ಕನ್ನಡದ ನಟಿ ಶೋಭಾ ಶೆಟ್ಟಿ (Shobha Shetty) ತೆಲುಗು ಕಿರುತೆರೆಯಲ್ಲಿ ಹವಾ ಕ್ರಿಯೇಟ್ ಮಾಡಿದ್ದಾರೆ. ತೆಲುಗಿನ ಬಿಗ್ ಬಾಸ್ ಸೀಸನ್ 7ರಲ್ಲಿ ಸಮರ್ಥ ಸ್ಪರ್ಧಿಯಾಗಿ ಮಿಂಚ್ತಿದ್ದಾರೆ. ಇದೀಗ ‘ಬಿಗ್ ಬಾಸ್’ (Bigg Boss) ವೇದಿಕೆಯಲ್ಲಿ ಪ್ರೀತಿಸಿದ ಹುಡುಗನ ಬಗ್ಗೆ ಶೋಭಾ ಬಾಯ್ಬಿಟ್ಟಿದ್ದಾರೆ. ವಾರಾಂತ್ಯದ ನಾಗಾರ್ಜುನ ಅಕ್ಕಿನೇನಿ ಅವರ ಪಂಚಾಯತಿಯಲ್ಲಿ ಶೋಭಾ ಶೆಟ್ಟಿ ತಾವು ಎಂಗೇಜ್ ಆಗಿರುವ ಹುಡುಗನ ಬಗ್ಗೆ ರಿವೀಲ್ ಮಾಡಿದ್ದಾರೆ. ಯಶವಂತ್ ರೆಡ್ಡಿ ಜೊತೆ ಕಳೆದ ಮೂರುವರೆ ವರ್ಷಗಳಿಂದ ಪ್ರೀತಿಸುತ್ತಿರೋದಾಗ ನಾಗಾರ್ಜುನ ಬಳಿ ಹೇಳಿಕೊಂಡಿದ್ದಾರೆ. ಶೋಭಾ ತಂದೆ ಮತ್ತು ಬಾಯ್‌ಫ್ರೆಂಡ್ ಯಶವಂತ್ ಕೂಡ ಎಂಟ್ರಿ ಕೊಟ್ಟು ಶೋಭಾಗೆ ಅಚ್ಚರಿ ಮೂಡಿಸಿದ್ದಾರೆ. ಇಬ್ಬರನ್ನೂ ನೋಡ್ತಿದ್ದಂತೆ ನಟಿ ಭಾವುಕರಾಗಿದ್ದಾರೆ. ಬಳಿಕ ಯಶವಂತ್‌ಗೆ ಮೊದಲು ಪ್ರಪೋಸ್ ಮಾಡಿದ್ದೇ ನಾನು ಎಂದು ಶೋಭಾ ಹೇಳಿದ್ದಾರೆ. ನಿರೂಪಕ ನಾಗಾರ್ಜುನ ಕೂಡ ಹೊಸ ಜೋಡಿಗೆ ವಿಶ್ ಮಾಡಿದ್ದಾರೆ ಯಶವಂತ್ (Yashwanth) ಜೊತೆ ‘ಬುಜ್ಜಿ ಬಂಗಾರಮ್’ ಎಂಬ ಪ್ರಾಜೆಕ್ಟ್‌ನಲ್ಲಿ ಶೋಭಾ ಶೆಟ್ಟಿ ಜೊತೆಯಾಗಿ ನಟಿಸಿದ್ದರು. ಇದೀಗ ಮೂರುವರೆ ವರ್ಷದ ನಂತರ…
Author: AIN Author
ಹಾಸನ: ಹಾಸನಾಂಬ ದೇವಿ ದರ್ಶನಕ್ಕೆ ಇಂದೇ ಕೊನೆಯ ದಿನವಾಗಿದೆ. ಕೊನೆಯ ದಿನವೂ ಹಾಸನಾಂಬೆ ದರ್ಶನಕ್ಕೆ ಭಕ್ತರು ಬರುತ್ತಿದ್ದಾರ. ಬುಧವಾರ ಬೆಳಗ್ಗೆ 7 ಗಂಟೆಯವರೆಗೆ ಹಾಸನಾಂಬೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. https://ainlivenews.com/another-terrorist-killed-by-unknown-gunmen-in-pakistan/ ನಾಳೆ (ನ.15) ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲನ್ನು ಭಕ್ತರು ಮುಚ್ಚಲಿದ್ದಾರೆ. ನವೆಂಬರ್ 2ರಿಂದ ಹಾಸನಾಂಬ ಜಾತ್ರಾ ಮಹೋತ್ಸವ ಆರಂಭವಾಗಿತ್ತು. ಈ ಬಾರಿ 12 ದಿನಗಳ ಕಾಲ ಭಕ್ತರಿಗೆ ಹಾಸನಾಂಬೆ ದರ್ಶನಕ್ಕೆ ಅವಕಾಶ ನೀಡಲಾಗಿದೆ.
ಬೆಂಗಳೂರು: ಸರ್ಕಾರದ ಶಕ್ತಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಸಂಬಂಧಿಸಿ ಕೆಎಸ್‌ಆರ್‌ಟಿಸಿ ವತಿಯಿಂದ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಮಹಿಳೆಯರು ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಪ್ರಯಾಣಿಸುವಾಗ ಇನ್ಮುಂದೆ ಮೊಬೈಲ್‌ನಲ್ಲಿ ಆಧಾರ್ ಕಾರ್ಡ್ ತೋರಿಸಿ ಶಕ್ತಿ ಯೋಜನೆಯಡಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು ಎಂದು ತಿಳಿಸಿದೆ. ಉಚಿತ ಪ್ರಯಾಣಕ್ಕಾಗಿ ಮಹಿಳಾ ಪ್ರಯಾಣಿಕರು ಮೂಲ, ನಕಲು, ಡಿಜಿ ಲಾಕರ್ ಪ್ರತಿ ತೋರಿಸಿ ಪ್ರಯಾಣ ಮಾಡಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಮಹಿಳಾ ಪ್ರಯಾಣಿಕರು ಮೊಬೈಲ್‌ನಲ್ಲಿ ಅಧಿಕೃತ ಗುರುತಿನ ಚೀಟಿ ತೋರಿಸಿದಾದಾಗಲೂ ಮೊಬೈಲ್‌ನಲ್ಲಿನ ಗುರುತಿನ ಚೀಟಿಯನ್ನು ಮಾನ್ಯ ಮಾಡುವುದಿಲ್ಲ ಎಂದು ಕೆಲವು ನಿರ್ವಾಹಕರು ಅನವಶ್ಯಕವಾಗಿ ಮಹಿಳೆಯರಿಗೆ ತೊಂದರೆಯುಂಟು ಮಾಡುತ್ತಿರುವ ಬಗ್ಗೆ ಪದೇ ಪದೇ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಕೆಎಸ್‌ಆರ್‌ಟಿಸಿ ಸ್ಪಷ್ಟನೆ ನೀಡಿದೆ.
