Author: AIN Author

ಕೊಪ್ಪಳ:- ಸಿದ್ದರಾಮಯ್ಯ 5 ವರ್ಷವೂ ಸಿಎಂ ಆಗೋದು ಖಚಿತ ಎಂದು ಸಚಿವ ಜಮೀರ್ ಹೇಳಿದ್ದಾರೆ. https://ainlivenews.com/hanuman-has-finally-won-the-bigg-boss-cup-as-expected-by-the-viewers/ ಈ ಸಂಬಂಧ ಮಾತನಾಡಿದ ಅವರು, ಐದು ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಮುಂದುವರಿಯಲಿದ್ದಾರೆ. ರಾಜ್ಯದಲ್ಲಿ ಸದ್ಯ ಸಿಎಂ ಖುರ್ಚಿ ಖಾಲಿ ಇಲ್ಲ. ಈ ಬಗ್ಗೆ ಚರ್ಚೆಯೂ ಅಗತ್ಯ ಇಲ್ಲ. ಅದರಂತೆ ಕೆಪಿಸಿಸಿ ಅಧ್ಯಕ್ಷರ ಖುರ್ಚಿಯೂ ಖಾಲಿ ಇಲ್ಲ. ಕೆಪಿಸಿಸಿ ಅಧ್ಯಕ್ಷ ಹುದ್ದೆ ಬಗ್ಗೆ ಸತೀಶ್ ಜಾರಕಿಹೊಳಿ ಮಾತನಾಡಿರಬಹುದು. ಅದು ಅವರ ವೈಯಕ್ತಿಕ ಅಭಿಪ್ರಾಯ. ಆದರೆ ಕೆಪಿಸಿಸಿ ಅಧ್ಯಕ್ಷರ ಹುದ್ದೆಯೂ ಖಾಲಿ ಇಲ್ಲ ಎಂದರು. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಪಾತ್ರ ಸ್ವಲ್ಪವೂ ಇಲ್ಲ. ಸಿದ್ದರಾಮಯ್ಯ ಅವರನ್ನು ಅಲುಗಾಡಿಸಿದರೆ ಕಾಂಗ್ರೆಸ್‌ಗೆ ತೊಂದರೆ ಆಗುತ್ತದೆ ಎಂದು ಬಿಜೆಪಿಗರು ಕಿರಿಕಿರಿ ಮಾಡುತ್ತಿದ್ದಾರೆ. ಇದೆಲ್ಲ ನಡೆಯುವುದಿಲ್ಲ ಎಂದರು. ಡ

Read More

ಮೈಸೂರು:- ಮೈಕ್ರೋ ಫೈನಾನ್ಸ್ ನಿಂದ ಮಾಡಿದ್ದ ಸಾಲ ತೀರಿಸಲಾಗದೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದಲ್ಲಿ ವಿಷದ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. https://ainlivenews.com/free-bus-ticket-for-women-is-not-lost-by-kodirod-ramalingareddy/ ಜಯಶೀಲಾ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಈಕೆ ಫೈನಾನ್ಸ್ ನಿಂದ ಸಾಲ ಪಡೆದಿದ್ದರು. ಅದರಂತೆ ಪ್ರತಿ ತಿಂಗಳು 20,000ಕ್ಕೂ ಹೆಚ್ಚು ಇಎಂಐ ಕಟ್ಟಬೇಕಾಗಿತ್ತು. ಸಾಲದಲ್ಲಿ ತೆಗೆದುಕೊಂಡಿದ್ದ ಹಸು ಕೂಡ ಇತ್ತೀಚೆಗೆ ಮೃತಪಟ್ಟಿತ್ತು. ಈ ಹಿನ್ನೆಲೆ ಜೀವನ ನಿರ್ವಹಣೆ ಮಾಡಲು ಸಾಧ್ಯವಾಗದ ಪರಿಸ್ಥಿತಿಗೆ ತಲುಪಿದ್ದರು. ಈ ಹಿನ್ನೆಲೆ ಸಮೀಪದ ಹುಲ್ಲಹಳ್ಳಿಗೆ ತೆರಳಿ ವಿಷದ ಮಾತ್ರೆಗಳನ್ನು ತಂದು ಜಮೀನಿನಲ್ಲಿ ನುಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Read More

