ಕಲಬುರಗಿ: ನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ ಮಾಡಿ ನಗರದ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಬರೋಬ್ಬರಿ 105 ಬೈಕ್ಗಳನ್ನು ಪತ್ತೆ ಮಾಡಿದ್ದಾರೆ. ಕಳ್ಳತನ ಕೃತ್ಯದಲ್ಲಿ ಭಾಗಿದ್ದ 30 ಆರೋಪಗಳನ್ನು ಬಂಧಿಸಿದ್ದು, ಒಟ್ಟು 54,55,613 ಲಕ್ಷ ಮೌಲ್ಯದ ಬೈಕ್ಗಳು ವಶಕ್ಕೆ ಪಡೆಯಲಾಗಿದೆ. https://ainlivenews.com/good-news-for-jio-users-cheapest-recharge-plan/ ದುಂದು ವೆಚ್ಚಕ್ಕಾಗಿ ಕಳ್ಳರು ಬೈಕ್ಗಳ ಕಳ್ಳತನ ಮಾಡುತ್ತಿದ್ದರು. ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಕಳ್ಳತನ ನಡೆದಿದೆ. ಎರಡು-ಮೂರು ದಿನ ಒಂದೆ ಕಡೆ ನಿಲ್ಲಿಸುತ್ತಿದ್ದ ಬೈಕ್ಗಳನ್ನು ಟಾರ್ಗೆಟ್ ಮಾಡುತ್ತಿದ್ದರು. ಬೈಕ್ನ ನಂಬರ್ ಪ್ಲೇಟ್ಗಳನ್ನು ಕೂಡ ಬದಲಾವಣೆ ಮಾಡುತ್ತಿದ್ದರು. ಸದ್ಯ ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Author: AIN Author
ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಾಟ ಮಾಡಿದ ಪ್ರಕರಣ ದೇಶಾದ್ಯಂತ ಸದ್ದು ಮಾಡಿತ್ತು. ಈ ಹಗರಣವನ್ನ ಅಂದಿನ ಲೋಕಾಯುಕ್ತ ಸಂತೋಷ್ ಹೆಗ್ಡೆ ಬಯಲಿಗೆಳೆದಿದ್ದರು. ಈಗ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ಸತೀಶ್ ಸೈಲ್ ಸೇರಿ ಮೂರು ಮಂದಿಯ ಶಿಕ್ಷೆ ಅಮಾನತುಗೊಳಿಸಿ ಮಹತ್ವದ ಆದೇಶ ನೀಡಿದೆ. ಹೌದು ಸಿಬಿಐ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, https://ainlivenews.com/good-news-for-jio-users-cheapest-recharge-plan/ ಆರೋಪಿಗಳಿಗೆ ಒಟ್ಟುನ ಆರು ಪ್ರಕರಣಗಳಲ್ಲಿ ಶಿಕ್ಷೆ ಹಾಗೂ ದಂಡ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಆರೋಪಿಗಳ ಪರ ವಕೀಲರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಜನ ಪ್ರತಿನಿಧಿ ಕೋರ್ಟ್ ನೀಡಿದ್ದ ಶಿಕ್ಷೆಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ. 6 ವಾರದಲ್ಲಿ ದಂಡದ ಮೊತ್ತದಲ್ಲಿ ಶೇ.25ರಷ್ಟು ಠೇವಣಿ ಕೋರ್ಟ್ನಲ್ಲಿ ಇಡುವಂತೆ ಅಪರಾಧಿಗಳಿಗೆ ಸೂಚಿಸಿ ಶಿಕ್ಷೆ ಅಮಾನತಿನಲ್ಲಿಟ್ಟು ಆದೇಶಿಸಿದೆ, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಸೇರಿದಂತೆ ಇತರೆ ಅಪರಾಧಿಗಳು ನಾಳೆಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ…
