ಬೆಂಗಳೂರು: ಕರ್ನಾಟಕದ ಅಯ್ಯಪ್ಪಸ್ವಾಮಿ ಭಕ್ತರಿಗೆ KSRTC ಭರ್ಜರಿ ಗುಡ್ ನ್ಯೂಸ್ ನೀಡಿದೆ. ಹೌದು ಮೊದಲ ಬಾರಿಗೆ ಕೆಎಸ್‌ಆರ್‌ಟಿಸಿಯಿಂದ ಶಬರಿಮಲೆಗೆ ವೋಲ್ವೋ ಬಸ್ ಸಂಚರಿಸಲಿದೆ. ಇದೇ ನವೆಂಬರ್ 29ರಿಂದ ಬೆಂಗಳೂರಿನಿಂದ ಶಬರಿಮಲೆಗೆ ಬಸ್ ಸಂಚಾರ ಪ್ರಾರಂಭವಾಗಲಿದೆ. ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಭಕ್ತಾದಿಗಳು ತೆರಳುವ ಸೀಸನ್, https://ainlivenews.com/tired-of-cockroaches-and-flies-in-your-home-follow-these-tips/ ಇದಾಗಿದ್ದರಿಂದ ಮಾಲಾಧಾರಿಗಳ ಪ್ರಯಾಣಕ್ಕಾಗಿ ಮೊದಲ ಬಾರಿಗೆ ಬೆಂಗಳೂರಿನಿಂದ ಶಬರಿಮಲೆಗೆ ವೋಲ್ವೋ ಬಸ್ ಸಂಚರಿಸಲಿದೆ. ಶಾಂತಿನಗರದಿಂದ ಶಬರಿಮಲೆ ನೀಲಕ್ಕಲ್‌ಗೆ 1,750 ರೂ. ಪ್ರಯಾಣ ದರವನ್ನು ಕೆಎಸ್‌ಆರ್‌ಟಿಸಿ ನಿಗದಿ ಮಾಡಿದೆ. ಶಾಂತಿನಗರದಿಂದ ನೀಲಕ್ಕಲ್ ಹಾಗೂ ನೀಲಕ್ಕಲ್‌ನಿಂದ ಶಾಂತಿನಗರಕ್ಕೆ ವೋಲ್ವೋ ಬಸ್ ಸಂಚಾರ ಮಾಡಲಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.
Author: AIN Author
ಇಸ್ಲಾಮಾಬಾದ್: ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಆತಿಥ್ಯದಿಂದ ಹಿಂದೆ ಸರಿಯಲು ಸಜ್ಜಾಗಿದೆ ಎಂದು ಪಾಕಿಸ್ತಾನದ ಮಾಧ್ಯಮವೊಂದು ವರದಿ ಮಾಡಿದೆ. ಆದ್ರೆ ಭಾರತ ತಂಡ ಪಾಕಿಸ್ತಾನಕ್ಕೆ ಬಾರದೇ ಇದ್ದರೂ ನಾವು ಚಾಂಪಿಯನ್ಸ್ ಟ್ರೋಫಿ ಆಯೋಜಿಸುತ್ತೇವೆ ಎಂದು ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (PCB) ಐಸಿಸಿ ತಿಳಿಸಿದೆ ಎಂದು ವರದಿಯಾಗಿದೆ.ಹೈಬ್ರಿಡ್ ಮಾದರಿಯಲ್ಲಿ ಪಂದ್ಯ ನಡೆಸಲು ಸಾಧ್ಯವೇ ಎಂದು ಐಸಿಸಿ ಪಿಸಿಬಿಯನ್ನು ಕೇಳಿತ್ತು. ಈ ಪ್ರಶ್ನೆಗೆ ಪಿಸಿಬಿ ಭಾರತ ತಂಡ ಪಾಕ್ʼಗೆ ಬರಲಿ ಅಥವಾ ಬಾರದೇ ಇದ್ದರೂ ಇದ್ದರೂ ನಾವು ಟೂರ್ನಿಯನ್ನು ಆಯೋಜಿಸುಸುತ್ತೇವೆ ಎಂದು ಪತ್ರ ಬರೆದಿದೆ. ಭದ್ರತಾ ದೃಷ್ಟಿಯಿಂದ ಭಾರತ ತಂಡ ಪಾಕಿಸ್ತಾನಕ್ಕೆ ತೆರಳಲು ನಿರಾಕರಿಸಿತ್ತು. ಬಳಿಕ ದುಬೈಯಲ್ಲಿ ಹೈಬ್ರಿಡ್ ಮಾದರಿಯಲ್ಲಿ ಪಂದ್ಯ ನಡೆಸುವ ಬಗ್ಗೆ ಪ್ರಸ್ತಾಪವಾಗಿತ್ತು. ಈಗ ಈ ಎಲ್ಲಾ ಪ್ರಸ್ತಾಪವನ್ನು ಪಾಕಿಸ್ತಾನ ನಿರಾಕರಿಸಿದೆ. ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಇತ್ತೀಚೆಗೆ ಹೈಬ್ರಿಡ್ ಮಾದರಿಯಲ್ಲಿ ಪಂದ್ಯಾವಳಿಯನ್ನು ಆಯೋಜಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದರು. https://ainlivenews.com/tired-of-cockroaches-and-flies-in-your-home-follow-these-tips/ ಅಂತಹ ವ್ಯವಸ್ಥೆ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಹೇಳಿದ್ದರು. ಈಗಾಗಲೇ ಟಿವಿ ರೈಟ್ಸ್…
ಬೆಂಗಳೂರು:- ಬಿಬಿಎಂಪಿ ವ್ಯಾಪ್ತಿಯ ಆಸ್ತಿಗಳ ಇ ಖಾತಾವು ಬೆಂಗಳೂರು ಒನ್ ಕೇಂದ್ರದಲ್ಲಿ ದೊರೆಯಲಿದೆ. ಬಿಬಿಎಂಪಿ ಕಚೇರಿಗಳಿಗೆ ಅಲೆದಾಡುವುದರ ಬದಲಿಗೆ ಸಮೀಪದ ಬೆಂಗಳೂರು ಒನ್ ಕೇಂದ್ರಗಳಿಗೆ ತೆರಳಿ ನಿಗದಿತ ಶುಲ್ಕ ನೀಡಿ ಇ ಖಾತಾ ಪಡೆಯಬಹುದು. https://ainlivenews.com/no-more-urgent-hearing-on-oral-plea-sanjeev-khanna/ ಇ-ಖಾತಾ ಪಡೆಯಲು ಶುಲ್ಕ ಎಷ್ಟು? ಬೆಂಗಳೂರು ಒನ್ ಕೇಂದ್ರದಲ್ಲಿ 45 ರೂ. ಶುಲ್ಕ ಮತ್ತು ಪ್ರತಿ ದಾಖಲೆಯ ಪುಟ ಸ್ಕ್ಯಾನ್ ಮಾಡಲು 5 ರೂ. ಪಾವತಿಸಬೇಕು. ಬಿಬಿಎಂಪಿಗೆ 125 ರೂ.(ಅಂತಿಮ ಇ-ಖಾತಾ ಮುದ್ರಣಕ್ಕೆ ಸಿದ್ಧವಾದಾಗ ಮಾತ್ರ) ಪಾವತಿಸಬೇಕು. ಯಾವೆಲ್ಲ ದಾಖಲೆ ಪತ್ರಗಳು ಬೇಕು ಬೆಂಗಳೂರು ಒನ್‌ನಲ್ಲಿ ಇಖಾತೆ ಪಡೆಯಲು ದಾಖಲೆ ಪತ್ರಗಳನ್ನು ತೋರಿಸಿದರೆ ಸಾಕು, ಬೆಂಗಳೂರು ಒನ್ ಕೇಂದ್ರಗಳಲ್ಲಿ ಇಟ್ಟುಕೊಳ್ಳಲು ನೀಡಬಾರದು. ಕೆಳಗಿನ ದಾಖಲೆಗಳ ಪ್ರತಿಯೊಂದಿಗೆ ನೀವು ಬೆಂಗಳೂರು ಒನ್ ಕೇಂದ್ರವನ್ನು ಸಂಪರ್ಕಿಸಬೇಕು(ಅವುಗಳಲ್ಲಿ ಕೆಲವನ್ನು ತೋರಿಸಲು ಮತ್ತು ಸ್ಕ್ಯಾನ್ ಮಾಡಲು ಮಾತ್ರ ಅಲ್ಲಿ ಸಲ್ಲಿಸುವ/ನೀಡುವ ಅಗತ್ಯವಿಲ್ಲ) ಎಂದು ಬಿಬಿಎಂಪಿ ಮಾಹಿತಿ ನೀಡಿದೆ. (1) ನಿಮ್ಮ ಆಸ್ತಿ ತೆರಿಗೆ ರಶೀದಿ (2) ನಿಮ್ಮ ಮಾರಾಟ ಅಥವಾ…
