ಮುಂಬೈ: ವೇಗವಾಗಿ ಬಂದ ಕಾರೊಂದು (Car) ಹಲವಾರು ವಾಹನಗಳಿಗೆ ಡಿಕ್ಕಿ (Accident) ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮುಂಬೈನ (Mumbai) ಬಾಂದ್ರಾ ವರ್ಲಿ ಸೀ ಲಿಂಕ್‍ನಲ್ಲಿರುವ ಟೋಲ್ ಪ್ಲಾಜಾದಲ್ಲಿ ನಡೆದಿದೆ. ಬಾಂದ್ರಾ ಕಡೆಗೆ ಬರುತ್ತಿದ್ದ ಇನ್ನೋವಾ ಕಾರು ರಾತ್ರಿ 10.15ರ ಸುಮಾರಿಗೆ ಟೋಲ್ ಬಳಿ ಕಾರೊಂದಕ್ಕೆ ಡಿಕ್ಕಿಯಾಗಿದೆ. ಈ ವೇಳೆ ಕಾರು ಚಾಲಕ ತಪ್ಪಿಸಿಕೊಳ್ಳಲು ಯತ್ನಿಸಿ ವೇಗವಾಗಿ ಕಾರು ಚಲಾಯಿಸಿದ್ದಾನೆ. ಈ ವೇಳೆ ಟೋಲ್ ಸರದಿಯಲ್ಲಿದ್ದ ಹಲವಾರು ಕಾರುಗಳಿಗೆ ಇನ್ನೋವಾ ಡಿಕ್ಕಿಯಾಗಿದೆ. ಪರಿಣಾಮ ಇಬ್ಬರು ಮಹಿಳೆಯರು ಮತ್ತು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅಲ್ಲದೇ ಆರು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. https://ainlivenews.com/knee-pain-treatment-joint-pain-treatment/ ಗಾಯಗೊಂಡ ಆರು ಮಂದಿಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಇನ್ನೋವಾ ಕಾರಿನ ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಆತನಿಗೆ ಚಿಕಿತ್ಸೆ ನೀಡಲಾಗಿದೆ. ಆತನನ್ನು ಬಂಧಿಸಲಾಗಿದ್ದು, ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Author: AIN Author
ಟೀಕಾಕಾರರ ವಿರುದ್ಧ ಪಾಕ್ ನಾಯಕ ಬಾಬರ್ ಕಿಡಿಕಾರಿದ್ದಾರೆ. ತಮ್ಮ ತಂಡದ ಗೆಲುವಿನ ಅವಕಾಶ ಕ್ಷೀಣವಾಗಿದ್ದರೂ ಆ ಆಸೆಯನ್ನು ಬಿಟ್ಟುಕೊಡದ ಅವರು, ‘ಟಿ.ವಿ. ಚರ್ಚೆಯಲ್ಲಿ ಕುಳಿತು ಸಲಹೆ ಕೊಡುವುದು ಸುಲಭ’ ಎಂದು ಟೀಕಿಸಿದ್ದಾರೆ. ನ್ಯೂಜಿಲೆಂಡ್ ತಂಡವನ್ನು ಹಿಂದೆ ಹಾಕಿ ರನ್‌ರೇಟ್ ಆಧಾರದಲ್ಲಿ ಸೆಮಿಫೈನಲ್ ತಲುಪಬೇಕಾದರೆ ಶನಿವಾರ ನಡೆಯುವ ಪಂದ್ಯದಲ್ಲಿ ಪಾಕಿಸ್ತಾನ ಕಡೇಪಕ್ಷ 287 ರನ್‌ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಬೇಕಾಗುತ್ತದೆ. ಒಂದು ವೇಳೆ ಪಾಕ್ ಸೋತಲ್ಲಿ, ಮೂರು ವರ್ಷಗಳಿಂದ ನಾಯಕರಾಗಿರುವ ಬಾಬರ್ ಅವರು ಟೀಕಾಕಾರರಿಗೆ ಆಹಾರವಾಗಲಿದ್ದಾರೆ. ‘ವಿಶ್ವಕಪ್‌ನಲ್ಲಿ ನನ್ನ ಮೇಲಿಟ್ಟ ನಿರೀಕ್ಷೆಗೆ ತಕ್ಕಂತೆ ನಾನು ಆಡಿಲ್ಲ. ಹೀಗಾಗಿ ನಾನು ಒತ್ತಡದಲ್ಲಿದ್ದೇನೆಂದು ಹೇಳುತ್ತಾರೆ. ಆದರೆ ಹಾಗೇನೂ ಇಲ್ಲ’ ಎಂದು 29 ವರ್ಷದ ಬಾಬರ್ ಹೇಳಿದರು.
