Author: AIN Author

ಮಂಡ್ಯ :- ಮುಂಬರುವ 2028 ರ ವಿಧಾನ ಸಭಾ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದ ಜೆಡಿಎಸ್ ಪಕ್ಷದ ನಾನೇ ಅಭ್ಯರ್ಥಿಯಾಗಿ ನಾನೇ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಶನಿವಾರ ಹೇಳಿದರು. https://ainlivenews.com/siddaramaiah-first-among-the-most-corrupt-cms-in-karnataka-janardhana-reddy/ ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಕೆಲವರು ಈಗಾಗಲೇ ಮದ್ದೂರು ಕ್ಷೇತ್ರದಲ್ಲಿ ಹಲವಾರು ಕಡೆ ಡಿ.ಸಿ.ತಮ್ಮಣ್ಣರಿಗೆ ವಯಸ್ಸಾಗಿದೆ ಆದ್ದರಿಂದ ಮುಂದಿನ ಚುನಾವಣೆಯಲ್ಲಿ ನಾನೇ ಎನ್ ಡಿಎ ಅಭ್ಯರ್ಥಿ ಎಂದು ಹೇಳಿಕೊಂಡು ಓಡಾಡುತ್ತಿರುವುದು ನನಗೆ ಬೇಸರ ತಂದಿದೆ ಎಂದು ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ರವರ ವಿರುದ್ಧ ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದರು. ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ 94 ವರ್ಷ ವಯಸ್ಸಾಗಿದ್ದರೂ ಮುಂದೆ ನಡೆಯುವ ಚುನಾವಣೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತೇನೆ ಎಂದಿದ್ದಾರೆ. ಹೀಗಿರುವಾಗ ನಾನು ಏಕೆ ಮತ್ತೆ ಸ್ಪರ್ಧಿಸಬಾರದು. ಇಷ್ಟಕ್ಕೂ ಮೀರಿ ನನ್ನ ಕುಟುಂಬದಲ್ಲೇ ಸ್ಪರ್ಧಿಸಲು ಇಬ್ಬರು ವ್ಯಕ್ತಿಗಳಿದ್ದಾರೆ ಎಂದರು. ಇನ್ನು ಫೆಬ್ರವರಿ 2 ರಂದು ನಡೆಯುವ ಮನ್…

Read More

ಕೊಪ್ಪಳ:- ಕರ್ನಾಟಕದಲ್ಲಿ ಹೆಚ್ಚು ಭ್ರಷ್ಟಾಚಾರ ಮಾಡಿದ ಸಿಎಂಗಳಲ್ಲಿ ಸಿದ್ದರಾಮಯ್ಯ ಫಸ್ಟು ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ. https://ainlivenews.com/a-student-committed-suicide-by-jumping-from-a-college-building-in-bengaluru/ ಈ ಸಂಬಂಧ ಮಾತನಾಡಿದ ಅವರು, ರಾಜ್ಯದಲ್ಲಿ ಅತಿಹೆಚ್ಚು ಭ್ರಷ್ಟಾಚಾರ ಮಾಡಿದ ಮುಖ್ಯಮಂತ್ರಿಗಳು ಅಂದರೆ ಸಿದ್ದರಾಮಯ್ಯನವರು, ಭ್ರಷ್ಟಾಚಾರದಿಂದ ಸಾಕಷ್ಟು ಬೇನಾಮಿ ಆಸ್ತಿಯನ್ನು ಮಾಡಿಕೊಂಡಿದ್ದಾರೆ ಎಂದರು. ಸಿದ್ದರಾಮಯ್ಯ ಹಿಂದುಳಿದ ನಾಯಕ ಎಂದು ಹೇಳಿಕೊಂಡು ಅಧಿಕಾರ ಪಡೆದು ರಾಜ್ಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ. ರಾಜ್ಯದಲ್ಲಿನ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಸಿದ್ದರಾಮಯ್ಯನವರು ಅತಿಹೆಚ್ಚು ಭ್ರಷ್ಟಾಚಾರ ಮಾಡಿದ ಸಿಎಂ ಆಗಿದ್ದಾರೆ. ರಾಜ್ಯದಲ್ಲಿ ಮುಡಾ ಹಗರಣದಲ್ಲಿ ಕೇವಲ 140 ಸೈಟ್‌ಗಳು ಮಾತ್ರವಲ್ಲದೆ ಸಾವಿರಕ್ಕೂ ಅಧಿಕ ಸೈಟ್‌ಗಳನ್ನು ಬೇನಾಮಿ ಆಸ್ತಿಯಾಗಿ ಮಾಡಿಕೊಂಡಿದ್ದಾರೆ. ಮುಡಾದಲ್ಲಿ ಸೈಟ್ ಖರೀದಿ ಮಾಡಿರುವವರನ್ನು ವಿಚಾರಣೆ ಮಾಡಿದರೆ ಸತ್ಯಾಂಶ ಹೊರಬರಲಿದೆ. ಜನರಲ್ಲಿ ಹಿಂದುಳಿದ ನಾಯಕ ಎಂದು ನಂಬಿಕೆಯನ್ನು ಹುಟ್ಟಿಸಿಕೊಂಡು ಮಾಡಿರುವ ಭ್ರಷ್ಟಾಚಾರ ಮುಡಾ ಹಗರಣದಿಂದ ಹೊರ ಬಂದಿದೆ ಎಂದು ಕಿಡಿಕಾರಿದರು.