ನಿನ್ನೆಯಿಂದ ಬಿಗ್ ಬಾಸ್ ಮನೆಯಲ್ಲಿ (Bigg Boss Kannada 10) ವರ್ತೂರು ಸಂತೋಷರದ್ದೇ (Varthur Santhosh) ಮಾತು. ನಾಮಿನೇಟ್ ಪ್ರಕ್ರಿಯೆ ಇಂದ ಸಂತೋಷ್ ಸೇಫ್ ಅಂತ ಕಿಚ್ಚ ಪ್ರಕಟಿಸಿದ ಮೇಲೂ, ಈ ಮನೆಯಲ್ಲಿ ಇರೋಕೆ ಆಗ್ತಿಲ್ಲ ಅಂತ ಸಂತೋಷ್ ಕಣ್ಣೀರಿಟ್ಟರು. ಅದಕ್ಕೆ ತಮ್ಮದೇ ಆದ ಕಾರಣವನ್ನೂ ಕೊಟ್ಟರು. ಆದರೂ, ಅವರನ್ನ ಮನವೊಲಿಸೋ ಪ್ರಯತ್ನ ಮಾಡಲಾಯಿತು. ಯಾವುದಕ್ಕೂ ಜಗ್ಗಲಿಲ್ಲ ಆಸಾಮಿ. ಬೆಳಗ್ಗೆಯಿಂದ ಬಿಗ್ ಬಾಸ್ ಮನೆಯಲ್ಲಿ ಹೈಡ್ರಾಮಾಗಳು ನಡೆದವು. ಬೆಳ್ಳಂಬೆಳಗ್ಗೆ ಖ್ಯಾತ ಕಿರುತೆರೆ ನಟಿ ಸುಷ್ಮಾ ರಾವ್ ದೊಡ್ಮನೆ ಪ್ರವೇಶ ಮಾಡಿದರು. ಸಂತೋಷ್ ಜೊತೆ ಹಲವು ಹೊತ್ತು ಮಾತಾಡಿದರು. ನನ್ನ ಮಾತು ಕೇಳು, ಚೆನ್ನಾಗಿ ಇಲ್ಲೇ ಆಟ ಆಡು. ಆಚೆ ಹೋಗೋ ಮಾತು ಬೇಡ ಅಂದರು. ಅವರ ಮಾತೂ ಕೇಳದಾದರೂ ಸಂತೋಷ್. ಮನೆಮಂದಿ ಮತ್ತೊಂದು ಸುತ್ತಿನ ಮನವೊಲಿಸೋ ಕಾರ್ಯ ಮಾಡಿದರು. ತುಕಾಲಿ ಅಂತೂ ಇನ್ನೊಂದು ಹೆಜ್ಜೆ ಮುಂದೆ ಹೋಗಿ, ನಿನ್ನ ಕಾಲು ಹಿಡ್ಕೋತೀನಿ, ಮನೆಬಿಟ್ಟು ಹೋಗಬೇಡ. ಅಂದರು, ಅದಕ್ಕೂ ಒಪ್ಪಲಿಲ್ಲ ಸಂತೋಷ್. ಅಲ್ಲಿಗೆ…
ಟೆಲ್ ಅವೀವ್: ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್ ವಸಾಹತು ಧೋರಣೆಯನ್ನು ಖಂಡಿಸುವ ವಿಶ್ವಸಂಸ್ಥೆಯ ನಿರ್ಣಯದ ಪರವಾಗಿ ಭಾರತ ಮತ ಚಲಾಯಿಸಿದೆ. ಪೂರ್ವ ಜೆರುಸಲೇಂ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರಾಂತ್ಯದಲ್ಲಿ ಮತ್ತು ಆಕ್ರಮಿತ ಸಿರಿಯನ್ ಗೋಲನ್‌ನಲ್ಲಿ ವಸಾಹತು ಚಟುವಟಿಕೆಗಳನ್ನು ಖಂಡಿಸುವ ನಿರ್ಣಯವನ್ನು ಅಂಗೀಕರಿಸಲಾಯಿತು. ಇದನ್ನು ವಿರೋಧಿಸಿದ ಏಳು ದೇಶಗಳಲ್ಲಿ ಯುನೈಟೆಡ್ ಸ್ಟೇಟ್ಸ್ ಮತ್ತು ಕೆನಡಾ ಸೇರಿವೆ. ಹದಿನೆಂಟು ದೇಶಗಳು ಮತದಾನದಿಂದ ದೂರ ಉಳಿದವು. ಗಾಜಾ ಪಟ್ಟಿಯಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವೆ “ತಕ್ಷಣದ ಹಾಗೂ ನಿರಂತರ ಮಾನವೀಯ ಒಪ್ಪಂದಕ್ಕೆ ಕರೆ ನೀಡುವ ಯುಎನ್ ನಿರ್ಣಯದ ಮೇಲೆ ಭಾರತವು ಮತದಾನದಿಂದ ದೂರ ಉಳಿದಿತ್ತು.ಇಸ್ರೇಲ್ ಮೇಲೆ ಅಕ್ಟೋಬರ್ 7 ರಂದು ಹಮಾಸ್ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಕಾರವಾಗಿ ಇಸ್ರೇಲ್ ಯುದ್ಧ ಘೋಷಿಸಿತು. https://ainlivenews.com/b-y-vijayendra-met-former-prime-minister-hd-deve-gowda/ ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧದಿಂದಾಗಿ ಗಾಜಾದಲ್ಲಿ 11,000 ಕ್ಕೂ ಹೆಚ್ಚು ಜನ ಬಲಿಯಾಗಿದ್ದಾರೆ.ಗಾಜಾದಲ್ಲಿ ತೆರೆದುಕೊಳ್ಳುತ್ತಿರುವ ಮಾನವೀಯ ಬಿಕ್ಕಟ್ಟಿನ ಬಗ್ಗೆ ಭಾರತವು ಕಳವಳ ವ್ಯಕ್ತಪಡಿಸಿದೆ. ಆದರೆ ಭಯೋತ್ಪದನೆ ಬಗ್ಗೆ ಯಾವುದೇ ಸಂದಿಗ್ಧತೆ ಇರಲು ಸಾಧ್ಯವಿಲ್ಲ ಎಂದು…
ಬೆಂಗಳೂರು:- ಮೇಲೆ ಸರಳರಾಮಯ್ಯ, ಒಳಗೆ ಐಶಾರಾಮಯ್ಯ ಹೌದಲ್ಲವೇ ಎಂದು ಹೇಳುವ ಮೂಲಕ CM ವಿರುದ್ಧ ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ HDK, ಸನ್ಮಾನ್ಯ @siddaramaiah ನವರೇ.. ನೀವು ಬಡವರ ಬಗ್ಗೆ ಮಾತನಾಡುತ್ತಿರುವುದೇ ಸೋಜಿಗ. ಐಶಾರಾಮಿಯಾದ ನೀವು ಮೇಲೆ ‘ಸರಳರಾಮಯ್ಯ! ಒಳಗೆ ಐಶಾರಾಮಯ್ಯ!!’ ಹೌದಲ್ಲವೇ? ನಾನು ಹೇಳಿದ್ದನ್ನೇಕೆ ತಿರುಚುತ್ತೀರಿ? ಗ್ಯಾರಂಟಿಗಳ ಬಗ್ಗೆ ನನಗೇಕೆ ಹೊಟ್ಟೆಯುರಿ? ನಾನು ಹೇಳಿದ್ದೇನು? ನೀವು ವಕ್ರೀಕರಿಸುತ್ತಿರುವುದೇನು? ಕಾಸು ಕೊಟ್ಟು ಸಮೀಕ್ಷೆ ಮಾಡಿಸಿಕೊಂಡ ಹಾಗಲ್ಲ ಇದು. 