ಯಾವುದೇ ರೆಸ್ಟೋರೆಂಟ್‌ಗಳಿಗೆ ಹೋದರೂ ವೈಟರ್ ಸೂಪ್ ಅಥವಾ ಸ್ಟಾರ್ಟರ್ಸ್ ಏನಾದ್ರೂ ತೆಗೆದುಕೊಳ್ಳುತ್ತೀರಾ ಎಂದು ಮೊದಲು ಕೇಳುತ್ತಾರೆ. ಊಟಕ್ಕೂ ಮೊದಲು ಸೂಪ್ ಸೇವಿಸುವುದರಿಂದ ಚಯಾಪಚಯ ಕ್ರಿಯೆ ಸರಿಯಾಗಿ ಆಗುತ್ತದೆ. ಅಲ್ಲದೇ ದೇಹಕ್ಕೆ ನವಚೈತನ್ಯವನ್ನು ತುಂಬುತ್ತದೆ. ಇವತ್ತಿನ ನಮ್ಮ ರೆಸಿಪಿಯಲ್ಲಿ ಮನೆಯಲ್ಲೇ ವೆಜಿಟೇಬಲ್ ಮ್ಯಾಂಚೋ ಸೂಪ್ ಯಾವ ರೀತಿ ಮಾಡಬಹುದು ಎಂಬುದನ್ನು ತಿಳಿಸಿಕೊಡುತ್ತೇವೆ ಬೇಕಾಗುವ ಸಾಮಗ್ರಿಗಳು: ನೀರು – 4 ಕಪ್ ಹೆಚ್ಚಿದ ಶುಂಠಿ – 1 ಚಮಚ ಹೆಚ್ಚಿದ ಬೆಳ್ಳುಳ್ಳಿ – 1 ಚಮಚ ಹೆಚ್ಚಿದ ಹಸಿರು ಮೆಣಸಿನಕಾಯಿ – 1 ಚಮಚ ಹೆಚ್ಚಿದ ಕೊತ್ತಂಬರಿ ಸೊಪ್ಪು – 2 ಚಮಚ ಹೆಚ್ಚಿದ ಫ್ರೆಂಚ್ ಬೀನ್ಸ್ – 2 ಚಮಚ ಹೆಚ್ಚಿದ ಕ್ಯಾರೆಟ್ – 2 ಚಮಚ ಹೆಚ್ಚಿದ ಕ್ಯಾಬೇಜ್ – 2 ಚಮಚ ಹೆಚ್ಚಿದ ಕ್ಯಾಪ್ಸಿಕಮ್ – 2 ಚಮಚ ಹೆಚ್ಚಿದ ಮಶ್ರೂಮ್ – 2 ಚಮಚ ಹೆಚ್ಚಿದ ಸ್ಪ್ರಿಂಗ್ ಆನಿಯನ್ – 2 ಚಮಚ ಪೆಪ್ಪರ್ ಪೌಡರ್ – 1…
Author: AIN Author
ಹುಬ್ಬಳ್ಳಿ:- ಎಮ್ಮೆಗಳ ಅಲಂಕಾರಕ್ಕೆ ಕವಡೆ ಸರ, ಕೋಡು ಕೊಂಬುಗಳಿಗೆ ತುರಾಯಿಗಳು, ಹೊಸ ಹಗ್ಗಗಳು, ಕೋಡುಗಳಿಗೆ ಹೊಸ ಬಣ್ಣ ಬಳಿಯುವುದು ಹೀಗೆ ದೀಪಾವಳಿ ಹಬ್ಬವನ್ನ ಗೌಳಿಗ ಸಮಾಜದವರು ಅತ್ಯಂತ ವಿಶೇಷವಾಗಿ ಆಚರಣೆ ಮಾಡಿದರು. ಈ ಕುರಿತು ಒಂದು ವರದಿ.. ದೀಪಾವಳಿ ಹಬ್ಬದಂದು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಗೌಳಿಗರ ಉತ್ಸಾಹಕ್ಕೆ ಎಲ್ಲೆ ಇಲ್ಲ. ಅವರು ತಮ್ಮ ಮಕ್ಕಳಗಿಂತಲೂ ಹೆಚ್ಚಾಗಿ ಪ್ರೀತಿಯಿಂದ ಜೋಪಾನ ಮಾಡಿರುವ ಎಮ್ಮೆಯನ್ನ ಶೃಂಗಾರ ಮಾಡಿ ಓಡಿಸಿದ ಸಂಭ್ರಮಕ್ಕೆ ಪಾರವೇ ಇರಲಿಲ್ಲ.