Read More

ಬೆಂಗಳೂರು:- ಕಾಲೇಜು ಕಟ್ಟಡದಿಂದ ಜಿಗಿದು ಬೆಂಗಳೂರಿನಲ್ಲಿ ವಿದ್ಯಾರ್ಥಿ ಸೂಸೈಡ್ ಮಾಡಿಕೊಂಡ ಘಟನೆ ಜರುಗಿದೆ. https://ainlivenews.com/are-you-waking-up-frequently-if-so-put-this-under-your-pillow/ ನಗರದ ಬಸವನಗುಡಿಯಲ್ಲಿರುವ ಬಿಎಂಎಸ್ ಕಾಲೇಜಿನಲ್ಲಿ ಅವಘಡ ಸಂಭವಿಸಿದೆ. ಆಕರ್ಷ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎನ್ನಲಾಗಿದೆ. 4ನೇ ವರ್ಷದ ಏರೋಸ್ಪೇಸ್ ಓದುತ್ತಿದ್ದರು. ಘಟನಾ ಸ್ಥಳಕ್ಕೆ ಹನುಮಂತನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಅಲ್ಲದೇ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರಿಂದ ತನಿಖೆ ಮುಂದುವರಿದಿದೆ.

Read More

ಸರಿಯಾದ ನಿದ್ದೆಗೆ ಸಲಹೆಗಳು, ರಾತ್ರಿ ಬೇಗ ನಿದ್ದೆ ಮಾಡಬೇಡಿ ಅಥವಾ ಮಧ್ಯದಲ್ಲಿ ನಿದ್ದೆ ಬಿಡಬೇಡಿ, ಇದರಿಂದ ನೀವು ಮಲಗಿದ ನಂತರವೂ ರಿಫ್ರೆಶ್ ಆಗುವುದಿಲ್ಲವೇ? ಈ ಸಮಸ್ಯೆ ಬಹುತೇಕ ಜನರಲ್ಲಿ ಕಂಡುಬರುತ್ತದೆ. ಸರಿಯಾಗಿ ನಿದ್ದೆ ಮಾಡದಿರುವುದು ನಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ, ಆದರೆ ರಾತ್ರಿ ಮಲಗಿದ್ದಾಗ ಪದೆ ಪದೆ ನಿದ್ರೆಯಿಂದ ಏಕೆ ಎಚ್ಚರವಾಗುತ್ತೆ ಎಂದು ನೀವು ಯೋಚಿಸಿದ್ದೀರಾ? ವಾಸ್ತವವಾಗಿ, ಇದರ ಹಿಂದಿನ ಕಾರಣ ನೀವು ಸೇವಿಸುವ ಆಹಾರವಾಗಿರುತ್ತದೆ. https://ainlivenews.com/rape-case-of-minor-lover-sentenced-to-20-years-in-prison/ ನೀವು ರಾತ್ರಿಯಲ್ಲಿ ಇದ್ದಕ್ಕಿದ್ದಂತೆ ಎಚ್ಚರಗೊಂಡರೆ ಅಥವಾ ದುಃಸ್ವಪ್ನವನ್ನು ಕಂಡರೆ, ನೀವು ಕಬ್ಬಿಣದ ವಸ್ತುವನ್ನು ನಿಮ್ಮ ದಿಂಬಿನ ಕೆಳಗಿಟ್ಟು