ಕಳೆದ ವಾರದ ವೀಕೆಂಡ್ ಎಪಿಸೋಡ್‌ನ ಎಲಿಮಿನೇಷನ್ ಟೈಮಲ್ಲಿ ವರ್ತೂರ್ ಸಂತೋಷ್, ಸುದೀಪ್ ಅವರಿಗೆ, ಬಿಗ್‌ಬಾಸ್ ಮನೆಯ ಸದಸ್ಯರಿಗೆ, ತಮಗೆ ಓಟ್ ಹಾಕಿದ ಹದಿಮೂರು ಲಕ್ಷಕ್ಕಿಂತ ಅಧಿಕ ಜನರಿಗೆ ಒಂದು ಬಿಗ್ ಶಾಕ್ ನೀಡಿದ್ದರು. ‘ನನಗೆ ಹೊರಗೆ ನಡೆದ ಘಟನೆಯನ್ನು ಮರೆತು ಆಡಬೇಕು ಎಂದು ಇಲ್ಲಿಗೆ ಬಂದೆ. ಆದರೆ ನನಗೆ ಅದರಿಂದ ಹೊರಗೆ ಬರಲು ಸಾಧ್ಯಾಗುತ್ತಿಲ್ಲ. ಹಾಗಾಗಿ ನಾನು ಷೋದಿಂದ ಹೊರಗೆ ಹೋಗಲು ಬಯಸುತ್ತೇನೆ’ ಎಂದು ಹೇಳಿದರು. ಇದರಿಂದ ಎಲ್ಲರಿಗೂ ಶಾಕ್ ಆಯಿತು. ಕಿಚ್ಚಕೂಡ, ‘ನೀವು ಜನರ ಪ್ರೀತಿಯ ವಿರುದ್ಧ ಹೋಗ್ತಿದ್ದೀರಾ’ ಎಚ್ಚರಿಸಿದರು. ಕೊನೆಯಲ್ಲಿ, ‘ಮನೆಯೊಳಗೆ ಇರ್ತೀರೋ ಬಿಡ್ತೀರೋ ನಿಮಗೆ ಬಿಟ್ಟಿದ್ದು. ಆದರೆ ನನಗಂತೂ ಡಿಸಪಾಯಿಂಟ್ ಆಗಿದೆ’ ಎಂದು ಹೇಳಿ ಬೇಸರದಿಂದಲೇ ವೇದಿಕೆ ಬಿಟ್ಟು ಹೊರನಡೆದರು. ಇದೀಗ ವರ್ತೂರು ಸಂತೋಷ್ ಅವರನ್ನು ಮನೆಯೊಳಗೆ ಉಳಿದುಕೊಳ್ಳುವಂತೆ ಮನವೊಲಿಸಲು ಇಡೀ ಮನೆಯ ಸದಸ್ಯರೆಲ್ಲರೂ ಪ್ರಯತ್ನಿಸುತ್ತಿದ್ದಾರೆ. ಇದೇ ಹೊತ್ತಿನಲ್ಲಿ ಬಿಗ್‌ಬಾಸ್ ಮನೆಗೆ ಮತ್ತೊಬ್ಬರು ಗೆಸ್ಟ್ ಎಂಟ್ರಿ ಕೊಟ್ಟಿದ್ದಾರೆ! ಬಿಗ್‌ಬಾಸ್ ಮನೆಯ ಬಾಗಿಲು ತೆರೆಯುತ್ತಿದ್ದ ಹಾಗೆಯೇ ಜನಪ್ರಿಯ ಧಾರಾವಾಹಿ…
Author: AIN Author
ದಾವಣಗೆರೆ: ನಾನು ನಿದ್ದೆ ಬಿಟ್ಟು ಲೋಕಸಭೆಯ 28 ಸೀಟ್ ಗೆಲ್ಲಿಸಲು ರಾಜ್ಯಾದ್ಯಂತ ಓಡಾಡುವೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಜೊತೆ ಎಲೆಮರೆ ಕಾಯಿಯಾಗಿ ಲೋಕಸಭೆ ಚುನಾವಣೆಯಲ್ಲಿ ಕೆಲಸ ಮಾಡುವೆ ಎಂದು ದಾವಣಗೆರೆಯಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ (M.P.Renukacharya) ಹೇಳಿದರು. ಬಿಎಸ್‌ವೈ ಪುತ್ರ ವಿಜಯೇಂದ್ರ (Vijayendra) ಬಿಜೆಪಿ ರಾಜ್ಯಾಧ್ಯಕ್ಷ ಆದಾಗಿನಿಂದ ರೇಣುಕಾಚಾರ್ಯ ಮತ್ತೆ ಅಕ್ಟಿವ್ ಆಗಿದ್ದಾರೆ. https://ainlivenews.com/ancient-jewelry-treasure-found-in-temple-premises/ ಬಿಜೆಪಿ ಲೋಕಾಸಭಾ ಕ್ಷೇತ್ರದ ಬಿಜೆಪಿ (BJP) ಟಿಕೆಟ್ ಆಕಾಂಕ್ಷಿಯಾಗಿರುವ ಇವರು ಜಿಲ್ಲೆಯ ಹಿರಿಯ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಮಾಜಿ ಸಚಿವ ರೇಣುಕಾಚಾರ್ಯ, ಬಿಜೆಪಿ ಹಿರಿಯ ನಾಯಕ ಎಸ್.