ಮಂಡ್ಯ;- ರಾಜ್ಯದಲ್ಲಿ ಮಳೆ ಕೈ ಕೊಟ್ಟ ಹಿನ್ನೆಲೆ, ನಾಲೆ ಬತ್ತಿ ಹೋಗಿದೆ. ನೀರಿನ ಸಮಸ್ಯೆಗೆ ಸಕ್ಕರೆನಾಡಿನ ರೈತರು ಕಂಗಾಲಾಗಿದ್ದಾರೆ. ನೀರಿಲ್ಲದೆ ಬೆಳೆ ಉಳಿಸಿಕೊಳ್ಳಲು ರೈತರಿಂದ ಹರಸಾಹಸ ನಡೆಯುತ್ತಿದ್ದು, ಬೆಳೆದ ಭತ್ತದ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ಮೂಲಕ ಗದ್ದೆಗೆ ನೀರು ಹಾಯಿಸಲಾಗುತ್ತಿದೆ. ಕೊಪ್ಪ ಹೋಬಳಿ ವ್ಯಾಪ್ತಿಯಲ್ಲಿ ಅನ್ನದಾತರು ಟ್ಯಾಂಕರ್ ನೀರಿನ ಮೊರೆ ಹೋಗಿದ್ದಾರೆ. KRS ಡ್ಯಾಂ ಅಚ್ಚುಕಟ್ಟು ಪ್ರದೇಶದ ಕಡೇ ಭಾಗ ಕೊಪ್ಪ ಹೋಬಳಿ. ಡ್ಯಾಂನಿಂದ ನಾಲೆಗೆ ನೀರು ಬಿಟ್ಟರೂ ಕೊಪ್ಪ ಹೋಬಳಿ ತಲುಪಬೇಕಾದರೆ 10ರಿಂದ12 ದಿನ ಬೇಕು. ನೀರು ತಲುಪಿ ಎರಡ್ಮೂರು ದಿನದಲ್ಲೇ ನಾಲೆಗಳಿಗೆ ನೀರು ಸ್ಥಗಿತವಾಗಿದೆ. ಕಟ್ಟು ಪದ್ಧತಿಯಂತೆ 15 ದಿನಗಳಿಗೆ ಅಧಿಕಾರಿಗಳು ನೀರು ನಿಲ್ಲಿಸಿದ್ದಾರೆ. ಮತ್ತೊಂದೆಡೆ ಮಳೆಯೂ ಕೈಕೊಟ್ಟಿರೋದ್ರಿಂದ ಬೆಳೆ ಒಣಗುತ್ತಿದೆ. ಸಾಲಸೂಲ ಮಾಡಿ ಬೆಳೆದ ಬೇಳೆಗೆ ಟ್ಯಾಂಕರ್ ನಿಂದ ನೀರು ಪೂರೈಕೆ ಮಾಡಲಾಗುತ್ತಿದೆ. ಮಹರ್ನಾವಮಿ ದೊಡ್ಡಿ,ಗುಡಿದೊಡ್ಡಿ ಗ್ರಾಮದಲ್ಲಿ ಟ್ಯಾಂಕರ್ ಮೂಲಕ ಬೆಳೆಗೆ ನೀರು ಪೂರೈಕೆ ಮಾಡಲಾಗುತ್ತಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೊಪ್ಪ ಹೋಬಳಿ…
Author: AIN Author
ಜೈಲರ್ ಸಿನಿಮಾದ ಯಶಸ್ಸಿನ ನಂತರ ತಮಿಳಿನಲ್ಲಿ ಶಿವರಾಜ್ ಕುಮಾರ್ (Shivaraj Kumar) ಬೇಡಿಕೆ ಹೆಚ್ಚಾಗಿದೆ. ಜೈಲರ್ ಸಿನಿಮಾದ ಜೊತೆ ಜೊತೆಗೆ ಕ್ಯಾಪ್ಟನ್ ಮಿಲ್ಲರ್ ಸಿನಿಮಾದಲ್ಲಿ ಶಿವಣ್ಣ ನಟಿಸಿದ್ದರು. ಇದೀಗ ಕಮಲ್ ಹಾಸನ್ ನಟನೆಯ ಹೊಸ ಸಿನಿಮಾದಲ್ಲೂ ಶಿವರಾಜ್ ಕುಮಾರ್ ಪಾತ್ರ ಮಾಡಲಿದ್ದಾರಂತೆ. ಈಗಾಗಲೇ ಶಿವಣ್ಣ ಜೊತೆ ಮಾತುಕತೆ ಕೂಡ ನಡೆದಿದೆ ಎನ್ನುವ ಸುದ್ದಿಯಿದೆ. ಶಿವರಾಜ್ ಕುಮಾರ್ ಒಪ್ಪಿಕೊಂಡಿದ್ದಾರೆ ಎನ್ನಲಾದ ಸಿನಿಮಾ ವಿಶೇಷವಾಗಿದೆ. ನಿರ್ದೇಶಕ ಮಣಿರತ್ನಂ (Mani Ratnam) ಮತ್ತು ಕಮಲ್ ಹಾಸನ್ (Kamal