್ಟರ್ ಅಂಟಿಸಿ ಸೆಕ್ಯೂರಿಟಿಗೆ ಬೆದರಿಸಿದ ಆರೋಪ ಮೇರೆಗೆ ಶ್ರೀರಾಮಪುರ ಠಾಣೆಯಲ್ಲಿ ಐಪಿಸಿ ಸೆಕ್ಷನ್ 448, 504, 324, 506, 149 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದಲ್ಲಿ ಬಿಂದುಗೌಡ A-5,…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ನಲ್ಲೂರು ಬಳಿ ಹೊಸದಾಗಿ ಮತ್ತೊಂದು ಟೋಲ್ ಪ್ಲಾಜಾ ಆರಂಭವಾಗುತ್ತಿದೆ. ಇಂದು ಮಧ್ಯರಾತ್ರಿಯಿಂದ ಹೊಸ ಟೋಲ್ ಆರಂಭಗೊಳ್ಳಲಿದ್ದು, ಬೆಂಗಳೂರಿಗೆ ಬರುವ ವಾಹನ ಸವಾರರಿಗೆ ಮತ್ತೊಂದು ಟೋಲ್ ಬರೆ ಎಳೆಯಲಿದೆ. ದೊಡ್ಡಬಳ್ಳಾಪುರ ಬೈಪಾಸ್ನಿಂದ ಹೊಸಕೋಟೆವರೆಗೂ ಈಗಾಗಲೇ ಹೆದ್ದಾರಿ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ. ದಾಬಸ್ ಪೇಟೆಯಿಂದ ಹೊಸಕೋಟೆವರೆಗಿನ ಚತುಶ್ಪಥ ಹೆದ್ದಾರಿ ಇದೆ. ಸುಮಾರು 43 ಕಿ.ಮೀ ಹೆದ್ದಾರಿ ರಸ್ತೆ ವಾಹನ ಸವಾರರಿಗೆ ಬಳಕೆಗೆ ಮುಕ್ತವಾಗಿದೆ. ಈ ಹಿನ್ನಲೆ ನಾಳೆಯಿಂದ ನಲ್ಲೂರು ಬಳಿಯ ಟೋಲ್ ಆರಂಭಗೊಳಲಿದೆ. ಟೋಲ್ ದರ ಹೀಗಿದೆ ಕಾರು, ಲಘು ಮೋಟಾರು ವಾಹನಗಳಿಗೆ ಏಕಮುಖ ಸಂಚಾರಕ್ಕೆ 70, ಅದೇ ದಿನ ಮರಳಿ ಬಂದರೆ 105 ಇರಲಿದೆ. ಒಂದು ತಿಂಗಳಲ್ಲಿ 50 ಬಾರಿ ಸಂಚಾರದ ಮಾಸಿಕ ಪಾಸ್ ಶುಲ್ಕ 2,375 ರೂ. ಲಘು ವಾಣಿಜ್ಯ ಮತ್ತು ಸರಕು ವಾಹನಗಳು, ಮಿನಿ ಬಸ್, ಏಕಮುಖ ಸಂಚಾರಕ್ಕೆ 115, ಅದೇ ದಿನ ಮರಳಿ ಬಂದರೆ 175 ರೂ. ಒಂದು ತಿಂಗಳಲ್ಲಿ 50…
ನವದೆಹಲಿ: ಮುಂದಿನ 2 ಅಥವಾ 3 ದಿನಗಳ ಕಾಲ ರಾಷ್ಟ್ರ ರಾಜಧಾನಿಯ ಮಾಲಿನ್ಯ (Pollution) ಪರಿಸ್ಥಿತಿಯನ್ನು ಗಮನಿಸಲಾಗುವುದು. ಆ ಬಳಿಕ ಸಮ-ಬೆಸ ಜಾರಿ ಮಾಡುವುದು ಅಥವಾ ಕೃತಕ ಮಳೆ (Artificial Rain) ಸುರಿಸುವ ಬಗ್ಗೆ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ (Gopal Rai) ಹೇಳಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ದೀಪಾವಳಿಯಿಂದ ದೆಹಲಿಯ ಗಾಳಿಯ ಗುಣಮಟ್ಟವು ‘ಅತ್ಯಂತ ಕಳಪೆ’ ವಿಭಾಗದಲ್ಲಿದೆ. ಮುಂದಿನ 2-3 ದಿನಗಳ ತಾಪಮಾನ ಮತ್ತು ಗಾಳಿಯ ವೇಗವನ್ನು ಪರಿಶೀಲಿಸಲಾಗುವುದು. ಪರಿಸ್ಥಿತಿ ಉತ್ತಮಗೊಳ್ಳುವ ನಿರೀಕ್ಷೆಯಿದೆ ಎಂದರು. https://ainlivenews.com/joint_pain_suprem_ray_treatment_reiki/ ಒಂದು ವೇಳೆ ಪರಿಸ್ಥಿತಿ ಸುಧಾರಿಸದ್ದಿದ್ದರೇ ನಾವು ಕ್ರಮಗಳ ಬಗ್ಗೆ ವಿಜ್ಞಾನಿಗಳ ಜೊತೆಗೆ ನಾವು ಮೇಲ್ವಿಚಾರಣೆ ಮಾಡುತ್ತೇವೆ. ತಜ್ಞರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಕ್ರಮ ಜರುಗಿಸಲಾಗುವುದು. ಗಾಳಿಯ ಗುಣಮಟ್ಟ ತೀವ್ರವಾಗಿ ಹದಗೆಟ್ಟರೇ ಮಾತ್ರ ಬೆಸ-ಸಮದಂತಹ ಕಠಿಣ ಕ್ರಮಗಳ ಬಗ್ಗೆ ಯೋಚಿಸಲಾಗುವುದು ಎಂದು ಹೇಳಿದರು.