ಮಲಗಿ. ಇದು ದುಃಸ್ವಪ್ನಗಳನ್ನು ದೂರ ಮಾಡಬಹುದು. ನಿದ್ರೆಗೆ ಯಾವುದೇ ತೊಂದರೆಯಾಗುವುದಿಲ್ಲ. ಇದರಿಂದ ನೀವು ದಿನವಿಡೀ ಉತ್ಸಾಹದಿಂದ ಮತ್ತು ಸಕ್ರಿಯವಾಗಿರುತ್ತೀರಿ. ವಿವಿಧ ಕಾಯಿಲೆಗಳಿಂದ ಮುಕ್ತಿ ಹೊಂದಲು ಮನೆಯ ಪೂರ್ವ ದಿಕ್ಕಿಗೆ ತಲೆ ಇಟ್ಟು ಮಲಗಬಹುದು. ನೀವು ದಿಂಬಿನ ಕೆಳಗೆ ನಾಣ್ಯವನ್ನು ಸಹ ಇರಿಸಬಹುದು. ನೀವು ಮಲಗುವ ಕೋಣೆಯಲ್ಲಿ ಗಾಜಿನ ಬಟ್ಟಲಿನಲ್ಲಿ ಕಲ್ಲು ಉಪ್ಪು…

Read More

ಮಡಿಕೇರಿ:- ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಕಾಮುಕನಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆ ವ್ಯಕ್ತಿಯೊಬ್ಬನಿಗೆ ಮಡಿಕೇರಿ ನಗರದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ಕೋರ್ಟ್‌ ದಂಡ ಸಹಿತ 20 ವರ್ಷಗಳ ಕಠಿಣ ಸಜೆ ವಿಧಿಸಿ ತೀರ್ಪು ಪ್ರಕಟಿಸಿದೆ. https://ainlivenews.com/bollywood-actor-saif-ali-khan-stabbing-case-suspected-attacker-arrested/ ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಹರದೂರು ಗ್ರಾಮದ ಎಸ್ಟೇಟ್‌ವೊಂದರ ಲೈನ್ ಮನೆಯಲ್ಲಿ ವಾಸವಿದ್ದ ಎಂ.ವಿ ರಮೇಶ ಎಂಬಾತನೆ ಶಿಕ್ಷೆಗೆ ಗುರಿಯಾಗಿರುವ ಕಾಮುಕ ಎನ್ನಲಾಗಿದೆ. ಪ್ರಕರಣದ ತನಿಖಾಧಿಕಾರಿ ಕುಶಾಲನಗರ ವೃತ್ತದ ಸಿಪಿಐ ಎಂ. ಮಹೇಶ್ ಹಾಗೂ ತನಿಖಾ ಸಹಾಯಕ ಹೆಚ್‌.ಎಸ್ ಲೋಕೇಶ್ ಅವರು 2021ರ ಸೆಪ್ಟಂಬರ್‌ 16 ರಂದು ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು ಆರೋಪಿ ರಮೇಶ್‌ನನ್ನು ದೋಷಿ ಎಂದು ಗುರುತಿಸಿ ಒಟ್ಟು 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ.

