ಬೆಂಗಳೂರು:- ಬೆಳಗಾವಿ ರಾಜಕೀಯ ಬಗ್ಗೆ ಡಿಕೆಶಿ ಮಾಹಿತಿ ಕೊರತೆ ಇಲ್ಲ ಎಂದು ಎಂಬಿ ಪಾಟೀಲ್ ಹೇಳಿದ್ದಾರೆ https://ainlivenews.com/our-government-is-paying-the-debt-made-by-the-previous-government-priyanka-kharge/ ಈ ಸಂಬಂಧ ಮಾತನಾಡಿದ ಅವರು, ನಾವು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಸಭೆ ನಡೆಸಿದ್ದೇವೆ. ನಮ್ಮಲ್ಲಿ ಯಾವುದೇ ಪ್ರತಿಷ್ಠೆ ಇಲ್ಲ. ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದರು. ಬೆಳಗಾವಿ ಅಧಿವೇಶನ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಯಾರಲ್ಲೂ ಅಸಮಾಧಾನ ಇಲ್ಲ. ಎಲ್ಲರೂ ಕೂಡ ಪಕ್ಷ, ಸರ್ಕಾರದ ಹಿತದೃಷ್ಟಿಯಲ್ಲಿ ಕೆಲಸ ಮಾಡಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಹೇಳಿರುವುದಾಗಿ ತಿಳಿಸಿದರು. ಬೆಳಗಾವಿ ರಾಜಕೀಯ ಬಗ್ಗೆ ಡಿಕೆಶಿ ಮಾಹಿತಿ ಕೊರತೆ ಇಲ್ಲ. ಪಕ್ಷದ ಎಲ್ಲ ಮಾಹಿತಿ ಅವರ ಬಳಿಯಿದೆ. ಸೋಮವಾರ ಬೆಳಗ್ಗೆ ನಡೆದ ಸರ್ವ ಸದಸ್ಯರ ಸಭೆಗೆ ಕಾರಣಾಂತರಗಳಿಂದ ಪರಮೇಶ್ವರ್ ಬರಲು ಸಾಧ್ಯವಾಗಿಲ್ಲ ಎಂದರು.
Author: AIN Author
ಬೆಂಗಳೂರು:- ಹಿಂದಿನ ಸರ್ಕಾರ ಮಾಡಿದ ಸಾಲ ನಮ್ಮ ಸರ್ಕಾರ ತೀರಿಸುತ್ತಿದೆ ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ. https://ainlivenews.com/lakshmi-hebbalkar-car-accident-case-file-a-case-against-the-driver/ ಹಿಂದಿನ ಬಿಜೆಪಿ ಸರ್ಕಾರದವರು ಸಾಲ ಮಾಡಿ ತುಪ್ಪ ತಿಂದಿದ್ದಾರೆ, ಅವರು ಮಾಡಿದ ಸಾಲವನ್ನು ತಮ್ಮ ಸರ್ಕಾರ ತೀರಿಸುತ್ತಿದೆ ದೆಹಲಿಯಿಂದ ಬರುವ ಕುಮಾರಸ್ವಾಮಿಯವರು 70 ಪರ್ಸೆಂಟ್ ಕಮೀಶನ್ ಸರ್ಕಾರ ಎನ್ನುತ್ತಾರೆ, ರಾಜ್ಯ ಬಿಜೆಪಿ ನಾಯಕರು 60 ಪರ್ಸೆಂಟ್ ಕಮೀಶನ್ ಸರ್ಕಾರ ಅನ್ನುತ್ತಾರೆ, ಯಾರು ಕಮೀಶನ್ ತೆಗೆದುಕೊಂಡಿದ್ದಾರೆ ಅಂತ ಅವರು ಸಾಕ್ಷಿ ಒದಗಿಸಲಿ, ತನಿಖೆ ಮಾಡಿಸಲು ತಮ್ಮ ಸರ್ಕಾರ ಸಿದ್ಧವಿದೆ ಎಂದು ಹೇಳಿದ ಅವರು ಅಶ್ವಥ್ ನಾರಾಯಣ ಮಿನಿಸ್ಟ್ರಾಗಿದ್ದಾಗ ಕಿಯಾನಿಕ್ಸ್ ನಲ್ಲಿ ನಡೆದ ಅವ್ಯವಹಾರಗಳಿಗೆ ತಾನು ಜವಾಬ್ದಾರನೇ ಎಂದರು.
ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ ಕೇಸ್ ಗೆ ಸಂಬಧಪಟ್ಟಂತೆ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. https://ainlivenews.com/minister-lakshmi-hebbalkar-back-bone-fracture-doctors-kotru-big-update/ ಜೀವಕ್ಕೆ ಕುತ್ತು ತುರುವ ಹಾಗೂ ನಿಷ್ಕಾಳಜಿ ವಾಹನ ಚಾಲನೆ, ಅಜಾಗರುತೆಯಿಂದ ವಾಹನ ಚಾಲನೆ ಕಲಂಗಳಲ್ಲಿ ಬೆಳಗಾವಿಯ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೀವಕ್ಕೆ ಕುತ್ತು ತುರುವ ಹಾಗೂ ನಿಷ್ಕಾಳಜಿ ವಾಹನ ಚಾಲನೆ, ಅಜಾಗರುತೆಯಿಂದ ವಾಹನ ಚಾಲನೆ ಕಲಂಗಳಲ್ಲಿ ಬೆಳಗಾವಿಯ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಅಪಘಾತ ಸ್ಥಳಕ್ಕೆ ಕಿತ್ತೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಕಾರು ಚಾಲಕನ ಹೇಳಿಕೆ ದಾಖಲಿಸಿಕೊಂಡು ಬಿಟ್ಟು ಕಳುಹಿಸಿದ್ದಾರೆ. ಕಿತ್ತೂರು ಠಾಣೆ ಸಿಪಿಐ ಮತ್ತು ಪಿಎಸ್ಐ ಅಪಘಾತ ನಡೆದ ಸ್ಥಳಕ್ಕೆ ಸ್ಥಳಕ್ಕೆ ಭೇಟಿ ನೀಡಿದ್ದು, ನಾಯಿ ಅಡ್ಡ ಬಂದಿದ್ದಕ್ಕೆ ಸಚಿವೆ ಹೆಬ್ಬಾಳ್ಕರ್ ಕಾರು ಅಪಘಾತ ಆಯ್ತಾ? ಅಥವಾ ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದ್ಯಾ ಎನ್ನುವ ಪರಿಶೀಲನೆ ನಡೆಸಿದ್ದಾರೆ.
ಬೆಳಗಾವಿ:- ಸಿಲಿಕಾನ್ ಸಿಟಿ ಬೆಂಗಳೂರಿನಿಂದ ಬೆಳಗಾವಿಗೆ ಬರುತ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕಾರು ಅಪಘಾತಕ್ಕೀಡಾಗಿ ಸಚಿವೆ ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತಕ್ಕೀಡಾಗಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ. https://ainlivenews.com/minister-lakshmi-hebbalkars-car-accident-what-did-ct-ravi-say/ ಕಾರು ಅಪಘಾತದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಬೆನ್ನುಮೂಳೆ ಮುರಿತ ಆಗಿದ್ದು, ಸಚಿವೆ ಆರೋಗ್ಯದ ಬಗ್ಗೆ ವೈದ್ಯರು ಬಿಗ್ ಅಪ್ಡೇಟ್ ಕೊಟ್ಟಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಕಾರು ಅಪಘಾತದಲ್ಲಿ ಗಾಯಗಳಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸಚಿವೆ ಬೆನ್ನುಮೂಳೆಗೆ ಬಲವಾದ ಪೆಟ್ಟು ಬಿದ್ದಿದೆ ಎಂದು ವೈದ್ಯರು ತಿಳಿಸಿದ್ದಾರೆ. ಬೆಳಗ್ಗೆ ಸರಿಸುಮಾರು ಆರು ಗಂಟೆಗೆ ಬೆಳಗಾವಿಯ ವಿಜಯ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಚಿವೆ ಲಕ್ಷ್ಮಿ ಅವರಿಗೆ ಬೆನ್ನುಮೂಳೆಯ ಎಲ್1 ಎಲ್4 ಮೂಳೆಯಲ್ಲಿ ಬಲವಾದ ಪೆಟ್ಟಾಗಿದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸಚಿವೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಡಾ. ರವಿ ಪಾಟೀಲ ಮಾಹಿತಿ ನೀಡಿದ್ದಾರೆ.…