ಎ.ರವೀಂದ್ರನಾಥ್ ಅವರನ್ನು ಕುಟುಂಬಸಮೇತ ಭೇಟಿಯಾಗಿ ದೀಪಾವಳಿ ಹಬ್ಬದ ಶುಭಾಶಯ ತಿಳಿಸಿ ಕೆಲ ಕಾಲ ಚರ್ಚೆ ಮಾಡಿದ್ದಾರೆ.
ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿಗೆ ಎಲ್ಲೆಲ್ಲೂ ಸಂಭ್ರಮ.ಹೀಗಾಗಿ ಎಲ್ಲಡೆ ಬೆಳಕಿನ ಹಬ್ಬವನ್ನ ಈ ಬಾರಿ ಭರ್ಜರಿಯಾಗಿ ಹಬ್ಬ ಮಾಡಿರೋ ಜನ, ಇವತ್ತು ಖರೀದಿಗಾಗಿ ಮಾರುಕಟ್ಟೆಗೆ ಮುಗಿಬಿದ್ದಿದ್ದರು. ಭರ್ಜರಿ ಶಾಪಿಂಗ್ ಮಾಡೋ ಮೂಲಕ ಬೆಳಕಿನ ಹಬ್ಬವನ್ನ ಆಚರಿಸಿ ಸಂಭ್ರಮಿಸಿದ್ದಾರೆ.ಹಾಗಾದ್ರೆ ಬೆಳಗ್ಗೆಯಿಂದ ನಗರದ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಹೇಗಿತ್ತು ಬನ್ನಿ ನೋಡಿಕೊಂಡು ಬರೋಣ https://ainlivenews.com/bjp-state-president-by-vijayendra-met-former-cm-bommai/ ಹೂವು, ಖರೀದಿಗೆ ಮುಗಿಬಿದ್ದಿರುವ ಗ್ರಾಹಕರು, ಬಾಳೆಕಂದು, ಬೂದುಕುಂಬಳಕಾಯಿ ಮುಂದೆಯೂ ಜನರ ದಂಡೇ ಕಾಣ್ತಿತ್ತು. ಹಣ್ಣುಗಳ ಮುಂದೆ ಜನರ ಗುಂಪೇ ನಿಂತಿತ್ತು. ಕಣ್ಣು ಹಾಯಿಸಿದಷ್ಟು ಜನವೋ ಜನ..ಇದು ಇಂದು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಕೆ ಆರ್ ಮಾರುಕಟ್ಟೆ ಯಲ್ಲಿ ಜನಜಾತ್ರೆಯೇ ಕಂಡು ಬಂತು.. ಹೌದು..ಇಂದು ನಾಡಿನಲ್ಲಡೆ ದೀಪಾವಳಿ ಹಬ್ಬದ ಸಂಭ್ರಮ,ಎಲ್ಲಡೆ ಬೆಳಕಿನ ಹಬ್ಬವನ್ನ ಸಂಭ್ರಮದಿಂದ ಜನ ಆಚರಣೆ ಮಾಡ್ತಿದ್ದಾರೆ.ಇಂದು ನರಕ ಚುತುರ್ಥಿ ನಾಳೆ ಧನಲಕ್ಷ್ಮಿ ಪೂಜೆ ಹಿನ್ನಲೆ ನಗರದ ಮಾರುಕಟ್ಟೆಗಳಿಗೆ ಜನ ಬೆಳಗ್ಗೆ 5 ಗಂಟೆಯಿಂದ್ಲೇ ದಾಂಗುಡಿ ಇಟ್ಟು, ಹಬ್ಬಕ್ಕೆ ಬೇಕಾದ ಹೂ, ಹಣ್ಣು ಬಾಳೆಕಂದು, ಬೂದುಕುಂಬಳಕಾಯಿ ಖರೀದಿಗೆ ಜನ…
