Author: AIN Author

ಬೆಂಗಳೂರು:- ಸಿಟಿ ರವಿ ಆಕ್ಷೇಪಾರ್ಹ ಹೇಳಿಕೆ ಕೇಸ್ ಗೆ ಸಂಬಂಧಿಸಿದಂತೆ ಸಿಎಂ ಪುತ್ರ ಯತೀಂದ್ರಗೆ ಸಿಐಡಿ ನೋಟಿಸ್ ಜಾರಿ ಮಾಡಿದೆ. https://ainlivenews.com/good-news-for-government-employees-from-the-center-green-signal-for-the-8th-pay-commission/ ಅಧಿವೇಶನದಲ್ಲಿ ನಡೆದ ಗಲಾಟೆ ಸಂದರ್ಭದಲ್ಲಿ ಸದನದ ಒಳಗೆ ಯತೀಂದ್ರ ಸಿದ್ದರಾಮಯ್ಯ ಇದ್ದರು ಅನ್ನೋ ಕಾರಣಕ್ಕೆ ನೋಟಿಸ್ ನೀಡಲಾಗಿದೆ. ಸಿಐಡಿ (CID) ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡುವಂತೆ ತಿಳಿಸಿದ್ದಾರೆ. ಇನ್ನೂ ಯತೀಂದ್ರ ಅವರ ಜೊತೆಗೆ ಎಂಎಲ್‌ಸಿ ಡಿಬಿ ಶ್ರೀನಿವಾಸ್ ಅವರು ಇದ್ದ ಕಾರಣಕ್ಕಾಗಿ ಅವರಿಗೂ ಕೂಡ ನೋಟಿಸ್ ನೀಡಿ, ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ.

Read More

ಬೆಂಗಳೂರು/ ನವದೆಹಲಿ: ಸರ್ಕಾರಿ ನೌಕರರಿಗೆ ಗುಡ್​ನ್ಯೂಸ್​ ಸಿಕ್ಕಿದ್ದು, 8ನೇ ವೇತನ ಆಯೋಗಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. https://ainlivenews.com/green-is-thorny-tunge-water-is-poisonous-what-a-change/ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಈ ಒಂದು ನಿರ್ಧಾರವನ್ನು ಕೈಗೊಳ್ಳಲಾಗಿದೆ. ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನ್ ವೈಷ್ಣವ್ 8ನೇ ವೇತನ ಆಯೋಗಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. 7ನೇ ವೇತನ ಆಯೋವನ್ನು 2016 ರಲ್ಲಿ ಅಳವಡಿಸಲಾಗಿತ್ತು. ಸದ್ಯ ಅದರ ಅವಧಿ 2026ಕ್ಕೆ ಮುಗಿಯಲಿದೆ. ಈ ಹಿನ್ನೆಲೆಯಲ್ಲಿ ಈಗ 8ನೇ ವೇತನ ಆಯೋಗಕ್ಕೆ ಅನುಮತಿ ನೀಡಲಾಗಿದೆ ಎಂದು ಹೇಳಿದ್ದಾರೆ. ಈಗ ಒಪ್ಪಿಗೆ ನೀಡಲಾಗಿರುವ 8ನೇ ವೇತನ ಆಯೋಗದ ಫಲಾನುಭವ 2026ರಿಂದ ಸಿಗಲಿದೆ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ದೇಶದಲ್ಲಿ ಒಟ್ಟು ಒಂದು ಕೋಟಿಗೂ ಅಧಿಕ ಜನರು ಕೇಂದ್ರ ಸರ್ಕಾರಿ ನೌಕರರು ಹಾಗೂ ನಿವೃತ್ತಿಗೊಂಡವರು ಇದ್ದಾರೆ. ಕಳೆದ ಹಲವು ವರ್ಷಗಳಿಂದ 8ನೇ ವೇತನ ಆಯೋಗಕ್ಕೆ ಯಾವಾಗ ಒಪ್ಪಿಗೆ ಸಿಗಲಿದೆ ಎಂದು ಕಾಯುತ್ತಿದ್ದರು. ಸದ್ಯ ಅವರ…