ದೇವನಹಳ್ಳಿ:- ನಾನು ಹೇಳಿದ್ದನ್ನೇ ಮಾಡುತ್ತೇನೆ, ಮಾಡಿದ್ದನ್ನೇ ಹೇಳುತ್ತೇನೆ ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನಾನು ಹೇಳುವುದನ್ನೇ ಮಾಡುತ್ತೇನೆ, ಮಾಡಿದ್ದನ್ನೇ ಹೇಳುತ್ತೇನೆ. ತಮ್ಮೆಲ್ಲದ ಆಶೀರ್ವಾದದಿಂದ ನಾನಿಂದು ಶಾಸಕನಾಗಿ ಆಯ್ಕೆಗೊಂಡು ಸಚಿವನಾಗಿದ್ದೇನೆ. ಕ್ಷೇತ್ರದ ಜನರ ಋುಣ ನನ್ನ ಮೇಲಿದ್ದು, ಕ್ಷೇತ್ರದ ಅಭಿವೃದ್ಧಿಯೇ ನನ್ನ ಗುರಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ಇಲ್ಲಿನ ಚಿಕ್ಕಕೆರೆ ಅಭಿವೃದ್ಧಿಗಾಗಿ 9.5 ಕೋಟಿ ರು., ಆಕಾಶ್ ಇಂಟರ್ ನ್ಯಾಷನಲ್ ಶಾಲೆಯಿಂದ ನಂದಿ ಉಪಚಾರ್‌ವರೆಗೂ ಡಬಲ್ ರೋಡ್ ಮಾಡಲು 20 ಕೋಟಿ ರು., ಪುರಸಭೆ ವ್ಯಾಪ್ತಿಯ ಎಲ್ಲ ರಸ್ತೆಗಳು ಕಾಂಕ್ರೀಟ್ ರಸ್ತೆ ಅಭಿವೃದ್ಧಿ 140 ಕೋಟಿ ರು., ಪಾರಿವಾಳ ಗುಟ್ಟದಲ್ಲಿ ಟ್ಯಾಂಕ್ ನಿರ್ಮಿಸಿ ಅಲ್ಲಿಂದ ಪಟ್ಟಣದ ಜನತೆಗೆ ಕುಡಿಯುವ ನೀರು ಸರಬರಾಜು ಮಾಡಲಾಗುವುದು. ಒಟ್ಟಾರೆ ಪಟ್ಟಣದ ಅಭಿವೃದ್ಧಿಗಾಗಿ 220 ಕೋಟಿ ರು. ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಹೇಳಿದರು. ಪುರಸಭಾ ಸದಸ್ಯ ಎಸ್. ಸಿ. ಚಂದ್ರಪ್ಪ ಮನವಿಯಂತೆ ಇಲ್ಲಿನ ವಿಮಾನ ನಿಲ್ದಾಣಕ್ಕೆ ಬರಲಿರುವ ಮೆಟ್ರೋ…
ವಾಷಿಂಗ್ಟನ್: ಅಮೆರಿಕದ (America) ಯುದ್ಧ ವಿಮಾನಗಳು ನಡೆಸಿದ ದಾಳಿಯಿಂದಾಗಿ ಸಿರಿಯಾದಲ್ಲಿ (Syria) ಇರಾನ್ (Iran) ಬೆಂಬಲಿತ ಗುಂಪುಗಳೊಂದಿಗೆ ಸಂಬಂಧ ಹೊಂದಿದ್ದ 9 ಮಂದಿ ಹತ್ಯೆಯಾಗಿದ್ದಾರೆ. ಅಮೆರಿಕ ಸಿಬ್ಬಂದಿ ಮೇಲಿನ ದಾಳಿಗೆ ಕೌಂಟರ್ ಆಗಿ ಅಮೆರಿಕ ಯುದ್ಧ ವಿಮಾನಗಳು (US Airstrick) ಪೂರ್ವ ಸಿರಿಯಾದಲ್ಲಿ ಇರಾನ್‌ಗೆ ಸಂಬಂಧಿಸಿದ ಶಸ್ತ್ರಾಸ್ತ್ರ ಸಂಗ್ರಹಣಾ ಘಟಕದ ಮೇಲೆ ದಾಳಿ ನಡೆಸಿದೆ. ದಾಳಿಯಲ್ಲಿ 9 ಮಂದಿ ಹತ್ಯೆಯಾಗಿದ್ದಾರೆ ಎಂದು ಯುಎಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಹೇಳಿದ್ದಾರೆ. ಸಿರಿಯಾದಲ್ಲಿ ಒಂದು ಸ್ಥಳವನ್ನು ಅಮೆರಿಕ ಗುರಿಯಾಗಿಸಿಕೊಂಡಿದೆ. ಇಸ್ರೇಲ್-ಹಮಾಸ್ ಹೋರಾಟವನ್ನು ಪ್ರಾದೇಶಿಕ ಯುದ್ಧವಾಗಿ ಪರಿವರ್ತಿಸುವುದರಿಂದ ಇರಾನ್ ಮತ್ತು ಅದರ ಪ್ರಾಕ್ಸಿಗಳನ್ನು ತಡೆಯಲು ಯುನೈಟೆಡ್ ಸ್ಟೇಟ್ಸ್ ಪ್ರಯತ್ನಿಸುತ್ತಿದೆ. https://ainlivenews.com/knee-pain-treatment-joint-pain-treatment/ ಆದರೆ ಪುನರಾವರ್ತಿತ ದಾಳಿಗಳು ವಾಷಿಂಗ್ಟನ್ ಮತ್ತು ಟೆಹ್ರಾನ್ ನಡುವಿನ ಸಂಘರ್ಷಕ್ಕೆ ಅಪಾಯವನ್ನುಂಟು ಮಾಡುತ್ತವೆ. ಯುಎಸ್ ಮಿಲಿಟರಿ ಪಡೆಗಳು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಮತ್ತು ಅಂಗಸಂಸ್ಥೆ ಗುಂಪುಗಳು ಬಳಸುತ್ತಿದ್ದ ಪೂರ್ವ ಸಿರಿಯಾದ ಸೌಲಭ್ಯದ ಮೇಲೆ ಸ್ವಯಂ-ರಕ್ಷಣಾ ದಾಳಿಯನ್ನು ನಡೆಸಿತು. ಈ ದಾಳಿಯನ್ನು…
ಬೆಂಗಳೂರು: ಒಂದು ಕಡೆ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಬೆಳಕಿನ ಹಬ್ಬಕ್ಕೆ ಪುಟ್ ಪಾತ್ ವ್ಯಾಪಾರಿಗಳಿಗೆ ಸಂಕಷ್ಟದ ಪರಿಸ್ಥಿತಿ ಉಂಟಾಗಿದೆ. ದೀಪಾವಳಿ ಹಬ್ಬ ಸಂಧರ್ಭದಲ್ಲಿ ಭರ್ಜರಿ ವ್ಯಾಪಾರ ಆಗುತ್ತದೆ ಎಂದು ಕನಸು ಕಂಡಿದ್ದ ವ್ಯಾಪಾರಸ್ಥರಿಗೆ ಸದ್ಯ ಯಾರು ವ್ಯಾಪಾರ ಮಾಡದಂತೆ ಮಾರ್ಷಲ್ ಅನೌನ್ಸ್ ಮಾಡುತ್ತಿದ್ದಾರೆ. ವ್ಯಾಪಾರ ಮಾಡಲು ಮುಂದಾದ್ರೆ ಮಾರ್ಷಲ್ ಗಳು ತೆರವು ಮಾಡುತ್ತಿದ್ದಾರೆ. ಮಲ್ಲೇಶ್ವರಂ, ಜಯನಗರ,ಕೆಂಗೇರಿ,ಶಿವಾಜಿನಗರ ಪುಟ್ಪಾತ್ ಖಾಲಿಖಾಲಿ ಆಗಿದೆ. ಇಂದು ಮತ್ತೆ ಪುಟ್ ಪಾಥ್ ತೆರವು ಕಾರ್ಯ ಮುಂದುವರಿದಿದೆ.
