Author: AIN Author

ಬೆಂಗಳೂರು: ಸರ್ಕಾರದ ಶಕ್ತಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಸಂಬಂಧಿಸಿ ಕೆಎಸ್‌ಆರ್‌ಟಿಸಿ ವತಿಯಿಂದ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಮಹಿಳೆಯರು ಕೆಎಸ್​ಆರ್​ಟಿಸಿ ಬಸ್​ ನಲ್ಲಿ ಪ್ರಯಾಣಿಸುವಾಗ ಇನ್ಮುಂದೆ ಮೊಬೈಲ್‌ನಲ್ಲಿ ಆಧಾರ್‌ ಕಾರ್ಡ್‌ ತೋರಿಸಿ ಶಕ್ತಿ ಯೋಜನೆಯಡಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು ಎಂದು ತಿಳಿಸಿದೆ. ಉಚಿತ ಪ್ರಯಾಣಕ್ಕಾಗಿ ಮಹಿಳಾ ಪ್ರಯಾಣಿಕರು ಮೂಲ, ನಕಲು, ಡಿಜಿ ಲಾಕರ್ ಪ್ರತಿ ತೋರಿಸಿ ಪ್ರಯಾಣ ಮಾಡಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಮಹಿಳಾ ಪ್ರಯಾಣಿಕರು ಮೊಬೈಲ್‌ನಲ್ಲಿ ಅಧಿಕೃತ ಗುರುತಿನ ಚೀಟಿ ತೋರಿಸಿದಾದಾಗಲೂ ಮೊಬೈಲ್‌ನಲ್ಲಿನ ಗುರುತಿನ ಚೀಟಿಯನ್ನು ಮಾನ್ಯ ಮಾಡುವುದಿಲ್ಲ ಎಂದು ಕೆಲವು ನಿರ್ವಾಹಕರು ಅನವಶ್ಯಕವಾಗಿ ಮಹಿಳೆಯರಿಗೆ ತೊಂದರೆಯುಂಟು ಮಾಡುತ್ತಿರುವ ಬಗ್ಗೆ ಪದೇ ಪದೇ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಕೆಎಸ್‌ಆರ್‌ಟಿಸಿ ಸ್ಪಷ್ಟನೆ ನೀಡಿದೆ.

Read More

ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ನವೆಂಬರ್ 22ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ನವೆಂಬರ್ 19 ರಿಂದ 3 ದಿನಗಳ ಕಾಲ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಇಂದಿನಿಂದಲೇ ಮಳೆ ಆರಂಭವಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

Read More

ಬೆಂಗಳೂರು: ಅಕ್ರಮ ವಿದ್ಯುತ್ ಸಂಪರ್ಕ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರು, ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರನ್ನು ಕರೆಂಟ್ ಕಳ್ಳ ಎಂದು ಬಿತ್ತಿಪತ್ರ ಅಂಟಿಸಿದ್ದಕ್ಕೆ ಶ್ರೀರಾಂಪುರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದ ಗೋಡೆಗಳಿಗೆ ಪೋಸ್ಟರ್ ಅಂಟಿಸಿದ್ದು, ಈ ಸಂಬಂಧ ಜೆಡಿಎಸ್ ನಗರ ಘಟಕದ ಅಧ್ಯಕ್ಷ ರಮೇಶ್​​ಗೌಡ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಕಾಂಗ್ರೆಸ್ ಕಾರ್ಯಕರ್ತರಾದ ಬಿಂದುಗೌಡ, ನವೀನ್​ಗೌಡ ಸೇರಿದಂತೆ ಒಟ್ಟು 6 ಜನರು ವಿರುದ್ಧ ಎಫ್​ಐಆರ್ ದಾಖಲಾಗಿದೆ. ಜೆಡಿಎಸ್​ ಕಚೇರಿಗೆ ಅತಿಕ್ರಮ ಪ್ರವೇಶ ಮಾಡಿ ಪೋಸ್ಟರ್​ ಅಂಟಿಸಿದ್ದಾರೆ. ಹಾಗೂ ಇದನ್ನು ತಡೆಯಲು ಬಂದ ಸೆಕ್ಯೂರಿಟಿ ಮೇಲೆ ಕೀ ಬಂಚ್​ನಿಂದ ಹಲ್ಲೆ ಮಾಡಿದ್ದಾರೆ ಎಂದು ರಮೇಶ್ ಗೌಡ ಅವರು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅವಹೇಳನಕಾರಿ ಪೋಸ್ಟರ್​ ಅಂಟಿಸಿ ಸೆಕ್ಯೂರಿಟಿಗೆ ಬೆದರಿಸಿದ ಆರೋಪ ಮೇರೆಗೆ ಶ್ರೀರಾಮಪುರ ಠಾಣೆಯಲ್ಲಿ ಐಪಿಸಿ ಸೆಕ್ಷನ್​​ 448, 504, 324, 506, 149 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದಲ್ಲಿ ಬಿಂದುಗೌಡ A-5,…

Read More

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ನಲ್ಲೂರು ಬಳಿ ಹೊಸದಾಗಿ ಮತ್ತೊಂದು ಟೋಲ್​ ಪ್ಲಾಜಾ ಆರಂಭವಾಗುತ್ತಿದೆ. ಇಂದು ಮಧ್ಯರಾತ್ರಿಯಿಂದ ಹೊಸ ಟೋಲ್ ಆರಂಭಗೊಳ್ಳಲಿದ್ದು, ಬೆಂಗಳೂರಿಗೆ ಬರುವ ವಾಹನ ಸವಾರರಿಗೆ ಮತ್ತೊಂದು ಟೋಲ್​ ಬರೆ ಎಳೆಯಲಿದೆ. ದೊಡ್ಡಬಳ್ಳಾಪುರ ಬೈಪಾಸ್​ನಿಂದ ಹೊಸಕೋಟೆವರೆಗೂ ಈಗಾಗಲೇ ಹೆದ್ದಾರಿ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ. ದಾಬಸ್ ಪೇಟೆಯಿಂದ ಹೊಸಕೋಟೆವರೆಗಿನ ಚತುಶ್ಪಥ ಹೆದ್ದಾರಿ ಇದೆ. ಸುಮಾರು 43 ಕಿ.ಮೀ ಹೆದ್ದಾರಿ ರಸ್ತೆ ವಾಹನ ಸವಾರರಿಗೆ ಬಳಕೆಗೆ ಮುಕ್ತವಾಗಿದೆ. ಈ ಹಿನ್ನಲೆ ನಾಳೆಯಿಂದ ನಲ್ಲೂರು ಬಳಿಯ ಟೋಲ್ ಆರಂಭಗೊಳಲಿದೆ. ಟೋಲ್ ದರ ಹೀಗಿದೆ ಕಾರು, ಲಘು ಮೋಟಾರು ವಾಹನಗಳಿಗೆ ಏಕಮುಖ ಸಂಚಾರಕ್ಕೆ 70, ಅದೇ ದಿನ ಮರಳಿ ಬಂದರೆ 105 ಇರಲಿದೆ. ಒಂದು ತಿಂಗಳಲ್ಲಿ 50 ಬಾರಿ ಸಂಚಾರದ ಮಾಸಿಕ ಪಾಸ್ ಶುಲ್ಕ 2,375 ರೂ. ಲಘು ವಾಣಿಜ್ಯ ಮತ್ತು ಸರಕು ವಾಹನಗಳು, ಮಿನಿ ಬಸ್, ಏಕಮುಖ ಸಂಚಾರಕ್ಕೆ 115, ಅದೇ ದಿನ ಮರಳಿ ಬಂದರೆ 175 ರೂ. ಒಂದು ತಿಂಗಳಲ್ಲಿ 50…