Read More

ಕೊಪ್ಪಳ:- ತಾಲ್ಲೂಕಿನ ಮುನಿರಾಬಾದ್‌ನಲ್ಲಿರುವ ತುಂಗಭದ್ರಾ ಜಲಾಶಯದ ನೀರು ಮತ್ತೆ ಹಸಿರು ಬಣ್ಣಕ್ಕೆ ತಿರುಗಿದೆ. ಜಲಾಶಯದ ನೀರು ಈ ರೀತಿ ಪದೇಪದೇ ಹಸಿರು ಬಣ್ಣಕ್ಕೆ ತಿರುಗುತ್ತಿದ್ದರೂ ರಾಜ್ಯ ಸರ್ಕಾರ ಮಾತ್ರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. https://ainlivenews.com/what-will-you-do-if-sir-darshan-comes-to-visit-what-did-renukaswamys-father-say/ ತುಂಗಭದ್ರಾ ನದಿ ಹಸಿರು ವರ್ಣಕ್ಕೆ ತಿರುಗಲು ಆ ಸಕ್ಕರೆ ಕಾರ್ಖಾನೆ ಕಾರಣ ಅಂತ ಜನರು ಕಿಡಿಕಾರಿದ್ದಾರೆ. ತುಂಗೆ ನೀರು ಕುಡಿದ ಜನರು ಹೊಟ್ಟೆ ನೋವಿನಿಂದ ಬಳಲುತ್ತಿದ್ದಾರೆ. ಮುಂಡರಗಿ ತಾಲೂಕು ಕೊರ್ಲಳ್ಳಿ ಬಳಿ ನದಿಯ ನೀರು ಸಂಪೂರ್ಣ ಹಸಿರಾಗಿದೆ. ಹಾಗಾಗಿ ಗದಗ ಜಿಲ್ಲೆಯಲ್ಲಿ ಆತಂಕ ಮನೆ ಮಾಡಿದೆ. ವಿಪರ್ಯಾಸ ಅಂದರೆ, ಕಳೆದ ಒಂದು ವಾರದಿಂದ ನದಿ ನೀರು ಈ ರೀತಿಯ ಬಣ್ಣಕ್ಕೆ ತಿರುಗಿದ್ದು, ಮೊದ ಮೊದಲು, ನದಿ ನೀರು ಪಾಚಿಗಟ್ಟಿರಬಹುದು ಎಂದು ಸುಮ್ಮನಾಗಿದ್ದರು. ಆದರೆ ದಿನಗಳೆದರೂ, ನೀರು ತನ್ನ ಮೊದಲಿನ ಬಣ್ಣಕ್ಕೆ ಹಿಂದಿರುಗಿಲ್ಲ. ನೀರು ಕುಡಿದ ಜನರಿಗೆ ಹೊಟ್ಟೆ ನೋವು ಶುರುವಾಗಿದೆಯಂತೆ. ಇದರಿಂದ ಆತಂಕಗೊಂಡ ನದಿ ಪಾತ್ರದಲ್ಲಿನ ರೈತರು ತಮ್ಮ ದನ, ಕರುಗಳನ್ನ ನದಿಯಲ್ಲಿ ನೀರು ಕುಡಿಸಲು…

Read More

ದರ್ಶನ್ ಭೇಟಿ ಮಾಡಲು ಬಂದರೆ ಒಪ್ಪುತ್ತೀರಾ? ಎಂಬ ಪ್ರಶ್ನೆಗೆ ರೇಣುಕಾಸ್ವಾಮಿ ತಂದೆ ಅವರದ್ದೇ ಆದ ರೀತಿಯಲ್ಲಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. https://ainlivenews.com/congress-government-is-an-anti-hindu-thug-government-mp-renukacharya/ ರೇಣುಕಾಸ್ವಾಮಿ ಕುಟುಂಬದವರನ್ನು ದರ್ಶನ್ ಭೇಟಿ ಮಾಡಬಹುದು ಎಂದು ಸೋಶಿಯಲ್ ಮೀಡಿಯಾದಲ್ಲಿ ವದಂತಿ ಹಬ್ಬಿದೆ. ಆ ಬಗ್ಗೆ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಪ್ರತಿಕ್ರಿಯಿಸಿದ್ದಾರೆ. ‘ಫೇಸ್​ಬುಕ್ ಎಂದರೆ ಏನು ಅಂತ ನಮಗೆ ತಿಳಿದಿಲ್ಲ. ಯಾರೂ ಸುಳ್ಳು ಸುದ್ದಿ ಹಬ್ಬಿಸಬೇಡಿ. ನಮಗೆ ಈಗಾಗಲೇ ನೋವು ಆಗಿದೆ. ದರ್ಶನ್ ಭೇಟಿ ಮಾಡಲು ಬಂದರೆ ಆ ಬಗ್ಗೆ ನಾನು ವೈಯಕ್ತಿಕ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ನಮ್ಮ ಹಿತೈಷಿಗಳು ಹಾಗೂ ಬಂಧುಗಳು ತೀರ್ಮಾನ ಮಾಡುತ್ತಾರೆ’ ಎಂದು ಕಾಶಿನಾಥಯ್ಯ ಹೇಳಿದ್ದಾರೆ

