ಊಟದ ನಡುವೆ ನೀರು ಕುಡಿಯಬಹುದೇ? ಎನ್ನುವ ಬಗ್ಗೆ ಈಗಾಗಲೇ ಹಲವು ಅಧ್ಯಯನಗಳು ನಡೆದಿವೆ. ತಜ್ಞರು ಕೂಡ ಅನೇಕ ಸಂಶೋಧನೆಗಳನ್ನು ಮಾಡಿದ್ದಾರೆ. ಬನ್ನಿ ನಾವು ಇಂದು ಊಟ ಮಾಡುವಾಗ ನೀರು ಕುಡಿಯುವುದರಿಂದ ಯಾವೆಲ್ಲ ಸಮಸ್ಯೆ ಇದೆ ಎನ್ನುವ ಕುರಿತು ತಿಳಿದುಕೊಳ್ಳೋಣ…. ಊಟಕ್ಕೆ 30 ನಿಮಿಷಗಳ ಮೊದಲು ಮತ್ತು 30 ನಿಮಿಷಗಳ ನಂತರ ಯಾವಾಗಲೂ ನೀರು ಕುಡಿಯುವುದನ್ನು ಅಭ್ಯಾಸ ಮಾಡಿಕೊಳ್ಳಿ ಎನ್ನುತ್ತಾ ಆರೋಗ್ಯ ತಜ್ಞರು. 1) ಊಟ ಅಥವಾ ಟಿಫಿನ್ ಸಮಯದಲ್ಲಿ ನೀರು ನೀರು ಕುಡಿದರೆ, ನೀವು ಆಹಾರವನ್ನು ಜಗಿಯುವುದನ್ನು ನಿಲ್ಲಿಸಿ ನುಂಗುತ್ತೀರಿ. ಹೀಗೆ ಮಾಡುವುದರಿಂದ ಆಹಾರ ಸರಿಯಾಗಿ ಜೀರ್ಣವಾಗುವುದಿಲ್ಲ. ಇದು ಜೀರ್ಣಕಾರಿ ಸಮಸ್ಯೆಗಳನ್ನು ಉಂಟುಮಾಡುತ್ತದೆ. 2) ಊಟ ಮಾಡುವಾಗ ನೀರು ಕುಡಿದರೆ ಸ್ವಲ್ಪ ಗಾಳಿಯೂ ಒಳಗೆ ಹೋಗುತ್ತದೆ. ಇದರಿಂದ ಸರಿಯಾಗಿ ಆಹಾರ ಸೇವಿಸಲು ಸಾಧ್ಯವಾಗುತ್ತಿಲ್ಲ. ಗ್ಯಾಸ್, ಉಬ್ಬುವುದು, ಮಲಬದ್ಧತೆ ಮತ್ತು ಬೊಜ್ಜು ಸಹ ಸಾಧ್ಯವಿದೆ. ಊಟ, ಟಿಫಿನ್ ಅಥವಾ ದ್ರವ ಪದಾರ್ಥಗಳನ್ನು ಕುಡಿಯುವುದರಿಂದ ತೂಕ ಹೆಚ್ಚಾಗುವುದರ ಜತೆಗೆ ಇನ್ಸುಲಿನ್ ಮಟ್ಟವನ್ನು ಹೆಚ್ಚಿಸುತ್ತದೆ. ಇದು…
Author: AIN Author
ನವದೆಹಲಿ: ಮಳೆಯಿಂದಾಗಿ ದೆಹಲಿಯಲ್ಲಿ ಗಾಳಿಯ ಗುಣಮಟ್ಟ (Air Quality) ಪ್ರಮಾಣ ಸುಧಾರಿಸಿದ್ದು, ಸದ್ಯಕ್ಕೆ ಸಮ-ಬೆಸ (Odd-Even) ಯೋಜನೆ ಜಾರಿ ಮಾಡದಿರಲು ಸರ್ಕಾರ ನಿರ್ಧರಿಸಿದೆ ಎಂದು ಪರಿಸರ ಸಚಿವ ಗೋಪಾಲ್ ರೈ (Gopal Rai) ಹೇಳಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಾಯು ಗುಣಮಟ್ಟ ವೃದ್ದಿಯಾಗಿದೆ ಎಂದರು. ಈ ಮೊದಲು ನವೆಂಬರ್ 13 ರಿಂದ ಸಮ ಬೆಸ ಜಾರಿಗೆ ತರಲು ನಿರ್ಧರಿಸಲಾಗಿತ್ತು, ಮಳೆಯಿಂದ ಈ ಪ್ರಸ್ತಾಪ ಕೈಬಿಟ್ಟಿದೆ. ದೀಪಾವಳಿಯ (Deepavali) ನಂತರ ಗಾಳಿಯ ಗುಣಮಟ್ಟದ ಪರಿಸ್ಥಿತಿಯನ್ನು ಪರಿಶೀಲಿಸಲಾಗುತ್ತದೆ. ಗಾಳಿಯ ಗುಣಮಟ್ಟ ಮತ್ತೆ ಹದಗೆಟ್ಟರೆ ಬೆಸ-ಸಮ ಯೋಜನೆಗೆ ಜಾರಿಗೆ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಹೇಳಿದರು. https://ainlivenews.com/great-job-opportunity-in-hindustan-aeronautics-limited-posting-in-bangalore/ ಇದಕ್ಕೂ ಮುನ್ನ ಸೋಮವಾರ, ಸಚಿವರು ಬೆಸ-ಸಮ ಯೋಜನೆಯನ್ನು ನವೆಂಬರ್ 13 ಮತ್ತು ನವೆಂಬರ್ 20ರ ನಡುವೆ ಜಾರಿಗೊಳಿಸಲಾಗುವುದು ಎಂದು ಘೋಷಿಸಿದ್ದರು. ಈ ಯೋಜನೆಯು ಕಾರುಗಳು ತಮ್ಮ ನೋಂದಣಿ ಸಂಖ್ಯೆಗಳ ಬೆಸ ಅಥವಾ ಕೊನೆಯ ಅಂಕಿಗಳ ಆಧಾರದ ಮೇಲೆ ಪರ್ಯಾಯ ದಿನಗಳಲ್ಲಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಡುತ್ತದೆ.
ಪುಷ್ಪ ಸಿನಿಮಾದ ‘ವೂಂ ಅಂಟಾವ ಮಾವ..’ ಹಾಡಿ ಸಿಕ್ಕಾಪಟ್ಟೆ ಫೇಮಸ್ ಆಗಿತ್ತು. ಈ ಹಾಡೇ ಪಷ್ಪ ಸಿನಿಮಾಗೆ ಜನರನ್ನೂ ಕರೆತಂದಿದ್ದು. ಸೋಷಿಯಲ್ ಮೀಡಿಯಾದಲ್ಲಂತೂ ಕೋಟ್ಯಂತರ ಜನರು ರೀಲ್ಸ್ ಮಾಡಿದ್ದರು. ಈ ಹಾಡಿಗೆ ಸಮಂತಾ (Samantha) ಸಖತ್ತಾಗಿಯೇ ಸೊಂಟ ಬಳುಕಿಸಿದ್ದರು. ಈ ಯಶಸ್ಸನ್ನು ಮತ್ತೊಂದು ಬಾರಿ ಬಳಸಿಕೊಳ್ಳಲು ನಿರ್ದೇಶಕರು ಪ್ಲ್ಯಾನ್ ಮಾಡಿದ್ದಾರೆ. ಪುಷ್ಪ 2 ಸಿನಿಮಾದಲ್ಲೂ ಐಟಂ ಸಾಂಗ್ (Item Song) ವೊಂದಿದ್ದು, ಅದಕ್ಕೆ ಸಮಂತಾ ಅವರೇ ಡ್ಯಾನ್ಸ್ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಡಾನ್ಸ್ ಮಾಸ್ಟರ್ ಮತ್ತು ನಿರ್ದೇಶಕರು ಸಮಂತಾ ಜೊತೆ ಒಂದು ಸುತ್ತಿನ ಮಾತುಕತೆ ಕೂಡ ನಡೆಸಿದ್ದಾರೆ. ಸಮಂತಾ ಕೂಡ ಆ ಹಾಡಿನಲ್ಲಿ ಭಾಗಿಯಾಗಲು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯದಲ್ಲೇ ಶೂಟಿಂಗ್ ಕೂಡ ಶುರು ಮಾಡಲಿದ್ದಾರಂತೆ ಸಮಂತ.