ಬೆಂಗಳೂರು:- ದೀಪಾವಳಿ ಹಬ್ಬ ಹಿನ್ನೆಲೆ ಊರಿಗೆ ತೆರಳಲು ಪ್ರಯಾಣಿಕರು ಮುಂದಾಗಿದ್ದಾರೆ. ಇಂದೂ ಸಹ ಮೆಜೆಸ್ಟಿಕ್ ಕಡೆ ಪ್ರಯಾಣಿಕರ ದಂಡು ಅಗಮಿಸಿದೆ. ರಾತ್ರಿ ಬಸ್ ಸಿಗದವರು, ಸೀಟ್ ರಿಸರ್ವ್ ಮಾಡದವರು, ಬೆಳಗ್ಗೆ ತಮ್ಮೂರಿಗೆ ಕಡೆ ಪ್ರಯಾಣ ಮಾಡಲು ಆಗಮಿಸಿದ್ದಾರೆ. ಬೆಳಗ್ಗೆಯಿಂದ ನೂರಕ್ಕೂ ಹೆಚ್ಚುವರಿ ಬಸ್ ಸೇವೆ ಕಲ್ಪಿಸಲಾಗಿದೆ. ಪ್ರಯಾಣಿಕರ ಅಗತ್ಯಕ್ಕೆ ತಕ್ಕಂತೆ KSRTC ಹೆಚ್ಚುವರಿ ಬಸ್ ಬಿಡುತ್ತಿದೆ. ಬಳ್ಳಾರಿ, ಹುಬ್ಬಳ್ಳಿ, ದಾವಣಗೆರೆ, ಗುಲಬರ್ಗಾ, ಶಿವಮೊಗ್ಗ ಕಡೆ ಬಸ್ ವ್ಯವಸ್ಥೆ ಮಾಡಲಾಗಿದೆ.
ದಾವಣಗೆರೆ: ” ಹಿಂದುಳಿದ ವರ್ಗಗಳ ಆಯೋಗದ ಜಾತಿ ಗಣತಿ ವರದಿಯು ಹಲವು ನ್ಯೂನತೆಗಳಿಂದ ಕೂಡಿದೆ. ಯಾವುದೇ ಕಾರಣಕ್ಕೂ ಈಗಿನ ವರದಿ ಒಪ್ಪುವುದಿಲ್ಲ ” ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಹಾಗೂ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ತಮ್ಮದೇ ಸರಕಾರದ ವಿರುದ್ಧ ಸಿಡಿಮಿಡಿಗೊಂಡರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸಮುದಾಯದ ಮನೆ ಮನೆಗೂ ಹೋಗಿ ಸಮೀಕ್ಷೆ ಮಾಡಿಲ್ಲ. ಮನೆಯಲ್ಲೇ ಕುಳಿತು ವರದಿ ಸಿದ್ಧಪಡಿಸಲಾಗಿದೆ ಎಂದು ಆರೋಪಿಸಿದರು. ” ಸಮೀಕ್ಷೆಯಲ್ಲಿ ವೀರಶೈವ ಲಿಂಗಾಯಿತ ಸಮುದಾಯದ ಜನಸಂಖ್ಯೆಯನ್ನು ಕಡಿಮೆ ತೋರಿಸಲಾಗಿದೆ. ಇದರಿಂದ ಸಮಾಜಕ್ಕೆ ತೀವ್ರ ಸ್ವರೂಪದ ನಷ್ಟವಾಗಲಿದೆ. ಜನಗಣತಿಯ ಅಂಕಿ – ಅಂಶಗಳಲ್ಲಿ ಸಾಕಷ್ಟು ಲೋಪದೋಷಗಳಿವೆ. ಹೀಗಾಗಿ, ಮತ್ತೊಮ್ಮೆ ವೈಜ್ಞಾನಿಕವಾಗಿ ಸಮೀಕ್ಷೆ ಮಾಡಿಸಬೇಕು,” ಎಂದು ಆಗ್ರಹಿಸಿದರು. ”ವೀರಶೈವ ಲಿಂಗಾಯಿತ ಸಮುದಾಯವು ಎಲ್ಲರ ಒಳಿತನ್ನೂ ಬಯಸುತ್ತದೆ. ನಾವು ಜಾತಿ ಗಣತಿಯ ವಿರೋಧಿಗಳಲ್ಲ. https://ainlivenews.com/knee-pain-treatment-joint-pain-treatment/ ಆದರೆ, ಯಾವುದೇ ವರದಿ ವೈಜ್ಞಾನಿಕವಾಗಿರಬೇಕು ಎಂಬುದು ನಮ್ಮ ಒತ್ತಾಯ. ಈಗಾಗಲೇ 8 ವರ್ಷದಷ್ಟು ಹಳೆಯದಾಗಿರುವ ವರದಿಯು ಹಲವು…
ಬೆಂಗಳೂರು:- ಪ್ರಯಾಣಿಕರಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್ ನೀಡಿದೆ. ಕ್ಯೂಆರ್ ಕೋಡ್ ಮೂಲಕ ಹೆಚ್ಚಿನ ಟಿಕೆಟ್ ಖರೀದಿಗೆ ಅವಕಾಶ ಕಲ್ಪಿಸಿದೆ. ಪ್ರಯಾಣಿಕರಿಂದ ಬೇಡಿಕೆ ಬಂದ ಹಿನ್ನೆಲೆ ನ. 16ರಿಂದ ಏಕಕಾಲಕ್ಕೆ 6 ಕ್ಯೂಆರ್ ಕೋಡ್ ಟಿಕೇಟ್ ಖರೀದಿಸುವ ವ್ಯವಸ್ಥೆ ಮಾಡಲಾಗಿದೆ. ನಮ್ಮ ಮೆಟ್ರೋ ಆಯಪ್, ವಾಟ್ಸಾಪ್, ಪೇಟಿಎಂ, ಯಾತ್ರಾ ಆಯಪ್ ಗಳಲ್ಲಿ ಕ್ಯೂಆರ್ ಕೋಡ್ ಮೂಲಕ ಪ್ರಸ್ತುತ ಒಂದು ಟಿಕೆಟ್ ಖರೀದಿಗೆ ಮಾತ್ರ ಅವಕಾಶ ಇತ್ತು. ಪ್ರಯಾಣಿಕರ ಬೇಡಿಕೆ ಹಿನ್ನೆಲೆಯಲ್ಲಿ ಈ ಅಪ್ಡೇಟ್ ಮಾಡಲಾಗಿದೆ. ಪ್ರಯಾಣಿಕರು ಪ್ರವೇಶ ಮತ್ತು ನಿರ್ಗಮನದ ಸಂದರ್ಭದಲ್ಲಿ ಎಫ್.ಸಿ. ಗೇಟ್ ಬಳಿ ಆರು ಜನ ಪ್ರಯಾಣಿಕರಿಗೆ ಒಂದೇ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಬಹುದು. ಇದರಿಂದಾಗಿ ಟಿಕೆಟ್ ಕೌಂಟರ್ ನಲ್ಲಿ ಸರತಿ ಸಾಲು ನಿಯಂತ್ರಿಸಲು ತಪ್ಪುತ್ತದೆ. ಇನ್ನೂ ಕ್ಯೂಆರ್ ಕೋಡ್ ಟಿಕೆಟ್ ಮೇಲೆ ಶೇ. 5 ರಷ್ಟು BMRCL ರಿಯಾಯಿತಿ ನೀಡಿದೆ.