Read More

ದಾವಣಗೆರೆ :ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಕೊಲೆಗಡುಗ ಸರ್ಕಾರ ಎಂದು ದಾವಣಗೆರೆಯಲ್ಲಿ ಸರ್ಕಾರದ ವಿರುದ್ದ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಗುಡುಗಿದರು. https://ainlivenews.com/khaki-break-issue-for-yakshagana-did-bjp-congress-clash-politically/ ತಾಯಿ ಎದೆ ಹಾಲಿನ ನಂತರ ಗೋವಿನ ಹಾಲನ್ನು ಕುಡಿಯುತ್ತೇವೆ.ಅಂತಹ ಗೋವುಗಳಿಗೆ ನೋವುಂಟು ಮಾಡಿದೆ ಈ ಸರ್ಕಾರ.ಈ ಸರ್ಕಾರಕ್ಕೆ ಗೋವಿನ ಶಾಪ ತಟ್ಟಿ ಸರ್ಕಾರ ಪತನವಾಗುತ್ತದೆ. ಗೋವು ನರಳಾಡುವಂತೆ ಮಾಡಲು ಸಿದ್ದರಾಮಯ್ಯ ಜಮೀರ್ ನೇರಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಮೇಶ್ ಜಾರಕಿಹೊಳಿ ಯಾರು ಎನ್ನುವುದು ನಮಗೆ ಗೊತ್ತಿಲ್ಲ.ಬಿಜೆಪಿ ಅಧಿಕಾರಕ್ಕೆ ಬರಲು ಅವರೊಬ್ಬರೇ ಕಾರಣ ಅಲ್ಲ.ಕಾಂಗ್ರೆಸ್ ‌ತೊರೆದು 17 ಜನ ಶಾಸಕರು ಬಿಜೆಪಿ ಬಂದಿದ್ದು ಯಡಿಯೂರಪ್ಪ ಸಿಎಂ ಮಾಡಲು. ಯಡಿಯೂರಪ್ಪ ನವರನ್ನು ಕೆಳಗೆ ಇಳಿಸಿದ್ದಕ್ಕೆ 2013 ರಲ್ಲಿ 66 ಸೀಟ್ ಬಂತು.ರಮೇಶ್ ಜಾರಕಿಹೊಳಿ ನನಗೆ ಅತ್ಮೀಯ ಸ್ನೇಹಿತ ನಾನು ಅವರು ಚನ್ನಾಗಿಯೇ ಇದ್ದೇವೆ.ರಮೇಶ್ ಜಾರಕಿಹೊಳಿ ಹಿಂದೆ ಇರುವವರು ಗುಂಡು ಹಾರಿಸುತ್ತಿದ್ದಾರೆ ಎಂದರು. ರಮೇಶ್ ಜಾರಕಿಹೊಳಿ ರಾಜಕೀಯದಲ್ಲಿ ಕಣ್ಣು ಬಿಡುವುದಿಕ್ಕಿಂತ ಮುಂಚೆ ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು…