ರಾಮನಗರ:- ಮಹಿಳೆಯರಿಗೆ ಉಚಿತ ಬಸ್ ಟಿಕೆಟ್ ಕೊಟ್ಟಿರೋದ್ರಿಂದ ನಷ್ಟವಾಗಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. https://ainlivenews.com/bigg-boss-winner-sir-god-did-not-think-hanumantha/ ಈ ಸಂಬಂಧ ಮಾತನಾಡಿದ ಅವರು, ಹೆಂಗಸರಿಗೆ ಉಚಿತ ಬಸ್ ಟಿಕೆಟ್ ಕೊಟ್ಟಿರೋದ್ರಿಂದ ನಷ್ಟವಾಗಿಲ್ಲ. ಶಕ್ತಿ ಯೋಜನೆಯಿಂದ ಯಾವುದೇ ನಷ್ಟವಾಗಿಲ್ಲ. ಶಕ್ತಿ ಯೋಜನೆಯಿಂದ ಬರಬೇಕಾದ ಹಣ ಸಾರಿಗೆ ಇಲಾಖೆಗೆ ಬಂದಿದೆ. 8.8 ಕೋಟಿಗೂ ಹೆಚ್ಚು ಹಣ ಸಾರಿಗೆ ಇಲಾಖೆಗೆ ಬಂದಿದೆ. ಕೆಎಸ್‌ಆರ್‌ಟಿಸಿಯಲ್ಲಿ ಬಿಜೆಪಿ ಸರ್ಕಾರ ಇದ್ದಾಗ 5,900 ಕೋಟಿ ಸಾಲ ಇತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ 10 ಸಾವಿರ ಮಂದಿಯನ್ನು ಕೆಎಸ್‌ಆರ್‌ಟಿಸಿಗೆ ನೇಮಕ ಮಾಡಿಕೊಂಡಿದ್ದೇವೆ ಎಂದರು. ಈಗಾಗಲೇ ಡಿ.ಕೆ. ಶಿವಕುಮಾರ್ ಹಾಗೂ ಸುರೇಶ್ ಜಿಲ್ಲೆಯನ್ನ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ರಾಮನಗರ ಜಿಲ್ಲೆಗೆ ಈ ಬಾರಿಯ ಬಜೆಟ್‌ನಲ್ಲಿ ಹೆಚ್ಚಿನ ಅನುದಾನಕ್ಕೆ ಮನವಿ ಮಾಡಿದ್ದೇವೆ. ಜಿಲ್ಲೆಗೆ ಆಗಬೇಕಿರುವ ಅಭಿವೃದ್ಧಿ ಪಟ್ಟಿಯನ್ನು ಡಿಸಿ ಅವರು ನೀಡುತ್ತಾರೆ. ಫೆ. 4 ರಂದು ಪ್ರಗತಿ ಪರಿಶೀಲನಾ ಸಭೆ ಕರೆದಿದ್ದೇನೆ. ಅಧಿಕಾರಿಗಳಿಂದ ಮಾಹಿತಿ ಪಡೆದು ಸಿಎಂ ಬಳಿ ಮಾತನಾಡುತ್ತೇನೆ ಎಂದು ಮಾಹಿತಿ ಕೊಟ್ಟಿದ್ದಾರೆ.

