ಬೆಂಗಳೂರು:- ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಕೇಸ್ ಗೆ ಸಂಬಂಧಿಸಿದಂತೆ ಪೊಲೀಸರ ಬೆನ್ನಿಗೆ ಸಿಎಂ ಸಿದ್ದರಾಮಯ್ಯ ನಿಂತಿದ್ದಾರೆ. https://ainlivenews.com/highest-temperature-recorded-in-silicon-city-bengaluru/ ಸಿಎಂ ಸಿದ್ದರಾಮಯ್ಯನವರೇ ಪೊಲೀಸರ ಬೆನ್ನಿಗೆ ನಿಂತಿದ್ದು, ಘಟನೆಯಲ್ಲಿ ಭಾಗಿಯಾದವರನ್ನು ಮುಲಾಜಿಲ್ಲದೇ ಬಂಧಿಸಿ ಎಲ್ಲರ ಮೇಲೂ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು, ಕಾವೇರಿ ನಿವಾಸದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಈ ಸಭೆಯಲ್ಲಿ ಮೈಸೂರು ಡಿಸಿ, ಎಸ್ಪಿ ಹಾಗೂ ಮೈಸೂರು ಪೊಲೀಸ್ ಆಯುಕ್ತರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. ಈ ವೇಳೆ ಘಟನೆಯಲ್ಲಿ ಭಾಗಿಯಾದವರನ್ನು ಮುಲಾಜಿಲ್ಲದೇ ಬಂಧಿಸಿ ಎಲ್ಲರ ಮೇಲೂ ಕ್ರಮ ಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದ್ದಾರೆ. ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿದವರು, ಅದಕ್ಕೆ ಪ್ರಚೋದನೆ ನೀಡಿದ ಎಲ್ಲರನ್ನೂ ಪತ್ತೆಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು. ಇದರ ಜೊತೆಗೆ ತಪ್ಪು ಮಾಡದವರಿಗೆ ಕೂಡ ತೊಂದರೆ ಆಗಬಾರದು. ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಕಟ್ಟೆಚ್ಚರ ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಭಂಗ ತರುವ ಪ್ರಯತ್ನ…
Author: AIN Author
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ದಾಖಲಾಗಿದೆ. ಮೊದಲ ಬಾರಿಗೆ ಫೆಬ್ರವರಿ ತಿಂಗಳ ಮಧ್ಯದಲ್ಲಿ ಗರಿಷ್ಠ ಉಷ್ಣಾಂಶ 33.5 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. https://ainlivenews.com/great-news-for-the-unemployed-great-job-opportunities-in-the-railways/ ಗುರುವಾರ ತಾಪಮಾನ 33.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಇದು ಪೆಬ್ರವರಿ ತಿಂಗಳಲ್ಲಿ ದಾಖಲಾದ ಗರಿಷ್ಠ ತಾಪಮಾನ ಎಂದು ಹವಾಮಾನ ಇಲಾಖೆ ವರದಿ ಮಾಡಿತ್ತು. ಆದರೆ ಇವತ್ತು ಮತ್ತೆ ದಾಖಲೆ ಮುರಿದು, ಬೆಂಗಳೂರು ಉಷ್ಣಾಂಶ 33.5 ಡಿಗ್ರಿಗೆ ತಲುಪಿದೆ. ಸಾಮಾನ್ಯವಾಗಿ ಫೆಬ್ರವರಿ ಅಂತ್ಯದ ವೇಳೆಗೆ ಬೆಂಗಳೂರು ಗರಿಷ್ಠ ಉಷ್ಣಾಂಶ ವಾಡಿಕೆಯಂತೆ 29 ಡಿಗ್ರಿಗೆ ಬರುತ್ತಿತ್ತು. ಇದೀಗ ತಿಂಗಳ ಮಧ್ಯದಲ್ಲೇ ತಾಪಮಾನ 33ಕ್ಕೆ ಡಿಗ್ರಿ ಸೆಲ್ಸಿಯಸ್ ತಲುಪಿದೆ.
ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ರೈಲ್ವೇ ಇಲಾಖೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. https://ainlivenews.com/what-is-bbmps-new-plan-to-curb-the-menace-of-stray-dogs-in-bengaluru/ ಅಭ್ಯರ್ಥಿಗಳು ಫೆಬ್ರವರಿ 22 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಇದರ ನಂತರ ಅರ್ಜಿ ವಿಂಡೋ ಮುಚ್ಚಲ್ಪಡುತ್ತದೆ, ಆದ್ದರಿಂದ ಆಸಕ್ತ ಅಭ್ಯರ್ಥಿಗಳು ಸಾಧ್ಯವಾದಷ್ಟು ಬೇಗ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಅಧಿಸೂಚನೆಯಲ್ಲಿ ವಿನಂತಿಸಲಾಗಿದೆ. ಈ ನೇಮಕಾತಿ ಅಭಿಯಾನದ ಮೂಲಕ ಒಟ್ಟು 32,438 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಶೈಕ್ಷಣಿಕ ಅರ್ಹತೆ ಈ ನೇಮಕಾತಿಗೆ, ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿ/ಸಂಸ್ಥೆಯಿಂದ 10 ನೇ ತರಗತಿಯಲ್ಲಿ ಮಾತ್ರ ಉತ್ತೀರ್ಣರಾಗಿರಬೇಕು. ಇದಲ್ಲದೆ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರೈಲ್ವೆ ಗ್ರೂಪ್ ಡಿ ನೇಮಕಾತಿಯ ಅರ್ಹತಾ ಮಾನದಂಡಗಳನ್ನು ಪೂರೈಸಬೇಕಾಗುತ್ತದೆ. ವಯಸ್ಸಿನ ಮಿತಿ: ಈ ನೇಮಕಾತಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷಗಳು ಮತ್ತು ಗರಿಷ್ಠ ವಯಸ್ಸು 36 ವರ್ಷಗಳು. ಆದಾಗ್ಯೂ, ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುವುದು. ಜನವರಿ 1, 2025 ರಿಂದ ವಯಸ್ಸನ್ನು ಲೆಕ್ಕಹಾಕಲಾಗುತ್ತದೆ. ಅರ್ಜಿ ಸಲ್ಲಿಸುವುದು ಹೇಗೆ?…
ಬೆಂಗಳೂರು:- ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರೋದು ಗೊತ್ತಿರುವ ವಿಚಾರ. ರಾಜಧಾನಿಯ ಬೀದಿನಾಯಿಗಳಿಗೆ ರೋಗಗಳು ಹರಡದಂತೆ ಕ್ರಮವಹಿಸೋಕೆ ಹೊರಟಿರೋ ಪಾಲಿಕೆ ಬರೋಬ್ಬರಿ 4.98 ಕೋಟಿ ರೂಪಾಯಿ ವೆಚ್ಚದಲ್ಲಿ ಕಂಬೈನ್ಡ್ ವ್ಯಾಕ್ಸಿನ್ ಕೊಡಿಸೋಕೆ ಹೊರಟಿದೆ. ಇತ್ತ ಬೀದಿನಾಯಿಗಳಿಗೆ ಈ ಲಸಿಕೆ ಕೊಡೋಕೆ ಮುಂದಾಗಿದ್ದು ಲಸಿಕೆ ಅಭಿಯಾನಕ್ಕೆ ಇಂದು ಚಾಲನೆ ಸಿಕ್ಕಿದೆ. https://ainlivenews.com/mangas-disease-in-chikmagalur-four-people-in-a-single-day/ ಬೀದಿನಾಯಿಗಳಿಂದ ಹರಡುವ ರೋಗಗಳಿಗೆ ಕಡಿವಾಣ ಹಾಕಲು ಹೊರಟಿರೋ ಪಾಲಿಕೆ ಇದೀಗ ಹೊಸ ಪ್ಲಾನ್ ಜಾರಿ ಮಾಡೋಕೆ ಹೊರಟಿದೆ. ಪಾಲಿಕೆ ವ್ಯಾಪ್ತಿಯ 1.84 ಲಕ್ಷ ಬೀದಿನಾಯಿಗಳಿಗೆ ಕಂಬೈನ್ಡ್ ವ್ಯಾಕ್ಸಿನ್ ನೀಡೋಕೆ ಹೊರಟಿರೋ ಪಾಲಿಕೆ, ಇದಕ್ಕಾಗಿ ಬರೋಬ್ಬರಿ 4.98 ಕೋಟಿ ರೂಪಾಯಿ ಖರ್ಚು ಮಾಡೋಕೆ ಮುಂದಾಗಿದೆ. ಪಾಲಿಕೆ ಇದೀಗ ಬೀದಿನಾಯಿಗಳಿಗೆ ರೋಗ ಹರಡದಂತೆ ನಿಗಾ ಇಡುವುದಕ್ಕೆ ಹೊರಟಿದೆ. ಸದ್ಯ ಬಿಬಿಎಂಪಿಯ ಈ ಹೊಸ ಯೋಜನೆಗೆ ಇಂದು ಚಾಲನೆ ನೀಡಿರುವ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಈ ಪ್ಲಾನ್ ನಿಂದ ನಾಯಿಗಳಿಗೆ ಹರಡುವ ರೋಗ ಹಾಗೂ ನಾಯಿಗಳಿಂದ ಮನುಷ್ಯರಿಗೆ ಹರಡುವ ರೋಗಗಳಿಗೆ ಈ…
ಚಿಕ್ಕಮಗಳೂರು:- ಜಿಲ್ಲೆಯಲ್ಲಿ ಮಂಗನ ಕಾಯಿಲೆ ಉಲ್ಬಣಗೊಂಡಿದೆ. ಒಂದೇ ದಿನ ನಾಲ್ವರಲ್ಲಿ ಮಂಗನ ಕಾಯಿಲೆ ದೃಢ ಪಟ್ಟಿದೆ. https://ainlivenews.com/did-kohli-refuse-to-become-rcb-captain-what-was-the-franchises-calculation/ ಕೊಪ್ಪ ಮತ್ತು ಎನ್ಆರ್ ಪುರ ತಾಲೂಕಿನ ನಾಲ್ವರಲ್ಲಿ ಕೆಎಫ್ಡಿ ದೃಢಪಟ್ಟಿದೆ. ಒಟ್ಟು ಜಿಲ್ಲೆಯಲ್ಲಿ 18 ಜನರಲ್ಲಿ ಕೆಎಫ್ಡಿ ಪತ್ತೆಯಾಗಿದೆ. ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ತೆರೆದು ಚಿಕಿತ್ಸೆ ನೀಡಲಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಮಂಗನ ಕಾಯಿಲೆ ಪತ್ತೆಯಾದ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ಮಾಡಿದ್ದು, ರಕ್ತದ ಮಾದರಿ ಸಂಗ್ರಹಿಸಿದ್ದಾರೆ. ಸದ್ಯ ಕಾಡಿಗೆ ತೆರಳದಂತೆ ಸೂಚನೆ ನೀಡಲಾಗಿದೆ. ಮಳೆಗಾಲ ಕಳೆದು ಇನ್ನೇನು ಚಳಿಗಾಲ ಮುಗಿದು ಬೇಸಿಗೆ ಆರಂಭವಾಗಿದೆ. ಬಿಸಿಲ ಬೇಗೆ ಹೆಚ್ಚಾಗುತ್ತಿದ್ದಂತೆ ಕಾಫಿನಾಡಿಗೆ ಮಹಾಮಾರಿ KFD ಕಾಯಿಲೆ ಸದ್ದಿಲ್ಲದೆ ಎಂಟ್ರಿ ಕೊಟ್ಟಿದೆ. ಇದೀಗ ಈ ಮಾರಣಾಂತಿಕ ರೋಗ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