5 ಗ್ಯಾರಂಟಿ ಕೊಟ್ಟಿದ್ದೀರಿ, ಸರಿ. ಅದನ್ನು ನೆಟ್ಟಗೆ ಕೊಡಲು ವಿಫಲರಾಗಿದ್ದೀರಿ ಎಂದಿದ್ದೇನೆ. ಇಲ್ಲವೆಂದರೆ ಹೇಳಿ, ಬಹಿರಂಗ ಚರ್ಚೆಗೇ ಬರುತ್ತೇನೆ. ಎಲ್ಲಿಗೆ ಬರಲಿ? ಐಶಾರಾಮಯ್ಯ ಎಂದಿದ್ದಾರೆ. ಕೋಟ್ಯಂತರ ಫಲಾನುಭವಿಗಳು ಸಂಭ್ರಮಿಸುತ್ತಿದ್ದಾರೆಯೇ? ಸತ್ಯ ಹೇಳಿ. ಮಾಧ್ಯಮಗಳು ಸುಳ್ಳು ಹೇಳುತ್ತಿವೆಯೇ? ಪೊಳ್ಳು ಬರೆಯುತ್ತಿವೆಯೇ? ನಿಮ್ಮ ಪ್ರಕಾರ ಮಾಧ್ಯಮಗಳಿಗೆ, ಪ್ರತಿಪಕ್ಷಗಳಿಗೆ ಸುಳ್ಳು ಹೇಳುವುದೇ ಕೆಲಸವೇ? ಹಿಂದೆ ನೀವು ಮಾಡಿದ್ದೂ ಇದೇನಾ? ನಿಮ್ಮ ‘ಸಮಾಜವಾದಿ ಆತ್ಮಸಾಕ್ಷಿ’ ಹೀಗಂತ ಹೇಳುತ್ತಿದೆಯಾ? ಗ್ಯಾರಂಟಿಗಳನ್ನು ಕಾಂಗ್ರೆಸ್ ಮತದಾರರಿಗಷ್ಟೇ ತಂದಿದ್ದೀರಿ ಎಂದು…
ಸ್ಯಾಂಡಲ್‌ವುಡ್ ನಟಿ ಅಮೂಲ್ಯ (Amulya) ಮನೆಯಲ್ಲಿ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಅವಳಿ ಮಕ್ಕಳ ಜೊತೆ ಅಮೂಲ್ಯ ಗ್ರ್ಯಾಂಡ್ ಆಗಿ ಹಬ್ಬ ಆಚರಣೆ ಮಾಡಿದ್ದಾರೆ. ಹಬ್ಬದ ಸುಂದರ ಫೋಟೋಗಳನ್ನ ನಟಿ ಶೇರ್ ಮಾಡಿದ್ದಾರೆ ಬೇಡಿಕೆ ಇದ್ದಾಗಲೇ ಹಸೆಮಣೆ ಏರಿದ್ದ ಚೆಲುವೆ ಅಮೂಲ್ಯ ಈಗ ಮದುವೆ, ಮಕ್ಕಳು, ಸಂಸಾರ ಅಂತ ಅಪ್ಪಟ ಗೃಹಿಣಿಯಾಗಿದ್ದಾರೆ. ಯಾವುದೇ ಹಬ್ಬವಿದ್ದರೂ ಕೂಡ ಮನೆಯಲ್ಲಿ ಸೆಲೆಬ್ರೇಶನ್ ಜೋರಾಗಿಯೇ ಇರುತ್ತದೆ. ಜೊತೆಯೇ ಚೆಂದದ ಫೋಟೋಶೂಟ್ ಕೂಡ ನಟಿ ಶೇರ್ ಮಾಡುತ್ತಾರೆ. ಬಿಳಿ ಬಣ್ಣದ ಉಡುಗೆಯಲ್ಲಿ ಅಮೂಲ್ಯ ಕಂಗೊಳಿಸಿದ್ರೆ, ಅವರ ಅವಳಿ ಮಕ್ಕಳು ಕೆಂಪು ಬಣ್ಣ ದಿರಿಸಿನಲ್ಲಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿದ್ದಾರೆ. ಬ್ಯಾಕ್‌ಗ್ರೌಂಡ್‌ನಲ್ಲಿ ಕಲರ್‌ಫುಲ್ ಲೈಟ್‌ನಲ್ಲಿ ನಡುವೆ ಅಮೂಲ್ಯ ಮಿಂಚಿದ್ದಾರೆ.