ಬೆಂಗಳೂರು:- ನೂತನ ಬಿಜೆಪಿ ರಾಜ್ಯಾದ್ಯಕ್ಷರಾದ ಬಿವೈ ವಿಜಯೇಂದ್ರ ಅವರು ನಿರ್ಮಲನಂದನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡಿದ್ದಾರೆ. ವಿಜಯನಗರದ ಆದಿಚುಂಚನಗಿರಿ ಮಠಕ್ಕೇ ಭೇಟಿ ನೀಡಿ ಪೂಜ್ಯ ನಿರ್ಮಲನಂದನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರು ಆಯ್ಕೆ ಆಗಿರುವ ಹಿನ್ನೆಲೆ, ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.
ವಾಟ್ಸಪ್ ನೂತನ ಅಪ್ ಡೇಟ್ ನಲ್ಲಿ ವಿಡಿಯೊ ಕಾಲ್ ವೇಳೆ ಸ್ಕ್ರೀನ್ ಶೇರಿಂಗ್ ಫೀಚರ್ ಪರಿಚಯಿಸಿದೆ.ವಾಟ್ಸಪ್ ನಲ್ಲಿ ವಿಡಿಯೊ ಕಾಲ್ ವೇಳೆ ಸ್ಕ್ರೀನ್ ಶೇರಿಂಗ್ ಫೀಚರ್ ಸಕ್ರಿಯಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ. ವಿಡಿಯೊ ಕಾಲ್ ವೇಳೆ ಬಳಕೆದಾರರು, ‘ಶೇರಿಂಗ್’ ಐಕಾನ್ ಅನ್ನು ಕ್ಲಿಕ್ ಮಾಡುವ ಮೂಲಕ ನಿರ್ದಿಷ್ಟ ಅಪ್ಲಿಕೇಶನ್ ಅಥವಾ ಸಂಪೂರ್ಣ ಪರದೆಯನ್ನು ಹಂಚಿಕೊಳ್ಳುವ ಆಯ್ಕೆ ಮಾಡುವ ಮೂಲಕ ಸ್ಕ್ರೀನ್ ಹಂಚಿಕೆಯನ್ನು ಪ್ರಾರಂಭಿಸಬಹುದು. ಕೆಲಸದ ನಿಮಿತ್ತ ಡಾಕ್ಯುಮೆಂಟ್‌ಗಳನ್ನು ಹಂಚಿಕೊಳ್ಳುವುದು, ಕುಟುಂಬದೊಂದಿಗೆ ಚಿತ್ರಗಳನ್ನು ಹಂಚಿಕೊಳ್ಳುವುದು, ರಜೆ ಕುರಿತು ಯೋಜಿಸುವುದು ಅಥವಾ ಸ್ನೇಹಿತರೊಂದಿಗೆ ಆನ್‌ಲೈನ್‌ನಲ್ಲಿ ಶಾಪಿಂಗ್ ಮಾಡುವುದು ಮುಂತಾದ ಸಂದರ್ಭ ವಿಡಿಯೊ ಕರೆ ಸಮಯದಲ್ಲಿ ನಿಮ್ಮ ಪರದೆಯ ಲೈವ್ ವೀಕ್ಷಣೆಯನ್ನು ಹಂಚಿಕೊಳ್ಳಲು ಸ್ಕ್ರೀನ್ ಶೇರಿಂಗ್ ಫೀಚರ್ ನಿಮಗೆ ಅನುಮತಿಸುತ್ತದೆ’ ಎಂದು ಕಂಪನಿಯು ಹೇಳಿಕೆಯಲ್ಲಿ ತಿಳಿಸಿದೆ.