ಭಾರತೀಯ ಸಂಸ್ಕೃತಿಯಲ್ಲಿ ತುಳಸಿಗೆ ಬಹುಮುಖ್ಯ ಸ್ಥಾನವಿದೆ. ಅದರಲ್ಲೂ ತುಳಸಿ ಗಿಡದಲ್ಲಿ ದೇವಾನು ದೇವತೆಗಳು ನೆಲೆಸಿರುತ್ತಾರೆ ಎಂಬ ನಂಬಿಕೆ ಹಿಂದೂಗಳಲ್ಲಿದೆ. ಇನ್ನು ಪುರಾಣಗಳಲ್ಲೂ ತುಳಸಿ ಬಗ್ಗೆ ಪ್ರಸ್ತಾಪಗಳಿದ್ದು, ಹಾಗೆಯೇ ಆಯುರ್ವೇದದಲ್ಲೂ ಈ ಗಿಡವನ್ನು ಔಷಧಿಯಾಗಿ ಬಳಸಲಾಗುತ್ತದೆ. https://ainlivenews.com/temple-run-from-nikhil-kumaraswamy/ ತುಳಸಿ ಗಿಡದಲ್ಲಿ ಅನೇಕ ಔಷಧೀಯ ಗುಣಗಳಿದ್ದು, ಇದನ್ನು ಪ್ರತಿನಿತ್ಯ ಸೇವಿಸುವುದರಿಂದ ಹಲವು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು. ಇಂತಹ ಕೆಲ ಪ್ರಯೋಜನಗಳ ಬಗ್ಗೆ ಇಲ್ಲಿ ತಿಳಿಸಲಾಗಿದೆ. ಭಾರತದಲ್ಲಿ ಅದರಲ್ಲೂ ಹಿಂದೂಗಳು ತುಳಸಿಯನ್ನು ತುಂಬಾ ಪವಿತ್ರವೆಂದು ಭಾವಿಸುವರು. ತುಳಸಿ ಗಿಡದಲ್ಲಿ ದೇವದೇವತೆಗಳು ನೆಲೆಸಿರುವರು ಎಂದು ಪುರಾಣಗಳು ಕೂಡ ಹೇಳಿವೆ. ಅದೇ ರೀತಿಯಲ್ಲಿ ತುಳಸಿ ಗಿಡವನ್ನು ಪುರಾತನ ಕಾಲದಿಂದಲೂ ಆಯುರ್ವೇದ ದಲ್ಲಿ ಔಷಧಿಯಾಗಿಯೂ ಬಳಸಿಕೊಂಡು ಬರಲಾಗುತ್ತಾ ಇದೆ. ತುಳಸಿ ಎಲೆಯಲ್ಲಿ ಹಲವಾರು ರೀತಿಯ ಔಷಧೀಯ ಗುಣಗಳು ಇದೆ ಎಂದು ಹೇಳಲಾಗುತ್ತದೆ. ಮುಂಜಾನೆಯೆದ್ದು ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಗಳನ್ನು ತಿನ್ನುವುದರಿಂದ ಹಲವು ಲಾಭಗಳಿವೆ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ; ತುಳಸಿ ಎಲೆಯಲ್ಲಿ ಆ್ಯಂಟಿಆಕ್ಸಿಡಂಟ್ಗಳ ಅಂಶ ಹೆಚ್ಚು ಇರುತ್ತದೆ ಅದರ ಜೊತೆಗೆ ಅದರಲ್ಲಿರುವ…