ಬೆಂಗಳೂರು:- ಸಂಕ್ರಾಂತಿ ದಿನವಾದ ಇಂದು ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಅಮೋಘ ದೃಶ್ಯ ಕಂಡು ಬರಲಿದೆ. ಮಕರ ಸಂಕ್ರಾಂತಿಯ ದಿನವಾದ ಇಂದು ಪ್ರತಿವರ್ಷದಂತೆ ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಸೂರ್ಯ ರಶ್ಮಿ ಶಿವಲಿಂಗವನ್ನು ಸ್ಪರ್ಶಿಸಲಿದೆ. https://ainlivenews.com/satanic-act-in-bengaluru-rape-murder-of-6-year-old-girl-accused-arrested/ ಸಿಲಿಕಾನ್ ಸಿಟಿಯ ಗವಿಪುರದಲ್ಲಿನ ಗವಿಗಂಗಾಧರ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು ಇಂದು ಸಂಜೆ ನಡೆಯುವ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಕಾತರದಿಂದ ಇದ್ದಾರೆ. ಸೂರ್ಯ ದಕ್ಷಿಣ ಪಥದಿಂದ ಉತ್ತರಕ್ಕೆ ಪಥ ಸಂಚಲನ ಮಾಡುವಾಗ ಸೂರ್ಯ ಕಿರಣಗಳು ದೇವಾಲಯದಲ್ಲಿನ ಶಿವ ಲಿಂಗವನ್ನು ಸ್ಪರ್ಶಿಸಲಿವೆ. ಈ ಹಿನ್ನೆಲೆಯಲ್ಲಿ ಇಂದು ಗವಿಗಂಗಾಧರ ದೇವಸ್ಥಾನದ ಶಿವಲಿಂಗಕ್ಕೆ ವಿಶೇಷ ಪೂಜೆಗಳನ್ನು ನೆರವೇರಿಸಲಾಗುತ್ತಿದೆ. ಬೆಳ್ಳಗ್ಗೆ 5 ಗಂಟೆಗೆ ಪೂಜೆ ಆರಂಭವಾಗಿದ್ದು ಪುಷ್ಪಾಭಿಷೇಕ, ಮಹಮಂಗಳಾರತಿ, ಪಂಚಾಭೀಷೇಕ ಮಾಡಿದ ಬಳಿಕ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಸಂಜೆ 5.14 ರಿಂದ 5.17ರವರೆಗೆ ಒಟ್ಟು 3 ನಿಮಿಷ ಕಾಲ ಗವಿಗಂಗಾಧರೇಶ್ವರ ಸ್ವಾಮಿಯನ್ನ ಸೂರ್ಯ ರಶ್ಮಿ ಸ್ಪರ್ಶಿಸಲಿದೆ. ಮಹಾನ್ ವಿಸ್ಮಯ ನೋಡಲು ಎಲ್ಲ ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ. ಈಗಾಗಲೇ…
ಬೆಂಗಳೂರು:-25 ವರ್ಷದ ಕಾಮುಕನೋರ್ವ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಜರುಗಿದೆ. https://ainlivenews.com/shocking-news-minister-lakshmi-hebbalkar-traveling-car-accident/ ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ಈ ಪೈಶಾಚಿಕ ಕೃತ್ಯ ನಡೆದಿದೆ. 25 ವರ್ಷದ ಆರೋಪಿ ಅಭಿಷೇಕ್ ಕುಮಾರ್ ಬಂಧಿತ ಆರೋಪಿ. ಸೋಮವಾರ ಬಾಲಕಿಯ ಪೋಷಕರು ಗಾರೆ ಕೆಲಸಕ್ಕೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಯಾರು ಇರಲಿಲ್ಲ. ಈ ವೇಳೆ ಮನೆಗೆ ಬಂದ ಅಭಿಷೇಕ್ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದಿದ್ದಾನೆ. ಬಳಿಕ, ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಅತ್ಯಾಚಾರವೆಸಗುವ ವೇಳೆ ಬಾಲಕಿ ನರಳಿ ನರಳಿ ಪ್ರಾಣ ಬಿಟ್ಟಿದ್ದಾಳೆ.