ಬೆಂಗಳೂರು: ಅಧಿವೇಶನದ ವೇಳೆಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು 16 ತಿಂಗಳಾಗಿದ್ದು, 16 ಹಗರಣಗಳಲ್ಲಿ ಭಾಗಿಯಾಗಿದೆ. ಇವೆಲ್ಲವುಗಳ ಬಗ್ಗೆ ಚರ್ಚಿಸಲು ಬಿಜೆಪಿ ನಿರ್ಧರಿಸಿದೆ. ಈ ಹಿಂದಿನ ಅಧಿವೇಶನದಲ್ಲಿ ಒಂದು ವಿಕೆಟ್ ಉರುಳಿತ್ತು. ಮುಂಬರುವ ಅಧಿವೇಶನದ ವೇಳೆಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ. ಜತೆಗೆ ಸಂಪುಟದ ಇನ್ನಿಬ್ಬರು ಸಚಿವರ ವಿಕೆಟ್‌ಗಳೂ ಉರುಳಲಿವೆ,” ಎಂದು ಭವಿಷ್ಯ ನುಡಿದರು. ದಿನೇ ದಿನೆ ರಾಜ್ಯ ಸರಕಾರದ ಒಂದೊಂದೇ ಹಗರಣಗಳು ಹೊರಗೆ ಬರುತ್ತಿವೆ. ಈ ಹಗರಣಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯುವ ದುರುದ್ದೇಶದಿಂದ ಹಿಂದಿನ ಸರಕಾರದ ಅವಧಿಯ ಅಭಿವೃದ್ಧಿ ಕಾರ್ಯ, ಯೋಜನೆಗಳ ತನಿಖೆ ನಡೆಸುವುದಾಗಿ ಸರಕಾರ ಹೇಳುತ್ತಿದೆ. https://ainlivenews.com/good-news-for-jio-users-cheapest-recharge-plan/ ಈಗ ಕೋವಿಡ್ ಅವಧಿಯಲ್ಲಾದ ಅಕ್ರಮಗಳ ತನಿಖೆ ಮಾಡುವುದಾಗಿ ಹಾಗೂ ಕಲ್ಯಾಣ ಕರ್ನಾಟಕ ಯೋಜನೆ ತನಿಖೆ ನಡೆಸುವುದಾಗಿ ಸರಕಾರ ಹೇಳಿದೆ. ಬಿಜೆಪಿ ಅಧಿಕಾರದಲ್ಲಿದ್ದಾಗ 40 ಪರ್ಸೆಂಟ್ ಕಮೀಷನ್ ಆರೋಪ ಮಾಡಿದ್ದ ಕಾಂಗ್ರೆಸ್…
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಥವಾ ಮುಡಾದಲ್ಲಿ ಅಕ್ರಮದ ಆರೋಪ ಕೇಳಿಬಂದಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇನ್ನೂ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಾಗಿದೆ. https://ainlivenews.com/good-news-for-jio-users-cheapest-recharge-plan/ ಸಿಎಂ ಪತ್ನಿ ಪಾರ್ವತಿ ಅವರು ಮುಡಾದಿಂದ ಪಡದ ನಿವೇಶನ ಕ್ರಯಪತ್ರದ ಮುದ್ರಾಂಕ ಶುಲ್ಕದ ಬಗ್ಗೆ ಸ್ನೇಹಮಯಿ ಕೃಷ್ಣ ಆಕ್ಷೇಪ ವ್ಯಕ್ತಪಡಿಸಿದರು. ಇದನ್ನು ಖಂಡಿಸಿದ ಲಕ್ಷ್ಮಣ್ ಅವರು ಸ್ನೇಹಮಯಿ ಕೃಷ್ಣ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ. ಸಿಎಂ ವಿರುದ್ಧ ಪ್ರತಿ ನಿತ್ಯ ಒಂದಲ್ಲೊಂದು ಆರೋಪ ಮಾಡಿ ಒತ್ತಡ ಹೇರುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಲಕ್ಷ್ಮಣ್ ದೂರು ನೀಡಿದ್ದರು. ದೂರು ನೀಡಿದ ಮರುದಿನವೇ ದೇವರಾಜ ಠಾಣೆಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಧೋನಿಗೆ ಇದೀಗ ಹೈಕೋರ್ಟ್ ನೋಟಿಸ್ ನೀಡಿದೆ. ಜನವರಿಯಲ್ಲಿ ಧೋನಿ ತಮ್ಮ ಮಾಜಿ ಬಿಸಿನೆಸ್ ಪಾರ್ಟ್ನರ್‌ಗಳಾದ ಮಿಹಿರ್ ದಿವಾಕರ್ ಮತ್ತು ಸೌಮ್ಯ ಬಿಸ್ವಾಸ್ 15 ಕೋಟಿ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ‘ಎಂಎಸ್ ಧೋನಿ’ ಹೆಸರಿನಲ್ಲಿ ಭಾರತ ಮತ್ತು ವಿದೇಶಗಳಲ್ಲಿ ಕ್ರಿಕೆಟ್ ಅಕಾಡೆಮಿ ಆರಂಭಿಸುವುದಾಗಿ ಧೋನಿ ಜತೆ ಅರ್ಕಾ ಸ್ಪೋರ್ಟ್ಸ್ ಅಂಡ್ ಮ್ಯಾನೇಜ್ ಮೆಂಟ್ ಕಂಪನಿ ಒಪ್ಪಂದ ಮಾಡಿಕೊಂಡಿತ್ತು. ನಮ್ಮ ಒಪ್ಪಂದವು 2021ರಲ್ಲಿ ಕೊನೆಗೊಂಡಿದೆ. https://ainlivenews.com/does-your-mouth-smell-when-you-eat-onions-do-this-to-avoid/ ಹೀಗಿದ್ದೂ ಮಿಹಿರ್ ದಿವಾಕರ್ ಮತ್ತು ಸೌಮ್ಯ ದಾಸ್ ಕ್ರಿಕೆಟ್ ಅಕಾಡೆಮಿಗಳನ್ನು ತೆರೆಯುವುದನ್ನು ಮುಂದುವರೆಸಿದ್ದಾರೆ. ಇದರಿಂದ ನನಗೆ 15 ಕೋಟಿ ರೂಪಾಯಿ ನಷ್ಟ ಆಗಿದೆ ಎಂದು ಧೋನಿ ಆರೋಪಿಸಿದ್ದರು. ಜನವರಿ 5 ರಂದು ಧೋನಿ ತಮ್ಮ ಮಾಜಿ ಪಾಲುದಾರರ ವಿರುದ್ಧ ವಂಚನೆ ಕೇಸ್ ದಾಖಲಿಸಿದ್ದರು. ಪ್ರಕರಣ ಸಂಬಂಧ ಜಾರ್ಖಂಡ್ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ವಿಚಾರಣೆಯನ್ನು ಪ್ರಶ್ನಿಸಿ…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ್ದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿರುವ ಅರ್ಜಿಯ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಹೌದು ಹಗರಣದ ತನಿಖೆಯನ್ನು ಕೇಂದ್ರಕ್ಕೆ ವರ್ಗಾಯಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಬ್ಯಾಂಕಿಂಗ್ ನಿಯಂತ್ರಣ ಅಧಿನಿಯಮ ಸೆಕ್ಷನ್ 35 ಎ ಅಡಿಯ ವ್ಯಾಖ್ಯಾನ ಪರಿಗಣಿಸಿ ಸಿಬಿಐ ತನಿಖೆಗೆ ವಹಿಸಲಾಗುವುದಿಲ್ಲ. ಒಂದು ವೇಳೆ ಅನುಮತಿ ನೀಡಿದರೆ ಎಲ್ಲಾ ಬ್ಯಾಂಕ್ಗಳೂ ಇದನ್ನೇ ಕೇಳಬಹುದು. ಆಗ ದೆಹಲಿ ಸ್ಪೆಷಲ್ ಪೊಲೀಸ್ ಎಸ್ಟಾಬ್ಲಿಷ್ಮೆಂಟ್ ಆ್ಯಕ್ಟ್ ನಿರರ್ಥಕವಾಗಬಹುದು