ಭಾರತ ಹಾಗೂ ನೆದರ್ಲೆಂಡ್ಸ್ ನಡುವೆ ವಿಶ್ವಕಪ್-2023 ಟೂರ್ನಿಯ ಅಂತಿಮ ಪಂದ್ಯ ಇಂದು ನಡೆಯಲಿದ್ದು, ಹೈವೋಲ್ಟೇಜ್ ಕದನಕ್ಕೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜಾಗಿದೆ. ಶನಿವಾರದಿಂದಲೇ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದು, ಸಾಕಷ್ಟು ವ್ಯವಸ್ಥೆ ಮಾಡಿಕೊಂಡಿದ್ದಾರೆ. ಪಂದ್ಯ ನೋಡಲು ಬರುವ ಸಾರ್ವಜನಿಕರು ತಮ್ಮ ವಾಹನಗಳ ಪಾರ್ಕಿಂಗ್ ಎಲ್ಲಿ ಮಾಡಬೇಕು. ಸ್ಟೇಡಿಯಂ ಸುತ್ತಮುತ್ತ ಏನೆಲ್ಲಾ ನಿಷೇಧಿಸಲಾಗಿದೆ. ಈ ಕುರಿತು ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ. 2023ರ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗಳು ಅಂತಿಮ ಘಟ್ಟ ತಲುಪಿವೆ. ಭಾನುವಾರ ಬೆಂಗಳೂರಿನಲ್ಲಿ ವಿಶ್ವಕಪ್ ಟೂರ್ನಿಯ ಕೊನೆ ಲೀಗ್ ಪಂದ್ಯ ನಡೆಯಲಿದ್ದು, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತ ಮತ್ತು ನೆದರ್ಲೆಂಡ್ಸ್ ತಂಡಗಳು ಸೆಣಸಾಡಲಿವೆ. ನಗರದಲ್ಲಿ ನಾಳೆ ನಡೆಯಲಿರೋ ಪಂದ್ಯಕ್ಕೆ ಸ್ಟೇಡಿಯಂ ಸುತ್ತಮುತ್ತ ಪೊಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಿದ್ದಾರೆ. ಗೂಡ್ಸ್ ವಾಹನಗಳ ಸಂಚಾರಕ್ಕೆ ನಿರ್ಬಂಧ ಚಿನ್ನಸ್ವಾಮಿ ಸ್ಟೇಡಿಯಂನ ಒಳ ಮತ್ತು ಹೊರ ಭಾಗದಲ್ಲಿ ಸುಮಾರು ಒಂದು ಸಾವಿರ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಹೆಚ್ಚುವರಿ ಪೊಲೀಸ್ ಆಯುಕ್ತರ ಮೇಲುಸ್ತುವಾರಿಯಲ್ಲಿ ನಾಲ್ವರು ಡಿಸಿಪಿಗಳು ಭದ್ರತೆಯ ನೇತೃತ್ವ ವಹಿಸಿದ್ದಾರೆ. ಸ್ಟೇಡಿಯಂ ಸುತ್ತಲಿನ ಕಬ್ಬನ್…
Author: AIN Author
ಬೆಂಗಳೂರು:- ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ನವೆಂಬರ್ 16ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉಡುಪಿ, ಕೋಟ, ಪಣಂಬೂರು, ಉಪ್ಪಿನಂಗಡಿ, ಕೊಟ್ಟಿಗೆಹಾರದಲ್ಲಿ ಮಳೆಯಾಗಿದೆ. ವಿಜಯಪುರದಲ್ಲಿ 18.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿಯ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ತುಂತುರು ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು: ಕಾರು ಅಪಘಾತ ಪ್ರಕರಣದಲ್ಲಿ ನಟ ನಾಗಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. https://ainlivenews.com/a-young-man-died-after-falling-from-a-multi-storied-building/ ಪ್ರಕರಣಕ್ಕೆ ಸಂಬಂಧಿಸಿ ಸದ್ಯ 60 ಸಾಕ್ಷಿಗಳನ್ನು ಪೊಲೀಸರು ಕಲೆಹಾಕಿದ್ದಾರೆ. ಇದರಿಂದ ನಾಗಭೂಷಣ್ ಅವರಿಗೆ ಸಂಕಷ್ಟ ಮತ್ತಷ್ಟು ಹೆಚ್ಚಲಿದೆ. ಮುಂದಿನ ದಿನಗಳಲ್ಲಿ ಪ್ರಕರಣ ಯಾವ ರೀತಿಯಲ್ಲಿ ಸಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಅಕ್ಟೋಬರ್ 30ರಂದು ಬೆಂಗಳೂರಿನ ಕೋಣನ ಕುಂಟೆ ಸಮೀಪ ಅಪಘಾತ ಸಂಭವಿಸಿತ್ತು. ನಾಗಭೂಷಣ್ ಓಡಿಸುತ್ತಿದ್ದ ಕಾರು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಳಿಕ ವಿದ್ಯುತ್ ಕಂಬಕ್ಕೆ ಗುದ್ದಿತ್ತು. ಈ ವೇಳೆ ಪ್ರೇಮಾ ಎಂಬುವವರು ಮೃತಪಟ್ಟರೆ, ಅವರ ಪತಿ ಕೃಷ್ಣ ಅವರಿಗೆ ಗಂಭೀರ ಗಾಯವಾಗಿತ್ತು. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಚೇತರಿಕೆ ಕಂಡಿದ್ದು, ಅವರು ಹೇಳಿಕೆ ದಾಖಲು ಮಾಡಿದ್ದಾರೆ.