Haasan) ‘ನಾಯಗನ್’ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಆನಂತರ ಈ ಜೋಡಿ ಮತ್ತೆ ಒಟ್ಟಾಗಿ ಕೆಲಸ ಮಾಡಲೇ ಇಲ್ಲ. ಇದೀಗ ಮೂರುವರೆ ದಶಕದ ಬಳಿಕ ಮತ್ತೆ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿನಿಮಾ ಶುರುವಾಗುವುದಕ್ಕೆ ಇನ್ನೂ ಹಲವು ತಿಂಗಳು ಬೇಕು. ಅದಕ್ಕೂ ಮುನ್ನ ಅನೇಕ ವಿಷಯಗಳು ಹೊರ ಬಂದಿವೆ. ಈ ಸಿನಿಮಾದಲ್ಲಿ ಸ್ಟಾರ್ ನಟರೇ ದಂಡೇ ಇರಲಿದ್ದು, ತ್ರಿಷಾ (Trisha) ನಾಯಕಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.…
ನವದೆಹಲಿ : ವಿರೋಧ ಪಕ್ಷಗಳ ನಾಯಕರ ಐಫೋನ್‌ಗೆ ಹ್ಯಾಕಿಂಗ್ (iPhone Hack) ಸಂದೇಶ ಬಂದಿರುವ ತಾಂತ್ರಿಕ ಸ್ವರೂಪವನ್ನು ಗಮನದಲ್ಲಿಟ್ಟುಕೊಂಡು ಕೆಲವು ಏಜೆನ್ಸಿಗಳು ಮತ್ತು ಕಾನೂನು ಜಾರಿ ಸಂಸ್ಥೆಗಳಿಗೆ ಈ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ (Ashwini Vaishnav) ಹೇಳಿದ್ದಾರೆ. ವಿಪಕ್ಷಗಳ ಆರೋಪದ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೆಲವು ಸಂಸದರು ಆಪಲ್‌ನಿಂದ ಎಚ್ಚರಿಕೆ ಸಂದೇಶ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಈ ವಿಷಯದ ಬಗ್ಗೆ ಸರ್ಕಾರಕ್ಕೆ ಕಾಳಜಿ ಇದೆ. ಆ್ಯಪಲ್ (Apple) ಭಾರತದಲ್ಲಿ ಮಾತ್ರ ಇಂತಹ ಸಂದೇಶ ಕಳುಹಿಸಿಲ್ಲ ಬದಲಿಗೆ ಸುಮಾರು 150 ದೇಶಗಳ ಜನರಿಗೆ ಎಚ್ಚರಿಕೆ ಸೂಚನೆಗಳನ್ನು ಕಳುಹಿಸಿದೆ. ಈ ನಡುವೆ ಐಫೋನ್ ಹ್ಯಾಕ್ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಆ್ಯಪಲ್ ಸ್ಪಷ್ಟೀಕರಣವನ್ನು ನೀಡಿದೆ ಎಂದರು. ಸರ್ಕಾರದ ವಿರುದ್ಧ ಆರೋಪ ಮಾಡಿದ ಸಂಸದರ ವಿರುದ್ಧ ವಾಗ್ದಾಳಿ ನಡೆಸಿದ ವೈಷ್ಣವ್, ದೇಶದ ಪ್ರಗತಿಯನ್ನು ನೋಡಲು ಬಯಸದ ಜನರು ಇಂತಹ ರಾಜಕೀಯದಲ್ಲಿ ತೊಡಗಿದ್ದಾರೆ.…
ಎಸ್.ಟಿ.ಸೋಮಶೇಖರ್ ನಿರ್ಮಿಸಿ ಗೊರವಾಲೆ ಮಹೇಶ್ ನಿರ್ದೇಶನ ಮಾಡಿರುವ ಗ್ರಾಮೀಣ ಭಾಗದ ಸೊಗಡಿನ ಕಥೆ ಹೇಳುವ ‘ನಾ ಕೋಳಿಕೆ ರಂಗ ಇದೇ 10 ರಂದು ಬಿಡುಗಡೆ ಕಾಣುತ್ತಿದೆ. ಮಾಸ್ಟರ್ ಆನಂದ್ ಖ್ಯಾತಿಯ ಆನಂದ್ ಹಾಗೂ ರಾಜೇಶ್ವರಿ ಮುಖ್ಯ ಪಾತ್ರದಲ್ಲಿರುವ ಈ ಚಿತ್ರದಲ್ಲಿ ಹೆಚ್ಚಿನ ಸಂಖ್ಯೆಯ ಕಾಮಿಡಿ ಕಿಲಾಡಿ ಕಲಾವಿದರು ನಟಿಸಿರುವುದು ವಿಶೇಷ. ಸೋಮವಾರ ನಡೆದ ಚಿತ್ರದ ಬಿಡುಗಡೆ ಪೂರ್ವ ಸುದ್ದಿಗೋಷ್ಠಿಯಲ್ಲಿ ಚಿತ್ರತಂಡ ಅತ್ಯುತ್ಸಾಹದಿಂದ ಪಾಲ್ಗೊಂಡು ವಿವರಗಳನ್ನು ನೀಡಿತು. ಇದು ಕೊರೊನಾ ಸಂಕಷ್ಟಗಳನ್ನು ಎದುರಿಸಿ ನಿಂತಿರುವ ಚಿತ್ರ. ಹಾಗಾಗಿ ಬಿಡುಗಡೆ ಕಾಣುವುದು ತಡವಾಗಿದೆ. ಆದರೂ ಚಿತ್ರ ಗೆಲುವು ಕಾಣುವ ಬಗ್ಗೆ ನಮಗೆ ಯಾವುದೇ ಸಂಶಯವಿಲ್ಲ. ಏಕೆಂದರೆ ಚಿತ್ರ ಎಲ್ಲಿಯೂ ಕೂಡ ಬೋರ್ ಎನಿಸುವುದಿಲ್ಲ ಎಂದರು ನಿರ್ಮಾಪಕ ಎಸ್.ಟಿ.ಸೋಮಶೇಖರ್. ನನಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಬಗ್ಗೆ ಅತೀವವಾದ ಗೌರವವಿತ್ತು. ಹಾಗಾಗಿ ಅವರ ಬಗ್ಗೆ ಹಠ ತೊಟ್ಟು ಹಾಡು ಮಾಡಿದೆವು. ಕೈಲಾಸ್ ಖೇರ್ ಹಾಡಿರುವ ಆ ಹಾಡು ಅತ್ಯುತ್ತಮ ವಾಗಿ ಮೂಡಿ ಬಂದಿದೆ ಮಾತ್ರವಲ್ಲ; ಈಗಾಗಲೇ ಜನಮನ…
ನಮ್ಮ ಆರೋಗ್ಯ ನಮ್ಮ ಕೈಯಲ್ಲಿಯೇ ಇದೆ. ಹೌದು ನಾವು ಆರೋಗ್ಯದ ಬಗ್ಗೆ ಹೆಚ್ಚಿನ ಗಮನವಹಿಸಬೇಕು.ಆರೋಗ್ಯ ಹಾಗೂ ನಮ್ಮ ಸೌದರ್ಯದ ವೃದ್ದಿಗೆ ಕೂಡ ಸಹಾಯಕ. https://ainlivenews.com/would-you-be-shocked-to-know-the-benefits-of-drinking-ginger-tea/ ಹೌದು,ಆಮ್ಲಾದಲ್ಲಿ ನಮ್ಮ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳು ಸಮೃದ್ಧಿಯಾಗಿರುತ್ತದೆ.ಇದರಿಂದ ನಮ್ಮ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳಿವೆ. ಹಾಗಾದರೆ ಯಾವವು ಎನ್ನುವುದನ್ನು ತಿಳಿಯಲು ಮುಂದೆ ಓದಿ.. ಆಮ್ಲಾ ಜ್ಯೂಸ್ ಕುಡಿಯುವುದರಿಂದಾಗುವ ಪ್ರಯೋಜನಗಳು ಮೊಡವೆಗಳನ್ನು ತಡೆಯುತ್ತದೆ ಹಾನಿಗೊಳಗಾದ ಅಂಗಾಂಶ ಸುಧಾರಣೆ ವಯಸ್ಸಾದ ಚಿಹ್ನೆಗಳ ವಿರುದ್ಧ ಹೋರಾಡುತ್ತದೆ ಮೈಬಣ್ಣವನ್ನು ಹೆಚ್ಚಿಸುತ್ತದೆ ತಲೆಹೊಟ್ಟು ಮತ್ತು ತುರಿಕೆಯನ್ನು ಕಡಿಮೆ ಮಾಡುತ್ತದೆ ಆಮ್ಲ ಜ್ಯೂಸ್‌ನ್ನು ಸೇವಿಸುವುದರಿಂದ ಉತ್ತಮ ಆರೋಗ್ಯದ ಜೊತೆ ಸೌದರ್ಯಕ್ಕೂ ಕೂಡ ಇದು ಪ್ರಯೋಜಕಾರಿ. ನಾವು ಇದನ್ನು ಜ್ಯೂಸ್, ಪೌಡರ್ ಅಥವಾ ಹಸಿಯಾಗಿ ಸೇವಿಸಿದರೂ, ಆಮ್ಲಾ ಉತ್ತಮ ಪ್ರಯೋಜನಗಳನ್ನು ನೀಡುತ್ತದೆ.
ಹಾವೇರಿ: ಭ್ರಷ್ಟಾಚಾರದ ಆರೋಪ ಕೇಳಿಬಂದಿರುವ ಬಿಬಿಎಂಪಿ ಪ್ರಧಾನ ಎಂಜಿನಿಯರ್ ಪ್ರಹ್ಲಾದ್ ಮತ್ತು ಆರೋಪ ಮಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಇಬ್ಬರನ್ನೂ ಬಂಧಿಸಬೇಕು ಎಂದು ಮಾಜಿ ಉಪಮುಖ್ಮಂತ್ರಿ ಕೆಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇಬ್ಬರನ್ನು ಬಂಧಿಸಿದರೆ ಅವರು ಬಾಯಿ ಬಿಡುತ್ತಾರೆ. ಯಾರು ಯಾರ ಹೆಸರಿನಲ್ಲಿ ಎಷ್ಟೆಷ್ಟು ಸಂಗ್ರಹ ಮಾಡಿದ್ದಾರೆ ಎಂಬುದು ತಿಳಿಯುತ್ತೆ ಎಂದು ಈಶ್ವರಪ್ಪ ಕುಟುಕಿದರು. https://ainlivenews.com/suprem-ray-healing-center-reiki/ ಡಿಸಿಎಂ ಡಿಕೆ ಶಿವಕುಮಾರಗೆ ಎಷ್ಟು ಹಣ ಕೊಟ್ಟಿದ್ದಾರೆ ಎಂದು ಕೆಂಪಣ್ಣ ನೇರವಾಗಿ ಆರೋಪ ಮಾಡಿದ್ದಾರೆ. ಈ ಕುರಿತಂತೆ ಪತ್ರಿಕೆಗಳಲ್ಲಿ ವರದಿ ಸಹ ಆಗಿದೆ. ಇದಕ್ಕಿಂತ ಬೇರೆ ದಾಖಲಾತಿಗಳು ಬೇಕೆ ಎಂದು ಪ್ರಶ್ನಿಸಿದರು. ಇವರಿಬ್ಬರನ್ನು ಬಂಧಿಸಿದರೆ ಭ್ರಷ್ಟಾಚಾರದಲ್ಲಿ ಯಾರು ಯಾರು ಇದ್ದಾರೆ ಎಂಬುದು ತಿಳಿಯಲಿದೆ ಎಂದು ಈಶ್ವರಪ್ಪ ಆಗ್ರಹಿಸಿದರು. ಕೆಂಪಣ್ಣ ಮುನಿರತ್ನ ಮೇಲೆ ಆರೋಪ ಮಾಡಿದ ವೇಳೆ ಮುನಿರತ್ನ ಅವರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಇಲ್ಲಿ ಕೆಂಪಣ್ಣ ಬಹಿರಂಗವಾಗಿ ಅಧಿಕಾರಿ ಮತ್ತು ಡಿಸಿಎಂ ಶಿವಕುಮಾರ್ ಹೆಸರಿನಲ್ಲಿ ಬಹಿರಂಗ ಮಾಡಿರುವುದರಿಂದ ತನಿಖೆ ಮಾಡಿ…
ಬೆಂಗಳೂರು;- ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆಯಿಂದಾಗಿ ಬಾಣಸವಾಡಿ ಬಳಿಯ ಲಿಂಗರಾಜಪುರಂ ಫ್ಲೈ ಓವರ್ ಕೆಳಗಿನ ಅಂಡರ್ ಪಾಸ್ ಜಲಾವೃತವಾಗಿದೆ. ಫ್ರೆಜರ್ ಟೌನ್ ನಿಂದ ಹೆಣ್ಣೂರು ಮುಖ್ಯರಸ್ತೆಯಲ್ಲಿ ಬರುವ ಮೇಲ್ಸೇತುವೆ ಅಂಡರ್ ಪಾಸ್ ಜಲಾವೃತ ಆದ ಹಿನ್ನೆಲೆ ವಾಹನ ಸವಾರರ ಪರದಾಟ ನಡೆಸಿರುವ ದೃಶ್ಯ ಸೆರೆಯಾಗಿದೆ. ಅಲ್ಲದೇ ನಿನ್ನೆ ಸುರಿದ ಧಾರಾಕಾರ ಮಳೆಗೆ ಸಿಲಿಕಾನ್ ಸಿಟಿ ಮಂದಿ ಅಕ್ಷರಶಃ ನಲುಗಿ ಹೋಗಿದ್ದಾರೆ.
ಕನ್ನಡದ ‘ಗಿಲ್ಲಿ’ (Gilli Film) ನಟಿ ರಾಕುಲ್ ಪ್ರೀತ್ ಸಿಂಗ್ (Rakul Preet Singh) ಅವರು ಈಗ ಸೌತ್- ಬಾಲಿವುಡ್‌ನಲ್ಲಿ ಜನಪ್ರಿಯ ನಟಿಯರಲ್ಲಿ ಒಬ್ಬರಾಗಿ ಹೈಲೆಟ್ ಆಗಿದ್ದಾರೆ. ಸದ್ಯ ಎದೆಯ ಗೀಟು ಕಾಣುವಂತೆ ಬೋಲ್ಡ್ ಆಗಿ ರಾಕುಲ್ ಫೋಟೋಶೂಟ್ ಮಾಡಿಸಿದ್ದಾರೆ. ನಟಿಯ ನಯಾ ಲುಕ್ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕಪ್ಪು ಬಣ್ಣ ಧಿರಿಸಿನಲ್ಲಿ ರಾಕುಲ್ ಪ್ರೀತ್ ಸಿಂಗ್ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಎದೆಯ ಗೀಟು ಕಾಣುವಂತೆ ಪೋಸ್ ಕೊಟ್ಟಿರೋ ನಟಿಯೇ ಮೈ ತುಂಬಾ ಬಟ್ಟೆ ಹಾಕಿ ಅಂತೆಲ್ಲಾ ಬಗೆ ಬಗೆಯ ಕಾಮೆಂಟ್ ಹರಿದು ಬರುತ್ತಿದೆ. ಇನ್ನೂ ಸಿನಿಮಾಗಳ ಆಫರ್ ಇದ್ರೂ ಚಿತ್ರದ ಸಕ್ಸಸ್‌ಗಾಗಿ ಒಂದೊಳ್ಳೆಯ ಬ್ರೇಕ್‌ಗಾಗಿ ರಾಕುಲ್ ಕಾಯ್ತಿದ್ದಾರೆ. ಕಮಲ್ ಹಾಸನ್ ನಟನೆಯ ‘ಇಂಡಿಯನ್ 2’ನಲ್ಲಿ ರಾಕುಲ್ ನಟಿಸಿದ್ದಾರೆ. ಚಿತ್ರದ ಮೊದಲ ಗ್ಲಿಂಪ್ಸ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯ್ತು. ಕಮಲ್ ಹಾಸನ್, ಕಾಜಲ್, ರಾಕುಲ್ ಸೇರಿದಂತೆ ಸಿನಿಮಾದಲ್ಲಿ ಸ್ಟಾರ್ ಕಲಾವಿದರ ದಂಡೇಯಿದೆ. ಎಸ್. ಶಂಕರ್ ನಿರ್ದೇಶನದಲ್ಲಿ ಸಿನಿಮಾ ಮೂಡಿ…
ಬೆಂಗಳೂರು;- ರಾಜಧಾನಿ ಬೆಂಗಳೂರಿನ ವಿವಿಧೆಡೆ ನಿನ್ನೆ ರಾತ್ರಿ ಹಲವು ಗಂಟೆಗಳ ಕಾಲ ನಿರಂತರವಾಗಿ ಮಳೆ ಸುರಿದ ಹಿನ್ನೆಲೆಯಲ್ಲಿ ತಡರಾತ್ರಿ ಬಿಬಿಎಂಪಿಯ ವಾರ್ ರೂಂಗೆ ಉಪ ಮುಖ್ಯಮಂತ್ರಿ ಶ್ರೀ ಡಿ ಕೆ ಶಿವಕುಮಾರ್* ಅವರು ಭೇಟಿ ನೀಡಿದರು. ಮಳೆಯಿಂದಾಗಿ ನಗರದ ವಿವಿಧ ಭಾಗಗಳಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ಪರಿಶೀಲಿಸಿ, ವಾರ್ ರೂಮ್ ಗೆ ಬಂದ ಕರೆ ಸ್ವೀಕರಿಸಿ ಮಾತನಾಡಿದರು. ಬಿಬಿಎಂಪಿ ಕೇಂದ್ರ ಕಚೇರಿಯ ಕಂಟ್ರೋಲ್ ರೂಂ, ಇಂಟಿಗ್ರೇಟೆಡ್ ಕಮಾಂಡ್ ಸೆಂಟರ್ ಗಳಿಗೆ ಭೇಟಿ ನೀಡಿ ಮಳೆಯಿಂದ ಉಂಟಾದ ಅನಾಹುತಗಳ ಪರಿವೀಕ್ಷಣೆ ಮಾಡಿದರು. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಸೇರಿದಂತೆ ಹಿರಿಯ ಅಧಿಕಾರಿಗಳು, ವಿಪತ್ತು ನಿರ್ವಹಣಾ ಕೇಂದ್ರದ ಅಧಿಕಾರಿಗಳು ಉಪಸ್ಥಿತರಿದ್ದು, ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಿದರು. 8 ವಲಯಗಳ ಆಯುಕ್ತರು, ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು ಆಯಾ ವಲಯಗಳಲ್ಲಿ ನಿನ್ನೆ ರಾತ್ರಿಯಿಂದ ಇಂದು ಬೆಳಗಿನವರೆಗೆ ಕಾರ್ಯನಿರ್ವಹಿಸಿ, ಮಳೆಯಿಂದಾದ ಅನಾಹುತಗಳನ್ನು ಪರಿವೀಕ್ಷಿಸಿದರು. ಅಧಿಕಾರಿಗಳಿಂದ ಮಾಹಿತಿ ಪಡೆದು ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಇಂಜಿನಿಯರ್ಗಳು ಹಾಗೂ…
ಬೆಂಗಳೂರು;- ಮಾಜಿ ಸಚಿವ ಡಿಬಿ ಚಂದ್ರೇಗೌಡರ ನಿಧನಕ್ಕೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ BSY, ಹಿರಿಯ ನಾಯಕ, ಮಾಜಿ ಸಚಿವ, ರಾಜಕೀಯ ಮುತ್ಸದ್ಧಿ ಶ್ರೀ ಡಿ.ಬಿ.ಚಂದ್ರೇಗೌಡ ಅವರು ವಿಧಿವಶರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಛಾಪನ್ನು ಮೂಡಿಸಿದ್ದ ಅವರು ಶಾಸಕರಾಗಿ, ಸಂಸದರಾಗಿ, ರಾಜ್ಯಸಭಾ ಸದಸ್ಯರಾಗಿ, ಕಾನೂನು ಸಚಿವರಾಗಿ ಅಪಾರ ಸೇವೆ ಸಲ್ಲಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ, ಅವರ ಕುಟುಂಬದವರಲ್ಲಿ, ಅಭಿಮಾನಿಗಳಲ್ಲಿ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ. ವೈಯಕ್ತಿಕವಾಗಿ ಆತ್ಮೀಯ ಒಡನಾಡಿ ಒಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಪ್ರಾರ್ಥಿಸುತ್ತಾ, ಕುಟುಂಬದವರಲ್ಲಿ ಸಂತಾಪ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.