Read More

ಮುಂಬೈ:- ಬಾಲಿವುಡ್ ನಟ ಸೈಫ್‌ ಅಲಿ ಖಾನ್‌ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ದಾಳಿಕೋರನನ್ನು ಬಂಧಿಸಲಾಗಿದೆ. https://ainlivenews.com/this-government-is-not-giving-proper-information-to-the-home-minister/ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆ ಕಂಡುಬಂದಿದೆ. ಶಂಕಿತ ದಾಳಿಕೋರನನ್ನ ಛತ್ತಿಸ್‌ಗಢದ ದುರ್ಗ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಆಕಾಶ್‌ ಕೈಲಾಶ್‌ ಕನೋಜಿಯಾ ಬಂಧಿತ ಆರೋಪಿ. ಮುಂಬೈ-ಹೌರಾ ಜ್ಞಾನೇಶ್ವರಿ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿರುವ ಬಗ್ಗೆ ಮುಂಬೈ ಪೊಲೀಸರಿಂದ ಮಾಹಿತಿ ಪಡೆದಿದ್ದ ರೈಲ್ವೆ ಸಂರಕ್ಷಣಾ ಪಡೆ ಅಧಿಕಾರಿಗಳು ಆರೋಪಿಯನ್ನ ದುರ್ಗ್‌ ರೈಲು ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಆತನ ಗುರುತು ಖಚಿತಪಡಿಸಿಕೊಳ್ಳಲು ಮುಂಬೈ ಪೊಲೀಸರು ಒಂದೆರಡು ಗಂಟೆಗಳಲ್ಲೇ ಛತ್ತಿಸ್‌ಗಢದ ದುರ್ಗ್‌ಗೆ ಭೇಟಿ ನೀಡಲಿದ್ದಾರೆ.

Read More

ಬೆಂಗಳೂರು:ಸಿ ಟಿ ರವಿ ವಿಚಾರವಾಗಿ ಛಲವಾದಿ ನಾರಾಯಣಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.ಈ ಪ್ರಕರಣದಲ್ಲಿ ಏನಾಗ್ತಿದೆ ಅಂತ ಗೃಹ ಸಚಿವರು ಯಾವಾಗ್ಲೂ ತಮ್ಮ ಬಳಿ ಮಾಹಿತಿ ಇಲ್ಲ ಅಂತಾರೆ.ಗೃಹ ಸಚಿವರಿಗೆ ಸರಿಯಾದ ಮಾಹಿತಿಯನ್ನೇ ಈ ಸರ್ಕಾರ ಕೊಡ್ತಿಲ್ಲ.ಗೃಹ ಮಂತ್ರಿಯವರನ್ನೇ ಈ ಸರ್ಕಾರ ಕತ್ತಲೆಯಲ್ಲಿ ಇಟ್ಟಿದೆ, ಗೃಹ ಸಚಿವರನ್ನೇ ಮೂಲೆಗೆ ತಳ್ಳಿದೆ ಎಂದರು . https://ainlivenews.com/cancel-the-press-conference-called-for-our-metro-fare-increase/ ಇನ್ನೂ ಆರೆಸೆಸ್, ಬಿಜೆಪಿ ಸಂವಿಧಾನ ವಿರೋಧಿಗಳು ಎಂಬ ಹರಿಪ್ರಸಾದ್ ಹೇಳಿಕೆ ವಿಚಾರವಾಗಿ ಎಲ್ಲಾದರೂ ಸಂವಿಧಾನಕ್ಕೆ ವಿರುದ್ಧವಾಗಿ ಬಿಜೆಪಿ ನಡೆದುಕೊಂಡ ಒಂದೇ ಒಂದು ಘಟನೆ ತೋರಿಸಲಿ. ಮೀಸಲಾತಿ ಪರ, ಸಂವಿಧಾನ ಪರ ಇರೋದು ಬಿಜೆಪಿ.ಕಾಂಗ್ರೆಸ್ ಸಂವಿಧಾನ ವಿರೋಧಿ ಪಕ್ಷ.ರಾಹುಲ್ ಗಾಂಧಿ ಭಾರತದ ವಿರುದ್ಧ ಹೋರಾಟ ಮಾಡ್ತಿದ್ದೇವೆ ಅಂದ್ರು ಹಾಗಾದ್ರೆ ರಾಹುಲ್ ಗಾಂಧಿಯವರನ್ನು ಉಚ್ಛಾಟಿಸಿ ನೋಡೋಣ.ರಾಹುಲ್ ಮಾನಸಿಕ ಸ್ಥಿಮಿತ ಸರಿ ಇದೆಯೇ ಅಂತ ಪ್ರಶ್ನೆ ಮಾಡಿ ನೋಡೋಣ ಎಂದು ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

Read More

ಬೆಂಗಳೂರು:- ಮೆಟ್ರೋ ದರ ಏರಿಕೆ ಸಂಬಂಧ ಕರೆಯಲಾಗಿದ್ದ ಸುದ್ದಿಗೋಷ್ಠಿ ರದ್ದಾಗಿದೆ. ಮೆಟ್ರೋ ದರ ಏರಿಕೆ ಸಂಬಂಧ ಇಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್‌ ಲಿಮಿಟೆಡ್‌ ಕರೆದಿದ್ದ ಸುದ್ದಿಗೋಷ್ಠಿಯನ್ನು ರದ್ದು ಮಾಡಲಾಗಿದೆ. https://ainlivenews.com/important-news-for-bengaluru-commuters-variation-in-our-metro-traffic-tomorrow/ ಸಭೆಯಲ್ಲಿ ದರ ಏರಿಕೆ ಸಂಬಂಧ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಇಂದು ಮಧ್ಯಾಹ್ನ 3 ಗಂಟೆಗೆ ಬಿಎಂಆರ್‌ಸಿಎಲ್‌ ಸುದ್ದಿಗೋಷ್ಠಿ ನಡೆಸಿ ದರ ಏರಿಕೆಯ ಬಗ್ಗೆ ವಿವರಣೆ ನೀಡಬೇಕಿತ್ತು. ಆದರೆ ಬಿಎಂಆರ್‌ಸಿಎಲ್‌ ಕರೆದಿದ್ದ ಸುದ್ದಿಗೋಷ್ಠಿಯನ್ನು ದಿಢೀರ್‌ ರದ್ದು ಮಾಡಿದೆ. ಸುದ್ದಿಗೋಷ್ಠಿ ರದ್ದಿಗೆ ಕಾರಣ ನೀಡಿಲ್ಲ. ದರ ಏರಿಕೆ ಖಚಿತವಾಗಿದ್ದರೂ ಕನಿಷ್ಠ, ಗರಿಷ್ಠದ ಜೊತೆ ಮಧ್ಯದಲ್ಲಿ ಬರುವ ನಿಲ್ದಾಣಗಳಿಗೆ ಎಷ್ಟು ದರ ನಿಗದಿ ಮಾಡಬೇಕು ಎನ್ನುವುದರ ಬಗ್ಗೆ ಗೊಂದಲ ಇರುವ ಕಾರಣ ಸುದ್ದಿಗೋಷ್ಠಿಯನ್ನು ರದ್ದು ಮಾಡಲಾಗಿದೆ ಎನ್ನಲಾಗುತ್ತಿದೆ.

Read More

ಬೆಂಗಳೂರು:- ಬೆಂಗಳೂರು ಪ್ರಯಾಣಿಕರಿಗೆ ಮಹತ್ವದ ಸುದ್ದಿ ಇದ್ದು, ನಾಳೆ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. https://ainlivenews.com/j-bangalore-aero-show-2025-from-23rd-meat-sale-banned-at-yalahanka/ ನಾಳೆ ನೇರಳೆ ಮಾರ್ಗದಲ್ಲಿನ ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ, ಮೆಟ್ರೋ ನಿಲ್ದಾಣಗಳ ನಡುವೆ ಹಳಿ ನಿರ್ವಹಣಾ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಮೆಜೆಸ್ಟಿಕ್ ಮೆಟ್ರೋ ನಿಲ್ದಾಣ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ಬೆಳಗ್ಗೆ 07:00 ರಿಂದ 10.00 ರವರೆಗೆ ಮೂರು ಗಂಟೆಗಳ ಕಾಲ ಮೆಟ್ರೋ ರೈಲು ಸೇವೆ ಇರುವುದಿಲ್ಲ. ನೇರಳೆ ಮಾರ್ಗದ ಇತರ ವಿಭಾಗಗಳಲ್ಲಿ ಬರುವ, ಚಲ್ಲಘಟ್ಟ ಮತ್ತು ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಹಾಗೂ ವೈಟ್‌ ಫೀಲ್ಡ್ (ಕಾಡುಗೋಡಿ) ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ನಿಗದಿತ ವೇಳಾಪಟ್ಟಿಯಂತೆ ರೈಲು ಸೇವೆಗಳು ಎಂದಿನಂತೆ ಬೆಳಗ್ಗೆ 7 ಗಂಟೆಗೆ ಪ್ರಾರಂಭವಾಗುತ್ತವೆ. ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ, ಮೆಟ್ರೋ ನಿಲ್ದಾಣಗಳ ನಡುವೆ ವಾಣಿಜ್ಯ ಸೇವೆ ಭಾಗಶಃ ಸ್ಥಗಿತ ಆಗಲಿದೆ. ಹಸಿರು ಮಾರ್ಗದ ರೈಲು ಸಮಯಗಳಲ್ಲಿ ಯಾವುದೇ ಬದಲಾವಣೆಯಿರುವುದಿಲ್ಲ ಮತ್ತು ಎಂದಿನಂತೆ ಮೆಟ್ರೋ ರೈಲುಗಳ…