Read More

ನವದೆಹಲಿ: ಮುಂದಿನ 2 ಅಥವಾ 3 ದಿನಗಳ ಕಾಲ ರಾಷ್ಟ್ರ ರಾಜಧಾನಿಯ ಮಾಲಿನ್ಯ (Pollution) ಪರಿಸ್ಥಿತಿಯನ್ನು ಗಮನಿಸಲಾಗುವುದು. ಆ ಬಳಿಕ ಸಮ-ಬೆಸ ಜಾರಿ ಮಾಡುವುದು ಅಥವಾ ಕೃತಕ ಮಳೆ (Artificial Rain) ಸುರಿಸುವ ಬಗ್ಗೆ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ (Gopal Rai) ಹೇಳಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ದೀಪಾವಳಿಯಿಂದ ದೆಹಲಿಯ ಗಾಳಿಯ ಗುಣಮಟ್ಟವು ‘ಅತ್ಯಂತ ಕಳಪೆ’ ವಿಭಾಗದಲ್ಲಿದೆ. ಮುಂದಿನ 2-3 ದಿನಗಳ ತಾಪಮಾನ ಮತ್ತು ಗಾಳಿಯ ವೇಗವನ್ನು ಪರಿಶೀಲಿಸಲಾಗುವುದು. ಪರಿಸ್ಥಿತಿ ಉತ್ತಮಗೊಳ್ಳುವ ನಿರೀಕ್ಷೆಯಿದೆ ಎಂದರು. https://ainlivenews.com/joint_pain_suprem_ray_treatment_reiki/ ಒಂದು ವೇಳೆ ಪರಿಸ್ಥಿತಿ ಸುಧಾರಿಸದ್ದಿದ್ದರೇ ನಾವು ಕ್ರಮಗಳ ಬಗ್ಗೆ ವಿಜ್ಞಾನಿಗಳ ಜೊತೆಗೆ ನಾವು ಮೇಲ್ವಿಚಾರಣೆ ಮಾಡುತ್ತೇವೆ. ತಜ್ಞರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಕ್ರಮ ಜರುಗಿಸಲಾಗುವುದು. ಗಾಳಿಯ ಗುಣಮಟ್ಟ ತೀವ್ರವಾಗಿ ಹದಗೆಟ್ಟರೇ ಮಾತ್ರ ಬೆಸ-ಸಮದಂತಹ ಕಠಿಣ ಕ್ರಮಗಳ ಬಗ್ಗೆ ಯೋಚಿಸಲಾಗುವುದು ಎಂದು ಹೇಳಿದರು. 

Read More

ಬೆಂಗಳೂರು: ಬೀದಿನಾಯಿ ಕಚ್ಚಿ ಸತ್ತರೆ 5 ಲಕ್ಷ ರೂ. ಪರಿಹಾರ ಹಾಗೂ ಗಾಯಗೊಂಡವರಿಗೆ 5 ಸಾವಿರ ರೂ. ನೆರವು ನೀಡಲು ನಿರ್ಧರಿಸಲಾಗಿದೆ ಎಂದು ಹೈಕೋರ್ಟ್​ಗೆ ಸರ್ಕಾರದಿಂದ ಮಾಹಿತಿ ನೀಡಲಾಗಿದೆ. ಪ್ರಕರಣದ ಕುರಿತು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಮತ್ತು ನ್ಯಾ.ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ರಾಜ್ಯ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ 2023ರ ಅ.6ರಂದು ಸಭೆ ನಡೆಸಲಾಗಿದೆ. ನಾಯಿ ದಾಳಿಯಿಂದ ಗಾಯಗೊಂಡವರಿಗೆ ಐದು ಸಾವಿರ ರೂ. ಹಾಗೂ ಜೀವ ಕಳೆದುಕೊಂಡವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುವ ಕುರಿತು ರ್ಚಚಿಸಲಾಗಿದೆ ಎಂದು ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಮುಂದಿನ 4 ವಾರಗಳಲ್ಲಿ ತೀರ್ಮಾನ ಕೈಗೊಳ್ಳುವಂತೆ ಸೂಚಿಸಿತು

Read More

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ನನ್ನ ಆಸ್ತಿಯನ್ನು (Property) ತನಿಖೆ (Investigation) ಮಾಡಿಸಲಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ (ಹೆಸರು ಹೇಳದೆ ಪರೋಕ್ಷವಾಗಿ ಸಚಿವ ಚೆಲುವರಾಯಸ್ವಾಮಿಗೆ  ಸವಾಲ್ ಹಾಕಿದ್ದಾರೆ. ಕುಮಾರಸ್ವಾಮಿ ಆಸ್ತಿ ತನಿಖೆ ಮಾಡಿಸಿ ಎಂಬ ಚೆಲುವರಾಯಸ್ವಾಮಿ ಹೇಳಿಕೆಗೆ ತಿರುಗೇಟು ಕೊಟ್ಟ ಅವರು, ನನ್ನ ಸ್ನೇಹಿತರೊಬ್ಬರು, ನನ್ನ ಆಸ್ತಿ ತನಿಖೆ ಮಾಡುವ ಭಯಕ್ಕೆ ಬಿಜೆಪಿ ಜೊತೆ ಹೋಗಿದ್ದಾರೆ ಎಂದು ಹೇಳಿದ್ದಾರೆ. ಈಗ ತನಿಖೆ ಮಾಡಿ ಎಂದು ಹೇಳುತ್ತಿದ್ದಾರೆ. ನಾನು ಈಗಲೂ ಸಿದ್ಧ. ನನ್ನ ಆಸ್ತಿ ತನಿಖೆ ಮಾಡಿಸಿ. ನಿಮ್ಮದೆ ಸರ್ಕಾರ ಇದೆ. ಸಿಎಂಗೆ ಹೇಳಿ ಯಾವ ತನಿಖೆ ಬೇಕೋ ಮಾಡಿಸಿ ಎಂದರು ನನ್ನ ಆಸ್ತಿ ತನಿಖೆ ಆಗಲಿ. ಅದರ ಜೊತೆ ಮಾಕಳಿ ಗ್ರಾಮದ ಮೂರೂವರೆ ಎಕರೆ ಕೆರೆ ಜಾಗ ಸರ್ವೆ ನಂಬರ್ 13 ಕೆರೆನೇ ಮಾಯ ಆಗಿದೆ. ಆ ಕೆರೆ ಜಾಗ ನಾನು ನುಂಗಿ ಹಾಕಿದ್ದೀನಾ? ಆ ಕೆರೆ ನುಂಗಿ ಹಾಕಿದ್ದು ಯಾರು? ಇದು ತನಿಖೆ ಆಗಲಿ ಅಂತ ಚೆಲುವರಾಯಸ್ವಾಮಿ…