ಬೆಂಗಳೂರು: ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕಿದ್ದಕ್ಕೆ ಸಂಭ್ರಮ ಮುಗಿಲು ಮುಟ್ಟಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿ ಆಶೀರ್ವಾದ ಕೂಡ ಪಡೆಯುತ್ತಿದ್ದಾರೆ. ಇಂದು ಮಾಜಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ RT ನಗರದ ಬೊಮ್ಮಾಯಿ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಹಾಗೆ ಪಕ್ಷದ ಸಾಧಕ ಬಾಧಕಗಳ ಬಗ್ಗೆಯೂ ಚರ್ಚೆ ನಡೆಸಿದರು.
ಬೆಂಗಳೂರು: ನಗರದಲ್ಲಿ ಕಿಡಿಗೇಡಿಗಳಿಂದ ಸುಬ್ರಹ್ಮಣ್ಯ ಸ್ವಾಮಿ ದೇವರ ವಿಗ್ರಹ ಭಗ್ನಗೊಳಿಸಿರುವ ಘಟನೆಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಬಲಮುರಿ ದೇವಸ್ಥಾನದಲ್ಲಿ ನಡೆದಿದೆ. ಬಲಮುರಿ ದೇವಸ್ಥಾನದ ಕಟ್ಟಡದಲ್ಲಿರೋ ಸುಬ್ರಹ್ಮಣ್ಯ ಸ್ವಾಮಿ ವಿಗ್ರಹವನ್ನು ಭಗ್ನಗೊಲೀಸಿರುವ ಕಿಡಿಗೇಡಿಗಳು ಗೋಪುರದ ಮೇಲ್ಭಾಗದಲ್ಲಿರೋ.ಸುಬ್ರಹ್ಮಣ್ಯ ಸ್ವಾಮಿ ಹಿಡಿದಿರೋ ಆಯುಧವನ್ನ ಭಗ್ನಗೊಳಿಸಿರೋ ದುಷ್ಕರ್ಮಿಗಳು ಕಳೆದ 8 ನೇ ತಾರೀಖು ವಿಗ್ರಹ ಭಗ್ನಗೊಳಿಸಿದ್ದು ತಡವಾಗಿ ಬೆಳಕಿಗೆ ಬಂದಿದೆ.ಆದ್ರೆ ದೇವಸ್ಥಾನದ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ದೂರು ನೀಡಲಾಗಿದೆ. ಕಳದೆ 11 ನೇ ತಾರೀಖು ತಡವಾಗಿ ದೂರು ದಾಖಲಿಸಿರುವ ದೇವಸ್ಥಾನದ ಕಾರ್ಯದರ್ಶಿ ಮುನಿರೆಡ್ಡಿ ಬೊಮ್ಮನಹಳ್ಳಿ ಠಾಣೆಗೆ ದೂರು ನೀಡಿರುವ ಮುನಿರೆಡ್ಡಿ ದೂರಿನ ಅನ್ವಯ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸ್ತಿರೋ ಪೊಲೀಸರು
ಮುಂಬೈ: ಕೂಡಿ ಬಾಳುವ ಸಂಸ್ಕೃತಿ ನಮಗೆ ಬಂದಿದ್ದೇ ಹಿಂದೂ ಧರ್ಮದಿಂದ. ಭಾರತದಲ್ಲಿ ಹಿಂದೂ ಸಂಸ್ಕೃತಿ ಮತ್ತು ಸಂಪ್ರದಾಯದಿಂದಾಗಿ ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿದೆ ಎಂದು ಹಿರಿಯ ಕವಿ ಮತ್ತು ಗೀತರಚನೆಕಾರ ಜಾವೇದ್ ಅಖ್ತರ್ (Javed Akhtar) ಅವರು ಹಿಂದೂ ಸಮುದಾಯವನ್ನು ಕೊಂಡಾಡಿದರು. ಮುಂಬೈನಲ್ಲಿ (Mumbai) ರಾಜ್ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಆಯೋಜಿಸಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ವೇಳೆ ಸಮಾಜದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಹಿಂದೂಗಳು ಉದಾರ ಮತ್ತು ಸ್ವಚ್ಛ ಮನಸ್ಸಿನವರು ಎಂದು ಹೇಳಿದರು. ಕೆಲವರು ಯಾವಾಗಲೂ ಅಸಹಿಷ್ಣುತೆಯನ್ನು ಹೊಂದಿದ್ದಾರೆ. ಹಿಂದೂಗಳು ಹಾಗಲ್ಲ, ಅವರು ಈ ಶ್ರೇಷ್ಠ ಗುಣವನ್ನು ಹೊಂದಿದ್ದಾರೆ. ಹೀಗಾಗಿ ಅದನ್ನು ಕಳೆದುಕೊಳ್ಳಬೇಡಿ, ಕಳೆದುಕೊಂಡರೆ ನೀವು ಇತರರಂತೆ ಆಗುತ್ತೀರಿ ಎಂದರು. https://ainlivenews.com/did-sending-a-message-to-a-girl-lead-to-murder-what-does-igp-ravikante-gowda-say/ ಇಡೀ ಜಗತ್ತಿನಲ್ಲಿ ಇಂದು ಅಸಹಿಷ್ಣುತೆ ಹೆಚ್ಚಾಗಿದೆ. ಆದರೆ ಭಾರತದಲ್ಲಿ ಮಾತ್ರ ಎಲ್ಲಾ ಧರ್ಮ, ಜಾತಿಯ ಜನರು ಒಂದಾಗಿ ಬದುಕುತ್ತಿದ್ದಾರೆ. ಈ ಕೂಡಿಬಾಳುವ ಸಂಸ್ಕೃತಿ ನಮಗೆ ಬಂದಿದ್ದೇ ಹಿಂದೂ ಧರ್ಮದಿಂದ. ಹಿಂದೂ ಎನ್ನುವುದು ಕೇವಲ ಒಂದು…
ದೊಡ್ಡಬಳ್ಳಾಪುರ : ಪೋಟೋ ಶೂಟ್ ಮಾಡುವ ವೇಳೆ ಎರಡು ಗುಂಪುಗಳ ನಡುವೆ ಜಗಳವಾಗಿದ್ದು, ಗಲಾಟೆಯ ಅವೇಶದಲ್ಲಿ ಯುವಕನ ಎದೆಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಲಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ರಾಮೇಶ್ವದ ಬಳಿ ಇರುವ ಡಾಬಾದ ಮುಂಭಾಗದಲ್ಲಿ ಇಂದು ಸಂಜೆ ಘಟನೆ ನಡೆದಿದ್ದು, ಘಟನೆಯಲ್ಲಿ ದೊಡ್ಡಬಳ್ಳಾಪುರ ನರಗದ ಕಛೇರಿಪಾಳ್ಯದ ನಿವಾಸಿ ಸೂರ್ಯ (22) ಕೊಲೆಯಾಗಿದ್ದಾನೆ, ಮೃತ ಯುವಕ ಐಟಿಐ ವಿದ್ಯಾರ್ಥಿಯಾಗಿದ್ದು, ದೀಪಾವಳಿಯ ರಜೆ ಹಿನ್ನಲೆ ಪೋಟೋ ಶೂಟ್ ಗಾಗಿ ಹೋಗಿದ್ದ ವೇಳೆ ಘಟನೆ ನಡೆದಿದೆ. https://ainlivenews.com/ancient-jewelry-treasure-found-in-temple-premises/ ಕೊಲೆಯಾದ ಯುವಕ ಸೂರ್ಯ ರಿಲ್ಸ್ ಗಳನ್ನ ಮಾಡುತ್ತಿದ್ದ, ರಿಲ್ಸ್ ಗಾಗಿ ವಿಡಿಯೋ ಮಾಡಲು ಮತ್ತು ಪೋಟೋ ಶೂಟ್ ಆತ ಇಂದು ಸ್ನೇಹಿತರ ಜೊತೆ ರಾಮೇಶ್ವರದ ಬಳಿಯ ಡಾಬಾಕ್ಕೆ ಹೋಗಿದ್ದ, ಡಾಬಾಗ ಮುಂಬಾಗದ ಅಲಂಕಾರಿಕ ಸೀನರಿ ಮುಂದೆ ಪೋಟೋ ಸೂಟ್ ಮಾಡಲಾಗುತ್ತಿತ್ತು, ಈ ವೇಳೆ ಯುವಕರ ಮತ್ತೊಂದು ಗುಂಪು ಪೋಟೋ ತೆಗೆಯುವಂತೆ ಕಿರಿಕ್ ತೆಗೆದಿದೆ, ಈ ಗಲಾಟೆಯಲ್ಲಿ ಅಪರಿಚಿತ ಯುವಕರ ಗ್ಯಾಂಗ್ ನಲ್ಲಿದ್ದ ಯುವಕನೊಬ್ಬ ಸೂರ್ಯನ ಎದೆಗೆ ಚಾಕುವಿನಿಂದ…
ಟೆಲ್‍ಅವಿವ್: ಗಾಜಾ ಆಸ್ಪತ್ರೆಯಲ್ಲಿ (Gaza Hospital) ಸರಿಸುಮಾರು 1,000 ಜನರನ್ನು ಮತ್ತು ರೋಗಿಗಳನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡ ಹಮಾಸ್ ನ ಹಿರಿಯ ಕಮಾಂಡರ್‍ನನ್ನು ವೈಮಾನಿಕ ದಾಳಿಯಲ್ಲಿ ಹತ್ಯೆ ಮಾಡಿರುವುದಾಗಿ ಇಸ್ರೇಲ್ ಮಿಲಿಟರಿ (Israel Military) ಹೇಳಿದೆ. ಈ ಸಂಬಂಧ ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಎನ್ನ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದೆ. ಅಹ್ಮದ್ ಸಿಯಾಮ್ ( Ahmed Siam) ಎಂಬಾತ ಹಮಾಸ್ ನ ನಾಸೆರ್ ರಾಡ್ವಾನ್ ಕಂಪನಿಯಲ್ಲಿ ಕಮಾಂಡರ್ ಆಗಿದ್ದ. ಈತ ದಾಳಿಗಳಲ್ಲಿ ನಾಗರಿಕರನ್ನು ಮಾನವ ಗುರಾಣಿಗಳಾಗಿ ಬಳಸಿಕೊಂಡಿದ್ದಾನೆ ಎಂದು ಪೋಸ್ಟ್ ಮಾಡಿದೆ. https://ainlivenews.com/did-sending-a-message-to-a-girl-lead-to-murder-what-does-igp-ravikante-gowda-say/ ಕಳೆದ ತಿಂಗಳು ಗಾಜಾದಲ್ಲಿನ ಹಮಾಸ್ ವಿರುದ್ಧ ತನ್ನ ನೆಲದ ಕಾರ್ಯಾಚರಣೆಯನ್ನು ವಿಸ್ತರಿಸಿದ ನಂತರ, ಪ್ಯಾಲಿಸ್ತೀನಿ ಗುಂಪು ಯಹೂದಿ ರಾಷ್ಟ್ರದ ಮೇಲೆ ದೊಡ್ಡ ದಾಳಿಯನ್ನು ಪ್ರಾರಂಭಿಸಿದಾಗ ಅಕ್ಟೋಬರ್ 7 ರ ದಾಳಿಯಲ್ಲಿ ಭಾಗಿಯಾಗಿದ್ದ ಹಲವಾರು ಹಮಾಸ್ ಕಾರ್ಯಕರ್ತರನ್ನು ಇಸ್ರೇಲ್ ಪಡೆಗಳು ಕೊಂದಿವೆ. ಈ ಯುದ್ಧದಲ್ಲಿ ಇಸ್ರೇಲ್‍ನಲ್ಲಿ ಸುಮಾರು 1,200 ಜನರನ್ನು ಕೊಂದರೆ, ಗಾಜಾದಲ್ಲಿ 10,000 ಕ್ಕೂ ಹೆಚ್ಚು ಜನರು ಪ್ರಾಣ…
