ಬೆಂಗಳೂರು: ನಟ ದರ್ಶನ್ ಮಧ್ಯಂತರ ಜಾಮೀನು ತಡೆ ಕೋರಿ ಮೇಲ್ಮನವಿ ಸಲ್ಲಿಕೆಗೆ ವಿಳಂಬ ಆಗಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮೇಲ್ಮನವಿ ಯಾವಾಗ ಸಲ್ಲಿಸಬೇಕು ಎಂಬುದನ್ನು ಗೃಹ ಇಲಾಖೆ ಕಾರ್ಯದರ್ಶಿ ತೀರ್ಮಾನಿಸುತ್ತಾರೆ. ಮೇಲ್ಮನವಿ ಸಲ್ಲಿಸುವುದಾದರೆ ಸಲ್ಲಿಸಿ ಎಂದು ನಾನೂ ಸೂಚಿಸಿದ್ದೇನೆ. ಇಂಥ ಪ್ರಕರಣಗಳಲ್ಲಿ ಪ್ರಕ್ರಿಯೆಗಳನ್ನು ಅನುಸರಿಸಿ ಮುಂದುವರಿಯಬೇಕಾಗುತ್ತದೆ ಎಂದರು. https://ainlivenews.com/does-your-mouth-smell-when-you-eat-onions-do-this-to-avoid/ ಮೇಲ್ಮನವಿ ಸಲ್ಲಿಕೆ ವಿಚಾರವಾಗಿ ಕಾನೂನು ಇಲಾಖೆಯಿಂದಲೂ ಮಾಹಿತಿ ತೆಗೆದುಕೊಳ್ಳಬೇಕು. ಪೊಲೀಸ್ ಇಲಾಖೆ ಯಿಂದಲೂ ಕೂಡ ಪ್ರಸ್ತಾವನೆ ಬರಬೇಕು. ನಂತರವೇ ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಪರಮೇಶ್ವರ್ ಹೇಳಿದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆಗಿರುವ ದರ್ಶನ್ಗೆ ಷರತ್ತುಬದ್ಧ ಮಧ್ಯಂತರ ಜಾಮೀನು ದೊರೆತಿದ್ದು ಅವರು ಜೈಲಿನಿಂದ ಬಿಡುಗಡೆಯಾಗಿ ಕೆಲವು ದಿನಗಳಾಗಿವೆ. ಅವರು ಬೆನ್ನು ನೋವಿನಿಂದ ಬಳಲುತ್ತಿದ್ದಾರೆ ಎನ್ನಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
Author: AIN Author
ಶಿವಮೊಗ್ಗ: ಪುತ್ರ ಹಾಗೂ ಶಿಗ್ಗಾಂವಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಯವರೊಂದಿಗೆ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶಿಗ್ಗಾಂವಿಯಲ್ಲಿ ತಮ್ಮ ಮತ ಹಕ್ಕು ಚಲಾಯಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಶಿಗ್ಗಾವಿ ಸವಣೂರು ಕ್ಷೇತ್ರದಲ್ಲಿ ಆರಂಭದಿಂದಲೂ ನೂರಕ್ಕು ನೂರು ಸಾಮಾನ್ಯ ಮತದಾರರು ಬಹಿರಂಗ ಬೆಂಬಲ ವ್ಯಕ್ತ ಪಡಿಸಿದ್ದಾರೆ. ದಿನೇ ದಿನೆ ಹೆಚ್ಚಳವಾಗಿದೆ ಇದೆಲ್ಲದರ ಹಿನ್ನೆಲೆಯಲ್ಲಿ ಭರತ್ ಬೊಮ್ಮಾಯಿ ಬಹಳ ಅಂತರದಿಂದ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. https://ainlivenews.com/does-your-mouth-smell-when-you-eat-onions-do-this-to-avoid/ ಈ ಸರ್ಕಾರ ವಿಧಾನಸೌಧಕ್ಕೆ ಕೀಲಿ ಹಾಕಿ ಹಣದ ಚೀಲ ಹಿಡಿದುಕೊಂಡು ಬಂದು ಚುನಾವಣೆ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿ ಸರ್ಕಾರಿ ಕೆಲಸಗಳನ್ನು ನಿಲ್ಲಿಸಿ ಚುನಾವಣೆ ನಡೆಸಿದ್ದಾರೆ. ಅವರು ತಮ್ಮ ರಾಜಕೀಯ ಅಧಪತನವನ್ನು ಈ ರೀತಿ ತೊರಿಸಿದ್ದಾರೆ ಎಂದರು. ಕಾಂಗ್ರೆಸ್ ನವರು ನಮ್ಮ ಮೇಲೆ ಮಾಡಿರುವ ಅರೋಪ ಯಾವುದು ಸತ್ಯವಲ್ಲ. ನವೆಂಬರ್ 23 ರಕ್ಕೆ ಅದಕ್ಕೆಲ್ಲ ಉತ್ತರ ಸಿಗುತ್ತದೆ ಎಂದರು. ಕಾಂಗ್ರೆಸ್ ಅಭ್ಯರ್ಥಿ ರೌಡಿ ಶೀಟರ್ ಪ್ರಕರಣ ಇನ್ನು ಖುಲಾಸೆಯಾಗಿಲ್ಲ…
ರಾಮನಗರ: ಕನಕಪುರ ತಾಲ್ಲೂಕಿನ ಹೊರ ವರ್ತುಲ ರಸ್ತೆಯ ಕಲ್ಲಹಳ್ಳಿ ಗ್ರಾಮದಲ್ಲಿ ಆಟೋ ಮತ್ತು ಕಾರು ನಡುವೆ ಡಿಕ್ಕಿಯಾಗಿ ಓರ್ವ ಮಹಿಳೆ ಸ್ಥಳದಲ್ಲಿ ಸಾವನ್ನಪ್ಪಿ, ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಬೆಂಗಳೂರು ಮಾರ್ಗವಾಗಿ ಚಲಿಸುತ್ತಿದ್ದ ಕಾರು ಮತ್ತು ಮೈಸೂರು ಮಾರ್ಗವಾಗಿ ಚಲಿಸುತ್ತಿದ್ದ ಆಟೋ ಮುಖಾಮುಖಿ ಡಿಕ್ಕಿಯಾಗಿದೆ. https://ainlivenews.com/does-your-mouth-smell-when-you-eat-onions-do-this-to-avoid/ ಡಿಕ್ಕಿ ಹೊಡೆದ ರಭಸಕ್ಕೆ ಆಟೋದಲಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಇನ್ನೂ ಸಾವನ್ನಪ್ಪಿದ ಮೃತ ದೇಹವನ್ನು ಹಾರೋಹಳ್ಳಿಯ ದಯಾನಂದ ಸಾಗರ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಗಾಯಾಳುಗಳನ್ನು ಸಹ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕನಕಪುರ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಬೆಳಗಾವಿ: ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ರಮೇಶ್ ಕತ್ತಿ ದಿಢೀರ್ ರಾಜೀನಾಮೆಯಿಂದ ತೆರವಾಗಿರುವ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆಗೆ ನಡೆಯಲಿದ್ದು ಬೆಳಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಪ್ರಾರಂಭವಾಗಲಿದೆ. ಮತ್ತೊಂದೆಡೆ ಅವಿರೋಧವಾಗಿ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಆಯ್ಕೆಗೆ ಕಸರತ್ತು ನಡೆಸಿದ್ದು ಈಗಾಗಲೇ ನಿರ್ದೇಶಕರ ಜೊತೆಗೆ ಎರಡ್ಮೂರು ಹಂತದ ಮಾತುಕತೆ ನಡೆದಿದೆ. ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಬಾಲಚಂದ್ರ ಜಾರಕಿಹೊಳಿ, ರಮೇಶ್ ಕತ್ತಿ ನೇತೃತ್ವದಲ್ಲಿ ಮಾತುಕತೆ ನಡೆದಿದೆ. ಅಣ್ಣಾಸಾಹೇಬ್ ಜೊಲ್ಲೆ, ಮಹಾಂತೇಶ ದೊಡ್ಡಗೌಡರ, ಪ್ರಭಾರಿ ಅಧ್ಯಕ್ಷ ಸುಭಾಷ ಡವಳೇಶ್ವರ ಮಧ್ಯೆ ತೀವ್ರ ಫೈಟ್ ಇದ್ದು ಅಣ್ಣಾಸಾಹೇಬ್ ಜೊಲ್ಲೆಗೆ ಕೆಲ ನಿರ್ದೇಶಕರ ವಿರೋಧ ಹಿನ್ನೆಲೆ ಒಮ್ಮತ ಮೂಡಿಲ್ಲ. ಹೀಗಾಗಿ ಪ್ರತ್ಯೇಕವಾಗಿ ನಿರ್ದೇಶಕರನ್ನು ಕರೆಯಿಸಿ ಅಧ್ಯಕ್ಷ ಯಾರಾಗಬೇಕೆಂದು ಅಭಿಪ್ರಾಯ ಸಂಗ್ರಹ ಮಾಡಲಾಗುತ್ತದೆ. https://ainlivenews.com/does-your-mouth-smell-when-you-eat-onions-do-this-to-avoid/ ಬಳಿಕ ಒಮ್ಮತದ ಅಭ್ಯರ್ಥಿ ಆಯ್ಕೆ ಬಳಿಕ ಲಕ್ಷ್ಮಣ ಸವದಿ, ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಹೆಸರು ಘೋಷಣೆ ಮಾಡಲಿದ್ದಾರೆ. ಕಣದಲ್ಲಿ ಅಭ್ಯರ್ಥಿಗಳಿದ್ದರೆ ಚುನಾವಣೆ, ಇಲ್ಲವಾದರೆ ಅವಿರೋಧ…
ಶಿವಮೊಗ್ಗ: ಕಾಂಗ್ರೆಸ್ʼನವರು ವೋಟಿಗಾಗಿ ಭಾರತವನ್ನೇ ಮತಾಂತರ ಮಾಡಲು ಹೊರಟ್ಟಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ ಕೊಡುತ್ತೇವೆ ಎನ್ನುತ್ತಾರೆ. ಹಿಂದೂಸ್ಥಾನ ಏನು ಪಾಕಿಸ್ತಾನ ಮಾಡಲು ಹೊರಟ್ಟಿದ್ದೀರಾ? ಸಾಧು ಸಂತರ ನೇತೃತ್ವದಲ್ಲಿ ದಂಗೆ ಏಳುತ್ತಾರೆ. ಬಾಂಗ್ಲಾದೇಶದಲ್ಲಿ ಹಲ್ಲೆ, ಕೊಲೆ ಆಯ್ತು. ಬಾಂಗ್ಲಾದೇಶದ ಪ್ರಧಾನಿಗೆ ಭಾರತದಲ್ಲಿ ರಕ್ಷಣೆ ಕೊಟ್ಟು ಇಟ್ಟಿದ್ದೇವೆ. ಪಾಕಿಸ್ತಾನದಲ್ಲಿ ಹಿಂದೂಗಳ ಹತ್ಯೆಯಾಯ್ತು. ಭಾರತದಲ್ಲಿಯೂ ಮುಸ್ಲಿಂರು ಈ ರೀತಿ ಮಾಡಲು ಹೊರಟ್ಟಿದ್ದಾರೆ. ಕಾಂಗ್ರೆಸ್‌ನವರು ವೋಟಿಗಾಗಿ ಭಾರತವನ್ನೇ ಮತಾಂತರ ಮಾಡಲು ಹೊರಟ್ಟಿದ್ದಾರೆ. ನೇರಾ ನೇರ ಖಂಡನೆ ಮಾಡಬೇಕು. ಹಿಂದೂಗಳಿಗೆ ಅಪಮಾನ ಮಾಡುತ್ತಿದ್ದಾರೆ. ಅವರ ಮೀಸಲಾತಿ ಕಿತ್ತುಕೊಳ್ಳಲು ಹೊರಟ್ಟಿದ್ದಾರೆ. ಹಿಂದೂ ಸಮಾಜ ದಂಗೆ ಎದ್ದರೆ ಈ ಸರ್ಕಾರ, ನೀವೇ ಕಾರಣರಾಗುತ್ತೀರಿ ಎಂದು ಎಚ್ಚರಿಕೆ ನೀಡಿದರು. https://ainlivenews.com/does-your-mouth-smell-when-you-eat-onions-do-this-to-avoid/ ವಕ್ಫ್ ನೋಟಿಸ್ ವಾಪಸ್ ತೆಗೆದುಗೊಂಡಿದ್ದೇವೆ ಎಂದು ಹೇಳುತ್ತಾರೆ ಆದರೆ ಸಿಎಂ, ಡಿಸಿಎಂ ಈ ಬಗ್ಗೆ ನ್ಯಾಯ ಕೊಡಿಸುತ್ತೇವೆ ಎಂದು ಹೇಳುವುದಿಲ್ಲ. ವಿಪಕ್ಷಗಳು ರಾಜಕಾರಣ ಮಾಡುತ್ತೇವೆ ಎಂದು ಹೇಳಿ ರಾಜಕಾರಣ ಮಾಡುತ್ತಿದ್ದಾರೆ. ಅಂಬೇಡ್ಕರ್ ಇಸ್ಲಾಂ…
ಮೈಸೂರು, ನವೆಂಬರ್ 13: ಬಿಜೆಪಿಯವರ ಮೇಲೆ ಅನೇಕ ಆರೋಪಗಳಿವೆ. ಕರೋನಾ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅವ್ಯವಹಾರಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಡಿ.ಕುನ್ಹಾ ಆಯೋಗ ವರದಿ ಸಲ್ಲಿಸಿದ್ದು, 330 ರೂಪಾಯಿಗೆ ಸಿಗುವ ಪಿಪಿಇ ಕಿಟ್ ನ್ನು 2140 ರೂಪಾಯಿಗಳಿಗೆ ಖರೀದಿ ಮಾಡಿದ್ದಾರೆ. ಇದಕ್ಕೆ ನರೇಂದ್ರ ಮೋದಿ ಏನು ಹೇಳುತ್ತಾರೆ? ಭ್ರಷ್ಟಾಚಾರ ಮಾ ಡಿರುವುದು ಅವರ ಸರ್ಕಾರ ನಮ್ಮ ಸರ್ಕಾರದಲ್ಲಿ ಯಾವುದೇ ಭ್ರಷ್ಟಾಚಾರವಾಗಿಲ್ಲ. https://ainlivenews.com/does-your-mouth-smell-when-you-eat-onions-do-this-to-avoid/ ಭ್ರಷ್ಟಾಚಾರ ಮಾಡುವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿಗಳು ಕಾಂಗ್ರೆಸ್ ಪಕ್ಷ ಹಗಲು ದರೋಡೆ ಮಾಡುತ್ತಿದೆ. ಸುಳ್ಳು ಹೇಳಿಕೊಂಡು ಅಧಿಕಾರಕ್ಕೆ ಬಂದಿದ್ದಾರೆ ಎಂದಿರುವ ಬಗ್ಗೆ ಮಾಧ್ಯಮದವರಿಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ವಸೂಲಿ ಮಾಡಿರುವುದನ್ನು ನಿರೂಪಿಸಿದರೆ ನಾನು ರಾಜಕೀಯ ನಿವೃತ್ತಿ ನರೇಂದ್ರ ಮೋದಿ ಅವರು ಅಬಕಾರಿ ಇಲಾಖೆಯಲ್ಲಿ 700 ಕೋಟಿ ವಸೂಲಿ ಮಾಡಿದ್ದಾರೆ ಎಂದು ಸುಳ್ಳು ಹೇಳುತ್ತಿದ್ದಾರೆ. ಒಂದೇ ಒಂದು ರೂಪಾಯಿ ವಸೂಲಿ ಮಾಡಿರುವುದನ್ನು ನಿರೂಪಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ…
ಹುಬ್ಬಳ್ಳಿ: ಸಹಕಾರಿ ಸಂಸ್ಥೆಗಳಿಗೆ ರಿಯಾಯಿತಿ ದರದಲ್ಲಿ ನೀಡುವ ಸಾಲದ ಮೊತ್ತವನ್ನು ಕಡಿಮೆ ಮಾಡುವುದರಿಂದ ಕೃಷಿ ಕ್ಷೇತ್ರಕ್ಕೆ ಹಿನ್ನಡೆಯಾಗಲಿದ್ದು, ಈ ಮೊದಲಿನ ಪ್ರಮಾಣದಲ್ಲೇ ಸಾಲ ನೀಡಬೇಕು ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಆಗ್ರಹಿಸಿದರು. ರಾಜ್ಯದಲ್ಲಿ ಸುಮಾರು 63 ಲಕ್ಷ ರೈತರಿದ್ದು, ಈ ಪೈಕಿ ಸುಮಾರು 30 ಲಕ್ಷ ರೈತರು ಕೃಷಿ ಸಾಲಕ್ಕೆ ಡಿಸಿಸಿ ಬ್ಯಾಂಕ್ ಗಳನ್ನು ಅವಲಂಬಿಸಿದ್ದಾರೆ. ನಬಾರ್ಡ್ ರಿಯಾಯಿತಿ ದರದ ಸಾಲದ ಮೊತ್ತ ಕಡಿಮೆ ಮಾಡಿದರೆ ಡಿಸಿಸಿ ಬ್ಯಾಂಕುಗಳ ಕೃಷಿ ಸಾಲ ವಿತರಣೆಯ ಸಾಮರ್ಥ್ಯ ಕಡಿಮೆಯಾಗಲಿದ್ದು, ಇದು ಕೃಷಿ ಕ್ಷೇತ್ರದ ಹಿನ್ನಡೆಗೆ ಕಾರಣವಾಗಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಆತಂಕ ವ್ಯಕ್ತಪಡಿದರು. https://ainlivenews.com/does-your-mouth-smell-when-you-eat-onions-do-this-to-avoid/ ನಬಾರ್ಡ್ ನೀಡುವ ರಿಯಾಯಿತಿ ಬಡ್ಡಿ ದರದ ಸಾಲದ ಮೊತ್ತದಿಂದಲೇ ಡಿಸಿಸಿ ಬ್ಯಾಂಕುಗಳು ರೈತರಿಗೆ ಕೃಷಿ ಸಾಲ ವಿತರಣೆ ಮಾಡುತ್ತವೆ. ರಾಜ್ಯದಲ್ಲಿ ಕೆಲವೇ ಡಿಸಿಸಿ ಬ್ಯಾಂಕುಗಳು ಮಾತ್ರ ಆರ್ಥಿಕವಾಗಿ ಸುಸ್ಥಿತಿಯಲ್ಲಿದ್ದು, ಇತರ ಡಿಸಿಸಿ ಬ್ಯಾಂಕುಗಳು ನಬಾರ್ಡ್ ನೀಡುವ ಹಣದಲ್ಲೇ ರೈತರಿಗೆ ಕೃಷಿ ಸಾಲ…
ಸಂಡೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಆರಂಭವಾಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ, ಬಳ್ಳಾರಿ ಜಿಲ್ಲೆಯ ಸಂಡೂರು, ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಿಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಇನ್ನೂ ಜಿಲ್ಲೆಯ ಸಂಡೂರು ತಾಲ್ಲೂಕಿನ ತಾರಾನಗರದಲ್ಲಿರುವ ಮತಗಟ್ಟೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷದ ಗುರುತಿಗಾಗಿ ಬಣ್ಣ ಬಣ್ಣದ ಶಾಲುಗಳನ್ನು ಧರಿಸಿಕೊಂಡು ಬರುತ್ತಿದ್ದಾರೆ. https://ainlivenews.com/does-your-mouth-smell-when-you-eat-onions-do-this-to-avoid/ ಸಂಡೂರು ಉಪಚುನಾವಣೆಯಲ್ಲಿ ಪಕ್ಷದ ಗುರುತಿಗಾಗಿ ಬಣ್ಣ ಬಣ್ಣದ ಶಾಲುಗಳನ್ನು ಧರಿಸಿ ಮುಖಂಡರು ಹಾಗೂ ಕಾರ್ಯಕರ್ತರು ಮತಗಟ್ಟೆಗೆ ಬಂದು ದಂಗಲ್ ಎಬ್ಬಿಸಿದ್ದಾರೆ. ಬಿಜೆಪಿ ಮುಖಂಡರು ಕೇಸರಿ, ಬಿಳಿ ಶಾಲು ಧರಿಸಿ ಹಾಗೂ ಕಾಂಗ್ರೆಸ್ ಮುಖಂಡರು ಹಸಿರು ಶಾಲು ಧರಿಸಿ ಬರುತ್ತಿದ್ದಾರೆ. ಇಲ್ಲಿಯ ಜನರು ಯಾವುದೇ ಚುನಾವಣೆ ನಡೆದರೂ ಶಾಲು ಧರಿಸಿಯೇ ಚುನಾವಣೆ ನಡೆಸುತ್ತಾರೆ. ಇನ್ನೂ ಇಂದು ನಡೆಯುತ್ತಿರುವ ಉಪಚುನಾವಣೆಯಲ್ಲಿ ಸಂಡೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಾಂಗ್ರೆಸ್ ಸಂಸದ ತುಕಾರಾಂ ಪತ್ನಿ ಅನ್ನಪೂರ್ಣ ತುಕಾರಾಂ ಮತ್ತು ಬಿಜೆಪಿಯಿಂದ ಬಂಗಾರು ಹನಮಂತ ಕಣದಲ್ಲಿದ್ದಾರೆ.
ಬೆಂಗಳೂರು: ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಜರುಗಿದೆ. 27 ವರ್ಷದ ಮನು ಸಿ.ಬಿ ಮೃತ ಸಿಎಆರ್ ಕಾನ್ಸ್‌ಟೇಬಲ್ ಎನ್ನಲಾಗಿದೆ. ನಾಗರಭಾವಿಯಿಂದ ನಾಯಂಡಹಳ್ಳಿ ಕಡೆಗೆ ಕಾನ್ಸ್ಟೇಬಲ್ ಬೈಕ್ ನಲ್ಲಿ ಬರ್ತಿದ್ದರು. ತಮ್ಮ ಹೋಂಡಾ ಶೈನ್ ಬೈಕ್‌ನಲ್ಲಿ ಮನು ಬರ್ತಿದ್ದ. ರಿಂಗ್ ರಸ್ತೆಯ ಸರ್ವಿಸ್ ರಸ್ತೆಯಲ್ಲಿ ಬೈಕ್ ಚಾಲನೆ ಮಾಡಿಕೊಂಡು ಮನು ಬಂದಿದ್ದ. ಈ ವೇಳೆ ಆಯತಪ್ಪಿ ರಸ್ತೆಯ ಬದಿಯಲ್ಲಿ ಬಿದ್ದಿದ್ದ ಮರಳಿನ ಮೇಲೆ ಬೈಕ್ ಹತ್ತಿದೆ. ಬೈಕ್ ನಿಯಂತ್ರಣ ತಪ್ಪಿ ಪಾದಚಾರಿ ರಸ್ತೆಗೆ ಡಿಕ್ಕಿಯಾಗಿದೆ. ಬಳಿಕ ಟಾಟಾ 401 ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿದೆ. https://ainlivenews.com/tired-of-cockroaches-and-flies-in-your-home-follow-these-tips/ ಘಟನೆಯಲ್ಲಿ ಬೈಕ್ ಸವಾರ ಮನು ತಲೆ ಮತ್ತು ದೇಹದ ಇತರೆ ಭಾಗಗಳಿಗೆ ಪೆಟ್ಟಾಗಿದೆ. ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮನು ಸಾವನ್ನಪ್ಪಿದ್ದು, ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಕ್ನೋ: ರಾಜ್ಯದಲ್ಲಿನ ಮಹಿಳೆಯರ ಸುರಕ್ಷತೆಯ ದೃಷ್ಟಿಯಿಂದ ಹಲವು ಕ್ರಮಗಳನ್ನು ತೆಗೆದುಕೊಳ್ಳುವಂತೆ ಉತ್ತರ ಪ್ರದೇಶ ಮಹಿಳಾ ಆಯೋಗವು ಪ್ರಸ್ತಾವನೆಗಳನ್ನು ಸರ್ಕಾರದ ಮುಂದಿಟ್ಟಿದೆ. ಮಹಿಳೆಯರ ಸುರಕ್ಷತೆ, ಭದ್ರತೆಗಾಗಿ ಉತ್ತರಪ್ರದೇಶದ ಮಹಿಳಾ ಆಯೋಗ ಸರ್ಕಾರದ ಮುಂದೆ ಹಲವು ಪ್ರಸ್ತಾವನೆಗಳನ್ನು ಇರಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಥವಾ ಕಾರ್ಯನಿರ್ವಹಿಸುವ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ, ಅತ್ಯಾಚಾರದಂತಹ ಪ್ರಕರಣಗಳನ್ನು ಕಡಿಮೆ ಮಾಡುವ ಮುಖ್ಯ ಉದ್ದೇಶದಿಂದ ಮಹಿಳಾ ಆಯೋಗ ಈ ಪ್ರಸ್ತಾವನೆಯನ್ನು ಸರ್ಕಾರದ ಮುಂದಿರಿಸಿದೆ. ಸಲ್ಲಿಸಿದ ಪ್ರಸ್ತಾವನೆಯಲ್ಲಿ ಪುರುಷ ಟೈಲರ್‌ಗಳು ಇನ್ನು ಮುಂದೆ ಮಹಿಳೆಯರ ಅಳತೆಗಳನ್ನು ತೆಗೆದುಕೊಳ್ಳುವಂತಿಲ್ಲ. ಜಿಮ್‌ಗಳಲ್ಲಿ ಅಥವಾ ಯೋಗ ತರಬೇತಿ ಕೇಂದ್ರಗಳಲ್ಲಿ ಪುರುಷರು ಮಹಿಳೆಯರಿಗೆ ತರಬೇತಿ ನೀಡುವಂತಿಲ್ಲ. ಶಾಲಾ ಬಸ್‌ಗಳಲ್ಲಿ ಮಹಿಳಾ ಸಿಬ್ಬಂದಿ, ಮಹಿಳೆಯರಿಗೆ ಉಡುಪುಗಳಿಗೆ ಸಂಬಂಧಿಸಿದ ಅಂಗಡಿಗಳಲ್ಲಿ ಮಹಿಳಾ ಸಿಬ್ಬಂದಿ ಇರುವಂತೆ ಶಿಫಾರಸು ಮಾಡಿದೆ. https://ainlivenews.com/tired-of-cockroaches-and-flies-in-your-home-follow-these-tips/ ಲಕ್ನೋದಲ್ಲಿ ನಡೆದ ಸಭೆಯಲ್ಲಿ ಈ ಸಲಹೆಗಳ ಕುರಿತು ಚರ್ಚಿಸಲಾಯಿತು. ಆಯೋಗದ ಸದಸ್ಯರು ಮಹಿಳೆಯರ ಸುರಕ್ಷತೆಯ ದೃಷ್ಟಿಯಿಂದ ಪರಿಹರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳುವಂತೆ ಚಿಂತನೆ ನಡೆಸಲಾಯಿತು. ಇದೇ ವೇಳೆ ಆಯೋಗದ…