ಬೆಂಗಳೂರು:- ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಹಿಂದೆಯೂ ಬಿಜೆಪಿ ಜತೆ ಕೈ ಜೋಡಿಸಿದ್ದ ಕಾರಣಕ್ಕೆ ಜನತಾ ಪರಿವಾರದಲ್ಲಿ ಸೆಕ್ಯುಲರ್ ಸಿದ್ಧಾಂತದವರೆಲ್ಲ ಪ್ರತ್ಯೇಕವಾಗಿ ಉಳಿದೆವು. ಈಗ ಜೆಡಿಎಸ್ ಮತ್ತೆ ಬಿಜೆಪಿ ಜತೆ ಬೆರೆಯುತ್ತಿದೆ. ನಾನು ಈ ಜೆಡಿಎಸ್ ಅನ್ನು ಬಿಜೆಪಿಯ ಬಿ ಟೀಮ್ ಅಂದಿದ್ದಕ್ಕೆ ಸಿಟ್ಟಾಗಿದ್ದರು. ಅಂದು ನಾನು ಹೇಳಿದ್ದನ್ನು ಇಂದು ಅವರೇ ಸಾಬೀತುಪಡಿಸಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದರು. ಜೆಡಿಎಸ್ ಈಗ ತನ್ನ ಸ್ವರೂಪದಲ್ಲಿ ಜನಸಮುದಾಯದ ರಾಜಕೀಯ ಪಕ್ಷ ಆಗಿ ಉಳಿದಿಲ್ಲ. ಕೇವಲ ಕುಟುಂಬಕ್ಕೆ ಸೀಮಿತವಾಗಿದೆ. ಜೆಡಿಎಸ್ನ ಡಬಲ್ ಗೇಮ್ ಅನ್ನು ಸರಿಯಾಗಿ ಅರ್ಥ ಮಾಡಿಕೊಂಡಿರುವ ಗೌರಿಶಂಕರ್ ಮತ್ತು ಮಂಜುನಾಥ್ ಸೇರಿದಂತೆ ಇನ್ನೂ ಬಹಳ ಮಂದಿ ಕಾಂಗ್ರೆಸ್ ಸೇರುತ್ತಿದ್ದಾರೆ. ಆ ಮೂಲಕ ತಮ್ಮ ರಾಜಕೀಯ ಜೀವನವನ್ನು ಭದ್ರ ಮಾಡಿಕೊಳ್ಳುತ್ತಿದ್ದಾರೆ ಎಂದರು ನಾವು ಗ್ಯಾರಂಟಿ ಕಾರ್ಯಕ್ರಮ ಕೊಟ್ಟಾಗ ಅವನ್ನು ಟೀಕಿಸಿದ್ದ ಪ್ರಧಾನಿಯವರು, ಈಗ ಮೋದಿ ಗ್ಯಾರಂಟಿ ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ ಎಂದು ಪ್ರಸ್ತಾಪಿಸಿದ…
Author: AIN Author
ಬಿಗ್ ಬಾಸ್ ಮನೆಯಲ್ಲಿ ವರ್ತೂರು ಸಂತೋಷ್ ಅವರ ಡ್ರಾಮಾ ಮುಗಿದ ಬಳಿಕ ಇದೀಗ ಡ್ರೋನ್ ಪ್ರತಾಪ್ ಅಳುವ ಸರದಿ. ಮೂರು ವರ್ಷಗಳಿಂದ ಅಪ್ಪ-ಅಮ್ಮನನ್ನು ನೋಡಲಿಲ್ಲವಂತೆ ಪ್ರತಾಪ್. ಇದೀಗ ಬಿಗ್ಬಾಸ್ ಮನೆಯಲ್ಲಿ ಅವರ ನೆನಪಾಗಿ ಬಿಕ್ಕಿಬಿಕ್ಕಿ ಅತ್ತಿದ್ದಾರೆ. ಅವರ ಜೊತೆ ಮಾತನಾಡಬೇಕು ಎಂದು ಕಣ್ಣೀರು ಹಾಕಿದ್ದಾರೆ. ಇದರ ಪ್ರೊಮೋ ಬಿಡುಗಡೆಯಾಗಿದ್ದ ಪ್ರತಾಪ್ ಅಭಿಮಾನಿಗಳೂ ಭಾವುಕರಾಗಿದ್ದಾರೆ. ಅಯ್ಯೋ ಪ್ರತಾಪ್ಗೆ ಏನಾಯ್ತು, ಅವರನ್ನು ಅಪ್ಪ-ಅಮ್ಮನ ಜೊತೆ ಮಾತನಾಡಲು ಬಿಡಿ ಎಂದು ಗೋಗರೆಯುತ್ತಿದ್ದಾರೆ. ಅಷ್ಟಕ್ಕೂ ಆಗಿರುವುದು ಏನೆಂದರೆ, ಮನೆಯ ಮೂವರು ಸದಸ್ಯರಿಗೆ ತಮ್ಮ ಮನೆಯಿಂದ ಬಂದಿರುವ ಪತ್ರವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಹಬ್ಬದ ಉಡುಗೊರೆಯಾಗಿ ಈ ಅವಕಾಶ ಕಲ್ಪಿಸಲಾಗಿದೆ. ಮೂವರಲ್ಲಿ ಯಾರಿಗೆ ಅದು ಕೊಡಬೇಕು ಎಂಬ ಬಗ್ಗೆ ಚರ್ಚೆ ನಡೆದಿದೆ. ಅದಕ್ಕೆ ಬಹುತೇಕ ಮಂದಿ ತಮಗೇ ಈ ಅವಕಾಶ ನೀಡುವಂತೆ ಗೋಗರೆದಿದ್ದಾರೆ. ಈ ಮೊದಲು ದೀಪಾವಳಿ ಹಬ್ಬಕ್ಕೆ ಮನೆಯಿಂದ ಮಾಡಿರುವ ಸ್ವೀಟ್ಸ್ ತಿನ್ನಲು ಸ್ಪರ್ಧಿಗಳಿಗೆ ಅವಕಾಶ ನೀಡಲಾಗಿತ್ತು. ಆಗ ತನೀಷಾ ಅವರಿಗೆ ರೆಡಿಮೇಡ್ ಸ್ವೀಟ್ ಬಂದಿತ್ತು. ಇದರಿಂದ…
ಬೆಂಗಳೂರು: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಣ ವಾಕ್ಸಮರ ತಾರಕಕ್ಕೇರಿದೆ. ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ ಕಾರಿದ್ದಾರೆ. https://ainlivenews.com/former-cm-kumaraswamy-simply-makes-false-statement-cm-siddaramaiah/ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು,, ‘ನನ್ನ ಸಿಎಂ ಮಾಡಿದ್ರೆ ವಾಪಸ್ ಬರುವುದಾಗಿ ಮುಂಬೈಗೆ ತೆರಳಿದ್ದ ಶಾಸಕರು ಹೇಳಿದ್ದರು. ಮುಂಬೈನಲ್ಲಿದ್ದ ಎಸ್.ಟಿ.ಸೋಮಶೇಖರ್, ಗೋಪಾಲಯ್ಯ ಹಾಗೆ ಹೇಳಿದ್ದರು. ಅಂದಿನ ಸಿಎಂ ಕುಮಾರಸ್ವಾಮಿಗೆ ಖುದ್ದು ಕರೆ ಮಾಡಿ ಹೇಳಿದ್ದರು. ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡುವುದಾದರೆ ವಾಪಸ್ ಬರುತ್ತೇವೆ ಎಂದು ಹೇಳಿದ್ದರು. ಆದರೆ, ಶಾಸಕರ ಬೇಡಿಕೆ ಬಗ್ಗೆ ಕುಮಾರಸ್ವಾಮಿ ಆಗ ಬಾಯಿ ಬಿಡಲೇ ಇಲ್ಲ’ ಎಂದು ಹೇಳಿದ್ದಾರೆ. ಶಾಸಕರ ಬೇಡಿಕೆ ಬಗ್ಗೆ ಆಗ ಬಾಯಿ ಬಿಡದೇ ಇದ್ದ ಕುಮಾರಸ್ವಾಮಿ ಈಗ ಬೇಕಿದ್ದರೆ 19 ಶಾಸಕರು ಬೆಂಬಲ ಕೊಡ್ತೀವಿ ಎಂದು ಹೇಳ್ತಾರೆ. ಡಿ.ಕೆ.ಶಿವಕುಮಾರ್ ಸಿಎಂ ಆದರೆ ಬೆಂಬಲ ಕೊಡುತ್ತೇವೆ ಅಂತಾರೆ. ಹೆಚ್.ಡಿ.ಕುಮಾರಸ್ವಾಮಿ ಮಾತನ್ನು ನಂಬುವುದಕ್ಕೆ ನಾವು ದಡ್ಡರಾ ಎಂದು ಪ್ರಶ್ನಿಸಿದ್ದಾರೆ.