ಬೆಳಗಾವಿ:-ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ, ಭೀಕರ ರಸ್ತೆ ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಎಂಎಲ್ಸಿ ಚೆನ್ನರಾಜ ಹಟ್ಟಿಹೊಳಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. https://ainlivenews.com/what-is-capricorn-what-is-special-about-it-what-will-the-celebration-be-like-2/ ನಿನ್ನೆ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಹೊರಟ್ಟಿದ್ದ ಲಕ್ಷ್ಮೀ ಹೆಬ್ಬಾಳಕರ್ ರಸ್ತೆ ಮಾರ್ಗದ ಮೂಲಕ ಬರುತ್ತಿದ್ದರು. ಅಂಬಡಗಟ್ಟಿ ಗ್ರಾಮದ ಬಳಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಮರಕ್ಕೆ ಕಾರು ಡಿಕ್ಕಿಯಾಗಿದೆ. ಸಂಕ್ರಾಂತಿ ಹಬ್ಬದ ದಿನವೇ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಮರಕ್ಕೆ ಕಾರು ಗುದ್ದಿ ಈ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ. ಅಪಘಾತದಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಆದರೆ, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎನ್ನುವ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಚಿವೆ…
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಸುವಿನ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹಸು ಮಾಲೀಕನ ಮನೆಗೆ ಬಿಜೆಪಿ ನಾಯಕರು ಭೇಟಿ ನೀಡಿ ಸಂಕ್ರಾಂತಿ ಆಚರಣೆ ಮಾಡಲು ನಿರ್ಧರಿಸಿದ್ದಾರೆ. ಹಸುವಿನ ಕೆಚ್ಚಲು ಕೊಯ್ದ ಘಟನೆಯಿಂದ ಹಿಂದೂಗಳ ಆಕ್ರೋಶದ ಕಟ್ಟೆ ಒಡೆದಿದ್ದು, ಬಿಜೆಪಿ ನಾಯಕರು ಹೇಯ್ಯ ಕೃತ್ಯ ನಡೆದ ಸ್ಥಳದಲ್ಲಿ ಸಂಕ್ರಾಂತಿ ಆಚರಿಸಲು ನಿರ್ಧರಿಸಿವೆ. ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದ ಘಟನೆಯಿಂದ ಹಿಂದೂಗಳ ಆಕ್ರೋಶದ ಕಟ್ಟೆ ಒಡೆದಿದೆ. ಒಂದೆಡೆ ಹಿಂದೂ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದರೆ ಮತ್ತೊಂದೆಡೆ ಬಿಜೆಪಿ ನಾಯಕರು ಹೇಯ್ಯ ಕೃತ್ಯ ನಡೆದ ಸ್ಥಳದಲ್ಲಿ ಸಂಕ್ರಾಂತಿ ಆಚರಿಸಲು ನಿರ್ಧರಿಸಿವೆ. ಘಟನೆಯನ್ನು ಖಂಡಿಸಿ ನಾಳೆ ಹಿಂದೂಪರ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ. ಚಾಮರಾಜಪೇಟೆಯ ಮೈಸೂರು ಬ್ಯಾಂಕ್ ಸರ್ಕಲ್, ಚಾಮರಾಜಪೇಟೆ ಅಂಗಡಿ ಬೀದಿ, ಸಿದ್ದಾಶ್ರಮ ಟ್ರಸ್ಟ್ ಈ ಮೂರು ಸ್ಥಳಗಳಲ್ಲಿ ಪೋಲಿಸ್ ಇಲಾಖೆ ಅನುಮತಿ ಕೊಟ್ಟ ಸ್ಥಳದಲ್ಲಿ ಪ್ರತಿಭಟನೆ ನಡೆಯಲಿದೆ. ಜೊತೆಗೆ ಹಿಂದೂ ಜಾಗರಣಾ ವೇದಿಕೆಯಿಂದ ರಾಜ್ಯಾದ್ಯಂತ ಭಾನುವಾರದವರೆಗೆ ಪ್ರತಿಭಟನೆಗೆ ಕರೆ ಕೊಟ್ಟಿದೆ.