ಹಾಟ್ ತಾರೆ ಸಿಮ್ರನ್ ಕೌರ್ ಸಲಾರ್ ಸಿನಿಮಾದ ಮಾದಕ ಗೀತೆಗೆ ಹೆಜ್ಜೆ ಹಾಕಿದ್ದಾರೆ ಎನ್ನುವ ಮಾಹಿತಿ ತೆಲುಗು ಚಿತ್ರೋದ್ಯಮದಲ್ಲಿ ಹರಿದಾಡುತ್ತಿದೆ. ಅದ್ಧೂರಿ ಸೆಟ್ ನಲ್ಲಿ ಸಿಮ್ರನ್ ಮತ್ತು ಪ್ರಭಾಸ್ ಹಾಟ್ ಹಾಡಿಗೆ ಹೆಜ್ಜೆ ಹಾಕಿದ್ದಾರಂತೆ. ಸಲಾರ್ ಸಿನಿಮಾದ ಹುಕ್ ಸಾಂಗ್ ಇದಾಗಲಿದೆ ಎಂದು ಹೇಳಲಾಗುತ್ತಿದೆ. ಈ ಕುರಿತಂತೆ ಚಿತ್ರತಂಡ ಮಾಹಿತಿ ನೀಡದೇ ಇದ್ದರೂ, ತೆಲುಗಿನಲ್ಲಂತೂ ಭಾರೀ ಸುದ್ದಿ ಆಗಿದೆ. ಸಲಾರ್ (Salaar) ಸಿನಿಮಾದ ರಿಲೀಸ್ ಗೆ ದೊಡ್ಡಮಟ್ಟದಲ್ಲೇ ಪ್ಲ್ಯಾನ್ ಮಾಡಲಾಗುತ್ತಿದೆ. ಕನ್ನಡ, ತಮಿಳು, ತೆಲುಗು, ಹಿಂದಿ, ಮಲಯಾಳಂ ಹೀಗೆ ನಾನಾ ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದ್ದು, ಮಲಯಾಳಂ ಭಾಷೆಯ ಸಲಾರ್ ಸಿನಿಮಾಗೆ ಪೃಥ್ವಿರಾಜ್ (Prithviraj Sukumaran) ಸಾಥ್ ನೀಡುತ್ತಿದ್ದಾರೆ. ನಿನ್ನೆಯಷ್ಟೇ ಸಿನಿಮಾದ ಪೋಸ್ಟರ್ ವೊಂದನ್ನು ಅವರು ರಿಲೀಸ್ ಮಾಡಿದ್ದಾರೆ. ಭಾರತೀಯ ಸಿನಿಮಾ ರಂಗ ಡಿಸೆಂಬರ್ ನಲ್ಲಿ ಮೆಗಾ ಕಾಳಗಕ್ಕೆ ಸಾಕ್ಷಿಯಾಗಲಿದೆ. ಚಿತ್ರೋದ್ಯಮದ ಮೂವರು ಭಾರೀ ಬಜೆಟ್ ಚಿತ್ರಗಳು ಬಿಡುಗಡೆ ಆಗುತ್ತಿವೆ. ತೆಲುಗಿನ ಪ್ರಭಾಸ್, ಬಾಲಿವುಡ್ ಶಾರುಖ್ ಖಾನ್ ಮತ್ತು ಮಲಯಾಳಂ…
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಸ್ಕಾಟ್ ಎಡ್ವರ್ಡ್ಸ್ ನೇತೃತ್ವದ ನೆದರ್ಲೆಂಡ್ಸ್ ತಂಡಗಳು ಮುಖಾಮುಖಿ ಆಗಲಿದೆ. ಪಾಯಿಂಟ್ ಟೇಬಲ್ನಲ್ಲಿ ಅಗ್ರಸ್ಥಾನ ಪಡೆದು ಈಗಾಗಲೇ ಸೆಮಿ ಫೈನಲ್ಗೇರಿರುವ ಟೀಮ್ ಇಂಡಿಯಾಕ್ಕೆ ಇದೊಂದು ಔಪಚಾರಿಕ ಪಂದ್ಯ. ಇಂದಿನ ಭಾರತ-ನೆದರ್ಲೆಂಡ್ಸ್ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುತ್ತಾ ಎಂಬುದನ್ನು ನೋಡುವುದಾದರೆ, ಬೆಂಗಳೂರಿನಲ್ಲಿ ಇಂದು ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ನಿರೀಕ್ಷಿಸಲಾಗಿದೆ. ಹವಾಮಾನ ವರದಿಯ ಪ್ರಕಾರ ಯಾವುದೇ ಮಳೆಯ ಸೂಚನೆ ಇಲ್ಲ. ಮೋಡ ಕವಿದ ವಾತಾವರಣ ಇರಬಹುದು. ಇಂದು ಬೆಂಗಳೂರಿನಲ್ಲಿ ಶೇ. 71 ರಷ್ಟು ಮೋಡ ಕವಿದ ವಾತಾವರಣ ಇರಲಿದೆ. ಶೇ. 3 ರಷ್ಟು ಮಳೆಯ ಸಂಭವ ಇದೆಯಷ್ಟೆ. ಸಂಜೆಯ ವೇಳೆಗೆ ತಾಪಮಾನವು 12 ಡಿಗ್ರಿ ಸೆಲ್ಸಿಯಸ್ಗೆ ಬರಲಿದೆ. ಆರ್ದ್ರತೆಯು ಶೇ. 66 ರಷ್ಟು ಇರಬಹುದು ಎನ್ನಲಾಗಿದೆ. ಒಟ್ಟಾರೆ ಭಾರತ-ನೆದರ್ಲೆಂಡ್ಸ್ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಸಾಧ್ಯತೆ ಇಲ್ಲ. ಟೂರ್ನಿಯಿಂದ ಹೊರಬಿದ್ದರೂ ಇಂದಿನ ಪಂದ್ಯ ನೆದರ್ಲೆಂಡ್ಸ್ ತಂಡಕ್ಕೆ ಮುಖ್ಯವಾಗಿದೆ. ಚಾಂಪಿಯನ್ಸ್ ಟ್ರೋಫಿ 2025…
ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಯಾಗಿದೆ, ಕಡಿಮೆ ಬೆಲೆಯಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಶ್ರೇಣಿಯನ್ನು ಪಡೆಯುತ್ತಿದೆ, ಅದರ ಅದ್ಭುತ ವೈಶಿಷ್ಟ್ಯಗಳನ್ನು ತಿಳಿದುಕೊಳ್ಳಿ, ಭಾರತೀಯರು ಈಗ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಹೆಚ್ಚು ಇಷ್ಟಪಡುತ್ತಿದ್ದಾರೆ. ಈ ಕಾರಣಕ್ಕಾಗಿ, ಅದರ ಬೇಡಿಕೆಯು ಸಾಕಷ್ಟು ಹೆಚ್ಚಾಗಿದೆ. ಬೇಡಿಕೆಯೊಂದಿಗೆ, ಅನೇಕ ಕಂಪನಿಗಳು ಮಾರುಕಟ್ಟೆಯಲ್ಲಿ ಒಂದಕ್ಕಿಂತ ಹೆಚ್ಚು ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆ ಮಾಡಿದೆ. ಇದರಿಂದಾಗಿ ಅನೇಕ ಜನರು ಅವುಗಳನ್ನು ಖರೀದಿಸಲು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಪ್ರತಿ ಶ್ರೇಣಿಯಲ್ಲಿ, ಬಹು ವೈಶಿಷ್ಟ್ಯಗಳೊಂದಿಗೆ ಬರುವ ಹಲವು ಆಯ್ಕೆಗಳನ್ನು ನೀವು ಕಾಣಬಹುದು. BGauss C12i ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ನಿಮಗೆ ತಿಳಿಸಲಾಗುವುದು, ಇದು ಬಜೆಟ್‌ನಲ್ಲಿಯೇ 135 ಕಿಲೋಮೀಟರ್‌ಗಳ ವ್ಯಾಪ್ತಿಯನ್ನು ನೀಡುತ್ತದೆ. ಇದರ ಉದ್ದ 1825 ಮಿಮೀ, ಅಗಲ 697 ಮಿಮೀ ಮತ್ತು ಎತ್ತರ 1150 ಮಿಮೀ. ಇದು 155 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಅನ್ನು ಪಡೆಯುತ್ತದೆ ಮತ್ತು ಇದರ ವೀಲ್ ಬೇಸ್ 1293 ಎಂಎಂ ಆಗಿದೆ. ಈ 110 ಕೆಜಿ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಹಲವಾರು ಬಣ್ಣಗಳಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ. ಅದೇ ಸಮಯದಲ್ಲಿ, ಅದರ ನೋಟವು ತುಂಬಾ ಆಕರ್ಷಕವಾಗಿದೆ. ಇದು 2500…
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ವಿರೋಧಿಸಿ ಪಕ್ಷದಿಂದ ಹೊರಬಂದ ಒಕ್ಕಲಿಗ ನಾಯಕರನ್ನು ಚುನಾವಣೆಯಲ್ಲಿ ಸೋಲಿಸುತ್ತಾ ಬಂದವರು, ನನ್ನನ್ನು ಸೋಲಿಸಲು ಆಗಲಿಲ್ಲ ಎಂಬ ಹತಾಶೆಯಿಂದ ಸುಖಾಸುಮ್ಮನೆ ನನ್ನ ತೇಜೋವಧೆ ಮಾಡುತ್ತಿದ್ದಾರೆ. ಅವರು ಈ ಕೆಲಸ ಮುಂದುವರಿಸಿದರೆ ನಾನೂ ನನ್ನ ವರಸೆ ತೋರಿಸಬೇಕಾಗುತ್ತದೆ ಎಂದು ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರು ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಶಾಸಕ ಎಚ್.