ಬಳ್ಳಾರಿ,ನ.14: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತಾಲ್ಲೂಕು ಆಡಳಿತ ಸಂಡೂರು ಮತ್ತು ವಿವಿಧ ಕನ್ನಡಪರ ಸಂಘಟನೆಗಳು ಇವರ ವತಿಯಿಂದ ಜಿಲ್ಲೆಯ ಗಡಿಭಾಗ ಗ್ರಾಮವಾದ ಶ್ರೀರಾಮಶೆಟ್ಟಿ ಹಳ್ಳಿಯಲ್ಲಿ ಕರ್ನಾಟಕ ಸಂಭ್ರಮ-50ರ ಜ್ಯೋತಿ ರಥಯಾತ್ರೆಗೆ ಮಂಗಳವಾರ ಅದ್ದೂರಿಯಾಗಿ ಸ್ವಾಗತ ದೊರೆಯಿತು. ಹಲಗೆ, ತಾಷೆ-ರಾಂಡೋಲ್, ಕಂಸಾಳೆ, ವೀರಗಾಸೆ, ಡೊಳ್ಳು, ವಿವಿಧ ವಾದ್ಯಗಳು ಹಾಗೂ ವಿವಿಧ ಸಾಂಸ್ಕೃತಿಕ ಕಲಾ ತಂಡಗಳಿಂದ ಭರ್ಜರಿ ಮೆರವಣಿಗೆಯೊಂದಿಗೆ ತಾಲ್ಲೂಕು ಆಡಳಿತವು ಅದ್ದೂರಿಯಾಗಿ ಬರಮಾಡಿಕೊಂಡರು. ಕರ್ನಾಟಕ ಸಂಭ್ರಮ-50ರ ಜ್ಯೋತಿ ರಥಯಾತ್ರೆಯ ಮೆರವಣಿಗೆಯಲ್ಲಿ ಅಧಿಕಾರಿಗಳು, ಶಾಲಾ ಮಕ್ಕಳು, ಸಾರ್ವಜನಿಕರು, ಹಿರಿಯರು-ಕಿರಿಯರು ಸೇರಿದಂತೆ ಸೇರಿದಂತೆ ಎಲ್ಲರೂ ಕುಣಿದು, ಕುಪ್ಪಳಿಸಿ, ನೃತ್ಯ ಮಾಡುವುದರ ಮೂಲಕ ಸಂಭ್ರಮದಿಂದ ಪಾಲ್ಗೊಂಡಿದ್ದರು. ಕರ್ನಾಟಕ ಸಂಭ್ರಮ-50ರ ಜ್ಯೋತಿ ರಥಯಾತ್ರೆಯು ಸಂಡೂರು ತಾಲ್ಲೂಕಿನ ಶ್ರೀರಾಮ ಶೆಟ್ಟಿ ಹಳ್ಳಿಯಿಂದ ಬಂಡ್ರಿ ಗ್ರಾಮದ ಮೂಲಕ ಯಶವಂತ ನಗರ ಮಾರ್ಗವಾಗಿ ವಿವಿಧ ಹೋಬಳಿ, ಗ್ರಾಮ ಪಂಚಾಯತಿ ವತಿಯಿಂದ ಸಂಭ್ರಮದಿಂದ ಹೊರಟು, ಸಂಡೂರಿಗೆ ಆಗಮಿಸಿತು. ಸಂಡೂರು ಶಾಸಕ ಈ.ತುಕಾರಾಂ ಅವರು, ಅದ್ದೂರಿಯಾಗಿ ಬರಮಾಡಿಕೊಂಡರು. ನಂತರದಲ್ಲಿ ವೇದಿಕೆ ಕಾರ್ಯಕ್ರಮವನ್ನು ಸಂಡೂರು…
ತುಮಕೂರು: ತಹಶೀಲ್ದಾರ್ ಮತ್ತು ತಾಲೂಕು ಸಮಾಜಕಲ್ಯಾಣ ಇಲಾಖೆ ಅಧಿಕಾರಿ ವಿರುದ್ಧ ದಲಿತ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಸ್ಮಶಾನ ಜಾಗ ಕೇಳಲು ಹೋದ ದಲಿತರನ್ನ ಗುಬ್ಬಿ ತಹಶಿಲ್ದಾರ್ ಆರತಿ ಬಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ವೀಣಾ ನಿಂದಿಸಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು. https://ainlivenews.com/joint_pain_suprem_ray_treatment_reiki/ ದಲಿತರಿಗೆ ಸರಿಯಾಗಿ ಸ್ಪಂದಿಸದೆ ನ್ಯಾಯ ಕೇಳಲು ಹೋದ ದಲಿತರ ಮೇಲೆ TSW ವೀಣಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ದಲಿತ ಸಂಘಟನೆಗಳಿಂದ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಬರುವವರೆಗೂ ಪ್ರತಿಭಟನೆ ನಿಲ್ಲಲ್ಲ ಎನ್ನುತ್ತಿರುವ ಪ್ರತಿಭಟನಾಕಾರರು..