Read More

ಉಡುಪಿ:- ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮುಂಡ್ಲಿಯಲ್ಲಿ ಸತ್ಯನಾರಾಯಣ ಪೂಜೆ ಮತ್ತು ಯಕ್ಷಗಾನದ ಟೆಂಟ್ ಗೆ ಮೂರು ಬಾರಿ ನುಗ್ಗಿದ ಪೊಲೀಸರು ಮಾಡಿದ್ದು ಇದನ್ನೇ ಎಂದು ಶಿರ್ಲಾಲು ಗ್ರಾಮಸ್ಥರು ದೂರಿದ್ದಾರೆ. https://ainlivenews.com/daily-daylight-robbery-in-karnataka/ ವಿಚಾರದಲ್ಲಿ ಹೊಸ ತಿರುವು ಪಡೆದಿದೆ. ಕಾಂಗ್ರೆಸ್ ಬಿಜೆಪಿ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಶಿರ್ಲಾಲು ಪಂಚಾಯತ್‌ ವ್ಯಾಪ್ತಿಯ ಮುಂಡ್ಲಿಯಲ್ಲಿ ಸಾರ್ವಜನಿಕರು ಸತ್ಯನಾರಾಯಣ ಪೂಜೆಯನ್ನು ಆಯೋಜಿಸಿದ್ದರು. ರಾತ್ರಿ ಲವಕುಶ ಮತ್ತು ಜಾಂಬವತಿ ಕಲ್ಯಾಣ ಎಂಬ ಕಥಾಭಾಗದ ಯಕ್ಷಗಾನ ಆಯೋಜಿಸಲಾಗಿತ್ತು. ಇದಕ್ಕೆ ಸ್ಥಳೀಯ ಕಾಂಗ್ರೆಸ್ ಗ್ರಾಮ ಪಂಚಾಯತ್ ಸದಸ್ಯ ಅಡ್ಡಿಪಡಿಸಿದ್ದಾರೆ ಗ್ರಾಮಸ್ಥರು ದೂರಿದ್ದರು. ನಂತರ ಪೊಲೀಸರು, ಗ್ರಾಮಸ್ಥರು, ಪೂಜಾ ಸಮಿತಿಯ ಭಕ್ತರ ನಡುವೆ ಜಟಾಪಟಿ ಏರ್ಪಟ್ಟಿತ್ತು. 20ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ತಂಡ ಕಳೆದ ಒಂದು ವರ್ಷದಿಂದ ಯಕ್ಷಗಾನದ ಹೆಜ್ಜೆ, ಪ್ರಸಂಗದ ತಯಾರಿಯನ್ನು ಮಾಡಿಕೊಂಡಿದ್ದರು. ಕಾರ್ಯಕ್ರಮಕ್ಕೆ ಪರವಾನಿಗೆ ಪಡೆಯಲು ಹೋದಾಗ ಪಿಡಿಒ ಮೂರು ದಿನ ರಜೆಯಲ್ಲಿದ್ದರು. ಪೊಲೀಸರು ಪಂಚಾಯತ್ ಪರವಾಗಿಗೆ ಇಲ್ಲದೆ ಮೈಕ್‌ ಹಾಕಲು ನಿರಾಕರಿಸಿದ್ದರು. ಇದರ ಹಿಂದೆ ರಾಜಕೀಯ ಕುತಂತ್ರ…