ಬೆಂಗಳೂರು: ಉದ್ಯಮಿಗೆ 5 ಕೋಟಿ ವಂಚಿಸಿ ಜೈಲು ಪಾಲಾಗಿರುವ ವಂಚಕಿ ಚೈತ್ರಾ ಮೇಲೆ ಜೈಲಿನಲ್ಲಿನ ಮಹಿಳಾ ಖೈದಿಗಳು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. https://ainlivenews.com/26-people-were-injured-in-a-single-day-firecracker-explosion-in-bangalore-yesterday/ ವಂಚನೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದಲ್ಲಿ ದಿನಕಳೆಯುತ್ತಿರುವ ಚೈತ್ರ ಮೇಲೆ ಆಫ್ರಿಕನ್ ಮಹಿಳಾ ಖೈದಿಗಳು ಹಲ್ಲೆ ಮಾಡಿರೋ ಮಾಹಿತಿ ಲಭ್ಯವಾಗಿದ್ದು ರಾಷ್ಟ್ರಗೀತೆ ವಿಚಾರದಲ್ಲಿ ಜಗಳ ನಡೆದಿದೆ ಜಗಳ ಹಲ್ಲೆಗೆ ತಿರುಗಿದೆ ಎಂದು ಹೇಳಲಾಗುತ್ತಿದೆ. ಚೈತ್ರಾ ಹಾಗೂ ಮೂವರು ಸ್ಥಳೀಯ ಖೈದಿಗಳಿ ಮೇಲೆ ಆಫ್ರಿಕನ್ ಮಹಿಳಾ ಕೈದಿಗಳು ಹಲ್ಲೆ ಮಾಡಿರೋ ಮಾಹಿತಿ ದೊರೆತಿದೆ. ಮಹಿಳಾ ವಿಚಾರಣಾಧೀನ ಖೈದಿಗಳ ಬ್ಯಾರಕ್ನಲ್ಲಿ ಹಲ್ಲೆ ಮಾಡಿದ್ದಾರೆ. ಈ ಕುರಿತು ಚೈತ್ರಾ ಪರಪ್ಪನ ಅಗ್ರಹಾರ ಪೊಲೀಸರಿಗೆ ದೂರು ನೀಡಿದ್ದಾರೆ.
ದಾವಣಗೆರೆ: ಕೇಂದ್ರದ ಒಬಿಸಿ ಪಟ್ಟಿಗೆ ಲಿಂಗಾಯತ ಸಮುದಾಯವನ್ನು ಸೇರ್ಪಡೆ ಮಾಡಬೇಕು ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ ಒಳ್ಳೆಯದಾಗಲೆಂದು ಹೋರಾಟ ಮಾಡ್ತಿದ್ದಾರೆ. ಪಂಚಮಸಾಲಿ ಹೋರಾಟಕ್ಕೆ ಬೆಂಬಲ ನೀಡುತ್ತೇವೆ. https://ainlivenews.com/did-sending-a-message-to-a-girl-lead-to-murder-what-does-igp-ravikante-gowda-say/ ಕೇಂದ್ರದ ಒಬಿಸಿ ಪಟ್ಟಿಗೆ ಲಿಂಗಾಯತ ಸಮುದಾಯವನ್ನು ಸೇರ್ಪಡೆ ಮಾಡಬೇಕೆಂದು ಒತ್ತಾಯಿಸಲಿದ್ದೇವೆ ಎಂದು ಹೇಳಿದ್ದಾರೆ. ಡಿಸೆಂಬರ್ 23, 24 ರಂದು ದಾವಣಗೆರೆಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಎರಡು ಲಕ್ಷ ಜನರು ಸೇರಲಿದ್ದಾರೆ. ವೀರಶೈವ ಲಿಂಗಾಯತ ಸಮಾವೇಶದಲ್ಲಿ ಚರ್ಚೆ ಮಾಡುತ್ತೇವೆ ಎಂದು ಶಾಮನೂರು ತಿಳಿಸಿದ್ದಾರೆ.