ಚಾಮರಾಜನಗರ:- ಬಿ.ವೈ ವಿಜಯೇಂದ್ರ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಹಿನ್ನಲೆ ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಯಡಿಯೂರಪ್ಪ ಆಯ್ಕೆಯಾದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಚಾಮರಾಜನಗರ ಜಿಲ್ಲಾ ಕೇಂದ್ರದ ಭುವನೇಶ್ವರಿ ವೃತ್ತದಲ್ಲಿ ಪಟಾಕಿ ಸಿಡಿಸಿ,ಸಿಹಿ ವಿತರಿಸಿ ಸಂಭ್ರಮಿಸಿದ್ದಾರೆ. ವೀರಶೈವ ಮಹಾಸಭಾದ ಜಿಲ್ಲಾ ಅಧ್ಯಕ್ಷ ಮೂಡ್ಲೂಪುರ ನಂದೀಶ್ ನೇತೃತ್ವದಲ್ಲಿ ಅಭಿಮಾನಿಗಳಿಂದ ಸಂಭ್ರಮ ಮನೆ ಮಾಡಿದೆ. ನೂತನ ಅಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಮಾಜಿ ಸಿ.ಎಂ ಯಡಿಯೂರಪ್ಪಗೆ ಜೈಕಾರ ಘೋಷಣೆ ಮೊಳಗಿದೆ. ಮಾಜಿ ಸಿ.ಎಂ.ಬಿಸವೈ ಹಾಗೂ ವಿಜಯೇಂದ್ರ ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ಗದಗ: ರಾಜ್ಯದಲ್ಲಿ ಬರ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಪರಿಹಾರ ಸಿಗದೆ ಇರುವ ಹಿನ್ನೆಲೆಯಲ್ಲಿ ಕೇಂದ್ರದ ನಡೆಗೆ ಸಚಿವ ಸಂಪುಟದಲ್ಲಿ ಖಂಡನೆ ವ್ಯಕ್ತಪಡಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ ಪಾಟೀಲ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಬರ ಪರಿಹಾರದ ಬಗ್ಗೆ ಕ್ಯಾಬಿನೆಟ್ ಸಭೆಯಲ್ಲಿ ವಿಸ್ತೃತ ವಾಗಿ ಚರ್ಚೆ ಮಾಡಿದ್ವಿ. ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ ಮಾಡಿದ್ದೆವು. ಆದರೆ ಇದುವರೆಗೂ ಕೇಂದ್ರ ಸರ್ಕಾರ ನಯಾ ಪೈಸೆ ಬಿಡುಗಡೆ ಮಾಡಿಲ್ಲ. ಇವತ್ತಿನ ಸಭೆಯಲ್ಲಿ ಕೇಂದ್ರ ಸರ್ಕಾರದ ನಡೆ ವಿರುದ್ಧ ಖಂಡನೆ ವ್ಯಕ್ತಪಡಿಸಿದ್ದೀವಿ ಎಂದರು. ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರ ಗಳಲ್ಲಿ ಬರಗಾಲ ಪರಿಹಾರದ ಕೆಲಸಗಳು ಶುರುವಾಗಬೇಕು. ಈಗಾಗಲೇ 700-800 ಕೋಟಿ ಜಿಲ್ಲಾಧಿಕಾರಿ ಗಳ ಅಕೌಂಟ್ ನಲ್ಲಿದೆ. ಬರಗಾಲ ನಿರ್ವಹಣೆಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಸಿಎಂ ಸಚಿವರಿಗೆ ಸೂಚನೆ ನೀಡಿದ್ದಾರೆ ಎಂದರು. https://ainlivenews.com/knee-pain-treatment-joint-pain-treatment/ ಹಣಕಾಸು ರಿಲೀಸ್ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ವಿರೋಧ ಪಕ್ಷಗಳು ಒತ್ತಾಯ ಮಾಡ್ತಿಲ್ಲ.…