ಬೆಂಗಳೂರು: ಬೀದಿನಾಯಿ ಕಚ್ಚಿ ಸತ್ತರೆ 5 ಲಕ್ಷ ರೂ. ಪರಿಹಾರ ಹಾಗೂ ಗಾಯಗೊಂಡವರಿಗೆ 5 ಸಾವಿರ ರೂ. ನೆರವು ನೀಡಲು ನಿರ್ಧರಿಸಲಾಗಿದೆ ಎಂದು ಹೈಕೋರ್ಟ್ಗೆ ಸರ್ಕಾರದಿಂದ ಮಾಹಿತಿ ನೀಡಲಾಗಿದೆ. ಪ್ರಕರಣದ ಕುರಿತು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಮತ್ತು ನ್ಯಾ.ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ರಾಜ್ಯ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ 2023ರ ಅ.6ರಂದು ಸಭೆ ನಡೆಸಲಾಗಿದೆ. ನಾಯಿ ದಾಳಿಯಿಂದ ಗಾಯಗೊಂಡವರಿಗೆ ಐದು ಸಾವಿರ ರೂ. ಹಾಗೂ ಜೀವ ಕಳೆದುಕೊಂಡವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುವ ಕುರಿತು ರ್ಚಚಿಸಲಾಗಿದೆ ಎಂದು ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಮುಂದಿನ 4 ವಾರಗಳಲ್ಲಿ ತೀರ್ಮಾನ ಕೈಗೊಳ್ಳುವಂತೆ ಸೂಚಿಸಿತು
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ನನ್ನ ಆಸ್ತಿಯನ್ನು (Property) ತನಿಖೆ (Investigation) ಮಾಡಿಸಲಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ (ಹೆಸರು ಹೇಳದೆ ಪರೋಕ್ಷವಾಗಿ ಸಚಿವ ಚೆಲುವರಾಯಸ್ವಾಮಿಗೆ ಸವಾಲ್ ಹಾಕಿದ್ದಾರೆ. ಕುಮಾರಸ್ವಾಮಿ ಆಸ್ತಿ ತನಿಖೆ ಮಾಡಿಸಿ ಎಂಬ ಚೆಲುವರಾಯಸ್ವಾಮಿ ಹೇಳಿಕೆಗೆ ತಿರುಗೇಟು ಕೊಟ್ಟ ಅವರು, ನನ್ನ ಸ್ನೇಹಿತರೊಬ್ಬರು, ನನ್ನ ಆಸ್ತಿ ತನಿಖೆ ಮಾಡುವ ಭಯಕ್ಕೆ ಬಿಜೆಪಿ ಜೊತೆ ಹೋಗಿದ್ದಾರೆ ಎಂದು ಹೇಳಿದ್ದಾರೆ. ಈಗ ತನಿಖೆ ಮಾಡಿ ಎಂದು ಹೇಳುತ್ತಿದ್ದಾರೆ. ನಾನು ಈಗಲೂ ಸಿದ್ಧ. ನನ್ನ ಆಸ್ತಿ ತನಿಖೆ ಮಾಡಿಸಿ. ನಿಮ್ಮದೆ ಸರ್ಕಾರ ಇದೆ. ಸಿಎಂಗೆ ಹೇಳಿ ಯಾವ ತನಿಖೆ ಬೇಕೋ ಮಾಡಿಸಿ ಎಂದರು ನನ್ನ ಆಸ್ತಿ ತನಿಖೆ ಆಗಲಿ. ಅದರ ಜೊತೆ ಮಾಕಳಿ ಗ್ರಾಮದ ಮೂರೂವರೆ ಎಕರೆ ಕೆರೆ ಜಾಗ ಸರ್ವೆ ನಂಬರ್ 13 ಕೆರೆನೇ ಮಾಯ ಆಗಿದೆ. ಆ ಕೆರೆ ಜಾಗ ನಾನು ನುಂಗಿ ಹಾಕಿದ್ದೀನಾ? ಆ ಕೆರೆ ನುಂಗಿ ಹಾಕಿದ್ದು ಯಾರು? ಇದು ತನಿಖೆ ಆಗಲಿ ಅಂತ ಚೆಲುವರಾಯಸ್ವಾಮಿ…