ಉತ್ತರ ಭಾರತದಿಂದ ಬಂದ ಯಾದವರು ಹಣಬರ ಸಮುದಾಯದವರು ಹೈನುಗಾರಿಕೆಯನ್ನೇ ನಂಬಿ ಬದುಕುತ್ತಿದ್ದಾರೆ. ಮಲೆನಾಡಿನ ಸೆರಗಿನಂತಿರುವ ಈ ಊರಿನಲ್ಲಿ ಯಾದವರ ಶ್ರಮದಿಂದಲೇ ಧಾರವಾಡ ಪೇಡೆ ಜನಪ್ರಿಯ ವಾಗಲು ಸಾಧ್ಯವಾಗಿದೆ ವರ್ಷವಿಡೀ ಹಾಲು ಕೊಟ್ಟು ಪೊರೆಯುವ ಎಮ್ಮೆಗಳಿಗೆ ಸಿಂಗಾರ ಮಾಡಿ, ದ್ವಾದಶಿಯಂದು ದೋಸೆ ಮಾಡಿ ನೈವೇದ್ಯ ಹಿಡಿದು ಬಲಿಪಾಡ್ಯಮಿಯ ದಿನ ಎಮ್ಮೆಗಳ ಓಟ ಏರ್ಪಡಿಸಲಾಗುತ್ತದೆ ಎನ್ನುತ್ತಾರೆ ಗೌಳಿದ ಸಮಾಜ ಹಿರಿಯರು, ನೆಹರು ಮೈದಾನದಲ್ಲಿ ಸಾಂಪ್ರದಾಯಿಕ ಪೂಜೆ ನಂತರ ಗೌಳಿ ಗಲ್ಲಿ, ಮರಾಠಾ ಗಲ್ಲಿ,…
ಬೆಳಗಾವಿ: ಉಡುಪಿ ಜಿಲ್ಲೆಯಲ್ಲಿ ನಡೆದ ತಾಯಿ ಮತ್ತು ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆಗೆ ಪೊಲೀಸರಿಗೆ ನಿರ್ದೇಶನ ನೀಡಿದ್ದೇನೆ. ಶೀಘ್ರದಲ್ಲೇ ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಭಾನುವಾರ ಉಡುಪಿ ಜಿಲ್ಲೆ ನೇಜಾರುವಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಅಮಾನುಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿದ್ದೇನೆ ಎಂದಿದ್ದಾರೆ. ಘಟನೆ ಕುರಿತಂತೆ ಸೂಕ್ತ ತನಿಖೆ ಕೈಗೊಳ್ಳಲು ನಿರ್ದೇಶನ ನೀಡಿದ್ದೇನೆ. ಅಲ್ಲದೆ, ಅವರಿಂದ ನಿರಂತರ ಮಾಹಿತಿ ಪಡೆಯುತ್ತಿದ್ದೇನೆ. ಪ್ರಕರಣ ಸಂಬಂಧ 5 ತಂಡಗಳನ್ನು ರಚಿಸಲಾಗಿದ್ದು, ಶೀಘ್ರ ಪತ್ತೆ ಮಾಡುವ ವಿಶ್ವಾಸವನ್ನು ಪೋಲೀಸ್ ವರಿಷ್ಠಾಧಿಕಾರಿಗಳು ವ್ಯಕ್ತಪಡಿಸಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
ಶಿರಸಿ:- ಯಡಳ್ಳಿ ಗ್ರಾಮದ ಬಳಿ ಆಟೋರಿಕ್ಷಾ-ಕಾರು ನಡುವೆ ಡಿಕ್ಕಿ ಸಂಭವಿಸಿ ಆಟೋದಲ್ಲಿದ್ದ ಐವರು ಗಂಭೀರ ಗಾಯಗೊಂಡಿರುವ ಘಟನೆ ಜರುಗಿದೆ. ಅಟೋದಲ್ಲಿದ್ದ ಆಶೋಕ ಶಿರಾಲಿ (52) ನಿಲೇಕಣಿ ವಿಶಾಲಾಕ್ಷಿ (55) ಅಂಭಾಗಿರಿ ತ್ರಿಶಾ ಅಶೋಕ ಶಿರಾಲಿ (9), ಅನಿತಾ ಅಶೋಕ ಶಿರಾಲಿ (40), ಆದರ್ಶ ಅಶೋಕ ಶಿರಾಲಿ (18) ಅಪರಂಜಿತ (45) ಗಂಭೀರವಾಗಿ ಗಾಯಗೊಂಡಿದ್ದಾರೆ. ದೀಪಾವಳಿ ನಿಮಿತ್ತ ದೇವಾಸ್ಥಾನಕ್ಕೆ ತೆರಳಿದ್ದ ಒಂದೇ ಕುಟುಂಬದ ಐವರು ದೇವಾಸ್ಥಾನದಿಂದ ಮನೆಗೆ ವಾಪಾಸ್ ತೆರಳುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಗಾಯಾಳುಗಳನ್ನು ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಸ್ಲಾಮಾಬಾದ್: 2023ರ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಹೀನಾಯ ಸೋಲಿನೊಂದಿಗೆ ತವರಿಗೆ ಮರಳಿದ ಬೆನ್ನಲ್ಲೇ ದಕ್ಷಿಣ ಆಫ್ರಿಕಾ ತಂಡದ ಮಾಜಿ ವೇಗಿ ಹಾಗೂ ಪಾಕ್ ತಂಡಕ್ಕೆ ಬೌಲಿಂಗ್ ಕೋಚ್ ಆಗಿದ್ದ ಮೊರ್ನೆ ಮೊರ್ಕೆಲ್ (Morne Morkel) ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಪ್ರಕಟಿಸಿದೆ. ದಕ್ಷಿಣ ಆಫ್ರಿಕಾ ತಂಡದ ಮಾಜಿ ವೇಗಿಯೂ ಆಗಿದ್ದ ಮೊರ್ಕೆಲ್ ಪ್ರಸಕ್ತ ವರ್ಷದ ಜೂನ್ ತಿಂಗಳಲ್ಲಿ 6 ತಿಂಗಳ ಒಪ್ಪಂದದ ಮೇರೆಗೆ ಪಾಕಿಸ್ತಾನ ತಂಡಕ್ಕೆ ಬೌಲಿಂಗ್ ಕೋಚ್ (Pakistans Bowling Coach) ಆಗಿ ನೇಮಕಗೊಂಡಿದ್ದರು. ಶೀಘ್ರದಲ್ಲೇ ಮೊರ್ಕೆಲ್ ಸ್ಥಾನಕ್ಕೆ ಬದಲಿ ಕೋಚ್ ನೇಮಿಸುವುದಾಗಿ ಮಂಡಳಿ ತಿಳಿಸಿದೆ. ಪಾಕಿಸ್ತಾನ ತಂಡವು ಇದೇ ವರ್ಷದ ಡಿಸೆಂಬರ್ 14 ರಿಂದ 2024ರ ಜನವರಿ 7ರ ವರೆಗೆ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ. ಅಷ್ಟರಲ್ಲಿ ಬದಲಿ ಕೋಚ್ ನೇಮಕ ಮಾಡುವುದಾಗಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಮೊರ್ಕೆಲ್ ಬೌಲಿಂಗ್ ಕೋಚ್ ಆಗಿ ನಿಯೋಜನೆಗೊಂಡ ಬಳಿಕ ಶ್ರೀಲಂಕಾ ವಿರುದ್ಧ ನಡೆದ 2 ಟೆಸ್ಟ್…
ಬೆಂಗಳೂರು : ರನ್ ಮೆಷಿನ್ ವಿರಾಟ್ ಕೊಹ್ಲಿ ವಿಶ್ವಕಪ್-2023 ಲೀಗ್ ಹಂತದಲ್ಲಿ ಅಧಿಕ ರನ್ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಟೂರ್ನಿಯಲ್ಲಿ ಆಡಿರುವ 9 ಇನ್ನಿಂಗ್ಸ್‌ಗಳಲ್ಲಿ 2 ಶತಕ, 5 ಅರ್ಧಶತಕ ಸಹಿತ 594 ರನ್ ಚಚ್ಚಿದ್ದಾರೆ. ದಕ್ಷಿಣ ಆಫ್ರಿಕಾದ ಆರಂಭಿಕ ಆಟಗಾರ ಕ್ವಿಂಟನ್ ಡಿ ಕಾಕ್ 591, ನ್ಯೂಜಿಲೆಂಡ್‌ನ ರಚಿನ್ ರವೀಂದ್ರ 565, ಭಾರತ ತಂಡದ ನಾಯಕ ರೋಹಿತ್ ಶರ್ಮಾ 503 ರನ್ ಗಳಿಸಿದ್ದಾರೆ. ಇನ್ನು ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ 499 ರನ್ ಸಿಡಿಸಿ ನಂತರದ ಸ್ಥಾನಗಳಲ್ಲಿ ಕಾಣಿಸಿಕೊಂಡಿದ್ದಾರೆ. ಐಸಿಸಿ ಏಕದಿನ ಬ್ಯಾಟರ್‌ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಶುಭಮನ್ ಗಿಲ್, ಅನಾರೋಗ್ಯ ಕಾರಣ ಟೂರ್ನಿಯ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದರು. ಅವರು 7 ಇನ್ನಿಂಗ್ಸ್‌ಗಳಲ್ಲಿ ಬ್ಯಾಟ್ ಬೀಸಿ 3 ಅರ್ಧ ಶತಕ ಸಹಿತ 270 ರನ್ ಕಲೆಹಾಕಿದ್ದಾರೆ. ಆ ಮೂಲಕ ಈ ಪಟ್ಟಿಯಲ್ಲಿ 34ನೇ ಸ್ಥಾನದಲ್ಲಿ ಉಳಿದಿದ್ದಾರೆ. ಶ್ರೇಯಸ್ ಅಯ್ಯರ್ 421 ರನ್ ಹಾಗೂ ಕನ್ನಡಿಗ ಕೆ.ಎಲ್ ರಾಹುಲ್ 347 ರನ್ ಗಳಿಸಿದ್ದಾರೆ.…
ದೀಪಾವಳಿ ಹಬ್ಬದ ಪ್ರಯುಕ್ತ ಟ್ರೆಡಿಷನಲ್ ಲುಕ್ನಲ್ಲಿ ರಿಷಬ್ ಫ್ಯಾಮಿಲಿ ಮಿಂಚುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋಸ್ ವೈರಲ್ ಆಗಿದೆ. ರಿಷಬ್ ಶೆಟ್ಟಿ ಮನೆಯಲ್ಲಿ ದೀಪಾವಳಿ ಸಂಭ್ರಮ ಮನೆ ಮಾಡಿದೆ. ಮಕ್ಕಳ ಜೊತೆ ಜೊತೆ ರಿಷಬ್ ದೀಪ ಹಚ್ಚಿ ಸಂಭ್ರಮಿಸಿದರು. ಶೂಟಿಂಗ್ ಬ್ಯುಸಿ ನಡುವೆ ಕಾಂತಾರ ನಟ ಫ್ಯಾಮಿಲಿ ಜೊತೆ ಹಬ್ಬ ಆಚರಿಸಿದ ಖುಷಿಯಲ್ಲಿದ್ದಾರೆ. ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಸೋಶಿಯಲ್ ಮೀಡಿಯಾದಲ್ಲಿ ಆಯಕ್ಟಿವ್ ಆಗಿದ್ದು, ಮಕ್ಕಳ ಜೊತೆ ಬೆಳಕಿನ ಹಬ್ಬ ಆಚರಿಸಿದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದು, ನಾಡಿನ ಜನತೆಗೆ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ಕಾಂತಾರ ಸಿನಿಮಾ ಬಳಿಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿರುವ ರಿಷಬ್ ಶೆಟ್ಟಿ ಮನೆಯಲ್ಲೂ ಹಬ್ಬ ಮಕ್ಕಳೊಂದಿಗೆ ಕಳೆಗಟ್ಟಿದೆ. ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿಗೆ ರಣ್ವಿತ್ ಶೆಟ್ಟಿ ಹಾಗೂ ರಾಧ್ಯಾ ಶೆಟ್ಟಿ ಎಂಬ ಮುದ್ದಾದ ಮಕ್ಕಳಿದ್ದಾರೆ. ಫೋಟೋಸ್ ನೋಡಿದ ನೆಟ್ಟಿಗರು ರಿಷಬ್ ಶೆಟ್ಟಿ ಅವರಿಗೆ ಹ್ಯಾಪಿ ದೀಪಾವಳಿ, ಸಂಪ್ರದಾಯ ಅಂದ್ರೆ ಹೀಗಿರಬೇಕು ಶೆಟ್ರೆ,…
ದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) 2023 ರ ಕ್ರಿಕೆಟ್ ವಿಶ್ವಕಪ್‌ನಲ್ಲಿ (World Cup) ಮತ್ತೊಂದು ದಾಖಲೆ ಬರೆದಿದ್ದಾರೆ. ಒಂದೇ ವಿಶ್ವಕಪ್ ಆವೃತ್ತಿಯಲ್ಲಿ 500 ಕ್ಕಿಂತ ಹೆಚ್ಚು ರನ್ ಗಳಿಸಿದ ಮೊದಲ ಭಾರತೀಯ ನಾಯಕನಾಗಿ ಹೊರಹೊಮ್ಮಿದ್ದಾರೆ. ಟೂರ್ನಿಯ ಲೀಗ್ ಹಂತದಲ್ಲಿ ಆಡಿದ ಒಂಬತ್ತು ಪಂದ್ಯಗಳಲ್ಲಿ ಬಲಗೈ ಬ್ಯಾಟರ್ 55.89 ಸರಾಸರಿಯಲ್ಲಿ 503 ರನ್ ಗಳಿಸಿದ್ದಾರೆ. ಈ ಟೂರ್ನಿಯಲ್ಲಿ ಇದುವರೆಗೆ ಒಂದು ಶತಕ ಮತ್ತು ಮೂರು ಅರ್ಧ ಶತಕಗಳನ್ನು ಬಾರಿಸಿದ್ದಾರೆ. 36 ವರ್ಷ ವಯಸ್ಸಿನ ರೋಹಿತ್ ಶರ್ಮಾ ಒಂದೇ ವಿಶ್ವಕಪ್ ಆವೃತ್ತಿಯಲ್ಲಿ 500 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ಮೊದಲ ಭಾರತೀಯ ನಾಯಕನಾಗಿ ದಾಖಲೆ ಮಾಡಿದ್ದಾರೆ. ಆ ಮೂಲಕ ಸೌರವ್ ಗಂಗೂಲಿ ಅವರನ್ನು ಹಿಂದಿಕ್ಕಿ ವಿಶ್ವಕಪ್‌ನ ಒಂದೇ ಆವೃತ್ತಿಯಲ್ಲಿ ಹೆಚ್ಚು ರನ್ ಗಳಿಸಿದ ಭಾರತೀಯ ನಾಯಕನಾಗಿ ರೆಕಾರ್ಡ್ ಮಾಡಿದ್ದಾರೆ. ಗಂಗೂಲಿ ಭಾರತ ತಂಡದ ನಾಯಕನಾಗಿದ್ದ ಸಂದರ್ಭದಲ್ಲಿ 2003 ವಿಶ್ವಕಪ್‌ನಲ್ಲಿ 465 ರನ್ ಗಳಿಸಿ ಇದುವರೆಗೆ ಅಗ್ರಸ್ಥಾನದಲ್ಲಿದ್ದರು. ಒಂದೇ…
ಅಮರಾವತಿ: ವ್ಯಕ್ತಿಯೊಬ್ಬ ಮದ್ಯ (Alcohol) ಕೊಡಲಿಲ್ಲ ಎಂದು ವೈನ್ ಶಾಪ್‌ಗೇ (Wine Shop) ಬೆಂಕಿ (Fire) ಹಚ್ಚಿದ ಘಟನೆ ವಿಶಾಖಪಟ್ಟಣಂನ (Visakhapatnam) ಮಧುರ್ವಾಡ (Madurwada) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೈನ್ ಶಾಪ್‌ಗೆ ಬೆಂಕಿ ಇಟ್ಟ ವ್ಯಕ್ತಿಯನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ. ಆರೋಪಿಯನ್ನು ಮಧು