Read More

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಏರೋ ಶೋ 2025 ನಡೆಯಲಿರುವ ಹಿನ್ನೆಲೆ, ಜ. 23 ರಿಂದ ಯಲಹಂಕ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ ಮಾಡಲಾಗಿದ್ದು, ಕ್ರೇನ್​ ಸ್ಥಗಿತಕ್ಕೆ ಸೂಚನೆ ಕೊಡಲಾಗಿದೆ. https://ainlivenews.com/muda-case-should-be-handed-over-to-cbi-before-siddaramaiah-resigns/ ಯಲಹಂಕ ವ್ಯಾಪ್ತಿಯ ವಾಯುಸೇನಾ ನೆಲೆಯಲ್ಲಿ ಫೆ.2 ರಿಂದ 14ರವರೆಗೆ ಅಂತರಾಷ್ಟ್ರೀಯ ಮಟ್ಟದ ‘ಏರೋ ಇಂಡಿಯಾ-2025’ ನಡೆಯಲಿದೆ. ಈ ನಿಟ್ಟಿನಲ್ಲಿ ಜನವರಿ 23 ರಿಂದ ಫೆಬ್ರವರಿ 17 ರವರೆಗೂ ಮಾಂಸ ಮಾರಾಟಕ್ಕೆ ಬಿಬಿಎಂಪಿ ನಿಷೇಧಿಸಿದ್ದು, ಕ್ರೇನ್​ಗಳನ್ನು ಬಳಸದಂತೆ ಸೂಚಿಸಲಾಗಿದೆ. ಯಲಹಂಕದ 13 ಕಿ.ಮಿ ಸುತ್ತಮುತ್ತ ಮಾಂಸ ಮಾರಾಟ ಹಾಗೂ ಉದ್ದಿಮೆಗಳನ್ನು ಬಂದ್ ಮಾಡಲು ಸೂಚನೆ ನೀಡಲಾಗಿದೆ. ಒಂದು ವೇಳೆ ನಿಮಯ ಉಲ್ಲಂಘನೆ ಮಾಡಿದರೆ ಬಿಬಿಎಂಪಿ ಕಾಯ್ದೆ 2020 ಮತ್ತು ಏರ್ ಕ್ರಾಫ್ಟ್ ರೂಲ್ಸ್ 1937 ಪ್ರಕಾರ ಕಾನೂನು ಕ್ರಮಕ್ಕೆ ಯಲಹಂಕ ವಲಯ ಜಂಟಿ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಏಷ್ಯಾದ ಪ್ರಮುಖ ಏರೋಸ್ಪೇಸ್ ಮತ್ತು ರಕ್ಷಣಾ ಪ್ರದರ್ಶನವಾದ ಏರೋ ಇಂಡಿಯಾ 2025, ಫೆಬ್ರವರಿ 10 ರಿಂದ 14 ರವರೆಗೆ ಬೆಂಗಳೂರಿನ ಯಲಹಂಕ ವಾಯುಪಡೆ…

Read More