2025ರ ಐಪಿಎಲ್‌ನಲ್ಲಿ ಆರ್‌ಸಿಬಿ ಮುನ್ನಡೆಸೋರು ಯಾರೂ ಅನ್ನೋ ಕುತೂಹಲಕ್ಕೆ ತೆರೆ ಬಿದಿದ್ದು, ಕೊಹ್ಲಿ ಶಿಷ್ಯನ ರಜತ್ ಪಟೀದಾರ್ ಆರ್‌ಸಿಬಿ ಮುನ್ನಡೆಸೋ ಜವಾಬ್ದಾರಿ ಕೊಟ್ಟಿದೆ. ಆದರೆ ಮೊದ್ಲಿನಿಂದಲೂ ಈ ಬಾರಿ ಕೂಡ ವಿರಾಟ್ ಕೊಹ್ಲಿನೇ ಕ್ಯಾಪ್ಟನ್ ಆಗ್ಬಬಹುದು ಅಂತಾ ಅಂದುಕೊಂಡಿದ್ರು. ಆದ್ರೆ ಇದೀಗ ರಜತ್ ಪಟೀದಾರ್ ಕ್ಯಾಪ್ಟನ್ ಆಗಿದ್ದು, ವಿರಾಟ್ ಕೊಹ್ಲಿಯನ್ನು ಯಾಕೆ ಆಯ್ಕೆ ಮಾಡಿಲ್ಲ ಅನ್ನೋದಕ್ಕೆ ಆರ್‌ಸಿಬಿ ಸ್ಪಷ್ಟನೆ ಕೊಟ್ಟಿದೆ… https://ainlivenews.com/i-wish-the-chief-minister-to-be-a-long-term-cm-parameshwara/ ಹೌದು, ವಿರಾಟ್ ಕೊಹ್ಲಿಗೆ ಆರ್‌ಸಿಬಿ ಕ್ಯಾಪ್ಟನ್ ಶಿಪ್ ಕೊಡದೇ ಅವರ ಶಿಷ್ಯನಿಗೆ ಕೊಟ್ಟಿದ್ದು, ಹಲವು ಪ್ರಶ್ನೆಗಳ ಸೃಷ್ಟಿಸಿತ್ತು. ಇದಕ್ಕೆ ಆರ್ಸಿಬಿ ವ್ಯವಹಾರಗಳ ನಿರ್ದೇಶಕ ಮೊ ಬೊಬಾಟ್ ಉತ್ತರಿಸಿದ್ದಾರೆ. ‘ಭಾರತದ ಆಟಗಾರರನ್ನು ನಾಯಕನನ್ನಾಗಿ ಮಾಡಬೇಕು ಎಂಬುದು ನಮ್ಮ ಆಲೋಚನೆ ಆಗಿತ್ತು. ಇದು ಭಾರತೀಯ ಲೀಗ್ ಆಗಿರುವುದರಿಂದ, ಸ್ಥಳೀಯ ವಿಚಾರಗಳ ಬಗ್ಗೆ ಹೆಚ್ಚು ಮಾಹಿತಿ ಇರುವ ಭಾರತೀಯ ಆಟಗಾರನಿಗೆ ನಾವು ಮೊದಲ ಆದ್ಯತೆ ನೀಡುವ ಉದ್ದೇಶ ಹೊಂದಿದ್ದೆವು. ವಿರಾಟ್ ಅವರ ಹೆಸರೂ ಲಿಸ್ಟ್ನಲ್ಲಿ ಇತ್ತು. ರಜತ್ ಅವರ ಸ್ಟ್ರೈಕ್ ರೇಟ್ ಚೆನ್ನಾಗಿದೆ.…
ಬೆಂಗಳೂರು: ಸಿಎಂ ಸಿದ್ದರಾಮಯ್ಯದೇವರಾಜ್ ಅರಸು ದಾಖಲೆ ಮುರಿದು ಸಿಎಂ ಆಗಿ ಮುಂದುವರೆಯುತ್ತಾರೆ ಎಂಬ ಚರ್ಚೆಯ ವಿಚಾರಕ್ಕೆ ಸಚಿವ ಎಂ ಬಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. https://ainlivenews.com/tumbida-koda-tulakitale-parak-horabittu-mylaralingeshwaras-karnika/ ದೇವರಾಜು ಅರಸು 7ವರ್ಷಗಳ ಕಾಲ ಸಿಎಂ ಆಗಿದ್ದರು. ಸಿದ್ದರಾಮಯ್ಯನವರು ಪೂರ್ಣಾವಧಿ ಇರ್ತಾರೆ ಏಳು ವರ್ಷಗಳಲ್ಲ 10ವರ್ಷ ಇರ್ತಾರೆ. ಹೈಕಮಾಂಡ್ ಸಿದ್ದರಾಮಯ್ಯನವರನ್ನ ಸಿಎಂ ಮಾಡಿದ್ದಾರೆ, ಪೂರ್ಣಾವಧಿ ಸಿಎಂ ಆಗಿ ಸಿದ್ದರಾಮಯ್ಯ ಇರ್ತಾರೆ. ಅಲ್ಲದೆ ಸಧ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ , ಈ ಅವಧಿ ಪೂರೈಸಿ ಮತ್ತೆ ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ಎದುರಿಸ್ತೇವೆ, ಮುಂದಿನ ಬಾರಿಯು ನಾವು ಅಧಿಕಾರಕ್ಕೆ ಬರ್ತೇವೆ ಎಂದು ತಿಳಿಸಿದರು.
