ಮಂಡ್ಯ: ಪ್ರೊಫೆಸರ್ ಒಬ್ಬ ಆಸ್ತಿ ಆಸೆಗಾಗಿ ತನ್ನ ಪತ್ನಿಯನ್ನು (Wife) ಕೊಲೆಗೈದ ಘಟನೆ ಇಲ್ಲಿನ (Mandya) ವಿವಿ ನಗರ ಬಡಾವಣೆಯಲ್ಲಿ ನಡೆದಿದೆ. ಕೊಲೆಗೈದ ಬಳಿಕ ಸಹಜ ಸಾವೆಂದು ನಾಟಕವಾಡಿ ಈಗ ಪೊಲೀಸರ (Police) ಅತಿಥಿಯಾಗಿದ್ದಾನೆ. ಕೊಲೆಯಾದ ಮಹಿಳೆಯನ್ನು ಎಸ್.ಶೃತಿ (32) ಎಂದು ಗುರುತಿಸಲಾಗಿದೆ. ಹತ್ಯೆಗೀಡಾದವಳ ಪತಿ ಟಿ.ಎನ್.ಸೋಮಶೇಖರ್ (41) ಹಣದ ದಾಹಕ್ಕೆ ಬಿದ್ದು, ಮಲಗಿದ್ದ ಪತ್ನಿಯನ್ನು ದಿಂಬು ಹಾಗೂ ಬೆಡ್ ಶೀಟ್‍ನಿಂದ ಉಸಿರುಗಟ್ಟಿಸಿ ಕೊಲೆಗೈದಿದ್ದಾನೆ. ಶೃತಿಯ ತಂದೆ, ತಾಯಿ ಕೆಲವು ವರ್ಷಗಳ ಹಿಂದೆ ಅನಾರೋಗ್ಯದಿಂದ ಮೃತ ಪಟ್ಟಿದ್ದರು. ಆಕೆಯ ತಂಗಿ 2018ರಲ್ಲಿ ಅಪಘಾತದಲ್ಲಿ ಸಾವಿಗೀಡಾಗಿದ್ದಳು. ಇದಾದ ಬಳಿಕ ಆಕೆಯ ಹೆಸರಿಗೆ 10 ಕೋಟಿ ರೂ.ಗೂ ಹೆಚ್ಚಿನ ಮೌಲ್ಯದ ಆಸ್ತಿ ಸೇರಿತ್ತು. ಮೈಸೂರಿನ ಪ್ರಮುಖ ನಗರಗಳಲ್ಲಿದ್ದ ಕಮರ್ಷಿಯಲ್ ಕಟ್ಟಡಗಳು, ಮನೆ ಹಾಗೂ ಸೈಟ್‍ಗಳು ಶೃತಿಯ ಹೆಸರಲ್ಲಿತ್ತು. ಆ ಆಸ್ತಿಯನ್ನು ಮಾರಿ ಬೇರೆಡೆ ಆಸ್ತಿ ಕೊಳ್ಳಲು ಶೃತಿಗೆ ಆರೋಪಿ ಪತಿ ಒತ್ತಾಯಿಸುತ್ತಿದ್ದ. ಪತಿಯ ಆಸ್ತಿ ಮಾರಾಟ ವಿಚಾರಕ್ಕೆ ಪತ್ನಿ ನಿರಾಕರಿಸಿದ್ದಾಳೆ. ಇದೇ ವಿಚಾರಕ್ಕೆ ಇಬ್ಬರ ನಡುವೆ…
Author: AIN Author
ಮಂಡ್ಯ: ಸೋಶಿಯಲ್ ಮೀಡಿಯಾದಲ್ಲಿ ಅನ್ಯಧರ್ಮದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಸ್ವಾಮಿ ಎಂಬ ಯುವಕನನ್ನು ಮಂಡ್ಯ ಜಿಲ್ಲೆಯ ಮದ್ದೂರು ಠಾಣೆ ಪೊಲೀಸರು ಸೆರೆ ಹಿಡಿದಿದ್ದಾರೆ. ಕೋಮುಸೌಹಾರ್ದ ಕದಡುವ ಯತ್ನ ಆರೋಪದಡಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಇನ್ನು ಇದನ್ನು ಖಂಡಿಸಿ ಮದ್ದೂರು ಪೊಲೀಸ್ ಠಾಣೆಯ ಎದುರು ಭಜರಂಗದಳದಿಂದ ಧರಣಿ ಶುರು ಮಾಡಿದ್ದಾರೆ. https://ainlivenews.com/joint_pain_suprem_ray_treatment_reiki/