Read More

ಬೆಂಗಳೂರು:- ಕರ್ನಾಟಕದಲ್ಲಿ ದಿನನಿತ್ಯ ಹಗಲು ದರೋಡೆಯಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಸವರಾಜ್ ಬೊಮ್ಮಾಯಿ ಆಕ್ರೋಶ ಹೊರ ಹಾಕಿದ್ದಾರೆ. https://ainlivenews.com/cabinet-approves-integrated-agricultural-university-in-mandya/ ಈ ಸಂಬಂಧ ಮಾತನಾಡಿದ ಅವರು, ರಾಜ್ಯ ಜಂಗಲ್ ಆಗಿದೆ, ಆಡಳಿತ ನಡೆಸುವವರು ಕುರ್ಚಿಗಾಗಿ ಕಿತ್ತಾಟ ನಡೆಸುವುದರಲ್ಲಿ ನಿರತರಾಗಿದ್ದಾರೆ ಎಂದರು. ರಾಜ್ಯದಲ್ಲಿ ದಿನನಿತ್ಯ ಹಗಲು ದರೋಡೆಯಾಗುತ್ತಿದೆ. ಪುಟ್ಟ ಮಕ್ಕಳ ಮೇಲೆ ಅತ್ಯಾಚಾರದಂತ ಅಪರಾಧ ಕೃತ್ಯಗಳು ರಾಜಾರೋಷವಾಗಿ ನಡೆಯುತ್ತಿದ್ದು, ಅಪರಾಧ ಮಾಡುವವರಿಗೆ ಯಾರದ್ದೂ ಭಯವಿಲ್ಲದಂತಾಗಿದೆ. ಈ ಸರ್ಕಾರದ ಅವಧಿಯಲ್ಲಿ ಮೂಕ ಪ್ರಾಣಿಗಳು, ಮನುಷ್ಯರು, ಯಾರಿಗೂ ರಕ್ಷಣೆ ಇಲ್ಲದಂತಾಗಿದೆ ಎಂದು ಕಿಡಿಕಾರಿದ್ದಾರೆ. ರಾಜ್ಯದಲ್ಲಿ ದಿನನಿತ್ಯ ಹಗಲು ದರೋಡೆ, ಪುಟ್ಟ ಮಕ್ಕಳ ಮೇಲೆ ಅತ್ಯಾಚಾರದಂತ ಅಪರಾಧ ಕೃತ್ಯಗಳು ರಾಜಾರೋಷವಾಗಿ ನಡೆಯುತ್ತಿದ್ದು, ಆಡಳಿತ ನಡೆಸುವವರು ಕುರ್ಚಿಗಾಗಿ ಕಿತ್ತಾಟ ನಡೆಸುವುದರಲ್ಲಿ ನಿರತರಾಗಿದ್ದು, ಸರ್ಕಾರಕ್ಕೆ ಪೊಲೀಸರ ಮೇಲೆ ನಿಯಂತ್ರಣ ಇಲ್ಲದಂತಾಗಿದೆ. ಪೊಲಿಸರಿಗೆ ಕ್ರಿಮಿನಲ್ ಗಳ ಮೇಲೆ ನಿಯಂತ್ರಣ ಇಲ್ಲದಂತಾಗಿದ್ದು, ಅಪರಾಧ ಮಾಡುವವರಿಗೆ ಯಾರ ಭಯವಿಲ್ಲದಂತಾಗಿದೆ. ಇದರಿಂದ ಕರ್ನಾಟಕ ಜಂಗಲ್ ರಾಜ್ಯ ಆಗಿದೆ ಎಂದು ಕಿಡಿಕಾರಿದರು.

Read More

ಮಂಡ್ಯ:- ನೂತನ ಸಮಗ್ರ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಬೇಕೇನ್ನುವ ಬಹುದಿನದ ಕನಸು ನನಸಾಗುವ ಹಂತ ತಲುಪಿದೆ. https://ainlivenews.com/why-do-you-need-a-record-of-violation-of-womens-privacy-high-court-whips-prajwals-lawyer/ ರಾಜ್ಯದಲ್ಲಿ ಮೈಸೂರು ಕಂದಾಯ ವಿಭಾಗದಲ್ಲಿ ಯಾವುದೇ ಕೃಷಿ ಆಧಾರಿತ ವಿಶ್ವವಿದ್ಯಾಲಯಗಳು ಇರದೇ ಇರುವುದರಿಂದ ಪ್ರಸ್ತುತ ಸಮಯದಲ್ಲಿ ಸಮಗ್ರ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸ್ಥಾಪನೆಯಿಂದ ರೈತರ ಅನೇಕ ಸಮಸ್ಯೆಗಳಿಗೆ ವಿಶೇಷವಾಗಿ ಸಣ್ಣ ಮತ್ತು ಅತೀ ಸಣ್ಣರೈತರಿಗೆ ಒಂದೇ ಮೂಲದಿಂದ ಪರಿಹಾರ ದೊರಕಿಸಬೇಕೆಂಬ ಮಹತ್ವಕಾಂಕ್ಷಿ ಕನಸನ್ನ ನನಸಾಗಿಸಿದ್ದು ಕೃಷಿ ಸಚಿವ ಚಲುವರಾಯಸ್ವಾಮಿ ಯವರು ಈಗಾಗಲೇ ರಾಜ್ಯದ ಶಿವಮೊಗ್ಗದಲ್ಲಿ ಸಸ್ಯಾಧಾರಿತ ಕೃಷಿ ವಿಜ್ಞಾನಗಳ ಸಮಗ್ರ ಕೃಷಿ ಹಾಗೂ ತೋಟಗಾರಿಕೆ ವಿಜ್ಞಾನಗಳು ವಿಶ್ವವಿದ್ಯಾಲಯವು 2013 ರಿಂದ ರೈತರ ಆಶೋತ್ತರಗಳಿಗೆ ಪೂರಕವಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಇದೇ ಮಾದರಿಯಲ್ಲೇ ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ ಅತೀ ಅವಶ್ಯವಾಗಿದ್ದು ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಮಂಡ್ಯ ಕೃಷಿ ವಿಶ್ವವಿದ್ಯಾನಿಲಯಕ್ಕೆ ಅನುಮೋದನೆ ದೊರೆತಿದೆ. ನೂತನವಾಗಿ ಪ್ರಾರಂಭಿಸುವ ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಮಂಡ್ಯ ಕೃಷಿ ಕಾಲೇಜು (ವಿ.ಸಿ ಫಾರಂ), ಹಾಸನ…