ಬೆಂಗಳೂರು:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ. ಲೊಕ್ಯಾಂಟೋ ಆ್ಯಪ್ ಮುಖಾಂತರವೇ ಈತನ ಫುಲ್ ಟೈಂ ಬ್ಯೂಸಿನೆಸ್ ನಡೆಯುತ್ತಿತ್ತು. ಹೌದು, ಲೊಕ್ಯಾಂಟೋ ಆಪ್ ಮುಖಾಂತರ ಹುಡುಗಿಯರನ್ನ ವೇಶ್ಯಾವಾಟಿಕೆಗೆ ಪ್ರಚೋದನೆ ನೀಡುತ್ತಿದ್ದ ಆರೋಪಿಯು, ಸುದ್ಗುಂಟೆಪಾಳ್ಯದಲ್ಲಿ ಬಂಧನವಾಗಿ ಜೈಲಿನಲ್ಲಿದ್ದಾನೆ. ಹೊರರಾಜ್ಯದಿಂದ ಕೆಲಸ ಅರಸಿ ಬರುವ ಹುಡುಗೀಯರನ್ನೇ ಈತ ಟಾರ್ಗೆ್ಟ್ ಮಾಡುತ್ತಿದ್ದ. ಬಾಡಿಗೆ ಮನೆ ಮಾಡಿಸಿ ಹುಡುಗೀರನ್ನ ಇರಿಸುತ್ತಿದ್ದ. ಜೈಲಿನಲ್ಲಿದ್ದುಕೊಂಡೇ ವಾಟ್ಸಪ್ ಕಾಲ್ ಮೂಲಕ ಗಿರಾಕಿಗಳನ್ನ ಸಂಪರ್ಕಿಸುತ್ತಿದ್ದ. ನಂತರ ಹುಡುಗೀಯರ ಲೊಕೇಷನ್ ಕಳಿಸಿ ಗೂಗಲ್ ಪೇ ಮಾಡಿಸಿಕೊಳ್ತಿದ್ದ. ಹುಳಿಮಾವು ಬಳಿ ಇರುವ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ. ಮಂಜುನಾಥ್@ ಸಂಜು ಎಂಬಾತನಿಂದ ಕೃತ್ಯ ನಡೆದಿದೆ. ಸದ್ಯ ಜೈಲಿನಲ್ಲಿಯೇ ಮಂಜುನಾಥ್ @ಸಂಜು ಇದ್ದು, ಸುದ್ಗುಂಟೆಪಾಳ್ಯದಲ್ಲಿ ಕೂಡ ಲೊಕ್ಯಾಂಟೋ ಆ್ಯಪ್ ಮೂಲಕ ವೇಶ್ಯಾವಾಟಿಕೆ ಹಿನ್ನಲೆ ಸಿಕ್ಕಿಬಿದ್ದಿದ್ದ. ಸದ್ಯ ಜೈಲಿನಲ್ಲಿದ್ದುಕೊಂಡು ಹುಳಿಮಾವು ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕಯನ್ನ ಮೇಂಟೇನ್ ಮಾಡ್ತಿದ್ದ. ಅರುಣ್@ಹೊಟ್ಟೆ , ರಾಜೇಶ್@ರಾಜು ,ರಾಘವೇಂದ್ರ ಹಾಗು ದರ್ಶನ್…
ಮೈಸೂರು: ರಾಜ್ಯ ದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಬರ ಅಧ್ಯಯನ ನಡೆಸುತ್ತಿದ್ದೇವೆ. ಈ ನಡುವೆ ಜನಪರ ಹೋರಾಟವೂ ಆರಂಭವಾಗಿದೆ. ಅಧಿವೇಶನದ ವೇಳೆಯೂ ಈ ಸಂಬಂಧ ಹೋರಾಟ ನಡೆಯಲಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ರೈತರ ಕಷ್ಟ ಆಲಿಸದಿದ್ದರೆ ಬೆಳಗಾವಿ ಅಧಿವೇಶನಕ್ಕೆ ಜನಪ್ರತಿನಿಧಿಗಳು ಸುವರ್ಣಸೌಧಕ್ಕೆ ಹೋಗಲೂ ಬಿಡುವುದಿಲ್ಲ ಎಂದು ಎಚ್ಚರಿಸಿದ ಅವರು, ರಾಜ್ಯ ದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಬರ ಅಧ್ಯಯನ ನಡೆಸುತ್ತಿದ್ದೇವೆ.ಈ ನಡುವೆ ಜನಪರ ಹೋರಾಟವೂ ಆರಂಭವಾಗಿದೆ. ಅಧಿವೇಶನದ ವೇಳೆಯೂ ಈ ಸಂಬಂಧ ಹೋರಾಟ ನಡೆಯಲಿದೆ. https://ainlivenews.com/b-y-vijayendra-met-former-prime-minister-hd-deve-gowda/ ಬರ ಪರಿಹಾರಕ್ಕೆ 300 ಕೋಟಿ ರು.ಕೊಡಲಾಗಿದೆ. ಈ ಹಣ ಯಾವುದಕ್ಕೆ ಬಳಕೆ ಆಗಿದೆ? ಒಂದು ಬೋರ್‌ವೆಲ್ ಕೊರೆ ದಿಲ್ಲ. ಕುಡಿಯುವ ನೀರು ಸಮಸ್ಯೆಯೂ ಬಗೆಹರಿದಿಲ್ಲ. ರಸ್ತೆ ಗುಂಡಿಮುಚ್ಚಿಲ್ಲ. ಅಂದ ಮೇಲೆ ಈ ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂದು ಅವರು ಪ್ರಶ್ನಿಸಿದರು.