Read More

ಬಿಗ್ ಬಾಸ್ ಸೀಸನ್ 11ರ ವಿನ್ನರ್ ಆಗಿ ಹನುಮಂತು ಹೊರ ಹೊಮ್ಮಿದ್ದಾರೆ. ವೈಲ್ಡ್ ಕಾರ್ಡ್ ಮೂಲಕ ಎಂಟ್ರಿಕೊಟ್ಟಿದ್ದ ಹನುಮಂತ ಈಗ ಕಪ್‌ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. https://ainlivenews.com/indias-first-double-decker-plyover-road-is-poor-button-everywhere/ ಇಲ್ಲಿಯವರೆಗೆ ಶೋ ಆರಂಭಗೊಂಡಾಗ ಮನೆಯನ್ನು ಪ್ರವೇಶ ಮಾಡಿದ ಸ್ಪರ್ಧಿಗಳೇ ಬಿಗ್‌ ಬಾಸ್‌ ಟ್ರೋಫಿ ಗೆಲ್ಲುತ್ತಿದ್ದರು. ಆದರೆ ಬಿಗ್‌ ಬಾಸ್‌ ಇತಿಹಾಸದಲ್ಲಿ ವೈಲ್ಡ್ ಕಾರ್ಡ್ ಸ್ಪರ್ಧಿ ಗೆದ್ದಿದ್ದು ಇದೇ ಮೊದಲು. ಟ್ರೋಫಿ ಜಯಿಸಿದ ಬಳಿಕ ವೇದಿಕೆಯಲ್ಲಿ ಮಾತನಾಡಿದ ಹನುಮಂತ, ದೇವರಾಣೆ ನಾನು ಗೆಲ್ಲುತ್ತೇನೆ ಅಂತ ಬಿಗ್‌ ಬಾಸ್‌ ಮನೆಗೆ ಬಂದಿರಲಿಲ್ಲ. ಹೋಗಿ ಮಜಾ ಮಾಡಿ ಬರೋಣ ಅಂತ ಬಂದಿದ್ದೆ ಎಂದು ತಿಳಿಸಿದರು. ನಾನು ಗೆಲ್ತೀನಿ ಅಂತ ಗೊತ್ತಿದ್ದರೆ ಬಾಯಿ ಪಾಠ ಮಾಡಿಕೊಂಡು ಬರುತ್ತಿದ್ದೆ. ಆದರೆ ಈಗ ಏನು ಮಾತನಾಡಬೇಕು ಅಂತ ಗೊತ್ತಾಗುತ್ತಿಲ್ಲ. ದೇವರು, ಸುದೀಪ್‌ ಸರ್‌, ಕನ್ನಡ ನಾಡಿನ ಜನರ ಆಶೀರ್ವಾದದಿಂದ ನಾನು ಗೆದ್ದಿದ್ದಿದ್ದೇನೆ ಎಂದರು.

Read More

ಬೆಂಗಳೂರು:- ಭಾರತದ ಮೊಟ್ಟ ಮೊದಲ ಡಬಲ್ ಡೆಕ್ಕರ್ ಪ್ಲೈ ಓವರ್ ರಸ್ತೆ ಕಳಪೆ ಆಗಿದ್ದು, ಎಲ್ಲೆಲ್ಲೂ ಇರುವ ಗುಂಡಿಗಳಿಂದ ಜನ ರೋಸಿ ಹೋಗಿದ್ದಾರೆ. https://ainlivenews.com/praja-tv-gadag-district-correspondent/ ಸ್ಥಳೀಯ ಶಾಸಕರು, ಸಚಿವರು ಆಗಿರುವ ರಾಮಲಿಂಗಾ ರೆಡ್ಡಿ ಅವರ ಪರಿಶ್ರಮದಿಂದ ಈ ಪ್ಲೈಓವರ್ ರೆಡಿಯಾಗಿದ್ದು, ಇದನ್ನು ರಾಮಲಿಂಗರೆಡ್ಡಿ ಮಾದರಿ ಎಂದೇ ಕರೆಯುತ್ತಿದ್ದಾರೆ. ಪ್ಲೈ ಓವರ್ ಓಪನ್ ಆಗಿ 5 ತಿಂಗಳಷ್ಟೇ ಆಗುತ್ತಿದೆ. ಮತ್ತೊಂದು ಮಾರ್ಗದ ಪ್ಲೈ ಓವರ್ ಕಾಮಗಾರಿ ಇನ್ನೂ ನಡೆಯುತ್ತಲೇ ಇದೆ. ಆದರೆ, ಈಗಾಗಲೇ ಈ ರಸ್ತೆಯಲ್ಲಿ ಎರಡು ಕಡೆ ಡಾಂಬರ್ ಕಿತ್ತು ಗುಂಡಿಗಳಾಗಿದ್ದು, ವಾಹನ ಸವಾರರಿಗೆ, ಅದರಲ್ಲೂ ದ್ವಿಚಕ್ರ ವಾಹನ ಸವಾರರಿಗೆ ಅಪಾಯಕರವಾಗಿ ಪರಿಣಮಿಸಿದೆ. ಗುಂಡಿ ಬಗ್ಗೆ ವಾಹನ ಸವಾರರು ಕೂಡ ಆಕ್ಷೇಪ ವ್ಯಕ್ತಪಡಿಸಿದ್ದು, ಯಾವ ಮಟ್ಟಕ್ಕೆ ಅಪಾಯಕರವಾಗಿದೆ ಎಂಬುದನ್ನೂ ತಿಳಿಸಿದ್ದಾರೆ. ಈಗಲೇ ರಸ್ತೆ ಗುಂಡಿಯನ್ನು ಸರಿ ಮಾಡದೇ ಹೋದರೆ ಮುಂದೆ ದೊಡ್ಡ ಗುಂಡಿಗಳಾಗಿ ಇಡೀ ರಸ್ತೆಯೇ ಗುಂಡಿಮಯವಾಗುವ ಸಾಧ್ಯತೆ ಇದೆ. ಡಬಲ್ ಡೆಕ್ಕರ್ ಪ್ಲೈಓವರ್ ರಸ್ತೆ ಮೇಲಿನ ಮೇಲಿನ ಗುಂಡಿ ಬಗ್ಗೆ…

Read More

ಗದಗ: ಗದಗನ ಕೆ ಎಚ್ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಜಾ ಟಿವಿ ಗದಗ ಜಿಲ್ಲಾ ವರದಿಗಾರ ಶರಣು ದೊಡ್ಡೂರ ಅವರು ಮಾಧ್ಯಮ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲ್ ಅವರು ಸನ್ಮಾನಿಸಿದ್ದಾರೆ. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್ ವಿ ಸಂಕನೂರ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ, ಜಿಲ್ಲಾ ಪಂಚಾಯತ್ ಸಿಇಓ ಭರತ್ ಎಸ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡ, ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

Read More

ಮೈಸೂರು:- ಥೈಲ್ಯಾಂಡ್ ಬ್ಯೂಟಿ ಕರೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖತರ್ನಾಕ್ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. https://ainlivenews.com/micro-finance-harassment-home-minister-who-gave-significant-authority-to-dc/ ಸರ್ಕಾರಿ ಕೆಲಸ ಬಿಟ್ಟು ಥೈಲ್ಯಾಂಡ್​ನಿಂದ ಯುವತಿಯನ್ನು ಕರೆತಂದು ಮೈಸೂರಿನ ಬೋಗಾದಿ ರಿಂಗ್ ರಸ್ತೆಯಲ್ಲಿನ ಹೋಟೆಲ್​ನಲ್ಲಿ​ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದವನನ್ನು ಇಲ್ಲಿನ ಸರಸ್ವತಿಪುರಂ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಇಮ್ರಾನ್ ಎಂದು ಗುರುತಿಸಲಾಗಿದೆ. ಆರೋಪಿ ರತನ್​ ಕೆಎಸ್​​ಆರ್​​ಟಿಸಿ ನೌಕರಿ ಬಿಟ್ಟು ವೈಶ್ಯಾವಾಟಿಕೆ ದಂಧೆ ನಡೆಸುತ್ತಿದ್ದನು. ವೈಶ್ಯಾವಾಟಿಕೆಗಾಗಿ ಥೈಲ್ಯಾಂಡ್​ನಿಂದ​​ ಯುವತಿಯನ್ನು ಕರೆಸಿದ್ದನು. ರತನ್ ನಡೆಸುತ್ತಿದ್ದ ವೇಶ್ಯಾವಾಟಿಕೆಗೆ ರೇವಣ್ಣ ಎಂಬಾತ ಸಾಥ್ ನೀಡಿದ್ದನು. ಆರೋಪಿ ರತನ್​ ​ಪ್ರತಿ ಗಿರಾಕಿಯಿಂದ 8-10 ಸಾವಿರ ರೂ. ವಸೂಲಿ ಮಾಡುತ್ತಿದ್ದನು. ಈ ಮಾಹಿತಿ ತಿಳಿದ ಸರಸ್ವತಿಪುರಂ ಠಾಣೆ ಪೊಲೀಸರು, ಶನಿವಾರ ಹೊಟೇಲ್​ ಮೇಲೆ ದಾಳಿ ಮಾಡಿ, ಇಬ್ಬರು ಯುವತಿಯರ ರಕ್ಷಣೆ ಮಾಡಿದ್ದಾರೆ. ಆರೋಪಿ ರತನ್​ ಸೇರಿದಂತೆ ಏಳು ಜನರನ್ನು ವಶಕ್ಕೆ ಪಡೆದಿದ್ದಾರೆ.

Read More

ತುಮಕೂರು:- ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಎಷ್ಟರ ಮಟ್ಟಿಗೆ ಇದೆ ಅನ್ನೋದು ನಿಮಗೆ ಈಗಾಗಲೇ ತಿಳಿದಿದೆ. ಹೀಗಾಗಿ ರಾಜ್ಯ ಸರ್ಕಾರವು ಕೂಡ ಗಂಭೀರವಾಗಿ ಪರಿಗಣಿಸಿದೆ. https://ainlivenews.com/heavy-rains-in-most-districts-of-karnataka-from-february-1/ ಮೈಕ್ರೋ ಫೈನಾನ್ಸ್  ಸಮಸ್ಯೆ ಕುರಿತು ಸಿಎಂ ನೇತೃತ್ವದಲ್ಲಿ ಉನ್ನತಮಟ್ಟದ ಸಭೆ ನಡೆಸಲಾಗಿದೆ. ಮೈಕ್ರೋ ಫೈನಾನ್ಸ್‌ಗಳಿಗೆ ಸಬಂಧಿಸಿದಂತೆ ಈಗಿರುವ ಕಾನೂನು ಬಲಪಡಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲದ ಹಣ ವಸೂಲಿ ಮಾಡಲು ಬಡವರಿಗೆ ತೊಂದರೆ ನೀಡುತ್ತಿದ್ದಾರೆ. ಮೈಕ್ರೋ ಫೈನಾನ್ಸ್ ಸಿಬ್ಬಂದಿ ಹಾವಳಿ ನಿಯಂತ್ರಿಸಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ತರಲಾಗುವುದು. ಸುಮೋಟೊ ಕೇಸ್ ತೆಗೆದುಕೊಳ್ಳಲು ಪೊಲೀಸರಿಗೆ ಅವಕಾಶವಿಲ್ಲ. ಇದಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ. ಅನಧಿಕೃತ ಫೈನಾನ್ಸ್ ಹಾವಳಿಯನ್ನು ಮಟ್ಟ ಹಾಕಲಾಗುವುದು. ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು. ಈ ವರ್ಷ ಏಳು ಜನರು ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಟ್ಟು 14 ಪ್ರಕರಣ ದಾಖಲಾಗಿವೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸ್…

Read More

ಬೆಂಗಳೂರು:- ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಫೆಬ್ರವರಿ 1 ರಿಂದ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. https://ainlivenews.com/drivers-reckless-driving-a-huge-lorry-filled-with-iron-pipe/ ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Read More

ನೆಲಮಂಗಲ: ಕಬ್ಬಿಣದ ಪೈಪ್ ತುಂಬಿದ ಬೃಹತ್ ಲಾರಿ ಪಲ್ಟಿ ಹೊಡೆದಿರುವ ಘಟನೆ ನೆಲಮಂಗಲ ತಾಲೂಕಿನ ಬೂದಿಹಾಳ್ ಗೇಟ್ ಬಳಿ ಜರುಗಿದೆ. https://ainlivenews.com/my-contest-for-bjps-presidency-is-sure-victory-is-certain-yatnal-tong-for-bsy-family/ ಘಟನೆ ಪರಿಣಾಮ, ರಸ್ತೆಯಲ್ಲಿ ಪೈಪ್ ಗಳು ಚೆಲ್ಲಾಪಿಲ್ಲಿಯಾಗಿದೆ. ತುಮಕೂರು ಮಾರ್ಗವಾಗಿ ಲಾರಿ ಬೆಂಗಳೂರು ಕಡೆ ಬರುತ್ತಿತ್ತು. ಈ ವೇಳೆ ಲಾರಿ ಚಾಲಕನ ಅತೀ ವೇಗ ಹಾಗೂ ನಿರ್ಲಕ್ಷ್ಯದಿಂದ ಲಾರಿ ಪಲ್ಟಿ ಆಗಿದೆ. ಬೆಳಗ್ಗಿನ ಜಾವ ಮೂರು ಗಂಟೆಗೆ ಈ ಘಟನೆ ನಡೆದಿದೆ. ಘಟನೆ ಪರಿಣಾಮ, ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಾರಿ ಟ್ರಾಫಿಕ್ ಉಂಟಾಗಿದೆ. ನೆಲಮಂಗಲ ಸಂಚಾರಿ ಪೊಲೀಸರಿಂದ ತೆರವು ಕಾರ್ಯ ನಡೆದಿದೆ.

Read More