Read More

ಬೆಂಗಳೂರು:- ಮಹಿಳೆಯರ ಖಾಸಗಿತನ ಉಲ್ಲಂಘಿಸೋ ದಾಖಲೆ ನಿಮಗೇಕೆ ಬೇಕು? ಎಂದು ಕೇಳುವ ಮೂಲಕ ಪ್ರಜ್ವಲ್ ಪರ ವಕೀಲರಿಗೆ ಹೈಕೋರ್ಟ್ ಚಾಟಿ ಬೀಸಿದೆ. https://ainlivenews.com/attempted-suicide-by-rioting-two-serious/ ಮಹಿಳೆಯರ ಖಾಸಗಿತನ ಉಲ್ಲಂಘಿಸುವ ದಾಖಲೆಗಳು ನಿಮಗೆ ಏಕೆ ಬೇಕು? ಎಲ್ಲವೂ ಅಶ್ಲೀಲವಾಗಿದೆ. ಅಶ್ಲೀಲತೆಗೆ ಒಂದು ಮಿತಿ ಇರಬೇಕು ಎಂದು ಹೇಳುವ ಮೂಲಕ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಪರ ವಕೀಲರಿಗೆ ಹೈಕೋರ್ಟ್‌ ಚಾಟಿ ಬೀಸಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣದಲ್ಲಿ ಎಸ್‌ಐಟಿ ಜಪ್ತಿ ಮಾಡಿರುವ ವಿಡಿಯೋ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ನ ಏಕಸದಸ್ಯ ಪೀಠ ಇಂದು ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಎಸ್‌ಐಟಿ ಜಪ್ತಿ ಮಾಡಿರುವ ವೀಡಿಯೋಗಳನ್ನು ನೀಡುವಂತೆ ಪ್ರಜ್ವಲ್‌ ಪರ ವಕೀಲರು ಮನವಿ ಮಾಡಿದರು. ಇದಕ್ಕೆ ಕೆರಳಿದ ಕೋರ್ಟ್‌ ಇತರೆ ಮಹಿಳೆಯರ ಖಾಸಗಿತನ ಉಲ್ಲಂಘಿಸುವ ದಾಖಲೆಗಳು ನಿಮಗೆ ಏಕೆ ಬೇಕು? ಎಲ್ಲವೂ ಅಶ್ಲೀಲವಾಗಿದೆ. ಅಶ್ಲೀಲತೆಗೆ ಒಂದು ಮಿತಿ ಇರಬೇಕು ಎಂದು ಬೇಸರ ವ್ಯಕ್ತಪಡಿಸಿತು

Read More

ಶಿವಮೊಗ್ಗ:- ಗಲಾಟೆ ಮಾಡಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸರ್ಕಾರಿ ವೈದ್ಯೆ, ನರ್ಸ್‌ ಸ್ಥಿತಿ ಗಂಭೀರ ಆಗಿರುವ ಘಟನೆ ಬಿಆರ್‌ಪಿ ಸರ್ಕಾರಿ ಆಸ್ಪತ್ರೆಯಲ್ಲಿ ಜರುಗಿದೆ. https://ainlivenews.com/hearing-the-words-of-the-second-the-husband-killed-the-first-wife/ ಘಟನೆ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಡಾ.ಹಂಸವೇಣಿ ಮತ್ತು ನರ್ಸ್‌ ಸುಕನ್ಯಾರಿಂದ ಪರಸ್ಪರ ಟಾರ್ಚರ್ ಆರೋಪ ಕೇಳಿಬಂದಿದೆ. ಡಾ. ಹಂಸವೇಣಿ ಮತ್ತು ನರ್ಸ್ ಸುಕನ್ಯಾ ಭದ್ರಾವತಿಯ ತಾಲೂಕಿನ ಬಿಆರ್​ಪಿ ಸರಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇಬ್ಬರು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಇಬ್ಬರನ್ನು ಶಿವಮೊಗ್ಗ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

Read More