ಎಂದು ಅರ್ಜಿ ತಿರಸ್ಕರಿಸಿ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿದೆ. https://ainlivenews.com/does-your-mouth-smell-when-you-eat-onions-do-this-to-avoid/ ಹಗರಣದ ತನಿಖೆ ಹೊಣೆ ಸಿಬಿಐಗೆ ವರ್ಗಾಯಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್…
ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಆರಂಭವಾಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ, ಬಳ್ಳಾರಿ ಜಿಲ್ಲೆಯ ಸಂಡೂರು, ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಿಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಸಂಜೆ 6 ಗಂಟೆವರೆಗೆ ಮತದಾನ ಕಾರ್ಯ ನಡೆಯಲಿದೆ. ಮತದಾನ ಹಿನ್ನೆಲೆ ಮತಗಟ್ಟೆ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಬೆಳ್ಳಂಬೆಳಗ್ಗೆಯೇ ಮತದಾರರು ಸರತಿ ಸಾಲಿನಲ್ಲಿ ಬಂದು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. https://ainlivenews.com/does-your-mouth-smell-when-you-eat-onions-do-this-to-avoid/ ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣದಲ್ಲಿ ಉಪಚನಾವಣೆ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದ್ದು, ಮಧ್ಯಾಹ್ನ 1 ಗಂಟೆಯವರೆಗೂ ಚನ್ನಪಟ್ಟಣದಲ್ಲಿ ಶೇ.48.15ರಷ್ಟು, ಸಂಡೂರಿನಲ್ಲಿ ಶೇ.43.46 ಹಾಗೂ ಶಿಗ್ಗಾಂವಿಯಲ್ಲಿ ಶೇ.44.35ರಷ್ಟು ಮತದಾನವಾಗಿದೆ.
ಸ್ಥಿರಾಸ್ತಿಗಳ ನೋಂದಣಿಗಾಗಿ, ಗ್ರಾಮಪಂಚಾಯಿತಿ ಮತ್ತು ಸ್ಥಳೀಯ ನಗರ ಸಂಸ್ಥೆಗಳಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಇ-ಖಾತೆಗಳನ್ನು ಶೀಘ್ರವಾಗಿ ವಿತರಿಸುವ ಕುರಿತು ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗ ಭಾಗವಹಿಸಿದ್ದರು ಸಭೆಯಲ್ಲಿ ಚರ್ಚಿಸಲಾದ ಪ್ರಮುಖ ಅಂಶಗಳು 1.ಸ್ಮಿರಾಸ್ತಿ ಸಂಬಂಧ ದಸ್ತಾವೇಜುಗಳ ನೋಂದಣಿಗಾಗಿ ಕಾವೇರಿ-2 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶ ಮತ್ತು ಇ-ಸ್ವತ್ತು ತಂತ್ರಾಂಶವನ್ನು 2014 ರಿಂದಲೇ ಸಂಯೋಜನೆಗೊಳಿಸಿದ್ದು, ನೋಂದಣಿಗಾಗಿ ಇ-ಖಾತಾ ಕಡ್ಡಾಯವಾಗಿರುತ್ತದೆ. ಹಾಗಾಗಿ, ಸಾರ್ವಜನಿಕರಿಗೆ ದಸ್ತಾವೇಜು ನೋಂದಣಿಗಾಗಿ ಇ-ಖಾತಾ ತುರ್ತಾಗಿ ವಿತರಿಸುವ ಕುರಿತು ಚರ್ಚಿಸಲಾಯಿತು. 