ಬೆಂಗಳೂರು: ಪುತ್ರ ಯತೀಂದ್ರ ತಂದೆ ಸಿದ್ದರಾಮಯ್ಯನವರ ಜೊತೆ ಮಾತನಾಡಿದಾಗ ಕೇಳಿ ಬಂದ ಮಹದೇವ್ ಅವರು ಮುಖ್ಯಮಂತ್ರಿಯವರ ಹತ್ತಿರ ಸಂಬಂಧಿ ಆಗಿದ್ದಾರೆ. ಮೂಲತಃ ಸಬ್ ರಿಜಿಸ್ಟ್ರಾರ್ ಆಗಿರುವ ಮಹದೇವ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಕರ್ತವ್ಯಾಧಿಕಾರಿಯಾಗಿ ನಿಯೋಜನೆ ಆಗಿದ್ದಾರೆ. ಮಹದೇವ ಅವರು ಯತೀಂದ್ರ ಅವರ ಆಪ್ತರಾಗಿದ್ದು, ಸಿದ್ದರಾಮಯ್ಯ ಸಿಎಂ ಆಗುತ್ತಿದ್ದಂತೆ ಸಬ್ ರಿಜಿಸ್ಟ್ರಾರ್ ಮಹದೇವ ಅವರನ್ನು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿಯಾಗಿ ಯತೀಂದ್ರ ಅವರು ನೇಮಿಸಿದ್ದಾರೆ ಎನ್ನಲಾಗುತ್ತಿದೆ. ಈಗ ಮಹದೇವ್ ಎಂದು ಕರೆಯಲಾಗುತ್ತಿದ್ದರೂ ಅವರ ಮೂಲ ಹೆಸರು ಮಾದೇ ಸ್ವಾಮಿ. ಏನಿದು ವಿವಾದ? ಬುಧವಾರ ಯತೀಂದ್ರ ಅವರು ವರುಣ (Varuna) ಕ್ಷೇತ್ರ ವ್ಯಾಪ್ತಿಯ ಮೈಸೂರು ತಾಲೂಕಿನ ಚಟ್ನಹಳ್ಳಿಪಾಳ್ಯ ಗ್ರಾಮದಲ್ಲಿ ಸಾರ್ವಜನಿಕ ಕುಂದುಕೊರತೆ ವಿಚಾರಣೆ ಸಭೆ ನಡೆಸಿ ಗ್ರಾಮದ ಜನರ ಅಹವಾಲು ಸ್ವೀಕರಿಸುತ್ತಿದ್ದರು. ಈ ವೇಳೆ ಅವರು ತಂದೆಗೆ ಕರೆ ಮಾಡಿದ್ದಾರೆ. ಯಾವುದೋ ವಿಷಯವನ್ನು ಪ್ರಸ್ತಾಪ ಮಾಡಿದ ಅವರು, ನಾನು ನೀಡಿದ ಲಿಸ್ಟ್‌ನದ್ದು ಮಾತ್ರ ಮಾಡಿ ಎಂದು ಸಾರ್ವಜನಿಕರ ಮುಂದೆಯೇ ತಾನು ನೀಡಿದ ಪಟ್ಟಿಯ…
ಟಾಲಿವುಡ್ ನಟ ವಿಶ್ವಕ್ ಸೇನ್ ಅವರು ಸಿನಿಮಾವೊಂದರ ಶೂಟಿಂಗ್ ವೇಳೆ ಸೆಟ್‌ನಲ್ಲಿ ಲಾರಿಯಿಂದ ಕೆಳಗೆ ಬಿದ್ದು ಕಾಲಿಗೆ ಗಾಯ ಮಾಡಿಕೊಂಡಿದ್ದಾರೆ. ಆ ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸದ್ಯ ವಿಶ್ವಕ್ ಸೇನ್ ಅವರು ‘ಗ್ಯಾಂಗ್ಸ್ ಆಫ್ ಗೋದಾವರಿ ಆ್ಯಕ್ಷನ್ ಭರಿತ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾಗಾಗಿಯೇ ಲಾರಿ ಬಳಸಿ ಆ್ಯಕ್ಷನ್ ದೃಶ್ಯವನ್ನ ಚಿತ್ರೀಕರಿಸಲು ಯೋಜನೆ ಮಾಡಲಾಗಿತ್ತು. ವಿಶ್ವಕ್ ಲಾರಿ ಮೇಲೆ ನಿಂತು ಮಾಡುವ ಸ್ಟಂಟ್ ಶೂಟಿಂಗ್ ವೇಳೆ ಈ ಅವಘಡ ನಡೆದಿದೆ. ಈ ದೃಶ್ಯಕ್ಕೆ ತಾಲೀಮು ಮಾಡುವ ಸಂದರ್ಭದಲ್ಲಿ ಲಾರಿ ಮೇಲಿಂದ ಕೆಳಗೆ ಬಿದ್ದು ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ವಿಶ್ವಕ್ ಸೇನ್ ಸುದ್ದಿ ವೈರಲ್ ಆಗ್ತಿದ್ದಂತೆ ನಿರ್ಮಾಣ ಸಂಸ್ಥೆ ಈ ಬಗ್ಗೆ ಪ್ರತಿಕ್ರಿಯಿಸಿ, ವಿಶ್ವಕ್ ಚಿತ್ರೀಕರಣ ಸಮಯದಲ್ಲಿ ಪೆಟ್ಟಾಗಿದ್ದು ನಿಜ. ಆದರೆ ಇದಾಗಿ ಕೆಲವು ದಿನಗಳಾಗಿವೆ. ಸೂಕ್ತ ಚಿಕಿತ್ಸೆ ಬಳಿಕ ಅವರು ಇದೀಗ ಗುಣಮುಖರಾಗಿದ್ದಾರೆ. ಮತ್ತೆ ಚಿತ್ರೀಕರಣಕ್ಕೆ ಅವರು ಬಂದಿದ್ದಾರೆ ಎಂದು ತಿಳಿಸಿದ್ದಾರೆ. ‘ಗ್ಯಾಂಗ್ಸ್ ಆಫ್ ಗೋದಾವರಿ’…
ಕನ್ನಡದ ಯುವ ಸಂಗೀತ ನಿರ್ದೇಶಕ, ಗಾಯಕ ವಾಸುಕಿ ವೈಭವ್ (Vasuki Vaibhav) ಇಂದು ವೈವಾಹಿಕ (Marriage) ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುಕಾಲದ ಗೆಳತಿ, ರಂಗಭೂಮಿ ಕಲಾವಿದೆ ಬೃಂದಾ (Brunda) ಜೊತೆ ಇಂದು ಅವರು ಸಪ್ತಪದಿ ತುಳಿದಿದ್ದಾರೆ. ನಟ ಸಿಹಿ ಕಹಿ ಸೇರಿದಂತೆ ಹಲವು ಕಲಾವಿದರು, ಎರಡು ಕುಟುಂಬದ ಸದಸ್ಯರು ಮತ್ತು ಆಪ್ತರು ಮಾತ್ರ ಮದುವೆಯಲ್ಲಿ ಭಾಗಿಯಾಗಿದ್ದಾರೆ. ಮದುವೆ ವಿಚಾರವನ್ನು ವಾಸುಕಿ ಗುಟ್ಟಾಗಿದ್ದರು. ಅಚಾನಕ್ಕಾಗಿ ನಟಿ ತಾರಾ ಈ ವಿಷಯವನ್ನು ಹೇಳಿಕೊಂಡಿದ್ದರು. ಟಗರು ಪಲ್ಯ ಸಿನಿಮಾದಲ್ಲಿ ವಾಸುಕಿ ಮದುವೆ ಆಗುವ ಗಂಡಿನ ಪಾತ್ರ ಮಾಡಿದ್ದರು. ಈ ಕುರಿತಾಗಿ ಮಾತನಾಡುತ್ತಾ ನಟಿ ತಾರಾ ಅತೀ ಶೀಘ್ರದಲ್ಲೇ ವಾಸುಕಿ ಮದುವೆ (Marriage) ಆಗುತ್ತಿರುವ ವಿಷಯವನ್ನು ಬಹಿರಂಗ ಪಡಿಸಿದ್ದಾರೆ. ಹಲವು ತಿಂಗಳ ಹಿಂದೆಯೇ ವಾಸುಕಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನುವ ವಿಷಯ ಹರಿದಾಡುತ್ತಿತ್ತು. ಬಹುಕಾಲದ ಗೆಳೆತಿಯೊಂದಿಗೆ ಅವರು ಮದುವೆ ಆಗಲಿದ್ದಾರೆ ಎಂದು ಹೇಳಲಾಗಿತ್ತು. ಅದೀಗ ನಿಜವಾದಂತೆ ಕಾಣುತ್ತಿದೆ. ಇಂದು ವಾಸುಕಿ ಸಪ್ತಪದಿ ತುಳಿಯಲಿದ್ದಾರೆ. ಮದುವೆ ಕುರಿತಂತೆ ವಾಸುಕಿ ಒಪ್ಪಿಕೊಂಡಿದ್ದರು. ತಾರಾ…
ಮೈಸೂರು: ಸಿಎಂ ಸಿದ್ದರಾಮಯ್ಯನವರ (CM Siddaramaiah) ಸರ್ಕಾರದಲ್ಲಿ ಪುತ್ರನ ಹಸ್ತಕ್ಷೇಪ ಹೆಚ್ಚಾಗಿದೆ, ವೈಎಸ್‌ಟಿ (YST) ಸಂಗ್ರಹಿಸುತ್ತಿದ್ದಾರೆ ಎಂಬ ವಿಪಕ್ಷಗಳ ಆರೋಪದ ಬೆನ್ನಲ್ಲೇ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ತಂದೆಯ ಜೊತೆ ಮಾತನಾಡುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಯತೀಂದ್ರ ಅವರು ವರುಣ (Varuna) ಕ್ಷೇತ್ರ ವ್ಯಾಪ್ತಿಯ ಮೈಸೂರು ತಾಲೂಕಿನ ಚಟ್ನಹಳ್ಳಿಪಾಳ್ಯ ಗ್ರಾಮದಲ್ಲಿ ಸಾರ್ವಜನಿಕ ಕುಂದುಕೊರತೆ ವಿಚಾರಣೆ ಸಭೆ ನಡೆಸಿ ಗ್ರಾಮದ ಜನರ ಅಹವಾಲು ಸ್ವೀಕರಿಸುತ್ತಿದ್ದರು. ಈ ವೇಳೆ ಅವರು ತಂದೆಗೆ ಕರೆ ಮಾಡಿದ್ದಾರೆ. ಯಾವುದೋ ವಿಷಯವನ್ನು ಪ್ರಸ್ತಾಪ ಮಾಡಿದ ಅವರು, ನಾನು ನೀಡಿದ ಲಿಸ್ಟ್‌ನದ್ದು ಮಾತ್ರ ಮಾಡಿ ಎಂದು ಸಾರ್ವಜನಿಕರ ಮುಂದೆಯೇ ತಾನು ನೀಡಿದ ಪಟ್ಟಿಯ ಬಗ್ಗೆ ಮಾತುಕತೆ ಮಾಡಿದ್ದಾರೆ. ಆರಂಭದಲ್ಲಿ ಅಪ್ಪ ಹೇಳಿ ಅಂತಾ ಯತೀಂದ್ರ ಸಿದ್ದರಾಮಯ್ಯ ಮಾತು ಶುರುಮಾಡಿದ್ದಾರೆ. ಈ ವೇಳೆ “ವಿವೇಕಾನಂದ ಯಾರು?” ಎಂದು ಸಿಎಂ ಪ್ರಶ್ನೆ ಕೇಳಿದ್ದಾರೆ. ಆಗ ಯತೀಂದ್ರ, ಆ ಮಹದೇವ ಅವರಿಗೆ ಪೋನ್ ನೀಡುವಂತೆ ಸಿಎಂಗೆ ಹೇಳುತ್ತಾರೆ. https://ainlivenews.com/joint_pain_suprem_ray_treatment_reiki/…
ಬೆಂಗಳೂರು: ತೆರಿಗೆ ವಂಚನೆ ಹಿನ್ನೆಲೆ ಬೆಂಗಳೂರಿನ ಫುಡ್ ಇಂಡಸ್ಟ್ರಿ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ರಾಜಾಜಿನಗರ, ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡ್ರೈ ಫ್ರೂಟ್ಸ್ ವ್ಯಾಪಾರಿಗಳ ಅಂಗಡಿ ಹಾಗೂ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ. ಇತ್ತೀಚಿಗೆ ಗುತ್ತಿಗೆದಾರರು, ಜ್ಯುವೆಲ್ಲರಿ ಮಾಲೀಕರ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ದಾಳಿ ನಡೆಸಿತ್ತು. ಇದೀಗ ಫುಡ್ ಇಂಡಸ್ಟ್ರಿ ಮೇಲೆ ಐಟಿ ಕಣ್ಣಿಟ್ಟಿದೆ. ಡ್ರೈಫ್ರೂಟ್ಸ್ ಕಾರ್ಖಾನೆ ಹಾಗೂ ಸ್ಟೋರ್‌ಗಳ ಮೇಲೆ ಐಟಿ ದಾಳಿ ನಡೆಸಿದ್ದು, ಒಟ್ಟು ನಗರದ ಎರಡು ಕಡೆ ದಾಳಿ ಮಾಡಿದೆ ಹತ್ತಕ್ಕೂ ಹೆಚ್ಚು ವಾಹನಗಳಲ್ಲಿ ಬಂದ ಐಟಿ ಅಧಿಕಾರಿಗಳು ರಾಜಾಜಿನಗರ ಇಂಡಸ್ಟ್ರಿಯಲ್ ಎಸ್ಟೇಟ್ ಹಾಗೂ ಬಿವಿಕೆ ಅಯ್ಯಂಗಾರ್ ರಸ್ತೆ ಬಳಿ ದಾಳಿ ನಡೆಸಿದ್ದಾರೆ. ಪಿಎಸ್ ಆಗ್ರೋ ಫುಡ್ ಎಲ್‌ಎಲ್‌ಪಿ ಕಾರ್ಖಾನೆ ಹಾಗೂ ಮಾಣಕ್ ಮೇವಾ ಡ್ರೈಫ್ರೂಟ್ಸ್ ಸ್ಟೋರ್ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು: ನಾನು ನೀಡಿದ ಲಿಸ್ಟ್‌ನದ್ದು ಮಾತ್ರ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ವಿಶೇಷ ಕರ್ತವ್ಯಾಧಿಕಾರಿ ಮಹದೇವ್ ಅವರಿಗೆ ಯತೀಂದ್ರ ಸಿದ್ದರಾಮಯ್ಯ ಸೂಚಿಸಿರುವ ವಿಡಿಯೋ ವೈರಲ್ ಆಗಿದೆ. https://ainlivenews.com/jds-tweet-vacancy-in-congress-govt-shameless-govt-hdk-sparks/ ಈ ಬಗ್ಗೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಯತೀಂದ್ರ ಪರ ಬ್ಯಾಟ್ ಬೀಸಿದ್ದಾರೆ. ಡಾ.ಯತೀಂದ್ರ ಒಬ್ಬ ಮಾಜಿ ಎಂಎಲ್‌ಎ, ಖಾಲಿ ಮನುಷ್ಯ ಅಲ್ಲ. ಸಿದ್ದರಾಮಯ್ಯ ವರುಣದಲ್ಲಿ ಸ್ಪರ್ಧಿಸಿದ್ದರಿಂದ ಅವರು ನಿಲ್ಲಲು ಆಗಿಲ್ಲ. ಮೈಸೂರು ಜಿಲ್ಲೆ, ಪಕ್ಷದಲ್ಲಿ ಡಾ.ಯತೀಂದ್ರ ಪ್ರಮುಖ ನಾಯಕ. ಮಾಜಿ ಶಾಸಕರು ಕೆಲಸ ಮಾಡುವುದನ್ನು ತಪ್ಪು ಅನ್ನೋಕೆ ಆಗುತ್ತಾ? ವಿಡಿಯೋದಲ್ಲಿ ಯಾವ ವಿಚಾರದ ಬಗ್ಗೆ ಅವರು ಹೇಳಿದರೋ ಗೊತ್ತಿಲ್ಲ. ಯಾರು ಆ ವಿಡಿಯೋ ಕಟ್ ಆ್ಯಂಡ್ ಪೇಸ್ಟ್ ಮಾಡಿದರೋ ಗೊತ್ತಿಲ್ಲ. ಸೋಶಿಯಲ್ ಮಿಡಿಯಾದಲ್ಲಿ ಕಟ್ ಆ್ಯಂಡ್ ಪೇಸ್ಟ್ ಮಾಡುತ್ತಾರೆ. ಮಾತಾಡಿದ ರೀತಿ ಬೇರೆ ಇರುತ್ತೆ, ತೋರಿಸುವುದೇ ಬೇರೆ ಇರುತ್ತದೆ. ಯತೀಂದ್ರ ಸಾರ್ವಜನಿಕ ಸೇವೆಯಲ್ಲಿ ಇರೋದು ಅಪರಾಧವಲ್ಲ. ವರುಣ ಅಲ್ಲ ಇಡೀ ರಾಜ್ಯದಲ್ಲಿ ಕೆಲಸ ಮಾಡಲಿ ಬಿಡಿ, ತಪ್ಪೇನಿದೆ? ಕಾಂಗ್ರೆಸ್ ಮುಖಂಡರು ಕೆಲ ಸಮಸ್ಯೆ…
ಧಾರವಾಡ: ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆಗೆ ಯಾವುದೇ ಸಮಸ್ಯೆಯಿಲ್ಲ. ಯೋಜನೆ ಯಶಸ್ಸಿಗೆ ಹಣಕಾಶಿನ ತೊಂದರೆ ಇಲ್ಲ. ತಾಂತ್ರಿಕ ಸಮಸ್ಯೆ ಇದೆ ಅದನ್ನು ಈಗಾಗಲೇ ಫೈಂಡೌಟ್ ಮಾಡಲಾಗಿದೆ. ಆದಷ್ಟು ಬೇಗ ಸಮಸ್ಯೆ ಪರಿಹಾರ ಮಾಡುತ್ತೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಧಾರವಾಡದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಹಣವನ್ನು ತೆಗೆದು ಇಟ್ಟಿದೆ. ನಾವು ಯಾವುದೇ ಅಭಿವೃದ್ಧಿ ಕೆಲಸ ತಡೆ ಮಾಡಿಲ್ಲ. ಗೃಹ ಲಕ್ಷ್ಮೀ ಯೋಜನೆಗೆ ಹಣಕಾಸಿನ ತೊಂದರೆ ಇದೆ ಅನ್ನುವುದು ಸುಳ್ಳು. ಗೃಹ ಲಕ್ಷ್ಮೀಯಲ್ಲಿ ಈಗಾಗಲೇ 1 ಕೋಟಿ 9 ಲಕ್ಷ ಫಲಾನುಭವಿಗಳಿಗೆ ಹಣ ಬಿಡುಗಡೆ ಆಗಿದೆ. ಇನ್ನೂ 5 ರಿಂದ 6 ಲಕ್ಷ ಜನ ಉಳಿದುಕೊಂಡಿದ್ದಾರೆ. ಅವರದ್ದು ಸಹ ಇನ್ನೂ 15 ದಿನಗಳಲ್ಲಿ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. https://ainlivenews.com/joint_pain_suprem_ray_treatment_reiki/ ಗೃಹಲಕ್ಷ್ಮೀ ಒಂದೇ ಅಲ್ಲ, ಗೃಹಜ್ಯೋತಿ, ಶಕ್ತಿ ಯೋಜನೆ, ಅನ್ನಭಾಗ್ಯ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಣ ತೆಗೆದಿಟ್ಟಿದ್ದಾರೆ.…
ಲಕ್ನೋ: ದೆಹಲಿ-ದರ್ಭಾಂಗ (Delhi-Darbhanga Train) ರೈಲಿನ ನಾಲ್ಕು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಎಂಟು ಮಂದಿ ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಇಟಾವಾ ಬಳಿ 02570 ದೆಹಲಿ-ದರ್ಬಂಗಾ ಕ್ಲೋನ್ ಸ್ಪೆಷಲ್‌ನ ಎಸ್1 (ಸ್ಲೀಪರ್) ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತು. ರೈಲು ಸರಾಯ್ ಭೋಪಾಟ್ ನಿಲ್ದಾಣದ ಮೂಲಕ ಹಾದು ಹೋಗುತ್ತಿದ್ದಾಗ ಹೊಗೆ ಕಾಣಿಸಿಕೊಂಡು ಈ ಅವಘಡ ಸಂಭವಿಸಿತು. https://ainlivenews.com/joint_pain_suprem_ray_treatment_reiki/ ಕೋಚ್‌ಗಳಲ್ಲಿ ಒಂದಕ್ಕೆ ಭಾರಿ ಬೆಂಕಿ ಆವರಿಸಿದ ವೇಳೆ ಪ್ರಯಾಣಿಕರು ಮತ್ತು ಅಧಿಕಾರಿಗಳು ಸುತ್ತಲೂ ನಿಂತಿದ್ದರು. ಈ ದೃಶ್ಯ ವೀಡಿಯೋದಲ್ಲಿ ಸೆರೆಯಾಗಿದೆ. ಛತ್ ಹಬ್ಬದ ಕಾರಣ ಬಿಹಾರಕ್ಕೆ ಹೋಗುವ ಎಲ್ಲಾ ರೈಲುಗಳು ತುಂಬಿ ತುಳುಕುತ್ತಿವೆ. ಗಾಯಗೊಂಡವರನ್ನು ಇಟಾವಾದಲ್ಲಿರುವ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.