ದಾವಣಗೆರೆ: ಮುಂಬರುವ 2024ರ ಲೋಕಸಭೆ ಚುನಾವಣೆಗೆ ನಾವು ಕೂಡ ಭರ್ಜರಿಯಾಗಿ ತಯಾರಿಯನ್ನ ನಡೆಸಿದ್ದು, ರಾಜ್ಯದಲ್ಲಿ ಈ ಬಾರಿ ಬಿಜೆಪಿ ಧೂಳಿಪಟವಾಗಲಿದೆ ಎಂದು ಬಿಜೆಪಿ ವಿರುದ್ದ ಸಚಿವ ಈಶ್ವರ್ ಖಂಡ್ರೆ ವಿಶ್ವಾಸವನ್ನ ವ್ಯಕ್ತಪಡಿಸಿದ್ದಾರೆ. ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ದಾವಣಗೆರೆಯಲ್ಲಿ ಟಿಕೆಟ್ ಆಕಾಂಕ್ಷಿಗಳು ಮತ್ತು ಮುಂಚೂಣಿ ಮುಖಂಡರ ಸಭೆಯನ್ನ ಕರೆಯಲಾಗಿತ್ತು. ಸಭೆಗೆ ಆಗಮಿಸಿದ್ದ ಸಚಿವ ಈಶ್ವರ ಖಂಡ್ರೆ ಬಿಜೆಪಿ ವಿರುದ್ಧ ಹರಿಹಾಯ್ದರು. ಈ ಬಾರಿ ಮಳೆಯ ಕೊರತೆಯಿಂದ ಇಡೀ ರಾಜ್ಯವೇ ಬರದಿಂದ ತತ್ತರಿಸಿ ಹೋಗಿದೆ. ಮುಂಗಾರು ಸಂಪೂರ್ಣ ನಷ್ಟವಾಗಿದ್ದು, ಹಿಂಗಾರು ನಷ್ಟವಾಗುವ ಲಕ್ಷಣಗಳಿವೆ. ಬರದಿಂದ ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಬರ ಪರಿಹಾರದ ಬಗ್ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರದ ಪ್ರಸ್ತಾವನೆ ಕಳಿಸಿದ್ದೇವೆ. ಆದರೆ, ಕೇಂದ್ರ ಸರ್ಕಾರ ಈವರೆಗೂ ನಯಾ ಪೈಸೆ ಹಣವನ್ನ ಬಿಡುಗಡೆ ಮಾಡಿಲ್ಲ. ಈ ಮೂಲಕ ಕೇಂದ್ರ ಸರ್ಕಾರ ರಾಜ್ಯದ ಮೇಲೆ ಪ್ರಹಾರದ ಮೇಲೆ ಪ್ರಹಾರ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ಇಂತಹ ಬರ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಘೋರ ಅನ್ಯಾಯ…
ಕೋಲ್ಕತ್ತಾ: ಸಂಘಟಿತ ಬ್ಯಾಟಿಂಗ್, ಬೌಲಿಂಗ್ ನೆರವಿನಿಂದ ಇಂಗ್ಲೆಂಡ್ (England) ತಂಡ ಪಾಕಿಸ್ತಾನದ ವಿರುದ್ಧ 93 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ 2023ರ ವಿಶ್ವಕಪ್ ಆವೃತ್ತಿಗೆ ವಿದಾಯ ಹೇಳಿದರೆ, ಭಾರತದಲ್ಲಿ ವಿಶ್ವಕಪ್ (World Cup 2023) ಗೆದ್ದು ಬರುತ್ತೇವೆ ಎಂದು ಬೀಗಿದ್ದ ಪಾಕ್ ತಂಡ ಹೀನಾಯ ಸೋಲಿನೊಂದಿಗೆ ವಿದಾಯ ಹೇಳಿದೆ. ಕೋಲ್ಕತ್ತಾ ಈಡನ್ ಗಾರ್ಡನ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 337 ರನ್ ಗಳಿಸಿತ್ತು. 338 ರನ್‌ಗಳ ಗುರಿ ಬೆನ್ನತ್ತಿದ್ದ ಪಾಕ್ (Pakistan) ಅಗ್ರಕ್ರಮಾಂಕದ ಬ್ಯಾಟರ್‌ಗಳ ವೈಫಲ್ಯದಿಂದ 43.3 ಓವರ್‌ಗಳಲ್ಲಿ 244 ರನ್‌ಗಳಿಸಿ ಸರ್ವಪತನ ಕಂಡಿತು. 