ನವದೆಹಲಿ: ಇನ್ನುಮುಂದೆ ಪ್ರಕರಣಗಳ ತುರ್ತು ಪಟ್ಟಿಗೆ ಮತ್ತು ವಿಚಾರಣೆಗೆ ಮೌಖಿಕ ಮನವಿಗಳನ್ನು ಅನುಮತಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಘೋಷಿಸಿದ್ದಾರೆ. ಅಂತಹ ಪ್ರಕರಣಗಳಿಗಾಗಿ ವಕೀಲರು ಇ-ಮೇಲ್ ಅಥವಾ ಲಿಖಿತ ಪತ್ರಗಳ ಮೂಲಕ ವಿನಂತಿಗಳನ್ನು ಸಲ್ಲಿಸಬೇಕಾಗುತ್ತದೆ ಎಂದು ಸೂಚಿಸಿದ್ದಾರೆ. ಸಾಂಪ್ರದಾಯಿಕವಾಗಿ, ವಕೀಲರು ತಮ್ಮ ಪ್ರಕರಣಗಳನ್ನು ಸಿಜೆಐ ನೇತೃತ್ವದ ಪೀಠದ ಮುಂದೆ ಪ್ರತಿನಿತ್ಯದ ವಿಚಾರಣೆಯ ಪ್ರಾರಂಭದಲ್ಲಿ ತುರ್ತು ಆಧಾರದ ಮೇಲೆ ಔಟ್-ಆಫ್-ಟರ್ನ್ ಪಟ್ಟಿಗಳು ಮತ್ತು ವಿಚಾರಣೆಗಳನ್ನು ಕೋರುತ್ತಿದ್ದರು. ಇನ್ನು ಮುಂದೆ ಯಾವುದೇ ಲಿಖಿತ ಅಥವಾ ಮೌಖಿಕ ಉಲ್ಲೇಖಗಳನ್ನು ಪರಿಗಣಿಸುವುದಿಲ್ಲ. ತುರ್ತು ಕಾರಣಗಳನ್ನು ತಿಳಿಸಿ ಇ-ಮೇಲ್‌ಗಳು ಅಥವಾ ಲಿಖಿತ ಸ್ಲಿಪ್‌ಗಳು ಅಥವಾ ಪತ್ರಗಳನ್ನು ಸಲ್ಲಿಸಿದರೆ ಮಾತ್ರ ಅದನ್ನು ಸ್ವೀಕರಿಸಲಾಗುತ್ತದೆ ಎಂದು ಸಿಜೆಐ ಹೇಳಿದ್ದಾರೆ. https://ainlivenews.com/tired-of-cockroaches-and-flies-in-your-home-follow-these-tips/ ಸೋಮವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ 51ನೇ ಸಿಜೆಐ ಆಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಖನ್ನಾ, ನ್ಯಾಯಾಂಗ ಸುಧಾರಣೆಗಳಿಗೆ ಜನಕೇಂದ್ರಿತ ಕಾರ್ಯಸೂಚಿಯ ಮಹತ್ವವನ್ನು ಪುನರುಚ್ಚರಿಸಿದ್ದಾರೆ. ಜನರ ಸ್ಥಾನಮಾನವನ್ನು ಲೆಕ್ಕಿಸದೆ ಅವರಿಗೆ…
ರಾಮನಗರ: ಮಿನಿ ಸಮರದ ಅಖಾಡದಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಸಿ.ಪಿ.ಯೋಗೇಶ್ವರ್ ಮತ್ತು ನಿಖಿಲ್ ಕುಮಾರಸ್ವಾಮಿ ಇದ್ದಾರೆ. ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದರೆ ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ. ಮೂರು ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಮತದಾನ ಬಿರುಸುಗೊಂಡಿದ್ದು, https://ainlivenews.com/tired-of-cockroaches-and-flies-in-your-home-follow-these-tips/ ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಮತಗಟ್ಟೆಯತ್ತ ತಂಡೋಪತಂಡವಾಗಿ ಬರುತ್ತಿದ್ದಾರೆ. ಇನ್ನೂ ಚನ್ನಪಟ್ಟಣ ಎನ್ ಡಿ ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತದಾನಕ್ಕೂ ಮುನ್ನ ಚನ್ನಪಟ್ಟಣ ಕ್ಷೇತ್ರದ ಪ್ರಸಿದ್ದ ಶ್ರೀ ಕೆಂಗಲ್ ಆಂಜನೇಯ ಸ್ವಾಮಿಯ ಸನ್ನಿಧಿಗೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಲಾಯಿತು.
ಬೆಂಗಳೂರು:-ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಇಳಿಕೆ ಆಗಲಿದೆ. https://ainlivenews.com/bellary-two-pregnant-women-died-of-jaundice/ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಭರ್ಜರಿಯಾಗಿ ಇಳಿದಿವೆ. ಇಂದು ಬುಧವಾರ ಚಿನ್ನದ ಬೆಲೆ 7,045 ರೂಗೆ ಕುಸಿದಿದೆ. ಅಪರಂಜಿ ಚಿನ್ನದ ಬೆಲೆ 7,685 ರೂಗೆ ಇಳಿದಿದೆ. ಕಳೆದ ಎರಡು ಮೂರು ದಿನದಲ್ಲಿ ಚಿನ್ನದ ಬೆಲೆ ಹೆಚ್ಚೂಕಡಿಮೆ 200 ರೂಗಿಂತಲೂ ಹೆಚ್ಚು ಕುಸಿತ ಕಂಡಿದೆ. ಬೆಳ್ಳಿ ಬೆಲೆಯೂ ಕೂಡ ಬೆಂಗಳೂರು ಮುಂತಾದೆಡೆ 91 ರೂಗೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 70,450 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 76,850 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 70,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,100 ರುಪಾಯಿಯಲ್ಲಿ ಇದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 13ಕ್ಕೆ) 22…
ಬಳ್ಳಾರಿ: ಜಿಲ್ಲಾಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾದ ಇಬ್ಬರು ಬಾಣಂತಿಯರು ಕಾಮಾಲೆ ( ಜಾಂಡೀಸ್ ) ಸೋಂಕಿನಿಂದ ಒಂದೇ ದಿನ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ತಾಲೂಕಿನ ಮೋಕಾದ ನಂದಿನಿ ಮತ್ತು ಲಲಿತಮ್ಮ ಮೃತರು. ಹೆರಿಗೆಗೆ ದಾಖಲಾಗಿದ್ದ ಇಬ್ಬರಲ್ಲಿ ಒಬ್ಬರಿಗೆ ಸೋಮವಾರ ರಾತ್ರಿ ಸಿಸೇರಿಯನ್ ಶಸ್ತ್ರಚಿಕಿತ್ಸೆ ನಡೆದಿತ್ತು. https://ainlivenews.com/tired-of-cockroaches-and-flies-in-your-home-follow-these-tips/ ಮಂಗಳವಾರ ಬೆಳಗ್ಗೆ ಕೊನೆಯುಸಿರೆಳೆದರು. ಮತ್ತೊಬ್ಬರು ಮಂಗಳವಾರ ಬೆಳಿಗ್ಗೆ ಸಿಸೇರಿಯನ್ ಶಸ್ತ್ರಚಿಕಿತ್ಸೆ ಒಳಗಾದ ಕೆಲ ಹೊತ್ತಿನಲ್ಲೇ ಮೃತಪಟ್ಟರು. ಸದ್ಯ ಇಬ್ಬರಿಗೂ ಜನಿಸಿದ ಶಿಶುಗಳು ಆರೋಗ್ಯವಾಗಿವೆ. ಜಾಂಡೀಸ್ ಮತ್ತು ಕಡಿಮೆ ರಕ್ತದ ಒತ್ತಡದ ಕಾರಣದಿಂದ ಇಬ್ಬರೂ ಬಾಣಂತಿಯರು ಮೃತಪಟ್ಟಿದ್ದಾರೆ. ಇವರಲ್ಲಿ ಒಬ್ಬರಿಗೆ ಕಿಡ್ನಿ ಸಂಬಂಧಪಟ್ಟ ಸಮಸ್ಯೆ ಇತ್ತು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಚನ್ನಪಟ್ಟಣ:- ಉಪಚುನಾವಣೆ ಹಿನ್ನೆಲೆ, ಚನ್ನಪಟ್ಟಣದಲ್ಲಿ ಸಾಂಪ್ರದಾಯಿಕ ಗೊಂಬೆ ಮತಗಟ್ಟೆ ಗಮನ ಸೆಳೆದಿದೆ. ಬೆಳಗಿನ ಜಾವ 7 ಗಂಟೆಯಿಂದಲೇ ಮತದಾನ ಆರಂಭವಾಗಿದ್ದು, ಉತ್ತಮ ಪ್ರತಿಕ್ರಿಯೆ ಇದೆ. https://ainlivenews.com/shiggavi-by-election-bommayi-family-went-to-god-before-voting/ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 276 ಮತಗಟ್ಟೆಗಳ ಸ್ಥಾಪನೆ ಮಾಡಗಿದೆ. ನಗರ ಪ್ರದೇಶದಲ್ಲಿ 62, ಗ್ರಾಮೀಣ ಪ್ರದೇಶದಲ್ಲಿ 214 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. 276 ಮತಗಟ್ಟೆಗಳಲ್ಲಿ ಆಯೋಗ ವೆಬ್ಕಾಸ್ಟಿಂಗ್ ವ್ಯವಸ್ಥೆ ಮಾಡಿದೆ. 276 ಮತಗಟ್ಟೆಗಳ ಪೈಕಿ 119 ಮತಗಟ್ಟೆಗಳನ್ನು ಸೂಕ್ಷ್ಮವೆಂದು ಗುರುತಿಸಲಾಗಿದೆ. ಚುನಾವಣಾ ಆಯೋಗ 119 ಮೈಕ್ರೋ ಅಬ್ಸರ್ವರ್ಸ್ ನಿಯೋಜಿಸಲಾಗಿದೆ. ಚನ್ನಪಟ್ಟಣ ಗೊಂಬೆಗಳಿಗೆ ವಿಶ್ವ ವಿಖ್ಯಾತಿ ಪಡೆದಿದೆ. ಇಲ್ಲಿನ ಗೊಂಬೆಗಳಿಗೆ ಭಾರಿ ಬೇಡಿಕೆ ಇದೆ. ಹೀಗಾಗಿ ಚುನಾವಣಾ ಆಯೋಗ ಗೊಂಬೆ ಮತಗಟ್ಟೆ ನಿರ್ಮಾಣ ಮಾಡಿದೆ. ಈ ಮೂಲಕ ಚನ್ನಪಟ್ಟಣ ಗೊಂಬೆಗಳ ವಿಶೇಷ ಪ್ರಾಶಸ್ತ್ಯ ನೀಡಿದೆ. ಚನ್ನಪಟ್ಟಣದ ಕೋಟೆ ಬಡಾವಣೆಯಲ್ಲಿ ವಿಶೇಷ ಸಾಂಪ್ರದಾಯಿಕ ಗೊಂಬೆ ಮತಗಟ್ಟೆ ನಿರ್ಮಿಸಲಾಗಿದೆ. ಮತಗಟ್ಟೆ ಹೊರಭಾಗದಲ್ಲಿ ಆಕರ್ಷಕ ಬಲೂನ್ ಕಮಾನು, ಗೊಂಬೆಗಳ ಫ್ಲೆಕ್ಸ್ ಅಳವಡಿಸಲಾಗಿದೆ. ಮತದಾನ ಮಾಡಲು ಬಂದಿರುವ ಮತದಾರರು ಗೊಂಬೆ…
ಬೆಂಗಳೂರು: ಪ್ರತಿಷ್ಠಿತ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದ ಮೃತದೇಹದ ಭಾಗಗಳನ್ನು ಇಲಿಗಳು ಕಚ್ಚಿ ತಿಂದಿರುವ ಘಟನೆ ಕೆಜಿ ಹಳ್ಳಿಯ ಅಂಬೇಡ್ಕರ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ. 37 ವರ್ಷದ ರಂಗಸ್ವಾಮಿ ಹರ್ನಿಯಾ ಸಮಸ್ಯೆಯಿಂದ ಶೇಷಾದ್ರಿಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಗಾಗಿತ್ತು. ಆಪರೇಷನ್ ಸಂದರ್ಭದಲ್ಲಿ ಸಮಸ್ಯೆ ಆದ ಕಾರಣ ಕೆಜಿ ಹಳ್ಳಿಯ ಅಂಬೇಡ್ಕರ್ ಮೆಡಿಕಲ್ ಕಾಲೇಜಿಗೆ ಕಳುಹಿಸಲಾಗಿತ್ತು. ಅಲ್ಲಿಗೆ ಬರುವ ಹೊತ್ತಿಗೆ ಅವರ ಪ್ರಾಣ ಹೋದಂತೆ ಆಗಿತ್ತು. ಖಾಸಗಿ ಆಸ್ಪತ್ರೆಯಲ್ಲೇ ಏನೋ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಮೃತ ರಂಗಸ್ವಾಮಿಯ ಅಣ್ಣ ಆರೋಪಿಸಿದ್ದಾರೆ. https://ainlivenews.com/does-banana-fruit-turn-black-quickly-so-just-follow-these-simple-tips/ ಬಳಿಕ ಅಂಬೆಡ್ಕರ್ ಮೆಡಿಕಲ್ ಕಾಲೇಜಿಗೆ ಅವರನ್ನು ದಾಖಲಿಸಲಾಗಿತ್ತು. ಕೆಲ ಹೊತ್ತಲೇ ಅವರು ಸಾವನ್ನಪ್ಪಿದ್ದಾರೆ. ಸಣ್ಣ ಶಸ್ತ್ರಚಿಕಿತ್ಸೆಯಲ್ಲೂ ನಿರ್ಲಕ್ಷ್ಯ ಮಾಡಿದ ವೈದ್ಯರ ವಿರುದ್ಧ ದೂರು ಕೊಡಲು ಶವಾಗಾರದಲ್ಲೇ ದೇಹ ಇರಿಸಲು ಕುಟುಂಬ ತೀರ್ಮಾನಿಸಿತ್ತು. ದೂರು ಕೊಟ್ಟು ಬರುವ ಹೊತ್ತಿಗೆ ಮುಖ ವಿಕಾರವಾಗಿತ್ತು. ಇಲಿಗಳು ಕಣ್ಣಿನ ರೆಪ್ಪೆ ಹಾಗೂ ಮೂಗನ್ನು ತಿಂದು ಹಾಕಿದ್ದವು. ಇದನ್ನು ಆಸ್ಪತ್ರೆಯವರು ಒಪ್ಪಿಕೊಂಡಿದ್ದಾರೆ.