Read More

ಹಾಸನ: ಲಿಸ್ಟ್ ಬಗ್ಗೆ ಯತೀಂದ್ರ ಮಾತನಾಡಿರುವ ವಿಡಿಯೋ ವೈರಲ್​ ಆಗುತ್ತಿದ್ದಂತೆ ರಾಜಕೀಯ ವಲಯದಲ್ಲಿ ಚರ್ಚೆ ಜೋರಾಗಿದೆ. ಆದರೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಪರ ಹೆಚ್​.ಡಿ.ರೇವಣ್ಣ ಬ್ಯಾಟಿಂಗ್​​ ಮಾಡಿದ್ದಾರೆ. ಒಂದು ಕ್ಷೇತ್ರದ ಜವಾಬ್ದಾರಿ ಇರುವಾಗ ಇದೆಲ್ಲ ಸಾಮಾನ್ಯ. ಅಧಿಕಾರ ಇದ್ದಾಗ ಕೆಲಸ ಮಾಡಬೇಕೆಂದು ಹೇಳ್ತಾರೆ, ಇದು ತಪ್ಪಾ? ಯತೀಂದ್ರ ಶಾಸಕರಾಗಿದ್ದರು, ಕೆಲಸ ಆಗಬೇಕೆಂದು ಹೇಳಿರಬಹುದು. https://ainlivenews.com/joint_pain_suprem_ray_treatment_reiki/ ಯತೀಂದ್ರ ಮುಖ್ಯಮಂತ್ರಿ ಕ್ಷೇತ್ರದ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಇದೆಕ್ಕಲ್ಲಾ ನಾನು ಸಣ್ಣದಾಗಿ ಮಾತನಾಡಲು ಹೋಗಲ್ಲ. ಹೆಚ್​ಡಿಡಿ PWD ಸಚಿವರಾಗಿದ್ದಾಗ ನಾನು ಅವರ ಕ್ಷೇತ್ರ ನೋಡಿಕೊಳ್ತಿದ್ದೆ. ಹಾಗಾಗಿ ಒಂದು ಕ್ಷೇತ್ರದ ಜವಾಬ್ದಾರಿ ಇದ್ದಾಗ ಏನೋ ಮಾತಾಡಿರುತ್ತಾರೆ ಎಂದು ಹಾಸನದಲ್ಲಿ ಯತೀಂದ್ರ ಪರ JDS​ ಶಾಸಕ ಹೆಚ್​.ಡಿ.ರೇವಣ್ಣ ಬ್ಯಾಟಿಂಗ್ ಮಾಡಿದ್ದಾರೆ.