ವಿಜಯನಗರ:-ಜಿಲ್ಲೆಯ ಹೂವಿನಹಡಗಲಿ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ಪ್ರಸಕ್ತ ವರ್ಷದ ದೈವವಾಣಿ ಕಾರ್ಣಿಕರ ನುಡಿ ಹೊರ ಬಿದ್ದಿದೆ. ಕಳೆದ 11 ದಿನಗಳ ಉಪವಾಸ ವ್ರತ ಆಚರಿಸಿದ ಗೊರವಪ್ಪ ರಾಮಪ್ಪ ಅವರನ್ನು ಡೆಂಕನಮರಡಿಯ ಸಿಂಹಾಸನ ಕಟ್ಟೆಯಿಂದ ಕಾರ್ಣಿಕದ ಸ್ಥಳಕ್ಕೆ ಮೆರವಣಿಗೆ ಮೂಲಕ ಕರೆತರಲಾಯಿತು. https://ainlivenews.com/accused-sentenced-to-20-years-in-prison-and-fined-rs-45000-under-pocso-act-and-child-marriage-prohibition-act/ ದೇಗುಲದ ವಂಶಪಾರಂಪರ್ಯ ಧರ್ಮಕರ್ತ ಗುರುವೆಂಕಪ್ಪಯ್ಯ ಒಡೆಯರ್, ಅಶ್ವಾರೂಢರಾಗಿ ಡೆಂಕನಮರಡಿಗೆ ಬರುತ್ತಿದ್ದಂತೆಯೇ ‘ಏಳು ಕೋಟಿ ಏಳು ಕೋಟಿಗೋ … ಛಾಂಗ್‌ಬಲೋ…’ ಎಂಬ ಭಕ್ತರ ಹರ್ಷೋದ್ಗಾರ ಮುಗಿಲು ಮುಟ್ಟಿತು. ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್ ಅವರಿಂದ ಭಂಡಾರದ ಆಶೀರ್ವಾದ ಪಡೆದ ಗೊರವಪ್ಪ ರಾಮಪ್ಪ, ಸಂಪ್ರದಾಯ ಮತ್ತು ಪರಂಪರೆಯ ಸಂಕೇತವಾಗಿರುವ 15 ಅಡಿ ಎತ್ತರದ ಬಿಲ್ಲನ್ನು ಏರಿ, ಕೆಲ ಕ್ಷ ಣ ಆಕಾಶದತ್ತ ಶೂನ್ಯವನ್ನು ದಿಟ್ಟಿಸಿ ‘ಸದ್ದಲೇ…’ ಎಂದಾಗ ಇಡೀ ಭಕ್ತ ಸಮೂಹದಲ್ಲಿ ನಿಶಬ್ದ ವಾತಾವರಣ ಮೂಡಿತು. ಈ ಸಂದರ್ಭದಲ್ಲಿ ‘ತುಂಬಿದಕೊಡ ತುಳುಕೀತಲೇ ಪರಾಕ್’ ಎಂಬ ದೈವವಾಣಿ (ಕಾರ್ಣಿಕ) ನುಡಿದ ಗೊರವಪ್ಪನವರು ಕೆಳಕ್ಕೆ ಬಿದ್ದರು. ದೈವವಾಣಿಯ ಬಗ್ಗೆ ವೆಂಕಪ್ಪಯ್ಯ ಒಡೆಯರ್ ವಿಶ್ಲೇಷಣೆ ಮಾಡಿದ್ದು, ಪ್ರಸಕ್ತ…
ಕೋಲಾರ – ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ ಅತ್ಯಾಚಾರ ಮಾಡಿದ ಮುಳಬಾಗಿಲು ಮಾರುತಿ ನಗರದ ವಾಸಿ ಕಾರು ಚಾಲಕ ಗಂಗಾಧರ್ ಅಲಿಯಾಸ್ ತೇಜು ಬಿನ್ ಸಾದಪ್ಪ ಎಂಬ ಆರೋಪಿಗೆ ಕೋಲಾರ ಪೋಕ್ಸೊ ವಿಶೇಷ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ 45 ಸಾವಿರ ದಂಡ ವಿಧಿಸಿದೆ. https://ainlivenews.com/invest-karnataka-2025-conference-opens-with-grand-opening-investment-exceeds-expectations/ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ ಅತ್ಯಾಚಾರ ಮಾಡಿದ ಸಂಬಂಧ 2023ರ ಮೇ 17ರಂದು ನೀಡಿದ ದೂರಿನ ಮೇರೆಗೆ ಕಲಂ 6 ಪೋಕ್ಸೊ ಕಾಯ್ದೆಯಡಿ ಹಾಗು ಕಲಂ 9 ಬಾಲ್ಯ ವಿವಾಹ ನಿಷೇಧ ಕಾಯ್ದೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಬೇತಮಂಗಲ ಠಾಣೆಯ ವೃತ್ತ ನಿರೀಕ್ಷಕರು ಆರೋಪಿಯ ವಿರುದ್ಧ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಕೆ.ಬಿ.ಪ್ರಸಾದ್ ಅವರು ಅಪರಾಧಿಗೆ ಕಲಂ 6 ಪೋಕ್ಸೊ ಕಾಯ್ದೆಯಡಿ ಹಾಗು ಕಲಂ 9 ಬಾಲ್ಯ ವಿವಾಹ ನಿಷೇಧ ಕಾಯ್ದೆ ಅಡಿಯಲ್ಲಿ 20 ವರ್ಷ ಜೈಲು ಶಿಕ್ಷೆ ಹಾಗೂ 45…
ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಮೂರು ದಿನಗಳಿಂದ ನಡೆಯುತ್ತಿದ್ದ ಇನ್ವೆಸ್ಟ್ ಕರ್ನಾಟಕ- 2025 ಹೂಡಿಕೆದಾರರ ಸಮಾವೇಶಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ. ಹೆಚ್ಚು ಬಂಡವಾಳ ಹೂಡಿಕೆಯ ನಿರೀಕ್ಷೆಯಲ್ಲಿದ್ದ ಕರ್ನಾಟಕ ಸರ್ಕಾರಕ್ಕೆ ನಿರೀಕ್ಷೆಗೂ ಮೀರಿ ಜಯ ಸಿಕ್ಕಿದೆ. ವಸ್ತು ಪ್ರದರ್ಶನದಲ್ಲಿನ ತಂತ್ರಜ್ಞಾನ, ಒಂಡಬಡಿಕೆ, ಗೋಷ್ಠಿ, ಸಂವಾದ ಕಾರ್ಯಕ್ರಮಗಳೂ ಕಳೆದ ಬಾರಿಯ ಇನ್ವೆಸ್ಟ್ ಕರ್ನಾಟಕದ ರೆಕಾರ್ಡ್ ಬ್ರೇಕ್ ಮಾಡಿವೆ…. https://ainlivenews.com/good-news-applications-invited-for-4500-teacher-posts-eligible-candidates-should-apply-today/ ಇನ್ವೆಸ್ಟ್ ಕರ್ನಾಟಕ ಸಮ್ಮಿಟ್ ಗೆ ಮುನ್ನುಡಿ ಬರೆದಿದ್ದೇ ಕರ್ನಾಟಕ, ಇದೀಗ ಅನ್ಯ ರಾಜ್ಯಗಳು ಕರ್ನಾಟಕದ ಇನ್ವೆಸ್ಟ್ ಮೀಟ್ ಅನುಸರಿಸುತ್ತಿದೆ. ಅದರಲ್ಲೂ ಈ ಬಾರಿ ನಡೆದ ಬಂಡವಾಳ ಹೂಡಿಕೆದಾರರ ಸಮಾವೇಶ ನವೋದ್ಯಮಿ, ಉದ್ಯಮಿಗಳಿಗೆ, ಹೂಡಿಕೆದಾರರಿಗೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. 3 ದಿನಗಳ ಕಾಲ ನಡೆದ ಇನ್ವೆಸ್ಟ್ ಕರ್ನಾಟಕ ಸಮಾವೇಶಕ್ಕೆ ಇಂದು ಅದ್ಧೂರಿ ತೆರೆ ಬಿದ್ದಿದೆ. ಇಂದು ಅರಮನೆ ಮೈದಾನದಲ್ಲಿ ಸಮಾರೋಪ ಸಮಾರಂಭ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕೇಂದ್ರ ಸಚಿವ ವಿ.ಸೋಮಣ್ಣ, ಸಂಸದ ಶಿಶಿ ತರೂರ್, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ರಾಜ್ಯ…