ಮುಂಬೈ: ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಟಾರ್ ಆಟಗಾರ ಕಿಂಗ್ ಕೊಹ್ಲಿ ಹೊಸ ಚರಿತ್ರೆ ಸೃಷ್ಟಿಸಿದ್ದಾರೆ. ಹೌದು, ಒಂದೇ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಸಚಿನ್ ತೆಂಡೂಲ್ಕರ್ (673) ಅವರನ್ನು ಹಿಂದಿಕೆ ಹಾಕಿ ಕೊಹ್ಲಿ (674*) ಹೊಸ ದಾಖಲೆ ಬರೆದಿದ್ದಾರೆ. ಪ್ರಸ್ತುತ 80* ಗಳಿಸಿರುವ ಕೊಹ್ಲಿ.. ODI ನಲ್ಲಿ ಸಚಿನ್ ಅವರೊಂದಿಗೆ (49 ಶತಕ) ಸಮಬಲ ಸಾಧಿಸಿದ್ದಾರೆ. ಈ ಒಂದು ದಾಖಲೆ ಮುರಿಯಲು ಕೊಹ್ಲಿಗೆ ಇನ್ನೂ ಕೇವಲ 20 ರನ್ ಗಳ ಅಗತ್ಯವಿದೆ. ವಿರಾಟ್ ಕೊಹ್ಲಿ 2023ರ ವಿಶ್ವ ಕಪ್ನಲ್ಲಿ ಒಟ್ಟು 8 ಬಾರಿ 50 ಪ್ಲಸ್ ಸ್ಕೋರ್ ಬಾರಿಸಿದಂತಾಗಿದೆ. ಇದರೊಂದಿಗೆ ಅವರು ಏಳು ಫಿಪ್ಟಿ ಫ್ಲಸ್ ಸ್ಕೋರ್ ಬಾರಿಸಿದ ಸಚಿನ್ ಅವರು ದಾಖಲೆಯನ್ನು ಮುರಿದಿದ್ದಾರೆ. 2019ರ ವಿಶ್ವ ಕಪ್ನಲ್ಲಿ ಏಳು ಬಾರಿ ಫಿಫ್ಟಿ ಪ್ಲಸ್ ಸ್ಕೋರ್ ಮಾಡಿದ್ದರು. 2019ರಲ್ಲಿ ಆರು ಬಾರಿ ಫಿಫ್ಟಿ ಪ್ಲಸ್ ಸ್ಕೋರ್ ಬಾರಿಸಿದ ರೋಹಿತ್ ಶರ್ಮಾ, ಡೇವಿಡ್ ವಾರ್ನರ್ ನಂತರದ ಸ್ಥಾನದಲ್ಲಿದ್ದಾರೆ. ವಿಶ್ವಕಪ್…
ಬೆಂಗಳೂರು: ರಾಜ್ಯ ಬಿಜೆಪಿಯ ನೂತನ ಸಾರಥಿಯಾಗಿ ಮರಿ ರಾಜಾಹುಲಿ ಬಿವೈ ವಿಜಯೇಂದ್ರ ಕೇಸರಿ ಸಿಂಹಾಸನದ ಮೇಲೆ ಪಟ್ಟಾಭಿಷಕ್ತರಾಗಿದ್ದಾರೆ. ಬಿಜೆಪಿ ಕಛೇರಿಯಲ್ಲಿ ನಡೆದ ಕಾರ್ಯಕ್ರಮ ಅಭೂತಪೂರ್ವ ಕ್ಷಣಕ್ಕೆ ಸಾಕ್ಷಿಯಾಗಿದ್ದು, ಕಮಲ ಪಡೆಯ ಘಟಾನುಘಟನಿ ನಾಯಕರು ಯುವ ನಾಯಕನಿಗೆ ಪಟ್ಟಕಟ್ಟಿ ಆಶಿರ್ವಾದ ಮಾಡಿದ್ದಾರೆ. ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಕಾಂಗ್ರೆಸ್ ವಿರುದ್ಧ ಕೆಂಡ ಕಾರಿದ ಮಹಿ ಹುಲಿ ಬಿಜೆಪಿ ಘತವೈಭವವನ್ನು ಮರಳಿ ತರುವ ಶಪತ ಮಾಡಿದ್ದಾರೆ. ಆದ್ರೆ ಪದಗ್ರಗಹಣ ಕಾರ್ಯಕ್ರಮದಲ್ಲೇ ಬಂಡಾಯದ ಭಾವುಟ ಹಾರಾಡಿದ್ದು ಬಿಎಲ್ ಸಂತೋಷ್ ಟೀಂ ಗೈರಾಗಿ ಅಸಮಾಧಾನ ಹೊರಹಾಕಿದೆ…… ಮಾಜಿ ಮುಖ್ಯಮಂತ್ರಿ ರಾಜ್ಯ ಬಿಜೆಪಿಯನ್ನು ಕಟ್ಟಿ ಬೆಳೆಸಿದ ಭೀಷ್ಮ ಬಿಎಸ್ ಯಡಿಯೂರಪ್ಪ ನವರ ಸುಪುತ್ರ ಬಿವೈ ವಿಜಯೇಂದ್ರ ರಾಜ್ಯ ಬಿಜೆಪಿಯ ಅಧ್ಯಕ್ಷರಾಗಿ ಘೋಷಣೆಯಾದ್ಮೇಲೆ ಕಮಲ ಪಡೆಯ ಖದರ್ ಒಮ್ಮಿಂದೊಮ್ಮೆಲೆ ಚೇಂಜ್ ಆಗಿತ್ತು. ಪಕ್ಷದ ಮುಖಂಡರು, ಕಾರ್ಯಕರ್ತರಲ್ಲಿ ಕುಗ್ಗಿಹೋಗಿದ್ದ ಆತ್ಮವಿಶ್ವಾಸ ಮರಳಿ ಬಂದಿತ್ತು, ಅಂತೆಯೇ ಕಾರ್ಯಕರ್ತರೇ ಪಕ್ಷದ ಜೀವಾಳ ಅಂತ ವಿಜಯೇಂದ್ರ ಸಾರಿ ಹೇಳಿದ್ದರು. ಇಂತಹ ಯುವ ನಾಯಕನಿಗೆ ಇಂದು ಕೇಸರಿ…
ಬೆಂಗಳೂರು: ಜೆಡಿಎಸ್ (JDS) ಕಚೇರಿ ಮುಂದೆ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಎಂದು ಬರೆದಿರುವ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ಕಾರ್ಯಕರ್ತರು ಲೇವಡಿ ಮಾಡಿದ್ದಾರೆ. ಮಾಜಿ ಸಿಎಂ ವಿರುದ್ಧ ವಿದ್ಯುತ್ ಅಕ್ರಮ ಆರೋಪ ಕೇಳಿ ಬಂದಾಗಿಂದ ಒಂದಲ್ಲ ಒಂದು ರೀತಿಯಲ್ಲಿ ‘ಕೈ’ ಕಾರ್ಯಕರ್ತರು ಕಾಲೆಳೆಯುತ್ತಿದ್ದಾರೆ. ಹೆಚ್‌ಡಿಕೆ ಫೋಟೋ ಇರುವ ಪೋಸ್ಟರ್‌ನಲ್ಲಿ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ (H.D.Kumaraswamy) ಎಂದು ಬರೆಯಲಾಗಿದೆ. 200 ಯೂನಿಟ್ ಉಚಿತ.. ನೆನಪಿಟ್ಟುಕೊಳ್ಳಿ, ಹೆಚ್ಚು ಕದಿಯಬೇಡಿ ಎಂದು ಬರೆದು ಕಾಂಗ್ರೆಸ್ (Congress) ಕಾರ್ಯಕರ್ತರು ಲೇವಡಿ ಮಾಡಿದ್ದಾರೆ. ಜೆ.ಪಿ.ನಗರದಲ್ಲಿರುವ ನಿವಾಸಕ್ಕೆ ದೀಪಾವಳಿ ಅಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವಿದ್ಯುತ್ ಕಳವು ಪ್ರಕರಣದಲ್ಲಿ ಹೆಚ್‌ಡಿಕೆ ವಿರುದ್ಧ ಬೆಸ್ಕಾಂ ಜಾಗೃತದಳ ಪ್ರಕರಣ ದಾಖಲಿಸಿದೆ. ಜಯನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ವಿದ್ಯುತ್ ಕಲಾಂ 135 ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ
ನವದೆಹಲಿ: ಆಳವಾದ ಕಂದಕಕ್ಕೆ ಬಸ್ಸೊಂದು ಬಿದ್ದ ಪರಿಣಾಮ ಕನಿಷ್ಠ 38 ಜನರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಭಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಘಟನೆಯ ಕುರಿತು ಸಂತಾಪ ಸೂಚಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಸಂಭವಿಸಿದ ಬಸ್ ಅಪಘಾತ ದುಃಖಕರವಾಗಿದೆ. https://ainlivenews.com/joint_pain_suprem_ray_treatment_reiki/ ತಮ್ಮ ಹತ್ತಿರದ ಮತ್ತು ಆತ್ಮೀಯರನ್ನು ಕಳೆದುಕೊಂಡ ಕುಟುಂಬಗಳಿಗೆ ನಾನು ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಪಿಎಂಒ ಎಕ್ಸ್‌ನಲ್ಲಿ (X) ಪೋಸ್ಟ್ ಮಾಡಿದೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ. ಅಲ್ಲದೇ ಗಾಯಗೊಂಡವರಿಗೆ 50,000 ರೂ. ನೆರವು ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ವಿಜಯ ಶಕೆ ಆರಂಭವಾಗಿದೆ. ಬಿಜೆಪಿಯ ಯುವ ಅಧ್ಯಕ್ಷ ವಿಜಯೇಂದ್ರ (BY Vijayendra) ಮುಂದೆ ಸಾಲು ಸಾಲು ಸವಾಲುಗಳಿವೆ. ಲೋಕಸಭೆ ಚುನಾವಣಾ (Lok Sabha Election) ಟಾಸ್ಕ್ ರೀಚ್ ಆಗಲು ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯ ತಂತ್ರಗಳನ್ನು ಹೆಣೆದಿದ್ದಾರೆ.. https://ainlivenews.com/joint_pain_suprem_ray_treatment_reiki/ ವಿಜಯೇಂದ್ರ ಎದುರು ಮುಳ್ಳಿನ ಹಾದಿ ಇದ್ದು ಸದ್ಯ ಈಗ ಬಿಜೆಪಿ (BJP) ಮನೆ ಸಮಸ್ಯೆಗಳ ಗೂಡಾಗಿದೆ. ಪಕ್ಷದ ಹೀನಾಯ ಸೋಲು, ಬಣ ಸಂಘರ್ಷ, ಒಗ್ಗಟ್ಟಿಲ್ಲ, ನಾಯಕತ್ವದ ಕೊರತೆ, ಸೊರಗಿದ ಪಕ್ಷ ಸಂಘಟನೆ ಇಂಥಹ ಸಂದರ್ಭದಲ್ಲಿ ಪಕ್ಷಕ್ಕೆ ನೂತನ ಸಾರಥಿಯಾಗಿ ವಿಜಯೇಂದ್ರ ಎಂಟ್ರಿಯಾಗಿದ್ದಾರೆ. ಸವಾಲುಗಳೇನು? – ಹೈಕಮಾಂಡ್ ನಿರೀಕ್ಷೆಗೆ ತಕ್ಕಂತೆ ಕಾರ್ಯ ನಿರ್ವಹಿಸುವುದು. ವರಿಷ್ಠರು, ದೆಹಲಿ ಮಟ್ಟದ ನಾಯಕರೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಳ್ಳುವುದು – ಕಿರಿಯ, ಹಿರಿಯ ನಾಯಕರ ವಿಶ್ವಾಸ ಪಡೆದು ಒಟ್ಟಿಗೆ ಕರೆದೊಯ್ಯುವುದು. ಹಿರಿಯರನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಸಹಕಾರ ಕೋರುವುದು – ಪಕ್ಷದಲ್ಲಿ ಬಣ ಸಂಘರ್ಷಕ್ಕೆ ತೆರೆ ಎಳೆಯುವುದು. ಸೋಲಿನಿಂದ ಕಂಗೆಟ್ಟ ಪಕ್ಷಕ್ಕೆ ಚೇತರಿಕೆ, ಟಾನಿಕ್ ಕೊಡುವುದು…