2021ರ ವಿಶ್ವಕಪ್ ಟೂರ್ನಿ ಹಾಗೂ 2023ರ ಏಷ್ಯಾಕಪ್ ಟೂರ್ನಿಯಲ್ಲೂ ಪಾಕ್ ತಂಡ ನಾಕೌಟ್ ಹಂತದಲ್ಲಿ ಸೋತು ನಿರಾಸೆ ಅನುಭವಿಸಿತ್ತು. 2022ರ ಏಷ್ಯಾಕಪ್ ಫೈನಲ್‌ನಲ್ಲಿ ಶ್ರೀಲಂಕಾ ವಿರುದ್ಧ, 2022ರ T20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಫೈನಲ್ ಪಂದ್ಯದಲ್ಲಿ ಸೋತು ತವರಿಗೆ ಮರಳಿತ್ತು.…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು, ದೇಶದ ಜನತೆಗೆ ದೀಪಾವಳಿ ಶುಭಾಶಯ ಕೋರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿಯವರು, “ಎಲ್ಲರಿಗೂ ದೀಪಾವಳಿಯ ಶುಭಾಶಯಗಳು. ಈ ವಿಶೇಷ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಆರೋಗ್ಯವನ್ನು ತರಲಿ ಎಂದು ಹೇಳಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ದೇಶದ ಜನತೆಗೆ ದೀಪಾವಳಿ ಶುಭಾಶಯಗಳನ್ನು ಕೋರಿದ್ದಾರೆ.
ಚಿಕ್ಕಮಕ್ಕಳಿಂದ ಹಿರಿಯ ವಯಸ್ಸಿನವರೆಗೂ ಫೋನ್ ಕ್ರೇಜ್ ಇದ್ದೆ ಇದೆ. ಚಿಕ್ಕಮಕ್ಕಳು ಫೋನ್ ತೋರಿಸಿದಾಗ ಮಾತ್ರ ಅನ್ನ ತಿನ್ನುತ್ತಾರೆ. ಆದರೆ ಎರಡು ವರ್ಷದೊಳಗಿನ ಶೇಕಡಾ 90 ರಷ್ಟು ಮಕ್ಕಳು ಸೆಲ್ ಫೋನ್ ನೋಡುತ್ತಾ ತಿನ್ನುತ್ತಿದ್ದಾರೆ ಎಂದು ಅಧ್ಯಯನವೊಂದು ತೋರಿಸಿದೆ. ಮಕ್ಕಳು ತಮ್ಮ ಹೊಟ್ಟೆ ತುಂಬ ತಿನ್ನುತ್ತಿದ್ದಾರೆ ಎಂದು ನಾವು ಭಾವಿಸಿದ್ದೇವೆ ಆದರೆ ಎಷ್ಟು ಕ್ರಮೇಣ ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. 1) ಸ್ಮಾರ್ಟ್ ಫೋನ್ ಹೆಚ್ಚು ನೋಡಿದರೆ ಮಕ್ಕಳ ಕಣ್ಣುಗಳು ದುರ್ಬಲವಾಗುತ್ತವೆ. 2) ಫೋನ್ ನೋಡುತ್ತಾ ತಿನ್ನುವುದು ಜೀರ್ಣಕ್ರಿಯೆ ವಿಳಂಬಕ್ಕೆ ಕಾರಣವಾಗುತ್ತದೆ. 3) ಮಕ್ಕಳು ಸ್ಮಾರ್ಟ್ ಫೋನ್ ಅನ್ನು ಹೆಚ್ಚು ನೋಡುತ್ತಿದ್ದರೆ.. ಮೆದುಳಿನ ಮೇಲೆ ಅದರ ಪರಿಣಾಮ ತೋರಿಸುತ್ತದೆ. ಯಾರೊಂದಿಗೂ ಸರಿಯಾಗಿ ಮಾತನಾಡುವುದಿಲ್ಲ. 4) ಮಕ್ಕಳು ಸೆಲ್ ಫೋನ್ ನೋಡುವುದು ಮತ್ತು ಅನ್ನ ತಿನ್ನುವುದು ತಾಯಿ ಮತ್ತು ಮಗುವಿನ ನಡುವಿನ ಸಂಬಂಧದ ಮೇಲೆ ಕೆಟ್ಟ ಪರಿಣಾಮ ಬೀರಬಹುದು.