Read More

ಬೆಂಗಳೂರು: ನಾನು ವಿಡಿಯೊ ನೋಡಿಲ್ಲ, ನನಗೆ ಗೊತ್ತಿಲ್ಲ, ನಾನೇಕೆ ಪ್ರತಿಕ್ರಿಯಿಸಿಲ್ಲ, ಗೊತ್ತಿಲ್ಲದಿರುವ ವಿಷಯ ಬಗ್ಗೆ ಮಾತನಾಡುವುದಿಲ್ಲ ಎಂದು ಹರಕೆಯ ಹೇಳಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಪುತ್ರ ಡಾ ಯತೀಂದ್ರ ಅವರು ಮೊಬೈಲ್ ನಲ್ಲಿ ಮಾತನಾಡಿರುವ ವಿಡಿಯೊ ವೈರಲ್ ಆಗಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರದಲ್ಲಿ ವರ್ಗಾವಣೆ ದಂಧೆ ಉಂಟಾಗಿದೆ ಎಂದು ವಿವಾದ ಎದ್ದಿದ್ದು, ಈ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ಕೇಳಿದಾಗ ಗೃಹ ಸಚಿವ ಡಾ ಜಿ ಪರಮೇಶ್ವರ್ ನಿರಾಕರಿಸಿದ್ದಾರೆ. ಸರ್ಕಾರದಲ್ಲಿ ಪ್ರತಿನಿತ್ಯ ನೂರೆಂಟು ವಿಚಾರಗಳು, ಮಾತುಗಳು ನಡೆಯುತ್ತಿವೆ. ನಮ್ಮ ಆಡಳಿತದಲ್ಲಿ ಹತ್ತಾರು ವಿಷಯಗಳಿವೆ. ಅವರು ಯಾವುದೋ ವಿಚಾರ ಬಗ್ಗೆ ಮಾತನಾಡಿರಬಹುದು, ವಿರೋಧ ಪಕ್ಷದವರು ದಿನನಿತ್ಯ ಆರೋಪ ಮಾಡುತ್ತಾರೆ. ಅವರ ಮಾತಿಗೆಲ್ಲಾ ಪ್ರತಿಕ್ರಿಯೆ ನೀಡಲು ಆಗುವುದಿಲ್ಲ ಎಂದರು. ನಮ್ಮಗೆ ಆಡಳಿತ ನಡೆಸಲು ಜನರು ನಮಗೆ ಅವಕಾಶ ಕೊಟ್ಟಿದ್ದಾರೆ. ಆಡಳಿತ ಮಾಡುತ್ತಿದ್ದೇವೆ, ಜನರಿಗೆ ನೀಡಿದ ಭರವಸೆಗಳನ್ನು ಮುಂದಿಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ, ವಿರೋಧ ಪಕ್ಷದವರು ಅವರ ಕೆಲಸ ಮಾಡುತ್ತಿದ್ದಾರೆ ಎಂದರು.

Read More

ಬೆಂಗಳೂರು: ಮಾಜಿ ಸಿಎಂ ಆಗಿ ವಿದ್ಯುತ್​​​​ ಕಳ್ಳತನ ಮಾಡಿದ್ದು ತಪ್ಪು ಅಲ್ವಾ? ಇದನ್ನು ಮುಚ್ಚಿಕೊಳ್ಳಲು ಯತೀಂದ್ರ ವಿಡಿಯೋ ಮುಂದಿಟ್ಟುಕೊಂಡು ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ನಗರದಲ್ಲಿ ಮಾತನಾಡಿದ ಅವರು ಯತೀಂದ್ರ ಎಲ್ಲಿಯಾದರೂ ವರ್ಗಾವಣೆ ವಿಚಾರ ಮಾತಾಡಿದ್ದಾರಾ? ನನ್ನ ರಾಜಕೀಯ ಜೀವನದಲ್ಲಿ ವರ್ಗಾವಣೆಗಾಗಿ ಹಣ ಪಡೆದಿಲ್ಲ. ಹಣ ಪಡೆದಿದ್ದರೆ ರಾಜಕೀಯದಿಂದ ನಿವೃತ್ತಿಯಾಗುವೆ ಎಂದರು. ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಯಾವುದೇ ದಂಧೆ, ಹಗರಣಗಳಲ್ಲಿ ಭಾಗಿಯಾಗಿಲ್ಲ. ಕುಮಾರಸ್ವಾಮಿ ರಾಜಕೀಯಕ್ಕಾಗಿ ಏನೆಲ್ಲಾ ಆರೋಪ ಮಾಡಬಹುದು, ಮಾಡಿಕೊಳ್ಳಲಿ, ಕುಮಾರಸ್ವಾಮಿ ಆರೋಪಗಳ ಬಗ್ಗೆ ಬೇಕಾದರೆ ತನಿಖೆ ಮಾಡಿಕೊಳ್ಳಲಿ, ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಸವಾಲು ಹಾಕಿದರು.

Read More