ಡಿ.ರೇವಣ್ಣಗೆ ಎಚ್ಚರಿಕೆ ನೀಡಿದರು. ”ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿ ನನ್ನ ಹೆಸರು ಹೇಳುವುದಿಲ್ಲ, ಒಮ್ಮೆ ಅರಸೀಕೆರೆಯವನು ಅಂತಾರೆ, ನಾನೂ ಅವರನ್ನು ಚನ್ನಪಟ್ಟಣ ಶಾಸಕ ಅನ್ನಬಹುದು, ಆದರೆ ನಾನು ಹಾಗೆ ಮಾತನಾಡುವುದಿಲ್ಲ,”ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು. ”ನನಗೂ ನಮ್ಮಪ್ಪ ಹೆಸರು ಕಟ್ಟಿದ್ದಾನೆ, ನಾನು ಬಡ ರೈತನ ಮಗ. ನನ್ನ ಹೆಸರು ಹೇಳೋಕೆ ನಾಚಿಕೆಯಾದರೆ ಹೇಳಬೇಡಿ ಎಂದು ವಿಧಾನಸಭೆಯಲ್ಲೇ ಹೇಳಿದ್ದೆ. ಆದರೂ ಅದೇ ಪರಿಪಾಟ ಇನ್ನೂ ಮುಂದುವರಿಸಿದ್ದಾರೆ. https://ainlivenews.com/great-job-opportunity-in-hindustan-aeronautics-limited-posting-in-bangalore/ ಮಜ್ಜಿಗೆ ಮಾರುವವನು ಎಂದು ಹೊಸದಾಗಿ ಟೀಕಿಸಲು ಪ್ರಾರಂಭಿಸಿದ್ದಾರೆ. ಮಜ್ಜಿಗೆ ಏನು ಸ್ಮಗ್ಲಿಂಗ್ ಗೂಡ್ಸೇ,” ಎಂದು ಪ್ರಶ್ನಿಸಿದರು. ”ವಿದ್ಯಾರ್ಥಿಯಾಗಿ ಗಂಡಸಿ ಶಾಲೆಗೆ ಸೈಕಲ್‌ನಲ್ಲಿ ಬರುತ್ತಿದ್ದಾಗ…
ಬೆಂಗಳೂರು:- ಬಹುಮಹಡಿ ಕಟ್ಟಡದಿಂದ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ಆರ್ ಆರ್ ನಗರದ ಹಲಗೇವಡೆರಹಳ್ಳಿಯಲ್ಲಿ ಜರುಗಿದೆ. ಶಿವಮೊಗ್ಗ ಮೂಲದ ಮದನ್ ಶೆಟ್ಟಿ (25) ಮೃತ ಯುವಕ. ತಾನು ವಾಸವಿದ್ದ ಕಟ್ಟಡದ ನಾಲ್ಕನೇ ಅಂತಸ್ತಿನಿಂದ ಬಿದ್ದು ಸಾವನ್ನಪ್ಪಿದ್ದಾನೆ. ಸ್ನೇಹಿತರ ನಡುವೆ ಗಲಾಟೆ ಬಳಿಕ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಸ್ನೇಹಿತನ ಫೋನ್ ನಂಬರ್ ಬರೆದಿಟ್ಟು ನಾಲ್ಕು ಅಂತಸ್ತಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ರಾತ್ರಿ 9 ಗಂಟೆಯ ಸುಮಾರಿಗೆ ಘಟನೆ ಜರುಗಿದೆ. ನಾಲ್ಕು ಅಂತಸ್ತಿನಿಂದ ಜಿಗಿದ ಬಿಲ್ಡಿಂಗ್ ನಲ್ಲೇ ಮದನ್ ಶೆಟ್ಟಿ ಬಾಡಿಗೆಗೆ ಇದ್ದ. ಮದನ್ ಜೊತೆ ತೇಜು ಹಾಗೂ ಇನ್ನೊಬ್ಬ ಸ್ನೇಹಿತ ಬಾಡಿಗೆ ಇದ್ದರು ಎನ್ನಲಾಗಿದೆ.. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಲ್ಲೇಶ್ವರಂ ಅರಣ್ಯ ಭವನ ಚಾಲಕನಾಗಿ ಮೃತ ಯುವಕ ಕೆಲಸ ನಿರ್ವಹಿಸ್ತಿದ್ದ. ಆರ್.ಆರ್.ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ತನಿಖೆ ಕೈಗೊಂಡಿದ್ದಾರೆ.