ಊಟದ ನಡುವೆ ನೀರು ಕುಡಿಯಬಹುದೇ? ಎನ್ನುವ ಬಗ್ಗೆ ಈಗಾಗಲೇ ಹಲವು ಅಧ್ಯಯನಗಳು ನಡೆದಿವೆ. ತಜ್ಞರು ಕೂಡ ಅನೇಕ ಸಂಶೋಧನೆಗಳನ್ನು ಮಾಡಿದ್ದಾರೆ. ಬನ್ನಿ ನಾವು ಇಂದು ಊಟ ಮಾಡುವಾಗ ನೀರು ಕುಡಿಯುವುದರಿಂದ ಯಾವೆಲ್ಲ ಸಮಸ್ಯೆ ಇದೆ ಎನ್ನುವ ಕುರಿತು ತಿಳಿದುಕೊಳ್ಳೋಣ…. ಊಟಕ್ಕೆ 30 ನಿಮಿಷಗಳ ಮೊದಲು ಮತ್ತು 30 ನಿಮಿಷಗಳ ನಂತರ ಯಾವಾಗಲೂ ನೀರು ಕುಡಿಯುವುದನ್ನು ಅಭ್ಯಾಸ ಮಾಡಿಕೊಳ್ಳಿ ಎನ್ನುತ್ತಾ ಆರೋಗ್ಯ ತಜ್ಞರು. 1) ಊಟ ಅಥವಾ ಟಿಫಿನ್ ಸಮಯದಲ್ಲಿ ನೀರು ನೀರು ಕುಡಿದರೆ, ನೀವು ಆಹಾರವನ್ನು ಜಗಿಯುವುದನ್ನು ನಿಲ್ಲಿಸಿ ನುಂಗುತ್ತೀರಿ. ಹೀಗೆ ಮಾಡುವುದರಿಂದ ಆಹಾರ ಸರಿಯಾಗಿ ಜೀರ್ಣವಾಗುವುದಿಲ್ಲ. ಇದು ಜೀರ್ಣಕಾರಿ ಸಮಸ್ಯೆಗಳನ್ನು ಉಂಟುಮಾಡುತ್ತದೆ. 2) ಊಟ ಮಾಡುವಾಗ ನೀರು ಕುಡಿದರೆ ಸ್ವಲ್ಪ ಗಾಳಿಯೂ ಒಳಗೆ ಹೋಗುತ್ತದೆ. ಇದರಿಂದ ಸರಿಯಾಗಿ ಆಹಾರ ಸೇವಿಸಲು ಸಾಧ್ಯವಾಗುತ್ತಿಲ್ಲ. ಗ್ಯಾಸ್, ಉಬ್ಬುವುದು, ಮಲಬದ್ಧತೆ ಮತ್ತು ಬೊಜ್ಜು ಸಹ ಸಾಧ್ಯವಿದೆ. ಊಟ, ಟಿಫಿನ್ ಅಥವಾ ದ್ರವ ಪದಾರ್ಥಗಳನ್ನು ಕುಡಿಯುವುದರಿಂದ ತೂಕ ಹೆಚ್ಚಾಗುವುದರ ಜತೆಗೆ ಇನ್ಸುಲಿನ್ ಮಟ್ಟವನ್ನು ಹೆಚ್ಚಿಸುತ್ತದೆ. ಇದು…
ನವದೆಹಲಿ: ಮಳೆಯಿಂದಾಗಿ ದೆಹಲಿಯಲ್ಲಿ ಗಾಳಿಯ ಗುಣಮಟ್ಟ (Air Quality) ಪ್ರಮಾಣ ಸುಧಾರಿಸಿದ್ದು, ಸದ್ಯಕ್ಕೆ ಸಮ-ಬೆಸ (Odd-Even) ಯೋಜನೆ ಜಾರಿ ಮಾಡದಿರಲು ಸರ್ಕಾರ ನಿರ್ಧರಿಸಿದೆ ಎಂದು ಪರಿಸರ ಸಚಿವ ಗೋಪಾಲ್ ರೈ (Gopal Rai) ಹೇಳಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಾಯು ಗುಣಮಟ್ಟ ವೃದ್ದಿಯಾಗಿದೆ ಎಂದರು. ಈ ಮೊದಲು ನವೆಂಬರ್ 13 ರಿಂದ ಸಮ ಬೆಸ ಜಾರಿಗೆ ತರಲು ನಿರ್ಧರಿಸಲಾಗಿತ್ತು, ಮಳೆಯಿಂದ ಈ ಪ್ರಸ್ತಾಪ ಕೈಬಿಟ್ಟಿದೆ. ದೀಪಾವಳಿಯ (Deepavali) ನಂತರ ಗಾಳಿಯ ಗುಣಮಟ್ಟದ ಪರಿಸ್ಥಿತಿಯನ್ನು ಪರಿಶೀಲಿಸಲಾಗುತ್ತದೆ. ಗಾಳಿಯ ಗುಣಮಟ್ಟ ಮತ್ತೆ ಹದಗೆಟ್ಟರೆ ಬೆಸ-ಸಮ ಯೋಜನೆಗೆ ಜಾರಿಗೆ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಹೇಳಿದರು. https://ainlivenews.com/great-job-opportunity-in-hindustan-aeronautics-limited-posting-in-bangalore/ ಇದಕ್ಕೂ ಮುನ್ನ ಸೋಮವಾರ, ಸಚಿವರು ಬೆಸ-ಸಮ ಯೋಜನೆಯನ್ನು ನವೆಂಬರ್ 13 ಮತ್ತು ನವೆಂಬರ್ 20ರ ನಡುವೆ ಜಾರಿಗೊಳಿಸಲಾಗುವುದು ಎಂದು ಘೋಷಿಸಿದ್ದರು. ಈ ಯೋಜನೆಯು ಕಾರುಗಳು ತಮ್ಮ ನೋಂದಣಿ ಸಂಖ್ಯೆಗಳ ಬೆಸ ಅಥವಾ ಕೊನೆಯ ಅಂಕಿಗಳ ಆಧಾರದ ಮೇಲೆ ಪರ್ಯಾಯ ದಿನಗಳಲ್ಲಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಡುತ್ತದೆ.
ಪುಷ್ಪ ಸಿನಿಮಾದ ‘ವೂಂ ಅಂಟಾವ ಮಾವ..’ ಹಾಡಿ ಸಿಕ್ಕಾಪಟ್ಟೆ ಫೇಮಸ್ ಆಗಿತ್ತು. ಈ ಹಾಡೇ ಪಷ್ಪ ಸಿನಿಮಾಗೆ ಜನರನ್ನೂ ಕರೆತಂದಿದ್ದು. ಸೋಷಿಯಲ್ ಮೀಡಿಯಾದಲ್ಲಂತೂ ಕೋಟ್ಯಂತರ ಜನರು ರೀಲ್ಸ್ ಮಾಡಿದ್ದರು. ಈ ಹಾಡಿಗೆ ಸಮಂತಾ (Samantha) ಸಖತ್ತಾಗಿಯೇ ಸೊಂಟ ಬಳುಕಿಸಿದ್ದರು. ಈ ಯಶಸ್ಸನ್ನು ಮತ್ತೊಂದು ಬಾರಿ ಬಳಸಿಕೊಳ್ಳಲು ನಿರ್ದೇಶಕರು ಪ್ಲ್ಯಾನ್ ಮಾಡಿದ್ದಾರೆ. ಪುಷ್ಪ 2 ಸಿನಿಮಾದಲ್ಲೂ ಐಟಂ ಸಾಂಗ್ (Item Song) ವೊಂದಿದ್ದು, ಅದಕ್ಕೆ ಸಮಂತಾ ಅವರೇ ಡ್ಯಾನ್ಸ್ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಡಾನ್ಸ್ ಮಾಸ್ಟರ್ ಮತ್ತು ನಿರ್ದೇಶಕರು ಸಮಂತಾ ಜೊತೆ ಒಂದು ಸುತ್ತಿನ ಮಾತುಕತೆ ಕೂಡ ನಡೆಸಿದ್ದಾರೆ. ಸಮಂತಾ ಕೂಡ ಆ ಹಾಡಿನಲ್ಲಿ ಭಾಗಿಯಾಗಲು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯದಲ್ಲೇ ಶೂಟಿಂಗ್ ಕೂಡ ಶುರು ಮಾಡಲಿದ್ದಾರಂತೆ ಸಮಂತ.