ಎಂದು ಗುರುತಿಸಲಾಗಿದೆ. ಆತ ಮಧುವಾಡ ಬಡಾವಣೆಯ ವೈನ್ ಶಾಪ್‌ಗೆ ತಡರಾತ್ರಿ ಬಂದಿದ್ದ. ವೈನ್ ಶಾಪ್ ಮುಚ್ಚುವ ಸಮಯವಾಗಿದ್ದರಿಂದ ಶಾಪ್ ಸಿಬ್ಬಂದಿ ಮದ್ಯ ನೀಡಲು ನಿರಾಕರಿಸಿದ್ದಾರೆ. ಇದರಿಂದ ಆರೋಪಿ ಹಾಗೂ ಸಿಬ್ಬಂದಿ ನಡುವೆ ವಾಗ್ವಾದ ಉಂಟಾಗಿದೆ. ಬಳಿಕ ಆತನಿಗೆ ಎಚ್ಚರಿಕೆ ನೀಡಿದ ಬಳಿಕ ಆತ ಅಲ್ಲಿಂದ ತೆರಳಿದ್ದಾನೆ. ಎಚ್ಚರಿಕೆ ನೀಡಿದ್ದಕ್ಕೆ ಸಿಟ್ಟಾಗಿದ್ದ ಮಧು ಭಾನುವಾರ ಸಂಜೆ ಪೆಟ್ರೋಲ್ ಟ್ಯಾಂಕ್‌ನೊಂದಿಗೆ ವೈನ್ ಶಾಪ್‌ಗೆ ವಾಪಸ್ ಬಂದಿದ್ದಾನೆ. https://ainlivenews.com/joint_pain_suprem_ray_treatment_reiki/ ವೈನ್ ಶಾಪ್ ಒಳಗಡೆ ಮಾತ್ರವಲ್ಲದೆ ಸಿಬ್ಬಂದಿ ಮೇಲೂ ಪೆಟ್ರೋಲ್ ಅನ್ನು ಸುರಿದು ತಕ್ಷಣ ಬೆಂಕಿ ಹಚ್ಚಿದ್ದಾನೆ. ಈ ವೇಳೆ ಸಿಬ್ಬಂದಿ ಅಂಗಡಿಯಿಂದ ಹೊರಕ್ಕೆ ಓಡಿ ಹೋಗಿ ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ.…
ಬೆಂಗಳೂರು:-ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರು ಇಂದು ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಬಿ.ವೈ.ವಿಜಯೇಂದ್ರ ಅವರು ಪದಗ್ರಹಣ ಮಾಡಲಿದ್ದು, ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಇನ್ನು ವಿಜಯೇಂದ್ರ ಅವರ ಪದಗ್ರಹಣ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಬೆಳಗ್ಗೆ 6.30ರಿಂದಲೇ ಹೋಮ-ಹವನ ಶುರುವಾಗಿವೆ. ಕರ್ನಾಟಕದ ಬಿಜೆಪಿ ಕಚೇರಿಯಲ್ಲಿ ಈಗ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಪಕ್ಷಕ್ಕೆ ಹೊಸ ಸಾರಥಿಯಾಗಿ ವಿಜಯೇಂದ್ರ ಅವರು ನೇಮಕಗೊಂಡು ಬುಧವಾರ ನಿರ್ಗಮಿತ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇದಕ್ಕಾಗಿ ಬಿಜೆಪಿ ಕಚೇರಿಯನ್ನು ತೋರಣದಿಂದ ಅಲಂಕರಿಸಲಾಗಿದೆ. ಹಾಗೇ ಜಗನಾಥ್ ಭವನದ ಮುಂದೆ ರಂಗೋಲಿ ಬಿಡಿಸಲಾಗಿದೆ.