2. ಮಂಗಳೂರು ಮತ್ತು ಇತರ ಕೆಲವು ಕಡೆ ವಿತರಿಸುತ್ತಿರುವ ಇ-ಆಸ್ತಿ ಖಾತೆಗಳಲ್ಲಿ ಸ್ಥಿರಾಸ್ತಿಯ ಅಳತೆಯ ವಿವರಗಳು ನಮೂದಾಗದೇ ಇರುವುದರಿಂದ, ಕಾವೇರಿ-2 ತಂತ್ರಾಂಶದಲ್ಲಿ ನೋಂದಣಿಗೆ ಸಮಸ್ಯೆಯಾಗುತ್ತಿರುವ ಬಗ್ಗೆ. 3. ಕೃಷಿ ಜಮೀನು ಭೂ ಪರಿವರ್ತನೆ ನಂತರ ನಿವೇಶನ ಬಿಡುಗಡೆಗೊಳಿಸುವ ಪೂರ್ವದಲ್ಲಿ ಉದ್ಯಾನವನ (Park), CA ಸೈಟ್ ಮತ್ತು ರಸ್ತೆ ಜಮೀನುಗಳ ಪರಿತ್ಯಾಜನ ಪತ್ರ ನೀಡಲು…
ಹುಬ್ಬಳ್ಳಿ: ಪ್ರಾಧ್ಯಾಪಕರೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಲ್ಲಿನ ವಿದ್ಯಾನಗರದ ಜೆ.ಜಿ.ಕಾಮರ್ಸ್ ಕಾಲೇಜಿನ ಹಿಂಭಾಗದಲ್ಲಿ ನಡೆದಿದೆ. ಪ್ರವೀಣ್ ಕುಮಾರ್ ಯು.ಆರ್ (೩೫) ಎಂಬಾತರೇ ನೇಣಿಗೆ ಶರಣಾಗಿದ್ದಾರೆ. https://ainlivenews.com/does-your-mouth-smell-when-you-eat-onions-do-this-to-avoid/ ನವೆಂಬರ್ ೧೨ ರ ರಾತ್ರಿ ೯ ರಿಂದ ಇಂದು ಬೆಳಗಿನ ಜಾವ ೩ ಗಂಟೆಯ ನಡುವಿನ ವೇಳೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನೇಣಿಗೆ ಶರಣಾಗಿರುವ ಪ್ರಾಧ್ಯಾಪಕರ ಸಾವಿಗೆ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಧಾರವಾಡ: ಮರಕುಂಬಿ ದಲಿತರ ಮೇಲೆ ದೌರ್ಜನ್ಯ ಪ್ರಕರಣದ 97 ಮಂದಿಗೆ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠವು ಜಾಮೀನು ಮಂಜೂರು ಮಾಡಿದೆ. ಕೊಪ್ಪಳ ಜಿಲ್ಲಾ ನ್ಯಾಯಾಲಯವು 97 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಜೈಲು ಪಾಲಾಗಿದ್ದವರು ಹೈಕೋರ್ಟ್ ಮೊರೆ ಹೋಗಿದ್ದರು . https://ainlivenews.com/does-your-mouth-smell-when-you-eat-onions-do-this-to-avoid/ ಈ ಕುರಿತು ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠವು 98 ಅಪರಾಧಿಗಳ ಪೈಕಿ 97 ಜನರಿಗೆ ಜಾಮೀನು ಮುಂಜೂರು ಮಾಡಿ ಆದೇಶ ಹೊರಡಿಸಿದೆ. ಜಾಮೀನು ಅರ್ಜಿ ಹಾಕದ ಎ1 ಮಂಜುನಾಥ ಹೊರತು ಪಡಿಸಿ ಉಳಿದೆಲ್ಲರಿಗೂ ಜಾಮೀನು ಮುಂಜೂರು ಮಾಡಿದೆ.