ಹಿಂದೂ ಧರ್ಮದಲ್ಲಿ ಮಕರ ಸಂಕ್ರಾಂತಿಗೆ ವಿಶೇಷ ಮಹತ್ವವಿದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಸೂರ್ಯನ ಪ್ರವೇಶ ಅಥವಾ ಸಂಕ್ರಮಣವನ್ನು ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಆದರೆ ಮಕರ ಸಂಕ್ರಾಂತಿಯನ್ನು ಏಕೆ ಆಚರಿಸಲಾಗುತ್ತದೆ https://ainlivenews.com/forest-officials-rescued-two-fox-cubs-in-a-house/ ಪ್ರತಿ ವರ್ಷ ಜನವರಿ 14 ರಂದು ಹಿಂದೂ ಧರ್ಮದ ಜನರು ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸುತ್ತಾರೆ. ಇದು ಹೊಸ ಆರಂಭವನ್ನು, ಸಮೃದ್ಧಿ ಮತ್ತು ಕೃತಜ್ಞತೆಯ ಸಂಕೇತವೆಂದು ಕರೆಯಲ್ಪಡುವ ಹಬ್ಬವಾಗಿದೆ. ಹಿಂದೂ ಧರ್ಮದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯನ್ನು ದೇಶಾದ್ಯಂತ ಬಹಳ ಸಂಭ್ರಮ ಮತ್ತು ಸಡಗರದಿಂದ ಆಚರಿಸಲಾಗುತ್ತದೆ. ಈ ದಿನದಂದು ಗಾಳಿಪಟಗಳನ್ನು ಹಾರಿಸಲಾಗುತ್ತದೆ, ಸಿಹಿತಿಂಡಿಗಳನ್ನು ವಿತರಿಸಲಾಗುತ್ತದೆ ಮತ್ತು ಸೂರ್ಯ ದೇವರನ್ನು ಪೂಜಿಸಲಾಗುತ್ತದೆ. ಈ ದಿನವು ಪ್ರೀತಿಪಾತ್ರರಿಗೆ ಆತ್ಮೀಯ ಶುಭಾಶಯಗಳನ್ನು ಕಳುಹಿಸಲು ಮತ್ತು ಸಕಾರಾತ್ಮಕತೆ ಮತ್ತು ಸಂತೋಷವನ್ನು ಹರಡಲು ಉತ್ತಮ ಸಮಯವಾಗಿದೆ. ಸಂಕ್ರಾಂತಿ ಎಂದಾಕ್ಷಣ ಹಸುಗಳಿಗೆ ಕಿಚ್ಚು ಹಾಯಿಸುವುದು. ಹಳೆ ಮೈಸೂರು ಭಾಗದಲ್ಲಿ ಈ ಪದ್ಧತಿ ಹೆಚ್ಚು ಜನಜನಿತ. ಮಾಗಿಯ ಚಳಿಯಲ್ಲಿ ಮುಂಜಾನೆಯೇ ಎದ್ದು ಹಸು-ಕುರಿ-ಮೇಕೆಗಳನ್ನು ಜನರು…
ಚಿಕ್ಕೋಡಿ:- ವ್ಯಕ್ತಿಯ ಮನೆ ಮೇಲೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಎರಡು ನರಿ ಮರಿಗಳನ್ನು ರಕ್ಷಣೆ ಮಾಡಿದ ಘಟನೆ ರಾಯಬಾಗ ತಾಲೂಕಿನ ಹಂದಿಗುಂದ ಗ್ರಾಮದಲ್ಲಿ ಜರುಗಿದೆ. https://ainlivenews.com/again-injustice-by-central-government-cm-siddaramaiah-kendamandal/ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರಿ ದಳದ ಪೊಲೀಸರು ದಾಳಿ ನಡೆಸಿದ ವೇಳೆ ಮಹಾಲಿಂಗ ದೊಡ್ಡಮನಿ ಎಂಬುವರ ಮನೆಯಲ್ಲಿ ನರಿಗಳು ಪತ್ತೆಯಾಗಿದೆ. ಕೂಡಲೇ ನರಿಗಳನ್ನು ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಘಟನೆ ಸಂಬಂಧ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