ಬೆಂಗಳೂರು:- ಕಲಾಸಿಪಾಳ್ಯದ ಸುಧಾಹರನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್ ಕುಮಾರ್ ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ವಿಚಾರಣೆ ವೇಳೆ ಆರೋಪಿ ವಿಜಯ್ ಕುಮಾರ್ ಅಸಲಿ ಸತ್ಯ ಬಾಯ್ಬಿಟ್ಟಿದ್ದಾರೆ. ಪತ್ನಿಯ ಜತೆ ಅಕ್ರಮ ಸಂಬಂಧ ಇಟ್ಟುಕೊಂಡ ಹಾಗೂ ಆಕೆಗೆ ಬೇರೊಬ್ಬನ ಜತೆ ಮದುವೆ ಮಾಡಿಸಿದ್ದರಿಂದ ಆಕ್ರೋಶಗೊಂಡ ಆರೋಪಿ, ಸುಧಾಹರನ್ ಎಂಬಾತನನ್ನು ಹತ್ಯೆ ಮಾಡಿದ್ದ. ನಂತರ ಸುಟ್ಟು ಹಾಕಿ ಪರಾರಿಯಾಗಿದ್ದ. ವಿಜಯ್ ಕುಮಾರ್ ಎನ್ನುವವನೇ ಆರೋಪಿ. ವಿಚಾರಣೆ ವೇಳೆ ಅಸಲಿ ಸತ್ಯ ಬಾಯ್ಬಿಟ್ಟಿದ್ದಾನೆ. ಸುಧಾಹರನ್ ಅಲಿಯಾಸ್ ಕುಳ್ಳ ಎನ್ನುವವನನ್ನು ಈತ ಮರ್ಡರ್ ಮಾಡಿದ್ದಾನೆ. ಸುಧಾಹರನ್ ಮತ್ತು ವಿಜಯ್ ಕುಮಾರ್ ಸ್ನೇಹಿತರಾಗಿದ್ದು, ಇಬ್ಬರೂ ಕಲಾಸಿಪಾಳ್ಯದ ತರಕಾರಿ ಮಾರ್ಕೆಟ್‌ನಲ್ಲಿ ಹಮಾಲಿ ಕೆಲಸ ಮಾಡುತ್ತಿದ್ದರು. ವಿಜಯ್ ಕುಮಾರ್ ಮದ್ಯ ಮತ್ತು ಸಿಗರೇಟ್ ಸೇದುವ ಚಟಕ್ಕೆ ಬಿದ್ದಿದ್ದ. ಇದರಿಂದ 2015ರಲ್ಲಿ ವಿಜಯ್‌ನನ್ನು ಆತನ ತಾಯಿ ಮದ್ಯವರ್ಜನ ಕೇಂದ್ರಕ್ಕೆ ಸೇರಿಸಿದ್ದರು. 11 ತಿಂಗಳು ಮದ್ಯವರ್ಜನ ಕೇಂದ್ರದಲ್ಲಿ ಬಂದಿಯಾಗಿದ್ದ ವಿಜಯ್ ಕುಮಾರ್. ಈ ವೇಳೆ ವಿಜಯ್ ಪತ್ನಿ ನಂದಿನಿಗೆ ಸುಧಾಹರನ್ ಬೇರೊಬ್ಬನ ಜತೆಗೆ…